Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕಲಾ ತಂಡಗಳು ಅನೇಕ ಸದುದ್ಧೇಶದಿಂದ ಜೀವ ತಳೆಯುತ್ತದೆ. ಆರ್ಥಿಕ ಭದ್ರತೆ ಸಿಗದ ಕಾರಣಕ್ಕಾಗಿಯೋ, ಕಲಾ ಪೋಷಕರ ಸಹಕಾರ ದೊರೆಯದ ಕಾರಣಕ್ಕಾಗಿಯೋ, ತಂಡದ ಸದಸ್ಯರ ವೈಮನಸ್ಸಿನ ಕಾರಣದಿಂದಲೋ, ಮುಖ್ಯಸ್ಥನ ದೌರ್ಬಲ್ಯದಿಂದಲೋ ಸುಭದ್ರವಾಗಿ ಸಮಾಜದಲ್ಲಿ ನಿಲ್ಲದೇ ಅಳಿಯುತ್ತದೆ. ಆದರೆ ಕಲಾಜೀವಿ ಕುಟುಂಬದ ಉತ್ಸಾಹಗಳು ನಿರಂತರವಾಗಿ 50 ಕಲಾವಿದರ ಸಂದರ್ಶನದಿಂದ ಅವಿರತವಾಗಿ ಶ್ರಮಿಸಿ ಇದೀಗ ಸಂಭ್ರಮವನ್ನು ಆಚರಿಸಿಕೊಳ್ಳುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದು ನಾಡೋಜ ಜಿ. ಶಂಕರ್‌ ಹೇಳಿದರು. ಅವರು ತೆಕ್ಕಟ್ಟೆ ಹಯಗ್ರೀವದಲ್ಲಿ’ಕಲಾಜೀವಿ ನಾದನೈದಿಲೆʼಕೋಟೇಶ್ವರ ದಿ. ರವಿರಾಜ ಕೋಟೇಶ್ವರ ಅವರ ಸವಿ ನೆನಪಿನಲ್ಲಿ 50ರ ಐಸಿರಿ ಒಡ್ಡೋಲಗ ಸರಣಿ ಕಾರ್ಯಕ್ರಮಗಳ 50ರ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನ್ನಾಡಿದರು. ಸಾವಿರ ಸಾವಿರ ಕನಸನ್ನು ಬಹಳ ಹಿಂದೆಯೇ ಹೊತ್ತು, ಸಾಧಿಸಿ ಇದೀಗ ಸಮಾಜಮುಖಿಯಾಗಿ ಸಂಭ್ರಮಿಸುತ್ತಿರುವುದನ್ನು ಕಂಡಾಗ ಕಲಾಜೀವಿ ಜೀವಂತವಾಗಿಯೇ ಮುಂದುವರಿಯುತ್ತದೆ ಎಂಬುದು ಸ್ಪಷ್ಟವಾಗಿ ಕಾಣುತ್ತದೆ. ಜೊತೆಗೆ ಕಲಾ ಜೀವಿಯ ಕನಸನ್ನು ಕಲಾಭಿಮಾನಿಗಳಾದ ನಾವು ನನಸು ಮಾಡುತ್ತಿರೋಣ ಎಂದರು. ಯಕ್ಷಗಾನದ ಬಡಗು ತಿಟ್ಟಿನ ಕಲಾವಿದರು ಬಡಗಿನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಇಂಗ್ಲೀಷ್ ವಿಭಾಗದ ವತಿಯಿಂದ ವಿಸ್ತರಣಾ ಚಟುವಟಿಕೆಯ ಭಾಗವಾಗಿ ಚಿಕನ್‌ಸಾಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಲಾಯಿತು. ಶಾಲೆಯ ವಿದ್ಯಾರ್ಥಿಗಳಿಗೆ ನಾನಾ ಚಟುವಟಿಕೆಗಳ ಮೂಲಕ ಶೈಕ್ಷಣಿಕ ಮತ್ತು ಸ್ವಚ್ಛತೆಯ ಅರಿವು ನೀಡುವುದರೊಂದಿಗೆ ಬಹುಮಾನವಾಗಿ ಬರಹದ ವಸ್ತುಗಳನ್ನು ನೀಡಲಾಯಿತು. ಕಾಲೇಜಿನ ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ದೀಪಿಕಾ ಜಿ., ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಸ್ವಾತಿ ಜಿ. ರಾವ್, ಸುರೇಖಾ ಆಚಾರ್, ರೋಹಿತ್ ಕುಮಾರ್ ಶೆಟ್ಟಿ, ಶಾಲೆಯ ಮುಖ್ಯೋಪಾಧ್ಯಾಯರು ಪ್ರೇಮಾ ಕುಮಾರಿ ಹಾಗೂ ಇತರ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ತಂಡದ ಏಕತೆಯಲ್ಲಿ ಯಶಸ್ಸು ಅಡಗಿದೆ. ಸಾರ್ಥಪರನಾಗದೆ ಎಲ್ಲರ ಅಭಿಪ್ರಾಯಗಳನ್ನು ಗೌರವಿಸುವ ಮತ್ತು ಗುರಿಯೆಡೆಗೆ ಬದ್ಧನಾಗಿ ಕೆಲಸ ಮಾಡುವ ವ್ಯಕ್ತಿ ಯಶಸ್ವಿ ನಾಯಕನಾಗಬಲ್ಲ ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಹೇಳಿದರು. ಅವರು ಇತ್ತೀಚೆಗೆ ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನಡೆದ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಗಳ ವಿವಿಧ ಕ್ಲಬ್‌ಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ  ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ರಾಘವೇಂದ್ರ ಶೇರುಗಾರ್ ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳಾನ್ನಾಡಿದರು.  ವಿದ್ಯಾರ್ಥಿ ನಾಯಕ ಆರ್ಯನ್ ವಿ.ಕೆ. ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿವಿಧ ಕ್ಲಬ್ ಗಳ ವಿದ್ಯಾರ್ಥಿ ನಾಯಕರು ವಾರ್ಷಿಕ ವರದಿಯನ್ನು ವಾಚಿಸಿದರು. ಶಿಕ್ಷಕಿಯರಾದ ಸುಜಾತ ದೇವಾಡಿಗ ಮತ್ತು ಜಯಶ್ರೀ ನಾಯಕ್ ಕಾರ್ಯಕ್ರಮವನ್ನು ನಿರೂಪಿಸಿದರು. ಸರಸ್ವತಿ ವಿದ್ಯಾಲಯ ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಶಾಂತಿ ಡಿಕೋಸ್ಟ ಧನ್ಯವಾದ ಸಮರ್ಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ನೈಜ ಪ್ರಪಂಚದ ನಾಯಕತ್ವವನ್ನು ಅನುಭವಿಸುವ ಜೊತೆಗೆ ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವ ಗುಣ ಸಮಾಜ ಸೇವೆ ವ್ಯಕ್ತಿತ್ವ ವಿಕಸನ ಬೆಳೆಸುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ. ಭಾವಿ ಯುವಜನತೆಯಲ್ಲಿ ಪರಸ್ಪರ ಸಹಕಾರ ಜಾಗತಿಕ ಮೌಲ್ಯ ಸ್ವಯಂ ಪ್ರೇರಿತವಾಗಿರುತ್ತದೆ. ಯುವಶಕ್ತಿ ದೇಶದ ಅಮೂಲ್ಯ ಸಂಪತ್ತು ಎಂದು ರೋಟರಿ ಜಿಲ್ಲಾ ಕ್ಯಾನ್ಸರ್ ಜಾಗೃತಿ ವಿಭಾಗದ ಚೇರ್ಮನ್ ನಾಗಭೂಷಣ ಉಡುಪ ತಿಳಿಸಿದರು. ಅವರು ಕೋಟದ ಮಣೂರು ಪಡುಕರೆ ಸಂಯುಕ್ತ ಪ್ರೌಢಶಾಲೆಯಲ್ಲಿ ನಡೆದ ಇಂಟರ‍್ಯಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು. ರೋಟರಿ ಜಿಲ್ಲಾ ಇಂಟರ‍್ಯಾಕ್ಟ್ ಚೇರ್ಮನ್ ಗಣೇಶಟ್ಟಿ ಮೊಳಹಳ್ಳಿ ಮಾತನಾಡಿ ಶಾಲಾ ಮಕ್ಕಳಿಗೆ ಪಠ್ಯ ಶಿಕ್ಷಣದೊಂದಿಗೆ ಶೈಕ್ಷಣಿಕ ಕ್ಲಬ್ ಗಳ ಕಾರ್ಯಕ್ರಮ ವಿಶೇಷ ಜ್ಞಾನ ನೀಡುವುದು ಎಂದು ತಿಳಿಸಿದರು . ಕ್ಲಬ್ ಅಧ್ಯಕ್ಷ ರಾಧಾಕೃಷ್ಣ ಬ್ರಹ್ಮಾವರ ಇವರು ನೂತನ ಇಂಟರ‍್ಯಾಕ್ಟ್ ಅಧ್ಯಕ್ಷರಾದ ಗಾನವಿ ಹಾಗೂ ನೂತನ ಕಾರ್ಯದರ್ಶಿಯಾದ ಶ್ರಾವಣಿಗೆ ಅಧಿಕಾರ ಹಸ್ತಾಂತರಿಸಿದರು ಸಮಾರಂಭದಲ್ಲಿ ಇಂಟರ‍್ಯಾಕ್ಟ್ ಕ್ಲಬ್ ಚೇರ್ಮನ್ ರೇವತಿ ಶ್ಯಾಮಸುಂದರ ನಾಯರಿ ಉಪಸ್ಥಿತರಿದ್ದರು. ನಿರ್ಗಮಿತ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ನವದೆಹಲಿ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಮಲೆನಾಡಿನ ರೈಲು ಸಂಪರ್ಕವನ್ನು ಬಲಪಡಿಸುವ ನಿಟ್ಟಿನಲ್ಲಿ ಅತ್ಯಂತ ಮಹತ್ವಕಾಂಕ್ಷೆಯ ಯೋಜನೆಯಾದ ಕೋಟೆಗಂಗೂರು ಕೋಚಿಂಗ್ ಡಿಪೋ ಕಾಮಗಾರಿಯು ವೇಗವಾಗಿ ಪೂರ್ಣಗೊಳ್ಳುವತ್ತ ಸಾಗುತ್ತಿದೆ. ಪ್ರಸಕ್ತ ಅಧಿವೇಶೆನದಲ್ಲಿ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರು ಯೋಜನೆಯ ಪ್ರಸ್ತುತ ಪ್ರಗತಿಯ ವಿವರಗಳನ್ನು ಒದಗಿಸಿದ್ದಾರೆ.   ಕೇಂದ್ರ ಸರ್ಕಾರ ಒಟ್ಟು 76.01 ಕೋಟಿ ಅಂದಾಜು ವೆಚ್ಚದಲ್ಲಿ ಮಂಜೂರು ಮಾಡಿರುವ ಈ ಯೋಜನೆಗೆ, ಸಂಸದ ರಾಘವೇಂದ್ರ ಅವರ ನಿರಂತರ ಪರಿಶ್ರಮದ ಫಲವಾಗಿ ಮಾರ್ಚ್ 31, 2026ರವರೆಗೆ 58.82 ಕೋಟಿ ರೂ.ಗಳಷ್ಟು ಕಾಮಗಾರಿಗಳನ್ನು ಮುಗಿಸಿ, ಶೇ. 77% ಕ್ಕಿಂತ ಹೆಚ್ಚು ಹಣಕಾಸು ಪ್ರಗತಿ ಸಾಧಿಸಲಾಗಿದೆ. ಅಷ್ಟೇ ಅಲ್ಲದೆ, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಬಾಕಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕೇಂದ್ರ ರೈಲ್ವೆ ಸಚಿವಾಲಯ, ಪ್ರಸಕ್ತ ಸಾಲಿನಲ್ಲಿ 9.5 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆ ಮಾಡಿದೆ. ಯೋಜನೆಯ ಪ್ರಮುಖ ಪ್ರಗತಿ ಮತ್ತು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಿಕ್ಷಣ ಸಂಸ್ಥೆಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಬಹುದೊಡ್ಡದು ಎಂದು ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಇದರ ಕಾರ್ಯದರ್ಶಿಗಳಾದ ಡಾ. ನಾರಾಯಣ ಸಭಾಹಿತ್ ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಣಿಪಾಲದ ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್  ಅವರು ಆಯೋಜಿಸಿದ ‘ಶಿಕ್ಷಣ ಸುಧಾರಣೆ’ ವಿಚಾರ ವಿನಿಮಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶಿಕ್ಷಕರು ಶಿಕ್ಷಣ ಸಂಸ್ಥೆಯಲ್ಲಿರುವ ಉತ್ತಮ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪ್ರೋತ್ಸಾಹ ನೀಡಬೇಕು ಎಂದರು. ಶಿಕ್ಷಕರು ಆಧುನಿಕ ಶಿಕ್ಷಣ ವ್ಯವಸ್ಥೆಯನ್ನು ಅರಿತು ಅದಕ್ಕೆ ಪೂರಕವಾಗಿ ತಮ್ಮ ಶೈಕ್ಷಣಿಕ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ಸಂಶೋಧನಾ ಪ್ರವೃತ್ತಿಯ ಜೊತೆಗೆ, ವಿಮರ್ಶಾತ್ಮಕತೆಯ ಬರಹಗಳನ್ನು ಉತ್ತಮ ಗುಣಮಟ್ಟದ ಜರ್ನಲ್ ಗಳಲ್ಲಿ ಪ್ರಕಟಿಸಬೇಕು. ಅಲ್ಲದೇ ಸಂಸ್ಥೆಗೆ ವಿದ್ಯಾರ್ಥಿಗಳ ದಾಖಲಾತಿಯಾಗುವಲ್ಲಿ ಶಿಕ್ಷಕರ ಪಾತ್ರವಿದೆ. ಉತ್ತಮ ಶೈಕ್ಷಣಿಕ ಮತ್ತು ಜ್ಞಾನ ಪಡೆಯುವ ವಾತಾವರಣವನ್ನು ಶಿಕ್ಷಕರು ಸೃಷ್ಟಿಸಬೇಕು. ಹಾಗಿದ್ದಾಗ ವಿದ್ಯಾರ್ಥಿಗಳ ದಾಖಲಾತಿಯು ಸಹ ಹೆಚ್ಚುತ್ತದೆ ಎಂದು ಅಭಿಪ್ರಾಯಪಟ್ಟರು. ಇನ್ನೋರ್ವ ಅತಿಥಿ ಮಣಿಪಾಲದ ಮಣಿಪಾಲ ಅಕಾಡೆಮಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರಾವಳಿ- ಮಲೆನಾಡು ಸೇರಿದಂತೆ, ಕರ್ನಾಟಕ ರಾಜ್ಯದ ಅಡಿಕೆ ಬೆಳೆಗಾರರು ವಿದೇಶಿ ಅಡಿಕೆ ಆಮದಿನ ಸಮಸ್ಯೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು ಅಡಿಕೆ ಬೆಳೆಗಾರರ ನೆರಗೆ ಬರಬೇಕೆಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ನಿಯಮ 377ರಡಿ ಸಂಸತ್ ಅಧಿವೇಶನದಲ್ಲಿ ಪ್ರಸ್ತಾಪನೆ ಸಲ್ಲಿಸುವ ಮೂಲಕ ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದಾರೆ. ಇಂಡೋನೇಷಿಯಾ, ಮಯಾನ್ಮಾರ್, ಶ್ರೀಲಂಕಾ ಮತ್ತು ಬಾಂಗ್ಲಾದೇಶ ಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಕಳಪೆ ಗುಣಮಟ್ಟದ ಅಡಿಕೆಗಳು ಆಮದಾಗಿ ಭಾರತಕ್ಕೆ ಬರುತ್ತಿದ್ದು, ಅವುಗಳನ್ನು ನಿಯಂತ್ರಿಸದಿದ್ದರೆ ನಮ್ಮ ಅಡಿಕೆ ಬೆಳೆ ಗಾರ ರಿಗೆ ಸಂಕಷ್ಟ ಎದುರಾಗಲಿದೆ. ವಿದೇಶದಿಂದ ಬರುವ ಅಡಿಕೆಗೆ ಕಸ್ಟಮ್ಸ್ ಸುಂಕ ತಪ್ಪಿಸಲು ಹುರಿದ ಅಡಿಕೆ ಎಂದು ನಮೂದಿಸಿ ಭಾರತಕ್ಕೆ ತರಲಾಗುತ್ತಿದೆ ಎಂದು ದೇಶೀಯ ಅಡಿಕೆ ಬೆಳೆಗಾರರು ದೂರಿದ್ದಾರೆ. ವಿದೇಶಿ ಅಡಿಕೆಗಳು ಸುಂಕ ತಪ್ಪಿಸಿ ಅಮದು ಮಾಡುವುದನ್ನು ನಿಲ್ಲಿಸದಿದ್ದರೆ ಕರ್ನಾಟಕವ ಸೇರಿದಂತೆ ದೇಶದ ಅಡಿಕೆ ಬೆಳೆಗಾರರ ಬೆಲೆ ಕುಸಿದು ಅಡಿಕೆ ಬೆಳೆಗಾರರಿಗೆ ಬಾರಿ ಆರ್ಥಿಕ ನಷ್ಟ ಆಗಲಿದೆ ಎಂದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಜ್ಞಾನ ಸರಸ್ವತಿ ವಿದ್ಯಾಲಯ ಸಿದ್ಧಾಪುರ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಕುಂದಾಪುರ  ವಲಯ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು  ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಆರ್ಯನ್ ಸೂರ್ಯ 6D, ಸಾಗರಿ ಆರ್ ಪೂಜಾರಿ 6D, ಚಿನ್ಮಯ ಮೊಗವೀರ 7C, ಸಾಮ್ರಾಟ್ ಕೆ 7E,   10A, ದೇವಿಕಾ ಶೆಣೈ 10E ಹಾಗೂ ನಿಶ್ಚಿತ್ ಎನ್. ನಾಯ್ಕ್ 8D ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು  ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರಿರುವ ಕ್ಷೇತ್ರಗಳಿಗೆ ಯಾವುದೇ ಅನುದಾನ ಬರುತ್ತಿಲ್ಲ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಬಿಜೆಪಿ ಸಂಸದರ ಮೂಲಕ ಅನುದಾನ ತಂದು ಅಭಿವೃದ್ಧಿ ಕಾಮಗಾರಿಗಳನ್ನು ಮಾಡುತ್ತಿದ್ದೇವೆ” ಎಂದು ಯೂಟ್ಯೂಬ್ ವಾಹಿನಿಯೊಂದಕ್ಕೆ ನೀಡಿರುವ ಕೆಲ ಬಿಜೆಪಿ ಪರ ನಾಯಕರ ಹೇಳಿಕೆ ಸಂಪೂರ್ಣ ದಿಕ್ಕು ತಪ್ಪಿಸುವಂತಿದ್ದು, ಇದು ಅವರ ಅಜ್ಞಾನವೋ ಅಥವಾ ಜನರನ್ನು ಉದ್ದೇಶಪೂರ್ವಕವಾಗಿ ದಾರಿ ತಪ್ಪಿಸುವ ಪ್ರಯತ್ನವೋ ಎಂಬ ಅನುಮಾನ ಮೂಡಿಸುತ್ತದೆ ಎಂದು ಕಾಂಗ್ರೆಸ್ ಯುವ ನಾಯಕ ಹಾಗೂ ಪುರಸಭೆಯ ಮಾಜಿ ಸದಸ್ಯ ಕೇಶವ ಭಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ವಿಶೇಷವಾಗಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಜನರಿಗೆ ತಪ್ಪು ಮಾಹಿತಿ ನೀಡುವುದನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಒಂದು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆಯಾಗುವ ಪ್ರಕ್ರಿಯೆಯ ಬಗ್ಗೆ ಕನಿಷ್ಠ ಆಡಳಿತಾತ್ಮಕ ಅರಿವು ಇದ್ದವರು ಇಂತಹ ಹೇಳಿಕೆಗಳನ್ನು ನೀಡುವುದಿಲ್ಲ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೊಸಂಗಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿವಿಧ ವಿದ್ಯಾರ್ಥಿ ಕ್ಲಬ್‌ಗಳ ಉದ್ಘಾಟನೆ ಹಾಗೂ ವಿದ್ಯಾರ್ಥಿನಿಯರಿಗಾಗಿ ನಿರ್ಮಿಸಲಾದ ಸುಸಜ್ಜಿತ ಶೌಚಾಲಯದ ಕೀಲಿಕೈ ಹಸ್ತಾಂತರ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು. ಸಭಾ ಕಾರ್ಯಕ್ರಮವನ್ನು ಶ್ರೀ ಶನೈಶ್ವರ ದೇವಳದ ಆಡಳಿತ ಮೊಕ್ತೇಸರರಾದ ಅಶೋಕ್ ಶೆಟ್ಟಿ ಚೋನ್ಮನೆ ಅವರು ದೀಪ ಬೆಳಗಿಸಿ ಉದ್ಘಾಟಿಸಿ, ಮಾತನಾಡಿ, ಗುರುವಿನ ಮಹತ್ವ ಹಾಗೂ ವಿದ್ಯಾರ್ಥಿಗಳ ಉದ್ದೇಶ‌ ಹಾಗೂ ಜವಬ್ದಾರಿಯ ಬಗ್ಗೆ ತಿಳಿಸಿದರು.‌ ವಿವಿಧ ವಿದ್ಯಾರ್ಥಿ ಸಂಘ ಹಾಗೂ ಕ್ಲಬ್‌ಗಳ ಉದ್ಘಾಟನೆ 1. ಸಾಂಸ್ಕೃತಿಕ ಸಂಘ:ಸಾಂಸ್ಕ್ರತಿಕ ಸಂಘವನ್ನು ಸಂಸ್ಕೃತಿಯ ಅಭಿವ್ಯಕ್ತಿಯಾಗಿ ಯಕ್ಷಗಾನ ಹಾಗೂ ಭರತನಾಟ್ಯದ ಝಲಕ್ ಪ್ರಸ್ತುತ‌ ಪಡಿಸಲಾಯಿತು. ನಂತರ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರುಗಳಾದ ಕೋಟ ವಿಶ್ವನಾಥ್  ತುಂಬಿಕಲ್ಲಾಯ ಸಂಸ್ಕೃತಿಯ ಪ್ರತೀಕ ಎಂಬಂತೆ ಜೋಡು ದೀಪ‌ ಬೆಳಗಿಸಿದರು. ಮಾಲತಿ ಸಂತೋಷ್ ನಾಯ್ಕ ಅವರು ಸಾಂಸ್ಕೃತಿಕ ಸಂಘದ ಬಿತ್ತಿಯನ್ನು ವಿನೂತನವಾಗಿ ಅನಾವರಣಗೊಳಿಸಿದರು ಹಾಗೂ ಎಲ್ಲರೂ ಸಾಂಸ್ಕೃತಿಕ ಕಾರ್ಯಕ್ರಮಗಳ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು. ಕನ್ನಡ ಉಪನ್ಯಾಸಕಿಯಾದ ವಿಲಾಸಿನಿ…

Read More