ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪ್ರಧಾನಿ ನರೇಂದ್ರ ಮೋದಿಜಿ ಅವರ 25 ವರ್ಷಗಳ ಸಾರ್ವಜನಿಕ ಸೇವೆಯನ್ನು ಸ್ಮರಿಸಿ ಹಮ್ಮಿಕೊಂಡಿರುವ “ಸೇವಾ ಸಂಕಲ್ಪ ಅಭಿಯಾನ”ದ ಅಂಗವಾಗಿ, ಬಿಜೆಪಿ ಮಹಿಳಾ ಮೋರ್ಚಾ ಕುಂದಾಪುರ ಮಂಡಲ ವತಿಯಿಂದ ಗುಂಡ್ಮಿ ಹದ್ದಿನ ಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಅಂಗನವಾಡಿ ಉತ್ಸವ ನೆರವೇರಿತು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಕಲಿಕಾ ಸಾಮಗ್ರಿ ಮತ್ತು ಪೌಷ್ಟಿಕ ಆಹಾರ ಕಿಟ್ ವಿತರಿಸಿ ಮಾತನಾಡಿದ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅವರು, “ಬಲಿಷ್ಠ ಮಕ್ಕಳಿಂದಲೇ ಬಲಿಷ್ಠ ಭಾರತ ನಿರ್ಮಾಣ. ಮೋದಿಜಿ ಅವರು ಜಾರಿಗೆ ತಂದ ಪೋಷಣ್ ಅಭಿಯಾನ ಮಕ್ಕಳ ಆರೋಗ್ಯಕ್ಕೆ ಹೊಸ ಶಕ್ತಿ ನೀಡಿದೆ. ಅಂಗನವಾಡಿಯಿಂದಲೇ ವಿಕಸಿತ ಭಾರತದ ಬುನಾದಿ ಆರಂಭ” ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮೋರ್ಚಾ ಅಧ್ಯಕ್ಷೆ ಸೌರಭಿ ಪೈ ಅವರು ಸ್ವಾಗತಿಸಿ ಮಾತನಾಡಿ, “ಮಗುವಿನ ಮೊದಲ ಶಾಲೆಯೇ ಅಂಗನವಾಡಿ” ಎಂದರು. ಕಾರ್ಯಕ್ರಮದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ.ಎಸ್, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಜಯೇಂದ್ರ ಪೂಜಾರಿ,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೋದಿಜಿ ಅವರ 25 ವರ್ಷಗಳ ಸೇವಾ ಪಯಣ ಪ್ರತಿಯೊಬ್ಬ ಕಾರ್ಯಕರ್ತನಿಗೂ ಸ್ಫೂರ್ತಿ. ಅಂತ್ಯೋದಯದ ಮಂತ್ರದೊಂದಿಗೆ ಕೊನೆಯ ವ್ಯಕ್ತಿಯನ್ನು ತಲುಪುವುದೇ ಈ ಸೇವಾ ಸಂಕಲ್ಪ ಅಭಿಯಾನದ ಉದ್ದೇಶ. ಭಾರತದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜಿ ಅವರ ೨೫ ವ?ಗಳ ಸಾರ್ವಜನಿಕ ಸೇವೆಯನ್ನು ಹಾಗೂ ದೇಶದ ಅಭಿವೃದ್ಧಿ ಅಹರ್ನಿಶಿ ದುಡಿಯುತ್ತಿರುವ ನರೇಂದ್ರ ಮೋದಿಯವರನ್ನು ದೇಶದ ಪ್ರತಿಯೊಬ್ಬ ನಾಗರಿಕ ಸ್ಮರಿಸಿಕೊಳ್ಳಬೇಕು ಎಂದು ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷೆ ಅನಿತಾ ಆರ್.ಕೆ. ಹೇಳಿದರು. ಅವರು ಭಾರತೀಯ ಜನತಾ ಪಾರ್ಟಿ ವತಿಯಿಂದ ಹಮ್ಮಿಕೊಳ್ಳಲಾದ “ಸೇವಾ ಸಂಕಲ್ಪ ಅಭಿಯಾನ”ದ ಅಂಗವಾಗಿ ಬಿಜೆಪಿ ಮಹಿಳಾ ಮೋರ್ಚಾ ಬೈಂದೂರು ಮಂಡಲ ವತಿಯಿಂದ ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದಲ್ಲಿ ಬುಧವಾರ ಜರಗಿದ ’ಅಂಗನ್ ಕಾ ಮಿಲನ್’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ಯಾಮಲಾ ಕುಂದರ್ ವಹಿಸಿದ್ದರು. ಇದೇ ಸಂದರ್ಭ ಶಿಶು ಮಂದಿರದ ಮಾತಾಜಿ ಪ್ರೇಮಾ ಮತ್ತು ಸಹಾಯಕಿ ರತ್ನಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಖ್ಯಾತ ಕಾರ್ಟೂನಿಸ್ಟ್ ಸತೀಶ್ ಆಚಾರ್ಯ ಅವರ ಇನ್‌ಸ್ಟಾಗ್ರಾಂ ಖಾತೆಯನ್ನು ಮೆಟಾ ಭಾರತದಲ್ಲಿ ನಿರ್ಬಂಧಿಸಿದೆ. ಅವರ ಇನ್‌ಸ್ಟಾಗ್ರಾಂ ಖಾತೆಯನ್ನು ಭಾರತದಲ್ಲಿ ತೆರೆಯಲು ಸಾಧ್ಯವಾಗುತ್ತಿಲ್ಲ. ಪ್ರವೇಶವನ್ನು ಸ್ಥಳೀಯ ಕಾನೂನಿನ ಕಾರಣಕ್ಕೆ ನಿರ್ಬಂಧಿಸಲಾಗಿದೆ ಎಂದು ಇನ್‌ಸ್ಟಾಗ್ರಾಂ ಸಂದೇಶ ತಿಳಿಸಿದೆ. ವಿಷಯವನ್ನು ಪರಿಶೀಲಿಸಿದ ಬಳಿಕ ಮತ್ತು ಕಾನೂನು ಹಾಗೂ ಮಾನವ ಹಕ್ಕುಗಳ ಹಕ್ಕುಗಳ ಅಂಶಗಳನ್ನು ಪರಿಗಣಿಸಿ ನಿರ್ಬಂಧ ವಿಧಿಸಲಾಗಿದೆ ಎಂದು ಅದು ಹೇಳಿದೆ. ಇನ್‌ಸ್ಟಾಗ್ರಾಂ ಖಾತೆಯ ನಿರ್ಬಂಧ ವಿಚಾರವನ್ನು ಸತೀಶ್ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಕಾರ್ಟೂನ್‌ಗೆ ಹೆದರುವ ಸರಕಾರ ಇದುವರೆಗೆ ನೋಡಿಲ್ಲ ಎಂದು ಹೇಳಿಕೊಂಡಿದ್ದಾರೆ. ಮತ್ತೊಬ್ಬ ಕಾರ್ಟೂನಿಸ್ಟ್ ಮಂಜುಲ್ ಅವರ ಚುನಾವಣಾ ಆಯೋಗಕ್ಕೆ ಸಂಬಂಧಿ ಸಿದ ವ್ಯಂಗ್ಯಚಿತ್ರಕ್ಕೂ ಭಾರತದಲ್ಲಿ ಇನ್ ಸ್ಟಾಗ್ರಾಂ ಪ್ರವೇಶ ನಿರ್ಬಂಧಿಸಿದೆ. ಭಾರತ ಸರಕಾರ ಅಥವಾ ಕಾನೂನು ಜಾರಿ ಸಂಸ್ಥೆಗಳಿಂದ ಬಂದ ಸೂಚನೆಯ ಮೇರೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಂಜುಲ್ ತಿಳಿಸಿದ್ದಾರೆ. ತಮ್ಮ ಕೆಲವು ಪೋಸ್ಟ್‌ಗಳನ್ನು ತೆಗೆದುಹಾಕುವ ಮೊದಲು ಮೆಟಾದಿಂದ ಯಾವುದೇ ಸೂಚನೆ ಬಂದಿರಲಿಲ್ಲ. ಬಳಿಕ ಭಾರತದಲ್ಲಿ ತಮ್ಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಂಗಳೂರು – ಮಡಗಾಂವ್ ತನಕ ಇದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಬೆಂಗಳೂರಿಗೆ ವಿಸ್ತರಣೆಯಾಗಿದ್ದು, ಅಧಿಕೃತ ಘೋಷಣೆಯಾಗಿದೆ. ಜೊತೆಗೆ ಕುಂದಾಪುರ ಬೈಂದೂರು ನಿಲ್ದಾಣಗಳಲ್ಲಿಯೂ ನಿಲುಗಡೆಯಾಗಲಿದೆ. ವಂದೇ ಭಾರತ್ ರೈಲು ಬೆಂಗಳೂರಿಗೆ ವಿಸ್ತರಣೆ ಹಾಗೂ ಕುಂದಾಪುರದಲ್ಲಿ ನಿಲುಗಡೆಯಾಗುತ್ತಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಸಂಸದ ಕೋಟ ಶೀನಿವಾಸ ಪೂಜಾರಿ ಅವರು ಗೌರವಾನ್ವಿತ ಕೇಂದ್ರ ರೈಲು ಸಚಿವರಾದ ಅಶ್ವಿನಿ ವೈಷ್ಣವ್ ರವರು ರೈಲು ವಿಸ್ತರಣೆ ಆದೇಶದ ಬಗ್ಗೆ ಘೋಷಿಸಿದ್ದಾರೆ. ಬೆಂಗಳೂರು-ಮಂಗಳೂರು-ಉಡುಪಿ-ಕಾರವಾರ-ಮಡಗಾಂವ್ ವಂದೇ ಭಾರತ್ ರೈಲು ಯೋಜನೆಗೆ ಸಂಬಂಧಿಸಿದಂತೆ ತಿಂಗಳಿಗೊಮ್ಮೆ ಮಾನ್ಯ ಸಚಿವರುಗಳಲ್ಲಿ ಪತ್ರ ಹಾಗೂ ಭೇಟಿಯ ಮೂಲಕ ಬೇಡಿಕೆ ಸಲ್ಲಿಸುತ್ತಲೇ ಬರುತ್ತಿದೆ. ಅಂತಿಮವಾಗಿ ನಮ್ಮ ಪ್ರಯತ್ನಕ್ಕೆ ಫಲ ದೊರೆತಿದೆ. ವಂದೇ ಮಾತರಂ ಸಂಪೂರ್ಣ ರಾಷ್ಟ್ರಗೀತೆಗೆ ಬೆಂಬಲಿಸಿ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗುತ್ತಿರುವ ಇದೇ ಸಂದರ್ಭದಲ್ಲಿ ಮಹತ್ವಾಕಾಂಕ್ಷೆಯ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಒದಗಿ ಬಂದಿದ್ದು ಭಾರತ ಮಾತೆಯ ಕೃಪೆಯೇ ಸರಿ ಎಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆಯಾದ ಈ ಮಹತ್ತರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಂಗಳೂರು–ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲ್‌ನ್ನು ಮೂಕಾಂಬಿಕಾ ರೋಡ್–ಬೈಂದೂರು ನಿಲ್ದಾಣದ ಮೂಲಕ ಬೆಂಗಳೂರು (ಯಶವಂತಪುರ) ವರೆಗೆ ವಿಸ್ತರಿಸಿರುವುದಕ್ಕೆ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಹಾಗೂ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣನವರಿಗೆ ಜನತೆ ಪರವಾಗಿ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ. ಸ್ವತಃ ಕೇಂದ್ರ ರೈಲ್ವೆ ಸಚಿವ ಅಷ್ವಿನಿ ವೈಷ್ಣವ್ ಅವರೇ ಸಂಸದ ರಾಘವೇಂದ್ರ ಅವರಿಗೆ ಅಧಿಕೃತವಾಗಿ ಮಾಹಿತಿ ನೀಡಿದ್ದು, ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವ ಸಂಸದ ರಾಘವೇಂದ್ರ, ಈ ಭಾಗದ ಜನರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ ಎಂದು ಹೇಳಿದ್ದಾರೆ. ಬೆಂಗಳೂರು, ಮಲೆನಾಡು, ಕರಾವಳಿ ಕರ್ನಾಟಕ ಹಾಗೂ ಗೋವಾ ನಡುವಿನ ರೈಲು ಸಂಪರ್ಕವನ್ನು ಇದು ಮತ್ತಷ್ಟು ಬಲಪಡಿಸಲಿದೆ. ಈ ಸುಧಾರಿತ ಸಂಪರ್ಕದಿಂದ ತಮ್ಮ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಬೈಂದೂರು, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಪ್ರವಾಸೋದ್ಯಮ ಮತ್ತು ಯಾತ್ರಾ ನಕ್ಷೆಯಲ್ಲಿ ಮತ್ತಷ್ಟು ಪ್ರಮುಖ ಸ್ಥಾನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಾದ ಮೂಡ್ಲಕಟ್ಟೆ ಹಾಗೂ ಬಸ್ರೂರು ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಂಜೆ 3:45ರ ಸುಮಾರಿಗೆ ತರಗತಿ ಮುಗಿಯಲಿದ್ದು ಇವರಿಗೆ ಕುಂದಾಪುರದ ಮೂಲಕ ದೂರದ ಊರುಗಳಿಗೆ ತೆರಳಲು ಸಂಜೆ 4:00 ಗಂಟೆಗೆ ಕೇವಲ ಒಂದು ಸರ್ಕಾರಿ ಬಸ್ಸು ಮಾತ್ರ ಇರುವುದರಿಂದ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ವಿದ್ಯಾರ್ಥಿಗಳ ಈ ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ಹೆಚ್ಚುವರಿ ಸರ್ಕಾರಿ ಬಸ್ಸುಗಳ ಸೇವೆಯನ್ನು ಒದಗಿಸಬೇಕು ಎಂದು ಕುಂದಾಪುರ ತಾಲ್ಲೂಕು ರೈತ ಸಂಘದ ಅಧ್ಯಕ್ಷರಾದ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ಆಗ್ರಹಿಸಿದ್ದಾರೆ. ಶ್ರೀ ಶಾರದಾ ಕಾಲೇಜು ಬಸ್ರೂರಿನ ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಐ ಎಂ ಜೆ ಮತ್ತು ಎಂ ಐ ಟಿ ತಾಂತ್ರಿಕ ಮಹಾವಿದ್ಯಾಲಯ ಮೂಡ್ಲಕಟ್ಟೆ ಕಾಲೇಜುಗಳ ಸುಮಾರು 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಕುಂದಾಪುರದ ಬಿ ಸಿ ಎಂ ಹಾಸ್ಟೆಲ್‌ನ ವಿದ್ಯಾರ್ಥಿಗಳು ಸರ್ಕಾರಿ ಬಸ್ಸುಗಳನ್ನೇ ಅವಲಂಬಿಸಿದ್ದಾರೆ. ಇಷ್ಟೊಂದು ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಒಂದೇ ಬಸ್‌ನಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ (Students’ Welfare Council) 2026-27ನೇ ಸಾಲಿನ ಪದಗ್ರಹಣ ಸಮಾರಂಭವು ಸೋಮವಾರ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಿತು. ಬಾರ್ಕೂರಿನ ಎಸ್.ಆರ್.ಎಸ್.ಎಂ.ಎನ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಭಾಸ್ಕರ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಅವರು ನೂತನ ವಿದ್ಯಾರ್ಥಿ ಕಲ್ಯಾಣ ಮಂಡಳಿಯ ಸದಸ್ಯರಿಗೆ ಶುಭಹಾರೈಸಿ, ವಿದ್ಯಾರ್ಥಿಗಳು ನಾಯಕತ್ವದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವಂತೆ ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್. ನಾಯಕ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ, ಡಾ. ಎಂ. ವಿಶ್ವನಾಥ ಪೈ ಅವರ ನೇತೃತ್ವದಲ್ಲಿ ಪದಗ್ರಹಣ ಹಾಗೂ ಪ್ರಮಾಣ ವಚನ ಸ್ವೀಕಾರ ನಡೆಯಿತು. ಸಂಘದ ಕಾರ್ಯದರ್ಶಿಗಳಿಗೆ ದಾಖಲೆಗಳ ಫೋಲ್ಡರ್‌ಗಳನ್ನು ಹಸ್ತಾಂತರಿಸಲಾಯಿತು. ಎಂಜಿಎಂ ಕಾಲೇಜಿನ ಪ್ರಾಂಶುಪಾಲೆ ಡಾ. ಗಾಯತ್ರಿ ಜಿ. ಪೈ, ಎಂಜಿಎಂ ಪಿಯು ಕಾಲೇಜಿನ ಪ್ರಾಂಶುಪಾಲೆ ಮಾಲತಿ ದೇವಿ ಹಾಗೂ ಟಿಎಂಎ ಪೈ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್‌ನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಧನಶ್ರೀ ಯೋಜನೆ (ಹೆಚ್.ಐವಿ/ಏಡ್ಸ್ ಸೋಂಕಿತ/ಬಾದಿತ ಮಹಿಳೆಯರಿಗೆ), ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ (ಟ್ರಾನ್ಸ್ಜೆಂರ‍್ಸ್ ವ್ಯಕ್ತಿಗಳಿಗೆ), ಚೇತನಾ ಯೋಜನೆ (ದಮನಿತ ಮಹಿಳೆಯರಿಗೆ) ಹಾಗೂ ಉದ್ಯೋಗಿನಿ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹರಿಂದ ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಹಾಗೂ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಬಿವೃದ್ಧಿ ನಿಗಮದ ಕಛೇರಿ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, 1ನೇ ಮಹಡಿ, ಬಿ ಬ್ಲಾಕ್, ರೂಂ ನಂ.204, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574978 ಅಥವಾ ಉಡುಪಿ ದೂ.ಸಂಖ್ಯೆ 0820-2524055, ಕುಂದಾಪುರ ದೂ.ಸಂಖ್ಯೆ: 08254-230807, ಕಾರ್ಕಳ ದೂ.ಸಂಖ್ಯೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ : ಪ್ರತಿಭಾನ್ವಿತ ವಿದ್ಯಾರ್ಥಿಗಳು ಆರ್ಥಿಕ ಸಹಾಯವನ್ನು ಪಡೆದು ಮುಂದೆ ಉದ್ಯೋಗ ಪಡೆದ ನಂತರ ಇನ್ನಷ್ಟು ಜನರಿಗೆ ಧನ ಸಹಾಯ ಮಾಡುವ ಮೂಲಕ ಸಾಮಾಜಿಕ ಜವಾಬ್ದಾರಿಯನ್ನು ಅರಿಯಬೇಕು ಎಂದು ಕುಂದಾಪುರದ ರೋಟರಿ ಕ್ಲಬ್ ದಕ್ಷಿಣದ ಅಧ್ಯಕ್ಷ ಡಾ. ಆದರ್ಶ ಹೆಬ್ಬಾರ್ ಹೇಳಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಸುಪ್ರಿಯಾ ಕಾಮತ್ ಬ್ಯಾನರ್ಜಿ ಸ್ಕಾಲರ್‌ಶಿಪ್ ಹಸ್ತಾಂತರಿಸಿ ಮಾತನಾಡಿದರು. ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ರಮಾನಂದ ಕಾರಂತ್ ಸ್ಕಾಲರ್‌ಶಿಪ್ ಚೆಕ್ ಹಸ್ತಾಂತರಿಸಿ ಆಶಯ ನುಡಿಗಳನ್ನಾಡಿದರು. ಈ ಸಂದರ್ಭ ಮನೋಹರ್ ಪಿ ಉಪಸ್ಥಿತರಿದ್ದರು. ಆಡಳಿತ ನಿಕಾಯಕ ಮತ್ತು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ಕಾರ್ಯಕ್ರಮ ಸಂಯೋಜಿಸಿದರು. ಕನ್ನಡ ಸಹಾಯಕ ಪ್ರಾಧ್ಯಾಪಕಿ ರೇಷ್ಮಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಸರ್ವಾಂಗಾಸನದಲ್ಲಿ ನಿರಂತರವಾಗಿ ಆಸನ ನಿರ್ವಹಿಸಿದ ಸಾಧನೆಗಾಗಿ ಆಳ್ವಾಸ್ ಕಾಲೇಜ್ ಆಫ್ ನ್ಯಾಚುರೋಪತಿ ಅಂಡ್ ಯೋಗಿಕ್ ಸೈನ್ಸಸ್‌ನ ತೃತೀಯ ವರ್ಷದ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ವಿದ್ಯಾರ್ಥಿ ಪಿ.ಕೆ. ವಿಕಾಸ್‌ರವರು ಬುಕ್ ಆಫ್ ವರ್ಲ್ಡ ರೆಕಾರ್ಡ್ಸನಿಂದ ವಿಶ್ವ ದಾಖಲೆಯ ಮಾನ್ಯತೆ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದ ವಿಕಾಸ್‌ರವರು ಐದನೇ ತರಗತಿಯಿಂದಲೇ ಯೋಗಾಭ್ಯಾಸ ಆರಂಭಿಸಿದ್ದು, ಕಳೆದ 11 ವರ್ಷಗಳಿಂದ ನಿರಂತರವಾಗಿ ಯೋಗವನ್ನು ಅಭ್ಯಾಸ ಮಾಡುತ್ತಿದ್ದಾರೆ. ಸರ್ವಾಂಗಾಸನದ ಪ್ರದರ್ಶನದಲ್ಲಿ ಸಮತೋಲನ, ದೈಹಿಕ ಸಾಮರ್ಥ್ಯ, ನಮ್ಯತೆ, ಸ್ಥಿರತೆ, ಏಕಾಗ್ರತೆ ಹಾಗೂ ಸಹನಶಕ್ತಿಯನ್ನು ಸಮರ್ಥವಾಗಿ ಪ್ರದರ್ಶಿಸಿರುವುದಾಗಿ ಪ್ರಮಾಣಪತ್ರದಲ್ಲಿ ಉಲ್ಲೇಖಿಸಲಾಗಿದೆ. ಯೋಗ ಕ್ಷೇತ್ರದಲ್ಲಿ ಹಲವು ಗಮನಾರ್ಹ ಸಾಧನೆಗಳನ್ನು ಮಾಡಿರುವ ವಿಕಾಸ್ ಅವರು, 2023, 2024 ಹಾಗೂ 2025ರಲ್ಲಿ ಬೆಂಗಳೂರಿನಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಯೋಗ ಸ್ಪರ್ಧೆಗಳಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. 2022ರಲ್ಲಿ ನಡೆದ ಡಬ್ಲ್ಯುಎಫ್‌ಎಫ್ ರಾಜ್ಯಮಟ್ಟದ ಯೋಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. 2024ರಲ್ಲಿ ನವದೆಹಲಿಯ…
