Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್‌ಡಿಎ) ಆಯ್ಕೆ ಪ್ರಕ್ರಿಯೆಯಲ್ಲಿ ಪಠ್ಯಜ್ಞಾನಕ್ಕಿಂತ ಅಭ್ಯರ್ಥಿಗಳ ನಾಯಕತ್ವ ಗುಣ, ವ್ಯಕ್ತಿತ್ವ, ತಾರ್ಕಿಕ ಚಿಂತನೆ ಮತ್ತು ನಿರ್ಧಾರ ಕೈಗೊಳ್ಳುವ ಸಾಮರ್ಥ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ಮಂಗಳೂರು ಸೇನಾ ನೇಮಕಾತಿ ಕಚೇರಿಯ ನಿರ್ದೇಶಕ ಕರ್ನಲ್ ಸೋಮು ಜಿ. ಮಹಾರಾಜನ್ ಹೇಳಿದರು. ಅವರು ಆಳ್ವಾಸ್ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ಎನ್‌ಡಿಎ ಆಕಾಂಕ್ಷಿ ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರ್ವೀಸಸ್ ಸೆಲೆಕ್ಷನ್ ಬೋರ್ಡ್ (ಎಸ್‌ಎಸ್‌ಬಿ) ಆಯ್ಕೆ ಪ್ರಕ್ರಿಯೆಯು ಕೇವಲ ಶೈಕ್ಷಣಿಕ ಸಾಧನೆಯನ್ನು ಪರೀಕ್ಷಿಸುವುದಿಲ್ಲ. ಅಭ್ಯರ್ಥಿಯ ವ್ಯಕ್ತಿತ್ವ, ಭಾವನಾತ್ಮಕ ಸ್ಥಿರತೆ, ಸಂವಹನ ಕೌಶಲ್ಯ, ಸಮಸ್ಯೆಗಳನ್ನು ವಿಶ್ಲೇಷಿಸುವ ಸಾಮರ್ಥ್ಯ ಹಾಗೂ ಒತ್ತಡದ ಸಂದರ್ಭಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವ ಗುಣಗಳನ್ನು ವಿವಿಧ ಹಂತಗಳಲ್ಲಿ ಮೌಲ್ಯಮಾಪನ ಮಾಡಲಾಗುತ್ತದೆ. ಮನೋವೈಜ್ಞಾನಿಕ ಪರೀಕ್ಷೆಗಳು, ಗುಂಪು ಚರ್ಚೆ, ನಾಯಕತ್ವ ಚಟುವಟಿಕೆಗಳು, ಸಮಸ್ಯೆ ಪರಿಹಾರ ಕಾರ್ಯಗಳು ಮತ್ತು ವೈಯಕ್ತಿಕ ಸಂದರ್ಶನಗಳ ಮೂಲಕ ಅಭ್ಯರ್ಥಿಯ ಆಲೋಚನಾ ವಿಧಾನ, ನಾಯಕತ್ವ ಸಾಮರ್ಥ್ಯ, ಸಂವಹನ ಕೌಶಲ್ಯ, ತಂಡದೊಂದಿಗೆ ಕಾರ್ಯನಿರ್ವಹಿಸುವ ಮನೋಭಾವ ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳಲ್ಲಿ ಆಸಕ್ತಿ, ಛಲ ಮತ್ತು ಪ್ರಯತ್ನ ಎಂಬುದಿದ್ದರೆ ಯಾವುದನ್ನೂ ಬೇಕಾದರು ಸಾಧಿಸಬಹುದು. ಎಳವೆಯಲ್ಲಿಯೇ ಶಿಸ್ತನ್ನು ಮೈಗೂಡಿಸಿಕೊಂಡು ಶಾಲೆಯ ಎಲ್ಲಾ ಚಟುವಟಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದರೆ ಭವಿಷ್ಯದಲ್ಲಿ ಉತ್ತಮ ವ್ಯಕ್ತಿಯಾಗಿ ಹೊರಹೊಮ್ಮಲು ಸಾಧ್ಯವಿದೆ ಎಂದು ನಿವೃತ್ತ ಶಿಕ್ಷಣಾಧಿಕಾರಿ ಸೀತಾರಾಮಶೆಟ್ಟಿ ಕೆದೂರು ನುಡಿದರು. ಅವರು ಬುಧವಾರ ಇಲ್ಲಿನ ಕೆದೂರು ಸರಕಾರಿ ಪ್ರೌಢಶಾಲೆಯ ವಿವಿಧ ಸಂಘಗಳನ್ನು ಮತ್ತು ವಿದ್ಯಾರ್ಥಿ ಸಂಸತ್ತನ್ನು ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯರಾದ ಉದಯ ಕುಮಾರ್ ಶೆಟ್ಟಿ ಅವರು ವಿದ್ಯಾರ್ಥಿ ಸರಕಾರದ ಮಂತ್ರಿಗಳಿಗೆ ಪ್ರಮಾಣ ವಚನ ಬೋಧಿಸಿ, ಶಾಲಾ ಸಂಸತ್ ಎನ್ನುವುದು ಪ್ರಜಾಪ್ರಭುತ್ವ ಸರಕಾರಕ್ಕೆ ತಳಹದಿ. ಅದನ್ನು ಅರಿತು ಕ್ರಿಯಾಶೀಲರಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು. ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ದೀಪಾ ಶೆಟ್ಟಿ, ಸದಸ್ಯರಾದ ವಸಂತಿ, ಮಲ್ಲಿಕಾ ಉಪಸ್ಥಿತರಿದ್ದರು. ಶಿಕ್ಷಕರಾದ ರಾಜೇಂದ್ರ ಶೆಟ್ಟಿ, ಅನಿತಾ, ಗೀತಾ, ವಸುಧಾ, ರತ್ನಾ, ಸಂಧ್ಯಾ ಸಹಕರಿಸಿದರು. ಮನೋಹರ್ ಕಾರ್ಯಕ್ರಮ ನಿರೂಪಿಸಿ,  ಶಿಕ್ಷಕಿ ದೀಪಾವತಿ ಸ್ವಾಗತಿಸಿ, ರಮೇಶ್ ಕುಲಾಲ್ ಎನ್. ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಮಾಜದ ಸಮಸ್ಯೆಗಳನ್ನು ಮುನ್ನೆಲೆಗೆ ತರುವುದು ಪತ್ರಕರ್ತರ ಕರ್ತವ್ಯ.  ವ್ಯವಸ್ಥೆಯ ಲೋಪದೋಷಗಳನ್ನು ಸಮಾಜದ ಮುಂದೆ ಇಡುವುದು ಪತ್ರಿಕೋದ್ಯಮದ ಪ್ರಮುಖ ಕೆಲಸವಾಗಿದೆ. ಸಾಮಾಜಿಕ ಜಾಲತಾಣಗಳ ಅಬ್ಬರದ ನಡುವೆಯೂ ಮಾಧ್ಯಮಗಳು ಸತ್ಯವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕು ಎಂದು ಮಣಿಪಾಲ ಇನ್ಸಿಟ್ಯೂಟ್‌ ಆಫ್‌‌ ಕಮ್ಯುನಿಕೇಶನ್‌ನ ನಿರ್ದೇಶಕಿ ಡಾ. ಶುಭಾ ಎಚ್‌.ಎಸ್‌. ಹೇಳಿದರು. ಅವರು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪ್ರತಿಕಾ ಭವನ ಸಮಿತಿ ಹಾಗೂ ಉಡುಪಿ ಲೋಂಬಾರ್ಡ್‌ ಮೆಮೋರಿಯಲ್‌ (ಮಿಷನ್‌) ಆಸ್ಪತ್ರೆಯ ಇವುಗಳ ಸಹಯೋಗದೊಂದಿಗೆ ಉಡುಪಿ ಐಎಂಎ ಭವನದಲ್ಲಿ ಆಯೋಜಿಸಲಾದ ಪತ್ರಿಕಾ ದಿನಾಚರಣೆ ಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸುದ್ದಿಗಳಲ್ಲಿ ಮಹಿಳೆಯರನ್ನು ಹೆಚ್ಚಾಗಿ ಸಂತ್ರಸ್ತರಾಗಿ, ರಾಜಕಾರಣಿಗಳಾಗಿ ಅಥವಾ ಕ್ರೀಡಾಪಟುಗಳಾಗಿ ಮಾತ್ರ ಬಿಂಬಿಸಲಾಗುತ್ತದೆ. ಆದರೆ ನೀತಿ ನಿರೂಪಕಿ, ವಿಷಯ ತಜ್ಞೆ ಮಹಿಳೆಯರನ್ನು ಸಂದರ್ಶಿಸುವ ಅಥವಾ ಅವರ ಅಭಿಪ್ರಾಯ ಪಡೆಯುವ ಪ್ರಮಾಣ ಅತ್ಯಂತ ವಿರಳವಾಗಿದೆ ಎಂದು ತಿಳಿಸಿದರು. ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಅಧ್ಯಕ್ಷತೆಯನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ವಂಡ್ಸೆ ಹೋಬಳಿಯ ಸಾರ್ವಜನಿಕರು ತಾಲೂಕು ಕಚೇರಿಗೆ ಸಲ್ಲಿಸಿರುವ ವಿವಿಧ ಅರ್ಜಿಗಳು ಬಾಕಿ ಇದ್ದ ಹಿನ್ನಲೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ  ಶಾಸಕರಾದ  ಗುರುರಾಜ್ ಗಂಟಿಹೊಳೆ ಅವರು, ತಹಸೀಲ್ದಾರರ ಸಮ್ಮುಖ ಕಂದಾಯ ಅಧಿಕಾರಿಗಳ ಸಭೆ ನಡೆಸಿದರು. ಈ ವೇಳೆ ಅವರು ಮಾತನಾಡಿ, ಹೋಬಳಿಯ ಯಾವುದೇ ಅರ್ಜಿದಾರರು ಸರಿಯಾದ ಪೂರಕ ದಾಖಲೆ ನೀಡಿದ ಹೊರತಾಗಿಯೂ ಸಕಾಲದಲ್ಲಿ ಕಡತ ವಿಲೇವಾರಿ ಆಗದೇ ಇದ್ದಲ್ಲಿ ಇಡೀ ತಾಲೂಕು ಕಚೇರಿ ವ್ಯವಸ್ಥೆಗೆ ಕೆಟ್ಟ ಹೆಸರು ಬರುತ್ತದೆ. ಹಾಗಾಗಿ ಯಾವುದೇ ಕಾರಣಕ್ಕೂ ಸಾರ್ವಜನಿಕರ ಅರ್ಜಿಗಳನ್ನು ಬಾಕಿ ಇರಿಸಿಕೊಳ್ಳದೆ ಅಗತ್ಯ ಇದ್ದಲ್ಲಿ ಮಾತ್ರ ಹಿಂಬರಹ ನೀಡಿ, ಉಳಿದಂತೆ ಕಡತಗಳನ್ನು ಅರ್ಜಿದಾರರಿಗೆ ಅನುಕೂಲ ಆಗುವ ದೃಷ್ಟಿಯಲ್ಲಿ ವಿಲೇವಾರಿ ಮಾಡಲು ಮುಖ್ಯವಾಗಿ ಆರ್ ಟಿ ಸಿ ಸಮಸ್ಯೆಗಳು, ಭೂ ವ್ಯಾಜ್ಯ, ಅಕ್ರಮ ಸಕ್ರಮ, 94 ಸಿ, ಆರ್ ಆರ್ ಟಿ ಹಾಗೂ 11 ಈ ಕಡತಗಳನ್ನು ಆದ್ಯತೆಯಲ್ಲಿ ವಿಲೇ ಗೊಳಿಸಲು ಸೂಚನೆ ನೀಡಿದರು. ಶಾಸಕರ ಕಚೇರಿಗೆ ಸಮಸ್ಯೆಗಳ ನಿವಾರಣೆ…

Read More

ಕುಂದಾಪ್ರ ಡಾಟ್‌  ಕಾಂ ಸುದ್ದಿ.ಕೋಟ: ನೂತನವಾಗಿ ಅಸ್ಥಿತ್ವಕ್ಕೆ ಬಂದ ರೋಟರಿ ಕ್ಲಬ್ ಕೋಟ ಬ್ರಿಗೇಡ್ ನ 2026-27ನೇ ಸಾಲಿನ ನೂತನ  ಅಧ್ಯಕ್ಷರಾಗಿ ಉಡುಪಿ ಜಿಲ್ಲಾ ಆಸ್ಪತ್ರೆ ಯಲ್ಲಿ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿರುವ ಪ್ರಕಾಶ್ ಪೂಜಾರಿ ಬನ್ನಾಡಿ ಹಾಗೂ ನೂತನ ಕಾರ್ಯದರ್ಶಿಯಾಗಿ ಯುವ ಉದ್ಯಮಿ ಶಿವರಾಜ್ ಆಯ್ಕೆಯಾಗಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ,ಜು.01: ಮುಂಗಾರು ಮಳೆ ಆರಂಭದಲ್ಲಿ ಕ್ಷೀಣಗೊಂಡಿದ್ದರೂ, ಕಳೆದೆರಡು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಚೇತರಿಕೆ ಕಾಣತೊಡಗಿದೆ. ಜುಲೈ 02 ಹಾಗೂ 03ರಂದು ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ವರದಿಯಂತೆ ಜುಲೈ 8ರ ತನಕ ರೆಡ್‌ ಅಲರ್ಟ್‌ ಹಾಗೂ ಆರೆಂಜ್‌ ಅಲರ್ಟ್‌ ಇದೆ. ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಸರಾಸರಿ 75.5ಮಿ.ಮೀ ಮಳೆಯಾಗಿದ್ದು, ಈ ಪೈಕಿ ಕುಂದಾಪುರ ತಾಲೂಕಿನಲ್ಲಿ 68.7ಮಿ.ಮೀ, ಬೈಂದೂರು ತಾಲೂಕಿನಲ್ಲಿ 75.5 ಮಿ.ಮೀ., ಬ್ರಹ್ಮಾವರ ತಾಲೂಕಿನಲ್ಲಿ 71.0ಮೀ.ಮೀ, ಹೆಬ್ರಿ ತಾಲೂಕಿನಲ್ಲಿ 57.7 ಮಿ.ಮೀ. ಮಳೆಯಾಗಿದೆ.   ನಿರಂತರ ಮಳೆಯಾದರೆ ನದಿ, ತೋಡು, ಕೆರೆ ಪಾತ್ರಗಳು ತುಂಬಿ ಹರಿಯಲಿದ್ದು, ಕಾಲುಸಂಕ, ಶಿಥಿಲ ಸೇತುವೆಯನ್ನು ಅವಲಂಬಿಸಿರುವ ಜನರು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕಿದೆ. ಮರವಂತೆ ಸೇರಿದಂತೆ ಕಡಲ ತೀರ ಭಾಗದಲ್ಲಿ ತೆರೆಗಳ ಅಬ್ಬರ ಹೆಚ್ಚಿದ್ದು, ತೀರ ವಾಸಿಗಳು ಎಚ್ಚರದಿಂದಿರುವುದು ಅಗತ್ಯವಾಗಿದೆ. ಗುಡ್ಡದ ತಪ್ಪಲಿನ ಪ್ರದೇಶದ ಜನರೂ ಗುಡ್ಡ ಜರಿತದ ಬಗ್ಗೆ ಹಾಗೂ ಅಪಾಯಕಾರಿ ಪ್ರದೇಶದಲ್ಲಿ ಆಸರೆ ಪಡೆಯುವ…

Read More

ಕುಂದಾಪ್ರ ಡಟಾಟ್‌ ಕಾಂ ಸುದ್ದಿ.ಕುಂದಾಪುರ: ದೇವಲ್ಕುಂದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕರು ಹಾಗೂ ತಂತ್ರಿಗಳಾದ ನಾಗೇಶ್ವರ ಭಟ್ಟ ಅವರು ವಯೋಸಹಜ ಕಾರಣಗಳಿಂದ ತಮ್ಮ ತಂತ್ರಸೇವೆ ಹಾಗೂ ಅರ್ಚಕ ಸೇವೆಯಿಂದ ಸ್ವಯಂ ನಿವೃತ್ತಿ ಹೊಂದುವ ಸಂದರ್ಭದಲ್ಲಿ ಶ್ರೀ ವಿಷ್ಣುಮೂರ್ತಿ ದೇವರ ಸನ್ನಿಧಿಗೆ ಅಪೂರ್ವ ಭಕ್ತಿ ಸಮರ್ಪಣೆಯನ್ನು ಸಲ್ಲಿಸಿದರು. ಸುಮಾರು ಹಲವು ದಶಕಗಳ ಕಾಲ ದೇವಾಲಯದಲ್ಲಿ ನಿಷ್ಠೆ, ಶ್ರದ್ಧೆ ಹಾಗೂ ಆಗಮೋಕ್ತ ಸಂಪ್ರದಾಯದಂತೆ ಸೇವೆ ಸಲ್ಲಿಸಿದ ಅವರು, ತಮ್ಮ ಸೇವಾ ಅವಧಿಯ ಸಮಾರೋಪದ ಅಂಗವಾಗಿ ಶ್ರೀ ವಿಷ್ಣುಮೂರ್ತಿ ದೇವರಿಗೆ ಬೆಳ್ಳಿಯ ಮುಖವಾಡ ಸೇರಿದಂತೆ ಒಟ್ಟು ಅಂದಾಜು ಏಳು ಕೆ.ಜಿ. ಬೆಳ್ಳಿ ಹಾಗೂ ನಿತ್ಯ ಮತ್ತು ವಿಶೇ? ಪೂಜಾ ಕೈಂಕರ್ಯಗಳಿಗೆ ಅಗತ್ಯವಿರುವ ವಿವಿಧ ಪೂಜಾ ಸಾಮಗ್ರಿಗಳನ್ನು ದೇವಸ್ಥಾನದ ಆಡಳಿತ ಮಂಡಳಿಯ ಸಮ್ಮುಖದಲ್ಲಿ ವಿಧಿವತ್ತಾಗಿ ಸಮರ್ಪಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯವರು ಶ್ರೀ ವೇದಮೂರ್ತಿ ನಾಗೇಶ್ವರ ಭಟ್ಟ ಅವರ ದೀರ್ಘಕಾಲದ ಭಕ್ತಿಪೂರ್ವಕ, ನಿಸ್ವಾರ್ಥ, ಶಿಸ್ತುಬದ್ಧ ಹಾಗೂ ಆದರ್ಶ ಸೇವೆಯನ್ನು ಗೌರವಪೂರಕವಾಗಿ ವ್ಯಕ್ತಪಡಿಸಿದ್ದು, ಅವರ ಈ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಲಯನ್ಸ್ ಜಿಲ್ಲೆ 317 ಸಿ ವ್ಯಾಪ್ತಿಗೆ ಒಳಪಡುವ ಪ್ರತಿಷ್ಠಿತ ಲಯನ್ ಕ್ಲಬ್ ಗಳಲ್ಲಿ ಒಂದಾದ ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್‌ನ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ,  ಶ್ರೀ ದೇವಿ ಕಂಗನ್ ಸ್ಟೋರ್ ಹಾಗೂ ಶ್ರೀದೇವಿ ಸಿಲ್ವರ್‌ನ ಮಾಲೀಕರು, ಕೋಸ್ಟಲ್ ಕ್ಲಬ್‌ನ ಸ್ಥಾಪಕ ಸದಸ್ಯರು  ಆದ ಗಣೇಶ್ ಬೈಂದೂರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.  ಬೆಂಗಳೂರಿನ ಎಂ ಎಸ್ ರಾಮಯ್ಯ ಕಾಲೇಜಿನಲ್ಲಿ ಎಂಬಿಎ ಪದವೀಧರರಾದ ಅವರು ದಿ. ವಾಸುದೇವ ಬಳೆಗಾರ ಮತ್ತು ಲಕ್ಷ್ಮಿ ಬಳೆಗಾರ ದಂಪತಿಯ ಸುಪುತ್ರರಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತೆಕ್ಕಟ್ಟೆಯ ವಿಶ್ವವಿನಾಯಕ ಪಿಯು ಕಾಲೇಜಿನಲ್ಲಿ ರಾಷ್ಟ್ರೀಯ ಚಾರ್ಟರ್ಡ್ ಅಕೌಂಟೆಂಟ್ ದಿನಾಚರಣೆಯನ್ನು ಬುಧವಾರ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲೆಯ ಮ್ಯಾನೇಜಿಂಗ್ ಡೈರೆಕ್ಟರ್ ಎಂ. ಪ್ರಭಾಕರ್ ಶೆಟ್ಟಿ ಅವರು ವಿದ್ಯಾರ್ಥಿಗಳು ಪದವಿ ಪೂರ್ವ ನಂತರ ಸಿಎ ಕೋರ್ಸ್ ಮಾಡುವುದರ ಬಗ್ಗೆ ಮತ್ತು ಆ ಕೋರ್ಸಿಗಿರುವ ಉದ್ದೇಶದ ಕುರಿತು ಮಾತನಾಡಿದರು. ಮುಖ್ಯ ಅತಿಥಿಗಳಾದ ಸಿ.ಎ. ಸಂತೋಷ್ ಪ್ರಭು ಅವರು ಸಿ.ಎ, ಸಿ.ಎಸ್, ಸಿ.ಎಂ. ಎ ಕೋರ್ಸ್ ನ ಬಗ್ಗೆ, ಅದರಲ್ಲಿರುವ ವಿಷಯಗಳ ಕುರಿತು ತರಬೇತಿ ಹಾಗೂ ಪರೀಕ್ಷೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಮನೋಜ್ ಕುಮಾರ್, ಆಡಳಿತ ನಿರ್ದೇಶಕ ಹರೀಶ್ ಮರವಂತೆ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಪ್ರಾರ್ಥನಾ ಕಾಮತ್ ಕಾರ್ಯಕ್ರಮ ನಿರೂಪಿಸಿ, ರಿತಿಕ ಗಾಣಿಗ ಸ್ವಾಗತಿಸಿ, ಸಾಕೇತ್ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮೈಸೂರು ಸಿದ್ದಾರ್ಥ ನಗರದ ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜು (ಕಾವಾ) ಇಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿಗೆ ರಾಜ್ಯ ಶಿಕ್ಷಣ ಪದ್ಧತಿಯಂತೆ ಪ್ರಥಮ ವರ್ಷದ  ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ) – ಸ್ನಾತಕ ಪದವಿ ಪ್ರವೇಶಾತಿಗಾಗಿ ದ್ವಿತೀಯ ಪಿ.ಯು.ಸಿ / ಸಮಾನಾಂತರ ಕೋರ್ಸುಗಳಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್ htts://uucms.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸದರಿ ಪದವಿಯು ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್, ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಷಯಗಳಲ್ಲಿ ವಿಶೇಷ ಅಧ್ಯಯನ ಒಳಗೊಂಡಿರುತ್ತದೆ. ಪ್ರವೇಶಾತಿ ಕೋರಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹತಾ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನವನ್ನು ಜುಲೈ 6ರಂದು ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯದ ದೂ.ಸಂಖ್ಯೆ: 0821-2438931 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಸಂಸ್ಥೆಯ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More