ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೊಸದಾಗಿ ಕುಂದಾಪುರದಲ್ಲಿ ಪ್ರಾರಂಭವಾದ ಸೈಂಟ್ ಫಿಲಿಫ್ ನೆರಿ ಸೊಸೈಟಿ, ಇದರ ಸ್ಥಾಪಕ ಅಧ್ಯಕ್ಷರಾಗಿ ವಾಲ್ಟರ್ ಡಿಸೋಜಾ ಆನಗಳ್ಳಿ ಆಯ್ಕೆಯಾಗಿದ್ದಾರೆ. ಸಂಸ್ಥೆಯನ್ನು ಮುಖ್ಯ ಪ್ರವರ್ತಕರಾಗಿ ಸಂಸ್ಥೆಯನ್ನು ಸಂಘಟಿಸಿದ್ದ ಅವರು ಜ.8ರಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದರು. ಚುನಾವಣೆಯನ್ನು ಸರಕಾರದ ಸಹಾಯಕ ನಿಬಂಧಕರ ಕಛೇರಿ ಕುಂದಾಪುರ ಇದರ ಅಧಿಕಾರಿಯಾದ ಎಂ.ಸಿ. ಸ್ವಾಮಿ ಅವರು ನೆರವೇರಿಸಿಕೊಟ್ಟರು. ಉಪಾಧ್ಯಕ್ಷರಾಗಿ ಅಲಿಷಾ ಡಿಸೋಜಾ ಆಯ್ಕೆಯಾದರು. ಸ್ವ-ಉದ್ಯೋಗಿಗಳಿಗೆ ನೆರವು ನೀಡುವ ಮುಖ್ಯ ಉದ್ದೇಶವಾಗಿದ್ದು, ಸಂಘದ ಸದಸ್ಯರಿಗೆ ಸ್ವ-ಉದ್ಯೋಗ ಕೈಗೊಳ್ಳಲು ಬೇಕಾದ ಆನ್ಲೈನ್ ಅರ್ಜಿ ಸಲ್ಲಿಕೆ, ಹಣಕಾಸು ನೆರವು, ಮಾಹಿತಿ ಮತ್ತು ತರಬೇತಿ ಉಚಿತವಾಗಿ ನೀಡುವುದಾಗಿ ತಿಳಿಸಿದರು. ಚುನಾವಣೆ ನಡೆಸಲು ನೆರವಾದ ಎಲ್ಲಾ ನಿರ್ದೇಶಕರಿಗೆ ಮತ್ತು ಸರಕಾರದ ಅಧಿಕಾರಿಗಳಿಗೆ ಸಂಸ್ಥೆಯ ಉಪಾಧ್ಯಕ್ಷೆ ಆಲಿಷಾ ಡಿಸೋಜಾ ಧನ್ಯವಾದ ತಿಳಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಶಿರೂರು ಕರಾವಳಿ ಕಡಲ-ತಡಿಯಲ್ಲಿ ರೋಟರಿ ಕ್ಲಬ್ ಬೈಂದೂರಿನ ಕುಟುಂಬ ಸಮ್ಮಿಲನ ಕಾರ್ಯಕ್ರಮವು ಇತ್ತೀಚಿಗೆ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿದ್ದ ಡಾ. ಉಮೇಶ್ ಪುತ್ರನ್ ಮಾತನಾಡಿ, ‘ರೋಟರಿ ಸಂಸ್ಥೆಯು ವಿಶ್ವಶಾಂತಿಗಾಗಿ ನಿರಂತರವಾಗಿ ಶ್ರಮಿಸುತ್ತಿದೆ. ರೋಟರಿಯ ಅಂತರರಾಷ್ಟ್ರೀಯ ಬಾಂಧವ್ಯ ನೀತಿಗಳು ಜಾಗತಿಕ ಮಟ್ಟದಲ್ಲಿ ಖ್ಯಾತಿ ಪಡೆದಿದೆ. ಸಾಮಾಜಿಕ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವ ಮೂಲಕ ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ, ರೋಟರಿ ಕ್ಲಬ್ ಜನಮುಖಿ ಕಾರ್ಯ ಯೋಜನೆಗಳನ್ನು ಅನುಷ್ಠಾನ ಮಾಡುತ್ತಾ ಬಂದಿದೆ ಎಂದರು. ಹ್ಯಾಟ್ರಿಕ್ ಡಿಸ್ಟಿಕ್ ಕಲ್ಬರಲ್ ಚಾಂಪಿಯನ್ ಪ್ರಶಸ್ತಿ ಮುಡಿಗೇರಿಸಿಕೊಂಡ ಬೈಂದೂರು ರೋಟರಿಯ ಅಧ್ಯಕ್ಷ- ಕಾರ್ಯದರ್ಶಿ ಅವರನ್ನು, ರೋಟರಿ ಟ್ರಸ್ಟ್ ಪರವಾಗಿ ಟ್ರಸ್ಟ್ ಅಧ್ಯಕ್ಷ ಕೆ. ಬಾಬು ಶೆಟ್ಟಿ ಗೌರವಿಸಿದರು. ಕಾರ್ಯಕ್ರಮದ ಪ್ರಾಯೋಜಕರಾದ ಲಕ್ಷ್ಮಿ ಪ್ರಕಾಶ್ – ದೀಪಿಕಾ ದಂಪತಿಯನ್ನು ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು. 2026- 27ನೇ ಸಾಲಿನ ಅಧ್ಯಕ್ಷರಾಗಿ ಅರುಣ್ ಕುಮಾರ್ ಶಿರೂರು, 2027-28ನೇ ಸಾಲಿನ ಅಧ್ಯಕ್ಷರಾಗಿ ಸತೀಶ್ ಶೆಟ್ಟಿ ಸೂರ್ಕುಂದ ಆಯ್ಕೆಯಾದರು. ರೋಟರಿ ಕ್ಲಬ್ ಬೈಂದೂರು…
ಕುಂದಾಪ್ರ ಡಾಟ್ ಕಾಂ ಸುದ್ದಿಕೋಟ: ಇಲ್ಲಿನ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಕೇಂದ್ರ ಸರ್ಕಾರದ ಸಹಾಯಕ ಸಚಿವ ಸುರೇಶ್ ಗೋಪಿ ಅವರು ಕುಟುಂಬದವರೊಂದಿಗೆ ಶನಿವಾರ ಭೇಟಿ ನೀಡಿದರು. ಸಚಿವರನ್ನು ವಾದ್ಯ ಗೋಷ್ಠಿಗಳೊಂದಿಗೆ ಆಡಳಿತ ಮೊಕ್ತೇಸರರಾದ ಶ್ರೀರಮಣ ಉಪಾಧ್ಯಾಯರು ಹಾಗೂ ಪರ್ಯಾಯ ಅರ್ಚಕರಾದ ವ್ಯಾಸ ಉಪಾಧ್ಯಾಯ ಸಹೋದರರು ಆದರದಿಂದ ಬರಮಾಡಿಕೊಂಡು ವಿಶೇಷ ಗೌರವ ಪ್ರಸಾದವನ್ನು ನೀಡಿದರು ವಿಶ್ರಾಂತ ಆಡಳಿತ ಮೊಕ್ತೇಸರ ಸೂರ್ಯನಾರಾಯಣ ಉಪಾಧ್ಯಾಯರು, ಆಡಳಿತ ಮಂಡಳಿ ಸದಸ್ಯರು, ಅರ್ಚಕ ಸಿಬ್ಬಂದಿ, ಭಕ್ತಾದಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಪಾರಿಜಾತದ ವತಿಯಿಂದ ದಿ। ರಾಮಚಂದ್ರ ಭಟ್ ಮತ್ತು ದಿ। ಅಹಲ್ಯ ಭಟ್ ಸವಿನೆನಪಿಗಾಗಿ ಕೋಡಿ ಬೀಚ್ನಲ್ಲಿ ನಡೆಯುವ ಗಾಳಿಪಟ ಉತ್ಸವದಲ್ಲಿ ಆಕರ್ಷಣೀಯ ‘ನಮ್ಮೂರ ಶಾಲೆ’ ಪರಿಕಲ್ಪನೆಯ ಬೃಹತ್ ಮರಳು ಶಿಲ್ಪಾಕೃತಿ ಕಣ್ಮನ ಸೆಳೆಯುತ್ತಿದೆ. ಸರಕಾರಿ ಶಾಲಾ ಮಕ್ಕಳ ಧೈಯವನ್ನಿಟ್ಟುಕೊಂಡು ಸ್ವಾತಂತ್ರತೆಯನ್ನು ಮತ್ತು ಬಣ್ಣದ ಕನಸ್ಸನ್ನು ಕಾಣುವ ಗಾಳಿಪಟದ ವರ್ಣನೆಯೊಂದಿಗೆ ಶಾಲಾ ದೃಶ್ಯ ಹಾಗೂ ಗಾಳಿಪಟ ಉತ್ಸವ ಎಂಬ ಬರಹದೊಂದಿಗೆ ಬಳಪವನ್ನು ಹಿಡಿದುಕೊಂಡ ಶಾಲಾ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯ ಭಾವನೆಯನ್ನು ಅಭಿವ್ಯಕ್ತಿಸುವ ಕಲಾಕೃತಿಯು “ಸ್ಯಾಂಡ್ ಥೀಂ” ಉಡುಪಿಯ ಹರೀಶ್ ಸಾಗಾ, ಸಂತೋಷ್ ಭಟ್ ಹಾಲಾಡಿ, ಉಜ್ವಲ್ ರಿಂದ 15 ಅಡಿ ಅಗಲ ಮತ್ತು 6 ಅಡಿ ಎತ್ತರದಲ್ಲಿ ರಚಿಸಲಾಗಿದ್ದು, ದಿನಾಂಕ 18ರಂದು ಸಾರ್ವಜನಿಕ ವೀಕ್ಷಣೆಗೆ ಮುಕ್ತ ಅವಕಾಶವನ್ನು ಕಲ್ಪಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಪ್ರಥಮ ಬಾರಿಗೆ ಭೇಟಿ ನೀಡಿದ ಪರ್ಯಾಯ ಪೀಠವನ್ನು ಏರಲಿರುವ ಶಿರೂರು ಮಠದ ಯತಿಗಳಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದಂಗಳವರಿಗೆ ಬಿಕ್ಷಾ ಕಾರ್ಯಕ್ರಮವನ್ನು ಶ್ರೀದೇವಳದ ವತಿಯಿಂದ ಹಮ್ಮಿಕೊಳ್ಳಲಾಯಿತು. ಶ್ರೀ ಪಾದಂಗಳವರನ್ನು ಪೂರ್ಣಕುಂಭ ಹಾಗೂ ವಾದ್ಯಗೋಷ್ಠಿಗಳೊಂದಿಗೆ ಸ್ವಾಗತಿಸಲಾಯಿತು. ಶ್ರೀ ಪಾದಂಗಳವರು ಪಟ್ಟದ ದೇವರ ಪೂಜೆಯನ್ನು ನೆರವೇರಿಸಿ, ವಿಶೇಷ ಪ್ರವಚನವನ್ನು ನೀಡಿ ಭಿಕ್ಷೆಯನ್ನು ಸ್ವೀಕರಿಸಿ ಮುಂದೆ ನಡೆಯುವ ಪರ್ಯಾಯ ಮಹೋತ್ಸವಕ್ಕೆ ವಿಶೇಷ ಆಹ್ವಾನದ ರಾಯಸವನ್ನು ನೀಡಿದರು. ಈ ಸಂದರ್ಭದಲ್ಲಿ ಆಡಳಿತ ಧರ್ಮದರ್ಶಿಗಳಾದ ಕೆ. ಶ್ರೀ ರಮಣ ಉಪಾಧ್ಯಾಯ ದಂಪತಿಗಳು ಶ್ರೀಗಳನ್ನು ಸ್ವಾಗತಿಸಿ, ಪಾದಪ್ರಕ್ಷಾಲನ ಮಾಡಿ ಮಾಲಿಕೆ ಮಂಗಳಾರತಿಯೊಂದಿಗೆ ಫಲ ಕಾಣಿಕೆಯನ್ನು ಸಮರ್ಪಿಸಿ ಅನುಗ್ರಹ ಮಂತ್ರಾಕ್ಷತೆಯನ್ನು ಪಡೆದರು. ಈ ಸಂದರ್ಭದಲ್ಲಿ ವಿಶ್ರಾಂತ ಧರ್ಮದರ್ಶಿಗಳಾದ ಕೆ. ಸೂರ್ಯನಾರಾಯಣ ಉಪಾಧ್ಯಾಯರು, ಪರ್ಯಾಯ ಅರ್ಚಕರಾದ ಕೆ. ವ್ಯಾಸ ಉಪಾಧ್ಯಾಯ ಹಾಗೂ ಸಹೋದರರು, ಆನೆಗುಡ್ಡೆ ಉಪಾಧ್ಯಾಯ ಕುಟುಂಬ ಸದಸ್ಯರು, ದೇವಳದ ಆಡಳಿತ ಹಾಗೂ ಅರ್ಚಕ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೆಡ್ ಕ್ರಾಸ್ ಮಾನವೀಯ ನೆಲೆಯಲ್ಲಿ ಕೆಲಸ ಮಾಡುವ ದೊಡ್ಡ ಸಂಸ್ಥೆ. ಬೇರೆ ಸಂಸ್ಥೆಗಳಿಂದ ಭಿನ್ನವಾಗಿರುವ ರೆಡ್ ಕ್ರಾಸ್ ದೇಶದ ಉದ್ದಗಲಕ್ಕೂ ಹಲವಾರು ಜನಪರ. ಜನಹಿತ ಕಾರ್ಯಗಳನ್ನು ಮಾಡಿದೆ. ರೆಡ್ ಕ್ರಾಸ್ ಸಂಸ್ಥೆಯ ತತ್ವವನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲ್ಲೂಕು ಘಟಕದ ಚೇರ್ ಮೆನ್ ಜಯಕರ್ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲ್ಲೂಕು ಘಟಕ, ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇವರ ಸಂಯುಕ್ತ ಆಸರೆಯಲ್ಲಿ ನಡೆದ ಪ್ರಥಮ ಚಿಕಿತ್ಸೆ ಮತ್ತು ಆರೋಗ್ಯ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿ ಡಾ. ಸೋನಿ ಡಿಕಾಸ್ಟ್ ಅವರು ಪ್ರಥಮ ಚಿಕಿತ್ಸೆ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಪ್ರಥಮ ಚಿಕಿತ್ಸೆ ಹೇಗೆ ಮಾಡುವುದು ಅದರ ಪ್ರಥಮ ಹಂತದ ಕಾರ್ಯಗಳು ಯಾವುವು, ತೆಲೆಸುತ್ತಿ ಬಿದ್ದವ್ಯಕ್ತಿಗೆ ಯಾವ ರೀತಿ ಪ್ರಾಥಮಿಕ ಹಂತದಲ್ಲಿ ಪ್ರಥಮ ಚಿಕಿತ್ಸೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಜನಸಾಮಾನ್ಯರ ಪ್ರತೀ ಸಮಸ್ಯೆಯೂ ವಕೀಲರನ್ನು ಸ್ಪಂದಿಸುವಂತೆ ಮಾಡುತ್ತದೆ. ದೈನಂದಿನ ಬದುಕಿನಲ್ಲಿ ವಕೀಲರ ಮೂಲಕ ತಮ್ಮ ಕ್ಲಿಷ್ಟ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳುವುದರೊಂದಿಗೆ ಜನಸಾಮಾನ್ಯ ಮತ್ತು ವಕೀಲರ ಸಂಬಂಧ ಗಟ್ಟಿಯಾಗಿದೆ ಎಂದು ನ್ಯಾಯವಾದಿ ಮತ್ತು ಪತ್ರಕರ್ತ ರವಿಕುಮಾರ್ ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಇಲ್ಲಿನ ಎಸ್.ವಿ. ಕಾಮರ್ಸ್ ಕ್ಲಬ್ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ನಡೆದ ವಕೀಲಿಕೆ ಮತ್ತು ಜನಸಾಮಾನ್ಯರು ಕುರಿತಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ವಕೀಲರು ಕಾನೂನಿನ ವಿಷಯದಲ್ಲಿ ಅಪ್ಡೇಟ್ ಇರಬೇಕು ಮತ್ತು ಪ್ರಾಮಾಣಿಕ ಸೇವೆ ನೀಡುವ ಮೂಲಕ ಸ್ಪಂದಿಸಬೇಕು. ಕಠಿಣ ಶ್ರಮ ಮತ್ತು ಅಧ್ಯಯನ ವಕೀಲ ವೃತ್ತಿಯ ಘನತೆ ಹೆಚ್ಚಿಸುತ್ತದೆ ಎಂದು ಹೇಳಿದರು. ಗುಜ್ಜಾಡಿ ಕೋಟಿ ಚೆನ್ನಯ್ಯ ಗರಡಿಯ ಪಾತ್ರಿಗಳಾದ ರಾಘವೇಂದ್ರ ಪೂಜಾರಿ ಶುಭ ಹಾರೈಸಿದರು. ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯ ಮಹೇಶ್ ಶೇಟ್ ಉಪಸ್ಥಿತರಿದ್ದರು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕವಿತಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗ್ರಾಮದ ಅಭಿವೃದ್ಧಿ ಸಾಧ್ಯವಾಗಬೇಕಾದರೆ ಜನರ ಒಗ್ಗೂಡುವಿಕೆ ಅಗತ್ಯ, ಸರ್ಕಾರದ ನಾನಾ ಇಲಾಖೆಗಳ ಯೋಜನೆಗಳನ್ನು ಜನರ ಬಳಿಗೆ ತಲುಪಿಸುವಲ್ಲಿ ಗ್ರಾಮೋತ್ಸವ ಸಹಕಾರಿಯಾಗಿದೆ ಎಂದು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು. ಅವರು ಇಲ್ಲಿನ ಬಿಜೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಆರೋಗ್ಯ, ಕೃಷಿ, ಪಶು ಸಂಗೋಪನಾ, ಅರಣ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ತೋಟಗಾರಿಕೆ, ಮೆಸ್ಕಾಂ ಹಾಗೂ ಬ್ಯಾಂಕಿಂಗ್ ಇಲಾಖೆಯ ಸಹಭಾಗಿತ್ವದಲ್ಲಿ ನಡೆದ ಬಿಜೂರು ಗ್ರಾಮೋತ್ಸವ ಉದ್ಘಾಟಿಸಿ ಮಾತನಾಡಿದರು. ಸಂಜೀವಿನಿ ಸಂಘದ ಮೂಲಕ ಮಹಿಳಾ ಸಬಲೀಕರಣ ಸಾಧಿಸಲು ಇದೊಂದು ಉತ್ತಮ ಅವಕಾಶ. ಮಹಿಳೆಯರು ಅಗತ್ಯವಾಗಿ ಇದರ ಸದುಪಯೋಗ ಪಡೆದುಕೊಳ್ಳಬೇಕು. ಸಂಜೀವಿನಿ ಕೇವಲ ಹಣಕಾಸಿನ ವ್ಯವಹಾರ ಎಂದು ಕೆಲವರು ತಿಳಿದುಕೊಂಡಿರಬಹುದು ಆದರೆ ಇದೊಂದು ಇತರೇ ಆದಾಯದ ಸ್ವರೂಪವಾಗಿದ್ದು, ಗ್ರಾಮೀಣ ಜೀವನೋಪಾಯಕ್ಕೆ ಆಧಾರವಾಗಿದೆ ಎಂದರು. ಗ್ರಾಪಂ ಉಪಾಧ್ಯಕ ರಂಜಿತ್ ಪೂಜಾರಿ, ಹಿರಿಯರಾದ ರಘುರಾಮ ಶೆಟ್ಟಿ ಬಿಜೂರು, ಉದ್ಯಮಿ ಡಾ. ಗೋವಿಂದ ಬಾಬು ಪೂಜಾರಿ, ಬೈಂದೂರು ಉತ್ಸವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜಿಲ್ಲಾಡಳಿತದ ನಿರ್ದೇಶನದಂತೆ ಬೈಂದೂರು ಉತ್ಸವದ ಪ್ರಯುಕ್ತ ಪ್ರತಿ ಗ್ರಾಮ ಪಂಚಾಯತ್ನಲ್ಲೂ ಗ್ರಾಮೋತ್ಸವ ಆಯೋಜಿಸಿದ್ದು ಇದರ ಮೂಲಕ ವಿವಿಧ ಇಲಾಖೆಗಳ ಯೋಜನೆಗಳ ಮಾಹಿತಿ ಮತ್ತು ಅನುಕೂಲಗಳನ್ನು ನೇರವಾಗಿ ಪಡೆಯುವ ಅವಕಾಶ ದೊರಕಿದಂತಾಗಿದೆ. ಈ ಉತ್ಸವ ಅತ್ಯಂತ ಯಶಸ್ವಿಯಾಗಿ ಪೂರ್ಣಗೊಳ್ಳಲಿ ಹಾಗೂ ಈ ಉತ್ಸವಗಳು ಮನೋರಂಜನೆಯ ಜೊತೆಗೆ ಬೈಂದೂರು ಅಭಿವೃದ್ದಿಗೆ ಮುನ್ನುಡಿ ಆಗಲಿ ಎಂದ ಶಿರೂರು ಗ್ರಾಪಂ ಅಧ್ಯಕ್ಷೆ ನಾಗರತ್ನ ಆಚಾರ್ಯ ಹೇಳಿದರು. ಅವರು ಇಲ್ಲಿನ ಶಿರೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಅವರಣದಲ್ಲಿ ಶಿರೂರು ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಆರೋಗ್ಯ, ಕೃಷಿ, ಪಶು ಸಂಗೋಪನಾ, ಅರಣ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ತೋಟಗಾರಿಕೆ ಹಾಗೂ ಬ್ಯಾಂಕಿಂಗ್ ಇಲಾಖೆಯ ಸಹಭಾಗಿತ್ವದಲ್ಲಿ ಭಾನುವಾರ ನಡೆದ ಶಿರೂರು ಗ್ರಾಮೋತ್ಸವ ಹಾಗೂ ಆರೋಗ್ಯ ಮೇಳ ಉದ್ಘಾಟಿಸಿ ಮಾತನಾಡಿದರು. ಬೈಂದೂರು ಉತ್ಸವದ ಸಂಚಾಲಕ ಗಣೇಶ ಗಾಣಿಗ ಉಪ್ಪುಂದ, ಗ್ರಾಪಂ ಸದಸ್ಯರಾದ ರವೀಂದ್ರ ಶೆಟ್ಟಿ ಆರ್ಮಕ್ಕಿ, ಬಾಬು ಮೊಗೇರ್ ಅಳ್ವೆಗದ್ದೆ, ಉಷಾ ಜನಾರ್ದನ ಗಾಣಿಗ, ಪ್ರೇಮಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಈ ಬಾರಿಯ ಬೈಂದೂರು ಉತ್ಸವದ ಅಂಗವಾಗಿ 43 ಗ್ರಾಪಂನಲ್ಲಿ ಗ್ರಾಮೋತ್ಸವ ನಡೆಸಲಾಗುತ್ತಿದ್ದು, ಆ ಭಾಗದ ಸಂಜೀವಿನಿ ಸ್ವಸಹಾಯ ಗುಂಪಿನ ಮಹಿಳೆಯರು ಆಸಕ್ತಿಯಿಂದ ಭಾಗವಹಿಸಿ ಇಲ್ಲಿ ದೊರಕುವ ಪ್ರಯೋಜನ ಪಡೆಯಬೇಕು ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ಇಲ್ಲಿನ ಹೇರೂರು ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಆರೋಗ್ಯ, ಕೃಷಿ, ಪಶು ಸಂಗೋಪನಾ, ಅರಣ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ತೋಟಗಾರಿಕೆ ಹಾಗೂ ಬ್ಯಾಂಕಿಂಗ್ ಇಲಾಖೆಯ ಸಹಭಾಗಿತ್ವದಲ್ಲಿ ಶುಕ್ರವಾರ ನಡೆದ ಹೇರೂರು ಗ್ರಾಮೋತ್ಸವಕ್ಕೆ ಗೋಪೂಜೆ ಮೂಲಕ ಚಾಲನೆ ನೀಡಿ ಮಾತನಾಡಿದರು. ಬೈಂದೂರು ಉತ್ಸವದಲ್ಲಿ ಸಂಜೀವಿನಿ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ನೂರು ಮಾರಾಟ ಮಳಿಗೆ ಸ್ಥಾಪಿಸುವ ಗುರಿಯನ್ನು ಹೊಂದಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಮಹಿಳೆಯರು ಸಂಭ್ರಮದಿಂದ ಭಾಗವಹಿಸುವುದರ ಮೂಲಕ ಮುಂದಿನ ಗ್ರಾಮೋತ್ಸವವನ್ನು ಸಂಜೀವಿನಿ ಸಂಘಗಳೇ ಮುನ್ನಡೆಸುವಷ್ಟು ಸಶಕ್ತವಾಗಬೇಕು ಎಂದರು. ಹೇರೂರು ಗ್ರಾಪಂ ಅಧ್ಯಕ್ಷೆ ಗೀತಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕ್ರೀಡಾ ಸಾಧಕ ಇಬ್ಬರು ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು.…
