ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯಾವುದೇ ಕ್ಷೇತ್ರ ಹಾಗೂ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪೂರಕ ಅಧಿವೇಶನವೆಂದರೆ ಅದು ಬಜೆಟ್ ಅಧಿವೇಶನ. ಆದರೆ ಈ ಭಾರಿಯ ಬಜೆಟ್ ಅಧಿವೇಶನದಲ್ಲಿ ಉಡುಪಿ ಜಿಲ್ಲೆಯ ಶಾಸಕರುಗಳ ಸಾಧನೆ ಶೂನ್ಯ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಆರೋಪಿಸಿದ್ದಾರೆ. ವಿರೋಧ ಪಕ್ಷದ ಶಾಸಕರಾದರೂ ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ಸರ್ಕಾರಕ್ಕೆ ತಮ್ಮ ಕ್ಷೇತ್ರದ ಹಾಗೂ ಜಿಲ್ಲೆಯ ಅತೀ ಅವಶ್ಯಕತೆಗಳ ಬಗ್ಗೆ ಗಮನಕ್ಕೆ ತಂದು ಅದನ್ನು ಮುಖ್ಯಮಂತ್ರಿಗಳ ಬಜೆಟ್ ಮೇಲಿನ ವಂದನಾ ಭಾಷಣದಲ್ಲಿ ಸೇರಿಸುವಲ್ಲಿ ಶ್ರಮವಹಿಸುವುದು ಹಿಂದಿನಿಂದ ನಡೆದು ಬಂದ ಕ್ರಮ. ಆದರೆ ಜಿಲ್ಲೆಯ ಶಾಸಕರು ಬಜೆಟ್ ಅಧಿವೇಶನವನ್ನು ಕೇವಲ ಪ್ರಚಾರ ಹಾಗೂ ರಾಜಕಾರಣಕ್ಕೆ ಬಳಸಿಕೊಂಡದ್ದು ಅವರ ಕ್ಷೇತ್ರ ಹಾಗೂ ಜಿಲ್ಲೆಗೆ ಮಾಡಿದ ಅನ್ಯಾಯ. ವಿಧಾನಸಭೆಯ ಕಾರ್ಯ ಕಲಾಪಗಳಲ್ಲಿ ಸಕ್ರಿಯ ಭಾಗವಹಿಸುವುದರ ಮೂಲಕ ಸದನದ ನೀತಿ, ನಿಯಮಗಳನ್ನು ಕಲಿಯ ಬೇಕಾದ ನೂತನ ಶಾಸಕರುಗಳು ಅದನ್ನು ಮಾಡದೆ ಕಾಗದ ಪತ್ರಗಳನ್ನು ಗೌರವಾನ್ವಿತ ವಿಧಾನಸಭಾ ಅಧ್ಯಕ್ಷರ ಪೀಠದ ಮೇಲೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ (Freshers day) ಹಾಗೂ ಕಳೆದ ಶೈಕ್ಷಣಿಕ ಸಾಲಿನ ದ್ವಿತೀಯ ಪಿ.ಯು.ಸಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವನ್ನು ಕುಂದಾಪುರದ ಮೊಗವೀರ ಭವನದಲ್ಲಿ ಆಯೋಜಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ ಕುಂದಾಪುರದ ಆದರ್ಶ ಆಸ್ಪತ್ರೆಯ ಎಮ್.ಡಿ.ಡಾ|ಆದರ್ಶ ಹೆಬ್ಬಾರ್ ಅವರು ಮಾತನಾಡಿ ಶಿಕ್ಷಣ, ಕ್ರೀಡೆ, ಕಲೆ, ಸಾಹಿತ್ಯದ ಸಂಗಮವೇ ನಿಜವಾದ ಶಿಕ್ಷಣ ವಿದ್ಯಾರ್ಥಿಗಳು ಸರ್ವತೋಮುಖ ಬೆಳವಣಿಗೆಯಾಗಬೇಕೆಂದು ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಾವರದ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಸುಬ್ರಹ್ಮಣ್ಯರವರು ಮಾತನಾಡಿ ಸ್ಪರ್ಧಾತ್ಮಕ ಯುಗದಲ್ಲಿ ಜನತಾ ಕಾಲೇಜಿನ ಶೈಕ್ಷಣಿಕ ಕೊಡುಗೆ ಅತೀ ಅಮೂಲ್ಯವಾದದ್ದು ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಸದ್ಬಳಕೆ ಮಾಡಿಕೊಂಡು ಉತ್ತಮ ನಾಗರೀಕರಾಗಿ ಹೊರಹೊಮ್ಮಿ ಎಂದು ಶುಭ ಹಾರೈಸಿದರು. ಕಾಲೇಜಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಖಾಸಗಿ ವಿಡಿಯೋ ಸೆರೆಹಿಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಕಛೇರಿಯಿಂದ ಮೂಲಕ ಉಡುಪಿ ಸಿಟಿ ಬಸ್ ನಿಲ್ದಾಣದ ಮೂಲಕ ಬನ್ನಂಜೆ ಎಸ್.ಪಿ. ಕಚೇರಿ ತನಕ ಶುಕ್ರವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಬಳಿಕ ಪ್ರತಿಭಟನಾ ಸಭೆ ನಡೆಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಮನವಿಯನ್ನು ಸಲ್ಲಿಸಿದರು. ಈ ವೇಳೆ ಜಿಲ್ಲಾ ಬಿಜೆಪಿ ಕಚೇರಿ ಬಳಿಯಿಂದ ಬನ್ನಂಜೆಯ ಎಸ್ಪಿ ಕಚೇರಿಯವರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಯಿತು. ಇದೇ ಸಂಧರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಉಡುಪಿ ಶಾಸಕ ಯಶಪಾಲ್ ಸುವರ್ಣ, ಪ್ರಕರಣದಲ್ಲಿ ಪಿಎಫ್ಐ ನಂಟು ಇದೆ. ಪಿಎಫ್ಐ ನಿಷೇಧದ ನಂತರ ಪಿಎಫ್ಐ ಮಹಿಳಾ ಘಟಕ ಸಕ್ರಿಯವಾಗಿರುವ ಬಗ್ಗೆ ಅನುಮಾನವಿದೆ. ಈ ವಿದ್ಯಾರ್ಥಿನಿಯರು ಈ ಕಾರ್ಯಾಚರಣೆಯ ಭಾಗವಾಗಿರಬಹುದು. ರಾಜ್ಯ ಸರ್ಕಾರ ನಡೆಸುತ್ತಿರುವ ತನಿಖೆಯ ಮೇಲೆ ನನಗೆ ವಿಶ್ವಾಸವಿಲ್ಲ. ಪ್ರಕರಣವನ್ನು ಕೇಂದ್ರ ಸರ್ಕಾರಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಸಂಸ್ಕಾರ, ಸಂಸ್ಕೃತಿ ಪಸರಿಸುವ ವಿಶಿಷ್ಟ ಕಲೆ ಯಕ್ಷಗಾನ, ಸರಿ ತಪ್ಪುಗಳ ತರ್ಕಿಸುವ ಶಕ್ತಿ, ಪದಭಂಡಾರ ನಮಗೆ ಶಾಲಾ ಪಠ್ಯದಿಂದ ದೊರೆತದ್ದಲ್ಲ. ಅದೆಲ್ಲವೂ ಯಕ್ಷಗಾನದಿಂದಲೇ ಪಡೆದದ್ದು ಎಂದು ಹಿರಿಯ ಅರ್ಥವಾದಿ ಜಬ್ಬಾರ್ ಸಮೋ ಹೇಳಿದರು. ಅವರು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಪೂರ್ಣರಾತ್ರಿ ತಾಳಮದ್ದಳೆ ಕಾರ್ಯಕ್ರಮದಲ್ಲಿ ಯಕ್ಷ ಸಂಕ್ರಾಂತಿ ವತಿಯಿಂದ ‘ಗುರು ಸಮ್ಮಾನ ಸ್ವೀಕರಿಸಿ ಅವರು ಮಾತಾನಾಡಿದರು. ಕಾರ್ಯಕ್ರಮದಲ್ಲಿ ಬೈಂದೂರು ಶಾಸಕ ಗುರುಗಾಜ ಗಂಟಿಹೊಳೆ ಅವರನ್ನು ಸನ್ಮಾನಿಸಲಾಯಿತು. ರಂಗಕರ್ಮಿ ಸೇತುರಾಂ ಎಸ್ಎನ್, ಜಬ್ಬಾರ್ ಸಮೋ, ಟಿ. ಶಿವಾನಂದ ಶೆಟ್ಟಿ, ದೀಪಕ್ ಶೆಟ್ಟಿ ಬಾರ್ಕೂರು, ಗೋವಿಂದ ಬಾಬು ಪೂಜಾರಿ, ರಘುರಾಮ ಶೆಟ್ಟಿ ಎಳ್ಮುಡಿ, ಪ್ರವೀಣ್ ಕುಮಾರ್ ಶೆಟ್ಟಿ, ಅಶ್ವಥ್ ಹೆಗ್ಡೆ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ‘ಕೃಷ್ಣ ಸಂಧಾನ’ ಹಾಗೂ ಕರ್ಣಾರ್ಜುನ ಎಂಬ ಅಖ್ಯಾನಗಳ ಯಕ್ಷಗಾನ ತಾಳಮದ್ದಳೆ ಜರುಗಿತು. ತಾಳಮದ್ದಳೆಗಾಗಿ ಬೆಂಗಳೂರಿನಲ್ಲಿ ಸಭಾಂಗಣ ತುಂಬಿದ್ದು ವಿಶೇಷವಾಗಿತ್ತು. ಸಂಘಟಕ ನಾಗರಾಜ್ ಶೆಟ್ಟಿ ನೈಕಂಬ್ಳಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುರೇಶ ನಂದ್ರೊಳ್ಳಿ ವಂದಿಸಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕಾಲೇಜಿನಲ್ಲಿ ಖಾಸಗಿ ವೀಡಿಯೋ ಸೆರೆಯಾಗಿರುವ ಪ್ರಕರಣಕ್ಕೆ ಸಂಭಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಅವರು ಉಡುಪಿಯ ಖಾಸಗಿ ಕಾಲೇಜಿಗೆ ಭೇಟಿ ನೀಡಿ ಕಾಲೇಜು ಆಡಳಿತ ಮಂಡಳಿ, ಸಂತ್ರಸ್ತೆ ಮತ್ತು ಆರೋಪಿತ ವಿದ್ಯಾರ್ಥಿಗಳೊಂದಿಗೆ ಸಭೆ ನಡೆಸಿದ್ದಾರೆ. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಮಾಡಿದ ಪ್ರಕರಣದಕ್ಕೆ ಸಂಬಂಧಿಸಿದಂತೆ ಈಗಷ್ಟೇ ನಾನು ತನಿಖೆಯನ್ನು ಆರಂಭ ಮಾಡಿದ್ದು, ಈಗಲೇ ಏನನ್ನು ಹೇಳಲು ಸಾಧ್ಯವಿಲ್ಲ ಅಥವಾ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ಯಾವುದೇ ವದಂತಿಗಳಿಗೆ ವಾಟ್ಸಪ್ ಮೆಸೇಜ್ ಗಳಿಗೆ ಗಮನ ಕೊಡಬೇಡಿ ಎಂದರು. ಮಾಧ್ಯಮದವರಿಗೂ ಚಾಟಿ ಬೀಸಿದ ಖುಷ್ಬೂಅವರು, ನಾವು ಯಾರನ್ನು ಮಾತನಾಡಿಸುತ್ತೇವೆ ಎಲ್ಲಿಗೆ ಹೋಗುತ್ತೇವೆ ಎಂದು ಹಿಂಬಾಲಿಸಬೇಡಿ. ಇನ್ನು ನಮಗೆ ನಮ್ಮ ಕೆಲಸ ಮಾಡಲು ಬಿಡಿ. ಎನ್ ಸಿಡಬ್ಲ್ಯೂ ಪರವಾಗಿ ನಾನು ಬಂದಿದ್ದೇನೆ. ಆರೋಪಗಳು ಅನೇಕ ಇರಬಹುದು, ಅದರ ಆಧಾರದಲ್ಲಿ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ. ಎಲ್ಲವನ್ನೂಮೊದಲೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಳೆದ ನಾಲ್ಕೈದು ದಿನಗಳಲ್ಲಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು ಅಪಾರ ಹಾನಿಯೂ ಸಂಭವಿಸುತ್ತಿದೆ. ತಾಲೂಕಿನ ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ತಾರಾಪತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಮೇಲ್ಛಾವಣಿ ಗಾಳಿ ಮಳೆಗೆ ನೆಲಸಮವಾಗಿದೆ. ಗುರುವಾರ ಬೆಳಿಗ್ಗೆ ಸುರಿದ ಭಾರಿ ಗಾಳಿ ಮಳೆಗೆ ತಾರಾಪತಿ ಶಾಲೆಯ ಉತ್ತರ ದಿಕ್ಕಿನ ಕಟ್ಟಡದ ಹೆಂಚಿನ ಮೇಲ್ಛಾವಣಿ ನೆಲಸಮವಾಗಿದೆ. ಗೋಡೆಗಳು ಶಿಥಿಲಗೊಂಡಿದೆ. ಶಾಲೆಗೆ ರಜೆ ಇದ್ದುದರಿಂದ ಯಾವುದೇ ಅವಘಡ ಸಂಭವಿಸಿಲ್ಲ. ಕಟ್ಟಡ ಶಿಥಿಲಾವಸ್ಥೆಯಲ್ಲಿರುವ ಬಗ್ಗೆ ಇಲಾಖೆ ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಜಖಂಗೊಂಡ ಕಟ್ಟಡದಲ್ಲಿ ಒಟ್ಟು ಮೂರು ಕೊಠಡಿಗಳಿದ್ದು, ಅದರಲ್ಲಿ ಎರಡು ಕೊಠಡಿಗಳು ಉದುರಿಬಿದ್ದಿವೆ. ಶಾಲೆಯಲ್ಲಿ 120 ವಿದ್ಯಾರ್ಥಿಗಳು ಅಲ್ಲದೇ ಎಲ್ಕೆಜಿ ಹಾಗೂ ಯುಕೆಜಿ ವಿದ್ಯಾರ್ಥಿಗಳು ಇಲ್ಲಿಯೇ ವ್ಯಾಸಂಗ ಮಾಡುತ್ತಿರುವುದರಿಂದ, ಶಾಲೆಗೆ ತುರ್ತು ಕೊಠಡಿಯ ಅವಶ್ಯಕತೆ ಎದುರಾಗಿದೆ. ಜಿಲ್ಲಾಡಳಿತ ಹಾಗೂ ಬೈಂದೂರು ಶಾಸಕರು ಈ ಬಗ್ಗೆ ಗಮನ ಹರಿಸಿ ನೂತನ ಕಟ್ಟಡ ಒದಗಿಸಿಕೊಡುವಂತೆ ಶಾಲಾ ಎಸ್ಡಿಎಂಸಿ ಮನವಿ ಮಾಡಿಕೊಂಡಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ನಿವಾಸಿ, ಪ್ರಸ್ತುತ ಅಮೇರಿಕಾದಲ್ಲಿ ವ್ಯಾಸಂಗ ಮಾಡುತ್ತಿರುವ ನಮೀತಾ ವಿಯೊನ್ನಾ ಪಾಯಸ್ ಅವರ ಸಂಶೋಧನಾ ಪ್ರಬಂಧಕ್ಕೆ ಅಮೇರಿಕಾದ ಕನೆಕ್ಟಿಕಟ್ ವಿಶ್ವ ವಿದ್ಯಾಲಯ ಪಿಎಚ್ಡಿ ಪದವಿ ಪ್ರದಾನಿಸಿದೆ. ಅವರ ಸಂಖ್ಯಾಶಾಸ್ತ್ರ ವಿಭಾಗದಲ್ಲಿ ‘ಮೊಡಲಿಂಗ್ ಆಫ್ ಕ್ರಾಸ್ ಸೆಕ್ಷನಲ್, ರೀಪಿಟೇಡ್ ಮೇಸರ್ಸ್ ಮತ್ತು ಟೈಮ್ ಸೀರಿಸ್ ಡಾಟಾ ಸ್ಟ್ರಚರ್ಸ್’ ವಿಷಯದಲ್ಲಿ ಪಿಎಚ್ಡಿ ಅಧ್ಯಯನ ನಡೆಸಿದ್ದರು. ಅಮೇರಿಕಾದ ಕನೆಕ್ಟಿಕಟ್ ವಿಶ್ವ ವಿದ್ಯಾಲಯದ ಸಂಖ್ಯಾ ಶಾಸ್ತ್ರ ವಿಭಾಗದ ಸಂಗುತ್ತೇವಾರ್ ರಾಜೇಶೇಖರನ್ ಡಾ.ನಳೀನಿ ರವಿಶಂಕರ ಅವರ ಮಾರ್ಗದರ್ಶನ ಪಡೆದುಕೊಂಡಿರುವ ನಮೀತಾ ಅವರು ಡಾಕ್ಟರೇಟ್ ಗೌರವಕ್ಕೆ ಪಾತ್ರರಾಗಿದ್ದಾರೆ. ಬ್ರಹ್ಮಾವರದ ಲಿಟ್ಲ್ ರಾಕ್ ಇಂಡಿಯನ್ ಸ್ಕೂಲ್, ಮಂಗಳೂರಿನ ಸೈಂಟ್ ಅಲೋಷಿಯಸ್ ಕಾಲೇಜ್ ಹಾಗೂ ಪೂನಾದ ಸಾವಿತ್ರಿ ಬಾಯಿ ಪುಲೆ ವಿಶ್ವವಿದ್ಯಾಲಯದ ಪ್ರಾಕ್ತನ ವಿದ್ಯಾರ್ಥಿನಿಯಾಗಿರುವ ನಮೀತಾ, ಕುಂದಾಪುರದ ಪತ್ರಕರ್ತ, ಉದ್ಯಮಿ ವಿನಯ್ ಎ. ಪಾಯಸ್ ಹಾಗೂ ಜಸಿಂತಾ ವಿ. ಪಾಯಸ್ ಅವರ ಪುತ್ರಿಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಜು.26: ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ನೀರೋಡಿ ಎಂಬಲ್ಲಿ ಎರಡು ದಿನಗಳ ಹಿಂದೆ ಕೊಚ್ಚಿ ಹೋದ ತಾತ್ಕಾಲಿಕ ಕಿರುಸೇತುವೆ ಸ್ಥಳಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಇಲ್ಲಿ ತಕ್ಷಣದಿಂದ ಸ್ಟೀಲ್ ಸೇತುವೆ ನಿರ್ಮಿಸಿ ಸ್ಥಳೀಯರ ಸಂಚಾರಕ್ಕೆ ಅನುಕೂಲ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮಳೆ ಕಡಿಮೆಯಾದ ಬಳಿಕ ಶಾಶ್ವತ ಸೇತುವೆ ನಿರ್ಮಿಸುವ ಭರವಸೆ ನೀಡಿದರು. ಕಳೆದ ವರ್ಷ ಪಟ್ಟಣ ಪಂಚಾಯಿತಿ ವತಿಯಿಂದ 3 ಲಕ್ಷ ಅನುದಾನದಲ್ಲಿ ತಾತ್ಕಾಲಿಕ ಕಿರು ಸೇತುವೆ ನಿರ್ಮಿಸಲಾಗಿತ್ತು. ಈ ವರ್ಷದ ಆರಂಭದ ಮಳೆಗೆ ಈ ಕಿರು ಸೇತುವೆ ಸಂಪೂರ್ಣ ಕೊಚ್ಚಿ ಹೋಗಿದೆ. ಶಾಲಾ ವಿದ್ಯಾರ್ಥಿಗಳಿಗೆ ರೈತರಿಗೆ ಕೂಲಿ ಕಾರ್ಮಿಕರಿಗೆ ಈ ರಸ್ತೆಯೇ ಆಧಾರವಾಗಿತ್ತು. ಸೇತುವೆ ಕುಸಿದು ನಿರೋಡಿಯ 20 ಮನೆಗಳಿಗೆ ಇದ್ದ ರಸ್ತೆ ಮಾರ್ಗ ಸಂಪೂರ್ಣ ಕಡಿತಗೊಂಡಿರುತ್ತದೆ. ಈ ಸಂದರ್ಭ ಸಾಮಾಜಿಕ ಹೋರಾಟಗಾರ ವೀರಭದ್ರ ಗಾಣಿಗ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಚನ್ನಯ್ಯ ಪೂಜಾರಿ, ವಾಸು ಮರಾಠಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಪ್ರಸ್ತುತ ಸಾಲಿನ ಮುಂಗಾರು ಮಳೆಯಿಂದಾಗಿ ಉಂಟಾಗಬಹುದಾದ ಜನರ ಜೀವ , ಆಸ್ತಿ-ಪಾಸ್ತಿ ಹಾಗೂ ಜಾನುವಾರುಗಳ ಜೀವ ಹಾನಿಯಂತಹ ಅನಾಹುತಗಳನ್ನು ತಪ್ಪಿಸಲು ಸೂಕ್ತ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಬೇಕಾದ್ದು ಅಗತ್ಯವಾಗಿದ್ದು ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ . ಈ ಹಿನ್ನಲೆಯಲ್ಲಿ ನದಿ ತೀರ , ಸಮುದ್ರ ತೀರ, ಜಲಪಾತಗಳಂತಹ ಪ್ರವಾಸಿಗರು ಸಾಮಾನ್ಯವಾಗಿ ಭೇಟಿ ನೀಡುವಂತಹ ಪ್ರೇಕ್ಷಣೀಯ ಸ್ಧಳಗಳಲ್ಲಿ ಜನರು ಅಗತ್ಯ ಮುಂಜಾಗೃತೆಯನ್ನು ವಹಿಸಿದೇ ಅಪಾಯಕ್ಕೆ ಒಳಗಾಗುವುದರಿಂದ ಅಂತಹ ಪ್ರದೇಶಗಳಲ್ಲಿ ಅಪಾಯದ ಕುರಿತು ಜನರ ಗಮನವನ್ನು ಸೆಳೆಯುವ ನಿಟ್ಟಿನಲ್ಲಿ ಎಚ್ಚರಿಕೆ ಫಲಕ, ಪೊಲೀಸ್ ಕಾವಲು, ಮತ್ತಿತ್ತರ ಅಗತ್ಯ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲು ಸಂಬಂಧಪಟ್ಟ ಇಲಾಖೆಗಳಿಗೆ ಈಗಾಗಲೇ ನಿರ್ದೇಶನ ಮಾಡಲಾಗಿದೆ. ಅದಾಗ್ಯೂ ಸಾರ್ವಜನಿಕರು ಮಳೆಗಾಲದಲ್ಲಿ ಅಪಾಯಕಾರಿಯಾಗಿರುವ ನದಿ, ಸಮುದ್ರ, ಜಲಪಾತದಂತಹ ಪ್ರದೇಶಗಳಲ್ಲಿ ನಿರ್ಲಕ್ಷತೆಯಿಂದ ನಿಯಮ ಮೀರಿ, ಮೋಜು ಮಸ್ತಿಯನ್ನು ಮಾಡುವುದು ಕಂಡುಬಂದಲ್ಲಿ, ಅಂತಹ ವ್ಯಕ್ತಿಗಳ ವಿರುದ್ದ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಉಡುಪಿ ಜಿಲ್ಲೆಯಾದ್ಯಂತ ಮಳೆ ಆರ್ಭಟದಿಂದ ಇದುವರೆಗೂ 9 ಮಂದಿ ಸಾವನ್ನಪ್ಪಿದ್ದು, ಸುಮಾರು 28 ಕೋಟಿ ಮೌಲ್ಯದ ಆಸ್ತಿ ನಷ್ಟ ಉಂಟಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣ ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ರಾಜ್ಯದ ಹವಾಮಾನ, ಮಳೆ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪರಿಶೀಲಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವೀಡಿಯೊ ಸಂವಾದದಲ್ಲಿ ಸಚಿವರು ಪಾಲ್ಗೊಂಡರು. ಬಳಿಕ ಮಾತನಾಡಿದ ಸಚಿವರು, ಉಡುಪಿ ಜಿಲ್ಲೆಯಲ್ಲಿ ಪ್ರತಿ ವರ್ಷವೂ ಮಳೆಯಿಂದ ಅನಾಹುತಗಳು ಸಂಭವಿಸುತ್ತಿವೆ. ಉಡುಪಿ ಜಿಲ್ಲೆಯಲ್ಲಿ ಬಹಳ ಮೊದಲೇ ವಾರ್ ರೂಂಗಳನ್ನು ತೆರೆಯಲಾಗಿತ್ತು. ಇದರಿಂದ ಸಾಕಷ್ಟು ಅನಾಹುತಗಳನ್ನು ತಪ್ಪಿಸಿದ್ದೇವೆ. ಆದರೆ ಮಳೆ ಅಪಘಾತಗಳಿಂದ 9 ಸಾವು ಸಂಭವಿಸಿದೆ ಎಂದು ಸಚಿವರು ಮಾಹಿತಿ ನೀಡಿದರು. ಇದಕ್ಕೆ ಪ್ರತಿಯಾಗಿ ಇನ್ಮುಂದೆ ಇಂಥ ಯಾವುದೇ ಅನಾಹುತ ಆಗದಂತೆ ಮುಂಜಾಗ್ರತಾ ಕ್ರಮ…
