Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮೀನುಗಾರಿಕೆಗೆ ತೆರಳಿ ಹಿಂದಿರುಗುತ್ತಿದ್ದ ಸಂದರ್ಭ ದೋಣಿ ಮಗುಚಿ ಇಬ್ಬರು ಮೀನುಗಾರರು ಮೃತಪಟ್ಟ ಘಟನೆ ಶಿರೂರು ಕಳುಹಿತ್ಲು ಎಂಬಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ದೋಣಿಯಲ್ಲಿದ್ದ ಹಡವಿನಕೋಣೆ ಅಬ್ಬುಲ್ ಸತ್ತರ್ (45 ) ಹಾಗೂ ಭಟ್ಕಳದ ಮಿಸ್ಸಾ ಯೂಸುಫ್ (48) ಮೃತಪಟ್ಟಿದ್ದಾರೆ. ಭಾನುವಾರ ರಾತ್ರಿ 10ಗಂಟೆಗೆ ಶಿರೂರು ಕಳುಹಿತ್ಲುವಿನನಿಂದ ಮೀನುಗಾರಿಕೆಗೆ ತೆರಳಿದ ನುಮೈರಾ ಅಂಜುಮ್ ದೋಣಿಯಲ್ಲಿ 3 ಜನ ಮೀನುಗಾರಿಕೆಗೆ ತೆರಳಿದ್ದರು. ಮೀನುಗಾರಿಕೆ ನಡೆಸಿ ವಾಪಾಸಾಗುತ್ತಿದ್ದ ಸಂದರ್ಭ ತಡರಾತ್ರಿ 01:30ರ ವೇಳಿಗೆ ಕಳುಹಿತ್ತು ಅಳಿವೆ ಸಮೀಪ ದೋಣಿ ಮಗುಚಿ ಇಬ್ಬರು ಮೃತಪಟ್ಟಿದ್ದಾರೆ. ದೋಣಿಯಲ್ಲಿದ್ದ ಮತ್ತೋರ್ವ ಮೀನುಗಾರ ಹಡವಿನಕೋಣೆಯ ಬುಡು ಮುಖಾರ್ (37) ಅವರನ್ನು ಇನ್ನೊಂದು ದೋಣಿಯಲ್ಲಿದ್ದ ಮಾಮ್ಮು ಯಾಕೂಬ್ ಎಂಬುವವರು ರಕ್ಷಣೆ ಮಾಡಿದ್ದಾರೆ. ಕರಾವಳಿ ಕಾವಲು ಪಡೆ ಹಾಗೂ ಬೈಂದೂರು ಪೊಲೀಸ್ ಠಾಣೆಯ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಲ ತಿಂಗಳ ಹಿಂದಷ್ಟೇ ಇದೇ ಪ್ರದೇಶದಲ್ಲಿ ದೋಣಿ ಮಗುಚಿ ಇಬ್ಬರು ಮೀನುಗಾರರು ಮೃತಪಟ್ಟಿದ್ದರು. ತಾಲೂಕಿನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಾವುಂದ ಬಳಿಯ ಮಸ್ಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ನಾವುಂದ ಗಣೇಶನಗರ ನಿವಾಸಿ ಗೋವಿಂದ ಖಾರ್ವಿ (70ವ) ಮೃತಪಟ್ಟಿದ್ದಾರೆ. ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಎಸ್‌ಯುವಿ ವಾಹನ ವೇಗವಾಗಿ ತೆರಳುತ್ತಿರುವ ಸಂದರ್ಭ ಪಾದಾಚಾರಿ ರಸ್ತೆ ದಾಟುತ್ತಿದ್ದು, ಈ ವೇಳೆ ವಾಹನ ನಿಯಂತ್ರಣಕ್ಕೆ ಸಿಗದೇ ಪಾದಾಚಾರಿಗೆ ಡಿಕ್ಕಿಹೊಡೆದೆ. ಅಪಘಾತದ ರಭಸಕ್ಕೆ ತೀವ್ರವಾಗಿ ಗಾಯಗೊಂಡ ಗೋವಿಂದ ಖಾರ್ವಿ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೈಂದೂರು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವೇ ರಾಷ್ಟ್ರೀಯತೆ. ಸಂವಿಧಾನದ ಆಧಾರದ ಮೇಲೆ ನಾವು ನಮ್ಮ ರಾಷ್ಟ್ರೀಯತೆಯನ್ನು ಕಟ್ಟಬೇಕು. ಆದರೆ ಇಂದು ರಾಷ್ಟ್ರೀಯತೆ ವಿಕೃತಗೊಂಡಿದೆ. ಧರ್ಮ ತನ್ನ ಮೌಲ್ಯ ಕಳೆದುಕೊಂಡಿದೆ. ಶಿಕ್ಷಣವು ಸಹಿಷ್ಣುತೆ, ಸೌಹಾರ್ದತೆಯನ್ನು ಕಲಿಸುತ್ತದೆ ಎನ್ನುವುದಕ್ಕೆ ನಮ್ಮಲ್ಲಿ ಆಧಾರವೇ ಇಲ್ಲ. ಹೀಗಾಗಿ ಸಾಂಸ್ಕೃತಿಕ ಪತನ ಅತ್ಯಂತ ವೇಗವಾಗಿ ನಡೆಯುತ್ತಿದೆ. ಹೋರಾಟದ ಹಿನ್ನೆಲೆಯಿರುವ ನಾವೆಲ್ಲ ಜವಾಬ್ದಾರಿಗಳನ್ನು ಈ ಬಗ್ಗೆ ಅರಿವಿರುವ ಹೊಸ ತಲೆಮಾರಿಗೆ ದಾಟಿಸುವ ಕೆಲಸ ಮಾಡಬೇಕಿದೆ ಎಂದು ನ್ಯೂ ದೆಹಲಿ ಜೆಎನ್ಯುನ ನಿವೃತ್ತ ಪ್ರಾಧ್ಯಾಪಕ ಡಾ. ಪುರುಷೋತ್ತಮ ಬಿಳಿಮಲೆ ಅಭಿಪ್ರಾಯ ವ್ಯಕ್ತಪಡಿಸಿದರು. ಇಲ್ಲಿನ ಬಸ್ರೂರು ಮೂರುಕೈ ಬಳಿಯ ಆಶೀರ್ವಾದ ಸಭಾಂಗಣದಲ್ಲಿ ಶನಿವಾರ ‘ಘನತೆಯ ಬದುಕು: ಸಾಂಸ್ಕೃತಿಕ ಮಧ್ಯಪ್ರವೇಶ’ ವಿಚಾರವಾಗಿ ಎರಡು ದಿನಗಳ ಕಾಲ ನಡೆಯುತ್ತಿರುವ ಸಮುದಾಯ ಕರ್ನಾಟಕ 8 ನೇ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ತುರ್ತು ಪರಿಸ್ಥಿತಿಯಂದ ಹಿಡಿದು ಅನೇಕ ಜನ ವಿರೋಧಿ ಘಟನೆಗಳನ್ನು ಸಮುದಾಯ ಖಂಡಿಸುತ್ತಾ ಬಂದಿದೆ. ಪ್ರಭುತ್ವದ ವಿರುದ್ಧವಾಗಿ ಸಮುದಾಯ ತನ್ನ ಧ್ವನಿಯನ್ನು…

Read More

ಬೈಂದೂರು ಚಂದ್ರಶೇಖರ ನಾವಡ | ಕುಂದಾಪ್ರ ಡಾಟ್ ಕಾಂಕುಂದಾಪ್ರ ಕನ್ನಡ ಎನ್ನುವ ಕನ್ನಡದ ಭಾಷಾ ಪ್ರಾಕಾರವೊಂದು ಸಿನಿಮಾಗಳಲ್ಲಿ ಹೆಚ್ಚಾಗಿ ಹಾಸ್ಯಕ್ಕಷ್ಟೇ ಸೀಮಿತವಾದ ಕಾಲವೊಂದಿತ್ತು. ಸದ್ಯ ಅಂತಹ ಸನ್ನಿವೇಶಗಳಿಲ್ಲ. ಕುಂದಾಪ್ರ ಕನ್ನಡದಲ್ಲಿಯೂ ಹಲವು ಸಿನಿಮಾ ಕಿರುಚಿತ್ರಗಳು ನಿರ್ಮಾಣಗೊಂಡಿದೆ. ಕಾಂತಾರದ ಯಶಸ್ಸಿನ ನಂತರ ಇದೀಗ ಸತೀಶ್ ಎಂ ಬೈಂದೂರು ಅವರ ಲಕ್ಷ್ಮೀ ಪ್ರೊಡಕ್ಷನ್ ಬ್ಯಾನರ್ ಅಡಿ ರಾಘವೇಂದ್ರ ಶಿರಿಯಾರ ನಿರ್ದೇಶನದಲ್ಲಿ ಕುಂದಗನ್ನಡದ ಗ್ರಾಮೀಣ ಸೊಗಡಿನ ’ವಸಂತಿ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಸಿನಿಮಾದ ಶೂಟಿಂಗಿಗೆ ಆಯ್ಕೆ ಮಾಡಿಕೊಂಡ ಸಹ್ಯಾದ್ರಿಯ ತಪ್ಪಲಿನ ಹಾಲಾಡಿ ಪರಿಸರ ನೈಸರ್ಗಿಕ ಸೌಂದರ್ಯದ ಖನಿ. ಇಲ್ಲಿನ ನೆಲ-ಜಲ, ನದಿ, ಕಾಡು, ಗುಡ್ಡ-ಬೆಟ್ಟ, ಗದ್ದೆ, ತೋಟದ ನಡುವೆಯ ಸುಂದರ ಚಿತ್ರಣ ’ವಸಂತಿ’ಯ ಮೂಲಕ ಸಮಸ್ತ ಕನ್ನಡಿಗರಿಗೆ ಪರದೆಯ ಮೇಲೆ ನೋಡಿ ಆನಂದಿಸುವ ಅವಕಾಶ ದೊರೆತಂತಾಗಿದೆ. ಕರಾವಳಿಯ ಭೂತಾರಾಧನೆ, ನಾಗಾರಾಧನೆ, ಕುಂದಾಪ್ರ ಕನ್ನಡದ ಕಂಪು-ತಂಪು ಇಂಪಾಗಿ ಪ್ರೇಕ್ಷಕನ ಹೃದಯ ತಟ್ಟುತ್ತದೆ. ಸ್ಥಳೀಯ ರಂಗ ಕಲಾವಿದರೇ ಅಭಿನಯಿಸಿರುವ ಸಿನಿಮಾದ ನಾಯಕಿ ವಸಂತಿ ಓರ್ವ ಗೇರು ಬೀಜ ಕಾರ್ಖಾನೆಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಡಿ.14: ಜಿಲ್ಲೆಯಲ್ಲಿ ಸಾಂಪ್ರದಾಯಿಕ ಕರ ಕುಶಲ ಕಲೆಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ಪ್ರೋತ್ಸಾಹಿಸಲು ಜಾರಿಗೆ ತಂದಿರುವ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯವನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಅನುಷ್ಠಾನ ಕುರಿತ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸರಕಾರ ಕುಶಲಕರ್ಮಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವುದರ ಜೊತೆಗೆ ಅವರುಗಳಿಗೆ ಆರ್ಥಿಕ ಸೌಲಭ್ಯಗಳನ್ನು ಕಲ್ಪಿಸಿ, ಸ್ವಾವಲಂಭಿ ಜೀವನ ನಡೆಸುವುದರೊಂದಿಗೆ ಆರ್ಥಿಕರಾಗಿ ಸಬಲರಾಗಬೇಕೆಂಬ ಉದ್ದೇಶದಿಂದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವುದರೊಂದಿಗೆ ಅರ್ಹ ಫಲಾನುಭವಿಗಳು ಯೋಜನೆಯ ಲಾಭ ಪಡೆದುಕೊಳ್ಳುವಂತೆ ಕ್ರಮವಹಿಸಬೇಕು ಎಂದರು. ಈ ಯೋಜನೆ ಕುಶಲಕರ್ಮಿಗಳಿಗೆ ಸಹಾಯ ಆಧಾರಿತ ಯೋಜನೆಯಾಗಿದ್ದು, ವಿವಿಧ ವೃತ್ತಿಯಲ್ಲಿ ತೊಡಗಿಸುವ ಕುಶಲಕರ್ಮಿಗಳಿಗೆ ಸೌಲಭ್ಯ ಕಲ್ಪಿಸುವ ಉದ್ದೇಶವಾಗಿದೆ. ಸಾಮಾನ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಅಧಿದೇವತೆ ಶ್ರೀ ಕುಂದೇಶ್ವರನ ಸನ್ನಿಧಿಯ ದೀಪೋತ್ಸವವು ಮಂಗಳವಾರ ಸಂಭ್ರಮದಿಂದ ಜರುಗಿತು. ಭಾನುವಾರದಿಂದ ದೇವಳದಲ್ಲಿ ಪುಣ್ಯಾಹ ವಾಚನ, ದೇವನಾಂದಿ, ದ್ವಾದಶ ನಾರಿಕೇಳ ಮಹಾ ಗಣಪತಿ ಹೋಮ, ಸಂಪೂರ್ಣ ನವಗ್ರಹ ಹೋಮ, ದುರ್ಗಾ ಹೋಮ ಸಹಿತ ಲೋಕಕಲ್ಯಾಣಾರ್ಥವಾಗಿ ಸದ್ಯೋಜಾತಾದಿ ಅಧಿವಾಸ ಯಾಗ, ಪೂರ್ಣಾಹುತಿ ಬ್ರಹ್ಮಕಲಶಾಭಿಷೇಕ, ಮಹಾಪೂಜೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಿತು. ಬಳಿಕ ಸಂಜೆ ಸಾಲಿಗ್ರಾಮ ಮಕ್ಕಳ ಮಹಿಳಾ ಕೋಟ ಇವರಿಂದ ವೀರಶ ಸೇನಾ ಯಕ್ಷಗಾನ ಕಾರ್ಯಕ್ರಮ ನಡೆಯಿತು. ಮಂಗಳವಾರ ಸೂರ್ಯೋದಯದಿಂದ ಸೂರ್ಯಾಸ್ತಮಾನದವರೆಗೆ ಕುಂದಾಪುರ ತಾಲೂಕಿನ ಭಜನಾ ಮಂಡಳಿಗಳ ಒಕ್ಕೂಟದಿಂದ ದೇವರ ನಾಮ ಸಂಕೀರ್ತನೆ ಮತ್ತು ಕುಣಿತ ಭಜನೆ ಕಾರ್ಯಕ್ರಮ ನಡೆಯಿತು. ಕುಂದೇಶ್ವರ ದೇವರ ಸನ್ನಿಧಿಯಲ್ಲಿ ರಂಗಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗದ ಬಳಿಕ ಸಾವಿರಾರು ಭಕ್ತರ ಸಮ್ಮುಖದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಸಂಭ್ರಮದಿಂದ ಜರುಗಿತು. ಪುಷ್ಪಕ ರಥದಲ್ಲಿ ಶ್ರೀದೇವರ ಪುರ ಮೆರವಣಿಗೆ, ಕಟ್ಟೆ ಪೂಜೆ, ಕೆರೆದೀಪ ಇತ್ಯಾದಿ ಕಾರ್ಯಕ್ರಮಗಳು ಜರುಗಿದವು. ದೇವರ…

Read More