Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್)ದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾದ ಕಾಯಕ ಸ್ಪೂರ್ತಿ (ಮಹಿಳೆಯರಿಗೆ) ಯೋಜನೆ, ಪಾದುಕೆ ಕುಟೀರ ಯೋಜನೆ, ಮಾರುಕಟ್ಟೆ ಸಹಾಯ ಯೋಜನೆ, ಕೌಶಲ್ಯ ಉನ್ನತೀಕರಣ ಯೋಜನೆ, ಚರ್ಮಶಿಲ್ಪಿ ಯೋಜನೆ, ಚರ್ಮಕಾರರ ವಸತಿ ಯೋಜನೆ, ಚರ್ಮಕಾರರ ಕಿರು ಆರ್ಥಿಕ ಚಟುವಟಿಕೆಗಳಿಗಾಗಿ ನೇರ ಸಾಲ ಯೋಜನೆ ಹಾಗೂ ಸ್ವಾವಲಂಬಿ / ಸಂಚಾರಿ ಮಾರಾಟ ಮಳಿಗೆ ಯೋಜನೆಯ ಸೌಲಭ್ಯ ಪಡೆಯಲು ಅರ್ಹ ಪರಿಶಿಷ್ಟ ಜಾತಿಯ ಚರ್ಮ ಕುಶಲ ಕರ್ಮಿಗಳಿಂದ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರು ಮೊ.ನಂ: 6362891017 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕನ್ನಡ ಭಾಷೆ ನಮ್ಮ ಮಾತೃ ಭಾಷೆಯಾಗಿದ್ದು, ಮುಂದಿನ ಪೀಳಿಗೆಗೆ ಮಾತೃಭಾಷೆಯ ಮಹತ್ವದ ಕುರಿತು ಮನದಟ್ಟು ಮಾಡುವ ಮೂಲಕ ಕನ್ನಡವನ್ನು ನಮ್ಮ ಉಸಿರಾಗಿಸುವುದರ ಜೊತೆಗೆ ಕನ್ನಡ ಭಾಷೆ ಹಾಗೂ ಸಂಸ್ಕೃತಿಯನ್ನು ಉಳಿಸಿ – ಬೆಳೆಸುವಲ್ಲಿ ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕರ್ನಾಟಕ ಸಂಭ್ರಮ-50ರ ಅಂಗವಾಗಿ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಕಾರ್ಯಕ್ರಮದಡಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆಗೆ ಸ್ವಾಗತ ಕೋರಿ, ಕನ್ನಡ ತಾಯಿ ಭುನೇಶ್ವರಿಯ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣಗೊಂಡು 50 ವರ್ಷ ತುಂಬಿದ ಹಿನ್ನೆಲೆ, ರಾಜ್ಯ ಸರ್ಕಾರವು ಕರ್ನಾಟಕ ಸಂಭ್ರಮ-50 ಅನ್ನು ಆಚರಿಸುತ್ತಿದ್ದು, ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಕಾರ್ಯಕ್ರಮದಡಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆಯು ಕರ್ನಾಟಕದ ಇತಿಹಾಸ, ಪರಂಪರೆ, ಸಂಸ್ಕೃತಿ ಮತ್ತು ಸಂಪ್ರದಾಯಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದೆ ಎಂದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಪ್ರತಿಷ್ಠಿತ ಹಣಕಾಸು ಸಂಸ್ಥೆಯಾಗಿದ್ದ ಬಿವಿಎಸ್ ಫೈನಾನ್ಸ್ ನಿರ್ದೇಶಕ, ಪಾಲುದಾರ, ಕುಂದಾಪುರ ಸ್ಪೋರ್ಟ್ಸ್ ಪೆವಿಲಿಯನ್ ಮಾಜಿ ಕೋಶಾಧಿಕಾರಿ, ಪಿಯುಸ್ ನಗರ ಚರ್ಚಿನ ಹಿರಿಯ ಕ್ರಿಯಾಶೀಲ , ಕುಂದಾಪುರ ಲಯನ್ಸ್ ಕ್ಲಬ್‌ನ ಮಾಜಿ ಅಧ್ಯಕ್ಷ ಆಲ್ಫ್ರೆಡ್ ಡಿ’ ಸೋಜಾ (74) ಸೋಮವಾರದಂದು ಅಸ್ವಸ್ಥತೆಯಿಂದ ಹಳೆ ಅಳ್ವೆಯ ಸ್ವಗ್ರಹದಲ್ಲಿ ನಿಧನ ಹೊಂದಿದ್ದಾರೆ. ಅವರು ಗಲ್ಫ್ ರಾಷ್ಟ್ರದಲ್ಲಿ ಉದ್ಯೋಗದಲ್ಲಿ ಇದ್ದರು. ಅವರಿಗೆ ಪತ್ನಿ , ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ .

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿನೋದ್‌ಕುಮಾರ್ ಪಿ. ಇವರ ಪರಿಕಲ್ಪನೆಯಲ್ಲಿ ಮೂಡಿಬಂದಿರುವ, ಶಯದೇವಿಸುತೆ ಮರವಂತೆ (ಜ್ಯೋತಿ ಜೀವನ್‌ಸ್ವರೂಪ್)ಅವರ ಹೊಸ ಮಹಾ ಕಾದಂಬರಿ, “ಕೆಂದಾವರೆ” ಕಾದಂಬರಿಯನ್ನು  ಬೆಳ್ಳಿ ತೆರೆಗೆ ಬರಲು ಸಿದ್ದತೆ ನಡೆದಿದೆ. “ಕೆಂದಾವರೆ” ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ಪೋಸ್ಟರ್‌ನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್‌ ಅವರು ಲೋಕಾರ್ಪಣೆಗೊಳಿಸಿ ಚಿತ್ರತಂಡಕ್ಕೆ ಶುಭಹಾರೈಸಿದರು. ಹುಬ್ಬಳ್ಳಿ, ಬೆಂಗಳೂರು, ಮಲೆನಾಡು ಹಾಗೂ ದಕ್ಷಿಣಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಚಿತ್ರೀಕರಣವು ಆರಂಭಗೊಂಡಿದ್ದು, ಚಿತ್ರ ನಿರ್ದೇಶಕ ಪನ್ನಗ ಹಾಗೂ ಕಲಾವಿದ ಜಗನ್‌ರವರು ಕೆಲ ಆ್ಕಕ್ಷನ್ ಕಟ್ ಹಾಗೂ ಕಾಮಿಡಿ ಪಂಚ್‌ನಲ್ಲಿ ಸಹ ಬರಹಗಾರರಾಗಿ ಇವರಿಗೆ ಬಲು ವಿಶೇಷವಾಗಿ ಕೈಜೋಡಿಸಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದಸರಾ ಹಬ್ಬದ ಸಂದರ್ಭ ಬೆಂಗಳೂರಿನಿಂದ ಕರಾವಳಿಗೆ ತೆರಳಲು ಅ. 10 ಹಾಗೂ ಅ. 12ರಂದು ವಿಶೇಷ ವಿಶೇಷ ರೈಲುಗಳನ್ನು ಓಡಿಸಲಾಗುತ್ತಿದೆ. ಬೆಂಗಳೂರು, ಮಂಗಳೂರು, ಉಡುಪಿ, ಕುಂದಾಪುರ, ಬೈಂದೂರು, ಕಾರವಾರ ಭಾಗದ ಪ್ರಯಾಣಿಕರ ನೆರವಿಗೆ ವಿಶೇಷ ರೈಲು ಓಡಿಸುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾಡಿದ ಮನವಿಯಂತೆ ನೈಋತ್ಯ ರೈಲ್ವೇ ರೈಲುಗಳನ್ನು ಹೊರಡಿಸುವುದಾಗಿ ಪ್ರಕಟಿಸಿದೆ. ರೈಲಿನ ವೇಳಾಪಟ್ಟಿ ಹೀಗಿದೆ:ಅ. 10 ಗುರುವಾರ ರಾತ್ರಿ 12.30ಕ್ಕೆ ಯಶವಂತಪುರದಿಂದ ಹೊರಡುವ ರೈಲು (ನಂ. 06569) ಪಡೀಲ್ ಬೈಪಾಸ್ ಮೂಲಕ ಶುಕ್ರವಾರ ಬೆ. 11.30ಕ್ಕೆ ಉಡುಪಿ ತಲುಪಿ ಸಂಜೆ 4ಕ್ಕೆ ಕಾರವಾರ ತಲುಪಲಿದೆ. ಅ. 11ರ ಶುಕ್ರವಾರ ರಾತ್ರಿ 11.30ಕ್ಕೆ ಕಾರವಾರದಿಂದ ಹೊರಡುವ ರೈಲು (06570) ಕುಂದಾಪುರ ಮಧ್ಯ ರಾತ್ರಿ 2ಕ್ಕೆ ಉಡುಪಿ 2.40 ತಲುಪಿ ಮರುದಿನ ಮಧ್ಯಾಹ್ನ 1ಕ್ಕೆ ಯಶವಂತಪುರ ಹಾಗೂ ಸಂಜೆ 4.40ಕ್ಕೆ ಮೈಸೂರು ತಲುಪಲಿದೆ. 06585 ರೈಲುಅ. 12ರ ಶನಿವಾರ ರಾತ್ರಿ 9.20ಕ್ಕೆ ಮೈಸೂರಿನಿಂದ ಹೊರಟು (06585)…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, ಹಾಲಿ ಸದಸ್ಯರಾದ ಯು. ಸತ್ಯನಾರಾಯಣ್ ರಾವ್ ಹಾಗೂ ಕಟ್‌ಬೇಲ್ತೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, ಹಾಲಿ ಸದಸ್ಯರಾದ ನಾಗರಾಜ್ ಪುತ್ರನ್ ಅವರು, ತಮ್ಮ ಬೆಂಬಲಿಗರೊಂದಿಗೆ ಭಾನುವಾರ ಕಟ್‌ಬೇಲ್ತೂರುವಿನಲ್ಲಿ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರಿಂದ ಧ್ವಜವನ್ನು ಸ್ವೀಕರಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ವೇಳೆ ಹೆಮ್ಮಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೇತ್ರಾವತಿ, ಸದಸ್ಯರಾದ ಸುಧಾಕರ್ ಎನ್ ದೇವಾಡಿಗ, ಜಲಜ ಮೊಗವೀರ, ಶಕಿಲಾ, ಗೋಳಿಹೊಳೆ ಗ್ರಾಮ ಪಂಚಾಯಿತಿ ಅಧ್ಯಕ್ಷ ವಸಂತ ಹೆಗ್ಡೆ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರದೀಪ್‌ ಕುಮಾರ್ ಶೆಟ್ಟಿ ಗುಡಿಬೆಟ್ಟು ಜಿಲ್ಲಾ ಕೆಡಿಪಿ ಸದಸ್ಯ ಪ್ರಸನ್ ಕುಮಾರ್ ಶೆಟ್ಟಿ ಕೆರಾಡಿ ಇದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಾಡಂಚಿನ ಜನವಸತಿಗೆ ಮಾರಕವಾಗಿರುವ ಕಸ್ತೂರಿ ರಂಗನ್ ವರದಿ ವಿರುದ್ಧ ಕಾನೂನು ಹೋರಾಟ ರೂಪಿಸಲು ಹಾಗೂ ವಿಶೇಷ ಅಧ್ಯಯನ/ ಸಂಶೋಧನೆಗಾಗಿ ಕಾನೂನು ತಜ್ಞರನ್ನು ಒಳಗೊಂಡ ಬೈಂದೂರು ಫೌಂಡೇಷನ್ ರೂಪಿಸಲಾಗಿದೆ ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ಹೇಳಿದರು. ಕಸ್ತೂರಿ ರಂಗನ್ ವರದಿ ವಿರುದ್ಧ ಮುಂದಿನ ಹಂತದ ಹೋರಾಟಗಳ ಕುರಿತು ಸಂತ್ರಸ್ತರಾಗಿರುವ ಗ್ರಾಮ ಪಂಚಾಯತ್‌ ಪ್ರತಿನಿಧಿಗಳ ಸಭೆಯನ್ನು ಚಿತ್ತೂರಿನ ಸಕಲ ಕನ್ವೆನ್ಷನ್ ಹಾಲ್‌ನಲ್ಲಿ ಕರೆಯಲಾಗಿತ್ತು.‌ ಸಭೆಯಲ್ಲಿ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿ ವಿರುದ್ಧ ಕಾನೂನಾತ್ಮಕ ಹೋರಾಟವೂ ಅಗತ್ಯವಿದೆ. ಈ ನಿಟ್ಟಿನಲ್ಲಿ ಬೈಂದೂರು ಫೌಂಡೇಶನ್ ಸ್ಥಾಪಿಸಲಾಗಿದೆ. ಅಧ್ಯಯನದ ಜತೆಗೆ ಹೋರಾಟದ ಮುಂದಿನ ರೂಪುರೇಷೆಯನ್ನು ಫೌಂಡೇಶನ್ ಸಿದ್ಧಪಡಿಸಲಿದೆ ಎಂದರು. ಕಸ್ತೂರಿ ರಂಗನ್ ವರದಿ 2013ರಲ್ಲಿ ಘೋಷಣೆಯಾದರೂ ಈ ತನಕ ಯಾರೂ ಕೂಡ ಅಧ್ಯಯನಾತ್ಮಕ ಹೋರಾಟ ಮಾಡಿದವರಿಲ್ಲ. ಕಾಲಕಾಲಕ್ಕೆ ಹೋರಾಟಗಳು ಆದಾಗಲೂ,‌ ಹೋರಾಟಗಾರರನ್ನು ದಿಕ್ಕು ತಪ್ಪಿಸುವ ಕೆಲಸವೂ ಆಗಿದೆ ಎಂಬ ಅಭಿಪ್ರಾಯ ಸಭೆಯಲ್ಲಿ ಕೇಳಿ ಬಂದಿದೆ. ಕಸ್ತೂರಿ ರಂಗನ್ ವರದಿ ಯಥಾವತ್ ಜಾರಿಯಾದರೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ ಮತ್ತು ಸೂಕ್ಷö್ಮ, ಅತೀ ಸೂಕ್ಷö್ಮ ಸಮುದಾಯದವರಿಗೆ ವಿವಿಧ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತಿದ್ದು, ಸದರಿ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಗ್ರಾಮ ಒನ್ ಸೇವಾ ಕೇಂದ್ರದಲ್ಲಿ ವೆಬ್‌ಸೈಟ್ https://sevasindhu.karnataka.gov.in/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಂಬಂಧಿಸಿದ ಸೂಕ್ತ ದಾಖಲೆಗಳನ್ನು ಒಂದು ವಾರದ ಒಳಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಇಲ್ಲಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2574892 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ವಿದೇಶಿ ವಿದ್ಯಾರ್ಥಿವೇತನ ಸೌಲಭ್ಯಕ್ಕಾಗಿ ವೆಬ್‌ಸೈಟ್ https://sevasindhu.karnataka.gov.in/sevasindhu/DepartmentService ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ  ಅವಧಿಯನ್ನು ಅಕ್ಟೋಬರ್ 31 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ಸಂಖ್ಯೆ:8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಮತ್ತು ಯನಪೋಯ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ದೇರಳಕಟ್ಟೆಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಹುಡುಗರ ವಿಭಾಗದಲ್ಲಿ 5 ಚಿನ್ನ, 3 ಬೆಳ್ಳಿ ಹಾಗೂ 1 ಕಂಚು ಒಟ್ಟು 9 ಪದಕ ಪಡೆದು ಪ್ರಥಮ ಸ್ಥಾನವನ್ನು ಪಡೆದುಕೊಂಡರು. ಹುಡುಗಿಯರ ವಿಭಾಗದಲ್ಲಿ 5 ಚಿನ್ನ, 3 ಬೆಳ್ಳಿ ಹಾಗೂ 2 ಕಂಚು ಒಟ್ಟು 10 ಪದಕ ಪಡೆದು ಪ್ರಥಮ ಸ್ಥಾನವನ್ನು ಪಡೆದುಕೊಂಡರು.ವಿಜೇತ ಕ್ರೀಡಾಪಟುಗಳಿಗೆ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರು ಅಭಿನಂದಿಸಿದ್ದಾರೆ

Read More