ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಕೇಂದ್ರ ಸರ್ಕಾರದ ನ್ಯಾಷನಲ್ ಇ – ಸ್ಕಾಲರ್‌ಶಿಪ್ ಯೋಜನೆಯಡಿ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ವಿಕಲಚೇತನ ವಿದ್ಯಾರ್ಥಿಗಳಿಂದ ವೆಬ್‌ಸೈಟ್ www.disabilityaffairs.gov.in ಅಥವಾ www.scholarships.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರಿ – ಮೆಟ್ರಿಕ್ 9ನೇ ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಆಗಸ್ಟ್ 31 ಮತ್ತು ಪೋಸ್ಟ್ ಮೆಟ್ರಿಕ್ ಪ್ರಥಮ ಪಿಯುಸಿಯಿಂದ ಸ್ನಾತಕೋತ್ತರ ಪದವಿ ಹಾಗೂ ಟಾಪ್ ಕ್ಲಾಸ್‌ಗಳಿಗೆ ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ” ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ವಿದ್ಯಾರ್ಥಿಗಳು ಮೆಡಿಕಲ್, ಎಂಜಿನಿಯರ್ ವ್ಯಾಸಂಗದಲ್ಲಿ ಪ್ರತಿಷ್ಠಿತ ಉನ್ನತ ಶಿಕ್ಷಣ ಮಹಾ ವಿದ್ಯಾಲಯಗಳಲ್ಲಿ ಪ್ರವೇಶ ಪಡೆಯಬೇಕೆನ್ನುವುದು ನಮ್ಮ ಸಂಸ್ಥೆಯ ಮಹದಾಶಯ. ಈ ನಿಟ್ಟಿನಲ್ಲಿ ಈಗ ಪುರಸ್ಕೃತರಾದ ವಿದ್ಯಾರ್ಥಿಗಳು ಮತ್ತು ಮುಂಬರುವ ವರ್ಷಗಳಲ್ಲಿ ಪಿ.ಯು.ಸಿ ಹಂತವನ್ನು ಮುಗಿಸುವ ವಿದ್ಯಾರ್ಥಿಗಳಿಗೆ ಒಳ್ಳೆಯ ಶೈಕ್ಷಣಿಕ ಪ್ರಗತಿಯ ಹೆಜ್ಜೆಗಳತ್ತ ಸಾಗಿಸುವ ಪ್ರಯತ್ನ ಯಶಸ್ವಿಯಾಗಿ ಸಾಗುತ್ತಿದೆ ” ಎಂದು ಕಾಲೇಜಿನ ಸಂಚಾಲಕರಾದ ಬಿ. ಎಮ್. ಸುಕುಮಾರ ಶೆಟ್ಟಿ ಹೇಳಿದರು. ಅವರು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ 2023-24 ನೇ ಶೈಕ್ಷಣಿಕ ವರ್ಷದಲ್ಲಿ ಡಿಸ್ಟಿಂಕ್ಷನ್ ದರ್ಜೆಯಲ್ಲಿ ಪಾಸಾದ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳನ್ನು ಅಭಿನಂದಿಸಲು ಹಮ್ಮಿಕೊಂಡ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಸನ್ಮಾನಿಸಿದ ಬಳಿಕ ಮಾತನಾಡಿದರು. ಕಾಲೇಜಿನ ಆಡಳಿತ ಮಂಡಳಿ ಕುಂದಾಪುರ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿಯವರಾದ ಸೀತಾರಾಮ ನಕ್ಕತ್ತಾಯ ಇವರು ಪುರಸ್ಕ್ರತ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾಲೇಜಿನ ಉಪಪ್ರಾಂಶುಪಾಲರಾದ ಪ್ರೀತೇಶ್ ಶೆಟ್ಟಿ ಅವರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಾರಾಹಿ ಯೋಜನೆಯ ಮಾನಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆಯಾಗುತ್ತಿದ್ದು ಜಲಾಶಯಕ್ಕೆ ಹೇರಳವಾಗಿ ನೀರು ಹರಿದು ಬರುತ್ತಿದೆ. ಆದುದರಿಂದ ಅಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ವಾರಾಹಿ/ಹಾಲಾಡಿ ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರುಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿಕೊಳ್ಳಬೇಕೆಂದು ಕರ್ನಾಟಕ ವಿದ್ಯುತ್ ನಿಗಮದ ಕಾರ್ಯನಿರ್ವಾಹಕ ಅಭಿಯಂತರು ಸೂಚನೆ ನೀಡಿದ್ದಾರೆ. ಸತತವಾಗಿ ಬೀಳುತ್ತಿರುವ ಮಳೆಯಿಂದ ಜಲಾಶಯದ ನೀರಿನ ಮಟ್ಟವು ಏಕ ಪ್ರಕಾರವಾಗಿ ಏರುತ್ತಿದೆ. ಮಾನಿ ಜಲಾಶಯದ ಗರಿಷ್ಟ ಮಟ್ಟವು 594.36 ಮೀಟರ್ ಆಗಿದೆ. ಆ.5ರಂದು ಬೆಳಗ್ಗೆ 8ಗಂಟೆಗೆ ಜಲಾಶಯದ ಮಟ್ಟವು 588.15 (ಶೇ.65.17) ಮೀಟರ್‌ಗಳಾಗಿರುತ್ತದೆ. ಈ ದಿನದ ಮಾನಿ ಜಲಾಶಯದ ಒಳಹರಿವು ಸುಮಾರು 3393 ಕ್ಯುಸೆಕ್ಸ್ ಆಗಿದೆ. ಇದೇ ರೀತಿ ಜಲಾಶಯಕ್ಕೆ ಒಳಹರಿವು ಮುಂದುವರಿದಲ್ಲಿ ಜಲಾಶಯವು ಗರಿಷ್ಠ ಮಟ್ಟವನ್ನು ತಲುಪುವ ಸಾಧ್ಯತೆ ಇರುತ್ತದೆ. ಮಾನಿ ಅಣೆಕಟ್ಟಿನ ಸುರಕ್ಷತಾ ದೃಷ್ಟಿಯಿಂದ ಯಾವುದೇ ಸಮಯದಲ್ಲಿ ಹೆಚ್ಚಾದ ನೀರನ್ನು ಹೊರಬಿಡಲಾಗುವುದು ಎಂದು ಕರ್ನಾಟಕ ವಿದ್ಯುತ್ ನಿಗಮದ ಕಾರ್ಯನಿರ್ವಾಹಕ ಅಭಿಯಂತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ಸುಮಾರು 25 ವರ್ಷಗಳ ಕಾಲ ಸೇವೆ ಸಲ್ಲಿಸಿ ತ್ರಾಸಿ ಶಾಖೆಯಲ್ಲಿ ನಿವೃತ್ತಿ ಹೊಂದಿದ ತಿಲೋತ್ತಮೆ ಅವರಿಗೆ ಬೀಳ್ಕೊಡುಗೆ ಸಮಾರಂಭ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ತ್ರಾಸಿ ಶಾಖೆಯಲ್ಲಿ ನಡೆಯಿತು. ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಸ್. ರಾಜು ಪೂಜಾರಿ ಅಧ್ಯಕ್ಷತೆ ವಹಿಸಿ, ಸಮ್ಮಾನಿಸಿ, ಮುಂದಿನ ಜೀವನಕ್ಕೆ ಶುಭ ಹಾರೈಸಿದರು. ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪ್ಪುಂದ ಶಾಖೆಯ ಸೀನಿಯರ್ ಮ್ಯಾನೇಜರ್ ಶಂಕರ ಶೆಟ್ಟಿ ಅಭಿನಂದನ ಭಾಷಣ ಮಾಡಿದರು. ವಲಯ ಮೇಲ್ವಿಚಾರಕ ಶಿವರಾಮ ಪೂಜಾರಿ, ಸಂದೀಪ ಶೆಟ್ಟಿ ಮರವಂತೆ – ಬಡಾಕೆರೆ ವಿಎಸ್‌ಎಸ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ ಅಳಗದ್ದೆ ಬೈಂದೂರು ಶಾಖೆಯ ವ್ಯವಸ್ಥಾಪಕ ವೆಂಕಟೇಶ ಬಿಲ್ಲವ, ನೇರಳಕಟ್ಟೆ ಶಾಖೆಯ ವ್ಯವಸ್ಥಾಪಕ ಸತೀಶ ಶೆಟ್ಟಿ, ನಾಗೂರು ಶಾಖೆಯ ವ್ಯವಸ್ಥಾಪಕ ವಿಜಯ ಕುಮಾರ ಶೆಟ್ಟಿ, ಗಂಗೊಳ್ಳಿ ಶಾಖೆಯ ವ್ಯವಸ್ಥಾಪಕ ಸುಬ್ರಹ್ಮಣ್ಯ, ತಲ್ಲೂರು ಶಾಖೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಕನ್ನಡ ಬದುಕಿನೊಂದಿಗೆ ಬೆಸೆದ ಭಾಷೆಯಾಗಿದೆ. ಅವರು ತಮ್ಮ ತಾಯಿಗೆ ನೀಡುವಷ್ಟೇ ಗೌರವವನ್ನು ತಮ್ಮ ಭಾಷೆ ನೀಡುತ್ತಾರೆ. ನಮ್ಮ ಭಾಷೆಯ ಮಹತ್ವ ತಿಳಿದುಕೊಂಡು ಪ್ರತಿಯೊಬ್ಬರೂ ವ್ಯವಹರಿಸಬೇಕು ಎಂದು ಚಿತ್ರ ನಟ ರಮೇಶ್ ಭಟ್ ಹೇಳಿದರು. ಅವರು ಟೀಂ ಕುಂದಾಪುರಿಯನ್ಸ್ ತಂಡದಿಂದ ಭಾನುವಾರ ಬಸವೇಶ್ವರ ನಗರದ ನೇತಾಜಿ ಮೈದಾನದಲ್ಲಿ ಹಮ್ಮಿಕೊಂಡ ವಿಶ್ವ ಕುಂದಾಪುರ ಕನ್ನಡ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಕುಂದಾಪ್ರ ಕನ್ನಡವು ಬದುಕಿನ ಭಾಷೆಯೇ ಹೊರತು ಉದ್ಯಮದ ಭಾಷೆಯಲ್ಲ. ಹಾಗಾಗಿ ಇಂದಿಗೂ ಕುಂದಾಪುರ ಭಾಷೆ ಜೀವಂತವಾಗಿದೆ. ನಾವು ಎಷ್ಟೇ ದೊಡ್ಡ ವ್ಯಕ್ತಿಗಳಾದರೂ ಮಾತೃ ಭಾಷೆ ಹಾಗೂ ಮನೆಯ ಮೂಲ ಭಾಷೆ ಮರೆಯಬಾರದು ಎಂದರು. ಕಾರ್ಯಕ್ರಮದಲ್ಲಿ ಕುಂದಾಪುರ ರತ್ನ ಪ್ರಶಸ್ತಿ ಕಲೆ ಮತ್ತು ಸಂಸ್ಕೃತಿ ವಿಭಾಗದಲ್ಲಿ ಸಾಧನೆ ಮಾಡಿದ ಅರೆಹೊಳೆ ಸದಾಶಿವ ರಾವ್, ಚಿತ್ರ ನಿರ್ದೇಶಕ ಯಾಕುಬ್ ಖಾದರ್ ಅವರಿಗೆ ನೀಡಿ ಗೌರವಿಸಲಾಯಿತು. ‘ಕುಂದಾಪುರ ಸಮ್ಮಾನ’ ಗೌರವವನ್ನು ಯಕ್ಷಗಾನ ಕಲಾವಿದ ಶ್ರೀನಿವಾಸ ಸಾಸ್ತಾನ, ಗೌರಿ ಕೆ., ಮುಳುಗುತಜ್ಞ ಮಂಜುನಾಥ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕುಂದಾಪ್ರ ಕನ್ನಡ ಭಾಷೆ ಆಡುಮಾತಿನಲ್ಲಿ ಮಾತ್ರವೇ ಉಳಿಯದೇ ದಾಖಲೀಕರಣದತ್ತ ಶ್ರಮವಹಿಸಿದಾಗ ಹೆಚ್ಚಿನ ಪ್ರಾಧಾನ್ಯತೆ ದೊರೆಯುತ್ತದೆ. ಯಾವುದೇ ಭಾಷೆಗೆ ಶಾಸ್ತ್ರೀಯ ತಳಗಟ್ಟು ದೊರೆತಾಗ ಇನ್ನಷ್ಟು ಗಟ್ಟಿಯಾಗುತ್ತದೆ ಎಂದು ಹಿರಿಯ ಸಾಹಿತಿ ಉಪ್ಪುಂದ ಚಂದ್ರಶೇಖರ ಹೊಳ್ಳ ಹೇಳಿದರು. ಅವರು ಕುಂದ ಅಧ್ಯಯನ ಕೇಂದ್ರ ಉಪ್ಪುಂದ, ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ಹಾಗೂ ಕುಂದಾಪ್ರ ಡಾಟ್ ಕಾಂ ನ್ಯೂಸ್ ಪೋರ್ಟೆಲ್ ಸಹಯೋಗದೊಂದಿಗೆ ಭಾನುವಾರ ಉಪ್ಪುಂದ ಶಂಕರ ಕಲಾಮಂದಿರದಲ್ಲಿ ಆಯೋಜಿಸಲಾದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಹಣ, ಪ್ರತಿಷ್ಠೆ, ಅಧಿಕಾರವೇ ಪ್ರಧಾನವಾಗಿರುವ ಹಾಗೂ ಅದಕ್ಕಾಗಿಯೇ ಸಾಂಸ್ಕೃತಿಕ ನಾಯಕರಂತೆ ಬಿಂಬಿಸಿಕೊಳ್ಳುವ ಈ ಕಾಲಘಟ್ಟದಲ್ಲಿ ನಶಿಸುತ್ತಿರುವ ಕಲೆ, ಸಂಸ್ಕೃತಿ, ಸಂಪ್ರದಾಯಗಳ ಪುನರುತ್ಥಾನಕ್ಕೆ ಶ್ರಮಿಸುವ ವ್ಯಕ್ತಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಬೇಕಿದೆ ಎಂದರು. ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ಮಾತನಾಡಿ, ಕುಂದಾಪ್ರ ಕನ್ನಡ ಬದುಕಿನೊಂದಿಗೆ ಬೆಸೆದುಕೊಂಡಿದೆ. ನಮ್ಮ ಪ್ರಧಾನ ಕಾಯಕವಾದ ಕೃಷಿಯಲ್ಲಿ, ಮೀನುಗಾರಿಕೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೇಂದ್ರ ಸರ್ಕಾರವು ಗರ್ಭಿಣಿ ಹಾಗೂ ಬಾಣಂತಿ ಮಹಿಳೆಯರಿಗಾಗಿ ಜಾರಿಗೊಳಿಸಿರುವ ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯ ಪ್ರಯೋಜನವು ಮೊದಲ ಎರಡು ಜೀವಂತ ಮಕ್ಕಳಿಗೆ ಲಭ್ಯವಾಗಲಿದ್ದು, ಎರಡನೇ ಮಗುವು ಹೆಣ್ಣು ಮಗುವಾಗಿರಬೇಕು. ಮೊದಲ ಮಗುವಿಗೆ ಎರಡು ಕಂತುಗಳಲ್ಲಿ 5,000 ರೂ. ಹಾಗೂ ಎರಡನೇ ಮಗು ಹೆಣ್ಣು ಮಗುವಾದಲ್ಲಿ 6,000 ರೂ. ಗಳನ್ನು ಜನನದ ನಂತರ ಒಂದೇ ಕಂತಿನಲ್ಲಿ ನೇರ ನಗದು ವರ್ಗಾವಣೆ ಮೂಲಕ ಫಲಾನುಭವಿಯ ಖಾತೆಗೆ ವರ್ಗಾಯಿಸಲಾಗುವುದು. ಈ ಯೋಜನೆಯ ನೊಂದಾವಣೆಗೆ ಸಮೀಪದ ಅಂಗನವಾಡಿ ಕಾರ್ಯಕರ್ತೆಯರನ್ನು ಹಾಗೂ ಹೆಚ್ಚಿನ ಮಾಹಿತಿಗಾಗಿ ಕಾರ್ಕಳ, ಕುಂದಾಪುರ, ಉಡುಪಿ ಹಾಗೂ ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ ಮಂಗಳೂರು, ಜುಲೇಖಾ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಒಂಕೋಲಜಿ ಮಂಗಳೂರು ಮತ್ತು ಸೋಶಿಯಲ್ ವೆಲ್ಫೇರ್ ಫೆಡರೇಶನ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ತೌಹೀದ್ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಭಾನುವಾರ ನಡೆಯಿತು. ಸೋಶಿಯಲ್ ವೆಲ್ಫೇರ್ ಫೆಡರೇಶನ್ ಗಂಗೊಳ್ಳಿ ಇದರ ಅಧ್ಯಕ್ಷ ಅಬ್ದುಲ್ ರಶೀದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಜಾಮೀಯಾ ಮಸೀದಿ ಅಧ್ಯಕ್ಷ ಮಹಮ್ಮದ್ ಹನೀಫ್, ತೌಹೀದ್ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ತಾಹೀರ್ ಹಸನ್, ಸೋಶಿಯಲ್ ವೆಲ್ಫೇರ್ ಫೆಡರೇಶನ್ ಉಪಾಧ್ಯಕ್ಷ ಅಯೂಬ್ ಬೆದ್ರೆ, ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯ ತಜ್ಞ ವೈದ್ಯರಾದ ಡಾ. ಶುಭಾಂಕರ ಮತ್ತು ಡಾ. ಪ್ರವೀಣಾ ಜಿ. ಉಪಸ್ಥಿತರಿದ್ದರು. ಸೋಶಿಯಲ್ ವೆಲ್ಫೇರ್ ಫೆಡರೇಶನ್‌ನ ಮಹಮ್ಮದ್ ಜಲಾಲ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ವನಾಜ್ ಮಾರಿ ಕಿರಾತ್ ಪಠಿಸಿದರು. ಜಫ್ರಿ ಎಂ. ಎಚ್. ವಂದಿಸಿದರು. ಶಿಬಿರದಲ್ಲಿ ಸಾಮಾನ್ಯ ವೈದ್ಯಕೀಯ ಪರೀಕ್ಷೆ, ನೇತ್ರ ತಪಾಸಣೆ, ದಂತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೇಂದ್ರ ಸರ್ಕಾರದ ಪ್ರಾಯೋಜಿತ ಯೋಜನೆಗಳಾದ ಪ್ರಧಾನಮಂತ್ರಿ ವಿಶ್ವಕರ್ಮ, ಸೂರ್ಯ ಘರ್ ಹಾಗೂ ಕಿಸಾನ್ ಸಮ್ಮಾನ್ ಯೋಜನೆಗಳನ್ನು ಸಮರ್ಪಕವಾಗಿ ಪ್ರತಿಷತಃ ನೂರರಷ್ಟು ಅನುಷ್ಠಾನಗೊಳಿಸಬೇಕು ಎಂದು ಅಧಿಕಾರಿಗಳಿಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿಯಲ್ಲಿ ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್, ವಿಶ್ವಕರ್ಮ ಯೋಜನೆ ಮತ್ತು ಸೂರ್ಯ ಘರ್ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನಸಾಮಾನ್ಯರ ಅನುಕೂಲಕ್ಕಾಗಿ ಸರ್ಕಾರ ಯೋಜನೆಗಳನ್ನು ಜಾರಿಗೆ ತರುತ್ತವೆ. ಇವುಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಿ, ಅವುಗಳ ಫಲಾನುಭವಿಗಳನ್ನಾಗಿಸುವ ಕಾರ್ಯವನ್ನು ಅಧಿಕಾರಿಗಳು ಸಮರ್ಪಕವಾಗಿ ಮಾಡಿದಾಗ ಮಾತ್ರ ಅವು ಜನರಿಗೆ ತಲುಪುತ್ತವೆ ಎಂದರು. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ರೈತರಿಗೆ ಕೃಷಿ ಚಟುವಟಿಕೆಯಲ್ಲಿ ಉತ್ತಮ ಪರಿಕರಣಗಳನ್ನು ಬಳಸಿ, ಬೆಳೆಗಳ ಆರೋಗ್ಯ ನಿರ್ವಹಣೆ ಮಾಡಿ, ಉತ್ತಮ ಇಳುವರಿ ಪಡೆಯುವುದರೊಂದಿಗೆ ಹೆಚ್ಚಿನ ಆರ್ಥಿಕ ಲಾಭ ಪಡೆಯಬೇಕು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪ್ರಶಸ್ತಿ ಯೋಜನೆಯನ್ನು ಆರಂಭಿಸಲಾಗಿದ್ದು, ಮುಂಗಾರು ಭತ್ತದ ಬೆಳೆಗೆ ರೈತರು ಹಾಗೂ ರೈತ ಮಹಿಳೆಯರಿಂದ ಬೆಳೆ ಸ್ಪರ್ಧೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್‌ನಲ್ಲಿ ನೂತನವಾಗಿ ಕೃಷಿ ಪ್ರಶಸ್ತಿಗೆ ಅರ್ಜಿ ನಮೂನೆಯನ್ನು ಅಳವಡಿಸಲಾಗಿದ್ದು, ಸಿಟಿಝನ್ ಲಾಗಿನ್ ಅಥವಾ ಆರ್.ಎಸ್.ಕೆ ಲಾಗಿನ್ ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸೇವಾ ಕೇಂದ್ರದಲ್ಲಿ ಆಸಕ್ತ ರೈತ ಹಾಗೂ ರೈತ ಮಹಿಳೆಯರು ಪ್ರತ್ಯೇಕವಾಗಿ ಅಗತ್ಯ ಮಾಹಿತಿಯೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
