Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ  ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜಿನ ‘ಸಪ್ತಸ್ವರ’ ವೇದಿಕೆಯಲ್ಲಿ “ಕಾನೂನು ಅರಿವು” ಮಾಹಿತಿ ಕಾರ್ಯಕ್ರಮ ಮಂಗಳವಾರದಂದು ಜರುಗಿತು. ಮಾಹಿತಿ ಕಾರ್ಯಾಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಸುಬ್ರಹ್ಮಣ್ಯ ಎಚ್, ಪೊಲೀಸ್ ಉಪನಿರೀಕ್ಷಕರು, ಕಾರ್ಕಳ ಇವರು ‘ ಶಿಕ್ಷಣ ಪಡೆದಾಗ ಜ್ಞಾನ ಮೂಡುತ್ತದೆ. ಆಗ ಸಮಾಜದಲ್ಲಿ ಶಾಂತಿ ಹಾಗೂ ಸಹಬಾಳ್ವೆಯಿಂದ ಬದುಕಲು ಸಾಧ್ಯ’ ಎಂದರು. ಪೊಲೀಸ್ ಇಲಾಖೆಯ ಕಾನ್ಸ್ಟೇಬಲ್ ಸಂತೋಷ್ ಅವರು ಮಾತನಾಡಿ ‘ ವಿದ್ಯಾರ್ಥಿಗಳು ತಮ್ಮ ಓದಿನ ಜೊತೆಗೆ ತಮ್ಮ ಹಕ್ಕುಗಳು ಮತ್ತು ಕಾನೂನು ಅರಿವು ಹೊಂದುವುದು ಅತ್ಯಗತ್ಯವಾಗಿದೆ ‘ ಎಂದರು. ಸಭಾಧ್ಯಕ್ಷತೆಯನ್ನು ವಹಿಸಿದ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಅವರು ‘ ಜೀವಿಸಲು ಗಾಳಿ, ನೀರು, ಆಹಾರ ಎಷ್ಟು ಅಗತ್ಯವೋ ಸಮಾಜದಲ್ಲಿ ಬದುಕಬೇಕಾದರೆ ಕಾನೂನಿನ ಅರಿವು ಅಷ್ಟೇ ಅವಶ್ಯಕವಾಗಿದೆ ‘ ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪೊಲೀಸ್ ಇಲಾಖೆಯ ರವೀಂದ್ರ ಹಾಗೂ ಘನಶ್ಯಾಮ್ ಇನ್ನಿತರರು ಉಪಸ್ಥಿತರಿದ್ದರು. ‘ಕಾನೂನು ಅರಿವು’ ಮಾಹಿತಿ ಕಾರ್ಯಕ್ರಮದಲ್ಲಿ ಉಪನ್ಯಾಸಕ ವರ್ಗದವರು, ವಸತಿ ನಿಲಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕನ್ನಡ ಜಾನಪದ ಪರಿಷತ್‌ ಉಡುಪಿ ಜಿಲ್ಲೆಯ ಮಹಿಳಾ ಘಟಕದ ಅಧ್ಯಕ್ಷರನ್ನಾಗಿ ಶಯದೇವಿಸುತೆ ಮರವಂತೆ (ಜ್ಯೋತಿ ಜೀವನ್ ಸ್ವರೂಪ್) ಅವರನ್ನು  ನೇಮಕ ಮಾಡಲಾಗಿದೆ. ಕನ್ನಡ ಜಾನಪದ ಪರಿಷತ್‌ನ ರಾಜ್ಯಾಧ್ಯಕ್ಷ ಡಾ. ಎನ್.‌ ಬಾಲಾಜಿ ಅವರು ನೇಮಕ ಮಾಡಿದ್ದಾರೆ. ಅವರು ಆಧ್ಯಾತ್ಮಿಕ ಚಿಂತಕರಾಗಿ, ಸಂಗೀತ-ಸಾಹಿತ್ಯ ಕಲಾ ಲೋಕದಲ್ಲಿ, ಯಕ್ಷಗಾನ ಕ್ಷೇತ್ರದಲ್ಲಿ, ವಿವಿಧ ಪತ್ರಿಕೋದ್ಯಮ ಹಾಗೂ ಹಲವಾರು ಮಾಧ್ಯಮ ವಾಹಿನಿಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರ ಕಲಾಪ್ರತಿಭೆಗೆ ಹಲವು ಪ್ರಶಸ್ತಿಗಳು ಸಂದಿವೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್‌ ಇದರ ನೂತನ ಅಧ್ಯಕ್ಷರಾಗಿ ಕತಾರ್‌ ನಿವಾಸಿ ಸುಬ್ರಹ್ಮಣ್ಯ ಹೆಬ್ಬಾಗಿಲು ಆಯ್ಕೆಯಾಗಿದ್ದಾರೆ. ಸಂಸ್ಥೆಯ ಮಹಾಪೋಷಕರಾಗಿ ವರದರಾಜ್‌ ಎಂ. ಶೆಟ್ಟಿ, ಪೋಷಕರಾಗಿ ವಕ್ವಾಡಿ ಪ್ರವೀಣ್‌ ಕುಮಾರ್‌ ಶೆಟ್ಟಿ ಹಾಗೂ ಮಣೆಗಾರ್‌ ಮೀರಾನ್‌ ಸಾಹೇಬ್‌ ಅವರು ಮುಂದುವರಿಯಲಿದ್ದಾರೆ. ಸ್ಥಾಪಕ ಅಧ್ಯಕ್ಷರಾದ ಸದನ್‌ ದಾಸ್‌ ಅವರು ಮುಖ್ಯ ಸಲಹೆಗಾರರಾಗಿ, ದಿನೇಶ್‌ ದೇವಾಡಿಗ ಹಾಗೂ ಸುಜಿತ್‌ ಕುಮಾರ್‌ ಶೆಟ್ಟಿ ಅವರು ಉಪಾಧ್ಯಕ್ಷರಾಗಿ, ಸುಧಾಕರ ಪೂಜಾರಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು ಒಂದೂವರೆ ದಶಕಕ್ಕೂ ಹೆಚ್ಚು ಕಾಲ ಕತಾರ್‌ ದೇಶದಲ್ಲಿ ನೆಲೆಸಿ, ತಮ್ಮ ಸಮಾಜ ಸೇವೆಯಿಂದ ಕತಾರ್ ಕನ್ನಡಿಗ ಸಮುದಾಯ ಹಾಗೂ ಇಡೀ ಭಾರತೀಯ ಸಮುದಾಯದಲ್ಲಿ ತಮ್ಮದೇ ಆದ ಹೆಸರು ಗಳಿಸಿದ್ದಾರೆ. ಅವರು ತಮ್ಮ ಸಾಮಾಜಿಕ ಕಾರ್ಯದ ಜೊತೆಗೆ, ಭಾರತೀಯ ಸಾಂಸ್ಕೃತಿಕ ಕೇಂದ್ರ ಮತ್ತು ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಹವರ್ತಿ ಸಂಸ್ಥೆಗಳು ಆಯೋಜಿಸಿದ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡು ತಮ್ಮ ಸಾಂಸ್ಕೃತಿಕ ಸೇವೆಗಳಿಗೆ ಹೆಸರುವಾಸಿಯಾಗಿದ್ದಾರೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಮುಂಬರುವ ದಿನಗಳಲ್ಲಿಯೂ ಸಹ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ ಹೆಚ್ಚಿನ ಮಾನವ ಜೀವ ಹಾನಿ ಹಾಗೂ ಆಸ್ತಿ-ಪಾಸ್ತಿಗಳಿಗೆ ಹಾನಿ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾನ್ಸೂನ್ ಮುಂಗಾರು ಮಳೆಯು ಆಗಸ್ಟ್ ಕೊನೆಯವರೆಗೂ ಬರಲಿದೆ, ನೆರೆ-ಪ್ರವಾಹವು ಯಾವಾಗ ಬೇಕಾದರೂ ಉಂಟಾಗುವ ಸಾಧ್ಯತೆಗಳಿರುತ್ತವೆ. ಇವುಗಳ ನಿರ್ವಹಣೆಗೆ ಅಧಿಕಾರಿಗಳು ಸನ್ನದ್ಧರಾಗಿರಬೇಕು. ನಗರ ಹಾಗೂ ಗ್ರಾಮೀಣ ಭಾಗದ ತಗ್ಗು ಪ್ರದೇಶಗಳಲ್ಲಿ ಮಳೆಯ ನೀರು ನುಗ್ಗಿ ನೆರೆ ಉಂಟಾಗುವ ಸಾಧ್ಯತೆಗಳಿರುವ ವ್ಯಾಪ್ತಿಯಲ್ಲಿ ಜನಸಂಖ್ಯೆ, ಕುಟುಂಬಗಳನ್ನು ತಕ್ಷಣದಲ್ಲಿಯೇ ಬೇರೆಡೆಗೆ ವರ್ಗಾಯಿಸುವುದು ಸೇರಿದಂತೆ ಮತ್ತಿತರ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಯೋಜನೆಗಳನ್ನು ರೂಪಿಸಿಕೊಂಡು, ಸಮಸ್ಯೆಯಾದಲ್ಲಿ ಕೂಡಲೇ ನೆರವಿಗೆ ಧಾವಿಸಬೇಕು ಎಂದರು. ಜಿಲ್ಲೆಯಲ್ಲಿ ಜುಲೈ ತಿಂಗಳಲ್ಲಿ ವಾಡಿಕೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜು.4: ಭಾರಿ ಮಳೆ ಹಿನ್ನೆಲೆಯಲ್ಲಿ ಬೈಂದೂರು, ಕುಂದಾಪು, ಹೆಬ್ರಿ ಹಾಗೂ ಕಾರ್ಕಳ ತಾಲೂಕಿನ ಅಂಗನವಾಡಿಯಿಂದ ಪದವಿ ಪೂರ್ವ ಕಾಲೇಜು ತನಕದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ನಿರಂತರ ಮಳೆಯಾಗುತ್ತಿರುವುದರಿಂದ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಆಯಾ ತಾಲೂಕುಗಳ ತಹಶಿಲ್ದಾರರು ರಜೆ ಘೋಷಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ಅವಕಾಶಗಳನ್ನು ಪ್ರೀತಿಸುವಂತಾಗಬೇಕು ಮತ್ತು ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಅವಕಾಶದೊಂದಿಗೆ ಅಭಿವೃದ್ಧಿ ಹೊಂದಿದಾಗ ಹೆತ್ತವರು, ಗುರುಗಳು ಮತ್ತು ಸಮಾಜದ ಕಾಳಜಿ ವಹಿಸಬೇಕು. ಆ ಮೂಲಕ ಪಡೆದ ಪದವಿಗೆ ಗೌರವ ದೊರೆಯುವಂತಾಗಬೇಕು ಎಂದು ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ಉಪಕುಲಪತಿ ಪ್ರೊ| ಹೇಮಂತ್ ಕುಮಾರ್ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಐಕ್ಯೂಎಸಿ ಸಂಯೋಜಿಸಿದ ‘ಗ್ರಾಜುಯೇಷನ್ ​​ಡೇ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಸುಕುಮಾರ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳು ಸಮಾಜದ ಆಸ್ತಿಯಾಗಬೇಕಾದರೆ ಶಿಕ್ಷಣವೇ ಮುಖ್ಯ. ಪದವಿ ಪೂರೈಸಿದ ನಂತರ ಉದ್ಯೋಗದೊಂದಿಗೆ ಸಾಮಾಜಿಕ ಕಾಳಜಿಯೊಂದಿಗೆ ವಿದ್ಯಾರ್ಥಿಗಳು ಬದುಕು ರೂಪಿಸಿಕೊಳ್ಳುವಂತಾಗಬೇಕು ಎಂದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಸೀತಾರಾಮ ನಕ್ಕತ್ತಾಯ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ಇನ್ನಿತರರು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅವರು ಪ್ರಾಸ್ತಾವಿಸಿ, ಉಪಪ್ರಾಂಶುಪಾಲರಾದ ಡಾ|…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಜ್ಯ ಸರಕಾರದ ಯುವನಿಧಿ ಯೋಜನೆಗೆ ನೋಂದಣಿ ಚಾಲ್ತಿಯಲ್ಲಿದ್ದು, ಅರ್ಹರು ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. 2022-23ನೇ ಹಾಗೂ ಅನಂತರದ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ (ವೃತ್ತಿಪರ ಸೇರಿದಂತೆ) ಹಾಗೂ ಯಾವುದೇ ಡಿಪ್ಲೋಮಾ ಪಡೆದು ನಿರುದ್ಯೋಗಿಯಾಗಿರುವವರು ಯುವನಿಧಿ ಯೋಜನೆಯ ಮೂಲಕ ಪ್ರತಿ ತಿಂಗಳು ಪದವೀಧರ ನಿರುದ್ಯೋಗಿಗಳಿಗೆ ರೂ 3,000 ಹಾಗೂ ಡಿಪ್ಲೋಮಾ ಪಡೆದ ನಿರುದ್ಯೋಗಿಗಳಿಗೆ ರೂ.1,500 ನೇರ ನಗದು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು. ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ:ಯುವನಿಧಿ ಯೋಜನೆಯ ಫಲಾನುಭವಿಗಳು ಪ್ರತಿ ತಿಂಗಳ 25ನೇ ತಾರೀಕಿನ ಒಳಗಾಗಿ ಆನ್‌ಲೈನ್‌ನಲ್ಲಿ ಲಾಗಿನ್ ಆಗಿ ಸ್ವಯಂ ಘೋಷಣೆ ನೀಡಬೇಕು. ಸ್ವಯಂ ಘೋಷಣೆ ನೀಡದಿದ್ದಲ್ಲಿ ಆ ತಿಂಗಳ ನೇರ ನಗದು ಖಾತೆಗೆ ಜಮೆಯಾಗುವುದಿಲ್ಲ. ಆದ್ದರಿಂದ ಫಲಾನುಭವಿಗಳು ತಪ್ಪದೇ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಪ್ರತಿ ತಿಂಗಳು ಸ್ವಯಂ ಘೋಷಣೆ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ರೋಟರಿ ಕ್ಲಬ್ ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳಿಗೆ ಕಾನೂನಿನ ಕುರಿತು ಅರಿವು ಮೂಡಿಸಬೇಕು ಎನ್ನುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿತು. ಶಿರಿಯಾರ ಗೋಪಾಲ್ ಕೃಷ್ಣ ಶೆಟ್ಟಿ ಅವರು ಪ್ರಸ್ತುತ ಕಾನೂನು ವ್ಯವಸ್ಥೆಯ ಕುರಿತು ವಿದ್ಯಾರ್ಥಿಗಳಿಗೆ ಸವಿಸ್ತಾರವಾದ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ವಹಿಸಿದ್ದರು. ರೋಟರಿ ಸಂಸ್ಥೆಯ ಅಧ್ಯಕ್ಷರಾದ ಲಿಯಾ ಕತ್ ಅಲಿ, ರೋಟರಿ ಸಂಸ್ಥೆಯ ಅಸಿಸ್ಟೆಂಟ್ ಗವರ್ನರ್ ಡಾ. ಬಿ. ಆರ್ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕಿ ಸುನೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಾರ್ವಜನಿಕರು ಮತ್ತು ಶಾಲಾ ವಿದ್ಯಾರ್ಥಿಗಳು ಸಂಚರಿಸುವ ಖಾಸಗಿ ಬಸ್ ಮತ್ತು ಶಾಲಾ ವಾಹನಗಳಲ್ಲಿ ಅಸನ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿ/ಪ್ರಯಾಣಿಕರು ಸಂಚರಿಸುತ್ತಿರುವುದು ಹಾಗೂ ನಿಗದಿತ ವೇಗದ ಮಿತಿಗಿಂತ ಹೆಚ್ಚಿನ ವೇಗದಲ್ಲಿ ವಾಹನಗಳನ್ನು ಚಲಿಸುತ್ತಿರುವುದು ಕಂಡುಬಂದಿದ್ದು, ಇದರಿಂದಾಗಿ ಅಪಘಾತಗಳು ಸಂಭವಿಸುವ ಸಾಧ್ಯತೆಗಳಿರುತ್ತವೆ. ಈ ಹಿನ್ನಲೆ ಬಸ್‌ಗಳಲ್ಲಿ ಸಂಚರಿಸುವ ವಿದ್ಯಾರ್ಥಿಗಳ ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಖಾಸಗಿ ಬಸ್ ಮಾಲಿಕರಿಗೆ ಮತ್ತು ಶಾಲಾ ವಾಹನಗಳನ್ನು ಹೊಂದಿರುವ ಶಾಲಾ ಮುಖ್ಯಸ್ಥರುಗಳು ಈ ಕೆಳಕಂಡ ಸಲಹೆ-ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚಿಸಿರುತ್ತಾರೆ. ಸಂಚರಿಸುವ ಬಸ್‌ಗಳು ಫಿಟ್‌ನೆಸ್ ಪ್ರಮಾಣಪತ್ರ ಮತ್ತು ವಿಮಾ ಪ್ರಮಾಣ ಪತ್ರವನ್ನು ಹೊಂದಿರಬೇಕು ಮತ್ತು ಅನುಮತಿಸುವ ಮಿತಿಯನ್ನು ಮೀರಿ ಹೊಗೆಯನ್ನು ಹೊರಸೂಸಬಾರದು. ನೊಂದಾಯಿತ ಆಸನ ಸಾಮರ್ಥ್ಯದ ನಿಗದಿತ ಸಂಖ್ಯೆಗಿಂತ ಹೆಚ್ಚು ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರು ಸಂಚರಿಸುವಂತಿಲ್ಲ. ನಿಗದಿತ ವೇಗದ ಮಿತಿಗಿಂತ ಹೆಚ್ಚಿನ ವೇಗದಲ್ಲಿ ಬಸ್‌ಗಳನ್ನು ಚಲಿಸುವಂತಿಲ್ಲ. ವೇಗದ ಮಿತಿಯನ್ನು ಅನುಸರಿಸಬೇಕು. ಚಾಲನಾ ಅನುಭವ ಇರುವ ಬಸ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಆಗುವ ಜನನ ಮತ್ತು ಮರಣ ನೊಂದಣಿಯನ್ನು ಜನನ ಮರಣ ನೋಂದಣಿ ಅಧಿನಿಯಮಗಳ ಅನ್ವಯ ಪ್ರತಿಯೊಬ್ಬ ಸಾರ್ವಜನಿಕರು ಕಡ್ಡಾಯವಾಗಿ ನೋಂದಣಿ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜನನ ಮರಣ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನನ ಹಾಗೂ ಮರಣ ದಾಖಲಾತಿಗಳು ಭವಿಷ್ಯದಲ್ಲಿ ಜೀವನದ ಅವಧಿಯ ಪ್ರತೀ ಹಂತದಲ್ಲಿಯೂ ಅವಶ್ಯಕತೆ ಇರುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಸೂಕ್ತ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಬೇಕು ಎಂದರು. ಈ ದಾಖಲಾತಿಗಳು ಅಗತ್ಯವಾಗಿರುತ್ತದೆ. ಜನನ-ಮರಣ ಘಟನೆಗಳನ್ನು ಎಲ್ಲಾ ಸ್ಥಳೀಯ ಸಂಸ್ಥೆಗಳು ಹಾಗೂ ಸರ್ಕಾರಿ ಆಸ್ಪತ್ರೆಗಳು, ಇ- ಜನ್ಮ ತಂತ್ರಾಂಶದ ಮೂಲಕ ನೋಂದಣಿ ಮಾಡುವ ಕಾರ್ಯವನ್ನು ಕಡ್ಡಾಯವಾಗಿ ಮಾಡುವುದರೊಂದಿಗೆ ಶೇ.100 ರಷ್ಟು ಪ್ರಗತಿ ಸಾಧಿಸಬೇಕು ಎಂದ ಅವರು, ಜನನ-ಮರಣ ಪ್ರಮಾಣ ಪತ್ರ ಕೋರಿ ಅರ್ಜಿ ಸಲ್ಲಿಸಿದಾಗ ವಿಳಂಬವಿಲ್ಲದೇ ಕಾಲಮಿತಿಯೊಳಗೆ ಜನನ ಮತ್ತು…

Read More