Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕಾರ್ಕಳ: 2023-24 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿಗೆ ಸತತ ಮೂರನೇ ವರ್ಷವೂ ಶೇ. 100 ಫಲಿತಾಂಶ ದೊರಕಿದೆ. ಪರೀಕ್ಷೆಗೆ ಕುಳಿತ ಎಲ್ಲಾ 582 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲೇ ತೇರ್ಗಡೆ ಹೊಂದುವ ಮೂಲಕ ವಿಶೇಷ ಸಾಧನೆಗೈದಿದ್ದಾರೆ. ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಸಿಂಚನ ಆರ್‌. ಹೆಚ್ 592 ಅಂಕಗಳೊಂದಿಗೆ ರಾಜ್ಯಕ್ಕೆ 7ನೇ ರ‍್ಯಾಂಕ್‌ , ಹಂಸಿನಿ ವಿ 591 ಅಂಕಗಳೊಂದಿಗೆ ರಾಜ್ಯಕ್ಕೆ 8ನೇ ರ‍್ಯಾಂಕ್‌, ಸುಜಿತ್‌ ಡಿ. ಕೆ 591 ಅಂಕಗಳೊಂದಿಗೆ ರಾಜ್ಯಕ್ಕೆ 8ನೇ ರ‍್ಯಾಂಕ್‌, ಸಮೀಕ್ಷಾ ಎಸ್‌ 591 ಅಂಕಗಳೊಂದಿಗೆ ರಾಜ್ಯಕ್ಕೆ 8ನೇ ರ‍್ಯಾಂಕ್‌, ಪ್ರೇಮ್‌ ಸಾಗರ್‌ ಪಟೀಲ್‌ 589 ಅಂಕಗಳೊಂದಿಗೆ ರಾಜ್ಯಕ್ಕೆ 10 ನೇ ರ‍್ಯಾಂಕ್‌, ವರ್ಷ ಹೆಚ್. ವಿ 589 ಅಂಕಗಳೊಂದಿಗೆ ರಾಜ್ಯಕ್ಕೆ 10 ನೇ ರ‍್ಯಾಂಕ್‌ ಗಳಿಸಿದ್ದಾರೆ. ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಸಾನ್ವಿ ರಾವ್‌ 595 ಅಂಕಗಳೊಂದಿಗೆ ರಾಜ್ಯಕ್ಕೆ 3ನೇ ಸ್ಥಾನ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಶಂಕರನಾರಾಯಣ ಮದರ್ ತೆರೆಸಾ ಪದವಿ ಪೂರ್ವ ವಿದ್ಯಾರ್ಥಿಗಳು 2023-24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದ್ದಾರೆ. ವಾಣಿಜ್ಯ ವಿಭಾಗದ ಒಟ್ಟು 50 ವಿದ್ಯಾರ್ಥಿಗಳಲ್ಲಿ 33 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ವಿಜ್ಞಾನ ವಿಭಾಗದ 86 ವಿದ್ಯಾರ್ಥಿಗಳಲ್ಲಿ 59 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 27 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ 588 ಅಂಕಗಳನ್ನು ಗಳಿಸುವ ಮೂಲಕ ಸಾತ್ವಿಕ್ ವಿ ಶೆಟ್ಟಿ ರಾಜ್ಯಕ್ಕೆ ಹತ್ತನೇ ಸ್ಥಾನವನ್ನು ಮತ್ತು ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾನೆ. 581 ಅಂಕಗಳನ್ನು ಗಳಿಸುವ ಮೂಲಕ ಅನನ್ಯ ಶೆಟ್ಟಿ ಹಾಗೂ ಆಯೇಷ ಸಮನ್ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಇವರಿಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿ ಜನತಾ ಸ್ವತಂತ್ರ ಪಿಯು ಕಾಲೇಜಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ 100 ಪ್ರತಿಶತ ಫಲಿತಾಂಶ ದಾಖಲಿಸಿದ್ದಾರೆ. 386 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 226 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, (ಡಿಸ್ಟ್ರಿಂಕ್ಷನ್) ಉತ್ತೀರ್ಣರಾಗಿದ್ದು, ಈ ವಿದ್ಯಾರ್ಥಿಗಳು ಅತ್ಯದಿಕ ಅಂಕಗಳನ್ನು ಪಡೆದು ಸಾಧನೆ ಮೆರೆದಿದ್ದಾರೆ. ಕಾಲೇಜು ಆರಂಭಗೊಂಡ 2ನೇ ವರ್ಷದಲ್ಲಿಯೇ ಉತ್ತಮ ದಾಖಲಾತಿ ಹೊಂದಿರುವುದಲ್ಲದೇ ಫಲಿತಾಂಶದಲ್ಲಿಯೂ ಉತ್ತಮ ಸಾಧನೆ ಮಾಡಿರುವುದು ಖುಷಿ ತಂದಿದೆ. ಶೈಕ್ಷಣಿಕ ಚಟುವಟಿಕೆಗಳೊಂದಿಗೆ ಕ್ರೀಡೆ, ಕಲೆ, ಸಾಹಿತ್ಯ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡುತ್ತಿರುವುದು ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಪೂರಕವಾಗಿದೆ ಎಂದು ಕಾಲೇಜಿನ ಆಡಳಿತ ಮಂಡಳಿ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮಾ.10: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದುಪ್ರಕಟಗೊಂಡಿದೆ. ದ್ವಿತೀಯ ಪಿಯು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ ದೊರೆತಿದೆ. ಶೇ 97ರಷ್ಟು ತೇರ್ಗಡೆಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಪಡೆದಿದೆ. ಶೇ 96.80 ರಷ್ಟು ಮಂದಿ ಉತ್ತೀರ್ಣರಾಗುವುದರೊಂದಿಗೆ ಉಡುಪಿ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಶೇ 94.89ರಷ್ಟು ಫಲಿತಾಂಶದೊಂದಿಗೆ ವಿಜಯಪುರ ಜಿಲ್ಲೆ 3ನೇ ಸ್ಥಾನದಲ್ಲಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ. ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳ ಪೈಕಿ 552690 ಮಂದಿ ತೇರ್ಗಡೆಯಾಗಿದ್ದಾರೆ. ವಿದ್ಯಾರ್ಥಿಗಳು ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸುವ ಮೂಲಕ ಪಿಯು ಮಂಡಳಿಯ ಅಧಿಕೃತ ವೆಬ್ಸೈಟ್ karresults.nic.in ಮತ್ತು pue.kar.nic ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ. ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ಪಾಸಾಗಿದ್ದರೆ, ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ಸುರಭಿ ರಿ. ಬೈಂದೂರು ಆಶ್ರಯದಲ್ಲಿ ಆಯೋಜಿಸಲಾಗಿರುವ ರಂಗಸುರಭಿ -2024 ಮೂರು ದಿನಗಳ ರಾಜ್ಯ ಮಟ್ಟದ ನಾಟಕೋತ್ಸವಕ್ಕೆ ಬೈಂದೂರು ಶಾರದಾ ವೇದಿಕೆಯಲ್ಲಿ ಶನಿವಾರ ಚಾಲನೆ ನೀಡಲಾಯಿತು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಸ್ಥಾನದ ವ್ಯವಸ್ಥಾಪನ ಸಮಿತಿಯ ನಿಕಟಪೂರ್ವಾಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ನಾಟಕೋತ್ಸವವನ್ನು ಉದ್ಘಾಟಿಸಿ ಮಾತನಾಡಿ ಕಲೆ ಸಂಸ್ಕೃತಿಯನ್ನು ಜೀವಂತವಾಗಿರಿಸಿಕೊಳ್ಳುವುದು ಬಹುಮುಖ್ಯ. ಮನುಷ್ಯನ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಗಟ್ಟಿಗೊಳಿಸುವ ಕಲಾ ಪ್ರಕಾರಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಬದುಕಿನಲ್ಲಿಯೂ ಯಶಸ್ಸು ಕಾಣಲು ಸಾಧ್ಯವಿದೆ ಎಂದರು. ಶಿರೂರು ಉದ್ಯಮಿ ರಾಮು ಮೇಸ್ತ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅತಿಥಿಯಾಗಿ ಮರವಂತೆ ಚೇತನಾ ಚಿಕಿತ್ಸಾಲಯದ ಡಾ. ರೂಪಾಶ್ರೀ ಮರವಂತೆ, ಉಪಸ್ಥಿತರಿದ್ದರು. ಈ ಸಂದರ್ಭ ಹಿರಿಯ ರಂಗಕಲಾವಿದ, ನಾಗೂರು ಸಂದೀಪನ್ ಶಾಲೆಯ ಮುಖ್ಯ ಶಿಕ್ಷಕರಾದ ವಿಶ್ವೇಶ್ವರ ಅಡಿಗ ಬಿಜೂರು ಅವರನ್ನು ಸನ್ಮಾನಿಸಲಾಯಿತು. ಸುರಭಿ ಉಪಾಧ್ಯಕ್ಷ ಆನಂದ ಮದ್ದೋಡಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಅಧ್ಯಕ್ಷ ನಾಗರಾಜ ಪಿ ಯಡ್ತರೆ ಸ್ವಾಗತಿಸಿ, ನಿರ್ದೇಶಕ ಸುಧಾಕರ ಪಿ ಬೈಂದೂರು ವಂದಿಸಿದರು. ಪೂರ್ಣಿಮಾ ಆಚಾರ್ ಪ್ರಾರ್ಥಿಸಿ, ರಾಮಕೃಷ್ಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಕೋಟ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಕಾರ್ಯಕರ್ತರ ಸಭೆಗಳಲ್ಲಿ ಭಾಗವಹಿಸಿ ಚುನಾವಣಾ ಪ್ರಚಾರ ನಡೆಸಿದರು. ಈ ವೇಳೆ ಮಾತನಾಡಿದ ಅವರು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಎಲ್ಲಾ ವರ್ಗದ ಜನರ ಅನುಕೂಲವಾಗುವಂತಹ ಯೋಜನೆಗಳ ಮೂಲಕ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದೆ. ಗ್ಯಾರಂಟಿ ಯೋಜನೆಗಳು ಇಂದು ಪ್ರತಿಯೊಬ್ಬರ ಮನೆಗೆ ತಲುಪಿದ್ದು ಪ್ರತಿ ತಿಂಗಳು ಮನೆಯ ಗೃಹಿಣಿಯರು, ಯುವಕರು, ವಿದ್ಯಾರ್ಥಿಗಳಿಗೆ ಸಹಕಾರಿಯಾಗಿದೆ. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿಲ್ಲ ಎಂದು ಬಿಜೆಪಿಗರು ಧರಣಿ ನಡೆಸಿದರು ಜಾರಿಗೆ ತಂದ ಬಳಿಕ ರಾಜ್ಯ ದಿವಾಳಿಯಾಗುತ್ತಿದೆ ಎಂಬ ವಾದವನ್ನು ಮುಂದಿಡುತ್ತಿದ್ದಾರೆ. ದೇಶದ ವಿವಿಧ ಉದ್ಯಮಿಗಳ ಕೋಟ್ಯಾಂತರ ಮೊತ್ತದ ಸಾಲವನ್ನು ಮನ್ನಾ ಮಾಡಿದಾಗ ದೇಶ ದಿವಾಳಿಯಾಗುವುದಿಲ್ಲವೇ ಎಂದು ಪ್ರಶ್ನಿಸಿದರು. ತಾನು ಕೂಡ ಮೀನುಗಾರಿಕಾ ಸಚಿವನಾಗಿ ಕೆಲಸ ಮಾಡಿದ್ದು ನನ್ನ ಪ್ರತಿಸ್ಪರ್ಧಿ ಅಭ್ಯರ್ಥಿ ಕೂಡ ಅದೇ ಖಾತೆಯನ್ನು ನಿರ್ವಹಿಸಿದ್ದರು. ಜನರು ಮತ್ತು ಕಾರ್ಯಕರ್ತರು ಇಬ್ಬರ ಕೆಲಸವನ್ನು ತುಲನೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಶಿವಮೊಗ್ಗ ಲೋಕಸಭಾ ಚುನಾವಣಾ ಕಣ ರಂಗೇರುತಿದ್ದು ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ ಗಂಟಿಹೊಳೆ ಅವರು ‘ಬೂತ್ ಕಡೆಗೆ ಸಮೃದ್ಧ ನಡಿಗೆ’ ವಿಶೇಷ ಕಾರ್ಯಕ್ರಮದ ಮೂಲಕ ಮತ ಶಿಖಾರಿ ಆರಂಭಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು ನಿರೀಕ್ಷೆಗೂ ಮೀರಿದ ಅಂತರದಲ್ಲಿ ಜಯ ಸಾಧಿಸಬೇಕು. ಬೈಂದೂರು ವಿಧಾನಸಭಾ ಕ್ಷೇತ್ರದಿಂದಲೇ ಕನಿಷ್ಠ 1 ಲಕ್ಷಕ್ಕೂ ಅಧಿಕ ಲೀಡ್ ನೀಡಬೇಕು ಎನ್ನುವ ನಿರ್ಣಯದಂತೆ ಸಂಘಟನಾತ್ಮಕ ಪ್ರಚಾರ ಪ್ರಕ್ರಿಯೆ ಆರಂಭವಾಗಿದೆ. ಪ್ರತಿ ಬೂತ್ ನಲ್ಲೂ ಕಾರ್ಯಕರ್ತರನ್ನು ಭೇಟಿಯಾಗಿ ಬೂತ್ ನ ಪ್ರತಿ ಮನೆಯ ಎಲ್ಲ ಮತಗಳನ್ನು ಬಿಜೆಪಿ ಅಭ್ಯರ್ಥಿಗೆ ಬರುವಂತೆ ಮಾಡುವುದು, ಮನೆ ಮನೆ ಭೇಟಿ ನೀಡಬೇಕು. ಆ ಮೂಲಕ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿಯನ್ನಾಗಿಸಬೇಕು ಎಂಬ ಸಂದೇಶವನ್ನು ಬೂತ್ ನಡಿಗೆಯಲ್ಲಿ ಕಾರ್ಯಕರ್ತರಿಗೆ ಮನದಟ್ಟು ಮಾಡುತ್ತಿದ್ದಾರೆ. ರಾಷ್ಟ್ರೀಯತೆ, ಹಿಂದುತ್ವ ಹಾಗೂ ಕೇಂದ್ರ ಸರಕಾರದ ಅಭಿವೃದ್ಧಿ ಕಾರ್ಯ, ಸಂಸದರಾಗಿ ಬಿ.ವೈ.ರಾಘವೇಂದ್ರ ಅವರು ಮಾಡಿರುವ ಅಭಿವೃದ್ಧಿ ಕಾರ್ಯ,…

Read More

ಕುಂದಾಪ್ರ ಡಾ.ಕಾಂ ಸುದ್ದಿಬೈಂದೂರು: ಸುರಭಿ ರಿ. ಬೈಂದೂರು ಆಶ್ರಯದಲ್ಲಿ ಪ್ರತಿವರ್ಷದಂತೆ ಆಯೋಜಿಸಲಾಗುವ ರಂಗಸುರಭಿ -2024 ರಾಜ್ಯ ಮಟ್ಟದ ನಾಟಕೋತ್ಸವ ಏ. 06 ರಿಂದ 08ರ ತನಕ ಬೈಂದೂರು ಶಾರದಾ ವೇದಿಕೆಯಲ್ಲಿ ಪ್ರತಿದಿನ ಸಂಜೆ 6-30ಕ್ಕೆ ಜರುಗಲಿದೆ. ಎ.06ರ ಶನಿವಾರ ನಾಟಕೋತ್ಸವವನ್ನು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಸ್ಥಾನದ ವ್ಯವಸ್ಥಾಪನ ಸಮಿತಿ ನಿಕಟಪೂರ್ವಾಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೈಂದೂರು ಶ್ರೀರಾಮ ವಿವಿದ್ದೊದ್ಧೇಶ ಟ್ರಸ್ಟ್ ಆಡಳಿತ ಟ್ರಸ್ಟಿ ಬಿ. ರಾಮಕೃಷ್ಣ ಶೇರೆಗಾರ್ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಿರೂರು ಉದ್ಯಮಿಯಾದ ರಾಮು ಮೇಸ್ತ , ಮರವಂತೆಯ ಚೇತನಾ ಚಿಕಿತ್ಸಾಲಯ ಡಾ| ರೂಪಾಶ್ರಿ ಮರವಂತೆ , ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷರಾದ ಪ್ರಸಾದ್ ಪ್ರಭು ಇನ್ನಿತರು ಉಪಸ್ಥಿತರಿದ್ದಾರೆ. ಅಂದು ಹಿರಿಯ ರಂಗ ಕಲಾವಿದ, ನಾಗೂರು ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ವಿಶ್ವೇಶ್ವರ ಅಡಿಗ ಬಿಜೂರು ಅವರನ್ನು ಸನ್ಮಾನಿಸಲಾಗುವುದು. ಅಸ್ತಿತ್ವ ಮಂಗಳೂರು ಅಭಿನಯದ, ವೈಕಂ ಮಹಮ್ಮದ್ ಬಶೀರ್ ಅವರ ಕಥೆ ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗಂಗೊಳ್ಳಿಯ ಜಾಮೀಯಾ ಕಾಂಪ್ಲೆಕ್ಸ್ನಲ್ಲಿರುವ ಬಟ್ಟೆ ಅಂಗಡಿಯಲ್ಲಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನುಕಳ್ಳತನ ನಡೆದ 48 ಗಂಟೆಯೊಳಗೆ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗಂಗೊಳ್ಳಿಯ ಸುಲ್ತಾನ್ ಮೊಹಲ್ಲಾ ನಿವಾಸಿ ನದೀಮ್ (27), ಗಂಗೊಳ್ಳಿಯ ಜಾಮೀಯಾ ಮೊಹಲ್ಲಾ ನಿವಾಸಿ ಆರೀಫ್(18), ಭಟ್ಕಳದ ಚೌಥನಿ ರಸ್ತೆ ಸಮೀಪದ ನಿವಾಸಿ ರಯ್ಯಾನ್(18) ಬಂಧಿತ ಆರೋಪಿಗಳು. ಅಲ್ಲದೇ ಇಬ್ಬರು ಅಪ್ರಾಪ್ತ ಬಾಲಕರು ಕಳ್ಳತನದಲ್ಲಿ ಭಾಗಿಯಾಗಿದ್ದಾರೆ. ಬಂಧಿತರಿಂದ ಮೊಬೈಲ್ ಫೋನ್, 52,000ರೂ. ನಗದು ಹಾಗೂ ಒಂದು ಬೈಕ್, ಒಂದು ಆಟೋರಿಕ್ಷಾವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಗಂಗೊಳ್ಳಿಯ ಜೆ.ಎಮ್ ರೋಡ್ ನಿವಾಸಿ ರಿಝ್ವಾನ್ ಎಂಬವರ ಎಂ.ಎಂ. ಕಲೆಕ್ಷನ್ ಬಟ್ಟೆ ಹಾಗೂ ಫ್ಯಾನ್ಸಿ ಅಂಗಡಿಗೆ ಮಾ.31ರ ಸಂಜೆ ನುಗ್ಗಿದ ಆರೋಪಿಗಳು ಅಂಗಡಿಯ ಕ್ಯಾಶ್ ಕೌಂಟರ್ನಲ್ಲಿದ್ದ 90,000ರೂ. ನಗದು ಹಾಗೂ ಮೊಬೈಲ್ ಫೋನ್ ಕಳವು ಮಾಡಿ ಪರಾರಿಯಾಗಿದ್ದರು. ರಿಝ್ವಾನ್ ಹಾಗೂ ಸಿಬ್ಬಂದಿ ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಅಂಗಡಿಗೆ ವಾಪಾಸ್ಸು ಬಂದು ನೋಡಿದಾಗ ಈ ಕಳವು ಪ್ರಕರಣ ಬೆಳಕಿಗೆ ಬಂದಿದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹಿಂದೆ ಕೇವಲ 20 ತಿಂಗಳ ಕಾಲ ಸಂಸದನಾಗಿ ಕಾರ್ಯನಿರ್ವಹಿಸಿದ್ದ ಸಂದರ್ಭದಲ್ಲಿ ಜಾರಿಗೊಳಿಸಿದ್ದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪೂರ್ಣಗೊಳಿಸುವುದರೊಂದಿಗೆ ಈ ಬಾರಿಯ ಚುನಾವಣೆಯಲ್ಲಿ ಒಂದು ಅವಕಾಶವನ್ನು ನೀಡಿ. ಮನೆ ಮನೆಗೆ ಭೇಟಿ ನೀಡಿ ಮತ ಕೇಳುವ ವೇಳೆ ಅಭಿವೃದ್ಧಿ ಮತ್ತು ಸಿದ್ದರಾಮಯ್ಯ ನೇತೃತ್ವದ ಉತ್ತಮ ಕಾರ್ಯಗಳ ಕುರಿತು ಜನರಿಗೆ ಮನವರಿಕೆ ಮಾಡಿಕೊಡುವಂತೆ ಉಡುಪಿ – ಚಿಕ್ಕಮಗಳೂರು ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ ಹೆಗ್ಡೆ ಪಕ್ಷ ಕಾರ್ಯಕರ್ತರಲ್ಲಿ ಮನವಿ ಮಾಡಿದರು. ಅವರು ಬುಧವಾರ ನಾಮಪತ್ರ ಸಲ್ಲಿಕೆಗೂ ಮುನ್ನ ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ನಡೆದ ಪಕ್ಷ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು. ಕಳೆದ ಬಾರಿ ಸಂಸದನಾಗಿ 20 ತಿಂಗಳುಗಳ ಕಾಲ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ ತೃಪ್ತಿ ನನಗಿದೆ. ಆಸ್ಕರ್ ಫೆರ್ನಾಂಡಿಸ್ ಭೂ ಸಾರಿಗೆ ಸಚಿವರಾಗಿದ್ದ ವೇಳೆ ಮಲ್ಪೆ – ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ, ಕಡೂರು, ಚಿಕ್ಕಮಗಳೂರು, ಮೂಡಿಗೆರೆ ಬಿಸಿರೋಡ್ ರಾಷ್ಟ್ರೀಯ ಹೆದ್ದಾರಿ, ತುಮಕೂರಿನಿಂದ ಶಿವಮೊಗ್ಗಕ್ಕೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಅನುಮೋದನೆ…

Read More