ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬೀಜಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ಟಿಪ್ಪರ್ ಗುದ್ದಿದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾದ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೀಜಾಡಿ ಸರ್ವಿಸ್ ರಸ್ತೆಯಿಂದ ಹೆದ್ದಾರಿಗೆ ಹೋಗುತ್ತಿದ್ದ ಕಾರಿಗೆ ಕುಂಭಾಸಿಯಿಂದ ಕುಂದಾಪುರದ ಕಡೆಗೆ ಅತಿವೇಗವಾಗಿ ಬಂದ ಟಿಪ್ಪರ್ ಕಾರಿಗೆ ಗುದ್ದಿದ ಪರಿಣಾಮ ಕಾರು ಸಂಪೂರ್ಣ ಹಾನಿಯಾಗಿದೆ. ಟಿಪ್ಪರ್ ನಿಯಂತ್ರಣ ತಪ್ಪಿ ಹೆದ್ದಾರಿ ಡಿವೈಡರ್ ಮಧ್ಯದಲ್ಲಿ ನಿಂತಿದೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದಾಗಿ ಕೆಲಕಾಲ ಟ್ರಾಫಿಕ್ ಸಮಸ್ಯೆ ಎದುರಾಯಿತು. ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಿಗಮದ ಸೌಲಭ್ಯಗಳಾದ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗಕ್ಕೆ ಸಾಲ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ ಹಾಗೂ ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಅರ್ಹ ಫಲಾನುಭವಿಗಳಿಂದ ಸೇವಾಸಿಂಧು ತಂತ್ರಾಂಶ http://sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ www.kssd.karnataka.gov.in ಅಥವಾ ಸಹಾಯವಾಣಿ ಸಂಖ್ಯೆ: 080-22374832, 8050770004, 8050770005 ಅಥವಾ 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿವಮೊಗ್ಗದಲ್ಲಿ ನಡೆದ ಓಪನ್ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ – 2024ರಲ್ಲಿ ಬಸ್ರೂರಿನ ಮಿಥುನ್. ಆರ್ 16 ರಿಂದ 17 ವರ್ಷದ ವಯೋಮಾನದ ವಿಭಾಗದಲ್ಲಿ ಕಟಾದಲ್ಲಿ ಪ್ರಥಮ ಸ್ಥಾನ ಗಳಿಸಿರುತ್ತಾನೆ. ಆರ್. ಎನ್. ಶೆಟ್ಟಿ ಕಂಪೋಸಿಟ್ ಪಿಯು ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ. ಅವರು ಬಸ್ರೂರಿನ ನಿವಾಸಿ ರಮೇಶ್ ಹಾಗೂ ಕುಸುಮ ದಂಪತಿಯ ಪುತ್ರ. ಸಾಧಕ ಕರಾಟೆಪಟು ಮಿಥುನ್ ಆರ್. ಕಾಲೇಜಿನ ಸಂಚಾಲಕರಾದ ಸುಕುಮಾರ್ ಶೆಟ್ಟಿ ಅವರು, ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು ಹಾಗೂ ಕಾಲೇಜಿನ ಬೋಧಕ – ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪ್ರಶಸ್ತಿ ಯೋಜನೆಯನ್ನು ಪ್ರಾರಂಭಿಸಲಾಗಿದ್ದು, ಮುಂಗಾರು ಭತ್ತದ ಬೆಳೆಗೆ ರೈತರು ಹಾಗೂ ರೈತ ಮಹಿಳೆಯರಿಂದ ಬೆಳೆ ಸ್ಪರ್ಧೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್ನಲ್ಲಿ ನೂತನವಾಗಿ ಕೃಷಿ ಪ್ರಶಸ್ತಿಗೆ ಅರ್ಜಿ ನಮೂನೆಯನ್ನು ಅಳವಡಿಸಲಾಗಿದ್ದು, ಸಿಟಿಝನ್ ಲಾಗಿನ್ ಅಥವಾ ಆರ್.ಎಸ್.ಕೆ ಲಾಗಿನ್ ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸೇವಾ ಕೇಂದ್ರದಲ್ಲಿ ಆಸಕ್ತ ರೈತ ಹಾಗೂ ರೈತ ಮಹಿಳೆಯರು ಪ್ರತ್ಯೇಕವಾಗಿ ಆಗಸ್ಟ್ 31ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಸಾಹಿತ್ಯ ಅಕಾಡೆಮಿಯ ವತಿಯಿಂದ ಕನ್ನಡ ಜಾಣ-ಜಾಣೆಯರ ವೇದಿಕೆ ಬೆಂಗಳೂರು ಇವರ ಸಹಯೋಗದಲ್ಲಿ 2024 ರ ಸೆಪ್ಟಂಬರ್ ಕೊನೆಯ ವಾರದಲ್ಲಿ ಹಾಸನ ಜಿಲ್ಲೆಯಲ್ಲಿ ರಾಜ್ಯಮಟ್ಟದ ಮೂರು ದಿನಗಳ ಪಿ.ಲಂಕೇಶ್ ಕೃತಿಗಳ ಅಧ್ಯಯನ ಶಿಬಿರವನ್ನು ನಡೆಸಲಾಗುತ್ತಿದ್ದು, ಆಸಕ್ತ 20 ರಿಂದ 40 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 17 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್ಸೈಟ್ http://karnatakasahithyaacademy.org ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟಾçರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರಾವಳಿಯ ಬಹುದೊಡ್ಡ ಹಬ್ಬವಾದ ನಾಗರಪಂಚಮಿಯನ್ನು ಕುಂದಾಪುರ – ಬೈಂದೂರು ತಾಲೂಕಿನೆಲ್ಲೆಡೆ ಸಡಗರದಿಂದ ಆಚರಿಸಲಾಯಿತು. ಬೆಳಿಗ್ಗೆನಿಂದಲೇ ನಾಗಬನ ಹಾಗೂ ಸುಬ್ರಹ್ಮಣ್ಯ ದೇವಾಲಯಗಳಿಗೆ ತೆರಳಿದ ಭಕ್ತಾದಿಗಳು ನಾಗನಿಗೆ ಹಾಲು, ಏಳನೀರು, ಕೇದಿಗೆ ಹೂವನ್ನು ಸಮರ್ಪಿಸಿ, ಪೂಜೆ ಸಲ್ಲಿಸಿ ಪುನೀತರಾದರು. ತಾಲೂಕಿನ ಪ್ರಸಿದ್ಧ ದೇವಾಲಯವಾದ ಸೇನಾಪುರ ಗ್ರಾಮದ ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಾಳಾವರದ ಶ್ರೀ ಮಹಾಲಿಂಗೇಶ್ವರ ಕಾಳಿಂಗ(ಸುಬ್ರಹ್ಮಣ್ಯ) ದೇವಸ್ಥಾನ, ಉಳ್ಳೂರು ಕಾರ್ತಿಕೇಯ ದೇವಸ್ಥಾನ ಸೇರಿದಂತೆ ಪ್ರಮುಖ ದೇವಾಲಯಗಳಲ್ಲಿ ನಾಗರ ಪಂಚಮಿ ಅಂಗವಾಗಿ ವಿಶೇಷ ಪೂಜಾವಿಧಿಗಳು ನೆರವೇರಿದವು. ಭಕ್ತಾದಿಗಳಿಗೆ ನೈವೇದ್ಯದ ಪ್ರಸಾದ ವಿತರಣೆ ಮಾಡುವ ವ್ಯವಸ್ಥೆ ಮಾಡಲಾಗಿತ್ತು. ತಾಲೂಕಿನ ನೂರಾರು ಶ್ರೀ ನಾಗನಿಗೆ ದೇವರಿಗೆ ವಿಶೇಷಪೂಜೆ ಸಲ್ಲಿಸಲಾಯಿತು. ಇದನ್ನೂ ಓದಿ: https://kundapraa.com/?p=51077
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಎಕ್ಸಲೆಂಟ್ ಪಿ. ಯು ಕಾಲೇಜು ಮತ್ತು ಹೈಸ್ಕೂಲ್ ಸುಣ್ಣಾರಿ ಕುಂದಾಪುರ ಇವರ ಸಹಯೋಗದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ವಲಯ ಮಟ್ಟದ ಯೋಗಾಸನ ಸ್ಪರ್ಧೆ ಎಕ್ಸಲೆಂಟ್ ಸಂಸ್ಥೆಯಲ್ಲಿ ನೆರೆವೇರಿತು. ಸಭಾ ಕಾರ್ಯಕ್ರಮವನ್ನು ಚಿನ್ಮಯಿ ಆಸ್ಪತ್ರೆ ಕುಂದಾಪುರ ಇಲ್ಲಿನ ಆಡಳಿತ ನಿರ್ದೇಶಕರು ಹಾಗೂ ಚರ್ಮರೋಗ ತಜ್ಙರಾದ ಡಾ. ಉಮೇಶ್ ಪುತ್ರನ್ ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳ ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕವಾಗಿ ಬೆಳೆವಣಿಗೆಗೆ ಯೋಗವು ಪ್ರಮುಖ ಪಾತ್ರ ವಹಿಸುತ್ತದೆ, ಜತೆಗೆ ಭಾವನಾತ್ಮಕ, ಸಾಮಾಜಿಕ ಹಾಗೂ ಆಧ್ಯಾತ್ಮಿಕ ಅಂಶಗಳನ್ನು ಒಳಗೊಂಡ ಯೋಗ ಅಧ್ಯಯನದಿಂದ ಯಶಸ್ವಿ ನಾಗರಿಕನಾಗಲು ಸಾಧ್ಯವಿದೆ.’ ಎಂಬುದನ್ನು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ. ಎಂ. ಹೆಗ್ಡೆ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ರಿ. ಕುಂದಾಪುರ ಇದರ ಅಧ್ಯಕ್ಷರಾದ ಎಂ. ಮಹೇಶ್ ಹೆಗ್ಡೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹೊಂಬಾಡಿ-ಮಂಡಾಡಿ ಗ್ರಾಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೈಂದೂರು ವಲಯ ಮಟ್ಟದ ಯೋಗಾಸನ ಸ್ಪರ್ಧೆ14 ರ ವಯೋಮಾನದ ಹುಡುಗಿಯರ ರಿದಮಿಕ್ ಯೋಗ ವಿಭಾಗದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ವಿಧ್ಯಾರ್ಥಿನಿ ಸಾನಿಧ್ಯ ಎಸ್. ಮೊಗವೀರ 6ನೇ ತರಗತಿ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. 14 ರ ವಯೋಮಾನದ ಹುಡುಗರ ರಿದಮಿಕ್ ಯೋಗ ವಿಭಾಗದಲ್ಲಿ ವಂಶಿತ್ 6ನೇ ತರಗತಿ ದ್ವಿತೀಯ ಸ್ಥಾನ ಗಳಿಸಿರುತ್ತಾನೆ. ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ನಲ್ಲಿ ಮಕ್ಕಳ ಸರ್ವತೋಮುಕ ಬೆಳವಣಿಗೆಗೆ ಪೂರಕವಾಗುವಂತಹ ವೈವಿಧ್ಯಮಯ ತರಬೇತಿಗಳನ್ನು ನೀಡುತ್ತಾ, ಶೈಕ್ಷಣಿಕವಾಗಿ ಪ್ರಗತಿಯನ್ನು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ವಿಧಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ, ಬೋಧಕ ಮತ್ತು ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಮಗ್ರ ಶಿಕ್ಷಣ ಯೋಜನೆ ಕರ್ನಾಟಕ, ಸಾಮಾಜಿಕ ಪರಿಶೋಧನ ತಂಡವು ಶಾಲೆಗೆ ಭೇಟಿ ನೀಡಿ ಸಮಗ್ರ ಮೌಲ್ಯಮಾಪನ ನಡೆಸಿ ಪಾಲಕರೊಂದಿಗೆ ಹಾಗೂ ಹಳೆ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಿದರು . ತಾಲೂಕು ಪಂಚಾಯತ್ ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕರಾಗಿರುವ ಸುರೇಶ್ ಅಧ್ಯಕ್ಷತೆ ವಹಿಸಿದರು, ಯೋಜನೆಯ ತಾಲೂಕು ವ್ಯವಸ್ಥಾಪಕರಾಗಿರುವ ಸುಕುಮಾರ್. ಬಿ. ಪ್ರಾಸ್ತಾವಿಕ ನುಡಿಗಳನ್ನಾಡಿದರು . ಮುಖ್ಯ ಶಿಕ್ಷಕರಾದ ಮುಕ್ತ ಪಿ. ವರದಿ ಮಂಡಿಸಿದರು. ಶಾಲಾಭಿವೃದ್ಧಿ ಕುರಿತಾಗಿ ಎಸ್ಡಿಎಮ್ಸಿ, ಪಾಲಕರು ಮತ್ತು ಹಳೆ ವಿದ್ಯಾರ್ಥಿಗಳಿಂದ ಅಹವಾಲು, ಅಭಿಪ್ರಾಯಗಳನ್ನು ಸಂಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳ ತಂಡ, ಎಸ್. ಡಿ. ಎಂ. ಸಿ. ಅಧ್ಯಕ್ಷರಾಗಿರುವ ಸುಬ್ರಹ್ಮಣ್ಯ ಪೂಜಾರಿ, ಎಸ್. ಡಿ. ಎಂ. ಸಿ. ಉಪಾಧ್ಯಕ್ಷೆ ನಾಗವೇಣಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿರುವ ಮಂಜುನಾಥ ಪೂಜಾರಿ, ಕೋಶಾಧಿಕಾರಿ ಮಹಾದೇವ ಬಿಲ್ಲವ, ಕಾರ್ಯದರ್ಶಿ ಸುಧಾಕರ್ ಮೊಗವೀರ, ಮತ್ತು ಎಸ್. ಡಿ. ಎಂ. ಸಿ. ಸದಸ್ಯರು, ಪಾಲಕರು, ಹಳೆ ವಿದ್ಯಾರ್ಥಿಗಳು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ವಿದ್ಯಾರ್ಥಿಗಳು ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕವಾಗಿ, ಮಾನಸಿಕವಾಗಿ ಸದೃಢರಾಗಲು ಸಾಧ್ಯವಿದೆ. ಕ್ರೀಡೆಯಲ್ಲಿ ಸೋಲು, ಗೆಲುವು ಸಾಮಾನ್ಯವಾಗಿದ್ದು, ಸೋತವರು ಕುಗ್ಗದೆ ಮುಂದಿನ ಕ್ರೀಡಾಕೂಟದಲ್ಲಿ ಗೆಲ್ಲಲು ಪ್ರಯತ್ನ ನಡೆಸಬೇಕು ಎಂದು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸತ್ಯನಾರಾಯಣ ಹೇಳಿದರು. ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ಉಡುಪಿ, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಸ. ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ – ಬಾಲಕಿಯರ ಕುಂದಾಪುರ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವನ್ನುಉದ್ಘಾಟಿಸಿ ಮಾತನಾಡಿದರು. ಜಿ. ಎಸ್. ವಿ. ಎಸ್. ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್, ಶಾಲೆಯ ಶಿಕ್ಷಕ – ರಕ್ಷಕ ಸಮಿತಿ ಉಪಾಧ್ಯಕ್ಷ ಜಿ. ವಿಠಲ ಶೆಣೈ ಮತ್ತು ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ…
