ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ಮತ್ತು ಎನ್.ಸಿ.ಸಿ ಕೆಡೆಟ್ರವರ ಸಹಭಾಗಿತ್ವದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಓಂ ಯೋಗ ವಿದ್ಯಾಮಂದಿರದ ಯೋಗ ಗುರುಗಳಾದ ಬಿ.ಅಣ್ಣಪ್ಪ ಶೆಟ್ಟಿಗಾರ ಮುಖ್ಯ ಅತಿಥಿಗಳಾಗಿ ಆಗಮಿಸಿ, ದೀಪಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು ಹಾಗೂ ವಿದ್ಯಾರ್ಥಿ ಜೀವನದಲ್ಲಿ ಯೋಗವನ್ನು ಅಳವಡಿಸುವಂತೆ ಮಕ್ಕಳಿಗೆ ತಿಳಿಸಿದರು. ಪತಂಜಲಿ ಯೋಗ ವಿದ್ಯಾಕೇಂದ್ರದ ಯೋಗ ಗುರುಗಳಾದ ರಘುವೀರ ನಗರಕರ್ ನ್ನೋರ್ವ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಸಂಸ್ಥೆಯ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕರಾದ ಸುಬ್ರಮಣ್ಯ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗರವರು ಸರ್ವರನ್ನು ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕರಾದ ವಸಂತರವರು ವಂದನಾರ್ಪಣೆಗೈದರು. ದೈಹಿಕ ಶಿಕ್ಷಣ ಶಿಕ್ಷಕರಾದ ನಾಗೇಂದ್ರ ಕಾರ್ಯಕ್ರಮವನ್ನು ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ಎನ್.ಸಿ.ಸಿ ಸ್ಕೌಟ್ಸ್ ಮತ್ತು ಗೈಡ್ಸ್ ರವರಿಂದ ಯೋಗಾಭ್ಯಾಸ ನಡೆಯಿತು. ಸಂಸ್ಥೆಯ ಎಲ್ಲಾ ದೈಹಿಕ ಶಿಕ್ಷಣ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗಿಗಳಾಗಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹಿರಿಯ ನಾಗರಿಕರು ಸಾಮಾಜಿಕ, ದೈಹಿಕ, ಸಾಂಸಾರಿಕ, ಮಾನಸಿಕವಾಗಿ, ದೌರ್ಜನ್ಯ, ಕಿರುಕುಳ, ಹಿಂಸೆ, ಶೋಷಣೆಗೆ ಒಳಗಾಗಿದ್ದಲ್ಲಿ ಅಥವಾ ಕೌಟುಂಬಿಕ ಸಮಸ್ಯೆ, ಮಕ್ಕಳ ಬೇಜವಬ್ದಾರಿತನ, ದುರ್ಬಲತೆ, ಅಸಹಾಯಕತೆ, ಅಭದ್ರತೆ ಮುಂತಾದ ರಕ್ಷಣೆಯಿಲ್ಲದ ಸಂದಿಗ್ಧ ಪರಿಸ್ಥಿತಿಗೆ ಒಳಗಾದ ಸಂದರ್ಭದಲ್ಲಿ ಹಿರಿಯ ನಾಗರಿಕರ ಉಚಿತ ಸಹಾಯವಾಣಿ (ಟೋಲ್ ಫ್ರೀ ನಂಬರ್) 1090 ಅಥವಾ ದೂ.ಸಂಖ್ಯೆ: 0820-2526394 ಅನ್ನು ಸಂಪರ್ಕಿಸಿ ದೂರು ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ, ಬನ್ನಂಜೆ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕೆ ಸನ್ನಿಧಿಗೆ ಸಂಸದ ಬಿ.ವೈ. ರಾಘವೇಂದ್ರ ಅವರು ದಂಪತಿ ಸಮೇತರಾಗಿ, ಶಾಸಕ ಗುರುರಾಜ್ ಗಂಟಿಹೊಳೆ ಕುಟುಂಬದೊಂದಿಗೆ ಹಾಗೂ ಸ್ಥಳೀಯ ಕಾರ್ಯಕರ್ತರೊಂದಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥನೆ ಸಲ್ಲಿಸಿದರು. ಕಳೆದ ವರ್ಷ ಎದುರಾದ ಭೀಕರ ಬರಗಾಲದ ಕಹಿ ನೆನಪು ದೂರವಾಗಿ ಉತ್ತಮ ವರ್ಷಧಾರೆಯ ನಿರೀಕ್ಷೆಯಲ್ಲಿ ರೈತಾಪಿ ವರ್ಗವು ಈಗಾಗಲೇ ಬಿತ್ತನೆಗೆ ಎಲ್ಲಾ ರೀತಿಯ ತಯಾರಿ ಮಾಡಿಕೊಂಡಿದ್ದು ಉತ್ತಮ ಮಳೆಯಾಗುವ ಮೂಲಕ ರೈತರ ಮೊಗದಲ್ಲಿ ಮಂದಹಾಸ ಮೂಡಿ ನಾಡು ಸುಭೀಕ್ಷವಾಗಿರಲಿ ಎಂದು ಪ್ರಾರ್ಥಿಸಲಾಯಿತು. ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ದೇಶದ ಚುಕ್ಕಾಣಿ ಹಿಡಿದಿದ್ದು ಉತ್ತಮ ಆಯುಷ್ಯ ಕೊಟ್ಟು ರಾಷ್ಟ್ರದ ಅಭಿವೃದ್ಧಿಗೆ ಮತ್ತಷ್ಟು ವೇಗ ಕೊಡುವ ಶಕ್ತಿ ನೀಡುವಂತೆ ಹಾಗೂ ನನ್ನ ಲೋಕಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಇನ್ನಷ್ಟು ಬಲ ಕೊಡುವಂತೆ ವಿಶೇಷವಾಗಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಶ್ರೀ ದೀಪಕ್ ಕುಮಾರ್ ಶೆಟ್ಟಿ ಅವರು, ಶ್ರೀ ವೆಂಕಟೇಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಳೆಗಾಲದಲ್ಲಿ ಸಾಮಾನ್ಯವಾಗಿ ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿರುವುದರಿಂದ ಸುತ್ತಮುತ್ತ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಗೂಡಂಗಡಿ ಮಾಲೀಕರು ತಮ್ಮಲ್ಲಿರುವ ಎಳನೀರು ಬೊಂಡವನ್ನು ಅದೇ ದಿನ ವಿಲೇವಾರಿ ಮಾಡಬೇಕು. ಚರಂಡಿಗೆ ಕಸ-ಕಡ್ಡಿ, ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಇತರೆ ಯಾವುದೇ ರೀತಿಯ ತ್ಯಾಜ್ಯಗಳನ್ನು ಎಸೆಯಬಾರದು. ಮನೆಯ ಸುತ್ತಮುತ್ತ ಸ್ವಚ್ಛವಾಗಿಟ್ಟುಕೊಳ್ಳಬೇಕು. ಹೂ ಕುಂಡಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನೀರು ಶೇಖರಣೆ ಮಾಡುವಂತಹ ಪಾತ್ರೆಗಳಲ್ಲಿ ನಿತ್ಯ ನೀರು ಬದಲಾವಣೆ ಮಾಡಬೇಕು ಹಾಗೂ ಸುತ್ತಮುತ್ತ ನಿಂತ ನೀರು ಕಂಡು ಬಂದರೆ ಅವುಗಳನ್ನು ಸರಾಗವಾಗಿ ಹರಿಯಲು ಅನುವು ಮಾಡಿಕೊಡಬೇಕು. ಮಳೆಗಾಲದಲ್ಲಿ ನಿಂತ ನೀರಿನಿಂದ ಸೊಳ್ಳೆಗಳು ಉತ್ಪತ್ತಿಯಾಗುವ ಜೊತೆಗೆ ಅನೇಕ ರೀತಿಯ ಕಾಯಿಲೆಗಳು ದೇಹವನ್ನು ಬಾಧಿಸುವ ಕಾರಣ ಮುಂಜಾಗೃತಾ ಕ್ರಮವಾಗಿ ಆರೋಗ್ಯ ಹಿತದೃಷ್ಟಿಯಿಂದ ಗೃಹೋಪಯೋಗಕ್ಕೆಂದು ನೀರನ್ನು ಶೇಖರಿಸಿಡುವ ಸಿಮೆಂಟ್ ತೊಟ್ಟಿ, ಕಲ್ಲು ಚಪ್ಪಡಿಯಿಂದ ನಿರ್ಮಿಸಿದ ತೊಟ್ಟಿಗಳು, ಡ್ರಂ ಗಳು, ಬ್ಯಾರಲ್, ಮಡಕೆ ಮುಂತಾದ ಮೂಲಗಳಲ್ಲಿ ನೀರಿನ ಶೇಖರಣೆ ವೇಳೆ ಮುಂಜಾಗ್ರತೆ ವಹಿಸಬೇಕು. ನೀರು ಸಂಗ್ರಹವಾಗುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಉಡುಪಿ ಆಯುಷ್ ಇಲಾಖೆ, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕುಂದಾಪುರ ತಾಲೂಕು ಆರೋಗ್ಯ ಅಧಿಕಾರಿಗಳ ಕಛೇರಿ, ತಾಲೂಕು ಸರಕಾರಿ ಆಯುಷ್ ಆಸ್ಪತ್ರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ, 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ “ಯೋಗೋತ್ಸವ – ಪೂರ್ವಿಭಾವಿ ಯೋಗ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕುಂದಾಪುರ ತಾಲೂಕು ಆರೋಗ್ಯ ಅಧಿಕಾರಿ ಡಾ. ಪ್ರೇಮಾನಂದ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿ, ಮಹಿಳೆಯರ ಆರೋಗ್ಯದಲ್ಲಿ ಯೋಗದ ಮಹತ್ವದ ಬಗ್ಗೆ ತಿಳಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕುಂದಾಪುರ ಲಯನ್ಸ್ ಕ್ಲಬ್ ಅಮೃತಧಾರದ ಅಧ್ಯಕ್ಷರಾದ ಆಶಾ ಶಿವರಾಂ ಶೆಟ್ಟಿ, ಆಯುರ್ವೇದ ಆಹಾರ ಪದ್ಧತಿಯ ಬಗ್ಗೆ ಮಾಹಿತಿಯನ್ನು ಒಳಗೊಂಡ ಕರಪತ್ರಗಳನ್ನು ಬಿಡುಗಡೆಗೊಳಿಸಿ ಯೋಗದ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ದೀಪರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಯಾದ ತಾಲೂಕು ಸರಕಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಅತಿಥ್ಯದಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ರಾಜ್ಯ ಮಟ್ಟದ) ಕಬಡ್ಡಿ ಪಂದ್ಯಾಟದ ಪುರುಷರ ವಿಭಾಗದಲ್ಲಿ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಹಾಗೂ ಮಹಿಳಾ ವಿಭಾಗದಲ್ಲಿ ಉಜಿರೆಯ ಎಸ್ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜುಗಳು ಚಾಂಪಿಯನ್ ಆಗಿವೆ. ಆಳ್ವಾಸ್ ಕಾಲೇಜಿನ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ (ಕೃಷಿ ಸಿರಿ) ಅಂಕಣದಲ್ಲಿ ನಡೆದ ಪುರುಷರ ಫೈನಲ್ನಲ್ಲಿ ಮಂಗಳೂರಿನ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಂಡ್ ರಿಸರ್ಚ್ ಸೆಂಟರ್ ಮಣಿಸಿದ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಪ್ರಶಸ್ತಿ ಎತ್ತಿ ಹಿಡಿಯಿತು. ಮಹಿಳಾ ವಿಭಾಗದಲ್ಲಿ ಬಾಗಲಕೋಟೆಯ ಸೃಜನ ಶ್ರೀ ಇನ್ಸ್ಟಿಟ್ಯೂಟ್ ಆಫ್ ನಸಿಂಗ್ ಸೈನ್ಸಸ್ ಕಾಲೇಜನ್ನು ಮಣಿಸಿದ ಉಜಿರೆಯ ಎಸ್ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜು ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಆತಿಥೇಯ ಆಳ್ವಾಸ್ ಪ್ರಕೃತಿ ಚಿಕಿತ್ಸಾ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ಇದರ ಸುವರ್ಣ ಮಹೋತ್ಸವ-೨೦೨೪ರ ನೆನಪಿಗಾಗಿ ನಿರ್ಮಿಸಲಾಗುತ್ತಿರುವ ಶ್ರೀ ಶಾರದಾ ಮಂಟಪದ ಮುಖ್ಯ ದ್ವಾರ ಮಂಟಪ ಮತ್ತು ಮೇಲಂಸ್ತಿನ ಕೊಠಡಿ ನಿರ್ಮಾಣ ಕಾರ್ಯಕ್ಕೆ ಸಮಿತಿಯ ಅಧ್ಯಕ್ಷ ಸತೀಶ ಜಿ. ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಶ್ರೀ ಶಾರದಾ ದೇವಿಗೆ ಬೆಳ್ಳಿಯ ವೀಣೆ, ಬೆಳ್ಳಿಯ ತ್ರಿಶೂಲ ಹಾಗೂ ಬೆಳ್ಳಿಯ ಕಿರೀಟ ನಿರ್ಮಾಣ ಮತ್ತು ಹತ್ತು ದಿನಗಳ ದಸರಾ ಆಚರಣೆ ಸಲುವಾಗಿ ಸುಮಾರು ೪೦ ಲಕ್ಷ ರೂ. ನೀಲಿನಕ್ಷೆಯನ್ನು ಸಿದ್ಧಪಡಿಸಲಾಗಿದೆ. ಶ್ರೀ ಶಾರದಾ ಮಂಟಪದ ಮುಖ್ಯ ದ್ವಾರ ಮಂಟಪ ಹಾಗೂ ಮೇಲಂಸ್ತಿನ ಕೊಠಡಿ ನಿರ್ಮಾಣಕ್ಕೆ ಸುಮಾರು ೧೨ ಲಕ್ಷ ವೆಚ್ಚ ತಗಲಲಿದ್ದು, ದಾನಿಗಳು ಹಾಗೂ ಭಕ್ತರ ನೆರವಿನ ನಿರೀಕ್ಷೆಯಿಂದ ಈ ಮಹತ್ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು. ಪ್ರಧಾನ ಅರ್ಚಕ ಜಿ.ರಾಘವೇಂದ್ರ ನಾರಾಯಣ ಆಚಾರ್ಯ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಸಮಿತಿಯ ಗೌರವಾಧ್ಯಕ್ಷ ಬಿ.ಲಕ್ಷ್ಮೀಕಾಂತ ಮಡಿವಾಳ, ಪ್ರಧಾನ ಕಾರ್ಯದರ್ಶಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 10 ಕೆ ಡಬ್ಲಿಯೂ ಸಾಮರ್ಥ್ಯದ ಸೋಲಾರ್ ಪವರ್ ಪ್ಲಾಂಟ್ ಉದ್ಘಾಟನಾ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು. ಸೋಲಾರ್ ಪವರ್ ಪ್ಲಾಂಟ್ನ ಉದ್ಘಾಟನೆಯನ್ನು ಕೆನರಾ ಬ್ಯಾಂಕ್ ಮಾಜಿ ನಿರ್ದೇಶಕ ಬಿ. ಸುಧಾಕರ ಶೆಟ್ಟಿ ಅವರು ನೆರವೆರಿಸಿದರು. ಕಾಲೇಜಿನಲ್ಲಿ ಹೊಸದಾಗಿ ಅಳವಡಿಸಿರುವ ಬ್ಯಾಟರಿ ರೂಮ್ ಹಾಗೂ ನವೀಕೃತಗೊಂಡಂತಹ ಸುಸಜ್ಜಿತ ಕಂಪ್ಯೂಟರ್ ಲ್ಯಾಬನ್ನು ಖಂಬದಕೋಣೆ ರೈತ ಸೇವಾ ಸಂಘದ ಅಧ್ಯಕ್ಷರಾದ ಪ್ರಕಾಶಚಂದ್ರ ಶೆಟ್ಟಿ ಹಾಗೂ ಉಪ್ಪುಂದ ಸುಮುಖ ಎಂಟರ್ಪ್ರೈಸಸ್ ಮ್ಯಾನೇಜಿಂಗ್ ಡೈರೆಕ್ಟರ್ ಬಿ.ಎಸ್ ಸುರೇಶ ಶೆಟ್ಟಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಕಾಲೇಜು ಅಭಿವೃಧ್ಧಿ ಸಮಿತಿ ಸದಸ್ಯರಾದ ಎಸ್ ರಾಜು ಪೂಜಾರಿ, ಕಾಲೇಜು ಅಭಿವೃಧ್ಧಿ ಸಮಿತಿ ಸದಸ್ಯರಾದ ಮಂಜುನಾಥ ಬಿಲ್ಲವ,ಐ ನಾರಾಯಣ,ನಾಗರಾಜ ಉಪ್ಪುಂದ,ಎಸ್ ಮಣಿಕಂಠ ದೇವಾಡಿಗ, ಉದ್ಯಮಿ ಹರೀಶ್ ಶ್ರಿಯಾನ್, ಪತ್ರಕರ್ತ ಅರುಣ ಕುಮಾರ್ ಶಿರೂರು, ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ಶೆಟ್ಟಿ, ಐಟಿ ಸೆಲ್ನ ಸಂಚಾಲಕರಾದ ಡಾ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ.) ಉಪ್ಪುಂದ ವತಿಯಿಂದ ವಂಡ್ಸೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ಗೆ ಸ್ಮಾರ್ಟ್ ಕ್ಲಾಸ್ ಕೊಡಗೆಯಾಗಿ ನೀಡಲಾಯಿತು. ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ, ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರು ಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿ ಮಾತನಾಡಿ, ಸರಕಾರಿ ಶಾಲೆಯ ಮಕ್ಕಳು ಕೂಡ ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಸಾಕಷ್ಟು ಸರಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮತ್ತು ಇತರೆ ಕೊಡುಗೆ ನೀಡುತ್ತಾ ಬರುತ್ತಿದ್ದೇವೆ. ವಿದ್ಯಾರ್ಥಿಗಳು ಸ್ಮಾರ್ಟ್ ಕ್ಲಾಸ್ ಸದುಪಯೋಗಪಡಿಸಿಕೊಂಡು ಪ್ರತಿಯೊಬ್ಬ ವಿದ್ಯಾರ್ಥಿಗಳು ದೇಶದ ಹೆಮ್ಮೆಯ ಪ್ರಜೆಗಳಾಗಿ ಹೊರಬರಲಿ ಎಂದರು. ಈ ಸಂದರ್ಭ ಗೋವಿಂದ ಬಾಬು ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಅತಿಥಿಗಳಾಗಿ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಗುರು ಸೋಮಯಾಜಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ ಕುಮಾರ್ ಶೆಟ್ಟಿ,ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೀವ ಶೆಟ್ಟಿ,ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ನ ನಾಗರಾಜ ಪಿ.ಯಡ್ತರೆ, ವಂಡ್ಸೆ ಸರಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ರಾಜೀವ ನಾಯ್ಕ, ಎಸ್.ಡಿ.ಎಮ್.ಸಿ ಸದಸ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಂಬಂಧಿಕರ ಮನೆಯ ಮದುವೆ ಕಾರ್ಯಕ್ರಮಕ್ಕೆ ತಿಪಟೂರಿನಿಂದ ಬಂದಿದ್ದ ಇಬ್ಬರು ವಿದ್ಯಾರ್ಥಿಗಳು ಬುಧವಾರ ಸಂಜೆ ಬಿಜಾಡಿ ಗ್ರಾಮದಲ್ಲಿ ಸಮುದ್ರಕ್ಕಿಳಿದಿದ್ದು ಒಬ್ಬ ನಾಪತ್ತೆಯಾಗಿದ್ದಾನೆ. ತಿಪಟೂರಿನ ನಿವಾಸಿ ಯೋಗೀಶ್ (23) ಸಮುದ್ರದಲ್ಲಿ ಕೊಚ್ಚಿಹೋಗಿ ನಾಪತ್ತೆಯಾದ ವಿದ್ಯಾರ್ಥಿ. ಯೋಗೀಶನ ಸ್ನೇಹಿತ ಸಂದೀಪನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ತಿಪಟೂರಿನಲ್ಲಿ ಐಟಿಐ ವ್ಯಾಸಂಗ ಮಾಡುತ್ತಿದ್ದ ಯೋಗೀಶ್ ಹಾಗೂ ಸಂದೀಪ್ ಕುಂದಾಪುರದ ಸಂಬಂಧಿಕರ ಮನೆಗೆ ಮದುವೆ ಕಾರ್ಯಕ್ರಮಕ್ಕೆಂದು ಬಂದಿದ್ದರು. ಬುಧವಾರ ಸಂಜೆ ಬೀಜಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾರಸ್ ಮನೆ ಸಮೀಪದ ಕಡಲತೀರದಲ್ಲಿ ನಡೆದುಕೊಂಡು ಹೋಗುತ್ತಿದ್ದು. ನೀರಿನ ಅಲೆಗಳನ್ನು ಕಂಡ ಯುವಕರು ಸಮುದ್ರಕ್ಕೆ ಇಳಿದಿದ್ದಾರೆ ಎನ್ನಲಾಗಿದೆ. ► ಎದೆ ಹಾಲು ಕುಡಿದ ಕೆಲಹೊತ್ತಿನಲ್ಲಿ ಹಸುಗೂಸು ಸಾವು- https://kundapraa.com/?p=73312 . ನೀರಿಗಿಳಿದ ಸಂದರ್ಭ ಅಲೆಗಳ ಹೊಡೆತಕ್ಕೆ ಯೋಗೀಶ್ ಕೊಚ್ಚಿ ಹೋಗುತ್ತಿದ್ದ ಸಂದರ್ಭ ಸಂದೀಪ ಕಾಪಾಡಲು ಹೋದರು ಕೂಡ ತೀವ್ರ ತರಹದ ಅಲೆಗಳ ಆರ್ಭಟ ಇದ್ದಿದ್ದರಿಂದ ಏನೂ ಮಾಡಲು ಸಾಧ್ಯವಾಗದೇ ಬೊಬ್ಬೆ ಹಾಕಿದ್ದಾನೆ. ಯುವಕನ ಬೊಬ್ಬೆ ಕೇಳಿದ ತಕ್ಷಣ…
