ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಮದರ್ ತೆರೇಸಾ ಶೈಕ್ಷಣಿಕ ಟ್ರಸ್ಟ್ ಶಂಕರನಾರಾಯಣ ಪ್ರವರ್ತಿತ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್ ಶಂಕರನಾರಾಯಣ 2024-25ನೇ ಸಾಲಿನ ಪೂರ್ವಪ್ರಾಥಮಿಕ ವಿಭಾಗದ ಪೂರ್ವಭಾವಿ ಸಭೆಯು ರೌಪಿಯ ಸಭಾಂಗಣದಲ್ಲಿ ನಡೆಯಿತು. ಸoಸ್ಥೆಯ ಆಡಳಿತಾಧಿಕಾರಿಗಳಾದ ಶಮಿತಾ ರಾವ್, ರೇನಿಟಾ ಲೋಬೊ ಮುಖ್ಯಶಿಕ್ಷಕ ರವಿದಾಸ್ ಶೆಟ್ಟಿ ಮತ್ತು ಪೂರ್ವಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ಕುಸುಮಾ ಶೆಟ್ಟಿ ಜಂಟಿಯಾಗಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯಶಿಕ್ಷಕ ರವಿದಾಸ್ ಶೆಟ್ಟಿ ಪಾಲಕರಿಗೆ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿಗಳ ದಾಖಲಾತಿ ವಯೋಮಿತಿ ಮತ್ತು ಇತರೇ ಇಲಾಖಾ ನಿಯಮಗಳ ಕುರಿತು ತಿಳಿಸಿದರು. ಪೂರ್ವಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಕುಸುಮಾ ಶೆಟ್ಟಿ ಎಲ್.ಕೆ.ಜಿ ಮತ್ತು ಯು. ಕೆ. ಜಿ ತರಗತಿಯ ಶೈಕ್ಷಣಿಕ ವರ್ಷದ ಕ್ರಿಯಾಯೋಜನೆ, ವಾಹನ ಸೌಲಭ್ಯ, ಸಮವಸ್ತ್ರ, ಪಠ್ಯಪುಸ್ತಕ ಮತ್ತು ಇತರೇ ವಿಷಯಗಳ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು. ಅಧ್ಯಕ್ಷಿಯ ಭಾಷಣದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಶಮಿತಾ ರಾವ್ ಮಾತಾನಾಡಿ, ನಾವು ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವುದರಿಂದ ಈ ವರ್ಷ ವಿದ್ಯಾರ್ಥಿಗಳ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಅಂಬಾ ಟಿವಿ ಸೆಂಟರ್ ಹಾಗೂ ಹೋಮ್ ಅಪ್ಲಯನ್ಸ್‌ಸ್ ಶೋರೂಮ್‌ನ ಒಳಭಾಗದಿಂದ ಬೆಂಕಿ ತಗುಲಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ. ಸಂಜೆಯ ಬಳಿಕ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಲುಕಿರುವ ಶಂಕೆಯಿದ್ದು, ಶೋರೂಮ್ ಒಳಗಿದ್ದ ವಸ್ತುಗಳು ಬಹುಪಾಲು ಸುಟ್ಟು ಹೋಗಿವೆ. ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿಗಳು ತಡರಾತ್ರಿಯ ತನಕವೂ ಹರಸಾಹಸಪಟ್ಟಿದ್ದಾರೆ. ಭಾನುವಾರ ರಜೆ ಇದ್ದುದರಿಂದ ಬೆಂಕಿ ಇದ್ದಿರುವುದು ತಡವಾಗಿ ತಿಳಿದುಬಂದಿದೆ. ಅಷ್ಟರಲ್ಲಿ ಶೋರೂಮ್ ಒಳಭಾಗದಲ್ಲಿ ಬೆಂಕಿ ಆವರಿಸಿಕೊಂಡಿತ್ತು. ಘಟನೆಯಲ್ಲಿ ಲಕ್ಷಾಂತರ ರೂ. ನಷ್ಟ ಸಂಬಂಧಿಸಿದೆ. ಗಂಗೊಳ್ಳಿ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಘಟನೆಗೆ ನೈಜ ಕಾರಣ ಹಾಗೂ ನಷ್ಟದ ನಿಖರ ವಿವರ ಇನ್ನಷ್ಟೇ ತಿಳಿದುಬರಬೇಕಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ವಿದ್ಯಾಗಿರಿ ಆವರಣದಲ್ಲಿ ನಡೆದ 2024ನೇ ಸಾಲಿನ 2 ದಿನದ ಬೃಹತ್ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ 2468 ಆಕಾಂಕ್ಷಿಗಳಿಗೆ ಸ್ಥಳದಲ್ಲೇ ಉದ್ಯೋಗ ಅವಕಾಶ ನೀಡುವುದರೊಂದಿಗೆ ಯಶಸ್ವಿಯಾಗಿ ಸಂಪನ್ನಗೊAಡಿದೆ. ಈ ಬಾರಿಯ ಉದ್ಯೋಗ ಮೇಳದಲ್ಲಿ ಭಾಗವಹಿಸಿದ ಒಟ್ಟು 258 ಕಂಪನಿಗಳ ಪೈಕಿ 217 ಕಂಪನಿಗಳು 5953 ಜನರನ್ನು ಶಾರ್ಟ್ಲಿಸ್ಟ್ಗೊಳಿಸಿ ಮುಂದಿನ ಹಂತಕ್ಕೆ ಆಯ್ಕೆ ಮಾಡಿವೆ. ಉದ್ಯೋಗ ಮೇಳದ ಎರಡನೇ ದಿನ 1542 ಉದ್ಯೋಗಾಕಾಂಕ್ಷಿಗಳು ಪಾಲ್ಗೊಂಡಿದ್ದು, ಒಟ್ಟು ಎರಡು ದಿನಗಳ ಉದ್ಯೋಗ ಮೇಳದಲ್ಲಿ 14780 ಅಭ್ಯರ್ಥಿಗಳು ಭಾಗವಹಿಸಿದರು. ಸರಕಾರಿ ಕಾಲೇಜಿನ ವಿದ್ಯಾರ್ಥಿಗಳಿಗೂ ಆಳ್ವಾಸ್ ಪ್ರಗತಿಯಲ್ಲಿ ವಿಶೇಷ ಅವಕಾಶಬೆಂಗಳೂರಿನ ಸರಕಾರಿ ಎಸ್‌ಕೆಎಸ್‌ಜೆ ಟೆಕ್ನಾಲಜಿ ಇನ್ಸಿ÷್ಟಟ್ಯೂಟ್ ಇಂಜಿನಿಯರಿAಗ್ ಕಾಲೇಜಿನ 43 ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆಯ ಮೇರೆಗೆ ಆಳ್ವಾಸ್ ಸಂಸ್ಥೆಯ ವತಿಯಿಂದ ಉಚಿತ ವಾಹನ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಿ, ಪ್ರಗತಿ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿತ್ತು. ಇಲ್ಲಿನ ವಿದ್ಯಾರ್ಥಿಗಳು ಪ್ರತಿಷ್ಠಿತ ಇಜಿ ಇಂಡಿಯಾ, ಇಸಿಯಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದಲ್ಲಿ ಯೋಗಬಂಧು ಸಂಜೀವಣ್ಣ ಎಂದೇ ಖ್ಯಾತರಾಗದ್ದ ಸಂಜೀವ (61) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೂಲತಃ ಉಡುಪಿಯ ಹೆರಂಜೆ ನಿವಾಸಿ ಪ್ರಸ್ತುತ ಕುಂದಾಪುರದವರಾದ ಸಂಜೀವ ಅವರು ಕುಂದಾಪುರ ಆದರ್ಶ ಆಸ್ಪತ್ರೆಯಲ್ಲಿ ವ್ಯವಸ್ಥಾಪಕರಾಗಿದ್ದರು. ಕಳೆದ 37 ವರ್ಷಗಳಿಂದ ಬ್ರಹ್ಮಾವರ ಹಾಗೂ ಕುಂದಾಫುರದಲ್ಲಿ ಉಚಿತ ಯೋಗ ತರಬೇತಿ ನೀಡುತ್ತಿದ್ದರು. ಮಣಿಪಾಲದಲ್ಲಿ ವೈದ್ಯಕೀಯ ದಾಖಲೆಗಳ ತಜ್ಞ ಕೋರ್ಸ್ ಮುಗಿಸಿ ಅಲ್ಲಿಯೇ 2 ವರ್ಷ ದುಡಿದಿದ್ದ ಅವರು ಮುಂದೆ ಕುಂದಾಪುರದ ಆದರ್ಶ ಆಸ್ಪತ್ರೆಯಲ್ಲಿ ವೃತ್ತಿ ಆರಂಭಿಸಿದ್ದರು. ಈ ನಡುವೆ ಮುಂಬೈಯಲ್ಲಿ ಕ್ಯಾಂಟೀನ್ ಒಂದರಲ್ಲಿ ಕೆಲಸಕ್ಕಿದ್ದರು. ಕೆಲಸದ ವೇಳೆ ಶುರುವಾದ ಬೆನ್ನುನೋವು ಅವರನ್ನು ಹೈರಾಣಾಗಿಸಿತು. ಧರ್ಮಸ್ಥಳದಲ್ಲಿ ಆಗ ತಾನೆ ಆರಂಭವಾಗಿದ್ದ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ದಾಖಲಾಗಿ ಅಲ್ಲಿನ ಚಿಕಿತ್ಸೆಯಿಂದ ಬೆನ್ನು ನೋವು ಮಾಯವಾಗಿತ್ತು. ಅನಂತರ 3 ವರ್ಷ ಸಾಧಕರಾಗಿ ದಾಖಲಾಗಿ ಪ್ರಕೃತಿ ಚಿಕಿತ್ಸೆಯ ಪ್ರಯೋಜನ ಪಡೆದು ಆರೋಗ್ಯ ವೃದ್ಧಿಸಿಕೊಂಡರು. ಸಮಾನ ಮನಸ್ಕರನ್ನೂ ಅಲ್ಲಿಗೆ ಕರೆದೊಯ್ಯುತ್ತಿದ್ದರು. 1992ರಲ್ಲಿ ಬ್ರಹ್ಮಾವರದಲ್ಲಿ ಯೋಗ ತರಗತಿ ಆರಂಭಿಸಿದರು. ಶಾಲಾ ಮಕ್ಕಳಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ-ಪಡುಕೆರೆ ಮತ್ತು ಗೀತಾನಂದ ಫೌಂಡೇಶನ್ ಮಣೂರು ಪಡುಕೆರೆ ಇವರ ಸಹಭಾಗಿತ್ವದಲ್ಲಿ ಕಾಲೇಜು ಆವರಣದಲ್ಲಿ ಜೂನ್ 14ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 3ರ ತನಕ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಉದ್ಯೋಗ ಮೇಳದಲ್ಲಿ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದ ಖಾಸಗಿ ಕಂಪನಿಗಳು ಭಾಗವಹಿಸುತ್ತಿದೆ. ಉದ್ಯೋಗಾಕಾಂಕ್ಷಿಗಳು ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮೊ ಇಂಜಿನಿಯರಿಂಗ್, ಪದವಿ, ಸ್ನಾತಕೋತ್ತರ ಪದವಿ ಬಿ.ಇಡಿ ಮತ್ತು ಪ್ರಸ್ತುತ ಅಂತಿಮ ವರ್ಷದಲ್ಲಿ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ, ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್‍ನೊಂದಿಗೆ ಭಾಗವಹಿಸಬಹುದಾಗಿದೆ. ಸಂದರ್ಶನಕ್ಕೆ ಹಾಜರಾಗುವ ವಿದ್ಯಾರ್ಥಿಗಳು ರೆಸ್ಯೂಮೆ, ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಗ್ರಿ ಅಂಕಪಟ್ಟಿಯ ಮೂಲ ದಾಖಲೆಯೊಂದಿಗೆ ಹಾಜರಾಗುವಂತೆ ಕೋರಲಾಗಿದೆ. ಆನ್‌ಲೈನ್ ಮೂಲಕ ಹಾಗೂ ಸ್ಥಳದಲ್ಲಿಯೇ ನೊಂದಣಿ ಮಾಡಲು ಅವಕಾಶವಿದೆ. (ಆನ್‌ಲೈನ್ ನೊಂದಣಿಗೆ ಈ ಫಾರ್ಮ್ ಭರ್ತಿ ಮಾಡುವುದು https://forms.gle/Mr376Eh6HrnYPV1z7 ) ಈ ಉದ್ಯೋಗ ಮೇಳದ ಪ್ರಯೋಜನವನ್ನು ರಾಜ್ಯದ ಎಲ್ಲಾ ವಿದ್ಯಾರ್ಥಿಗಳು ಪಡೆದುಕೊಳ್ಳುವಂತೆ ಕಾಲೇಜಿನ ಪ್ರಾಂಶುಪಾಲರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆಸ್ಪತ್ರೆಯ ಮಹಿಳಾ ಸಹೋದ್ಯೋಗಿ ಮೇಲೆ ಲೈಂಗಿಕ ದೌರ್ಜನ್ಯ, ಬೆದರಿಕೆ ಸೇರಿದಂತೆ ವಿವಿಧ ಆರೋಪಗಳನ್ನು ಎದುರಿಸುತ್ತಿರುವ, ಇಲ್ಲಿನ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯಾಗಿದ್ದ ಡಾ. ರಾಬರ್ಟ್ ರೆಬೆಲ್ಲೋಗೆ ಶುಕ್ರವಾರ ರಾತ್ರಿ ಜಾಮೀನು ಮಂಜುರಾಗಿದೆ. ಪ್ರಕರಣ ದಾಖಲಾದ ತಕ್ಷಣ ತಲೆಮರೆಸಿಕೊಂಡಿದ್ದ ವೈದ್ಯ ಮುಂಬಯಿಯ ಐಷಾರಾಮಿ ರೆಸಾರ್ಟ್ ಒಂದರಲ್ಲಿ ಇರುವುದನ್ನು ಪತ್ತೆ ಮಾಡಿದ ಪೊಲೀಸರು ಅಲ್ಲಿಗೆ ತೆರಳಿ ಬಂಧಿಸಿದ್ದರು. ಆರೋಪಿಯನ್ನು ಕುಂದಾಪುರಕ್ಕೆ ಕರೆತಂದು ಶುಕ್ರವಾರ ತಡರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಇದನ್ನೂ ಓದಿ: ► ಪೋಕ್ಸೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಗಳ ಬಂಧನ – https://kundapraa.com/?p=72895 . ಆರೋಪಿಯ ಪರ ವಾದಿಸಿದ ವಕೀಲರು, ದೂರು ನೀಡಿರುವ ವೈದ್ಯೆ ಕೆಲಸದ ವೈಷ್ಯಮ್ಯದಿಂದ ಹೀಗೆ ಮಾಡಿದ್ದಾರೆ. ಆಕೆ ಕೆಲಸದಲ್ಲಿ ನಿರ್ಲಕ್ಷ್ಯ ವಹಿಸಿದ ಬಗ್ಗೆ ವೈದ್ಯಾಧಿಕಾರಿಯಾಗಿದ್ದ ಡಾ. ರಾಬರ್ಟ್ ನೋಟಿಸ್ ನೀಡಿದ್ದರು. ಅದೇ ಕಾರಣಕ್ಕೆ ಡಾ. ರಾಬರ್ಟ್ ವಿರುದ್ದ ಪ್ರಕರಣ ದಾಖಲಿಸಿದ್ದಾರೆ ಎಂದಿದ್ದರು. ಈ ಹಿನ್ನೆಲೆಯಲ್ಲಿ ಜಾಮೀನು ಮಂಜೂರಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟಿಸುತ್ತಿದ್ದು, ಕಳೆದೊಂದು ದಿನದಿಂದ ಗಾಳಿ ಸಹಿತ ಮಳೆಗೆ ಅಲ್ಲಲ್ಲಿ ಹಾನಿಯಾಗುತ್ತಿದೆ. ಧಾರಾಕಾರ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ. ಮುಂದಿನ 24 ಗಂಟೆಗಳಿಗೆ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಸಮುದ್ರದಲ್ಲಿ ಗಾಳಿಯ ಒತ್ತಡವಿದ್ದು, ಮೀನುಗಾರರು ಜು.11ರ ತನಕ ಸಮುದ್ರಕ್ಕಿಳಿಯದಂತೆ ಸೂಚಿಸಲಾಗಿದೆ. ಶನಿವಾರ ಬೆಳಿಗ್ಗೆಯಿಂದ ಸುರಿದ ಗಾಳಿ ಮಳೆಗೆ ಉಡುಪಿ ಜಿಲ್ಲಾದ್ಯಂತ ವಿವಿಧೆಡೆ ಹಾನಿಯಾಗಿದೆ. ಹಾಳೆ ಮಳೆಗೆ ಅಲ್ಲಲ್ಲಿ ರಸ್ತೆಗೆಯಲ್ಲಿ ಮರ ಹಾಗೂ ವಿದ್ಯುತ್ ಕಂಬಗಳು ಬಿದ್ದಿರುವುದು, ಮನೆ ಹಾನಿ ಪ್ರಕರಣಗಳು ದಾಖಲಾಗಿದೆ. ಶಿರೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಮರ ಬಿದ್ದುದರಿಂದ 15 ನಿಮಿಷಗಳ ಕಾಲ ಸಂಚಾರ ವ್ಯತ್ಯಯವಾಯಿತು. ಇನ್ನು ಗದ್ದೆಗಳಲ್ಲಿ ಉಳುವೆಗಾಗಿ ಹಾಕಿದ್ದ ಗೊಬ್ಬರ, ಬೀಜ ಮಳೆ ನೀರಿನ ರಭಸಕ್ಕೆ ಕೊಚ್ಚಿಹೋಗಿ ಹಾನಿಯುಂಟಾಗಿದೆ. ಯಡ್ತರೆ ಸರ್ಕಾರಿ ಶಾಲೆಯ ಮೂರು ತರಗತಿಗಳಿಗೆ ನೀರು ನುಗ್ಗಿ ಹಾನಿಯುಂಟಾಗಿದೆ. ಮಳೆಯಬ್ಬರಕ್ಕೆ ಅಲ್ಲಲ್ಲಿ ವಿದ್ಯುತ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸ. ಪ.ಪೂ ಕಾಲೇಜು ಪ್ರೌಢ ಶಾಲಾ ವಿಭಾಗದಿಂದ 2023-24ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ 40 ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವನ್ನು ರೋಟರಿ ನರಸಿಂಹ ಕಲಾಮಂದಿರದಲ್ಲಿ ಆಯೋಜಿಸಲಾಗಿತ್ತು. 614 ಅಂಕ ಪಡೆದ ಶಾಲೆಗೆ ಪ್ರಥಮ ಸ್ಥಾನ ಪಡೆದ ಅಕ್ಷತಾ ವಿ ಮತ್ತು ಆಂಗ್ಲ ಮಾಧ್ಯಮದಲ್ಲಿ 603 ಅಂಕ ಪಡೆದ ಕ್ಷಿಪಲಿ ಮತ್ತು ಕನ್ನಡ ಮಾದ್ಯಮದಲ್ಲಿ ಪ್ರಥಮ ಸ್ಥಾನ ಪಡೆದ ಎನ್ ವಿಶ್ವಾಸ್ ನಾಯಕ್ ಇವರಿಗೆ ಪೋಷಕರ ಸಮುಖದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸತೀಶ ಕುಮಾರ್, ಉಪ ಪ್ರಾಂಶುಪಾಲ ಕಿರಣ್ ಹೆಗ್ಡೆ ಕೆ. ಹಿರಿಯ ಸಹಶಿಕ್ಷಕಿ ವಿನುತಾ ಗಾಂವ್ಕರ್, ತರಗತಿ ಶಿಕ್ಷಕರಾದ ಶಾರದಾ ಮಯ್ಯ, ಶಂಕರನಾರಾಯಣ ಮಿತ್ಯಂತ, ಮತ್ತು ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದರು. ಬೋರ್ಡ್ ಹೈಸ್ಕೂಲ್‍ನ ಪರೀಕ್ಷೆ ಬರೆದ 154 ವಿದ್ಯಾರ್ಥಿಗಳಲ್ಲಿ 153 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 40 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಪಡೆದಿದ್ದರು. ಇಂಗ್ಲಿಷ್ ಶಿಕ್ಷಕ ಗಣೇಶ್ ಕಾಂಚಾನ್ ಕಾರ್ಯಕ್ರಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜಿಲ್ಲಾದ್ಯಂತ ಮುಂಗಾರು ಚುರುಕುಗೊಂಡಿದ್ದು ಎಲ್ಲೆಡೆಯೂ ಭಾರಿ ಮಳೆಯಾಗುತ್ತಿದೆ. ಶನಿವಾರ ಬೆಳಿಗ್ಗೆಯಿಂದ ನಿರಂತರವಾಗಿ ಸುರಿದ ಮಳೆಗೆ ಯಡ್ತರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ತರಗತಿಗಳಿಗೆ ನೀರು ನುಗ್ಗಿದ್ದು, ಮಕ್ಕಳಿಗೆ ರಜೆ ಘೋಷಿಸಲಾಗಿದೆ. ನಿರಂತರ ಮಳೆಯಿಂದಾಗಿ ರಸ್ತೆಯಿಂದ ತಗ್ಗು ಪ್ರದೇಶದಲ್ಲಿರುವ ಯಡ್ತರೆ ಶಾಲೆಯ ಆವರಣಕ್ಕೆ ನೀರು ನುಗ್ಗಿದ್ದು ಹೊರ ಹರಿವು ಇಲ್ಲದೇ ಇದ್ದುದರಿಂದ ವಿದ್ಯಾರ್ಥಿಗಳ ಮೊಣಕಾಲಿನ ತನಕವೂ ನೀರು ತುಂಬಿಕೊಂಡಿತ್ತು. ಎರಡು ತರಗತಿ ಕೊಠಡಿಗಳು ಹಾಗೂ ಶಾಲಾ ಶಿಕ್ಷಕರ ಕಛೇರಿ ಸಂಪೂರ್ಣ ಜಲಾವೃತಗೊಂಡು ಅಪಾಯಕಾರಿ ಸ್ಥಿತಿ ಎದುರಾಗಿದೆ. ಶಾಲೆ ಎದುರಿನ ಚರಂಡಿ ಬ್ಲಾಕ್ ಕಾರಣ:ಶಾಲೆ ಎದುರಿನ ಚರಂಡಿಯನ್ನು ಮುಚ್ಚಿರುವುದರಿಂದ ಶಾಲೆಯೊಳಕ್ಕೆ ಕೃತಕ ನೆರೆ ನಿರ್ಮಾಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹಿಂದಿನಿಂದಲೂ ಶಾಲೆ ಕಾಂಪೌಂಡ್ ಎದುರಿನ ಚರಂಡಿಯ ಮೂಲಕ ನೀರು ಹರಿದು ಹೋಗಿ ನದಿ ಸೇರುತ್ತಿತ್ತು. ಅದಕ್ಕೆ ತಡೆ ಉಂಟಾಗಿದ್ದು ನೀರು ಹರಿದು ಹೋಗಲು ದಾರಿ ಇಲ್ಲದಾಗಿದೆ. ಸದ್ಯ ತಾತ್ಕಾಲಿಕವಾಗಿ ಶಾಲೆಯ ಹಿಂಭಾಗದ ಗದ್ದೆಗೆ ನೀರು ಹರಿದು ಹೋಗಲು ದಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಂಗ ಅಭಿನಯ, ಅಭಿನಯ ಕಲೆ, ರಂಗ ಕೌಶಲ್ಯಗಳಿಗೆ ನಿಕಟವಾದ ಸಂಬಂಧವಿದ್ದು, ಜಾಗತೀಕರಣ ಮತ್ತು ಜಾಗತೀಕರಣೋತ್ತರ ಸಂದರ್ಭದ ಪ್ರಪಂಚದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಕೌಶಲ್ಯಗಳಿಗೆ ಪ್ರಾಶಸ್ತ್ಯ ಸಿಗುತ್ತಿದೆ. ಕಲಿಕೆ ನಿಂತ ನೀರಾಗಬಾರದು, ನಿರಂತರವಾಗಿದ್ದರೆ ಮಾತ್ರ ಕೌಶಲ್ಯವನ್ನು ಗಳಿಸಲು ಸಾಧ್ಯ ಎಂದು ಡಾ. ಜಿ. ಶಂಕರ್ ಕಾಲೇಜಿನ ಪ್ರಾಂಶುಪಾಲ ಡಾ. ಭಾಸ್ಕರ್ ಶೆಟ್ಟಿ.ಎಸ್ ಹೇಳಿದರು. ಅವರು ಯಕ್ಷ ರಂಗಾಯಣ ಕಾರ್ಕಳ ವತಿಯಿಂದ ನಗರದ ಅಜ್ಜರಕಾಡು ಡಾ.ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪಿ.ಜಿ.ಎ.ವಿ. ಸಭಾಂಗಣದಲ್ಲಿ ನಡೆದ ಅಭಿನಯ ಕಲೆಯಿಂದ ಕೌಶಲ್ಯ ಅಭಿವೃದ್ಧಿ- ಒಂದು ದಿನದ ರಂಗ ತರಬೇತಿ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಮ್ಮ ಬದುಕಿನ ವಿವಿಧ ಸ್ತರಗಳಲ್ಲಿ, ಅರ್ಥಗರ್ಭಿತ ಜೀವನ ಕಟ್ಟಿಕೊಳ್ಳಲು ರಂಗ ತರಬೇತಿ ಶಿಬಿರಗಳು ಉಪಯುಕ್ತವಾಗಿವೆ. ಅಂತಹ ಕೌಶಲ್ಯವನ್ನು ಬೆಳೆಸಿಕೊಂಡು ಸುಂದರ ಬದುಕು ಕಟ್ಟಿಕೊಳ್ಳಿ ಎಂದು ಹೇಳಿದರು. ರಂಗ ತರಬೇತಿ ಶಿಬಿರವು ರಂಗ ನಿರ್ದೇಶಕ ಬಾಸುಮ…
