ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಕೆರಾಡಿ ಗ್ರಾಮದ ಚಪ್ಪರಮಕ್ಕಿ ಕೂರ್ಕೊಗೆ ಎಂಬಲ್ಲಿ ನಿರ್ಜನ ಪ್ರದೇಶದ ರಸ್ತೆ ಬದಿಯಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೆರಾಡಿ ನಿವಾಸಿಯಾದ ಶಶಿಕಾಂತ್ (25) ಮೃತ ಯುವಕ. ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ ಹೋಗಿರುವುದನ್ನು ಗಮನಿಸಿದ ಶಶಿಕಾಂತನ ಮೊಬೈಲ್ಗೆ ಸ್ನೇಹಿತರು, ಆತನಿಗೆ ಕರೆ ಮಾಡಿದಾಗ ಪ್ರತಿಕ್ರಿಯಿಸದೇ ಇದ್ದುದರಿಂದ ಸಂಶಗೊಂಡು ಅಭಯಾರಣ್ಯದಲ್ಲಿ ಹುಡುಕುತ್ತಿರುವಾಗ ಚಾಕಟೆ ಮರಕ್ಕೆ ಸುತ್ತಿಕೊಂಡಿರುವ ಕುಮ್ಟಿ ಬೀಳಿಗೆ ಪಾಲ್ಸ್ನ ಬೀಳನ್ನು ಕಟ್ಟಿ ಇನ್ನೂಂದು ತುದಿಯನ್ನು ಕುತ್ತಿಗೆಗೆ ಉರಳು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ. ಮೃತ ಶಶಿಕಾಂತ್ ರಾಷ್ಟೀಯ ಮಟ್ಟದ ಹ್ಯಾಂಡ್ಬಾಲ್ ಆಟಗಾರ, ರಾಜ್ಯಮಟ್ಟದ ಕ್ರಿಕೆಟ್ ಆಟಗಾರನಾಗಿದ್ದ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ತಾಲೂಕಿನ ಉಳ್ಳೂರು – ಕಾಡಿನಕೊಂಡದ ಬಳಿ ಮದಗಗಕ್ಕೆ ಈಜಲು ತೆರಳಿದ ಉಪನ್ಯಾಸಕ ಸೇರಿದಂತೆ ಇಬ್ಬರು ನೀರುಪಾಲಾದ ದಾರುಣ ಘಟನೆ ಸೋಮವಾರ ಸಂಜೆ ನಡೆದಿದೆ. ಶಂಕರನಾರಾಯಣ ಮದರ್ ಥೆರೆಸಾ ಕಾಲೇಜಿನ ಉಪನ್ಯಾಸಕ ರಾಜೇಂದ್ರ ಶೆಟ್ಟಿಗಾರ್ (28) ಶಂಕರನಾರಾಯಣ ಹೈಸ್ಕೂಲ್ ವಿದ್ಯಾರ್ಥಿ ಭರತ್ ಶೆಟ್ಟಿಗಾರ್ (15) ನೀರಲ್ಲಿ ಮುಳುಗಿ ಮೃತಪಟ್ಟ ದುರ್ದೈವಿಗಳು. ಕಂದಾವರ ಗ್ರಾಮದ ಕಾಡಿನಕೊಂಡ ಬಳಿಯ ಡಂಪಿಂಗ್ ಯಾರ್ಡ್ ಬಳಿಯ ನಾಲ್ಕು ಎಕರೆ ವಿಸ್ತಾರದ ಸುಮಾರು 10 ಪೀಟ್ ನೀರಿರುವ ಮದಗದಲ್ಲಿ ಭರತ್ ಆಯತಪ್ಪಿ ಮುಳುಗಿದ್ದನ್ನು ನೋಡಿದ ರಾಜೇಂದ್ರ ರಕ್ಷಣೆಗೆ ತೆರಳಿದಾಗ ಈಜು ಬಾರದ ಇಬ್ಬರೂ ನೀರಿನಲ್ಲಿ ಮುಳುಗಿದ್ದಾರೆ. ಶಂಕರನಾರಾಯಣ ಸರಕಾರಿ ಹೈಸ್ಕೂಲು ವಿಧ್ಯಾರ್ಥಿ ಭರತ್ ರಜೆಯ ಕಾರಣ ತನ್ನ ತಾಯಿಯ ಮನೆಗೆ ಬಂದಿದ್ದ, ಬಹುಮುಖ ಪ್ರತಿಭಾವಂತ ರಾಜೇಂದ್ರ ಮಂಗಳೂರಿನ ಎಕ್ಸ್ಪಟ್೯ ಕಾಲೇಜಿನಲ್ಲಿ ಸೇವೆ ಸಲ್ಲಿಸಿ, ಇತ್ತೀಚೆಗೆ ಶಂಕರನಾರಾಯಣ ಕಾಲೇಜಿಗೆ ಸೇರಿದ್ದರು. ಅಗ್ನಿಶಾಮಕದಳಸ ಸಿಬ್ಬಂದಿಗಳು ಇಬ್ಬರ ಶವವನ್ನು ಮೇಲಕ್ಕೆತ್ತಿದ್ದಾರೆ. ಕಂಡ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳವಾರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗ್ರಾಹಕರ ಸ್ಪಂದನೆ ಹಾಗೂ ಸಕ್ರಿಯ ಪಾಲ್ಗೊಳ್ಳುವಿಕೆಯಿಂದಲೇ ಸಹಕಾರಿ ಸಂಘಗಳು ಬ್ಯಾಂಕಿಂಗ್ ವಿಭಾಗದಲ್ಲಿ ಗರಿಷ್ಠ ಪ್ರಗತಿಯನ್ನು ಸಾಧಿಸಲು ಸಾಧ್ಯವಾಗಿದೆ. ಇದು ಇನ್ನಷ್ಟು ಗ್ರಾಹಕರಿಗೆ ಸೇವೆಯನ್ನು ವಿಸ್ತರಿಸಲು ಸಹಕಾರಿಯಾಗಿದೆ ಎಂದು ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಅಧ್ಯಕ್ಷ ಎಸ್. ರಾಜು ಪೂಜಾರಿ ಹೇಳಿದರು. ಅವರು ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಇದರ ಕಂಬದಕೋಣೆ ಶಾಖೆಯ ನಾಲ್ಕನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಇತ್ತೀಚಿಗೆ ಹಮ್ಮಿಕೊಳ್ಳಲಾದ ಗ್ರಾಹಕರ ಸಭೆ ಹಾಗೂ ಆಯುರ್ವೇದ ಆರೋಗ್ಯ ಮಾಹಿತಿ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ವೇಳೆ ಅದೃಷ್ಟಶಾಲಿ ಸದಸ್ಯರ ಆಯ್ಕೆ ಹಾಗೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸ್ವಸಹಾಯ ಸಂಘವನ್ನು ಗುರುತಿಸಲಾಯಿತು. ಕಾಲ್ತೋಡು ಸರಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ. ವೀಣಾ ಕಾರಂತ್ ಸಂಸ್ಥೆಯ ಸದಸ್ಯರಿಗೆ ಆರೋಗ್ಯ ಮಾಹಿತಿ ನೀಡಿದರು. ಈ ವೇಳೆ ಕಂಬದಕೋಣೆ ಗ್ರಾಮ ಪಂಚಾಯತ್ ಅಧ್ಯಕ್ಷ ಸುಕೇಶ್ ಶೆಟ್ಟಿ, ಕಂಬದಕೋಣೆ ರೈ.ಸೇ.ಸ.ಸಂಘದ ನಿರ್ದೇಶಕ ಗುರುರಾಜ ಹೆಬ್ಬಾರ್, ಸಂಘದ ನಿವೃತ್ತ ಸಿಇಓ ಸೀತಾರಾಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಏಳಜಿತದ ಶ್ರೀರಾಮಕೃಷ್ಣ ಕುಟೀರದ ನೂರಕ್ಕೂ ಹೆಚ್ಚು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉಚಿತ ಕಲಿಕಾ ಸಾಮಗ್ರಿ ಮತ್ತು ಪುಸ್ತಕವನ್ನು ವಿತರಿಸಲಾಯಿತು. ಈ ಸಂದರ್ಭ ಉಪಸ್ಥಿತರಿದ್ದ ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಅವರು ಶುಭಾಶೀರ್ವಚನ ನೀಡಿದರು. ಮುಖ್ಯ ಅತಿಥಿಗಳಾಗಿ ಉಚಿತ ಪುಸ್ತಕವನ್ನು ವಿತರಿಸಿದ ಜೆಸಿಐ ಉಪ್ಪುಂದದ ಪೂರ್ವಾಧ್ಯಕ್ಷರಾದ ಜೆಸಿಐ ಯು. ಪ್ರಕಾಶ್ ಭಟ್ ಉಪ್ಪುಂದ ಅವರು ಹಿತನುಡಿಗಳನ್ನಾಡಿದರು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಉಪ್ಪುಂದದ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ ಇವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಲಯ 15 ರ ವಲಯ ತರಬೇತುದಾರರಾದ ಹಾಗೂ ಜೆಸಿಐ ಉಪ್ಪುಂದದ ಪೂರ್ವಧ್ಯಕ್ಷರಾದ ಮಂಗೇಶ್ ಶ್ಯಾನುಭಾಗ್, ಜೆಸಿಐ ಉಪ್ಪುಂದದ ಪೂರ್ವ ಅಧ್ಯಕ್ಷರಾದ ಪುರಂದರ ಖಾರ್ವಿ, ಪದಾಧಿಕಾರಿಗಳಾದ ಜೆಸಿ ಸಂತೋಷ್, ಜೆಸಿ ವಿಜಯ್ ಶೆಟ್ಟಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ವಾರದ ಸಭೆ – ಕುಟುಂಬ ಸಮ್ಮಿಲನ ಕಾರ್ಯಕ್ರಮ ಇತ್ತಿಚಿಗೆ ಜರುಗಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ವೀರಣ್ಣ ಶೆಟ್ಟಿ ನಿವೃತ್ತ ಮುಖ್ಯ ಶಿಕ್ಷಕರು ಮೆರಡಿ ಸುಖಮಯ ದಾಂಪತ್ಯ ಜೀವನದ ಬಗ್ಗೆ ಬಹಳ ಸುಂದರವಾಗಿ ಮಾತನಾಡಿದರು ಹಾಗೆ ವಿಶೇಷ ಆಹ್ವಾನಿತರಾದ ಹೆಸರಾಂತ ಹೃದ್ರೋಗ ತಜ್ಞರಾದ ಡಾ. ಜೈ ಶಂಕರ್ ಮಾರ್ಲ ಇವರು ಮುತ್ತಯ್ಯಶೆಟ್ಟಿಯವರ ಹಾಗೂ ಅವರ ಸೇವೆ ಬಗ್ಗೆ ಮಾತನಾಡಿದರು. ಆವರ್ಶೆ ಮತ್ತಯ್ಯ ಶೆಟ್ಟಿ ಮತ್ತು ಉಷಾ ಮುತ್ತಯ್ಯ ಶೆಟ್ಟಿ ದಂಪತಿಯರಿಗೆ 50ರ ಸಂಭ್ರಮವನ್ನು ಬಹಳ ಸರಳ, ಸುಂದರವಾಗಿ ಆಚರಿಸಲಾಯಿತು. ಈ ಕಾರ್ಯಕ್ರಮದ ಕುರಿತು ತಮ್ಮ ಅನುಭವವನ್ನು ಆವರ್ಶೆ ಮುತ್ತಯ್ಯ ಶೆಟ್ಟಿ ಹಂಚಿಕೊಂಡರು ಹಂಚಿಕೊಂಡರು. ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ವೆಂಕಟೇಶ್ ನಾವುಂದ ಅಧ್ಯಕ್ಷ ನುಡಿಯನಾಡಿದರು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಕುಂದಾಪುರದ ಎಲ್ಲಾ ಸದಸ್ಯರು ಹಾಗೂ ಆನ್ಸ್ ಕ್ಲಬ್ಬಿನ ಅಧ್ಯಕ್ಷ ಸ್ಮಿತಾ ವೆಂಕಟೇಶ ಮತ್ತು ಎಲ್ಲಾ ಸದಸ್ಯರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಯಾಗಲು ಸರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಿಯಂತ್ರಣ ತಪ್ಪಿದ ಆಟೋ ರಿಕ್ಷಾವೊಂದು ರಸ್ತೆಯ ಬದಿಯ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದು ಹಿಂಬದಿ ಸವಾರ ಮೃತಪಟ್ಟ ಘಟನೆ ತ್ರಾಸಿ ಗ್ರಾಮದ ಆನಗೋಡು ಸಮೀಪ ನಡೆದಿದೆ. ಕುಂದಾಪುರದ ನಿವಾಸಿ ಭಾಸ್ಕರ (33) ಅಪಘಾತದಲ್ಲಿ ಗಂಭೀರ ಗಾಯಗೊಂಡು ಮೃತಪಟ್ಟ ದುರ್ದೈವಿ. ಭಾನುವಾರ ತಡರಾತ್ರಿ ವೇಳೆಗೆ ಮೊವಾಡಿ-ತ್ರಾಸಿ ರಸ್ತೆಯಲ್ಲಿ ರಿಕ್ಷಾ ಚಾಲಕ ಗುರುರಾಜ ಪೂಜಾರಿ ಎನ್ನುವರು ಭಾಸ್ಕರ ಅವರನ್ನು ಕುಳ್ಳಿರಿಸಿಕೊಂಡು ತೆರಳುತ್ತಿದ್ದಾಗ ವೇಗದಲ್ಲಿದ್ದ ರಿಕ್ಷದ ಬ್ರೇಕ್ ಒಮ್ಮೆಲೆ ಹಾಕಿದ್ದು ರಸ್ತೆ ಸಮೀಪದ ತೆಂಗಿನ ಮರಕ್ಕೆ ರಿಕ್ಷಾ ಡಿಕ್ಕಿಯಾಗಿದೆ. ಈ ಸಂದರ್ಭ ರಿಕ್ಷಾ ಹಿಂಭಾಗ ಕುಳಿತ ಭಾಸ್ಕರ್ ಅವರಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯರ ಸಹಕಾರದಲ್ಲಿ ಗಂಗೊಳ್ಳಿ ಆಪತ್ಬಾಂಧವ 24*7 ಅಂಬುಲೆನ್ಸ್ ಮೂಲಕ ಕುಂದಾಪುರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಅವರು ಮೃತಪಟ್ಡಿದ್ದಾರೆ ಎಂದು ತಿಳಿದುಬಂದಿದೆ. ರಿಕ್ಷಾ ಚಾಲಕ ಗುರುರಾಜ ಪೂಜಾರಿ ಅವರಿಗೂ ಗಾಯಗಳಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಮೇ 29: ನಿರೀಕ್ಷೆಯಂತೆ ಉದ್ಯೋಗ ದೊರಕದ ಕಾರಣ ಮನನೊಂದ ಯುವತಿ ಆತ್ಮಹತ್ಯೆಗೆ ಶರಣಾದ ಘಟನೆ ಕಾಲ್ತೋಡು ಗ್ರಾಮದಲ್ಲಿ ಜರುಗಿದೆ. ಗ್ರಾಮದ ಸಿಗೇಅಡಿ ನಿವಾಸಿ ಪ್ರಮೋದಾ ಶೆಟ್ಟಿ ಅವರ ಪುತ್ರಿ ಗೌತಮಿ (22) ಆತ್ಮಹತ್ಯೆ ಮಾಡಿಕೊಂಡ ಯುವತಿ. ಎಂ.ಕಾಂ. ಪದವೀಧರೆಯಾದ ಗೌತಮಿ ಇತ್ತೀಚೆಗೆ ಬ್ಯಾಂಕ್ ಪರೀಕ್ಷೆ ಮತ್ತು ಕಂಪೆನಿಯಲ್ಲಿ ಉದ್ಯೋಗ ಪಡೆಯಲು ಪರೀಕ್ಷೆಗಳನ್ನು ಬರೆದರೂ ಕೂಡ ಆಕೆಗೆ ಉದ್ಯೋಗ ದೊರೆತಿರಲಿಲ್ಲ. ಹೀಗಾಗಿ ಯುವತಿ ಮನನೊಂದು ಮನೆಯ ಮಹಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನೇಣಿಗೆ ಶರಣಾಗಿದ್ದ ಗೌತಮಿ ಅವರನ್ನು ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ. ಆದರೆ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಹೇಳಿದ್ದಾರೆ.ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರತಿಯೊಬ್ಬ ಪ್ರಜೆಯು ತನ್ನ ವೃತ್ತಿ ಪ್ರವೃತ್ತಿಯಲ್ಲಿ ಸಮಾಜಕ್ಕೆ ಅನುಕೂಲವಾಗುವ ಸಹಕಾರ ನೀಡಿದರೆ ಸಮಾಜದ ಅಭಿವೃದ್ಧಿಗೆ ಆತ ಕೊಡುಗೆ ನೀಡಿದಂತಾಗುತ್ತದೆ. ಇದರಿಂದ ಸರಕಾರದ ಸಹಾಯ ನಿರೀಕ್ಷೆ ಮಾಡದೇ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ರೋಟರಿ ಕುಂದಾಪುರ ದಕ್ಷಿಣದ ಅಧ್ಯಕ್ಷ ಸತ್ಯನಾರಾಯಣ ಪುರಾಣಿಕ ಹೇಳಿದರು. ರೋಟರಿ ಕುಂದಾಪುರ ದಕ್ಷಿಣದ ವತಿಯಿಂದ ಏರ್ಪಡಿಸಲಾದ ಸಮಾಜಕ್ಕೆ ನಮ್ಮ ಕೊಡುಗೆ ವಿಚಾರ ಸಂಕಿರಣದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಆರ್ಥಿಕ, ಸಾಮಾಜಿಕ ತೊಂದರೆ ಗೊಳಗಾದವರಿಗೆ ಸಹಾಯ ಮಾಡುವು ದರೊಂದಿಗೆ ಅಸಹಾಯಕ ಜೀವನ ನಡೆಸುವವರಿಗೆ ಮುನ್ನಡೆಯಲು ಮಾರ್ಗದರ್ಶನ ಮಾಡಿದರೆ ಅದೇ ದೊಡ್ಡ ಕೊಡುಗೆಯಾಗುತ್ತದೆ ಎಂದು ಹಲವು ಘಟನೆಗಳನ್ನು ಉದಾಹರಿಸಿ ಅವರು ಹೇಳಿದರು. ಕೆನರಾ ಬ್ಯಾಂಕಿನ ನಿವೃತ್ತ ಪ್ರಬಂಧಕ ಕೆ.ಪಿ.ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ, ವೈಯಕ್ತಿಕವಾಗಿಯೂ, ಸಂಘ ಸಂಸ್ಥೆಗಳ ಮೂಲಕವೂ ಅರ್ಹರನ್ನು ಗುರುತಿಸಿ ಸಹಾಯ ಮಾಡಿದಾಗ, ಸಹಾಯ ಪಡೆದವರು ಏಳಿಗೆ ಹೊಂದಿದಾಗ ಸಂತಸವಾಗುತ್ತದೆ ಎಂದರು. ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಹಿರಿಯ ಪ್ರಬಂಧಕ ವಾಸುದೇವ ಕಾರಂತ ಮಾತನಾಡಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸುಂದರ ಬೈಂದೂರನ್ನು ಸಮೃದ್ಧ ಬೈಂದೂರನ್ನಾಗಿ ರೂಪಿಸಲು ಅಧಿಕಾರಿಗಳ ಸಹಕಾರ ಬಹುಮುಖ್ಯವಾಗಿದ್ದು, ಎಲ್ಲರೂ ಜೊತೆಯಾಗಿ ಹೊಸ ಕಲ್ಪನೆಯನ್ನು ಕಟ್ಟಿ ಬೈಂದೂರು ಅಭಿವೃದ್ಧಿಗೆ ಶ್ರಮಿಸಬೇಕಿದೆ. ಸಿಬ್ಬಂದಿ ಕೊರತೆ, ಅಧಿಕಾರ ವ್ಯಾಪ್ತಿಯನ್ನು ನೆಪವಾಗಿಸಿಕೊಂಡು ಅಭಿವೃದ್ಧಿಗೆ ಕುಂಠಿತವಾಗಲು ಬಿಡಬಾರದು. ಜನರ ಸಮಸ್ಯೆಗೆ ತಕ್ಷಣ ಸ್ಪಂದಿಸುವ ಮನೋಭಾವ ಬೆಳೆಸಿಕೊಳ್ಳಿ, ನಿಮ ಸಮಸ್ಯೆಗಳಿಗೆ ಸರಕಾರದ ಮಟ್ಟದಲ್ಲಿ ಬೆಳಕು ಚೆಲ್ಲುವ ಜವಾಬ್ದಾರಿ ನನ್ನದು ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಹೇಳಿದರು. ಅವರು ಬೈಂದೂರು ಪಟ್ಟಣ ಪಂಚಾಯತ್ ಕಛೇರಿಯಲ್ಲಿ ಶುಕ್ರವಾರ ಹಮಿಕೊಂಡಿದ್ದ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೈಂದೂರು ವಿಧಾನಸಭಾ ಕ್ಷೇತ್ರ ನೈಸರ್ಗಿಕವಾಗಿ ಸಮೃದ್ಧವಾದ ಪ್ರದೇಶ. ಆದರೆ ಬೇರೆ ಬೇರೆ ಕಾರಣಗಳಿಂದಾಗಿ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಇದು ಮುಂದೆ ಆಗಬಾರದು. ನೈಸರ್ಗಿಕ ಸಂಪತ್ತನ್ನು ಉಳಿಸಿಕೊಳ್ಳುವ ಜೊತೆ ಜೊತೆಗೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿ, ಪ್ರವಾಸೋದ್ಯಮಕ್ಕೆ ಆದ್ಯತೆ, ಆರೋಗ್ಯ, ನಿವೇಶನ, ಹಕ್ಕುಪತ್ರ, ಮೀನುಗಾರಿಕೆ, ಕೃಷಿ, ಪಶಸಂಗೋಪನೆಗೆ ಸಂಬಂಧಿತ ಸಮಸ್ಯೆಗಳಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2022-23ನೇ ಸಾಲಿನ 10ನೇ ತರಗತಿ ವಾರ್ಷಿಕ ಪರೀಕ್ಷೆಯ ಗುಣಾತ್ಮಕ ಫಲಿತಾಂಶದಲ್ಲಿ ಕುಂದಾಪುರ ವಲಯ ಮಟ್ಟದಲ್ಲಿ ಶಂಕರನಾರಾಯಣದ ಮದರ್ ತೆರೆಸಾ ಶಿಕ್ಷಣ ಸಂಸ್ಥೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಶಂಕರನಾರಾಯಣ ಮದರ್ ತೆರೆಸಾ ಮೆಮೋರಿಯಲ್ ಸಂಸ್ಥೆಯು ಕಳೆದ 25ವರ್ಷಗಳಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತ ಬಂದಿದೆ. ಹತ್ತನೇ ತರಗತಿಯಲ್ಲಿ ಅನೇಕ ವರ್ಷಗಳಿಂದ ಉತ್ತಮ ಫಲಿತಾಂಶವನ್ನು ನೀಡುತ್ತಾ ಬಂದಿದ್ದು ಈ ವರ್ಷವೂ ಸಹ ಶೇಕಡ 100 ಫಲಿತಾಂಶದೊಂದಿಗೆ ಶೇಕಡ 95.17 ಗುಣಾತ್ಮಕ ಫಲಿತಾಂಶ ದಾಖಲಿಸುವುದರೊಂದಿಗೆ ಕುಂದಾಪುರ ವಲಯ ಮಟ್ಟದಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.
