Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜನಸಮಾನ್ಯರು ತಮ್ಮ ಕೆಲಸಗಳಿಗಾಗಿ ಕಛೇರಿಗೆ ತೆರಳಿದರೆ ಸರಕಾರಿ ನೌಕರರು ದುಡ್ಡಿನ ಮುಖನೋಡಿ ಕೆಲಸ ಮಾಡಿಕೊಡುವ ಸ್ಥಿತಿ ಇದ್ದು, ಉಡುಪಿ ಜಿಲ್ಲೆಯವರು ಸಾರ್ವಜನಿಕವಾಗಿಯೇ ಭ್ರಷ್ಟಾಚಾರವನ್ನು ಒಪ್ಪಿಕೊಂಡುಬಿಟ್ಟಿದ್ದಾರೆ. ಹಣ ನೀಡಿ ವರ್ಗಾವಣೆಯಾಗುವ ಅಧಿಕಾರಿಗಳಿಂದ ಹಾಗೂ ಜವಾಬ್ದಾರಿ ಮರೆತ ಜನಪ್ರತಿನಿಧಿಗಳಿಂದ ಮತ್ತೇನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ. ಅನ್ಯಾಯವಾಗುತ್ತಿದೆ ಎಂದು ತಿಳಿದಿದ್ದರೂ ಮೌನವಹಿಸಬೇಕಾದ ಸ್ಥಿತಿಯಲ್ಲಿ ರೈತರಿದ್ದಾರೆ. ನಾವು ಆತ್ಮವಲೋಕನದ ಕಾಲಘಟ್ಟದಲ್ಲಿದ್ದೇವೆ ಎಂದು ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಕೆ.ಪ್ರತಾಪಚಂದ್ರ ಶೆಟ್ಟಿ ಹೇಳಿದರು. ಅವರು ಇಲ್ಲಿನ ಆರ್.ಎನ್. ಶೆಟ್ಟಿ ಸಭಾಭವನದ ಮಿನಿ ಹಾಲ್‌ನಲ್ಲಿ ನಡೆದ ಉಡುಪಿ ಜಿಲ್ಲಾ ರೈತ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಯಾವುದೇ ಪಕ್ಷದ ಜನಪ್ರತಿನಿಧಿಯೂ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದಿಲ್ಲ. ಜನಪ್ರತಿನಿಧಿಗಳು ಜನರ ಪರವಾಗಿ ನಿಲ್ಲಬೇಕು. ಆದರೆ ಅವರು ಜಾತಿ ರಾಜಕಾರಣ, ಹಣ ಹಾಗೂ ಗುತ್ತಿಗೆದಾರರ ಓಲೈಕೆಗೆ ನಿಂತಿದ್ದಾರೆ ಎಂದು ಆರೋಪಿಸಿದರು. ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಇದು ರೈತರ ಸ್ವತ್ತು. ಅದರ ವಸ್ತುಗಳ ಮಾರಾಟ ವಿಚಾರದಲ್ಲಿ 18 ಕೋಟಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಇವರ ಸಂಯುಕ್ತಾಶ್ರಯದಲ್ಲಿ ಸರಕಾರಿ ಪ್ರೌಢ ಶಾಲೆ ಬಸ್ರೂರಿನಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ – ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ – ರಾಕೇಶ್ ೭C, ಪ್ರಣತಿ 8F, ವಿವೇಕ್ ರಾಮರಾಯ್ ಪ್ರಭು 10D, ವಿಘ್ನೇಶ್ ರಾಜೇಶ್ ಪ್ರಭು 10E, ಸಾತ್ವಿಕ್. ಕೆ 8C ಆಯ್ಕೆಯಾಗಿದ್ದಾರೆ. ಅವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಬೆಂಗಳೂರು-ಮಂಗಳೂರು ರೈಲು ಸೇವೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತವಾಗಿದ ಪರಿಣಾಮ ಕೆಲ ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಶನಿವಾರ ಮುಂಜಾನೆ ಸಕಲೇಶಪುರ ಹಾಗೂ ಬಾಳ್ಳುಪೇಟೆ ರೈಲು ಮಾರ್ಗ ಮಧ್ಯೆ ಭೂಕುಸಿತ ಉಂಟಾಗಿದೆ. ಇದರಿಂದಾಗಿ ಶುಕ್ರವಾರದಂದು ಹೊರಟಿದ್ದ ಬೆಂಗಳೂರು-ಕಣ್ಣೂರು (ಕಣ್ಣೂರು ಎಕ್ಸ್ ಪ್ರೆಸ್) ಮತ್ತು ಬೆಂಗಳೂರು-ಮರ್ಡೇಶ್ವರ (ಮುರ್ಡೇಶ್ವರ ಎಕ್ಸ್ ಪ್ರೆಸ್) ರೈಲುಗಳು ಆಲೂರು ಹಾಗೂ ಹಾಸನದಲ್ಲಿ ಸ್ಥಗಿತಗೊಂಡಿದೆ. ಮಣ್ಣು ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ ರೈಲು ಇಲಾಖೆ ಟ್ವೀಟ್ ಮಾಡಿದೆ. ಜು.26ರಂದು ದೋಣಿಗಲ್‌-ಕಡಗರವಳ್ಳಿ ನಡುವೆ ಭಾರಿ ಪ್ರಮಾಣದಲ್ಲಿ ಗುಡ್ಡಕುಸಿತದಿಂದ ಮಣ್ಣು ಹಳಿಗೆ ಬಿದ್ದಿತ್ತಲ್ಲದೆ, ಕೆಳಗೆ ಭೂಕುಸಿತದಿಂದ ಪ್ರಪಾತ ಉಂಟಾಗಿತ್ತು. ಸ್ಥಳಕ್ಕೆ ಆಗಮಿಸಿದ ರೈಲ್ವೆ ತಾಂತ್ರಿಕ ವರ್ಗ, ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಭಾರಿ ಮಳೆಯ ನಡುವೆಯೂ ಹಗಲು ರಾತ್ರಿ ನಿರಂತರ ಕಾರ್ಯಾಚರಣೆ ನಡೆಸಿ ಕೊನೆಗೂ ಗುರುವಾರ ಪ್ಯಾಸೆಂಜರ್‌ ರೈಲು ಸಂಚಾರಕ್ಕೆ ಮುಕ್ತಗೊಳಿಸುವಲ್ಲಿ ಯಶಸ್ವಿಯಾಗಿತ್ತು. ಹಳಿ ಹಾಗೂ ತಡೆಗೋಡೆ ದುರಸ್ತಿ ಪೂರ್ಣಗೊಂಡು ಭಾನುವಾರದಿಂದ ಎರಡು ದಿನಗಳ ಕಾಲ ಪ್ರಾಯೋಗಿಕವಾಗಿ ಗೂಡ್ಸ್‌…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ದೇವರ ಸನ್ನಿಧಿಯಲ್ಲಿ ವರ್ಷಂಪ್ರತಿ ಶ್ರಾವಣ ಮಾಸದಲ್ಲಿ ಜರಗುವ ’ಅಖಂಡ ಭಜನಾ ಸಪ್ತಾಹ’ಮಹೋತ್ಸವ’ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಮಾರ್ಗದರ್ಶನದಂತೆ ಇಂದು ಬೆಳಿಗ್ಗೆ 9.25ರ ಕನ್ಯಾ ಲಗ್ನ ಸುಮುಹೂರ್ತದಲ್ಲಿ ದೀಪ ಸ್ಥಾಪನಾಪೂರ್ವಕ ಪ್ರಾರಂಭವಾಯಿತು. ದೇವಳದ ಪ್ರಧಾನ ಅರ್ಚಕ ಎಸ್. ವೆಂಕಟರಮಣ ಆಚಾರ್ಯ ಮತ್ತು ಪುರೋಹಿತರಾದ ಜಿ. ವಿಠಲದಾಸ ಭಟ್ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ಜರಗಿತು. ದೇವಳದ ಆಡಳಿತ ಮೊಕ್ತೇಸರ ಎನ್. ಸದಾಶಿವ ನಾಯಕ್ ಮತ್ತು ಆಡಳಿತ ಮಂಡಳಿ ಸದಸ್ಯ ಜಿ. ವೆಂಕಟೇಶ ನಾಯಕ್ ಜಂಟಿಯಾಗಿ ದೀಪ ಪ್ರಜ್ವಲನೆ ಮಾಡಿದರು. ಸಮಾಜದ ಹಿರಿಯರಾದ ಎಂ. ವಿನೋದ ಪೈ, ಜಿ. ನಿತ್ಯಾನಂದ ಶೆಣೈ, ಯು. ನಾರಾಯಣ ಪೈ, ಡಾ. ಕಾಶೀನಾಥ ಪಿ. ಪೈ, ಬಿ. ಸದಾನಂದ ಶೆಣೈ, ಬಿ. ಕೃಷ್ಟ್ರಾಯ ಪೈ, ಎನ್. ಕೃಷ್ಣಾನಂದ ವಿ. ನಾಯಕ್, ಎಂ. ನಾಗೇಂದ್ರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಸ. ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ-ಬಾಲಕಿಯರ ಕುಂದಾಪುರ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದ ಪ್ರೌಢಶಾಲಾ ವಿಭಾಗದಲ್ಲಿ ಗಂಗೊಳ್ಳಿಯ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆಯ ಬಾಲಕ – ಬಾಲಕಿಯರ ತಂಡ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಪ್ರೌಢಶಾಲಾ ಶಾಲಾ ವಿಭಾಗದಲ್ಲಿ ಗಂಗೊಳ್ಳಿಯ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡವು ಕೆಪಿಎಸ್ ಕೋಟೇಶ್ವರ ತಂಡವನ್ನು ಸೋಲಿಸಿದರೆ, ಗಂಗೊಳ್ಳಿಯ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ತಂಡ ಕುಂದಾಪುರದ ಸೈಂಟ್ ಪಿಯೂಸ್ ಶಾಲೆ ತಂಡವನ್ನು ಸೋಲಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಪ್ರಾಥಮಿಕ ಶಾಲಾ ವಿಭಾಗದಲ್ಲಿ ಕುಂದಾಪುರದ ಸೈಂಟ್ ಪಿಯೂಸ್ ಶಾಲೆ ಬಾಲಕರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ವಯೋಶ್ರೇಷ್ಠರಿಗೆ ರಾಜ್ಯ ಪ್ರಶಸ್ತಿ ನೀಡಲು ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ. ಹಿರಿಯ ನಾಗರಿಕರ ವಿವಿಧ ಕ್ಷೇತ್ರಗಳಾದ ಶಿಕ್ಷಣ ಕ್ಷೇತ್ರ, ಸಾಹಿತ್ಯ ಕ್ಷೇತ್ರ, ಕಾನೂನು, ಪ್ರತಿಭೆ/ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 06 ವೈಯಕ್ತಿಕ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 01 ಸಂಸ್ಥೆಗೆ ಪ್ರಶಸ್ತಿ ಸೇರಿ ಒಟ್ಟು 07 ಪ್ರಶಸ್ತಿಗಳನ್ನು ನೀಡಲಾಗುವುದು. ಜಿಲ್ಲೆಯ ಹಿರಿಯ ನಾಗರಿಕರು ಈ ಬಗ್ಗೆ ತಮ್ಮ ಪ್ರಸ್ತಾವನೆಗಳನ್ನು ಕನ್ನಡ ಭಾಷೆಯಲ್ಲಿ ದ್ವಿಪ್ರತಿಯಲ್ಲಿ ನಮೂನೆ 1 ಮತ್ತು ನಮೂನೆ 2 ರಲ್ಲಿ ಭರ್ತಿ ಮಾಡಿ ಆಗಸ್ಟ್ 31 ರ ಒಳಗಾಗಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.dwdsc.karnataka.gov.in ಅಥವಾ ಜಿಲ್ಲಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಂಬದಕೋಣೆ ಹೋಬಳಿ ಮಟ್ಟದ ಶಟಲ್ ಬ್ಯಾಡ್ಮಿಟನ್ ಪಂದ್ಯಾಟದ ಪ್ರಾಥಮಿಕ ಬಾಲಕರ ವಿಭಾಗದಲ್ಲಿ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಸ್ಕೂಲ್‍ನ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಸನ್ವಿತ್ ಎಸ್. ಶೆಟ್ಟಿ 7ನೇ ತರಗತಿ ಮತ್ತು ಹರಿಜಿತ್ ಆರ್. ಪೂಜಾರಿ 7ನೇ ತರಗತಿ ಪ್ರಥಮ ಸ್ಥಾನಗಳಿಸಿ ವಲಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ 2024-26 ನೇ ಸಾಲಿನ  ಅಧ್ಯಕ್ಷ ಹಾಗೂ ಕಾರ್ಯದರ್ಶಿ ಆಯ್ಕೆ ಇತ್ತೀಚಿಗೆ ನಡೆಯಿತು. ಸಂಘದ ಅಧ್ಯಕ್ಷರಾಗಿ ಎಂ. ಜಿ. ಎಂ. ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಶಾನಾಡಿ ಸತೀಶ್ ಹೆಗ್ಡೆ ಹಾಗೂ ಕಾರ್ಯದರ್ಶಿಯಾಗಿ ಶ್ರೀ ಮೂಕಾಂಬಿಕಾ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ ಶೆಟ್ಟಿ ಹೊಸಮಠ ಅವರು ಆಯ್ಕೆಯಾಗಿದ್ದಾರೆ ಎಂದು ಸಂಘದ ಅಧ್ಯಕ್ಷ ಜೀವನ ಕುಮಾರ ಶೆಟ್ಟಿ, ಹರ್ಕೂರ ಕಾರ್ಯದರ್ಶಿ ಮಂಜುನಾಥ ಜೋಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತ್ರಾಸಿ ಕಡೆಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ಸಿಗೆ ಲಾರಿ ಡಿಕ್ಕಿಯಾದ ಪರಿಣಾಮ ಬಸ್ಸಿನಲ್ಲಿ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾದ ಘಟನೆ ಶನಿವಾರ ತಲ್ಲೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೆಳಿಗ್ಗೆ ನಡೆದಿದೆ. ತಲ್ಲೂರು ಪ್ರವಾಸಿ ಪೆಟ್ರೋಲ್‌ ಬಂಕ್‌ ಎದುರು ಬೈಂದೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಎ.ಕೆ.ಎಂ.ಎಸ್‌ ಸಂಸ್ಥೆಯ ಬಸ್ಸಿಗೆ ಹಿಂಬದಿಯಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡಿದಿದ್ದು, ಬಸ್ಸಿನಲ್ಲಿದ್ದ ಹಲವು ವಿದ್ಯಾರ್ಥಿಗಳಿಗೆ ಗಾಯಗಳಾಗಿದೆ. ಅಪಘಾತದ ತೀವ್ರತೆಗೆ ಬಸ್ಸಿನ ಹಿಂಭಾಗ ಹಾಗೂ ಲಾರಿಯ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಕುಂದಾಪುರದ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡಿದ್ದ ಕುಂದಾಪುರದ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರಸಾದ್‌ ಎಂಬಾತ ಗಂಭೀರ ಗಾಯಗೊಂಡು ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದಾನೆ. ಅದೇ ಕಾಲೇಜಿನ ವಿದ್ಯಾರ್ಥಿಗಳಾದ ಶ್ರೇಯಸ್‌ ಪೂಜಾರಿ, ದೀಪಶ್ರೀ, ತನುಷ್‌, ಪ್ರೀತಮ್‌, ಕೋಟ ಆಶ್ರಿತಾ ನರ್ಸಿಂಗ್‌ ಕಾಲೇಜಿನ ವಿದ್ಯಾರ್ಥಿನಿಯರಾದ ಅಶ್ವಿನಿ ಹಾಗೂ ಅಶ್ಮಿತಾ, ಇತರ ಪ್ರಯಾಣಿಕರಾದ ಶಿವರಾಂ, ವಿದ್ಯಾ, ಸತೀಶ್‌,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ನಗರದಲ್ಲಿ ಚಿನ್ನದ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೂರ್ವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಉಪ್ಪೂರು ಮೂಲದ ಸಂತೋಷ್‌ ಆಚಾರ್ಯ (45 ವರ್ಷ) ಮೃತ ವ್ಯಕ್ತಿ. ಕುಂದಾಪುರದ ಚಿಕ್ಕನಸಾಲು ರಸ್ತೆಯಲ್ಲಿ ಜೈ ಹಿಂದ್ ಹೋಟೆಲ್‌ ಎದುರಿನ ಬಾಡಿಗೆ ಕಟ್ಟಡದಲ್ಲಿ ಚಿನ್ನದ ಕೆಲಸ ಮಾಡಿಕೊಂಡಿದ್ದ ಸಂತೋಷ್‌ ಆಚಾರ್ಯ ಅವರ ಹಠಾತ್‌ ಸಾವು ಕುಟುಂಬಿಕರನ್ನು ಆತಂಕಕ್ಕೀಡುಮಾಡಿದೆ. ಅಲ್ಲಿಯೇ ಸಮೀಪ ವಾಸವಿದ್ದ ಮನೆಯಲ್ಲಿ ಅವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಾಗರ ಪಂಚಮಿಯಂದು ಸತೋಷ್‌ ಅವರು ಮನೆಗೆ ತೆರಳದೇ ಇದ್ದುದರಿಂದ ಅವರ ಸಹೋದರ ಸುರೇಶ್ ಆಚಾರ್ಯ ಕರೆ ಮಾಡಿದ್ದರು. ಈ ವೇಳೆ ಫೋನ್ ಸ್ವಿಚ್ ಆಫ್ ಆಗಿತ್ತು. ನಂತರ ಅವರು ಅಣ್ಣ ವಾಸವಿದ್ದ ಮನೆಗೆ ಸ್ನೇಹಿತರೊಬ್ಬರನ್ನು ಕಳುಹಿಸಿ ವಿಚಾರಿಸಿದಾಗ ಮನೆಯ ಒಳಗಿನಿಂದ ದುರ್ವಾಸನೆ ಬರುತ್ತಿದೆ ಎಂದು ತಿಳಿಸಿದ್ದಾರೆ. ಆಗಲೇ ಸಂತೋಷ್ ಆಚಾರ್ಯ ಮೃತಪಟ್ಟಿರುವ ವಿಷಯ ಬೆಳಕಿಗೆ ಬಂದಿದೆ. ಕುಂದಾಪ್ರ ಡಾಟ್‌ ಕಾಂ ಸುದ್ದಿ. ಸಂತೋಷ್ ಚಾಪೆಯ ಮೇಲೆ ಮಲಗಿದ್ದ ಸ್ಥಿತಿಯಲ್ಲಿದ್ದರು. ಮನೆಯ…

Read More