Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: 1984-85ನೇ ಸಾಲಿನ ಕುಂದಾಪುರ ಭಂಡಾರ್‌ಕಾರ್ಸ್‌ ಕಾಲೇಜು ಹಳೇ ವಿದ್ಯಾರ್ಥಿಗಳು ಸ್ಥಾಪಿಸಿದ ವಂದೇ ಮಾತರಂ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 14ನೇ ವಾರ್ಷಿಕ ಮಹಾಸಭೆ ಸಂಘದ ಸಭಾಂಗಣದಲ್ಲಿ ನಡೆದು, ಸದಸ್ಯರಿಗೆ ಶೇ.12 ಡಿವಿಡೆಂಡ್ ಘೋಷಣೆ ಮಾಡಲಾಯಿತು. ವಂದೇ ಮಾತರಂ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ರಾಜಗೋಪಾಲ ಎಮ್. ಅಧ್ಯಕ್ಷತೆ ವಹಿಸಿ, ಸಂಘ ಉತ್ತಮ ಪ್ರಗತಿ ಪಥದಲ್ಲಿ ಮುನ್ನಡೆಯುತ್ತಿದ್ದು, 4.40 ಕೋಟಿ ರೂ. ಠೇವಣಿ ಸಂಗ್ರಹಿಸಲಾಗಿದೆ ಎಂದು ಹೇಳಿದರು. ಸಂಘದ ನಿರ್ದೇಶಕರಾದ ದಿನೇಶ ನಾವಡ, ರಘುರಾಮ್ ಶೆಟ್ಟಿ ಸಿ., ಶಾಂತಿ ಕಾಮತ್ ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ ನಾಗರಾಜ ಶೇರೆಗಾರ್ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗನ್ನಾಥ ಪುತ್ರನ್ ವರದಿ ಹಾಗೂ ಆಯವ್ಯಯ ಮಂಡಿಸಿದರು. ನಿರ್ದೇಶಕ ಮಂಜುನಾಥ ಗಾಣಿಗ ಕಾರ್ಯಕ್ರಮ ನಿರೂಪಿಸಿದರು. ಸ್ಥಾಪಕಾಧ್ಯಕ್ಷ ವಿನಯ ಎ. ಪಾಸ್ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಹಜ್ ಭವನದಲ್ಲಿ ಐ.ಎ.ಎಸ್ ಹಾಗೂ ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತಿದ್ದು, ಸದರಿ ತರಬೇತಿಗೆ ಅರ್ಹ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯದ  21 ರಿಂದ 35 ವರ್ಷದೊಳಗಿನ  ಪದವಿ ಅಭ್ಯರ್ಥಿಗಳಿಂದ ವೆಬ್‌ಸೈಟ್ https://sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟೆಂಬರ್ 10ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಸೆಪ್ಟಂಬರ್ 15 ರಂದು ಪ್ರಜಾಪ್ರಭುತ್ವದ ದಿನದ ಅಂಗವಾಗಿ 100 ಕಿ.ಮೀ. ಮಾನವ ಸರಪಳಿ ನಿರ್ಮಾಣ ಕಾರ್ಯವನ್ನು ಯಶಸ್ವಿಗೊಳಿಸೋಣ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದರು. ಅವರು ಅಂದು ಕಾಪು ತಾಲೂಕಿನ ಕುಂಜಾರುಗಿರಿಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಆಯೋಜಿಸಲಾಗುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಾರ್ವಜನಿಕರನ್ನು ಉತ್ತೇಜಿಸಲು ಆಯೋಜಿಸಲಾದ ಟ್ರೆಕ್ಕಿಂಗ್‌ನಲ್ಲಿ ಭಾಗವಹಿಸಿ ಮಾತನಾಡಿದರು. ರಾಜ್ಯ ಸರ್ಕಾರವು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅರ್ಥಗರ್ಭಿತವಾಗಿ ಆಚರಿಸಲು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಲು ಬೀದರ್‌ನಿಂದ ಚಾಮರಾಜ ನಗರದವರೆಗೆ 250 ಕಿ.ಮೀ ವರೆಗೆ 25 ಲಕ್ಷ ಜನರು ಮಾನವ ಸರಪಳಿ ನಿರ್ಮಿಸಲು ತೀರ್ಮಾನಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ 100 ಕಿ.ಮೀ ಮಾನವ ಸರಪಳಿ ನಿರ್ಮಿಸಲು ಸಾರ್ವಜನಿಕರು, ಸಂಘ-ಸಂಸ್ಥೆಯ ಪದಾಧಿಕಾರಿಗಳು, ವಿವಿಧ ಸಮುದಾಯದ ಮುಖಂಡರುಗಳು, ಎನ್.ಜಿ.ಓ ಗಳು, ಸ್ವ-ಸಹಾಯ ಸಂಘದ ಸದಸ್ಯರುಗಳು, ರೋಟರಿ ಸಂಸ್ಥೆಯ ಸದಸ್ಯರುಗಳು ಸೇರಿದಂತೆ ಪ್ರತಿಯೊಬ್ಬ ನಾಗರಿಕರು ಸ್ವಯಂಪ್ರೇರಿತವಾಗಿ ಕೈಜೋಡಿಸಿ, ಭಾಗವಹಿಸುವುದರೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು. ಮಾನವ…

Read More

ಕುಂದಾಪ್ರ ಡಾಟ್‍ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹೆಮ್ಮಾಡಿಯ ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ಬಾಪೂಜಿ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಕ್ಷಿತಾ ಭಟ್ ತಾಲೂಕು ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ. ಅವರಿಗೆ, ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಾರಾಹಿಯಂತಹ ನೀರಾವರಿ ಯೋಜನೆ ಬೈಂದೂರು ಕ್ಷೇತ್ರದಲ್ಲಿ ಇದ್ದೂ ಕೂಡ ಇಲ್ಲಿನ ಜನರು ಕೃಷಿ ಹಾಗೂ ಕುಡಿಯುವ ನೀರಿಗಾಗಿ ಪರಿಪಾಟಲು ಪಡುವಂತಾಗಿದೆ. ಕಳೆದ 30 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ವಾರಾಹಿ ಬಲದಂಡೆ ಯೋಜನೆ ಕಾಮಗಾರಿಯನ್ನು ಕೈಗೆತ್ತುಕೊಳ್ಳುವಲ್ಲಿ ಹಾಗೂ ಬೈಂದೂರು ಕ್ಷೇತ್ರದಾದ್ಯಂತ ವಾರಾಹಿ ನೀರು ದೊರೆಯುವಲ್ಲಿ ಹೋರಾಟದ ಹಾದಿ ಹಿಡಿಯುವುದು ಅನಿವಾರ್ಯ ಎಂಬಂತಾಗಿದೆ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ಗುರುವಾರ ಇಲ್ಲಿನ ಆಡಳಿತದ ಸೌಧದಲ್ಲಿ ವಾರಾಹಿ ಬಲದಂಡೆ ಯೋಜನೆ, ಕಸ್ತೂರಿ ರಂಗನ್ ವರದಿ ಹಾಗೂ ಸಿಆರ್‌ಝಡ್ ಸಮಸ್ಯೆಗಳ ಪರಿಹಾರಕ್ಕಿರುವ ಮಾರ್ಗಗಳ ಬಗ್ಗೆ ಅಧಿಕಾರಿಗಳು ಹಾಗೂ ಸಾರ್ವಜನಿಕರೊಂದಿಗೆ ನಡೆದ ಮಾಹಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ವಾರಾಹಿ ಯೋಜನೆಯಿಂದ ಹಲವು ಭಾಗಗಳು ವಂಚಿತ, ಭಾಗಶಃ ವಂಚಿತ ಹಾಗೂ ಸಂತ್ರಸ್ಥ ಗ್ರಾಮಗಳಾಗಿದ್ದು ಎಲ್ಲಾ ಭಾಗಕ್ಕೂ ನೀರು ದೊರೆಕಿಸಿಕೊಡುವ ಅಗತ್ಯವಿದೆ. ಯೋಜನೆ ನೆನೆಗುದಿಗೆ ಬೀಳಲು ಅರಣ್ಯ ಇಲಾಖೆಯ ತಾಂತ್ರಿಕ ತೊಂದರೆಗಳೇ ಕಾರಣ ಎಂಬ ಆರೋಪ ಸಾಮಾನ್ಯವಾಗಿ ಕೇಳಿಬರುತ್ತಿದೆ. ಆದರೆ ಅದಕ್ಕೆ ಸ್ಪಷ್ಟ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೋಟತಟ್ಟು ಗ್ರಾಮ ಪಂಚಾಯತ್ ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟದ ಸಹಭಾಗಿತ್ವದಲ್ಲಿ ಕೊಡಮಾಡುವ 2024ನೇ ಡಾ| ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರಕ್ಕೆ ಸಾಹಿತಿ ಪ್ರೊ. ಕೃಷ್ಣೆಗೌಡ ಮೈಸೂರು ಆಯ್ಕೆಯಾಗಿದ್ದಾರೆ. ಕಳೆದ ಹತ್ತೊಂಭತ್ತು ವರುಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಈ ಪುರಸ್ಕಾರಕ್ಕೆ ನೀಡುತ್ತಾ ಬಂದಿದ್ದು ವೀರಪ್ಪ ಮೊಯ್ಲಿ, ಶ್ರೀ ವೆಂಕಟಾಚಲ, ಕೆ.ರಾಮಕೃಷ್ಣ ಹಂದೆ, ರವಿ ಬೆಳಗೆರೆ, ಗಿರೀಶ ಕಾಸರವಳ್ಳಿ, ಜಯಶ್ರೀ, ಮೋಹನ ಆಳ್ವ, ಸಾಲು ಮರದ ತಿಮ್ಮಕ್ಕ, ಚಿಟ್ಟಾಣಿ ರಾಮಚಂದ್ರ ಹೆಗಡೆ, ಜಯಂತ ಕಾಯ್ಕಿಣಿ, ಸದಾನಂದ ಸುವರ್ಣ, ಡಾ. ಬಿ.ಎಂ ಹೆಗ್ಡೆ, ಪ್ರಕಾಶ್ ರೈ, ಶ್ರೀಪಡ್ರೆ, ಕವಿತಾ ಮಿಶ್ರ, ನಾಡೋಜ ಡಾ.ಎಸ್.ಎಲ್.ಭೈರಪ್ಪ, ಗಿರೀಶ್ ಭಾರದ್ವಜ್, ರಮೇಶ್ ಅರವಿಂದ್, ಡಾ. ವಿದ್ಯಾಭೂಷಣ್ ಅವರು  ಪುರಸ್ಕಾರಕ್ಕೆ ಭಾಜನರಾಗಿದ್ದರು. ಹಲವು ದಶಕಗಳಿಂದ ಯುವ ಜನಾಂಗಕ್ಕೆ ಪ್ರೇರಣಾತ್ಮಕ ಮಾತುಗಳಿಂದ ಭರವಸೆ ತುಂಬಿ ಹೊಸದೆಸೆಯ ಬೆಳಕಾಗಿರುವ, ಕನ್ನಡ ಮಾತುಗಾರಿಕೆಗೆ ಹೊಸ ನೆಲೆಕಟ್ಟು ಮತು ಚೌಕಟ್ಟು ನೀಡಿದ  ಅಮೂಲ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ:  ತಾಲೂಕು ಕಚೇರಿ ಹಾಗೂ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿ ಹೊಂದಿದ್ದು, ಇಲ್ಲಿನ ಸಮಸ್ಯೆಗಳಿಗೆ ಶಾಸಕರ ಬೇಜವಾಬ್ದಾರಿ ಕೂಡ ಕಾರಣ. ಇವತ್ತು ವಿದ್ಯುತ್ ಇಲ್ಲದಾಗ ಜನರೇಟರ್ ಬಳಸಲು ಬೇಕಾದ ಡೀಸೆಲ್ ಇಲ್ಲಾ ಎನ್ನುವುದು ಅತ್ಯಂತ ನಾಚಿಕೆಗೇಡಿನ ಸಂಗತಿ. ಕಚೇರಿ ನಿರ್ವಹಣೆಗೆ ಸರ್ಕಾರದಿಂದ ಬಂದ ಹಣ ಎಲ್ಲಿಗೆ ಹೋಗುತ್ತಿದೆ ಎನ್ನುವುದನ್ನು ಸಂಬಂಧಿತರು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು, ಜನಸಾಮಾನ್ಯರನ್ನು ಹೈರಾಣ ಮಾಡುವುದು ತಾಲ್ಲೂಕು ಕಚೇರಿಯ ಹೆಚ್ಚಿನ ಸಿಬ್ಬಂದಿಗಳಿಗೆ ಅವರ ಜೀವನದ ಒಂದು ಭಾಗವಾಗಿ ಬಿಟ್ಟಿದೆ  ಎಂದು ಜಿಲ್ಲಾ ಕಾಂಗ್ರೆಸ್‌ ವಕ್ತಾರ ಕೆ. ವಿಕಾಸ್‌ ಹೆಗ್ಡೆ ಹೇಳಿದರು. ಅವರು ಮಾಡಿದ ತಪ್ಪಿಗೆ ಜನಸಾಮಾನ್ಯರು ದಿನನಿತ್ಯ ತಾಲೂಕು ಕಚೇರಿಗೆ ಅಲೆದಾಡುವುದು ಕುಂದಾಪುರ ತಾಲೂಕು ಕಚೇರಿಯ ದಿನನಿತ್ಯದ ವ್ಯವಸ್ಥೆ. ಶಾಸಕರುಗಳು ಈ ಬಗ್ಗೆ ಮೌನ ವಹಿಸಿರುವುದೇ ಈ ಎಲ್ಲಾ ಸಮಸ್ಯೆಗಳಿಗೆ ಕಾರಣ. ಅಧಿಕಾರಿಗಳು ಸಭೆಗಳಲ್ಲಿ ಹಾರಿಕೆಯ ಉತ್ತರ ಕೊಟ್ಟಾಗ ಅವರನ್ನು ತರಾಟೆಗೆ ತೆಗೆದುಕೊಳ್ಳುವ ಗೋಜಿಗೆ ಹೆಚ್ಚಿನ ಜನಪ್ರತಿನಿದಿನಗಳು ಹೋಗದ ಕಾರಣ ಸರ್ಕಾರಿ ನೌಕರರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಮ್ಮಲ್ಲಿನ ಸಾಮರ್ಥ್ಯಗಳು ಹುಟ್ಟಿನಿಂದ ಬರುವಂತದ್ದಲ್ಲ. ಸತತ ಪ್ರಯತ್ನದಿಂದ ಜೀವನದಲ್ಲಿ ಗುರಿಯನ್ನು ತಲುಪಲು ಸಾಧ್ಯ. ಆದ್ದರಿಂದ ವ್ಯಕ್ತಿಗೆ ಜೀವನದಲ್ಲಿ ಗುರಿಮುಖ್ಯ ಎಂದು ಎಫ್.ಎಂ.ರೇಡಿಯೋ ಮಂಗಳೂರಿನ ಆರ್.ಜೆ. ನಯನ ಹೇಳಿದರು. ಅವರು ಸುಣ್ಣಾರಿಯ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮತ್ತು ಹೈಸ್ಕೂಲ್‌ನಲ್ಲಿ ನಡೆದ ವ್ಯಕ್ತಿತ್ವ ವಿಕಸನ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಮನುಷ್ಯ ಯಾವುದೇ ಕೆಲಸ ಮಾಡಬೇಕೆಂದರೆ ಅದರಲ್ಲಿ ನಂಬಿಕೆ ಮುಖ್ಯ. ಹುಟ್ಟುವಾಗಲೇ ಮನುಷ್ಯನಿಗೆ ಪ್ರತಿಭೆ ಎನ್ನುವುದು ಬರುವುದಿಲ್ಲ. ಅದು ಮನುಷ್ಯನು ವಿಕಸನಗೊಂಡಾಗಲೇ ಬರುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ವಿಶಿಷ್ಟ ಪ್ರತಿಭೆ ಮತ್ತು ಆಸಕ್ತಿಗಳಿರುತ್ತದೆ. ನಾವು ಅದನ್ನು ಗ್ರಹಿಸಿ ಉತ್ತಮಪಡಿಸಿಕೊಳ್ಳಬೇಕು ಎಂದು ಅವರು ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವ ಸೂತ್ರವನ್ನು ತಿಳಿಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಎಂ.ಹೆಗ್ಡೆ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷರಾದ ಎಂ. ಮಹೇಶ ಹೆಗ್ಡೆ ಅವರು ಮಾತನಾಡಿ, ವಿದ್ಯಾರ್ಥಿಗಳು ಓದಿನೊಂದಿಗೆ ನಿಮ್ಮ ಗುಣ ನಡತೆಯನ್ನು ರೂಪಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ ಅವರು ಮಾತನಾಡಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಆಶ್ರಯದಲ್ಲಿ ಪರಿಸರ ಸ್ನೇಹಿ ಮಣ್ಣಿನ ಗಣಪತಿ ರಚನೆಯ ಸ್ಪರ್ಧೆಯನ್ನು ಕಾಲೇಜಿನ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಅತೀಯಾದ ರಾಸಾಯನಿಕ ಬಳಕೆ ಹಾಗೂ ಕೃತಕ ವಸ್ತುಗಳನ್ನು ಬಳಸಿ ಗಣಪತಿ ಮೂರ್ತಿಯನ್ನು ರಚಿಸುವುದು ಪರಿಸರಕ್ಕೆ ಹಾನಿಕಾರಕ ಆ ನಿಟ್ಟಿನಲ್ಲಿ ಪರಿಸರಕ್ಕೆ ಪೂರಕವಾದ ಮಣ್ಣಿನ ಗಣಪತಿಯನ್ನು ರಚಿಸುವುದು ಉತ್ತಮ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ|. ಕೆ. ಉಮೇಶ್ ಶೆಟ್ಟಿ ಹೇಳಿದರು. ಈ ಸ್ಪರ್ಧೆಯಲ್ಲಿ ಕಾಲೇಜಿನ ದ್ವಿತೀಯ ಬಿಬಿಎ ವಿದ್ಯಾರ್ಥಿ ಪ್ರಥಮ್ ಭಂಡಾರಿ ಪ್ರಥಮ ಸ್ಥಾನ, ದ್ವಿತೀಯ ಬಿ.ಕಾಂ. ವಿಭಾಗದ ಸುಜನ್ ದ್ವಿತೀಯ ಸ್ಥಾನ ಹಾಗೂ ದ್ವಿತೀಯ ಬಿಬಿಎ ವಿದ್ಯಾರ್ಥಿ ಸೃಜನ್ ತೃತೀಯ ಸ್ಥಾನ ಪಡೆದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ರೋವರ್ಸ್ ಸ್ಕೌಟ್ ಲೀಡರ್ ಪ್ರವೀಣ್ ಮೊಗವೀರ ಗಂಗೊಳ್ಳಿ ಹಾಗೂ ರೇಂಜರ್ಸ್ ಲೀಡರ್ ಪೂಜಾ ಕುಂದರ್,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ತಾರಾಪತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಟ್ರಾಕ್‌ಸೂಟ್‍ ಉಚಿತ ವಿತರಣೆ ಹಾಗೂ ಚದುರಂಗ ತರಗತಿ ಉದ್ಘಾಟನಾ ಸಮಾರಂಭ ಗುರುವಾರ ಜರುಗಿತು. ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯರಾದ ಕೃಷ್ಣ ಖಾರ್ವಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ವಿದ್ಯಾರ್ಥಿಗಳಿಗೆ ಉಚಿತವಾಗಿ 150 ಟ್ರಾಕ್‍ಸೂಟ್‍ಗಳನ್ನು ನೀಡಿದ ಶಾಲೆಯ ಹಳೆ ವಿದ್ಯಾರ್ಥಿ,  ಕೇಂದ್ರ ಆದಾಯ ತೆರಿಗೆ ಮೇಲ್ಮನವಿ ಪ್ರಾಧಿಕಾರದ ಸದಸ್ಯ ಯೋಗೇಶ್ ಕುಮಾರ್ ಪರವಾಗಿ, ಅವರ ತಾಯಿ ವೆಂಕಮ್ಮ ಅವರನ್ನು ಸನ್ಮಾನಿಸಲಾಯಿತು. ನಮ್ಮ ಶಾಲೆಯ ಮಕ್ಕಳಿಗೆ ಚೇಸ್‍ ತರಬೇತಿಯನ್ನು ಉಚಿತವಾಗಿ ನೀಡಲಿರುವ ನಮ್ಮ ಶಾಲೆಯ ಹಳೆ ವಿದ್ಯಾರ್ಥಿ ಬಾಬು ಜೆ. ಪೂಜಾರಿ, ದಾನಿಗಳಾದ ವಾಸುದೇವ ಪೂಜಾರಿ, ಶೇಖರ ಪೂಜಾರಿ ಉಪ್ಪುಂದ, ಹರೀಶ್‍ ಪೂಜಾರಿ, ಗೋಪಾಲ ಮಲ್ಯ, ಭಾಸ್ಕರ ಕೋಣನಮನೆ, ನಿವೃತ್ತ ಮುಖ್ಯ ಶಿಕ್ಷಕ ಆನಂದ ಅವರು ಶುಭ ಹಾರೈಸಿದರು. ಪ್ರಭಾರ ಮುಖ್ಯ ಶಿಕ್ಷಕರಾದ ಸುಬ್ರಹ್ಮಣ್ಯ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ, ಸ್ವಾಗತಿಸಿದರು. ಟಿಜಿಟಿ ಶಿಕ್ಷಕ ದಿನಕರ…

Read More