Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: 80ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂಭ್ರಮದಲ್ಲಿ ರಾಷ್ಟ್ರಪ್ರೇಮದ ಸಂದೇಶ ಸಾರಿದ ಸಾಲಿಗ್ರಾಮ ಕಯಾಕಿಂಗ್ ತಂಡ ರಾಷ್ಟ್ರಪ್ರೇಮವನ್ನು ಪ್ರತಿಯೊಬ್ಬರ ಹೃದಯದಲ್ಲಿ ಬಿತ್ತುವ ಉದ್ದೇಶದಿಂದ ಸರ್ಕಾರ ಹಮ್ಮಿಕೊಂಡಿರುವ ‘ಹರ್ ಘರ್ ತಿರಂಗ ಅಭಿಯಾನದ ಅಂಗವಾಗಿ, ಪ್ರತಿ ಮನೆಯ ಮೇಲೂ ರಾಷ್ಟ್ರಧ್ವಜ ಹಾರಿಸುವ ಸಂಕಲ್ಪದೊಂದಿಗೆ ದೇಶದೆಲ್ಲೆಡೆ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಸಾಲಿಗ್ರಾಮ ಕಯಾಕಿಂಗ್ ತಂಡ ಪ್ರತಿವರ್ಷದಂತೆ ಈ ಬಾರಿಯೂ ವಿಭಿನ್ನ ಹಾಗೂ ವಿಶಿಷ್ಟ ರೀತಿಯಲ್ಲಿ ರಾಷ್ಟ್ರಪ್ರೇಮವನ್ನು ಮೆರೆಯುವ ಪ್ರಯತ್ನ ಮಾಡಿದೆ. ಸೀತಾ ನದಿಯಲ್ಲಿ ಕಯಾಕಿಂಗ್ ಮೂಲಕ ಪ್ರಕೃತಿಯ ಅದ್ಭುತ ಸೌಂದರ್ಯವನ್ನು ಜನರಿಗೆ ಪರಿಚಯಿಸುವುದರ ಜೊತೆಗೆ, ಪ್ರಕೃತಿ ಪ್ರೇಮದೊಂದಿಗೆ ದೇಶಪ್ರೇಮವನ್ನೂ ಬೆಳೆಸುವ ಸಂದೇಶವನ್ನು ಸಾರುತ್ತಿರುವ ಸಾಲಿಗ್ರಾಮ ಕಯಾಕಿಂಗ್ ತಂಡ, ಈ ಬಾರಿ ಮತ್ತೊಂದು ವಿನೂತನ ಪ್ರಯತ್ನಕ್ಕೆ ಸಾಕ್ಷಿಯಾಗಿದೆ. ಹಿಂದೆ ಸೀತಾ ನದಿಯ ಮಧ್ಯಭಾಗಕ್ಕೆ ಕಯಾಕಿಂಗ್ ಮೂಲಕ ತೆರಳಿ ಧ್ವಜಸ್ತಂಭ ನೆಟ್ಟು ಧ್ವಜಾರೋಹಣ ನಡೆಸಿದ್ದ ತಂಡ, ಮತ್ತೊಮ್ಮೆ ನದಿಯ ಮಧ್ಯದಲ್ಲಿರುವ ಕಾಂಡ್ಲಾ ಮರಗಳ ನಡುವೆ ಸೇತುವೆ ನಿರ್ಮಿಸಿ ಅದರ ಮೇಲೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ,ಅ.15: ತಾಲೂಕು ಆಡಳಿತ ವತಿಯಿಂದ ಗಾಂಧಿ ಮೈಧಾನದಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಕುಂದಾಪುರ ಉಪ ವಿಭಾಗದ ಆಯುಕ್ತರಾದ ರಶ್ಮಿ ಎಸ್. ಆರ್ ಧ್ವಜಾರೋಹಣ ನೆರವೇರಿಸಿದರು. ಕುಂದಾಪುರ ಶಾಸಕರಾದ ಕಿರಣ ಕುಮಾರ ಕೊಡ್ಗಿ, ನಗರ ಯೋಜನ ಪ್ರಾಧಿಕಾರದ ಅಧ್ಯಕ್ಷ ವಿನೋದ ಕ್ರಾಸ್ತಾ, ವಿವಿಧ ಗಣ್ಯರು, ತಾಲೂಕು ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು, ಅ.15: ತಾಲೂಕು ಆಡಳಿತ ವತಿಯಿಂದ ಇಲ್ಲಿನ ಗಾಂಧಿ ಮೈದಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ತಾಲೂಕಿನ ಕಾರ್ಯನಿರ್ವಾಹಕ ದಂಢಾಧಿಕಾರಿ ಹಾಗೂ ಮಾನ್ಯ ತಹಶೀಲ್ದಾರರಾದ ರವಿರಾಜ್‌ ದೀಕ್ಷತ್‌ ಧ್ವಜಾರೋಗಣ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗುರುರಾಜ್‌ ಗಂಟಿಹೊಳೆ ಅವರು ವಹಿಸಿದ್ದರು. ಈ ವೇಳೆ ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಮೋಹನ್‌ ಪೂಜಾರಿ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು. ರ್ಯಾಂಕ್‌ ಪಡೆದ ವಿದ್ಯಾರ್ಥಿಗಳಿಗೆ ಸನ್ಮನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಯಾದ ನಾಗೇಶ್‌ ನಾಯಕ್‌ ಸ್ವಾಗತಿಸಿದರು. ಬೈಂದೂರು ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿಯಾಗಿರುವ ಅಜೇಯ ಭಂಡರ್ಕರ್‌ ಅವರು ಧನ್ಯವಾದ ಸಮರ್ಪಣೆ ಮಾಡಿದರು. ಬೈಂದೂರು ಸ.ಮಾ.ಹಿ.ಪ್ರಾ ಶಾಲೆಯ ಗಣಪತಿ ಹೋಬಳಿದಾರ್‌ ನಿರ್ವಹಣೆ ಮಾಡಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕ್ರಾಂತಿಕಾರಿ, ಅಹಿಂಸಾ ತತ್ವದ ಮೂಲಕ ಸ್ವಾತಂತ್ರ್ಯ- ಸಂಸದ ಕೋಟ: ಕ್ರಾಂತಿಕಾರಿಗಳ ಹಾಗೂ ಅಹಿಂಸಾ ತತ್ವದ ಮೂಲಕ ಈ ದೇಶಕ್ಕೆ ಸ್ವಾತಂತ್ರ್ಯ ದಕ್ಕಿದೆ. ಇದಕ್ಕೆ ಕಾರ್ನಾಡ ಸದಾಶಿವ ರಾವ್ ಅವರ ಆ ಕಾಲಘಟ್ಟದ ಹೋರಾಟ ದಿನಗಳನ್ನು ನೆನೆಪಿಸಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಪ್ರಸ್ತುತ ದೇಶ ಕಾಯುವ ಯೋಧರ ತ್ಯಾಗ ಬಲಿದಾನ ದೇಶವನ್ನು ಸುಭದ್ರತೆಗೊಳಿಸಿದೆ. ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇದರ ನೇತೃತ್ವದಲ್ಲಿ 80 ನೇ ಹಸಿರು ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಗೈದು ಮಾತನಾಡಿದರು. ಹೋರಾಟಗಾರದ ಸ್ವಾತಂತ್ರ್ಯವನ್ನು ನಾವುಗಳು ಅರ್ಥಪೂರ್ಣಗೊಳಿಸಿ ಜಾತಿ ಮತ ಧರ್ಮ ಬೇಧದಿಂದ ಅಭಿವೃದ್ಧಿ ಪತದತ್ತ ಕೊಂಡ್ಯೋಯುವ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ನಿವೃತ್ತ ಯೋಧರ ಸಂಘದ ಜಿಲ್ಲಾಧ್ಯಕ್ಷ ಸುರೇಶ್ ರಾವ್ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ. ಮನೋಹರ್ ಪೂಜಾರಿ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಕೋಟ ಜಾಮೀಯಾ ಮಸೀದಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತೆಕಟ್ಟೆಯ ವಿಶ್ವವಿನಾಯಕ ಸಿಬಿಎಸ್‌ಸಿ ಸ್ಕೂಲ್‌ನಲ್ಲಿ ಶನಿವಾರ ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ರಾಜು ಮೊಗವೀರ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ 80ನೇ ಸ್ವಾತಂತ್ರ್ಯ ದಿನದ ಶುಭಾಶಯಗಳನ್ನು ಕೋರಿದರು. Genz ಮತ್ತು Gen Alpha ಇದರ ಬಗ್ಗೆ ಮಕ್ಕಳಿಗೆ ತಿಳಿ ಹೇಳಿದರು. ಅಲ್ಲದೆ ಇಂದಿನ ಯುಗದಲ್ಲಿ ಯುವ ಪೀಳಿಗೆ ಕರ್ತವ್ಯದ ಬಗ್ಗೆ ಸವಿಸ್ತಾರವಾಗಿ ಹೇಳಿದರು. ಕಾರ್ಯಕ್ರಮದಲ್ಲಿ ಆಡಳಿತ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ ವಿವಿರಾಜ ಹೆಗ್ಡೆ ಶುಭ ಕೋರಿದರು. ಶಾಲಾ ಪ್ರಾಂಶುಪಾಲರಾದ ಸಂದೀಪ್ ಪುತ್ರನ್ ಮಾತನಾಡಿ, ಸ್ವತಂತ್ರ ಭಾರತದಲ್ಲಿ ಸರ್ವ ಜನಾಂಗದವರು ಏಕತಾ ಮನೋಭಾವದಿಂದ ಹಾಗೂ ಮೌಲ್ಯಯುತ ಶಿಕ್ಷಣದಿಂದ ದೇಶ ಕಟ್ಟುವ ಕೆಲಸವಾಗಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು, ಪೋಷಕರು, ಹಳೆ ವಿದ್ಯಾರ್ಥಿಗಳು ಶಾಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಲಾ ವತಿಯಿಂದ ವಿದ್ಯಾರ್ಥಿಗಳಿಗೆ ಕೆಸರುಗದ್ದೆಯಲ್ಲಿ ಭತ್ತದ ನಾಟಿ ನೆಡುವ ಕಾರ್ಯಕ್ರಮವನ್ನು ಆಯೋಜಿಸಲು ಸಹಕರಿಸಿದ ಶ್ರೀಮತಿ ಲಲಿತಾ ರವರಿಗೆ ಸನ್ಮಾನಿಸಲಾಯಿತು ಶಾಲಾ ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಐಎಂಜೆ ವಿದ್ಯಾ ಸಂಸ್ಥೆಯಗಳಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಭಕ್ತಿ ಹಾಗೂ ಸಂಭ್ರಮದಿಂದ  ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ MUTBI, ಮಣಿಪಾಲದ ಸಿ ಈ ಓ ಡಾ. ಸಂತೋಷ್ ರಾವ್ ಅವರು ವಿಕಸಿತ ಭಾರತ – 2047ರ ಪರಿಕಲ್ಪನೆಯನ್ನು ವಿವರಿಸಿದರು. ಭಾರತವು ಸ್ವಾತಂತ್ರ್ಯದ 100 ವರ್ಷಗಳನ್ನು ಪೂರೈಸುವ 2047ರ ವೇಳೆಗೆ ಆರ್ಥಿಕವಾಗಿ ಬಲಿಷ್ಠ, ತಾಂತ್ರಿಕವಾಗಿ ಮುಂದುವರಿದ, ಆತ್ಮನಿರ್ಭರ ಹಾಗೂ ಸಮಗ್ರವಾಗಿ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಬೇಕು ಎಂಬುದು ವಿಕಸಿತ ಭಾರತದ ದೃಷ್ಟಿಕೋನವಾಗಿದೆ ಎಂದು ಅವರು ತಿಳಿಸಿದರು. ಈ ಗುರಿಯನ್ನು ಸಾಧಿಸುವಲ್ಲಿ ಯುವಜನತೆ ಪ್ರಮುಖ ಪಾತ್ರ ವಹಿಸಲಿದ್ದು, ಶಿಕ್ಷಣ, ಕೌಶಲ್ಯಾಭಿವೃದ್ಧಿ, ನಾವೀನ್ಯತೆ, ಉದ್ಯಮಶೀಲತೆ, ಸಂಶೋಧನೆ ಮತ್ತು ಸಾಮಾಜಿಕ ಹೊಣೆಗಾರಿಕೆಯ ಮೂಲಕ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಐಎಂಜೆ ವಿದ್ಯಾಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕರಾದ ಡಾ. ಎಸ್ ಎನ್ ಭಟ್ ರವರು ಮಾತನಾಡಿ ಒಂದುವೇಳೆ ನಮ್ಮಲ್ಲಿ ವಿಷಯಾಧಾರಿತ ಬಿನ್ನಬಿಪ್ರಾಯವಿದ್ದರೂ ನಮ್ಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಅಚ್ಲಾಡಿ ಮೂಡುಕೆರೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಅಗತ್ಯಗಳಿಗೆ ಸ್ಪಂದಿಸಿದ ರೋಟರಿ ಕ್ಲಬ್ ಕೋಟ ಬ್ರಿಗೇಡ್, ಶಾಲಾ ಮಕ್ಕಳಿಗೆ ಯುನಿಫಾರ್ಮ್‌ಗಳನ್ನು ಕೊಡುಗೆಯಾಗಿ ವಿತರಿಸಲಾಯಿತು. ದಾನಿಗಳಾದ ದಯಾನಂದ ಆಚಾರ್ಯ ಹಾಗೂ ಸುರೇಶ್ ಆಚಾರ್ಯ ಅವರು ನೀಡಿದ ಯುನಿಫಾರ್ಮ್‌ಗಳನ್ನು ರೋಟರಿ ಕ್ಲಬ್ ಕೋಟ ಬ್ರಿಗೇಡ್ ಅಧ್ಯಕ್ಷ ಪ್ರಕಾಶ್ ಪೂಜಾರಿ ಬನ್ನಾಡಿ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ರೋಟರಿ ವಲಯ 2ರ ಅಸಿಸ್ಟೆಂಟ್ ಗವರ್ನರ್ ಸುಧಾಕರ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಶಿಕ್ಷಣ ಕ್ಷೇತ್ರಕ್ಕೆ ನೆರವು ನೀಡುವ ಮೂಲಕ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುವುದು ಮಹತ್ವದ ಸೇವೆಯಾಗಿದ್ದು, ರೋಟರಿ ಕ್ಲಬ್ ಕೋಟ ಬ್ರಿಗೇಡ್ ಈ ನಿಟ್ಟಿನಲ್ಲಿ ಮಾಡುತ್ತಿರುವ ಸೇವಾ ಕಾರ್ಯ ಶ್ಲಾಘನೀಯವಾಗಿದೆ ಎಂದು ಹೇಳಿದರಲ್ಲದೆ ದಾನಿಗಳ ಸಹಕಾರದಿಂದ ಶಾಲಾ ಮಕ್ಕಳ ಅಗತ್ಯಗಳಿಗೆ ಸ್ಪಂದಿಸಿರುವುದು ಇತರರಿಗೂ ಮಾದರಿಯಾಗಿದ್ದು, ಇಂತಹ ಸಮಾಜಮುಖಿ ಕಾರ್ಯಗಳು ನಿರಂತರವಾಗಿ ನಡೆಯಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳಿಗೆ ಸ್ಥಳೀಯ ಭಾಷೆ, ಸಂಸ್ಕೃತಿ, ಆಚರಣೆ, ಆಹಾರ ಪದ್ಧತಿಗಳನ್ನು ತಿಳಿಸುವ ಪ್ರಯತ್ನ ಶ್ಲಾಘನೀಯವಾಗಿದ್ದು, ಸುಮಾರು 123 ಕುಂದಾಪುರದ ವಿಶೇಷ ಖಾದ್ಯಗಳನ್ನು ವಿದ್ಯಾರ್ಥಿಗಳು ಸ್ಪರ್ಧೆಯೊಂದಲ್ಲಿ ಪ್ರದರ್ಶಿಸಿದ್ದು ಸಂಸ್ಥೆಯ ಪ್ರೋತ್ಸಾಹದ ಪ್ರತೀಕ ಎಂದು ಕಂಡ್ಲೂರಿನ ನೇತಾಜಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕರಾದ ಎ. ಜಯಕರ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಮತ್ತು ಕುಂದಗನ್ನಡ ಸಂಘದ ಜಂಟಿ ಆಶ್ರಯದಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಪ್ರಯುಕ್ತ ಆಯೋಜಿಸಿದ ಆಸಾಡಿ ಖಾದ್ಯಗಳ ತಯಾರಿ ಮತ್ತು ಪ್ರದರ್ಶನ ಸ್ಪರ್ಧೆಯ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಕೈಲ್ಕೆರೆ-ಮೊಳಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ವಡ್ಡರ್ಸೆ ಸಂತೋಷ್ ಶೆಟ್ಟಿ, ಕುಂದಗನ್ನಡ ಭಾಷೆಯ ಚಿಂತಕ ರಾಮ್ ಶೆಟ್ಟಿ ಅತ್ತಿಕಾರ್ ತೀರ್ಪುಗಾರರಾಗಿ ಅನಿಸಿಕೆ ವ್ಯಕ್ತಪಡಿಸಿದರು. ಈ ಸಂದರ್ಭ ಹೌದರಾಯನ ವಾಲ್ಗದ ಮೂಲಕ ಜನಪ್ರಿಯರಾದ ಹಿರಿಯ ಜಾನಪದ ಕಲಾವಿದ ಶ್ರೀ ಮಂಜು ಪೂಜಾರಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಸೈಂಟ್ ಪಿಯೂಸ್ ಆಂಗ್ಲ ಮಾಧ್ಯಮ ಶಾಲೆ ಹಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ನಡೆದ, 14ರ ವಯೋಮಾನದ ಬಾಲಕರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿಗಳಾದ ತನೀಷ್ ಜೆ. ಪೂಜಾರಿ, ಅಭಿನವ್ ಪೈ, ಗಿರಿಧರ್ ಪೈ, ಮನನ್ ಆಚಾರ್ ಹಾಗೂ ಸಮ್ರಾಟ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.   ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಸಂಬಂಧಿತ ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಆಯೋಜನೆಯಲ್ಲಿ ಪಿ.ಆರ್.ಎನ್ ಅಮೃತ ಭಾರತಿ ಸಮೂಹ ಸಂಸ್ಥೆಗಳು, ಹೆಬ್ರಿ ಇಲ್ಲಿ ನಡೆದ ಜಿಲ್ಲಾ ಮಟ್ಟದ ವಿಜ್ಞಾನ ಮೇಳದ ವಿವಿಧ ಸ್ಪರ್ಧೆಗಳಲ್ಲಿ ಶಿಶು ವರ್ಗ ವಿಭಾಗದಲ್ಲಿ ತೆಕ್ಕಟ್ಟೆ ಸೇವಾಸಂಗಮ ವಿದ್ಯಾಕೇಂದ್ರದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ. ಇಲ್ಲಿನ ವಿದ್ಯಾರ್ಥಿಗಳಾದ ಮನ್ವಿತ್ ಕಾರಂತ್, ನವಚಾರಿತ ವಿಜ್ಞಾನ ಮಾದರಿಯಲ್ಲಿ , ಅನಿರುದ್ಧ, ವಸ್ತುವಿನ ಸ್ಥಿತಿಗಳ ಮಾದರಿಯಲ್ಲಿ ಪ್ರಥಮ ದ್ವಿತೀಯ ಸ್ಥಾನ ಗಳಿಸಿದರೆ, ನಮೀಶ್ ಚಂದನ್ ಪರಿಸರ ಮಾಲಿನ್ಯ ಮತ್ತು ಅದರ ವಿಧಗಳು, ನಿತ್ಯಾ ಎನ್ ಪುತ್ರನ್, ಸರಳಯಂತ್ರಗಳ ತಯಾರಿಕಾ ಮಾದರಿಯಲ್ಲಿ ಸ್ಪರ್ಧೆಯಲ್ಲಿ ಗಳಿಸಿದರೆ, ಗಣಿತ ನವಚಾರಿತ ಮಾದರಿ ಸ್ಪರ್ಧೆಯಲ್ಲಿ ಕಾರ್ತಿಕೇಯ ತೃತೀಯ ಸ್ಥಾನ ಗಳಿಸಿದರೆ, ವಿಜ್ಞಾನ ಪ್ರಯೋಗ ಸ್ಪರ್ಧೆಯಲ್ಲಿ ಗೌರಿ ತೃತೀಯ ಸ್ಥಾನ ಗಳಿಸಿದರೆ, ಸಂಸ್ಕೃತಿ ಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಸುಧಾಂಶ್ ಕುಮಾರ್, ಹರಿಪ್ರಿಯಾ ಮತ್ತು ಮನಸ್ವಿ, ಪ್ರಥಮ ಸ್ಥಾನ ಪಡೆದಿರುತ್ತಾರೆ. ಬಾಲ ವಿಭಾಗದ …

Read More