ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ವ್ಯವಸಾಯ ಸೇವಾ ಸಹಕಾರಿ ಸಂಘ ಸಂಘವು ಪ್ರಧಾನ ಕಚೇರಿ ಸೇರಿದಂತೆ 9 ಶಾಖೆಗಳ ಮೂಲಕ 7 ಗ್ರಾಮಗಳ ಜನತೆಗೆ ಆರ್ಥಿಕ ವ್ಯವಹಾರ ಕಲ್ಪಿಸಿ, ಪ್ರಸಕ್ತ ಸಾಲಿನಲ್ಲಿ ಸುಮಾರು 762.59 ಕೋಟಿಗೂ ಮೀರಿ ವ್ಯವಹಾರ ನಡೆಸಿ, ಸುಮಾರು 1.45 ಕೋಟಿ ರೂ. ನಿವ್ವಳ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ ಟಿ. ನಾರಾಯಣ ಹೆಗ್ಡೆ ಹೇಳಿದರು. ಯಡ್ತರೆ ಬಂಟರ ಭವನದಲ್ಲಿ ಸೋಮವಾರ ನಡೆದ ಸಂಘದ ವಾರ್ಷಿಕ ಸರ್ವಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಘದ ಠೇವಣಾತಿ ಅವಿರತವಾಗಿ ಏರುತ್ತಿದ್ದು, ವರದಿ ವರ್ಷದಲ್ಲಿ ಸುಮಾರು 3.92 ಕೋಟಿ ರೂ. ಏರಿಕೆಯಾಗಿದ್ದು, ಶೇ. 5.82ರಷ್ಟು ಹೆಚ್ಚಳವಾಗಿದೆ. ವರದಿ ವರ್ಷದ ಪ್ರಾರಂಭದಲ್ಲಿ ಸುಮಾರು 55.88ಕೋಟಿ ರೂ. ಹೊರಬಾಕಿ ಸಾಲಯಿದ್ದು, ಪ್ರಸಕ್ತ ಸಾಲಿನಲ್ಲಿ 61.42ಕೋಟಿ ರೂ. ಸಾಲ ವಿತರಿಸಲಾಗಿದೆ. ವರ್ಷಾಂತ್ಯದಲ್ಲಿ ಸದಸ್ಯರಿಂದ ಬರಬೇಕಾದ ಸಾಲಗಳ ಪೈಕಿ ಕೃಷಿ ಪೂರಕ ಸಾಲ ಶೇ. 99.72, ಕೃಷಿಯೇತರ ಸಾಲ ಶೇ. 99.60 ವಸೂಲಿಯಾಗಿ ಒಟ್ಟಾರೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಸ್ಸಿ ನರ್ಸಿಂಗ್ ಮತ್ತು ಜಿ.ಎನ್.ಎಮ್ ನರ್ಸಿಂಗ್ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನ ಸೌಲಭ್ಯ ಪಡೆಯಲು ವೆಬ್‌ಸೈಟ್ https://sevasindhu.karnataka.gov.in/sevasindhu/DepartmentServices ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ನೆಲ ಮಹಡಿ, ಮೌಲಾನಾ ಆಜಾದ್ ಭವನ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೆಂಗಳೂರು, ಸೆ. 14 ಮತ್ತು 15 ರಂದು ಬೆಂಗಳೂರಿನ ಕೋರಮಂಗಲದಲ್ಲಿ ನಡೆದ ಅಖೀಲ ಕರ್ನಾಟಕ ಕರ್ನಾಟಕ ಸ್ಫೊರ್ಟ್ಸ್ ಕರಾಟೆ ಅಸೋಸಿಯೆನ್ ವತಿಯಿಂದ ನಡೆದ 15ನೇ ರಾಜ್ಯ ಮಟ್ಟದ ಸಬ್ ಜೂನಿಯರ್ ಕರಾಟೆ ಚಾಂಪಿಯೆನ್ ಶಿಫ್ 2024 ಇದರಲ್ಲಿ ಗುರುಕುಲ ಪಬ್ಲಿಕ್ ಸ್ಕೂಲ್ ವಕ್ವಾಡಿಯ 8ನೇ ತರಗತಿ ವಿದ್ಯಾರ್ಥಿನಿ ಝಾರಾ, ಸಬ್ ಜೂನಿಯರ್ ವಿಭಾದ 13ರ ವಯೋಮಿತಿಯ ಉಡುಪಿ ಜಿಲ್ಲೆಯಿಂದ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಪಡೆದು, ರಾಜ್ಯ ಮಟ್ಟದಲ್ಲಿ ಆರಿಸಿ ಬಂದು, ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯೆನ್ ಶಿಪ್‍ಗೆ ಆಯ್ಕೆಯಾಗಿದ್ದಾಳೆ. ಈ ಕ್ರೀಡಾ ಕೂಟದಲ್ಲಿ, ರಾಜ್ಯದ 31 ಜಿಲ್ಲೆಯ 1220 ಕ್ರೀಡಾಳುಗಳು ಭಾಗವಹಿಸಿದ್ದರು. ಕುಮಿಟೆ ವಿಭಾಗದಲ್ಲಿ ರಾಜ್ಯ ಚಾಂಪಿಯೆನ್ ಆಗಿರುತ್ತಾಳೆ. ಅವಳಿಗೆ ಕುಂದಾಪುರದ ಕೆ.ಡಿ.ಎಫ್. ಕರಾಟೆ ಶಾಲೆಯ ಕಿಯೋಷಿ ಕಿರಣ್, ಶಿಹಾನ್ ಸಂದೀಪ್ ವಿ.ಕೆ., ಶಿಹಾನ್ ಕೀರ್ತಿ ಜಿ.ಕೆ., ಸೇನ್ ಸಾಯಿ ಶಿಹಾನ್ ಶೇಖ್, ಬಸ್ರೂರು, ಹಾಗೂ ಸೇನ್ ಸಾಯಿ ಶಶಾಂಕ್ ಶೆಣೈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ ಪಡೆಯುವ ಅವಧಿಯಲ್ಲಿ ಶಿಷ್ಯವೇತನ ಸೌಲಭ್ಯ ಪಡೆಯಲು ವೆಬ್‌ಸೈಟ್ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟಂಬರ್ 30 ರ ವರೆಗೆ ವಿಸ್ತರಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಂಬಂಧಿಸಿದ ಸೂಕ್ತ ದಾಖಲೆಗಳನ್ನು ಒಂದು ವಾರದ ಒಳಗಾಗಿ ಉಪ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಇಲ್ಲಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಸ್ತೂರಿ ರಂಗನ್ ವರದಿ ಅನುಷ್ಠಾನ ಮತ್ತು ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆಯ ಆತಂಕದಲ್ಲಿರುವ ಜಡ್ಕಲ್ / ಮುದೂರು ಗ್ರಾಮಕ್ಕೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿದರು. ಬಳಿಕ ಅಲ್ಲಿನ ನಿವಾಸಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದರು. ಈ ಸಂದರ್ಭ ಮಾತನಾಡಿದ ಶಾಸಕ ಗಂಟಿಹೊಳೆ, ಮೀಸಲು ಅರಣ್ಯ ಮತ್ತು ಬಫರ್ ಝೋನ್ ಪ್ರದೇಶಗಳಲ್ಲಿ ವಾಸಮಾಡುತ್ತಿರುವ ನಿವಾಸಿಗಳಿಗೆ ಕಸ್ತೂರಿ ರಂಗನ್ ವರದಿ ಅನುಷ್ಠಾನದಿಂದ ಆಗಬಹುದಾದ ಸಮಸ್ಯೆಗಳಿಗೆ ಭಯಗೊಂಡಿರುವ ಜಡ್ಕಲ್, ಮುದೂರು ಗ್ರಾಮದ ಜನರು ಈಗಾಗಲೇ ಅಸಮಾಧಾನ ಹೊರಹಾಕಿದ್ದಾರೆ. ಜೊತೆಗೆ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ ಮುಟ್ಟಿಸುವ ಮೂಲಕ ಉಡುಪಿ ಜಿಲ್ಲೆಯಲ್ಲಿ ಮೊದಲ ಹೋರಾಟಕ್ಕೆ ಮುನ್ನುಡಿ ಬರೆದಂತಾಗಿದೆ. ಈ ಪ್ರತಿಭಟನೆ ಕಿಚ್ಚು ಇಡೀ ಉಡುಪಿ ಜಿಲ್ಲೆಗೆ ಪಸರಿಸಿ. ಒಂದು ಜನಂದೋಲನವಾಗಿ ಪರಿವರ್ತನೆಗೊಂಡಾಗ ನಮ್ಮ ಹೋರಾಟಕ್ಕೆ ನಿಶ್ಚಿತವಾಗಿ ಫಲ ದೊರೆಯಲಿದೆ. ಈ ಹೋರಾಟದ ನಮ್ಮೆಲ್ಲರ ಹೋರಾಟವಾಗಬೇಕಿದೆ. ಯಾವುದೇ ಮಟ್ಟದ ಹೋರಾಟಕ್ಕೆ ಎಲ್ಲಿಗೆ ಕರೆದರೂ ನಿಮ್ಮ ಜೊತೆಗಿದ್ದೇನೆ ಎನ್ನುವ ಭರವಸೆ ನೀಡಿದರು. ಪ್ರತಿಭಟನೆಗೆ ಒಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಅರಾಟೆ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರಿಗೆ ಬಸ್ಸು ಡಿಕ್ಕಿಯಾಗಿ ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ. ಮೃತಪಟ್ಟವರು ಭಟ್ಕಳದ ನಾಜೀರ್ ಎಂದು ಗುರುತಿಸಲಾಗಿದೆ. ಕುಟುಂಬದವರೊಂದಿಗೆ ಮಂಗಳೂರಿನಿಂದ ಭಟ್ಕಳಕ್ಕೆ ತೆರಳುತ್ತಿದ್ದ ವೇಳೆ ಕುಂದಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಅರಾಟೆ ಸೇತುವೆ ಸಮೀಪ ತಾಂತ್ರಿಕ ಕಾರಣದಿಂದ ಕಾರನ್ನು ನಿಲ್ಲಿಸಿ ಪರೀಕ್ಷಿಸಲಾಯಿತು. ನಂತರ ಅವರು ಕಾರಿಗೆ ಹತ್ತುವ ವೇಳೆ ಕುಂದಾಪುರದಿಂದ ಗಂಗೊಳ್ಳಿ ಕಡೆಗೆ ತೆರಳುತ್ತಿರುವ ಬಸ್ಸೊಂದು ಕಾರಿನ ಬಾಗಿಲಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಗಂಭೀರ ಗಾಯಗೊಂಡಿದ್ದಾರೆ.ಕೂಡಲೇ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.ಪರೀಕ್ಷಿಸಿದ ವೈದ್ಯರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾಡದೋಣಿ ಮೀನುಗಾರರು ಒಟ್ಟಾಗಿ ಬುಲ್ ಟ್ರಾಲ್ ಮೀನುಗಾರಿಕೆ ಮಾಡುತ್ತಿರುವ ಬೋಟುಗಳನ್ನು ತಡೆದು ನಿಲ್ಲಿಸಿ ಅವೈಜ್ಞಾನಿಕವಾಗಿ ಮೀನುಗಾರಿಕೆ ನಡೆಸುತ್ತಿರುವ ಬಗ್ಗೆ ತಮ್ಮ ಆಕ್ರೋಶ ಹೊರಹಾಕಿದೆ. ಬೈಂದೂರು ವಲಯ ನಾಡದೋಣಿ ಮತ್ತು ಗಂಗೊಳ್ಳಿ ನಾಡದೋಣಿ ಮೀನುಗಾರರು ಒಂದುಗೂಡು ಸುಮಾರು ನೂರಕ್ಕೂ ಹೆಚ್ಚು ದೋಣಿಯವರು ಬುಲ್ಟ್ರೋಲ್ ಮಾಡುತ್ತಿರುವ ಬೋಟುಗಳನ್ನು ತಡೆದಿದ್ದಾರೆ. ಟ್ರಾಲ್ ಬೋಟಿಂಗ್ನಲ್ಲಿ ಸುಮಾರು 45 ಪೊಸಿಷನ್ 29 ಲಾಂಗ್‌ನಲ್ಲಿ ಬುಲ್ಟ್ರೋಲ್ ಮಾಡುತ್ತಿದ್ದು ಕಂಡುಬಂದಿದೆ. ನಾಡದೋಣಿಯುವರು ಇದನ್ನು ಪ್ರತಿಭಟಿಸಿದ್ದಾರೆ. ಸಮುದ್ರದ ತೀರಪ್ರದೇಶದಲ್ಲಿ ಬುಲ್ ಟ್ರಾಲ್ ಮಾಡುವುದರಿಂದ ಮೀನುಗಳ ಸಂತತಿ ನಾಶವಾಗುವುದರಲ್ಲಿ ಸಂಶಯವಿಲ್ಲ. ಬುಲ್‌ಟ್ರಾಲ್ ಲೈಟ್ ಫಿಶಿಂಗ್‌ನಿಂದ ನಾಡದೋಣಿ ಮೀನುಗಾರರ ಜೀವನಕ್ಕೆ ತೊಂದರೆಯಾಗಿದೆ. ಜೀವದ ಹಂಗು ತೊರೆದು ಮೀನುಗಾರಿಕೆಗೆ ತೆರಳಿದರೆ ಬರಿಗೈಯಲ್ಲಿ ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾನೂನು ಬಾಹಿರವಾಗಿ ಮೀನುಗಾರಿಕೆಗೆ ಮಾಡುತ್ತಿರುವರ ವಿರುದ್ಧ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಮಂಗಳೂರಿನಿಂದ ಕಾರವಾರದ ತನಕ ನಾಡ ದೋಣಿ ಮೀನುಗಾರರು ಸಭೆ ನಡೆಸಿ ಬುಲ್ಟ್ರೋಲ್ ಮೀನುಗಾರಿಕೆ ನಿಷೇಧಿಸುವಂತೆ ಸರ್ಕಾರಕ್ಕೆ ಈಗಾಗಲೇ ನಾಡದೋಣಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಹಾಗೂ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಎಚ್.ಐ.ವಿ.ಏಡ್ಸ್ ಅರಿವು ಆಂದೋಲನ ಕಾರ್ಯಕ್ರಮದ ಕುರಿತು ಯಕ್ಷಗಾನ ಪ್ರದರ್ಶನ ನಡೆಯಿತು. ಉತ್ತರ ಕನ್ನಡ ಸಿದ್ದಾಪುರದ ಯಕ್ಷಗಾನ ತಂಡದವರಯ ಯಕ್ಷಗಾನ ಪ್ರದರ್ಶನದ ಮೂಲಕ ಏಡ್ಸ್ ಕುರಿತಾಗಿ ಜಾಗ್ರತಿ ಸಂದೇಶವನ್ನು ಸಾರಿದರು. ಕಾರ್ಯಕ್ರಮದಲ್ಲಿ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು, ಬೋಧಕ/ಬೋಧಕೇತರ ವೃಂದದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶ್ರೀ ವಿನಾಯಕ ಯುವಕ ಮಂಡಲ ಸಾಬ್ರಕಟ್ಟೆ-ಯಡ್ತಾಡಿ ಆಶ್ರಯದಲ್ಲಿ ಅಕ್ಟೋಬರ್ 9 ರಿಂದ 12ರ ತನಕ ನಡೆಯುವ ಹದಿಮೂರನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ “ ನಮ್ಮೂರ ದಸರಾ-2024(ಭಾವ ಭಕ್ತಿಯ ಸಂಗಮ)” ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ವೇದಮೂರ್ತಿ ಶ್ರೀ ರಾಜೇಶ್ ಐತಾಳ್ ಅವರು ಅನಾವರಣಗೊಳಿಸಿದರು. ನಂತರ ಮಾತನಾಡಿ, ಯುವಕ ಮಂಡಲಗಳು ಸಾಮಾಜಿಕ ಜವಬ್ದಾರಿಯೊಂದಿಗೆ ಸಮಾಜದಲ್ಲಿ ತನ್ನನ್ನು ತೊಡಗಿಸಿಕೊಂಡಾಗ ಸ್ಥಾಪನೆ ಉದ್ದೇಶಗಳು ಸಾಕಾರಗೊಳ್ಳುತ್ತದೆ. ಧಾರ್ಮಿಕ ಚಿಂತನೆಗಳೊಂದಿಗೆ ಯುವಕರು ಒಂದುಗೂಡಿ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಗ್ರಾಮೀಣ ಪ್ರದೇಶದ ಪ್ರತಿಭೆಗಳ ಅನಾವರಣ ಸಾಧ್ಯ ಎಂದರು. ಈ ಸಂದರ್ಭದಲ್ಲಿ ಯುವಕ ಮಂಡಲದ ಮಾಜಿ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಗುರುಕುಲ ಪದವಿ ಪೂರ್ವ ಕಾಲೇಜು ವಕ್ವಾಡಿ ಕೋಟೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ – ಬಾಲಕಿಯರ ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ ಪಡೆಯುವುದರೊಂದಿಗೆ ಕಾಲೇಜಿನ ವಿದ್ಯಾರ್ಥಿಗಳಾದ, ಕೆ.ಶ್ರೀನಿತಾ ಎಸ್ ಕಾಮತ್, ಶ್ರೇಯಾ ಶೆಟ್ಟಿ, ದಿವ್ಯಶ್ರೀ, ಅಮೂಲ್ಯ, ವನಿ̧ಷಾ ಸಂಜನಾ, ಕುನಾಲ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
