ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2025-26ನೇ ಶೈಕ್ಷಣಿಕ ಸಾಲಿನ ಪ್ರಾಕ್ತನ ವಿದ್ಯಾರ್ಥಿ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಮುಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜಗದೀಶ್ ನಾವಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾಲೇಜು ಅಭಿವೃದ್ಧಿಗೆ ಪ್ರಾಕ್ತನ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯ. ಪ್ರಾಕ್ತನ ವಿದ್ಯಾರ್ಥಿಗಳು ಸಂಸ್ಥೆಯ ಜೊತೆ ನಿರಂತರ ಒಡನಾಟ ಇಟ್ಟುಕೊಂಡಾಗ ಸಂಸ್ಥೆಯ ಬೆಳವಣಿಗೆ ಸಾಧ್ಯ ಎಂದರು. ಕಾಲೇಜಿನ ಪ್ರಾಂಶುಪಾಲ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ನೂತನ ಪ್ರಾಕ್ತನ ವಿದ್ಯಾರ್ಥಿ ಸಂಘದ ಪರಿಕಲ್ಪನೆಯಲ್ಲಿ ಮೂಡಿ ಬರಲಿರುವ ಪ್ರಾಕ್ತನಯಾನ ಹಾಗೂ ಯಶೋದೀಪ ಯೋಜನೆಗೆ ಚಾಲನೆ ನೀಡಿದರು. ಉಪ-ಪ್ರಾಂಶುಪಾಲ ಡಾ. ಚೇತನ ಶೆಟ್ಟಿ ಕೋವಾಡಿ ಆಶಯದ ನುಡಿಗಳನ್ನಾಡಿದರು ಮತ್ತು ಆಡಳಿತ ನಿಕಾಯಕ ರಕ್ಷಿತ್ ರಾವ್ ಗುಜ್ಜಾಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಿಭಿನ್ನ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರಾಕ್ತನ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೊತ್ತಾಡಿ ಉಮೇಶ್ ಶೆಟ್ಟಿ ಅವರು ಕೊಯಮತ್ತೂರಿನ ಭಾರತೀಯಾರ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಮಕ್ಕಳು ಮತ್ತು ಯುವಜನರಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ ಅವರಿಗೆ ಉತ್ತೇಜನ ನೀಡುವ ಮತ್ತು ಅವರು ತಮ್ಮ ಕಲಾ ನೈಪುಣ್ಯವನ್ನು ವೃದ್ಧಿಗೊಳಿಸುವಂತೆ ಪ್ರೊತ್ಸಾಹಿಸಲು ಬಾಲ ಪ್ರತಿಭೆ (8 ವರ್ಷ ದಿಂದ 14 ವರ್ಷದ ಒಳಗಿರುವ), ಕಿಶೋರ ಪ್ರತಿಭೆ (14 ವರ್ಷದಿಂದ 18 ವರ್ಷದೊಳಗಿರುವ) ಹಾಗೂ ಯುವಪ್ರತಿಭೆ (18 ವರ್ಷದಿಂದ 30 ವರ್ಷದ ಒಳಗಿರುವ) ಗಳಿಗೆ ಕಲಾಪ್ರತಿಭೋತ್ಸವವನ್ನು ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಸ್ಪರ್ಧೆಯು ನಡೆಯುವ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು. ಜಿಲ್ಲಾ ಮಟ್ಟದಲ್ಲಿ ಭಾಗವಹಿಸುವ ಎಲ್ಲಾ ಸ್ಪರ್ಧಿಗಳಿಗೂ ಪ್ರಮಾಣ ಪತ್ರ ನೀಡುವುದರೊಂದಿಗೆ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರನ್ನು ವಲಯಮಟ್ಟಕ್ಕೆ, ವಲಯಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆ ಮಾಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಿಗಳು ವಯಸ್ಸಿನ ದೃಢೀಕರಣಕ್ಕಾಗಿ ದಾಖಲೆಗಳನ್ನು ತಾವು ವ್ಯಾಸಂಗ ಮಾಡುತ್ತಿರುವ ವಿದ್ಯಾ ಸಂಸ್ಥೆಯಿಂದ ಪಡೆದು ಅರ್ಜಿಯ ಜೊತೆಗೆ (ಅರ್ಜಿಗೆ ನಿಗದಿತ ನಮೂನೆ ಇರುವುದಿಲ್ಲ: ಬಿಳಿ ಹಾಳೆಯಲ್ಲಿ ಸ್ವವಿವರಗಳನ್ನು ಬರೆದಿರಬೇಕು.) ಲಗತ್ತಿಸಬೇಕು. ಚಿತ್ರಕಲಾ ಸ್ಪರ್ಧಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕರಾವಳಿಯ ಜೀವನಾಡಿ ಮೀನುಗಾರಿಕೆ ಅದೆಷ್ಟೊ ಕುಟುಂಬಗಳು ಅದರ ಆಯಾಮದ ಮೇಲೆ ಜೀವನ ಕಂಡುಕೊಂಡಿದ್ದಾರೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಪಚ್ಚಿಲೆ ಸೇರಿದಂತೆ ಮುತ್ತು ಕೃಷಿಯ ಮೂಲಕ ಯುವ ಸಮೂಹ ಹೊಸ ಭಾಷ್ಯ ಬರೆಯುತ್ತಿರುವುದು ಶ್ಲಾಘನೀಯ ಎಂದು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು. ಅವರು ಸಾಸ್ತಾನದಲ್ಲಿ ಕರಾವಳಿ ಕೃಷಿ ಸಂಶೋಧನಾ ಸಂಸ್ಥೆ (ICAR –CCARI) ಗೋವಾ, ಜಲಾನಯನ ಅಭಿವೃದ್ಧಿ ಇಲಾಖೆ-ಬೆಂಗಳೂರು, ಜಿಲ್ಲಾ ಪಂಚಾಯತ್-ಉಡುಪಿ, ಕೃಷಿ ಇಲಾಖೆ-ಉಡುಪಿ, ಮೀನುಗಾರಿಕೆ ಇಲಾಖೆ ಉಡುಪಿ, ಭಾ.ಕೃ.ಅ.ಪ. ಕೃಷಿ ವಿಜ್ಞಾನ ಕೇಂದ್ರ-ಬ್ರಹ್ಮಾವರ, ಗೀತಾನಂದ ಫೌಂಡೇಶನ್ ಮಣೂರು, ಅರಬ್ಬೀ ಸಮುದ್ರ ಮೀನುಗಾರಿಕೆ ನಿರ್ವಹಣೆ ಸಮನ್ವಯ ಸಮಿತಿ, ಸ್ಕೋಡವೆಸ್ ಸಂಸ್ಥೆ, ಆಯುಶ್ಮಾನ್ ಭವ ಸಂಸ್ಥೆ, ಉಡುಪಿ ಕಿನಾರ ಮೀನುಗಾರರ ಉತ್ಪಾದಕ ಕಂಪನಿ ನಿಯಮಿತ ಮತ್ತು ಅಮೃತೇಶ್ವರಿ ರೈತ ಉತ್ಪಾದಕ ಕಂಪನಿ ನಿಯಮಿತ ಜಂಟಿಯಾಗಿ ಆಯೋಜಿಸಿರುವ ಮುತ್ತು ಕೃಷಿ ಮಾಹಿತಿ ಕಾರ್ಯಾಗಾರ ಮನೆ ಮನೆಯಲ್ಲೂ ಮುತ್ತು ಕೃಷಿ ಹಾಗೂ ಯುಕೆ ಪರ್ಲ್ ಮಾರ್ಟ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬೋರ್ಡ್ ಹೈಸ್ಕೂಲ್ ವಠಾರದ ರೋಟರಿ ಕಲಾಮಂದಿರದಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕುಂದಾಪುರ ತಾಲೂಕು ಘಟಕ ವತಿಯಿಂದ ಸಾಮಾಜಿಕ ಹೋರಾಟಗಾರ, ಹಿರಿಯ ನೇತಾರ ಮಾಣಿ ಗೋಪಾಲ್ ಅವರ ಆತ್ಮಕಥನ ‘ನಾನು ಮಾಣಿಗೋಪಾಲ’ ಪುಸ್ತಕವನ್ನು ಬಿಡುಗಡೆಗೊಂಡಿತು. ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ| ಎಂ. ಮೋಹನ್ ಆಳ್ವ ಅವರು ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿ, ಮಾಣಿಗೋಪಾಲರು ಶ್ರೀ ಸಾಮಾನ್ಯರ ಜತೆಯಲ್ಲಿದ್ದುಕೊಂಡು, ಬಡವರ ಪರ, ಮೂರ್ತೆದಾರರ ಪರ ಹೋರಾಟ ಮಾಡಿದವರು. ಆ ಕಾಲದಲ್ಲಿ ಅಂತಹ ಹೋರಾಟ ಮಾಡಲು ಗಟ್ಟಿತನ ಇರಬೇಕು. ಬದುಕಿಗೊಂದು ಸ್ಪಷ್ಟ ನಿಲುವು ಬೇಕಿತ್ತು. ಅದೆರಡು ಅವರಲ್ಲಿತ್ತು. ಇಡೀ ಬದುಕಿನುದ್ದಕ್ಕೂ ಸತ್ಯ, ನ್ಯಾಯ, ಧರ್ಮದ ಪರ ಹೋರಾಡಿ, ರಾಜಕೀಯದಲ್ಲೂ ಶುದ್ಧ ಚಾರಿತ್ರ್ಯವನ್ನು ಉಳಿಸಿಕೊಂಡು, ಶುದ್ಧ ಹಸ್ತದ ರಾಜಕಾರಣಕ್ಕೆ ಹೆಸರಾದ ಕುಂದಾಪುರದ ಸಾಕ್ಷಿ ಪ್ರಜ್ನೆಯಂತಿದ್ದರು ಎಂದು ಹೇಳಿದರು. ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಅವರೊಂದಿಗೆ ನಮ್ಮ ಕುಟುಂಬಕ್ಕೆ ದೀರ್ಘಕಾಲದ ಒಡನಾಟವಿದೆ. ಬೇರೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಾರಂತರು ತಮ್ಮ ಜೀವಿತ ಅವಧಿಯಲ್ಲಿ ನಡೆನುಡಿ ಬಲು ವಿಶಿಷ್ಟವಾದದ್ದು ಅವರ ಸಾಹಿತ್ಯಿಕ ಬದುಕು ಯುವ ಸಮುದಾಯಕ್ಕೆ ಪ್ರೇರಣೆದಾಯಕ ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಶನಿವಾರ ಗಿರಿಜಾ ಕಲ್ಯಾಣಮಂಟಪ ದಲ್ಲಿ ಗೆಳೆಯರ ಬಳಗ ಕಾರ್ಕಡ ಇವರ ಆಶ್ರಯದಲ್ಲಿ ಡಾ. ಕೋಟ ಶಿವರಾಮ ಕಾರಂತ ಜನ್ಮದಿನಾಚರಣೆ ಅಂಗವಾಗಿ ಗೆಳೆಯರ ಬಳಗ ಕಾರಂತ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಕಾರಂತರು ವಿಶ್ವಮಟ್ಟದಲ್ಲಿ ತಮ್ಮ ಸಾಹಿತ್ಯ, ವಿವಿಧ ರಂಗವನ್ನು ಪರಿಚಯಿಸಿಕೊಂಡವರು ಅಂತಹ ಮಹಾನ್ ಚೇತನ ಹೆಸರಿನಲ್ಲಿ ಪುರಸ್ಕಾರ ಏರ್ಪಡಿಸಿದ ಗೆಳೆಯರ ಬಳಗಕ್ಕೆ ಕೃತಜ್ಞತೆ ಸಲ್ಲಿಸಬೇಕು ಎಂದರು. ಇದೇ ವೇಳೆ ಸಾಹಿತಿ ಎಚ್. ಶಕುಂತಲ ಭಟ್ ಹಳೆಯಂಗಡಿ ಅವರಿಗೆ ಗೆಳೆಯರ ಬಳಗ ಕಾರಂತ ಪುರಸ್ಕಾರ ನೀಡಲಾಯಿತು. ಕಲ್ಕೂರ ಪ್ರತಿಷ್ಠಾನ ಮಂಗಳೂರು ಇದರ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಕಾರಂತರ ಭಾವ ಚಿತ್ರಕ್ಕೆ ಪುಷ್ಭನಮನ ಸಲ್ಲಿಸಿದರು. ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಶಿರೂರು ಕೆಳಪೇಟೆಯಲ್ಲಿ ಆಟೋ ರಿಕ್ಷಾಕ್ಕೆ ಬೊಲೆರೋ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದು ರಿಒ್ಷಾ ಚಾಲಕ ಮೃತಪಟ್ಟ ಘಟನೆ ನಡೆದಿದೆ. ಹಡವಿನಕೋಣೆ ನ್ಯೂ ಕಾಲೋನಿ ನಿವಾಸಿ ಕರಾ ಇಲಿಯಾಸ್(49) ಮೃತ ರಿಕ್ಷಾ ಚಾಲಕ ಮಲ್ಪೆಯಿಂದ ಭಟ್ಕಳಕ್ಕೆ ತೆರಳುತ್ತಿದ್ದ ಮೀನಿನ ವಾಹನ ಶಿರೂರು ಮಾರ್ಕೆಟ್ ಕಡೆಗೆ ತೆರಳುತ್ತಿದ್ದ ಆಟೋ ರಿಕ್ಷಾಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದೆ.ರಿಕ್ಷಾ ಡಿಕ್ಕಿಯಾದ ರಭಸಕ್ಕೆ ರಿಕ್ಷಾ ನಜ್ಜುನುಜ್ಜಾಗಿದ್ದು ರಿಕ್ಷಾ ಚಾಲಕ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಬೈಂದೂರು ಆರಕ್ಷಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಬಿ.ಇಡಿ ವ್ಯಾಸಾಂಗಕ್ಕಾಗಿ ಸರ್ಕಾರದಿಂದ ಮಾನ್ಯತೆ ಪಡೆದ ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಬಿ.ಇಡಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದಡಿ ಸೀಟುಗಳ ದಾಖಲಾತಿಗಾಗಿ ಇಲಾಖಾ ವೆಬ್ಸೈಟ್ www.schooledecation.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 3 ಕೊನೆಯ ದಿನ. ಜಿಲ್ಲಾ ನೋಡೆಲ್ ಕೇಂದ್ರವಾಗಿ ಡಯಟ್ ಉಡುಪಿ ಕಾರ್ಯನಿರ್ವಹಿಸಲಿದ್ದು, ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ಏಳು ದಿನಗಳ ಒಳಗಾಗಿ ಕಡ್ಡಾಯವಾಗಿ ಮೂಲ ದಾಖಲೆಗಳೊಂದಿಗೆ ಸಂಸ್ಥೆಯಲ್ಲಿ ಪರಿಶೀಲನೆಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸೋನಿಕ್ ಟಿ ಮೊ.ನಂ: 9901236348 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸುವಿಧಾ ಸೌಹರ್ಧ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಇದರ ನಿರ್ದೇಶಕರಾಗಿರುವ ವಂಡ್ಸೆ ಕಟ್ಟೆಮನೆ ಹೇಮಂತ್ ಕುಮಾರ್ ಶೆಟ್ಟಿ (59) ಅವರು ಶುಕ್ರವಾರ ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ಅವರು ಜ್ಯೋತಿ ಲ್ಯಾಬೋರಟರಿ ಲಿಮಿಟೆಡ್ ಕಂಪೆನಿಯಲ್ಲಿ ಜೋನಲ್ ಕಮರ್ಸಿಯಲ್ ಮೇನೇಜರ್ ಆಗಿ ಸೇವೆ ಸಲ್ಲಿಸುತಿದ್ದರು. ಮೃತರು ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಶನಿವಾರಕನ್ನಡ ವಿಭಾಗ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕುಂದಾಪುರ ಹಾಗೂ ಸುವ್ವಿ ಪಬ್ಲಿಕೇಷನ್ಸ್ ಶಿಕಾರಿಪುರ ಇದರ ಸಂಯುಕ್ತ ಆಶ್ರಯದಲ್ಲಿ ವೈದೇಹಿಯವರ ಸಾಹಿತ್ಯ ಮರುಚಿಂತನೆ ಕುರಿತು ಒಂದು ದಿನದ ರಾಷ್ಟ್ರಮಟ್ಟದ ವೆಬಿನಾರ್ ಮತ್ತು ಕೃತಿ ಲೋಕಾರ್ಪಣೆ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಆಗಮಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಅನುಪಮ ಎಸ್. ಶೆಟ್ಟಿ ಮಾತನಾಡಿ, ವೈದೇಹಿಯವರು ಕುಂದಾಪುರ ಮಹಿಳೆಯರ ಕಷ್ಟಗಳನ್ನು ತಮ್ಮದೇ ಆದ ಭಾಷೆಗಳಲ್ಲಿ ಬರೆಯುತ್ತಿದ್ದರು ಮತ್ತು ಮಹಿಳಾ ಜೀವನದ ಎಲ್ಲಾ ಮಜಲುಗಳನ್ನು ಅವರ ಕೃತಿಗಳಲ್ಲಿ ಕಾಣಬಹುದಾಗಿದೆ ಎಂದರು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಕೇರಳ ಕೇಂದ್ರೀಯ ವಿಶ್ವ ವಿದ್ಯಾನಿಲಯದ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಸೌಮ್ಯ ಹೇರಿಕುದ್ರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ವೈದೇಹಿಯವರ ಕಥೆಗಳಲ್ಲಿ ಸ್ತ್ರೀ ಸಾಮಾನ್ಯರನ್ನು ಕೇಂದ್ರೀಕರಿಸಿ ಸುಮಾರು 70 ಮತ್ತು 80ರ ದಶಕದ ಮಹಿಳೆಯ ಕಷ್ಟ ಮತ್ತು ಬದುಕಿನಲ್ಲಿ ಎದುರಾಗುವ ಸವಾಲುಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ತಂತ್ರಜ್ಞಾನ, ವೈದ್ಯಕೀಯ, ಮೆಕ್ಯಾನಿಕ್, ಬೋಧನೆ ಸೇರಿದಂತೆ ಹತ್ತಾರು ರೀತಿಯ ಉದ್ಯೋಗದ ಅವಕಾಶಗಳು ಸೇನೆಯಲ್ಲಿ ಇವೆ. ಅದನ್ನು ಅರಿತುಕೊಂಡು ಸದ್ಬಳಕೆ ಮಾಡಿಕೊಳ್ಳುವಲ್ಲಿ ಇಂದಿನ ಯುವ ಪೀಳಿಗೆ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಮಾಜಿ ಸೈನಿಕರು, ಲೇಖಕರು ಆಗಿರುವ ಬೈಂದೂರು ಚಂದ್ರಶೇಖರ ನಾವುಡ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ, ಎಸ್.ವಿ ಕಾಮರ್ಸ್ ಕ್ಲಬ್ ಗಂಗೊಳ್ಳಿ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಶ್ರೀ ನಾರಾಯಣ ಗುರು ಜನ ಸೇವಾ ಬಳಗದ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ರೋಟರಿ ಸಭಾಂಗಣದಲ್ಲಿ ನಡೆದ ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶಗಳ ಕುರಿತಾದ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಸೈನ್ಯ ಸೇರುವುದೆಂದರೆ ಕೇವಲ ಯುದ್ಧ ಮಾಡುವುದು ಎಂದು ಅರ್ಥವಲ್ಲ. ದೇಶಪ್ರೇಮದ ಮನೋಭಾವನೆಯೊಂದಿಗೆ ಅಲ್ಲಿರುವ ವಿವಿಧ ಉದ್ಯೋಗಗಳಲ್ಲಿ ನಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಉತ್ತಮವಾದ ಬದುಕನ್ನು ಕಟ್ಟಿಕೊಳ್ಳಲು ಕೂಡ ಸಾಧ್ಯವಿದೆ ಎಂದರು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ. ಸಿ. ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಬೈಂದೂರು ಚಂದ್ರಶೇಖರ ನಾವುಡ ಅವರನ್ನು…
