Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಯೋಜನೆಯಡಿ ಕೃಷಿ ಯಂತ್ರೋಪಕರಣಗಳು ಲಭ್ಯವಿದ್ದು, ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತರು ಜಮೀನಿನ ಆರ್.ಟಿ.ಸಿ, ಆಧಾರ್ ಪ್ರತಿ, 2 ಪಾಸ್ ಪೋರ್ಟ್ ಸೈಜಿನ ಭಾವಚಿತ್ರ, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ಪ.ಜಾ ಮತ್ತು ಪ,ಪಂ. ಇದ್ದಲ್ಲಿ ಪ್ರಮಾಣ ಪತ್ರ ಹಾಗೂ ಛಾಪಾ ಕಾಗದಗಳೊಂದಿಗೆ, ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದ್ದು, ಸದ್ರಿ ಸೌಲಭ್ಯದ ಪ್ರಯೋಜನ ಪಡೆಯಲು ರೈತರು ಕಡ್ಡಾಯವಾಗಿ ಪ್ರೂಟ್ಸ್ ಐಡಿ ಯನ್ನು ಹೊಂದಿರಬೇಕು. ರೈತರು ಈಗಾಗಲೇ ಪ್ರೂಟ್ಸ್ ಐಡಿ ಯನ್ನು ಹೊಂದಿದ್ದಲ್ಲಿ ಅಥವಾ ಹೊಂದಿರದೆ ಇದ್ದಲ್ಲಿ ತಮ್ಮ ಎಲ್ಲಾ ಆರ್.ಟಿ.ಸಿ ಗಳನ್ನು ಪ್ರೂಟ್ಸ್ ಐಡಿಗೆ ಜೋಡಣೆ ಮಾಡಿಕೊಳ್ಳುವಂತೆ ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕಡಲ ತೀರದಲ್ಲಿ ಹೆಚ್ಚುತ್ತಿರುವ ಮಾಲಿನ್ಯದಿಂದಾಗಿ ಜಲಚರಗಳ ಅಸ್ತಿತ್ವಕ್ಕೆ ತೊಂದರೆಯಾಗುತ್ತಿದೆ. ಈ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಕಡಲ ತೀರ ಸ್ವಚ್ಛತಾ ದಿನವನ್ನು ಆಚರಿಸಲಾಗುತ್ತಿದ್ದು, ಸಾರ್ವಜನಿಕರು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು.  ಅವರು ಅಂದು ಕುಂದಾಪುರ ತಾಲೂಕಿನ ಕೋಡಿ ಸಮುದ್ರ ತೀರದಲ್ಲಿ ಅಂತರಾಷ್ಟ್ರೀಯ ಕಡಲ ತೀರ ಸ್ವಚ್ಚತಾ ದಿನದ ಅಂಗವಾಗಿ ಜಿಲ್ಲಾಡಳಿತ, ಅರಣ್ಯ ಇಲಾಖೆ, ಪರಿಸರ ಇಲಾಖೆ ಮತ್ತು ಕುಂದಾಪುರ ಪುರಸಭೆ ಆಶ್ರಯದಲ್ಲಿ ನಡೆದ ಕಡಲ ತೀರ ಸ್ವಚ್ಚತಾ ದಿನ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಸಾರ್ವಜನಿಕರು ಅನುಪಯುಕ್ತ ಪ್ಲಾಸ್ಟಿಕ್ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಬೀದಿ ಬದಿ ಎಸೆಯುವುದರಿಂದ ಪರಿಸರ ಮಾಲಿನ್ಯ ಆಗುವುದಲ್ಲದೇ, ಅವುಗಳು ಸಮುದ್ರ ತಲುಪಿ ಜಲಚರಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ನಿರ್ದೇಶನದಂತೆ 2 ವಾರಗಳ ಕಾಲ ಸ್ವಚ್ಚತಾ ಕಾರ್ಯಕ್ರಮವನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪೊಲೀಸರ ಹೆಸರಿನಲ್ಲಿ ಮಹಿಳೆಗೆ ಕರೆ ಮಾಡಿ ಲಕ್ಷಾಂತರ ರೂಪಾಯಿ ವಂಚಿಸಿದ ಘಟನೆ ನಡೆದಿದೆ. ಕುಂದಾಪುರದ ಹಂಗಳೂರಿನ ಭವಿಷ್ಯ ಎ. (30) ವಂಚನೆಗೆ ಒಳಗಾದವರು. ಮಹಿಳೆಗೆ ಕರೆ ಮಾಡಿದ ವ್ಯಕ್ತಿಯು ಫೆಡೆಕ್ಸ್‌ ನಿಂದ ಮಾತನಾಡುತ್ತಿರುವುದಾಗಿ ತಿಳಿಸಿ ಭವಿಷ್ಯ ಅವರ ಆಧಾರ್‌ ನಂಬರ್‌ನಿಂದ ಮುಂಬಯಿಯಿಂದ ಇರಾನ್‌ಗೆ ಒಂದು ಪಾರ್ಸೆಲ್‌ ಹೋಗುತ್ತಿದ್ದು, ಅದರಲ್ಲಿ ಕಾನೂನುಬದ್ಧವಲ್ಲದ ವಸ್ತುಗಳು ಇರುವುದರಿಂದ ಪ್ರಕರಣ ದಾಖಲಿಸುವುದಾಗಿ ತಿಳಿಸಿದ್ದ. ಸೈಬರ್‌ ಕ್ರೈಂಗೆ ದೂರು ನೀಡುವಂತೆ ತಿಳಿಸಿ ಮುಂಬಯಿ ಕ್ರೈಂ ಬ್ರ್ಯಾಂಚ್‌ಗೆ ಕರೆ ಸಂಪರ್ಕಗೊಳಿಸುವುದಾಗಿ ಹೇಳಿ, ಮಹಿಳೆಯೊಂದಿಗೆ ಮಾತನಾಡಿದ್ದಾನೆ. ಭವಿಷ್ಯ ಅವರ ಆಧಾರ್‌ ಕಾರ್ಡ್‌ ಇತ್ಯಾದಿ ವಿವರಗಳನ್ನು ಕಳುಹಿಸುವಂತೆ ತಿಳಿಸಿ, ಆಧಾರ್‌ ನಂಬರ್‌ನಿಂದ 25 ಬ್ಯಾಂಕ್‌ ಆಕೌಂಟ್‌ ಇದ್ದು, ನಿಮ್ಮ ಖಾತೆಯಿಂದ ಮನಿ ಲ್ಯಾಂಡರಿಂಗ್‌ ಆಗುತ್ತಿರುವುದಾಗಿ ಹೇಳಿದ್ದಾರೆ. ಆ ಅಕೌಂಟ್‌ನಿಂದ ಇನ್‌ಸ್ಟಂಟ್‌ ಲೋನ್‌ ಮಾಡಿದರೆ ಮೋಸಗಾರರನ್ನು ಪತ್ತೆ ಮಾಡಬಹುದು ಎಂದು ಯಾಮಾರಿಸಿ 8,78,760 ರೂ. ಲೋನ್‌ ಮಾಡಿಸಿದ್ದಾರೆ. ಬಳಿಕ ಸಾಮಾಜಿಕ ಜಾಲತಾಣ ಉಪಯೋಗಿಸಿಕೊಂಡು ಭವಿಷ್ಯ ಅವರ ಬ್ಯಾಂಕ್‌ ಖಾತೆಯಲ್ಲಿದ್ದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಬ್ರಹ್ಮಾವರದ ಎಸ್.ಎಂ.ಎಸ್. ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ 17ರ ವಯೋಮಾನದ ಪ್ರೌಢ ಶಾಲಾ ಬಾಲಕಿಯರ ಕ್ರಿಕೆಟ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಪ್ರಣವಿ ದೇವೇಂದ್ರ ಖಾರ್ವಿ ಮತ್ತು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಬಿಂದುಶ್ರೀ ಸುರೇಶ ಖಾರ್ವಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ ಹಾಗೂ ಬೋಧಕೇತರರು ಅಭಿನಂದನೆ ಸಲ್ಲಿಸಿದ್ದಾರೆ. ಪ್ರಣವಿ ಬಿಂದುಶ್ರೀ

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಗಂಗೊಳ್ಳಿಯ ಖಾರ್ವಿಕೇರಿ ಶ್ರೀ ಮಹಾಂಕಾಳಿ ಅಮ್ಮನವರಿಗೆ ನಕಲಿ ಆಭರಣ ತೊಡಿಸಿದ್ದ ಅರ್ಚಕನನ್ನು ಗಂಗೊಳ್ಳಿ ಪೊಲೀಸರು ಬಂಧಿಸಿದ್ದಾರೆ. ಶಿರಸಿ ತಾಲೂಕಿನ ಸಾಲಕಣಿ ಗ್ರಾಮದ ಮೊರೆಗಾರದ ನರಸಿಂಹ ಭಟ್( 43) ಬಂಧಿತ ಆರೋಪಿ. ದೇವಳದ ಆಡಳಿತ ಮಂಡಳಿ ಹಾಗೂ ಭಕ್ತರು ಜೊತೆಗೂಡಿ ಸೇವಾ ರೂಪದಲ್ಲಿ 21 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಆಭರಣಗಳನ್ನು ಸಮರ್ಪಿಸಿದ್ದು, ಮತ್ತು ಈ ಆಭರಣಗಳಿಂದ ನಿತ್ಯವೂ ದೇವರ ಅಲಂಕಾರ ನಡೆಸುತ್ತಾ ಬಂದಿದ್ದಾರೆ. ದೇವಳದಲ್ಲಿ ನವರಾತ್ರಿ ಉತ್ಸವಕ್ಕೆ ಸಿದ್ಧತೆ ನಡೆಯುತ್ತಿದ್ದು, ಈ ಸಲುವಾಗಿ ಸೆಪ್ಟೆಂಬರ್ 21ರಂದು ಶುಚಿಗೊಳಿಸುವುದಕ್ಕಾಗಿ ದೇವರ ಆಭರಣಗಳನ್ನು ಅರ್ಚಕರಿಂದ ಪಡೆಯಲಾಯಿತು. ಈ ಸಂದರ್ಭ ಆಭರಣಗಳನ್ನು ಪರೀಕ್ಷಿಸಿದಾಗ ನಕಲಿ ಚಿನ್ನಾಭರಣ ಎಂಬುದಾಗಿ ಬೆಳಕಿಗೆ ಬಂದಿದೆ. ವಿಚಾರಣೆ ನಡೆಸಿದಾಗ ಆಭರಣಗಳನ್ನು ತಾನು ತೆಗೆದಿರುವುದಾಗಿ ಅರ್ಚಕರು ಒಪ್ಪಿಕೊಂಡಿದ್ದಾರೆ. ಆಡಳಿತ ಮಂಡಳಿ ಮತ್ತು ಭಕ್ತರಿಗೆ ಸಂಶಯ ಬಾರದೆಂಬ ಉದ್ದೇಶದಿಂದ ನಕಲಿ ಚಿನ್ನಾಭರಣಗಳನ್ನು ದೇವರ ಮೂರ್ತಿಯ ಮೇಲೆ ಅಲಂಕರಿಸಿದ್ದಾನೆ. ಬಳಿಕ ಕದ್ದ ಆಭರಣಗಳನ್ನು ಸ್ವಂಯ ಉಪಯೋಗಕ್ಕಾಗಿ ವಿವಿಧ ಬ್ಯಾಂಕುಗಳಲ್ಲಿ ಅಡವು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಅಂತರಾಷ್ಟ್ರೀಯ ಬೀಚ್ ಸ್ವಚ್ಛತಾ ದಿನಾಚರಣೆಯ ಅಂಗವಾಗಿ ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆ, ಗ್ರಾಮ ಪಂಚಾಯತ್ ತ್ರಾಸಿ ಹಾಗೂ ಲಯನ್ಸ್ ಕ್ಲಬ್ ತ್ರಾಸಿ-ಗಂಗೊಳ್ಳಿ, ಖಾರ್ವಿ ಆನ್‌ಲೈನ್.ಕಾಮ್ ಜಂಟಿ ಆಶ್ರಯದಲ್ಲಿ ತ್ರಾಸಿ-ಮರವಂತೆ ಬೀಚ್ ಸ್ವಚ್ಛತಾ ಕಾರ್ಯಕ್ರಮ ಭಾನುವಾರ ನಡೆಯಿತು. ಕರಾವಳಿ ಕಾವಲು ಪೊಲೀಸ್ ಠಾಣೆಯ ಉಪನಿರೀಕ್ಷಕ ಸುಬ್ರಹ್ಮಣ್ಯ ಹರ್ಕೇರಿ ಮಾತನಾಡಿ, ಸಮುದ್ರ ಜೈವಿಕ ವೈವಿಧ್ಯತೆಯ ತಾಣಗಳ ಆಗರವಾಗಿದ್ದು ಅದನ್ನು ಸಂರಕ್ಷಿಸುವ ಅಗತ್ಯ ಇದೆ. ಈ ನಿಟ್ಟಿನಲ್ಲಿ ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆ ವತಿಯಿಂದ ನಿಯಮಿತವಾಗಿ ಸ್ವಚ್ಛತೆ ಮತ್ತು ಅರಿವು ಮೂಡಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್‌ನ ಅಧ್ಯಕ್ಷ ವಿವೇಕಾನಂದ ಪೂಜಾರಿ ಹಾಗೂ ಪದಾಧಿಕಾರಿಗಳು, ಕರಾವಳಿ ಕಾವಲು ಪೊಲೀಸ್ ಠಾಣೆಯ ಎಎಸ್‌ಐ ಭಾಸ್ಕರ್ ಮತ್ತು ಸಿಬ್ಬಂದಿಗಳು, ಕೆ.ಎನ್.ಡಿ ಸಿಬ್ಬಂದಿಗಳು ಹಾಗೂ ತ್ರಾಸಿ ಎಸ್‌ಎಲ್‌ಆರ್‌ಎಂ ಘಟಕದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜು ಹಾಗೂ ಗುರುಕುಲ ಪದವಿಪೂರ್ವ ಕಾಲೇಜು ವಕ್ವಾಡಿ, ಕೋಟೇಶ್ವರ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಕುಂದಾಪುರ ತಾಲ್ಲೂಕು ಮಟ್ಟದ ಪುಟ್ಬಾಲ್ ಕ್ರೀಡಾಕೂಟದ ಸಮಾರೋಪ ಸಮಾರಂಭ  ಶುಕ್ರವಾರದಂದು ಜರುಗಿತು. ಮುಖ್ಯ ಅತಿಥಿಗಳಾದ ಮಾರುತಿ ಉಪನಿರ್ದೇಶಕರು ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಅವರು ಮಾತನಾಡಿ, ಆಟವು ಒಂದು ವಿಶೇಷ ಚಟುವಟಿಕೆ ಸೋಲೆ ಗೆಲವುವಿನ ಸೋಪಾನ ಹಾಗೂ ಮನಸ್ಸು ಯಾವಾಗಲೂ ಧನಾತ್ಮಕ ಚಿಂತನೆ ಮಾಡಬೇಕು ಎಂದು ಉದಾಹರಣೆಗಳಿಂದ ಕೂಡಿದ ಅಮೂಲ್ಯ ಸಂದೇಶಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಕೆ.ಸುಭಾಶ್ಚಂದ್ರ ಶೆಟ್ಟಿ, ಜಂಟಿ ಆಡಳಿತ ನಿರ್ದೇಶಕರು, ಬಾಂಡ್ಯ ಎಜುಕೇಶನಲ್ ಟ್ರಸ್ಟ್‌, ಸುನಿಲ್‍ ಪ್ಯಾಟ್ರಿಕ್, ಪ್ರಾಂಶುಪಾಲರು ಗುರುಕುಲ ಪಬ್ಲಿಕ್ ಸ್ಕೂಲ್ ವಕ್ವಾಡಿ ಕೋಟೇಶ್ವರ, ಉಡುಪಿ ಜಿಲ್ಲಾ ಕ್ರೀಡಾ ಸಂಯೋಜಕರಾದ ದಿನೇಶ್ ಶೆಟ್ಟಿ, ಕುಂದಾಪುರ ತಾಲ್ಲೂಕು ಹಾಗೂ ಗುರುಕುಲ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಅವಿನಾಶ್ ಆಚಾರ್ಯ ಉಪಸ್ಥಿತರಿದ್ದರು. ಕುಂದಾಪುರ ತಾಲ್ಲೂಕು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (UPSC) ಅವರು ನಡೆಸಿದ ಎರಡನೇ ಹಂತದ ಲಿಖಿತ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ಮೋಹಿತ್ ಎಂ. ಹಾಗೂ ಟಿ. ಪ್ರದೀಪ್ ಅವರು ತೇರ್ಗಡೆ ಹೊಂದಿ,  ಎಸ್.ಎಸ್.ಬಿ (Srevice selection Board) ಸಂದರ್ಶನಕ್ಕೆ ಅರ್ಹತೆಯನ್ನು ಪಡೆದುಕೊಂಡಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಯನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ಸಂಯೋಜಕರಾದ ಸುಮಂತ್ ದಾಮ್ಲೆ ಅವರು ಶ್ಲಾಘಿಸಿ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ರೂಪಾಂತರಗೊಳಿಸುವ ನಿಟ್ಟಿನಲ್ಲಿ ಸಮರ್ಪಕ ಮಳೆ ನೀರಿನ ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆ ಪದ್ಧತಿಯಿಂದ ಕೃಷಿ ಉತ್ಪಾದಕತೆಯನ್ನು ಉತ್ತಮಪಡಿಸಿ, ಆದಾಯವನ್ನು ಹೆಚ್ಚಿಸುವ ಸಲುವಾಗಿ ಮತ್ತು ಮಳೆ ನೀರನ್ನು ವ್ಯರ್ಥ ಮಾಡದೇ ಆಯ್ದ ಸ್ಥಳದಲ್ಲಿ ಕೃಷಿ ಹೊಂಡ ತೆಗೆದು ಜಲ ಸಂಗ್ರಹಿಸಿ, ಬೆಳೆಗಳ ಸಂದಿಗ್ಧ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವ ಸಲುವಾಗಿ ಕೃಷಿ ಭಾಗ್ಯ ಯೋಜನೆಯನ್ನು ತಾಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಕೃಷಿ ಭಾಗ್ಯ ಯೋಜನೆಯು ಪ್ಯಾಕೇಜ್ ಮಾದರಿಯಲ್ಲಿ ಅನುಷ್ಠಾನಗೊಳ್ಳುತ್ತಿದ್ದು, ಈ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ, ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ, ಡೀಸೆಲ್/ ಪೆಟ್ರೋಲ್/ ಸೋಲಾರ್ ಪಂಪ್ ಸೆಟ್ ಹಾಗೂ ಸೂಕ್ಷ್ಮ (ತುಂತುರು/ ಹನಿ) ನೀರಾವರಿ ಘಟಕಗಳನ್ನು ಅನುಷ್ಠಾನ ಮಾಡಲು ಸಾಮಾನ್ಯ ವರ್ಗದ ರೈತರಿಗೆ ಶೇ. 80 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ. 90 ರಷ್ಟು ಸಹಾಯಧನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಯುವ ಜನತೆ ಅನಗತ್ಯ ವಿಚಾರಗಳಲ್ಲಿ ಸಮಯ ವ್ಯರ್ಥ ಮಾಡದೇ, ಶೈಕ್ಷಣಿಕ ಬೆಳವಣಿಗೆಯ ಕಡೆ ಗಮನಹರಿಸುವ ಮೂಲಕ ತಮ್ಮ ಬದುಕು ರೂಪಿಸಲು ಈಗಿನಿಂದಲೇ ದೃಢ ನಿರ್ಧಾರ ಕೈಗೊಂಡು ಉತ್ತಮ ಭವಿಷ್ಯದ ನಿರ್ಮಾಣದತ್ತ ಹೆಜ್ಜೆ ಹಾಕಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು. ಅವರು ಅಂದು ನಗರದ ಅಮೃತ್ ಗಾರ್ಡನ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಲಯನ್ಸ್ ಕ್ಲಬ್ ಅಮೃತ್ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಐಕ್ಯುಎಸಿ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ವಿದ್ಯಮಾನಗಳನ್ನು ಅವಲೋಕಿಸಿದಾಗ ನಮ್ಮ ದೇಶವನ್ನು ಹೊರತುಪಡಿಸಿ ವಿವಿಧೆಡೆ ಸಾಮಾಜಿಕ ಅಸ್ಥಿರತೆ ಇದ್ದು, ಇದರ ಪರಿಣಾಮ ಯುವಜನರ ಮೇಲೆ ಉಂಟಾಗುತ್ತದೆ. ನಮ್ಮ ದೇಶದಲ್ಲಿ ಬೇಧ, ಭಾವ, ಜಾತಿ ತಾರತಮ್ಯ ವಿಲ್ಲದೇ ಸಂವಿಧಾನದ ಆಶಯದಂತೆ…

Read More