ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಡಿ.15: ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ರಾಜ್ಯ ಸರ್ಕಾರದ ವಿದ್ಯಾರ್ಥಿವೇತನ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 1 ರಿಂದ 10 ನೇ ತರಗತಿ ಒಳಗಿನ ವಿಕಲಚೇತನ ವಿದ್ಯಾರ್ಥಿಗಳು https://ssp.karnataka.gov.in/, ಪಿ.ಯು.ಸಿ ಹಾಗೂ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿದ ವಿದ್ಯಾರ್ಥಿಗಳು https://ssp.postmatric.karnataka.gov.in/ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574810/811 ಅನ್ನು ಸಂಪರ್ಕಿಸುವAತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೂನ್ನೂರು ಬಳಿ ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ರಕ್ಷಣಾ ಪಡೆ ಮುಖ್ಯಸ್ಥ (ಸಿಡಿಎಸ್) ಜ.ಬಿಪಿನ್ ರಾವತ್ ದಂಪತಿ ಸೇರಿದಂತೆ, ಹುತಾತ್ಮರಾದ ಎಲ್ಲಾ ವೀರ ಯೋಧರಿಗೆ ಕುಂದಾಪುರದ ಡಾ.ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಡಿ.15ರಂದು ದೀಪ ನಮನ ಸಲ್ಲಿಸಲಾಯಿತು. ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು, ಬೋಧಕ ಬೋಧಕೇತರರು ಕೈಯಲ್ಲಿ ಮೇಣದ ದೀಪ ಬೆಳಗಿಸಿ, ದೇಶಭಕ್ತಿ ಗೀತೆ ಹಾಡುವುದರ ಮೂಲಕ ಹುತಾತ್ಮರ ಆತ್ಮಕ್ಕೆ ದೀಪ ಪ್ರಜ್ವಲನದ ಶ್ರದ್ಧಾಂಜಲಿ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ, ಭಾರತೀಯ ಸೇನಾಪಡೆಯ ಯೋಧ ಪ್ರಶಾಂತ್ ದೇವಾಡಿಗ., ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿಗಳಾದ ಸೀತಾರಾಮ ನಕ್ಕತ್ತಾಯ, ಸಂಸ್ಥೆಯ ಪ್ರಾಂಶುಪಾಲ ಪ್ರೊ. ಕೆ. ಉಮೇಶ್ ಶೆಟ್ಟಿ, ಎನ್ಸಿಸಿ ಅಧಿಕಾರಿ ಶಿವರಾಜ್ ಸಿ, ಸಹ ಸಂಯೋಜಕ ಸುಜಯ್, ಬೋಧಕ ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ತುಮಕೂರು ಜಿಲ್ಲಾ ಸಂಸ್ಥೆ ಸಹಯೋಗದೊಂದಿಗೆ ಗಾಂಧಿನಗರ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತುಮಕೂರಿನ ಸಿದ್ಧಾರ್ಥ ಕಾಲೇಜು ಆವರಣದಲ್ಲಿ ರವಿವಾರ ಮುಕ್ತಾಯಗೊಂಡ ಕರ್ನಾಟಕ ರಾಜ್ಯ ಮಟ್ಟದ ಆಹ್ವಾನಿತ ಪುರುಷರ ಬಾಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಪುರುಷರ ತಂಡ ಭರತ್ ಸಾಯಿಕುಮಾರ್ ಸ್ಮರಣಾರ್ಥ ರಾಜ್ಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪ್ರಶಸ್ತಿಯನ್ನು ಪಡೆಯಿತು. ರಾಜ್ಯದ 24 ತಂಡಗಳು ಭಾಗವಹಿಸಿದ್ದ ಈ ಟೂರ್ನಿಯು ಲೀಗ್ ಹಾಗೂ ನಾಕೌಟ್ ಮಾದರಿಯಲ್ಲಿ ನಡೆದಿದ್ದು, ಅಂತಿಮ ಹಣಾಹಣಿಯಲ್ಲಿ ಆಳ್ವಾಸ್ ತಂಡ ಬೆಂಗಳೂರಿನ ಬನಶಂಕರಿ ಸ್ಪೋರ್ಟ್ಸ್ಕ್ಲಬ್ ತಂಡವನ್ನು 35-22 ಹಾಗೂ 35-14 ಅಂಕಗಳಿಂದ ಸೋಲಿಸಿ ಪ್ರಶಸ್ತಿ ಪಡೆದುಕೊಂಡಿತು. ಸೆಮಿಫೈನಲ್ಸ್ನಲ್ಲಿ ಆಳ್ವಾಸ್ ಪುರುಷರ ತಂಡ ಸಹ್ಯಾದ್ರಿ ಸ್ಪೋರ್ಟ್ಸ್ಕ್ಲಬ್ ತಂಡವನ್ನು 35-21 ಹಾಗೂ 35-18 ಅಂಕಗಳಿಂದ ಸೋಲಿಸಿದರೆ, ಬನಶಂಕರಿ ತಂಡದವರು ಅತಿಥೇಯ ಗಾಂಧಿನಗರ ಸ್ಪೋರ್ಟ್ಸ್ಕ್ಲಬ್ ತಂಡವನ್ನು ಸೋಲಿಸಿ ಫೈನಲ್ ಹಂತಕ್ಕೆ ತೇರ್ಗಡೆಗೊಂಡಿದ್ದರು. ಬನಶಂಕರಿ ಸ್ಪೋರ್ಟ್ಸ್ ಕ್ಲಬ್ ತಂಡ ದ್ವಿತೀಯ, ಸಹ್ಯಾದ್ರಿ ಸ್ಪೋರ್ಟ್ಸ್ ಕ್ಲಬ್ ತಂಡ ಹಾಗೂ ಅತಿಥೇಯ ಗಾಂಧಿನಗರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಡಿ.15: ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ನ್ಯಾಯಾಲಯಗಳ ಆವರಣಗಳಲ್ಲಿ ಡಿ.18 ರಂದು ಮೆಗಾ ಲೋಕ್ ಅದಾಲತನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಹಾಗೂ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಅತೀ ಶೀಘ್ರದಲ್ಲಿ ಇತ್ಯರ್ಥ ಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ಲೋಕ್ ಅದಾಲತ್ನಲ್ಲಿ ಸಾರ್ವಜನಿಕರು ವೈವಾಹಿಕ ಹಾಗೂ ಜೀವನಾಂಶ ಪ್ರಕರಣ, ಅಕ್ರಮ ಮರಳು ಸಾಗಾಣಿಕೆ, ಕಾರ್ಮಿಕ ಹಾಗೂ ನಷ್ಟ ಪರಿಹಾರ ವಿವಾದಗಳಿಗೆ ಸಂಬಂಧಿಸಿದ ಪ್ರಕರಣ, ಗ್ರಾಹಕರ ವಿವಾದಗಳಿಗೆ ಸಂಬಂಧಿಸಿದ ಪ್ರಕರಣ, ಭೂಸ್ವಾಧೀನ ಹಾಗೂ ಭೂಸ್ವಾಧೀನ ಪರಿಹಾರ ಹಂಚಿಕೆ ಪ್ರಕರಣ, ವಿದ್ಯುತ್ ಹಾಗೂ ನೀರಿನ ಶುಲ್ಕಕ್ಕೆ ಸಂಬಂಧಿಸಿದ ಪ್ರಕರಣ, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣ, ಪಿಂಚಣಿ ಪ್ರಕರಣ, ಜನನ ಪ್ರಮಾಣ ಪತ್ರಕ್ಕೆ ಸಂಬAಧಿಸಿದ ಪ್ರಕರಣ, ಕಾನೂನಿನಾತ್ಮಕವಾಗಿ ರಾಜಿಯಾಗಬಲ್ಲ ಎಲ್ಲಾ ರೀತಿಯ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳನ್ನು ರಾಜೀ ಸಂಧಾನದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸ್ವಚ್ಛ ಭಾರತ್ ಮಿಷನ್ (ಗ್ರಾ) ಕಾರ್ಯಕ್ರಮದಡಿ ದ್ರವ ತ್ಯಾಜ್ಯ ನಿರ್ವಹಣೆ ಪ್ರಮುಖ ಘಟಕಾಂಶವಾಗಿದ್ದು, ಗ್ರಾಮಗಳಲ್ಲಿ ದಿನನಿತ್ಯ ಸ್ನಾನದ ಮನೆಯಿಂದ, ಪಾತ್ರೆ ತೊಳೆಯುವುದರಿಂದ, ಬಟ್ಟೆ ಒಗೆಯುವುದಿಂದ ಮನೆಗಳಲ್ಲಿ ಉತ್ಪತ್ತಿಯಾಗುವ, ಹಾಗೂ ಹೋಟೆಲ್, ಮದುವೆ ಹಾಲ್ ಇತ್ಯಾದಿ ವಾಣಿಜ್ಯ ಕೇಂದ್ರಗಳಿಂದ ಉತ್ಪತ್ತಿಯಾಗುವ ಬೂದು ನೀರನ್ನು ಕಿಚನ್ ಗಾರ್ಡನ್ ಮೂಲಕ, ವೈಯಕ್ತಿಕ ಅಥವಾ ಸಮುದಾಯ ಹಂತದ ಸೋಕ್ ಪಿಟ್ ನಿರ್ಮಾಣ ಅಥವಾ ಇತರೇ ಸೂಕ್ತ ವಿಧಾನದ ಮೂಲಕ ವೈಜ್ಞಾನಿಕವಾಗಿ ಮಾಡಬೇಕಾಗುತ್ತದೆ. ಇದಕ್ಕಾಗಿ ಸಮರ್ಪಕ ದ್ರವ ತ್ಯಾಜ್ಯ ನಿರ್ವಹಣೆಗಾಗಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಗಳ ವಿಸ್ತೃತಾ ಯೋಜನೆಯನ್ನು ಸಿದ್ದಪಡಿಸಿ, ಯೋಜನೆಯ ಅನುಷ್ಠಾನಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ. ಅದರಂತೆ ಪ್ರಥಮ ಹಂತದಲ್ಲಿ ದ್ರವ ನಿರ್ವಹಣೆ ಕುರಿತಂತೆ, ಪ್ರತಿ ತಾಲೂಕಿನಲ್ಲಿ ಒಂದೊಂದು ಗ್ರಾಮ ಪಂಚಾಯತ್ ಗಳನ್ನು ಗುರುತಿಸಿ, ಆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಿಳಾ ಸ್ವಸಹಾಯ ಸಂಘಗಳ ಸಹಕಾರದೊಂದಿಗೆ, ದ್ರವ ತ್ಯಾಜ್ಯ ನಿರ್ವಹಣೆಯಲ್ಲಿ ಮಾದರಿ ಗ್ರಾಮಗಳನ್ನು ನಿರ್ಮಾಣ ಮಾಡಲು ಕೊಳಚೆ ಮುಕ್ತ ಗ್ರಾಮದೆಡೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕ್ರೀಡಾಪಟುಗಳಿಗೆ ಯಾವುದೇ ಆಟದಲ್ಲಿ ಬದ್ಧತೆಯಿರಬೇಕೆಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ವಿದ್ಯಾಗಿರಿಯ ಪ್ಯಾಲೆಸ್ ಗ್ರೌಂಡ್ನಲ್ಲಿ ಸೋಮವಾರ ಆರಂಭಗೊಂಡ ಮೂರು ದಿನದ ಮಂಗಳೂರು ವಿವಿ ಅಂತರ್ಕಾಲೇಜು ಹಾಗೂ ಉಡುಪಿ ವಲಯ ಮಟ್ಟದ ಫುಟ್ಬಾಲ್ ಚಾಂಪಿಯನ್ಶಿಪ್ನಲ್ಲಿ ಮಾತನಾಡಿದ ಅವರು, ಆಳ್ವಾಸ್ ಸಂಸ್ಥೆಯು ಶಿಕ್ಷಣದ ಜತೆ ಕ್ರೀಡೆಗೂ ಮಹತ್ವ ನೀಡುತ್ತಿದೆ. ಕ್ರೀಡಾಪಟುಗಳು ಯಾವುದೇ ಕ್ರೀಡೆಯಲ್ಲಿ ವೃತ್ತಿಪರತೆಯಿಂದ ತೊಡಗಿಸಿಕೊಂಡು, ತಮ್ಮ ಕ್ಷೇತ್ರಕ್ಕೆ ಬದ್ಧರಾಗಿರಬೇಕೆಂದು ಹೇಳಿದರು. ಕ್ರೀಡಾಕೂಟವನ್ನು ಫಿನಾನ್ಸ್ ಆಫಿಸರ್ ಶಾಂತರಾಮ್ ಕಾಮತ್ ಉದ್ಘಾಟಿಸಿದರು. ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಮಧು ಜಿ ಆರ್ ಉಪಸ್ಥಿತರಿದ್ದರು. ಉಪನ್ಯಾಸಕ ಆನಂದವೇಲು ಟಿ. ಎನ್. ವಂದಿಸಿದರು, ದ್ವಿತೀಯ ಎಂ.ಪಿಎಡ್ ವಿದ್ಯಾರ್ಥಿನಿ ಅಕ್ಷಿತಾ ಎಂ. ನಿರೂಪಿಸಿದರು. ಉಡುಪಿ ಹಾಗೂ ಮಂಗಳೂರು ವಲಯದ ೨೦ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮೂಡುಗಿಳಿಯಾರಿನ ಜನಸೇವಾ ಟ್ರಸ್ಟ್ ಆಯೋಜನೆಯ ಅಭಿಮತ ಸಂಭ್ರಮ ಕಾರ್ಯಕ್ರಮದಲ್ಲಿ ನಾಡಿನ ಮಹೋನ್ನತ ಸಾಧಕರಿಗೆ ಕೊಡಮಾಡುವ ಕೀರ್ತಿ ಕಲಶ ಮಹಾಗೌರವಕ್ಕೆ ಈ ಬಾರಿ ಬಸ್ರೂರು ಬಳಕೆದಾರರ ವೇದಿಕೆಯ ಸಂಚಾಲಕ ಡಾ. ರವೀಂದ್ರನಾಥ್ ಶಾನುಭಾಗ್ ಆಯ್ಕೆಯಾಗಿದ್ದಾರೆ. 2022 ಫೆ. 26ರಂದು ಮೂಡುಗಿಳಿಯಾರಿನಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜರಗಲಿದ್ದು, ಈ ಸಂದರ್ಭ ಡಾ.ನಾಗೇಶ್(ವೈದ್ಯಕೀಯ ಕ್ಷೇತ್ರ), ತೆಕ್ಕಟ್ಟೆ ಫ್ರೆಂಡ್ಸ್ (ರಿ) ತೆಕ್ಕಟ್ಟೆ ,(ಸಮಾಜ ಸೇವೆ)ಹಾಗೂ ಪತ್ರಕರ್ತ ಸತೀಶ ಬಿಲ್ಲಾಡಿ (ಮಾಧ್ಯಮ ಕ್ಷೇತ್ರ) ಇವರಿಗೆ ಯಶೋಗಾಥೆ ಗೌರವ ಸಲ್ಲಿಸಲಾಗುವುದು ಎಂದು ಕಾರ್ಯಕ್ರಮದ ಸಂಘಟಕರು ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಹಿರಿಯ ಪತ್ರಿಕೋದ್ಯಮಿ, ಬರಹಗಾರ ಸತೀಶ ಚಪ್ಪರಿಕೆ ಅವರ ’ಥೇಮ್ಸ್ ತಟದ ತವಕ ತಲ್ಲಣಗಳು’ ಮತ್ತು ಉದಯೋನ್ಮುಖ ಲೇಖಕ ಯೋಗೀಂದ್ರ ಮರವಂತೆ ಅವರ ’ಮುರಿದ ಸೈಕಲ್ ಹುಲಾ ಹೂಪ್ ಹುಡುಗಿ’ ಪುಸ್ತಕಗಳು ಡಿ.19ರ ಸಂಜೆ 5ಕ್ಕೆ ಬೆಂಗಳೂರಿನ ಬನಶಂಕರಿ ಎರಡನೆ ಹಂತದ ಬಿ. ವಿ. ಕಾರಂತ ರಸ್ತೆಯ ಸುಚಿತ್ರ ಫಿಲಂ ಸೊಸೈಟಿಯಲ್ಲಿ ಬಿಡುಗಡೆಗೊಳ್ಳಲಿವೆ. ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ಅಧ್ಯಕ್ಷತೆ ವಹಿಸಿ, ಪುಸ್ತಕ ಬಿಡುಗಡೆ ಮಾಡುವರು. ಹಿರಿಯ ಪತ್ರಕರ್ತ, ಲೇಖಕ ಜೋಗಿ, ಲೇಖಕ, ಅಂಕಣಕಾರ ಕೆ. ಸಿ. ರಘು, ಮೈಲ್ಯಾಂಗ್ ಬುಕ್ಸ್ನ ಸಹ ಸಂಸ್ಥಾಪಕ ವಸಂತ ಶೆಟ್ಟಿ ಮುಖ್ಯ ಅತಿಥಿಗಳಾಗಿರುವರು. ಪುಸ್ತಕ ಪ್ರಕಟಿಸಿರುವ ನವ ಕರ್ನಾಟಕ ಪಬ್ಲಿಕೇಷನ್ಸ್ನ ಕಾರ್ಯನಿರ್ವಾಹಕ ನಿರ್ದೇಶಕ ರಮೇಶ ಉಡುಪ ಉಪಸ್ಥಿತರಿರುವರು. ಸತೀಶ ಚಪ್ಪರಿಕೆ ಪತ್ರಿಕೋದ್ಯಮದ ಉನ್ನತ ಅಧ್ಯಯನಕ್ಕೆ ಬ್ರಿಟಿಷ್ ಶಿವ್ನಿಂಗ್ ಸ್ಕಾಲರ್ಶಿಪ್ ಪಡೆದು ಲಂಡನ್ನಲ್ಲಿ ನಡೆಸಿದ ವ್ಯಾಸಂಗದ ಅವಧಿಯಲ್ಲಿ ಗ್ರೇಟ್ ಬ್ರಿಟನ್ನಲ್ಲಿ ಮಾಡಿದ ವೃತ್ತಿಪರ ನೆಲೆಯೊಳಗಿನ ಸುತ್ತಾಟ ಮತ್ತು ಆ ವೇಳೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಯು.ಬಿ. ಶೆಟ್ಟಿ ಸಮೂಹ ಶಿಕ್ಷಣ ಸಂಸ್ಥೆಗಳ ನೂತನ ಶಾಲಾ ವಾಹನಗಳ ಲೋಕಾರ್ಪಣಾ ಸಮಾರಂಭ ಡಿ.22ರ ಬುಧವಾರ ಸಂಜೆ 4 ಗಂಟೆಗೆ ಯು.ಬಿ. ಶೆಟ್ಟಿ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ನಡೆಯಲಿದೆ. ಬೈಂದೂರಿನ ಯು.ಬಿ. ಶೆಟ್ಟಿ ಸಮೂಹ ಶಿಕ್ಷಣ ಸಂಸ್ಥೆಗಳ ವಾಹನಗಳ ಲೋಕಾರ್ಪಣಾ ಸಮಾರಂಭದ ಅಧ್ಯಕ್ಷತೆಯನ್ನು ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯು.ಬಿ. ಶೆಟ್ಟಿ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಬ್ಯಾಂಕ್ ಎಂಡಿ, ಸಿಇಓ ಮಹಾಬಲೇಶ್ವರ ಎಂ.ಎಸ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಐಪಿಎಸ್, ಅತಿಥಿಗಳಾಗಿ ಕರ್ನಾಟಕ ಬ್ಯಾಂಕ್ ಉಡುಪಿ ವಲಯದ ಸಹಾಯಕ ಮಹಾಪ್ರಬಂಧಕ ರಾಜಗೋಪಾಲ ಬಿ., ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಂ. ಮುಂದಿನಮನಿ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಡಿ.14: ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಸೌಲಭ್ಯಕ್ಕಾಗಿ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ www.ssp.karnataka.gov.in/8080/2122, www.backwardclasses.kar.nic.in ಅಥವಾ ತಾಲೂಕು / ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಯನ್ನು ಸಂಪರ್ಕಿಸುವAತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
