ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿ ಜನ್ಮ ಶತಾಬ್ದಿ ಆರಾಧನಾ ಮಹೋತ್ಸವದ ಅಂಗವಾಗಿ ಖ್ಯಾತ ಗಾಯಕ ಶಂಕರ ಶ್ಯಾನುಭಾಗ ಅವರ ವತಿಯಿಂದ ಭಜನ್ ಸಂಧ್ಯಾ ಕಾರ್ಯಕ್ರಮ ನಡೆಯಿತು. ದೇವಾಲಯದ ಆಡಳಿತ ಮೊಕ್ತೇಸರ ಕೆ.ರಾಧಾಕೃಷ್ಣ ಶೆಣೈ ಹಾಗೂ ಶಂಕರ ಶ್ಯಾನುಭಾಗ ಕಾರ್ಯಕ್ರಮ ಉದ್ಘಾಟಿಸಿದರು. ಶಂಕರ ಶ್ಯಾನುಭಾಗ ಅವರೊಂದಿಗೆ ಶಂಕರ ಶೆಣೈ, ಲೋಕೇಶ, ಹರಿ, ಅಶ್ವಥ, ಅದೃತ ಪೈ ಹಾರ್ಮೋನಿಯಂ, ತಬಲಾ, ತಾಳ ಸಂವಾದಿನಿಯಲ್ಲಿ ಸಹಕರಿಸಿದ್ದರು. ಕಾರ್ಯಕ್ರಮ ಸಂಯೋಜಕರಾದ ಕೆ. ಪದ್ಮನಾಭ ಶೆಣೈ ಕಲಾವಿದರನ್ನು ಗೌರವಿಸಿದರು. ಪಿ.ಜಯವಂತ ಪೈ ನಿರೂಪಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾ ಕಾಂ ಸುದ್ದಿ.ಕುಂದಾಪುರ: ವಂಡ್ಸೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆ ಅಲ್ಲಿ ಬುಧವಾರ ನಡೆಯಿತು. ವಂಡ್ಸೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಡಾ.ಪೂರ್ಣಿಮಾ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಂಡ್ಸೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಅವಿನಾಶ್, ಉಪಾಧ್ಯಕ್ಷ ಗೋವರ್ಧನ್ ಜೋಗಿ, ಗ್ರಾ.ಪಂ ಸದಸ್ಯ, ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಕಾರ್ಯದರ್ಶಿ ಉದಯಕುಮಾರ್ ಶೆಟ್ಟಿ ಅಡಿಕೆಕೊಡ್ಲು, ಶ್ರೀ ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಕೋಶಾಧಿಕಾರಿ ಗಿಳಿಯಾರು ಶ್ರೀಧರ್ ಶೆಟ್ಟಿ, ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್‌ನ ಟ್ರಸ್ಟಿ ಅನಂದ ಶೆಟ್ಟಿ ಸಬ್ಲಾಡಿ, ಗ್ರಾ.ಪಂ. ಮಾಜಿ ಸದಸ್ಯ ಗುಂಡು ಪೂಜಾರಿ ಹರವರಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂದೇಶ ಶೆಟ್ಟಿ ಹಾಗೂ ಕರ್ಕುಂಜೆ, ಹೊಸಾಡು, ಕೊಲ್ಲೂರು ಸಿ.ಆರ್.ಪಿಗಳು ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಮಾಡಿದರು. ಈ ಸಂದರ್ಭದಲ್ಲಿ ವಂಡ್ಸೆ ಸ.ಮಾ.ಹಿ.ಪ್ರಾ.ಶಾಲೆಯ ಡಿಜಿಟಲ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೆಪ್ಟೆಂಬರ್ 5ರಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇವರ ಸಹಯೋಗದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅದಿತಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಅವರಿಗೆ, ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಉಡುಪಿ ಮತ್ತು ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ, ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟವು ಹೆಜಮಾಡಿ ಕ್ರೀಡಾಂಗಣದಲ್ಲಿ, ಕುಂದಾಪುರ ಮತ್ತು ಬೈಂದೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಕುಂದಾಪುರ ತಾಲೂಕು ಕ್ರೀಡಾಂಗಣದಲ್ಲಿ ಹಾಗೂ ಕಾರ್ಕಳ ಮತ್ತು ಹೆಬ್ರಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಕಾರ್ಕಳ ತಾಲೂಕು ಕ್ರೀಡಾಂಗಣದಲ್ಲಿ ಸೆಪ್ಟಂಬರ್ 22 ರಂದು ನಡೆಯಲಿದೆ. ಸ್ಪರ್ಧೆಗಳ ವಿವಿರ: ಪುರುಷರಿಗೆ: ಅಥ್ಲೆಟಿಕ್ಸ್( 100ಮೀ, 200 ಮೀ, 400 ಮೀ, 800 ಮೀ, 1500 ಮೀ, 5000 ಮೀ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡೆಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 110 ಮೀ ಹರ್ಡಲ್ಸ್, 4*100 ಮೀ ರಿಲೇ, 4*400 ಮೀ ರಿಲೇ.), ಗುಂಪು ಆಟಗಳಾದ ವಾಲಿಬಾಲ್, ಖೋ-ಖೋ, ಕಬಡ್ಡಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಬೈಂದೂರು ತಾಲೂಕಿಗೆ ಹೊಸದಾಗಿ ಸೃಜಿಸಲಾದ ಎರಡು ನೋಟರಿ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ. ವಕೀಲ ವೃತ್ತಿಯಲ್ಲಿ ಕನಿಷ್ಠ ಹತ್ತು ವರ್ಷಗಳ ಅನುಭವ ಹೊಂದಿರುವವರು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ವರ್ಗಗಳ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ವಕೀಲ ವೃತ್ತಿಯಲ್ಲಿ ಕನಿಷ್ಟ ಏಳು ವರ್ಷಗಳ ಅನುಭವ ಹೊಂದಿರುವವರು ಸೆಪ್ಟಂಬರ್ 27ರ ಸಂಜೆ 5.30 ರ ಒಳಗೆ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ, ಉಡುಪಿ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ನ್ಯಾಯಾಧೀಶರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಹಾಗೂ ಶುಭದಾ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರ ಇವರ ಜಂಟಿ ಆಶ್ರಯದಲ್ಲಿ ಬೈಂದೂರು ತಾಲೂಕು ಮಟ್ಟದ ಪ್ರೌಢ ಶಾಲಾ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟವು ಅದ್ದೂರಿಯಾಗಿ ನೆರವೇರಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ, ತೆಲುಗು ಟೈಟಾನ್ಸ್ ತಂಡದ ಕಬಡ್ಡಿ ಆಟಗಾರರಾದ ರತನ್ ನಾಯ್ಕ ‘ಒಬ್ಬ ಶ್ರೇಷ್ಠ ಆಟಗಾರನಾಗಬೇಕಾದರೆ ಇಂತಹ ವೇದಿಕೆಗಳು ಅತ್ಯದ್ಭುತ, ಧೈರ್ಯ ತುಂಬಿ ಆಟ ಆಡಿ. ಕ್ರೀಡೆಯಿಂದ ಬದುಕು ಕಟ್ಟಿಕೊಳ್ಳಲು ಸಾಧ್ಯವಿದೆ ಎಂದರು’.ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಗಣೇಶ ಮೊಗವೀರ ಅವರು ಶಿಕ್ಷಣ ಪರಿಪೂರ್ಣವಾಗಬೇಕಾದರೆ ಪಠ್ಯದ ಜೊತೆಗೆ ಸಹಪಠ್ಯ ಚಟುವಟಿಕೆಗಳು ಪ್ರಮುಖವಾದದ್ದು ಆ ನೆಲೆಯಲ್ಲಿ ನಮ್ಮ ಸಂಸ್ಥೆಯಲ್ಲಿ ಸಮಾನ ಪ್ರಾಧಾನ್ಯತೆ ನೀಡುತ್ತಿದ್ದು,ವಿದ್ಯಾರ್ಥಿ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಸೋಲು – ಗೆಲುವು ಇವೆರೆಡನ್ನು ಸಮನಾಗಿ ಸ್ವೀಕರಿಸಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು .ಮುಖ್ಯ ಅತಿಥಿಯಾಗಿ ಆಗಮಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗೇಶ ನಾಯ್ಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ರಾಜ್ಯಕ್ಕೆ “ಕರ್ನಾಟಕ” ಎಂದು ನಾಮಕರಣವಾಗಿ ಐವತ್ತು ವರ್ಷಗಳು ಸಂದವು. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರವು “ಸುವರ್ಣ ಸಂಭ್ರಮ-50” ಕಾರ್ಯಕ್ರಮವನ್ನು ಆಯೋಜಿಸಿದೆ. ಇದರ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ ಶಿರೋನಾಮೆಯಲ್ಲಿ ರಾಜ್ಯದ ನಾಲ್ಕು ವಿಭಾಗಗಳಲ್ಲಿ (ಜತ್ತ ತಾಲೂಕು, ಮಹಾರಾಷ್ಟ್ರ, ಮೈಸೂರು, ಮಂಗಳೂರು ಮತ್ತು ರಾಯಚೂರು) ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ನಿಟ್ಟಿನಲ್ಲಿ ಸೆಪ್ಟೆಂಬರ್ 24 ಮತ್ತು 25 ರಂದು ಮಂಗಳೂರಿನಲ್ಲಿ ತುಳು, ಕೊಂಕಣಿ, ಬ್ಯಾರಿ, ಅರೆಭಾಷೆ, ಕೊಡವ ಮತ್ತು ಯಕ್ಷಗಾನ ಅಕಾಡೆಮಿಗಳು ಸೇರಿ “ಬಹುಸಂಸ್ಕೃತಿ ಉತ್ಸವ” ಕಾರ್ಯಕ್ರಮ ಏರ್ಪಡಿಸಿದೆ. ಇದರ ಭಾಗವಾಗಿ ಉಡುಪಿ ಜಿಲ್ಲಾಡಳಿತ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲೆಯ ಪ್ರೌಢ ಶಾಲಾ ವಿಭಾಗದಿಂದ ಜಿಲ್ಲಾ ಮಟ್ಟದ “ಕರಾವಳಿ ಕರ್ನಾಟಕದ ಬಹುಸಂಸ್ಕೃತಿಯ ಪರಂಪರೆ” ಎಂಬ ಶೀರ್ಷಿಕೆಯಡಿ ಚಿತ್ರಕಲಾ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬಿಜೆಪಿ ಬೈಂದೂರು ಮಂಡಲ ಇಂದು ಕೊಲ್ಲೂರು ಮಹಾಶಕ್ತಿ ಕೇಂದ್ರದ ಪುರಾಣಿಕ್ ಸಭಾ ಭವನದಲ್ಲಿ ಆಯೋಜಿಸಿದ್ದ “ಸದಸ್ಯತ್ವ ಅಭಿಯಾನ-2024” ಕಾರ್ಯಕ್ರಮದಲ್ಲಿ ಭಾಗಿಯಾಗಿ ಸದಸ್ಯತ್ವ ಸಂಖ್ಯೆಗೆ ಮಿಸ್ ಕಾಲ್ ನೀಡಿ ಡಿಜಿಟಲ್ ಲಿಂಕ್ ಮುಖೇನ ನೆರೆದಿದ್ದ ಜನಸಾಮಾನ್ಯರಿಗೆ ಸದಸ್ಯತ್ವ ಕೊಡಿಸುವ ಮೂಲಕ ಚಾಲನೆ ಕೊಡಲಾಯಿತು. ಈ ಸದಸ್ಯತ್ವ ಅಭಿಯಾನ ಕೇವಲ ಪಕ್ಷದ ಸದಸ್ಯತ್ವವನ್ನು ದುಪ್ಪಟ್ಟು ಮಾಡುವ ಉದ್ದೇಶ ಮಾತ್ರವಲ್ಲದೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ “ವಿಕಸಿತ ಭಾರತ” ಪರಿಕಲ್ಪನೆಯನ್ನು ಸಾಕಾರಗೊಳಿಸುವ ಆಂದೋಲನಕ್ಕೆ ಬಲ ನೀಡುವುದಾಗಿದೆ. ಜೊತೆಗೆ ಈ ಐತಿಹಾಸಿಕ ಅಭಿಯಾನದಿಂದ ರಾಷ್ಟ್ರೀಯ ಮಟ್ಟದಿಂದ ಹಿಡಿದು ರಾಜ್ಯ, ಜಿಲ್ಲೆ, ಗ್ರಾಮ ಮತ್ತು ಬೂತ್ ಮಟ್ಟದವರೆಗೆ ಪಕ್ಷವನ್ನು ಮುಟ್ಟಿಸುವುದಾಗಿದೆ. ಈ ಮೂಲಕ ಪ್ರತಿ ಬೂತ್ ಗಳಲ್ಲಿ ಗೆಲುವು ಸಾಧಿಸುವುದರಿಂದ ಚುನಾವಣೆ ಗೆಲ್ಲಲು ಬಲ ಸಿಕ್ಕಂತಾಗುತ್ತದೆ. ಈ ನಿಟ್ಟಿನಲ್ಲಿ ನಮ್ಮ ಪಕ್ಷದ ದೈವ ದುರ್ಲಭ ಕಾರ್ಯಕರ್ತನು ಕಾರ್ಯಪ್ರವೃತ್ತರಾಗಿ ಅಭಿಯಾನವನ್ನು ಆಂದೋಲನ ರೀತಿಯಲ್ಲಿ ಜಾರಿಗೆ ತರುವ ವಾಗ್ದಾನ ಮಾಡಬೇಕಿದೆ. ಇದರೊಂದಿಗೆ ಪ್ರಧಾನಿಯವರ ಆಲೋಚನೆಯಂತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಡಾ| ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಡಾ| ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ಆಸರೆಯಲ್ಲಿ ಕೊಡಮಾಡುವ ಡಾ| ಶಿವರಾಮ ಕಾರಂತ ಶಿಕ್ಷಕ ಪುರಸ್ಕಾರಕ್ಕೆ ಶಿಕ್ಷಕ ಶಿಕ್ಷಕಿಯರು ಆಯ್ಕೆಯಾಗಿದ್ದಾರೆ. ಆಯ್ಕೆಯಾದ ಶಿಕ್ಷಕ ಶಿಕ್ಷಕಿಯರು ಸ.ಹಿ.ಪ್ರಾ.ಶಾಲೆ ಸಾಸ್ತಾವು ಪ್ರಭಾರ ಮುಖ್ಯ ಶಿಕ್ಷಕಿ ವನಿತಾ ಶೆಟ್ಟಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾಬ್ರಕಟ್ಟೆ ಶಿಕ್ಷಕ ಸುರೇಂದ್ರ ಕೋಟ, ವಿವೇಕ ಪದವಿ ಪೂರ್ವ ಕಾಲೇಜು ಮತ್ತು ಫ್ರೌಡಶಾಲೆ ದೈಹಿಕ ಶಿಕ್ಷಕ ಗಣೇಶ್ ಶೆಟ್ಟಿ, ಹಿಂದು ಮಾದರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಬಸ್ರೂರು ಶಿಕ್ಷಕ ಮಂಜುನಾಥ, ಸ.ಹಿ.ಪ್ರಾ. ಶಾಲೆ ಉಪ್ಪೂರು ಬ್ರಹ್ಮಾವರ ಶಿಕ್ಷಕಿ ಚೆಲುವ ಕುಮಾರಿ, ಸ.ಹಿ.ಪ್ರಾ. ಶಾಲೆ ಹೆಸಕುತ್ತೂರು ಮುಖ್ಯ ಶಿಕ್ಷಕ ಶೇಖರ್, ಸರಕಾರಿ ಫ್ರೌಡಶಾಲೆ ಕುಕ್ಕೆಹಳ್ಳಿ ಶಿಕ್ಷಕಿ ಲಿನಟ್ ವಾರ್ತಾ ಡಿಸೋಜ, ಸ.ಹಿ.ಪ್ರಾಥಮಿಕ ಶಾಲೆ ಬಣ್ಣಂಪಳ್ಳಿ ಶಿಕ್ಷಕಿ ಚಂದ್ರಮತಿ ದೇವಾಡಿಗ, ಸರಕಾರಿ ಫ್ರೌಡಶಾಲೆ ಕಾವಡಿ ಶಿಕ್ಷಕ ಪ್ರಶಾಂತ್ ಜತ್ತನ್, ಸರಕಾರಿ ಸಂಯುಕ್ತ ಫ್ರೌಡಶಾಲೆ(ಪ್ರಾಥಮಿಕ ಭಾಗ)ಮಣೂರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವರ್ಷಂಪ್ರತಿ ನಡೆಯುವಂತೆ ಈ ಬಾರಿಯೂ ಗಣೇಶ ಚತುರ್ಥಿ ಹಬ್ಬವನ್ನು ಅತ್ಯಂತ ಸಂತಸ-ಸಡಗರದಿಂದ ಆಚರಿಸಲಾಯಿತು. ಪ್ರಾತಃಕಾಲದಲ್ಲೇ ಶಾಲೆಯ ಹಟ್ಟಿಯಂಗಡಿ ಶಾಂತಾರಾಮ ವೇದಿಕೆಯಲ್ಲಿ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಸಕಲ ಧಾರ್ಮಿಕ ವಿಧಿ-ವಿಧಾನಗಳನ್ನು ಶ್ರದ್ಧಾ ಭಕ್ತಿಯಿಂದ ನೆರವೇರಿಸಲಾಯಿತು. ಶ್ರೀ ಗಣೇಶನಿಗೆ ವಿಶೇಷ ಪೂಜೆಗಳನ್ನು ಸಲ್ಲಿಸಿ, ಗಣೇಶನ ಮಹಿಮೆಯನ್ನು ಸಾರುವ ಭಕ್ತಿಗೀತೆಗಳನ್ನು ಹಾಡಲಾಯಿತು. ದಕ್ಷಾ ವಯಲಿನ್ ಮತ್ತು ಕೊಳಲು ವಾದನದಿಂದ ಸಿದ್ಧಿವಿನಾಯಕನಿಗೆ ಗೀತನಮನವನ್ನು ಅರ್ಪಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಕೃತ ಶಿಕ್ಷಕರಾದ ರಾಮಕೃಷ್ಣ ಉಡುಪ ವಿದಾರ್ಥಿಗಳನ್ನು ಉದ್ದೇಶಿಸಿ “ ಗಣೇಶ ಚತುರ್ಥಿ ಹಬ್ಬವು ಇಡೀ ಭಾರತದಲ್ಲಿ ಬಹಳ ವಿಜೃಂಭಣೆಯಿಂದ ನಡೆಯುತ್ತದೆ. ಶ್ರದ್ಧಾ ಭಕ್ತಿಯಿಂದ ಗಣೇಶನನ್ನು ಭಜಿಸಿ, ಲೋಕಕ್ಕೆ ಒಳಿತನ್ನು ಬಯಸುವ ಸಂಕಲ್ಪದೊಂದಿಗೆ ನಮ್ಮೆಲ್ಲರಲ್ಲಿ ಒಗ್ಗಟ್ಟನ್ನು ಮೂಡಿಸುವ ಕಾರ್ಯವನ್ನು ಈ ಸಂದರ್ಭದಲ್ಲಿ ಮಾಡಲಾಗುತ್ತದೆ” ಎನ್ನುತ್ತಾ ಚೌತಿ ಚಂದ್ರನ ಕಥೆ ಮತ್ತು ಕೃಷ್ಣನ ಸ್ಯಮಂತಕ ಮಣಿಯ ಕಥೆಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ತದನಂತರ ವಿದ್ಯಾರ್ಥಿಗಳಿಗಾಗಿ ಮೆಹಂದಿ ಸ್ಪರ್ಧೆ,…
