ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾರಾಗೃಹಕ್ಕೆ ಕರೆದೊಯ್ಯುವ ವೇಳೆ ಪೊಲಿಸರನ್ನು ತಳ್ಳಿ ಪರಾರಿಯಾಗಿದ್ದ ಕಳವು ಪ್ರಕರಣದ ಆರೋಪಿ ಮೊಹಮ್ಮದ್ ರಾಹೀಕ್ (22) ಎಂಬಾತನನ್ನು ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ. ಬಿಜಾಡಿಯ ಮೊಬೈಲ್ ಅಂಗಡಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ರಾಹೀಕ್ ಎಂಬುವವನನ್ನು ಕುಂದಾಪುರ ನಗರ ಠಾಣೆ ಪೊಲೀಸರು ಬಂಧಿಸಿ ಅ.19ರಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಧೀಶರ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಹೆಡ್ ಕಾನ್ಸ್ಟೇಬಲ್ ಮಂಜುನಾಥ್ ಹಾಗೂ ಸಿಬ್ಬಂದಿ ಬಸನಗೌಡ ಅವರು ಹಿರಿಯಡ್ಕದ ಕಾರಾಗೃಹಕ್ಕೆ ಕರೆಯ್ಯುತ್ತಿದ್ದರು. ರಾತ್ರಿ 8.25ಕ್ಕೆ ಹಿರಿಯಡ್ಕ ಅಂಜಾರು ಕಾಜರಗುತ್ತು ಎಂಬಲ್ಲಿರುವ ಜಿಲ್ಲಾ ಕಾರಾಗೃಹದ ಮುಖ್ಯ ದ್ವಾರದ ಬಳಿ ವಾಹನ ನಿಲ್ಲಿಸಿ ಆರೋಪಿಯನ್ನು ಇಳಿಸುತ್ತಿದ್ದಂತೆ ಪೊಲೀಸರನ್ನು ತಳ್ಳಿ ಕಾಡಿನ ಕಡೆ ಓಡಿ ಹೋಗಿ ತಲೆಮರೆಸಿಕೊಂಡಿದ್ದ. ಈ ಬಗ್ಗೆ ಕುಂದಾಪುರ ಠಾಣೆ ಹೆಡ್ ಕಾನ್ಸ್ಟೇಬಲ್ ಮಂಜುನಾಥ ಎಚ್. ಎನ್ನುವರು ಹಿರಿಯಡಕ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆರೋಪಿ ಮೊಹಮ್ಮದ್ ರಾಹೀಕ್ ಎಂಬಾತನ ಪತ್ತೆಗಾಗಿ ಪೊಲೀಸರ ತಂಡ ರಚಿಸಿ ತನಿಕೆ ನಡೆಸಿದ್ದು ಅಂತಿಮವಾಗಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಇತಿಹಾಸವನ್ನು ತಿಳಿದುಕೊಳ್ಳದೇ ಇತಿಹಾಸ ಸೃಷ್ಠಿ ಮಾಡಲು ಸಾಧ್ಯವಿಲ್ಲ. ಇತಿಹಾಸದಲ್ಲಿ ಹಿರಿಯರ ತ್ಯಾಗ ಬಲಿದಾನದಿಂದ ಸಿಕ್ಕಿರುವ ಸ್ವಾತಂತ್ರö್ಯವನ್ನು ನಾವು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ, ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆಯನ್ನು ಬೆಂಗಳೂರಿನಲ್ಲಿ ಉದ್ಘಾಟನೆ ಮಾಡುವ ಪೂರ್ವಭಾವಿಯಾಗಿ ಪವಿತ್ರ ಮೃತ್ತಿಕೆ (ಮಣ್ಣು) ಸಂಗ್ರಹಿಸುವ ಅಭಿಯಾನದ ಕೆಂಪೇಗೌಡರ ರಥಕ್ಕೆ ಆರತಿ ಬೆಳಗಿ, ಹಸಿರು ನಿಶಾನೆ ತೋರಿ, ಮಾತನಾಡಿದರು. ಬೆಂಗಳೂರಿನ ಸಮಗ್ರ ಬೆಳವಣಿಗೆಗೆ ಬಹಳ ಹಿಂದೆಯೇ ವ್ಯವಸ್ಥಿತವಾಗಿ ಯೋಜನೆ ರೂಪಿಸಿ, ಹಲವು ಕೆರೆಗಳನ್ನು ನಿರ್ಮಿಸಿ, ಮಾದರಿ ನಗರಗಳ ನಿರ್ಮಾಣಕ್ಕೆ ಕಾರಣಕರ್ತರಾಗಿದ್ದ ಕೆಂಪೇಗೌಡರು ಎಲ್ಲಾ ಆಡಳಿತಗಾರರಿಗೆ ಸದಾ ಮಾದರಿ ಎಂದರು. ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ರಾಜ್ಯ ಸರಕಾರದಿಂದ ಬೆಂಗಳೂರಿನಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಇದಕ್ಕೆ ರಾಜ್ಯದ ಎಲ್ಲ ಜಿಲ್ಲೆಗಳಿಂದಲೂ ಮೃತ್ತಿಕೆ ಸಂಗ್ರಹಿಸಲಾಗುತ್ತಿದೆ. ನವೆಂಬರ್ 11…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ದೊಡ್ಡಣಗುಡ್ಡೆಯ ತೋಟಗಾರಿಕಾ ಇಲಾಖೆ ಆವರಣದಲ್ಲಿ ನವೆಂಬರ್ 7ರ ವರೆಗೆ ನಡೆಯುವ ಸಸ್ಯಸಂತೆ ಕಾರ್ಯಕ್ರಮದಲ್ಲಿ 40ಕ್ಕೂ ಅಧಿಕ ಜಾತಿಯ ಅಲಂಕಾರಿಕಾ ಸಸ್ಯಗಳು, 15 ಕ್ಕೂ ಅಧಿಕ ಜಾತಿಯ ಹಣ್ಣಿನ ಸಸ್ಯಗಳು, ತೆಂಗು, ಕಾಳು ಮೆಣಸಿನ ಸಸಿಗಳು, 50 ಕ್ಕೂ ಹೆಚ್ಚು ತರಕಾರಿ ಮತ್ತು ಹಣ್ಣಿನ ಬೀಜಗಳ ಮಾರಾಟ ಕೃಷಿ ಮತ್ತು ತೋಟಗಾರಿಕಾ ಆಸಕ್ತರನ್ನು ಗಮನ ಸೆಳೆಯುತ್ತಿದೆ. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿರುವ ಖಾಸಗಿ ನರ್ಸರಿ ಮತ್ತು ಸರ್ಕಾರಿ ನರ್ಸರಿಯಲ್ಲಿ ಬೆಳೆಸಿದ ಸಸ್ಯಗಳು, ಕಸಿ ಗಿಡಗಳು, ನರ್ಸರಿ ಉಪಕರಣಗಳ ಮಾರಾಟ ನಡೆಯುತ್ತಿದೆ. ಕಾರ್ಯಕ್ರಮವನ್ನು ಉದ್ಘಾಟಿಸಿದ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಮಾತನಾಡಿ, ನಗರ ಪ್ರದೇಶದಲ್ಲಿ ಮನೆಯ ಆವರಣದಲ್ಲಿ ಜಾಗದ ಕೊರತೆ ಇದ್ದರೂ ಸಹ ಮನೆಗಳ ಮೇಲ್ಛಾವಣಿಯಲ್ಲಿ ಹೂ ಮತ್ತು ಹಣ್ಣಿನ ಸಸ್ಯಗಳನ್ನು ಬೆಳೆಸಲು ಸಾಧ್ಯವಿದ್ದು, ಈ ಸಸ್ಯಸಂತೆಯ ಮೂಲಕ ಉತ್ತಮ ಸಸಿಗಳನ್ನು ಪಡೆಯಲು ಸಾಧ್ಯವಾಗಲಿದೆ ಎಂದರು. ನಗರಸಭಾ ಸದಸ್ಯರಾದ ಗಿರಿಧರ್ ಆಚಾರ್ಯ, ಗಿರೀಶ್ ಅಂಚನ್, ಪ್ರಭಾಕರ ಪೂಜಾರಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಮತ್ತು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಗಂಗೊಳ್ಳಿ ಇವರ ಸಹಯೋಗದೊಂದಿಗೆ ಕುಂದಾಪುರ ವಲಯದ ಸಮಾಜ ವಿಜ್ಞಾನ ಶಿಕ್ಷಕರ ಕಾರ್ಯಾಗಾರ ಗಂಗೊಳ್ಳಿಯ ಸ.ವಿ.ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ನಡೆಯಿತು. ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಕುಂದಾಪುರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಕಾಂತರಾಜ್, ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಇನ್ನಷ್ಟು ಉತ್ತಮಗೊಳಿಸುವ ದೃಷ್ಟಿಯಿಂದ ಶಿಕ್ಷಕರಿಗೆ ವಿಷಯಾಧಾರಿತ ತರಬೇತಿ ಕಾರ್ಯಾಗಾರವನ್ನು ಮಾಡಲಾಗುತ್ತಿದೆ. ಬೇರೆ ಬೇರೆ ಶಾಲೆಗಳಲ್ಲಿ ಫಲಿತಾಂಶ ಹೆಚ್ಚಳಕ್ಕೆ ಅನುಸರಿಸುತ್ತಿರುವ ವಿಧಾನಗಳ ಬಗ್ಗೆ ಶಿಕ್ಷಕರು ಚರ್ಚೆ ನಡೆಸಬೇಕು. ತಮ್ಮ ಶಾಲೆಗಳಲ್ಲಿ ಫಲಿತಾಂಶ ಹೆಚ್ಚಳಕ್ಕೆ ಬೇಕಾಗುವ ತಂತ್ರಗಳನ್ನು, ಬೋಧನಾ ಕ್ರಮಗಳ ಬಗ್ಗೆ ಕಾರ್ಯಾಗಾರದಲ್ಲಿ ಮುಕ್ತವಾಗಿ ಚರ್ಚೆ ನಡೆಸಿ, ವಿದ್ಯಾರ್ಥಿಗಳಿಗೆ ಇದರಿಂದ ಪ್ರಯೋಜನವಾಗುವ ನಿಟ್ಟಿನಲ್ಲಿ ಶ್ರಮಿಸಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳನ್ನು ಮಾನಸಿಕವಾಗಿ ಸಜ್ಜುಗೊಳಿಸುವುದರ ಜೊತೆಗೆ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಕಡೆಗೂ ಹೆಚ್ಚಿನ ಗಮನಹರಿಸಬೇಕಿದೆ. ಒಟ್ಟಿನಲ್ಲಿ ಕಳೆದ ಸಾಲಿಗಿಂತ ಉತ್ತಮ ಫಲಿತಾಂಶವನ್ನು ಈ ಬಾರಿ ನಿರೀಕ್ಷಿಸಲಾಗುತ್ತಿದೆ ಎಂದು ಅವರು…
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರಿಗೆ ಹುಟ್ಟೂರ ಸನ್ಮಾನ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಪೋರ್ಟ್ ಗೇಟ್ ಎಜುಕೇಶನ್ ಟ್ರಸ್ಟ್ ಸಂಸ್ಥೆಯ ಓಕ್‌ವುಡ್ ಇಂಡಿಯನ್ ಸ್ಕೂಲ್ ಪೋಷಕರಿಗಾಗಿ ಏರ್ಪಡಿಸಲಾದ ಕಾರ್ಯಗಾರವನ್ನು ಹರಿಪ್ರಸಾದ್ ಹೋಟೆಲ್ ಅಕ್ಷತಾ ಹಾಲಿನಲ್ಲಿ ನಡೆಯಿತು. ಉಡುಪಿಯ ಎವಿ ಬಾಳಿಗ ಮೆಮೋರಿಯಲ್ ಆಸ್ಪತ್ರೆಯ ಮನೋವೈದ್ಯ ಡಾ. ವಿರೂಪಾಕ್ಷ ದೇವರಮನೆ ಅವರು ಪೋಷಕರನ್ನು ಉದ್ದೇಶಿಸಿ ಮಾತನಾಡಿದರು. ಪೋಷಕರು ಅವರಿಗೆ ಇರುವ ಸಮಸ್ಯೆಯನ್ನು ಕೇಳಿಕೊಂಡು ಅದಕ್ಕೆ ಪರಿಹಾರವನ್ನು ಪಡೆದರು. ಸಭೆಯಲ್ಲಿ ಪೋರ್ಟ್ ಗೇಟ್ ಎಜುಕೇಶನ್ ಅಧ್ಯಕ್ಷರಾದ ಅಭಿನಂದನ್ ಶೆಟ್ಟಿ, ಕಾರ್ಯದರ್ಶಿ ನೀತಾ ಶೆಟ್ಟಿ ಆಡಳಿತ ಮಂಡಳಿ ಮುಖ್ಯಸ್ಥರು ಮುಖ್ಯ ಶಿಕ್ಷಕರು ಮತ್ತು ಪೋಷಕರು ಉಪಸ್ಥಿತರಿದ್ದರು. ಸಂಸ್ಥೆಯ ಕಾರ್ಯದರ್ಶಿ ನೀತಾ ಶೆಟ್ಟಿ ಸ್ವಾಗತಿಸಿದರು. ಶಿಕ್ಷಕಿ ಸಿಲ್ವಿಯಾ ಫೆರ್ನಾಂಡಿಸ್ ನಿರೂಪಿಸಿದರು. ಅತಿಥಿಗಳ ಪರಿಚಯವನ್ನು ಶಿಕ್ಷಕಿ ಕಾವ್ಯ ಮಾಡಿದರು. ಸಹನ ಶೆಟ್ಟಿ ಧನ್ಯವಾಗೈದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆರೋಗ್ಯ ಸಂಬಂಧಿ ಲೇಖನಗಳನ್ನು ಬರೆಯುವ ಲೇಖಕರು ಎಚ್ಚರಿಕೆಯನ್ನು ವಹಿಸಬೇಕು. ಕಾಯಿಲೆಗಳ ಬಗ್ಗೆ ಬರೆಯುವಾಗ ಲೇಖನದ ಕೊನೆಯಲ್ಲಿ ರೋಗಿಗಳಿಗೆ ಭಯಹುಟ್ಟಿಸವಂತಹ ’ಭಯೋತ್ಪಾದಕ’ರಾಗದೆ, ರೋಗಿಗಳಲ್ಲಿ ಆತ್ಮಸ್ಥೈರ್ಯ ತುಂಬುವ ಧನಾತ್ಮಕ ಅಂಶಗಳಿಂದ ಲೇಖನವನ್ನು ಮುಕ್ತಾಯಗೊಳಿಸಿಬೇಕು ಎಂದು ಖ್ಯಾತ ಮನೋರೋಗ ತಜ್ಞರು ಹಾಗೂ ವೈದ್ಯ ಸಾಹಿತಿ ಡಾ. ಸಿ. ಆರ್. ಚಂದ್ರಶೇಖರ್ ಕರೆ ನೀಡಿದರು. ಅವರು ಆಳ್ವಾಸ್ ಕಾಲೇಜಿನಲ್ಲಿ ನಡೆದ ಭಾರತೀಯ ವೈದ್ಯಕೀಯ ಸಂಘ, ಕರ್ನಾಟಕ ರಾಜ್ಯ ಶಾಖೆಯ ೮೮ನೇ ರಾಜ್ಯ ಸಮ್ಮೇಳನದ ಎರಡನೇ ದಿನದಂದು ನಡೆದ ಪತ್ರಿಕೋದ್ಯಮ ವಿದ್ಯಾರ್ಥಿಗಳ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ವೈದ್ಯಕೀಯ ಲೇಖನಗಳನ್ನು ಬರೆಯುವಾಗ ಕೇವಲ ಇಂಟರ್‌ನೆಟ್ ಮೂಲವನ್ನು ಮಾತ್ರ ಅವಲಂಬಿತವಾಗಿರದೆ, ಪುಸ್ತಕಗಳನ್ನು ಅಧ್ಯಯನ ಮಾಡಬೇಕು ಜೊತೆಗೆ ತಮ್ಮ ಸ್ವಾನುಭವ ಅಥವಾ ತಜ್ಞರ ಹಾಗೂ ರೋಗಿಗಳ ಅನುಭವಗಳನ್ನು ಸಂಗ್ರಹಿಸಿ ಬರೆಯುವ ಮೂಲಕ ಉತ್ತಮ ಲೇಖನಗಳನ್ನು ರಚಿಸಬಹುದು ಎಂದರು. ಬರಹಗಾರರು ಕಾಲಮಿತಿ, ಪುಟಗಳ ಮಿತಿ, ಪದಗಳ ಮಿತಿ ಹಾಗೂ ಓದುಗರ ಸಹನೆಯ ಮಿತಿಯನ್ನು ಗಮನದಲ್ಲಿರಿಸಿಕೊಂಡು- ಚಿಕ್ಕ ವಾಕ್ಯಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರೀಯ ಆಯುರ್ವೇದ ದಿನದ ಅಂಗವಾಗಿ ದೀಕ್ಷಾ ಆಯುರ್ವೇದ ಅಕಾಡೆಮಿ ಹಾಗೂ ಎವಿಪಿ ಕೊಯಂಬತ್ತೂರು ಇವರು ಆಯೋಜಿಸಿದ್ದ “ಆಯುರ್ ಕೋನ್-ನ್ಯಾಷನಲ್ ವೆಬ್ ಕಾನ್ಫರೆನ್ಸ್ ಆನ್ ಆಯುರ್ವೇದ ಫಾರ್ ಲಿಪಿಡ್ ಡಿಸಾರ್ಡರ್ಸ್”ರಲ್ಲಿ ಕುಂದಾಪುರ ಕೋಟೇಶ್ವರದ ರೂರಲ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಧ್ಯಾಪಕಿ ಡಾ. ನಿಶಾ ಕುಮಾರಿ ಇವರು ನಿರೂಪಿಸಿದ ಕಿರು ಚಿತ್ರವು ಪ್ರಾತ್ಯಕ್ಷಿಕೆಗೆ ಆಯ್ಕೆಯಾಗಿದೆ. ಡಾ. ನಿಶಾ ಕುಮಾರಿ ಇವರು ರಚಿಸಿದ “ಕರ ಪ್ರಚಿತೀಯ ಆಮಲಕಿ ರಸಾಯನ” ಎಂಬ ಸಾಕ್ಷ್ಯಚಿತ್ರದಲ್ಲಿ ಮರ, ಮಣ್ಣು, ಮನುಷ್ಯನ ಒಡನಾಟವನ್ನು ವಿವರಿಸಲಾಗಿದೆ. ಪ್ರಕೃತಿಯೊಂದಿಗಿನ ಒಡನಾಟವು ಮನುಷ್ಯನ ದೇಹ, ಮನ ಮತ್ತು ಆರೋಗ್ಯದಲ್ಲಿ ಯಾವ ಪರಿಣಾಮ ಬೀರಬಹುದೆಂಬ ಕಿರು ಪರಿಚಯ ಈ ಚಿತ್ರದಲ್ಲಿದೆ. ಇದು ಆಯುರ್ವೇದದಲ್ಲಿ ತಿಳಿಸಿದರ ರಸಾಯನ ಪದ್ಧತಿಯಾದರೆ ಜಪಾನ್ ದೇಶದಲ್ಲಿ ಇದು “ಫಾರೆಸ್ಟ್ ಬಾತ್” ಎಂಬ ಹೆಸರಿನಲ್ಲಿ ಪ್ರಚಲಿತವಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮರವಂತೆ ಗ್ರಾಮದ ಶ್ರೀ ವರಾಹ ಸ್ವಾಮಿ ದೇವಸ್ಥಾನದಲ್ಲಿ ನಡೆದ ಕಳವು ಪ್ರಯತ್ನ ಮತ್ತು ಗಂಗೊಳ್ಳಿಯಲ್ಲಿ ಹಾಕಿರುವ ಬ್ಯಾನರ್ ಹರಿದ ಪ್ರಕರಣದಲ್ಲಿ ಆರೋಪಿತರನ್ನು ಪತ್ತೆ ಹಚ್ಚುವಲ್ಲಿ ಕೋಟೇಶ್ವರದ ಅಂಕದಕಟ್ಟೆಯ ಸೈನ್ ಇನ್ ಸೆಕ್ಯುರಿಟಿ ಸಂಸ್ಥೆಯು ಅಳವಡಿಸಿದ ಸಿಸಿ ಟಿವಿ ಕ್ಯಾಮರದ ಪುಟೇಜ್‌ಗಳು ಸಹಕಾರಿಯಾಗಿವೆ. ಸಂಸ್ಥೆಯ ಈ ಕಾರ‍್ಯದಿಂದ ಪೊಲೀಸ್ ಇಲಾಖೆ ಸೈನ್ ಇನ್ ಸೆಕ್ಯುರಿಟಿ ಸಂಸ್ಥೆಯ ಆಡಳಿತ ನಿರ್ದೇಶಕ ಕೃಷ್ಣ ಇವರಿಗೆ ಕುಂದಾಪುರ ಪೊಲೀಸ್ ಉಪಾಧೀಕ್ಷಕ ಶ್ರೀಕಾಂತ್ ಕೆ ಇವರು ಪ್ರಶಂಸನಾ ಪತ್ರ ನೀಡಿ ಗೌರವಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಭಾಗದ ವತಿಯಿಂದ ಅಂತಿಮ ವರ್ಷದ ಬಿ.ಸಿ.ಎ. ಮತ್ತು ಬಿ.ಎಸ್ಸಿ. ವಿದ್ಯಾರ್ಥಿಗಳಿಗೆ ಐಟಿ ಕಂಪೆನಿಗಳಲ್ಲಿ ದೊರೆಯುವ ಉದ್ಯೋಗ ಮಾಹಿತಿ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಬೆಂಗಳೂರಿನ ಗ್ಲೋಬಲ್ ಲಾಜಿಕ್ ಹಿಟಾಚಿ ಗ್ರೂಪ್ ಕಂಪೆನಿಯ ಮ್ಯಾನೇಜರಾದ ವಿಪಿನ್ ಕುಮಾರ್ ನಿಟ್ಟೂರು ಇವರು ಐ.ಟಿ. ಕಂಪೆನಿಗಳಲ್ಲಿ ವಿದ್ಯಾರ್ಥಿಗಳಿಗೆ ಇರುವಂತಹ ವಿಪುಲ ಅವಕಾಶಗಳ ಕುರಿತು ಸವಿಸ್ತಾರವಾದ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಮಾತನಾಡಿ, ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳು ಹೆಚ್ಚಿನ ಉಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು. ಕಾಲೇಜಿನ ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಮಹೇಶ್ ಕುಮಾರ್ ಸ್ವಾಗತಿಸಿ, ಉಪನ್ಯಾಸಕ ಶ್ರೀಕಾಂತ್ ವಂದಿಸಿದರು. ಉಪನ್ಯಾಸಕಿ ಪವಿತ್ರಾ ಶೆಟ್ಟಿ ನಿರೂಪಿಸಿದರು.
