ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಅಗ್ನಿ ದಿವ್ಯದಲ್ಲಿ ಸ್ಪುಟಗೊಂಡು ಬಂಗಾರ ಮೆರುಗು ಪಡೆಯುವಂತೆ ಸಂಘರ್ಷದ ಕುಲುಮೆಯಲ್ಲಿ ಹದಗೊಂಡು ಲೋಕಕ್ಕೆ ಮಾದರಿಯಾಗ ಹೊರಟ ಸಮಾಜವಿದ್ದರೆ ಅದು ಗೌಡಸಾರಸ್ವತ ಸಮಾಜ. ತಮ್ಮ ಬುದ್ಧಿ ಚಾತುರ್ಯದಿಂದ ರಾಜಾಶ್ರಯಗಳಿಸಿ ವ್ಯಾಪಾರ ವಹಿವಾಟುಗಳಲ್ಲಿ ಪ್ರಗತಿ ಸಾಧಿಸುವ ಮೂಲಕ ಕೊಂಕಣಿ ಸಮಾಜ ಸಾಮಾಜಿಕವಾಗಿ ಬದುಕಿದಷ್ಟು ಬೇರೆ ಯಾವ ಸಮಾಜವೂ ಬದುಕಿಲ್ಲ ಎಂದು ಶಿರಾಲಿ ಎಸ್ಜಿಎಂ ದೇವಳದ ಅಧ್ಯಕ್ಷ ಗೋಪಿನಾಥ ಕಾಮತ್ ಹೇಳಿದರು. ಉಪ್ಪುಂದ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಇಲ್ಲಿನ ಯುವ ಜಿಎಸ್ಬಿ ಸೇವಾ ಸಂಘ ಆಯೋಜಿಸಿರುವ ಸ್ನೇಹ ಸಮ್ಮಿಲನದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗೋವಾ ಪೋರ್ಚುಗೀಸರ ವಶವಾದ ಮೇಲೆ ಅಲ್ಲಿನ ಹಿಂದೂಗಳ ದುರ್ದಿನಗಳು ಆರಂಭಗೊಂಡು ಲಕ್ಷಾಂತರ ಕುಟುಂಬಗಳು ಬಲಾತ್ಕಾರದ ಮತಾಂತರಕ್ಕೆ ಒಳಗಾದವು. ಕೇಳದವರನ್ನು ಜೀವಂತ ಸುಡಲಾಯಿತು. ಒಂದಷ್ಟು ಜನ ತಮ್ಮ ಹುಟ್ಟೂರನ್ನು ತೊರೆದು ಕುಲದೇವರ ಪೀಠಗಳನ್ನು ಹೊತ್ತು ರಾತೋರಾತ್ರಿ ವಲಸೆ ಹೊರಟರು ಈ ಮಹಾವಲಸೆ ಕೇರಳದ ಕೊಚ್ಚಿಯವರೆಗೂ ಸಾಗಿತು. ಸ್ಥಳೀಯ ಸಂಸ್ಕೃತಿಯ ಜೊತೆಗೆ ಅನುಸಂಧಾನ ಮಾಡಿಕೊಂಡು ಕೊಂಕಣರು ಬದುಕು ಕಟ್ಟಿಕೊಂಡರು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕು ಪಂಚಾಯತ್ರಾಜ್ ಒಕ್ಕೂಟದ ವತಿಯಿಂದ ಮಂಗಳವಾರ ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಂಸದ ಮತ್ತು ಶಾಸಕರೊಂದಿಗೆ ಸಮಾಲೋಚನಾ ಸಭೆ ನಡೆಯಿತು. ಕೆಡಿಪಿ ಸಭೆಗಳಿಗೆ ಅಧಿಕಾರಿಗಳು ಭಾಗವಹಿಸಲಿ:ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ನಡೆ ಯುವ ಕೆಡಿಪಿ ಸಭೆಗಳಿಗೆ ಅಧಿಕಾರಿ ಗಳು ಬರುತ್ತಾರೆ. ಪಂಚಾಯಿತಿ ಮಟ್ಟದಲ್ಲಿ ನಡೆ ಯುವಸಭೆಗಳಿಗೆ ಬರುತ್ತಿಲ್ಲ, ಪಂಚಾಯಿತಿ ಸ್ಥಳೀಯ ಸರಕಾರವಾಗಿದ್ದು, ಎಲ್ಲ ಅಧಿ ಕಾರಿಗಳಿಗೆ ಭಾಗವಹಿಸುವಿಕೆ ಅಗತ್ಯ ಎಂದು ಪಂಚಾಯಿತಿ ಸದಸ್ಯರು ಪ್ರತಿಪಾದಿಸಿ ದರು. ಗ್ರಾಮ ಪಂಚಾಯಿತಿ ಕೆಡಿಪಿ ಸಭೆಯಲ್ಲಿ ಅಧಿಕಾರಿ ವರ್ಗ ಭಾಗವಹಿಸುವ ನಿಯಮ ಸರಕಾರ ಜಾರಿಗೆ ತರಬೇಕಾಗು ತ್ತದೆ. ಈ ಬಗ್ಗೆ ಸಮಾಲೋಚನೆ ಅವಶ್ಯ ಎಂದು ಪಂಚಾಯತ್ ರಾಜ್ ವಿಶ್ಲೇಷಕ ಟಿ.ಬಿ.ಶೆಟ್ಟಿ ಹೇಳಿದರು. ಕಳೆದ 2 ವರ್ಷಗಳಿಂದ ನರೇಗಾದಲ್ಲಿ ಕೈಗೊಳ್ಳುವ ಕ್ರಿಯಾಯೋಜನೆ ಜಾರಿಗೆ ವೆಂಡರ್ಗಳೇ ಮುಂದೆ ಬರುತ್ತಿಲ್ಲ. ಮಹತ್ವಾಕಾಂಕ್ಷೆಯ ಯೋಜನೆ ಹಳ್ಳ ಹಿಡಿಯುತ್ತಿದೆ ಎಂದು ಪಂಚಾಯಿತಿ ಪ್ರತಿನಿಧಿಗಳು ಆರೋಪಿಸಿದರು. ಇದಕ್ಕೆ ಸಂಸದ ಕೋಟ ಶ್ರೀನಿವಾಸ ಅವರು ಪ್ರತಿಕ್ರಿಯಿಸಿ ನರೇಗಾ ಸಂಬಂಧಿತ ಅಧಿಕಾರಿಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2024-25ನೇ ಸಾಲಿನ ಉತ್ತಮ ಪ್ರಾಚಾರ್ಯ ರಾಜ್ಯ ಪ್ರಶಸ್ತಿಗೆ ಕುಂದಾಪುರ ಸರಕಾರಿ ಪ. ಪೂ ಕಾಲೇಜು ಪ್ರಾಂಶುಪಾಲ ರಾಮಕೃಷ್ಣ ಬಿ. ಜಿ. ಅವರು ಭಾಜನರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದವರಾದ ರಾಮಕೃಷ್ಣ ಅವರು ಬೆಳೆಯೂರಿನಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ, ಮೈಸೂರು ವಿವಿಯಲ್ಲಿ ಪದವಿ ಹಾಗೂ ತತ್ವಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ. ಪೂ. ಶಿಕ್ಷಣ ಇಲಾಖೆಯ ಪ್ರಥಮ ಮತ್ತು ದ್ವಿತೀಯ ಪಿಯುಸಿ ಪಠ್ಯ ಪುಸ್ತಕ ರಚನಾ ಸಮಿತಿ ಅಧ್ಯಕ್ಷರಾಗಿದ್ದರು. ಕೊಪ್ಪ ಸರಕಾರಿ ಪ. ಪೂ.ಕಾಲೇಜಿನಲ್ಲಿ 10 ವರ್ಷ, ಕುಂದಾಪುರ ಸರಕಾರಿ ಪ.ಪೂ. ಕಾಲೇಜಿನಲ್ಲಿ 15 ವರ್ಷ ಉಪನ್ಯಾಸಕರಾಗಿದ್ದು, ಕಳೆದ 6 ವರ್ಷಗಳಿಂದ ಪ್ರಾಂಶುಪಾಲರಾಗಿದ್ದಾರೆ. ಕುಂದಾಪುರ ಜ್ಯೂನಿಯರ್ ಕಾಲೇಜಿನಲ್ಲಿ ಪ್ರಸ್ತುತ ವರ್ಷದಲ್ಲಿ 1391 ವಿದ್ಯಾರ್ಥಿಗಳು ಓದುತ್ತಿದ್ದು, ಬೇಡಿಕೆ ಇರುವ ಕಂಪ್ಯೂಟರ್ ಸೈನ್ಸ್ ಹಾಗೂ ಸಂಖ್ಯಾಶಾಸ್ತ್ರ ವಿಷಯವನ್ನು ಸೈನ್ಸ್ ಹಾಗೂ ಕಾಮರ್ಸ್ ವಿಭಾಗದೊಂದಿಗೆ ಜೋಡಿಸಿ ಹೆಚ್ಚಿನ ವಿದ್ಯಾರ್ಥಿಗಳನ್ನುಕಾಲೇಜಿಗೆ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಯೋಗ ಶೀಲತೆ ಜತೆಗೆ ಪುಸ್ತಕ ಗ್ರಂಥ ಭಂಡಾರ, ಜಿ. ಪಂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಮದರ್ ತೆರೇಸಾ ಎಜುಕೇಶನ್ ಟ್ರಸ್ಟ್ ಮಂಗಳೂರು, ಪ್ರವರ್ತಿತ ಮದರ್ ತೆರೇಸಾ ಪದವಿಪೂರ್ವ ಕಾಲೇಜು ಶಂಕರನಾರಾಯಣ, ಕುಂದಾಪುರ, ಇಲ್ಲಿನ ವಿದ್ಯಾರ್ಥಿಗಳು ಸೈಂಟ್ ಅಲೋಷಿಯಸ್ ಕಾಲೇಜ ಡೀಮಡ್ ಟು ಬಿ. ಯೂನಿವರ್ಸಿಟಿ ಮಂಗಳೂರು ಆ.31ರಂದು ನಡೆದ ಪದವಿಪೂರ್ವವಿದ್ಯಾರ್ಥಿಗಳ ಅಲೋಷಿಯನ್ ಫೆಸ್ಟ್ ವೈವಿಧ್ಯಮಯ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ರಾಜ್ಯದ ಹಲವು ಪದವಿಪೂರ್ವ ಕಾಲೇಜುಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು ಅದರಲ್ಲಿ ಶಂಕರನಾರಾಯಣ ಮದರ್ ತೆರೇಸಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮಹತ್ತರವಾದ ಸಾಧನೆಯನ್ನು ಮಾಡಿರುತ್ತಾರೆ. ಅಲ್ಲಿ ಹಮ್ಮಿಕೊಳ್ಳಲಾದ ವಿಭಿನ್ನ ಸ್ಪರ್ಧೆಗಳಾದ ಬಿಸಿನೆಸ್ ಮ್ಯಾನೇಜರ್ ಸ್ಪರ್ಧೆಯಲ್ಲಿ ನಿಶಾ ದ್ವಿತೀಯ, ಪಿಯುಸಿ ವಾಣಿಜ್ಯ ವಿಭಾಗ ಪ್ರಥಮ. ಐಟಿ ಮ್ಯಾನೇಜರ್ ಸ್ಪರ್ಧೆಯಲ್ಲಿ ಶ್ರೇಯಸ್ ಶೆಟ್ಟಿ ತೃತೀಯ , ಹಾಗೂ ಬಿಸಿನೆಸ್ ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ, ವಾಣಿಜ್ಯ ವಿಭಾಗದ ಆದಿತ್ಯ.ಬಿ ಮತ್ತು ಆದಿತ್ಯ. ಡಿ ಪ್ರಥಮ.ಪ್ರಾಡಕ್ಟ್ ಲಾಂಚಿಂಗ್ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ದೃಶ್ಯ ಮತ್ತು ಅಭಿನಯ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ . ಇದಲ್ಲದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಒಂದೇ ಭಾಷೆ, ಸಂಸ್ಕೃತಿ, ಜನಾಂಗವೇ ಶ್ರೇಷ್ಠ ಎಂಬ ಭಾವನೆ ಅಪಾಯಕಾರಿ. ಬಹುತ್ವವನ್ನು ಗೌರವಿಸುವುದು ಮುಖ್ಯ. ಮೌಢ್ಯವನ್ನು ಮೌಲ್ಯವಾಗಿ ಭಿತ್ತುತ್ತಿರುವ ವ್ಯವಸ್ಥೆಯ ನಡುವೆ ವೈಚಾರಿಕತೆಯನ್ನು ಬೆಳೆಸುವ ಶಿಕ್ಷಣ, ಸಂಘಟನೆ, ಸಾಹಿತ್ಯ ಇನ್ನಷ್ಟು ಬೇಕಾಗಿದೆ ಎಂದು ಕಥೆಗಾರ ದಯಾನಂದ ಹೇಳಿದರು. ಅವರು ಮಂಗಳವಾರ ಇಲ್ಲಿನ ಭಂಡಾರ್ಕಾರ್ಸ್ ಆರ್ಟ್ಸ್ ಮತ್ತು ಸಾಯನ್ಸ್ ಕಾಲೇಜು ಆಯೋಜಿಸಿದ್ದ 13ನೇ ಡಾ. ಹೆಚ್. ಶಾಂತರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದರು. ಯುವಜನತೆ ಸಾಹಿತ್ಯ ಹಾಗೂ ಓದಿನಿಂದ ವಿಮುಖರಾಗಿದ್ದಾರೆ ಅನ್ನೋದು ಬಹುಕಾಲದ ಮಾತು. ಆದರೆ ಸಾಹಿತ್ಯದ ಆಸಕ್ತಿ ಇರುವವರು ಎಲ್ಲಾ ಕಾಲದಲ್ಲೂ ಇದ್ದಾರೆ. ಸಾಹಿತ್ಯ ಮಾತ್ರ ವ್ಯಕ್ತಿಯನ್ನು ಚಿಂತನೆಗೆ ಹಚ್ಚುತ್ತದೆ. ಭೌದ್ಧಿಕ ಬೆಳವಣಿಗೆಯ ದಾರಿಯಾಗಿದೆ. ಅಂಬೇಡ್ಕರ್ ಅವರಿಗೆ ಓದು ವಿಮೋಚನೆಯ ಸಾಧ್ಯತೆಯಾಗಿ ಕಂಡಿತ್ತು ಎಂದರು. ಪ್ರಶಸ್ತಿ ಆಯ್ಕೆ ಸಮಿತಿಯ ತೀರ್ಪುಗಾರರಾಗಿದ್ದ ಪತ್ರಕರ್ತ, ಕಥೆಗಾರ ಡಾ. ಟಿ.ಎಸ್. ಗೊರವ ಗಜೇಂದ್ರಗಡ ಅವರು ಮಾತನಾಡಿ ಬುದ್ಧನ ಕಿವಿ ಕಥಾಸಂಕಲನದ ಕತೆಯಲ್ಲಿ ಬರುವ ಪಾತ್ರಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಆ.27ರಿಂದ 31ರವರೆಗೆ ನಡೆದ ರಾಜ್ಯಮಟ್ಟದ ಎನ್.ಎಸ್.ಎಸ್. ಯುವಜನೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ತಂಡವನ್ನು ಪ್ರತಿನಿಧಿಸಿದ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕ ಸುಜಯ್ ಶೆಟ್ಟಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ವೈಯಕ್ತಿಕವಾಗಿ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ, ಗುಂಪು ಸ್ಪರ್ಧೆಯಲ್ಲಿ ಪ್ರಹಸನ ಮತ್ತು ಸಮೂಹಗಾನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. 21 ವಿಶ್ವವಿದ್ಯಾನಿಲಯಗಳು ಭಾಗವಹಿಸಿದ ಈ ಯುವಜನೋತ್ಸವ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅತೀ ಹೆಚ್ಚು ಸ್ಪರ್ಧೆಗಳಲ್ಲಿ ಗೆಲ್ಲುವ ಮೂಲಕ ಸಮಗ್ರ ಪ್ರಶಸ್ತಿಪಡೆದಿದ್ದಾರೆ. ಅವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬ್ಯೆಂದೂರು ವಲಯ ನಾಡದೋಣಿ ಮೀನುಗಾರರ ಸಂಘ, ಉಪ್ಪುಂದ ಮತ್ತು ಗಂಗೊಳ್ಳಿ ಕರಾವಳಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸಂಘ ಇದರ ಜಂಟಿ ಆಶ್ರಯದಲ್ಲಿ ಶನಿವಾರ ಉಪ್ಪುಂದದಲ್ಲಿ ನಾಡದೋಣಿ ಮೀನುಗಾರರ ಸಭೆ ನಡೆಯಿತು. ಮಂಗಳೂರಿನಿಂದ ಕಾರವಾರದ ತನಕ ಇರುವ ನಾಡದೋಣಿ ಮೀನುಗಾರರ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದು, ಮೀನು ಮರಿ ಸಂತತಿಗಳು ನಾಶವಾಗುವಂಥ ಅವೈಜ್ಞಾನಿಕ ಮೀನುಗಾರಿಕೆಯಾದ ಬುಲ್ಟ್ರಾಲ್ ಮತ್ತು ಬೆಳಕು ಮೀನುಗಾರಿಕೆ ನಿಷೇಧ ಮಾಡಬೇಕೆಂಬ ಒಮ್ಮತದ ಅಭಿಪ್ರಾಯಕ್ಕೆ ಬಂದಿರುತ್ತಾರೆ. ಅದೇ ದಿನ ಮಧ್ಯಾಹ್ನ ಭಟ್ಕಳ ತಾಲೂಕು ಕಛೇರಿಯಲ್ಲಿ ಮಾನ್ಯ ಮೀನುಗಾರಿಕಾ ಸಚಿವ ಎಸ್. ಮಂಕಾಳ ವೈದ್ಯ ಅವರನ್ನು ಭೇಟಿ ಮಾಡಿ, ಮೀನು ಮರಿ ಸಂತತಿಗಳು ನಾಶವಾಗುವಂತಹ ಅವೈಜ್ಞಾನಿಕ ಮೀನುಗಾರಿಕೆಯಾದ ಬುಲ್ಟ್ರಾಲ್ ಮತ್ತು ಬೆಳಕು ಮೀನುಗಾರಿಕೆಯನ್ನು ನಿಷೇಧ ಮಾಡಬೇಕೆಂಬ ಮನವಿಯನ್ನು ಸಲ್ಲಿಸಲಾಯಿತು. ಮನವಿಯನ್ನು ಕೂಲಂಕುಶವಾಗಿ ಪರಿಶೀಲನೆ ಮಾಡಿದ ಸಚಿವರು ಒಂದು ತಿಂಗಳೊಳಗೆ ಈ ವಿಚಾರಕ್ಕೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳನ್ನು ಮತ್ತು ಎಲ್ಲಾ ಮೀನುಗಾರರ ಸಂಘಟನೆಯ ಮುಖಂಡರನ್ನು ಕರೆಸಿ ಸಭೆ ನಡೆಸಿ ಇದಕ್ಕೊಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ದಕ್ಷಿಣ ಕನ್ನಡ ಅಥ್ಲೆಟಿಕ್ಸ್ ಸಂಸ್ಥೆಯ ವತಿಯಿಂದ ನಡೆದ ದಕ್ಷಿಣ ಕನ್ನಡ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋಟ್ಸ್ ಕ್ಲಬ್ನ ವಿದ್ಯಾರ್ಥಿಗಳು 25 ಚಿನ್ನ, 18 ಬೆಳ್ಳಿ, 20 ಕಂಚು ಒಟ್ಟು 63 ಪದಕಗಳನ್ನು ಪಡೆದುಕೊಂಡರು. ಸೆಪ್ಟಂಬರ್ 14 ರಿಂದ 17 ರವರೆಗೆ ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕಿರಿಯರ ಹಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್ನಿಂದ ಕಿರಿಯರ ವಿಭಾಗದಲ್ಲಿ 60 ವಿದ್ಯಾರ್ಥಿಗಳು ಹಾಗೂ ಹಿರಿಯರ ವಿಭಾಗದಲ್ಲಿ 30 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 90 ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ರಾಜ್ಯ ಮಟ್ಟದಲ್ಲಿ ನಡೆಯಲಿರುವ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸುತ್ತಿರುವ ವಿದ್ಯಾರ್ಥಿಗಳಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳು ಆಳ್ವಾಸ್ ಸ್ಪೋರ್ಟ್ಸ್ ಕ್ಷಬ್ನ್ನು ಪ್ರತಿನಿಧಿಸಲಿದ್ದಾರೆ. ಫಲಿತಾಂಶ :14 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ:ಚಕ್ರವರ್ತಿ- ತ್ರಯತ್ಲನ್ ಸಿ (ಪ್ರಥಮ), ಚಿರಾಗ್- ತ್ರಯತ್ಲನ್ ಸಿ (ದ್ವಿತೀಯ), ಆದಿತ್ಯ- ತ್ರಯತ್ಲನ್ ಸಿ (ದ್ವಿತೀಯ), ಅಮರೇಶ್- ತ್ರಯತ್ಲನ್ ಎ (ಪ್ರಥಮ), ಕೌಶಿಕ್- ತ್ರಯತ್ಲನ್ ಎ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಬಾಲ್ಯದಲ್ಲಿ ಪೋಷಕರು ಮಕ್ಕಳಿಗೆ ನಮ್ಮ ಸಂಸ್ಕೃತಿ ಸಂಸ್ಕಾರದ ಶಿಕ್ಷಣವನ್ನು ನೀಡಿದರೆ ಅದು ಅವರಿಗೆ ಮುಂದಿನ ಭವಿಷ್ಯದಲ್ಲಿ ಸತ್ಪ್ರಜೆಯಾಗಿ ಬೆಳೆಯಲು ಸಹಕಾರಿಯಾಗುತ್ತದೆ. ಮನೆಯೇ ಮೊದಲ ಪಾಠ ಶಾಲೆ ಎಂಬಂತೆ ಮನೆಯಲ್ಲಿ ಪೋಷಕರು ಮಕ್ಕಳನ್ನು ಸನ್ಮಾರ್ಗದಲ್ಲಿ ಮುನ್ನಡೆಯಲು ಬೇಕಾಗುವ ಶಿಕ್ಷಣವನ್ನು ಮಾರ್ಗದರ್ಶನವನ್ನು ನೀಡಬೇಕು. ಮಕ್ಕಳಿಗೆ ಉತ್ತಮ ಸಂಸ್ಕಾರಗಳು ದೊರೆತರೆ ನಮ್ಮ ಸಂಸ್ಕೃತಿ ಬೆಳೆಯಲು ಸಾಧ್ಯ ಎಂದು ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಚಂದ್ರಕಲಾ ಎಸ್. ತಾಂಡೇಲ ಹೇಳಿದರು. ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಗಂಗೊಳ್ಳಿ ಇವರ ಆಶ್ರಯದಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಸಹಯೋಗದೊಂದಿಗೆ ಗಂಗೊಳ್ಳಿಯ ಶ್ರೀ ವಿಜಯ ವಿಠಲ ಮಂಟಪದಲ್ಲಿ ಭಾನುವಾರ ಜರಗಿದ 38ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಅವರು ಮಾತನಾಡಿದರು. ಭಟ್ಕಳ ಕುಂಟವಾಣಿ ಸರಕಾರಿ ಪ್ರೌಢಶಾಲೆಯ ಸಹಶಿಕ್ಷಕ ಡಾ. ಸುರೇಶ ಎಂ. ತಾಂಡೇಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಸೇವಾ ಸಂಗಮ ಶಿಶು ಮಂದಿರದ ಅಧ್ಯಕ್ಷ ಮಂಜುನಾಥ ಶೆಟ್ಟಿ ಕಾರ್ಯಕ್ರಮದಲ್ಲಿ ಬೌದ್ಧಿಕ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯದ ಅರ್ಹ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಸಮುದಾಯದ 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯಡಿ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ಎಸ್.ಎಸ್.ಪಿ ತಂತ್ರಾಂಶದಲ್ಲಿ ವೆಬ್ಸೈಟ್ https://ssp.postmatric.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಹಾಯವಾಣಿ ಸಂಖ್ಯೆ: 8277799990, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೌಲಾನಾ ಆಜಾದ್ ಭವನ ಅಲೆವೂರು ರಸ್ತೆ ಮಣಿಪಾಲ ದೂ.ಸಂಖ್ಯೆ: 0820-2573596, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮಣಿಪಾಲ, ದೂ.ಸಂ: 0820-2574596, ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
