ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೆಳ್ವೆಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಬೈಕ್ ಸವಾರನಿಗೆ ಲಾರಿ ಡಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಹೈಕಾಡಿಯಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ಬೆಳ್ವೆ ನಿವಾಸಿ ನಾಗರಾಜ್ (40) ಎಂದು ಗುರುತಿಸಲಾಗಿದೆ. ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸಮೇತ ರಸ್ತೆಗೆ ಬಿದ್ದ ನಾಗರಾಜ್ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಶಂಕರ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶಿಕ್ಷಣಕ್ಕೆ ಪೂರಕವಾದ ವಾತಾವರಣವನ್ನು ನಿರ್ಮಿಸಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳಲ್ಲಿ ನೀಡಲಾಗುತ್ತಿದೆ. ಶಿಕ್ಷಣಕ್ಕೆ ಪ್ರಥಮ ಆದ್ಯತೆ ಎಂಬ ನೆಲೆಯಲ್ಲಿ ಪೋಷಕರಿಗೆ ಹೊರೆಯಾಗದಂತೆ ಶುಲ್ಕವನ್ನು ನಿಗದಿಪಡಿಸಲಾಗಿದೆ. ಪಾಠೇತರ ಚಟುವಟಿಕೆಗಳಿಗೂ ಹೆಚ್ಚಿನ ಅವಕಾಶ ನೀಡಲಾಗುತ್ತಿದೆ ಎಂದು ಗಂಗೊಳ್ಳಿ ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳ ಸಂಚಾಲಕ ಎನ್. ಸದಾಶಿವ ನಾಯಕ್ ಹೇಳಿದರು. ಗಂಗೊಳ್ಳಿಯ ಸ. ವಿ. ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಜರುಗಿದ ಗಂಗೊಳ್ಳಿ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆಯ 2024-25ನೇ ಸಾಲಿನ ಶಿಕ್ಷಕ – ರಕ್ಷಕ ಸಮಿತಿ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿ, ಕಳೆದ ವರ್ಷ ಅನೇಕ ವಿದ್ಯಾರ್ಥಿಗಳು ರಾಜ್ಯ ಮಟ್ಟವನ್ನು ಪ್ರತಿನಿಧಿಸಿದ್ದಾರೆ. ಸರಕಾರದ ಮಾನದಂಡ ಹಾಗೂ ಮಾರ್ಗಸೂಚಿಯಂತೆ ಮಕ್ಕಳ ಕಲಿಕಾ ಅಭಿವೃದ್ಧಿಗೆ ಶಾಲೆಯ ಆಡಳಿತ ಮಂಡಳಿ ಶ್ರಮಿಸುತ್ತಿದ್ದು, ಶಾಲೆಯ ಹಳೆ ವಿದ್ಯಾರ್ಥಿಗಳು ಹಾಗೂ ಪೋಷಕರು ಬೆನ್ನೆಲುಬಾಗಿ ನಿಂತು ಶಾಲೆಯ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದರು. ಶಾಲೆಯ ಮುಖ್ಯ ಶಿಕ್ಷಕ ರಾಘವೇಂದ್ರ ಶೇರುಗಾರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಈ ವರ್ಷದ ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿಯು ಕತೆಗಾರ ದಯಾನಂದ ಅವರ “ಬುದ್ಧನ ಕಿವಿ” ಕಥಾ ಸಂಕಲನಕ್ಕೆ ದೊರೆತಿದೆ. ಬೆಂಗಳೂರಿನಲ್ಲಿ ಮಾಧ್ಯಮ ಅಧ್ಯಾಪಕರಾಗಿ ಕಾರ್ಯನಿರ್ವಸುತ್ತಿರುವ ಅವರು ಕತೆಗಳು ಈಗಾಗಲೇ ಅಪಾರ ಓದುಗರ ಪ್ರೀತಿ ಮತ್ತು ವಿಮರ್ಶಕರ ಮೆಚ್ಚುಗೆಗಳನ್ನು ಪಡೆದಿವೆ. ಹಿರಿಯ ಲೇಖಕರಾದ ಎಚ್. ಆರ್. ಸುಜಾತ, ಗೊರವರ ಟಿ. ಎಸ್. ಗದಗ ಮತ್ತು ಫಣಿರಾಜ್, ಉಡುಪಿ ಇವರು ನಿರ್ಣಾಯಕರಾಗಿ ಸಹಕರಿಸಿರುತ್ತಾರೆ. ಪ್ರಶಸ್ತಿಯು ಹದಿನೈದು ಸಾವಿರ ರೂಪಾಯಿ ಹಾಗೂ ಬೆಳ್ಳಿಯ ಪ್ರಶಸ್ತಿ ಫಲಕವನ್ನೊಳಗೊಂಡಿದೆ. ಮುಂದಿನ ದಿನಗಳಲ್ಲಿ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆಯುವ ಸಾಹಿತ್ಯ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಸಮಿತಿಯ ಪ್ರಕಟಣೆ ತಿಳಿಸಿದೆ. ದಯಾನಂದ ಅವರ ಪರಿಚಯ:ದಯಾನಂದ ಅವರು ಹುಟ್ಟಿದ್ದು 1988ರ ಅಂಬೇಡ್ಕರ್ ಜಯಂತಿಯಂದು ನಾಗಮಂಗಲ ತಾಲ್ಲೂಕಿನ ಬೆಳ್ಳೂರು, ಓದಿ ಬೆಳೆದಿದ್ದು ಬೆಂಗಳೂರಿನಲ್ಲಿ. ಕನ್ನಡ ಸಾಹಿತ್ಯ, ಇಂಗ್ಲಿಷ್ ಸಾಹಿತ್ಯ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. ‘ಸಮಯ ಟಿವಿ’, ‘ಪ್ರಜಾವಾಣಿ’ ಮತ್ತು ‘ಸಮಾಚಾರ. ಕಾಂ’ ಸುದ್ದಿ ಸಂಸ್ಥೆಗಳಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಇದರ ವತಿಯಿಂದ ಕಾರ್ಗಿಲ್ ವಿಜಯೋತ್ಸವದ ಪ್ರಯುಕ್ತ ಗಂಗೊಳ್ಳಿಯ ಸ. ವಿ. ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇಶದ ಗಡಿ ಭದ್ರತಾ ಪಡೆಯ ನಿವೃತ್ತ ಯೋಧ ಗಣಪತಿ ಖಾರ್ವಿ ಬಸ್ರೂರು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಚಂದ್ರಕಲಾ ತಾಂಡೇಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಗಿಲ್ನಲ್ಲಿ ಹುತಾತ್ಮರಾದ ಯೋಧರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ದೀಪ ಬೆಳಗಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ನಿಕಟಪೂರ್ವ ಅಧ್ಯಕ್ಷ ಎಂ. ನಾಗೇಂದ್ರ ಪೈ, ಮಾಜಿ ಅಧ್ಯಕ್ಷರಾದ ಉಮೇಶ್ ಎಲ್. ಮೇಸ್ತ, ವಾಸುದೇವ ಶೇರುಗಾರ್, ಜನಾರ್ದನ ಪೂಜಾರಿ ಪೆರಾಜೆ, ದಯಾನಂದ ಗಾಣಿಗ, ಪ್ರದೀಪ ಡಿ. ಕೆ., ಬಿ. ಲಕ್ಷ್ಮೀಕಾಂತ ಮಡಿವಾಳ, ಸುಗುಣಾ ಆರ್. ಕೆ., ರೋಟರಿ ಪದಾಧಿಕಾರಿಗಳು ಹಾಗೂ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷ ಕೆ. ರಾಮನಾಥ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಮಾಲಾಶ್ರೀ ಖಾರ್ವಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ಶಿಕ್ಷಣ ಕ್ಷೇತ್ರದಲ್ಲಿ ನಾಟಕ ಮತ್ತು ಕಲೆ ಕೇವಲ ಪಠ್ಯೇತರ ಚಟುವಟಿಕೆಗಳಲ್ಲ. ಬದಲಾಗಿ ಅವು ಸೃಜನಶೀಲತೆ, ಬೌದ್ಧಿಕ ಬೆಳವಣಿಗೆಯನ್ನು ಅಭಿವೃದ್ಧಿ ಪಡಿಸಲಿರುವ ಪ್ರಬಲ ಸಾಧನಗಳಾಗಿವೆ ಎಂದು ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಜೀವನ್ರಾಮ್ ಸುಳ್ಯು ತಿಳಿಸಿದರು. ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯ ಶಿವರಾಮ ಕಾರಂತ ಸಭಾಭವನದಲ್ಲಿ ಹಮ್ಮಿಕೊಂಡ ’ಶಿಕ್ಷಣದಲ್ಲಿ ಕಲೆ ಹಾಗೂ ನಾಟಕದ ಪಾತ್ರ’ದ ಕುರಿತು ಕಾರ್ಯಗಾರದಲ್ಲಿ ಮಾತನಾಡಿದರು. ಶಿಕ್ಷಣದಲ್ಲಿ ಕಲೆಯನ್ನು ರೂಢಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳನ್ನು ಸೃಜನಶೀಲರನ್ನಾಗಿ ಮಾಡಲು ಸಾಧ್ಯವಾಗುತ್ತದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಸ್ವಯಂ ಅಭಿವ್ಯಕ್ತಿ ಮತ್ತು ಸಂವಹನಕ್ಕಾಗಿ ಮೌಲ್ಯಯುತವಾದ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ಶಿಕ್ಷಣದಲ್ಲಿ ನೃತ್ಯ, ಸಂಗೀತ, ನಾಟಕ, ಸೃಜನಶೀಲ ಬರವಣಿಗೆ, ರಂಗಭೂಮಿ ಇತ್ಯಾದಿಗಳನ್ನು ಒಳಗೊಂಡಿರಬೇಕು. ನಾಟಕಗಳು ನಮ್ಮ ಸುತ್ತಮುತ್ತಲಿನ ಸುಂದರ ದೃಶ್ಯಗಳನ್ನು ನಮ್ಮ ಕಣ್ಣ ಮುಂದೆ ಸೃಷ್ಟಿಸುವುದರಿಂದ ವಿದ್ಯಾರ್ಥಿಗಳಿಗೆ ಬಹುಬೇಗನೆ ಅರ್ಥೈಸಿಕೊಳ್ಳಲು ಸಾಧ್ಯವಾಗುತ್ತದೆ. ಕಲೆಗಳು ವಿದ್ಯಾರ್ಥಿಗಳ ಬೌದ್ಧಿಕ ಮಟ್ಟವನ್ನು ಸುಧಾರಿಸಲು ಸಹಾಯಕ. ಪ್ರದರ್ಶನದ ಕಲೆಗಳು ಮಕ್ಕಳಲ್ಲಿ ತಮ್ಮ ಭಾವನೆ ಮತ್ತು ಕಲ್ಪನೆಗಳನ್ನು ಹಾಗೂ ತಮ್ಮದೇ ಆದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಪ್ರಕಟಿಸುತ್ತಾ ಬಂದಿದ್ದು, ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದಾಗಿದೆ. ಸ್ವಾತಂತ್ರ ದಿನಾಚರಣೆಯ ಅಂಗವಾಗಿ ಪ್ರಸಕ್ತ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ, ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ, ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ವತಿಯಿಂದ ಜಿಲ್ಲಾ ವಲಯ ಯೋಜನೆಯಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬಾವಿ ಮತ್ತು ಹೊಂಡಗಳಲ್ಲಿ ಮೀನು ಕೃಷಿಗೆ ಸಹಾಯ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಮೀನುಗಾರರಿಗೆ ಉಚಿತವಾಗಿ ಮೀನುಗಾರಿಕಾ ಸಲಕರಣೆ ಕಿಟ್ಟುಗಳ ವಿತರಣೆ ಮತ್ತು ಮೀನುಗಾರಿಕೆಯಲ್ಲಿ ಅನುಭವ ಹೊಂದಿರುವ ಅರ್ಹ ಸಾಮಾನ್ಯ ವರ್ಗ, ಮಹಿಳೆಯರಿಗೆ, ಅಲ್ಪಸಂಖ್ಯಾತರಿಗೆ ಮತ್ತು ಅಂಗವಿಕಲರಿಗೆ ಮೀನು ಮಾರಾಟಕ್ಕೆ ದ್ವಿಚಕ್ರ ಮತ್ತು ತ್ರಿಚಕ್ರ ವಾಹನ ಖರೀದಿಗೆ ಸಹಾಯ ಮತ್ತು ರಾಜ್ಯ ವಲಯ ಯೋಜನೆಯಡಿ ಕರಾವಳಿ ತಾಲೂಕುಗಳ ಅರ್ಹ ಫಲಾನುಭವಿಗಳಿಗೆ ಜೀವರಕ್ಷಕ ಸಾಧನ, ಹೆಬ್ರಿ ಮತ್ತು ಕಾರ್ಕಳ ತಾಲೂಕುಗಳ ಫಲಾನುಭವಿಗಳಿಗೆ ಮೀನುಗಾರಿಕೆ ಹಾಗೂ ಮೀನು ಮಾರಾಟ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸುವುದು, ಸಿಗಡಿ ಮತ್ತು ಹಿನ್ನೀರು ಮೀನು ಕೃಷಿಗೆ ಪ್ರೋತ್ಸಾಹ, ಪರಿಶಿಷ್ಟ ಜಾತಿಯ ಅರ್ಹ ಫಲಾನುಭವಿಗಳಿಗೆ ಎಫ್. ಆರ್. ಪಿ ಪಾತಿದೋಣಿ ಮತ್ತು ಜೀವ ರಕ್ಷಕ ಸಾಧನಗಳನ್ನು ಉಚಿತವಾಗಿ ನೀಡುವ ಯೋಜನೆಗಳನ್ನು ಪಾರದರ್ಶಕವಾಗಿ ಹಾಗೂ ಯಶಸ್ವಿಯಾಗಿ ಅನುಷ್ಠಾನಗೊಳಿಸಲು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಗುವಿನ ಜನನದ ಕೆಲವು ಗಂಟೆಗಳು ಗೊಲ್ಡನ್ ಅವರ್ ಆಗಿದ್ದು ಈ ವೇಳೆ ತಾಯಂದಿರು ಸ್ತನಪಾನ ಮಾಡುವುದು ಬಹಳ ಮುಖ್ಯ ಎಂದು ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ವೈದ್ಯೆ, ಮಕ್ಕಳ ತಜ್ಞೆ ಡಾ. ನಂದಿನಿ ಹೇಳಿದರು. ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮುದಾಯ ಆರೋಗ್ಯ ಕೇಂದ್ರ ಬೈಂದೂರು ನೇತೃತ್ವದಲ್ಲಿ, ರೋಟರಿ ಕ್ಲಬ್ ಬೈಂದೂರು, ಇನ್ನರ್ ವೀಲ್ ಕ್ಲಬ್ ಬೈಂದೂರು ಸಹಯೋಗದೊಂದಿಗೆ ಆಯೋಜಿಸಲಾದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಗುವಿನ ಜನನದ ದಿನದಿಂದ ನಿಯಮಿತವಾಗಿ ಸ್ತನಪಾನ ಮಾಡುವುದರಿಂದ ತಾಯಿಯೊಂದಿಗೆ ಮಗುವಿನ ಭಾಂದವ್ಯ ವೃದ್ಧಿಯ ಜೊತೆಗೆ ಆರೋಗ್ಯವೂ ವೃದ್ಧಿಯಾಗುತ್ತದೆ. ಎದೆಹಾಲು ಕುಡಿದ ಮಕ್ಕಳು ಆರೋಗ್ಯವಂತರಾಗಿರುವುದಲ್ಲದೇ ಬುದ್ಧಿವಂತರು, ಮನೋಸ್ಥೈರ್ಯ ಹೊಂದಿರುವವರು ಆಗಿರುತ್ತಾರೆ ಎಂದು ಸಂಶೋಧನೆಗಳು ಹೇಳುತ್ತವೆ. ಮಹಿಳೆ ಗರ್ಭಿಣಿಯಾದ ದಿನದಿಂದ ಹೆರಿಗೆಯ ತನಕವೂ ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರಿಂದ ಸೂಕ್ತ ಮಾರ್ಗದರ್ಶನ ಪಡೆಯಲು ಅವಕಾಶವಿದೆ ಎಂದರು. ಕಾರ್ಯಕ್ರಮದಲ್ಲಿ ಬೈಂದೂರು ರೋಟರಿ ಕ್ಲಬ್ ಪೂರ್ವಾಧ್ಯಕ್ಷರಾದ ಐ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಚುನಾವಣೆಯಲ್ಲಿ ಅಭಿವೃದ್ಧಿ ಕನಸಿನ ಗೋಪುರ ಕಟ್ಟಿದ ಶಾಸಕ ಗುರುರಾಜ್ ಗಂಟಿಹೊಳೆಯವರು ಚುನಾವಣೆ ನಂತರ ಕ್ಷೇತ್ರದ ಅಭಿವೃದ್ಧಿಯನ್ನು ಸಂಪೂರ್ಣ ಮರೆತಿದ್ದಾರೆ. ಈಗ ಜನತೆ ಅಭಿವೃದ್ಧಿಯ ಬಗ್ಗೆ ಮಾತನಾಡಿದರೆ ರಾಜ್ಯ ಸರ್ಕಾರ ಅನುದಾನ ನೀಡುವುದಿಲ್ಲ ಎನ್ನುವುದು ಜನಪ್ರತಿನಿಧಿಯ ವೈಫಲ್ಯವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ ಆರೋಪಿಸಿದ್ದಾರೆ. ಶಾಸಕರಾದ ಗುರುರಾಜ ಗಂಟಿಹೊಳೆ ಹಾಗೂ ಸಂಸದರಾದ ಬಿ.ವೈ. ರಾಘವೇಂದ್ರ ಅವರಿಗೆ ಅಭಿವೃದ್ಧಿಯ ಬಗ್ಗೆ ಚಿಂತನೆ ಇದ್ದಿದ್ದರೆ ಮೂರು ಅವಧಿಯಿಂದ ಕೇಂದ್ರದಲ್ಲಿ ಇವರದ್ದೇ ಸರ್ಕಾರವಿದೆ. ಸತತವಾಗಿ ಶಿವಮೊಗ್ಗ ಕ್ಷೇತ್ರದ ಸಂಸದರಾಗಿ ಬಿ. ವೈ ರಾಘವೇಂದ್ರ ಆಯ್ಕೆಯಾಗುತ್ತಿದ್ದಾರೆ. ಆದರೆ ಇವರಿಬ್ಬರು ಅಭಿವೃದ್ಧಿಯ ಕೇವಲ ಮನವಿ ಕೊಟ್ಟು ಅದರ ಫೋಟೋ ಹಾಕಿ ಪ್ರಚಾರ ಪಡೆಯಲು ಮಾತ್ರ ಸೀಮಿತವಾಗಿದ್ದಾರೆ ಎಂದು ಟೀಕಿಸಿದ್ದಾರೆ. ಕೇಂದ್ರ ಬಜೆಟ್ನಲ್ಲಿ ರಾಜ್ಯಕ್ಕೆ ಆದ ಘೋರ ಅನ್ಯಾಯದ ಬಗ್ಗೆ ಇವರು ಮಾತನಾಡುತ್ತಿಲ್ಲ. ನೆರೆಯಿಂದ ಸಂಪೂರ್ಣ ಬೈಂದೂರು ಕ್ಷೇತ್ರದ ಜನತೆ ತತ್ತರಿಸಿ ಹೋಗಿದ್ದಾರೆ. ಕೃಷಿ ಸಂಪೂರ್ಣ ಹಾಳಾಗಿದೆ, ಮೀನುಗರಾರು, ಮೂರ್ತೆದಾರರು ದಿಕ್ಕು ತೋಚದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಾಯಕತ್ವ ಹಾಗೂ ಸೇವೆ ಮನೋಭಾವನೆಯನ್ನು ವಿದ್ಯಾರ್ಥಿ ದೆಸೆಯಿಂದಲೇ ಅಳವಡಿಸಿಕೊಳ್ಳಲು ಇಂಟರ್ಯಾಕ್ಟ್ ಕ್ಲಬ್ ಉತ್ತಮ ವೇದಿಕೆಯಾಗಿದ್ದು, ವಿದ್ಯಾರ್ಥಿಗಳ ತೊಡಗಿಸಿಕೊಳ್ಳುವಿಕೆಯ ಆಧಾರದ ಮೇಲೆ ಗುಣಾತ್ಮಕ ಬದಲಾವಣೆಯೂ ಸಾಧ್ಯವಿದೆ ಎಂದು ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಮೋಹನ್ ರೇವಣ್ಕರ್ ಹೇಳಿದರು. ಅವರು ಇಲ್ಲಿನ ರತ್ತೂಬಾಯಿ ಜನತಾ ಪ್ರೌಢಶಾಲೆಯಲ್ಲಿ ಬೈಂದೂರು ರೋಟರಿ ಕ್ಲಬ್ ಪ್ರಾಯೋಜಿತ ಇಂಟರ್ಯಾಕ್ಟ್ ಕ್ಲಬ್ ಇದರ ನೂತನ ಅಧ್ಯಕ್ಷರಿಗೆ ಪದಪ್ರದಾನ ನೆರವೇರಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ರತ್ತೂಬಾಯಿ ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಆನಂದ ಮದ್ದೋಡಿ, ರೋಟರಿಯ ಮಾಜಿ ಸಹಾಯಕ ಗವರ್ನರ್ ಸೋಮನಾಥನ್ ಆರ್., ಪೂರ್ವಾಧ್ಯಕ್ಷರುಗಳಾದ ಐ. ನಾರಾಯಣ್, ಮಂಜುನಾಥ ಮಹಾಲೆ, ಡಾ. ಪ್ರವೀಣ್ ಶೆಟ್ಟಿ, ಪ್ರಸಾದ್ ಪ್ರಭು, ಇನ್ನರ್ವೀಲ್ ಅಧ್ಯಕ್ಷರಾದ ಗುಲಾಬಿ ಮರವಂತೆ, ಬೈಂದೂರು ರೋಟರಿ ಇಂಟರ್ಯಾಕ್ಟ್ ಸಂಯೋಜಕ ರಾಘವೇಂದ್ರ ಉಪ್ಪುಂದ, ಇಂಟರ್ಯಾಕ್ಟ್ ಕ್ಲಬ್ ಅಧ್ಯಕ್ಷ ಅಮ್ಜದ್, ಕಾರ್ಯದರ್ಶಿ ಪ್ರಕೃತಿ ಉಪಸ್ಥಿತರಿದ್ದರು. ರತ್ತೂಬಾಯಿ ಜನತಾ ಪ್ರೌಢಶಾಲೆಯ ಇಂಟರ್ಯಾಕ್ಟ್ ಸಂಯೋಜಕ ಪ್ರಕಾಶ್ ಮಾಕೋಡಿ ಕಾರ್ಯಕ್ರಮ ನಿರೂಪಿಸಿ, ಬೈಂದೂರು ರೋಟರಿ ಕಾರ್ಯದರ್ಶಿ ಸುನಿಲ್…
