Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿಯ ಶ್ರೀ ಕೃಷ್ಣ ಪರ್ಯಾಯೋತ್ಸವವನ್ನು ವೈಭವಪೋಷಿತವಾಗಿ ನಡೆಸಲು ನಿರ್ಧರಿಸಲಾಗಿದ್ದು, ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ತಮ್ಮ ಪ್ರಿಯ ಶಿಷ್ಯ ಶ್ರೀ ಸುಶೀಂದ್ರ ತೀರ್ಥ ಶ್ರೀಪಾದಂಗಳವರೊಂದಿಗೆ ಜ.18 ರಂದು ಸರ್ವಜ್ಞ ಪೀಠವನ್ನೇರಿ ಶ್ರೀ ಕೃಷ್ಣ ಪೂಜಾ ದೀಕ್ಷೆ ಕೈಗೊಳ್ಳಲಿದ್ದಾರೆ. ಉಡುಪಿ ಪರ್ಯಾಯೋತ್ಸವಕ್ಕೆ ಪ್ರತಿ ಬಾರಿಯಂತೆ ಈ ಬಾರಿಯೂ ಹೊರೆ ಕಾಣಿಕೆ ಸಮರ್ಪಿಸುವ ಬಗ್ಗೆ ಸಮಾಲೋಚನಾ ಸಭೆ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಶ್ರೀ ವಿನಾಯಕ ದೇವಸ್ಥಾನದ ಅನುವಂಶಿಕ ಆಡಳಿತ ಧರ್ಮದರ್ಶಿ ಶ್ರೀರಮಣ ಉಪಾಧ್ಯಾಯ ಅಧ್ಯಕ್ಷತೆ ವಹಿಸಿದ್ದರು. ಪರ್ಯಾಯ ಮಹೋತ್ಸವ ಸಮಿತಿ ಪರವಾಗಿ ಮಠದ ದಿವಾನರಾದ ನಾಗರಾಜ ಆಚಾರ್ಯ, ಸ್ವಾಗತ ಸಮಿತಿ ಉಪಾಧ್ಯಕ್ಷರಾದ ರವೀಂದ್ರ ಆಚಾರ್ಯ, ಜತೆ ಕಾರ್ಯದರ್ಶಿ ರಘುಪತಿ ರಾವ್ ಉಪಸ್ಥಿತರಿದ್ದು, ಪರ್ಯಾಯ ಮಹೋತ್ಸವಕ್ಕೆ ಆಹ್ವಾನ ನೀಡಿದರು. ಹೊರೆ ಕಾಣಿಕೆ ಸಂಚಾಲಕರಾದ ಬೈಕಾಡಿ ಸುಪ್ರಸಾದ ಶೆಟ್ಟಿ ಮಾತನಾಡಿ, ಶ್ರೀ ಪುತ್ತಿಗೆ ಮಠಾಧೀಶರ ಪರ್ಯಾಯೋತ್ಸವದಲ್ಲಿ ಹೊರೆ ಕಾಣಿಕೆ ಅರ್ಪಣೆ ಶ್ರೀ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ನೋಡುಗರಾಗುವುದರ ಜೊತೆಗೆ ತಾವು ಕ್ರಿಯಾಶೀಲವಾಗಿ ಮಾಡುವಂತವರಾಗಬೇಕು. ಆ ಮೂಲಕ ಎಲ್ಲಾ ಕ್ಷೇತ್ರಗಳಲ್ಲಿ ಜ್ಞಾನ ಸಿಗಲು ಸಾಧ್ಯ. ಎಲ್ಲಾ ವಿಭಾಗಗಳಲ್ಲಿ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆ, ವ್ಯಕ್ತಿತ್ವ ವಿಕಸನ ಸಾಧ್ಯ. ಇದು ತರಗತಿ ಕೋಣೆಯ ಪಠ್ಯ ಶಿಕ್ಷಣಕ್ಕಿಂತ ಇಂತಹ ಸಾಹಿತ್ಯ ಸ್ಪರ್ಧೆಯಂತಹ ಪಠ್ಯಪೂರಕ ಚಟುವಟಿಕೆಗಳಿಂದ ಸಾಧ್ಯ ಎಂದು ಇಂಡಿಯನ್ ರೆಡ್ಕ್ರಾಸ್ ಸಂಸ್ಥೆ ಉಡುಪಿ ಘಟಕದ ಗೌರವ ಕಾರ್ಯದರ್ಶಿಗಳಾದ ಡಾ| ಗಣನಾಥ ಶೆಟ್ಟಿ ಎಕ್ಕಾರ್ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೆಶನಾಲಯದ ಜಂಟಿ ಆಶ್ರಯದಲ್ಲಿ ಆಯೋಜಿಸಿದ ವಿಶ್ವವಿದ್ಯಾನಿಲಯ ಮಟ್ಟದ ಅಂತರ್-ಕಾಲೇಜು ಸಾಹಿತ್ಯ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾದ ಅಂಕಣಕಾರ ಯೋಗೇಂದ್ರ ಮರವಂತೆ ಮಾತನಾಡಿ, ಸಾಹಿತ್ಯಾಸಕ್ತಿ ಬೆಳೆಸಿಕೊಳ್ಳಲು ಭಾಷೆಯ ಬಳಕೆ ಅಗತ್ಯ ಎಂದರು. ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕ ಡಾ| ಗಣೇಶ್ ಸಂಜೀವ್ ಸ್ಪರ್ಧಾಳುಗಳಿಗೆ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ|…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಾ. ಕೋಟ ಶಿವರಾಮ ಕಾರಂತ ಮಕ್ಕಳ ಸಾಹಿತ್ಯ ವೇದಿಕೆ (ರಿ.), ಸಾಲಿಗ್ರಾಮ ಹಾಗೂ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ, ಹಟ್ಟಿಯಂಗಡಿ ಇವರ ಸಹಭಾಗಿತ್ವದಲ್ಲಿ ಜಿಲ್ಲಾ ಮಕ್ಕಳ ಸಾಹಿತ್ಯ ಸಂಭ್ರಮ – 2023 ಜನವರಿಯಲ್ಲಿ ಜರುಗಲಿದ್ದು ವಿದ್ಯಾರ್ಥಿಗಳಿಂದ ಸ್ವರಚಿತ ಕಥೆ ಕವನ ಹಾಗೂ ಸಾಹಿತ್ತಿಕ ಸಾಧನೆಯ ವಿವರಗಳನ್ನು ಆಹ್ವಾನಿಸಲಾಗಿದೆ. ಮಕ್ಕಳಲ್ಲಿ ಸುಪ್ತವಾಗಿರುವ ಸಾಹಿತ್ಯಕ ಪ್ರತಿಭೆಯನ್ನು ಗುರುತಿಸಿ ವೇದಿಕೆಯನ್ನು ಕಲ್ಪಿಸಲು ಪ್ರೊ. ಚಿತ್ರಪಾಡಿ ಉಪೇಂದ್ರ ಸೋಮಯಾಜಿ ಅವರ ಮುಂದಾಳತ್ವದಲ್ಲಿ ಕಳೆದ 15 ವರ್ಷಗಳ ಹಿಂದೆ ಡಾ. ಕೋಟ ಶಿವರಾಮ ಕಾರಂತ ಮಕ್ಕಳ ಸಾಹಿತ್ಯ ವೇದಿಕೆ (ರಿ.), ಸಾಲಿಗ್ರಾಮ. ವಾರ್ಷಿಕ ಸಮ್ಮೇಳನದ ಪ್ರಯುಕ್ತ 6 ಬಾರಿ ಜಿಲ್ಲಾ ಮಟ್ಟದ “ಮಕ್ಕಳ ಸಾಹಿತ್ಯ ಸಮ್ಮೇಳನ ಆಯೋಜಿಸಿದೆ. ಕನ್ನಡ ಸಾಹಿತ್ಯ ಸಮ್ಮೇಳನದ ಮಾದರಿಯಲ್ಲೇ ಜರುಗಲಿರುವ ಈ ಸಮ್ಮೇಳನದಲ್ಲಿ, ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಬಹುದಾಗಿದೆ. ಈ ವರ್ಷ ಜಿಲ್ಲಾ ಮಟ್ಟದ ಈ ಸಮ್ಮೇಳನವನ್ನು ರಜತ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿರುವ ಶ್ರೀ ಸಿದ್ಧಿವಿನಾಯಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ತೊಂಡ್ಲೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಗೋವಿಂದರಾಯ ಎಸ್ (57 ವರ್ಷ) ಅವರು ಬೈಕಿನಿಂದ ಬಿದ್ದು ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ. ಶಿರೂರಿನಿಂದ ಮಯ್ಯಾಡಿಗೆ ತೆರಳುತ್ತಿದ್ದ ವೇಳೆ ಬೈಂದೂರು ಹೊಸ ಬಸ್ ನಿಲ್ದಾಣದ ಬಳಿ ಬೈಕಿನಿಂದ ನಿಯಂತ್ರಣ ತಪ್ಪಿ ಬಿದ್ದಿದ್ದು, ಈ ವೇಳೆ ಅವರಿಗೆ ಹೃದಯಾಘಾತವಾಗಿದೆ ಎನ್ನಲಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ. ಮಯ್ಯಾಡಿ ಸೇಡಿಮನೆಯವರಾದ ಗೋವಿರಾಯ ಅವರು ಮೃದು ಸ್ವಭಾವ ಹಾಗೂ ಸೇವಾನಿಷ್ಠೆಯಿಂದ ಹೆಸರಾಗಿದ್ದರು. ತೊಂಡ್ಲೆ ಶಾಲೆಯಲ್ಲಿ ವಿದ್ಯಾರ್ಥಿಗಳು ಗರಿಷ್ಠ ದಾಖಲಾತಿ ಹೊಂದುವಲ್ಲಿ ಶ್ರಮಿಸಿದ್ದರು. ಮೃತರು ಮಡದಿ, ಮಗ, ಮಗಳು ಹಾಗೂ ಬಂಧುಗಳನ್ನು ಅಗಲಿದ್ದಾರೆ. ಮೃತ ನಿಧನಕ್ಕೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೈಂದೂರು ವಲಯ ಅಧ್ಯಕ್ಷ ಶೇಖರ ಪೂಜಾರಿ, ಕಾರ್ಯದರ್ಶಿ ಗಣಪತಿ ಹೋಬಳಿದಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೋಟೇಶ್ವರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಕಾರು ಢಿಕ್ಕಿಯಾಗಿ ಕಾರಿನಲ್ಲಿದ್ದ ಒಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡ ಘಟನೆ ಗುರುವಾರ ಬೆಳಗ್ಗಿನ ಜಾವ 4 ಗಂಟೆಯ ಸುಮಾರಿಗೆ ಸಂಭವಿಸಿದೆ. ಅಪಘಾತದಲ್ಲಿ ಉದ್ಯಾವರದ ಸಂಪಿಗೆನಗರ ನಿವಾಸಿ ರೋಬರ್ಟ್ ಕ್ಯಾಸ್ಟಲಿನೋ ಅವರ ಪುತ್ರ ಉದ್ಯಾವರ ವೈಸಿಎಂ ಅಧ್ಯಕ್ಷ ಜೋಯಿಸ್ಟನ್ ಕ್ಯಾಸ್ಟಲಿನೋ (22) ಸಾವನ್ನಪ್ಪಿದವರು. ಕಾರಿನಲ್ಲಿದ್ದ ಲ್ಯಾಸ್ಟನ್ ಪಿಂಟೋ (22), ಜಸ್ಟಿನ್ ಕರ್ಡೊಜ (22), ವಿಲ್ಸನ್ ಮಾರ್ಟಿನ್ (23), ಗ್ಲಾಡ್ಸನ್ ಡಿಸಿಲ್ವಾ (23) ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲ ಉದ್ಯಾವರದ ವೈಸಿಎಂ ಘಟಕದ ಸದಸ್ಯರೆಂದು ತಿಳಿದು ಬಂದಿದೆ. ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಕುಂದಾಪುರ ಸಂಚಾರಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಮ್ಮ ದೇಶದಲ್ಲಿ ಮಹಿಳೆಗೆ ಶ್ರೇಷ್ಠ ಸ್ಥಾನ ಸ್ಥಾನ ನೀಡಲಾಗಿದೆ. ಆದರೆ ವಾಸ್ತವದಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ಹೆಚ್ಚಿದೆ. ಮಕ್ಕಳಿಗೆ ಎಳವೆಯಲ್ಲಿಯೇ ಅರಿವು ಮೂಡಿಸುವುದರಿಂದ ಇಂತಹ ಘಟನೆಗಳನ್ನು ತಗ್ಗಿಸಬಹುದು ಎಂದು‌ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಸಮಿತಿ ಸಂಚಾಲಕ ಮಹಮ್ಮದ್ ಷರೀಫ್ ಹೇಳಿದರು. ಗುರುವಾರ ಇಲ್ಲಿನ ಯು.ಬಿ. ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಆಚರಣೆಯ ಅಂಗವಾಗಿ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ, ಉಡುಪಿ ಜಿಲ್ಲಾ ತಂಡದಿಂದ ಆಯೋಜಿಸಲಾದ ಅರಿವಿನ ಪಯಣ ಕಾರ್ಯಕ್ರಮದಲ್ಲಿ ಮಾತನಾಡಿದರು. ಸ್ತ್ರೀ ಪುರುಷ ಅರಿತು ಬದುಕಿದರೆ ಸುಖೀ ಬದುಕು ಸಾಧ್ಯವಿದೆ. ಪ್ರತಿಯೋರ್ವರಿಗೂ ತಮ್ಮದೇ ಆದ ಸಾಮರ್ಥ್ಯವಿದೆ. ಅದನ್ನು ಅರಿತು‌ ಬದುಕುವುದು ಮುಖ್ಯ. ಮಹಿಳೆಯರ ಮೇಲೆ ಯಾವುದೇ ಬಗೆಯಲ್ಲಿ ದೌರ್ಜನ್ಯ ನಡೆದರೂ ಅದನ್ನು ಪ್ರತಿಭಟಿಸುವಂತಾಗಬೇಕು. ಹಾಗೆಯೇ ಮಹಿಳಾ ಪರ ಕಾನೂನುಗಳು…

Read More