ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಹಾಗೂ ನಿಟ್ಟೆ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಭಾಗವಹಿಸಿದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ . ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ( ಪದವಿ ಪೂರ್ವ ಶಿಕ್ಷಣ ಇಲಾಖೆ ) ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಕ್ರಿಯೇಟಿವ್ ಪದವಿಪೂರ್ವ ಕಾಲೇಜು, ಕಾರ್ಕಳ ಇದರ ವತಿಯಿಂದ “ಜೀವವಿರೋಧಿ ಹೆಣ್ಣು ಭ್ರೂಣ ಹತ್ಯೆ ನಿಲ್ಲಿಸಿ, ಲಿಂಗ ಸಮಾನತೆ ಸಾಧಿಸಿ” ಎಂಬ ಶೀರ್ಷಿಕೆಯಡಿಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು – ಪ್ರೌಢಶಾಲೆ ವಿಭಾಗ, ಬಜಗೋಳಿಯಲ್ಲಿ ಅಕ್ಟೋಬರ್ 2ರಿಂದ 8 ರವರೆಗೆ ನಡೆಯುವ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರವು ಜ್ಯೋತಿ ಪ್ರಜ್ವಲನದ ಮೂಲಕ ವಿದ್ಯುಕ್ತವಾಗಿ ಉದ್ಘಾಟನೆಗೊಂಡಿತು. ಉದ್ಘಾಟಕರಾಗಿ ಆಗಮಿಸಿದ ರಾಜ್ಯ ಕ್ರಷರ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ ಉದ್ಯಮಿಯಾದ ಡಾ. ರವೀಂದ್ರ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಬಾಲ್ಯದಿಂದಲೇ ವ್ಯಕ್ತಿತ್ವವನ್ನು ಅರಳಿಸುವ ಕೆಲಸಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಕೇವಲ ನಮಗಾಗಿ ಬದುಕದೆ ಇತರರಿಗಾಗಿ, ಸಮಾಜ ಕಾರ್ಯಕ್ಕಾಗಿ ಜೀವನವನ್ನು ಮೀಸಲಿಡಬೇಕು. ಎನ್‌ಎಸ್‌ಎಸ್ ವಿದ್ಯಾರ್ಥಿಗಳಲ್ಲಿ ನಾಗರಿಕ ಜವಾಬ್ದಾರಿಯ ಪ್ರಜ್ಞೆ ಬೆಳೆಸುತ್ತದೆ ಎಂದು ನುಡಿದರು. ದಿಕ್ಸೂಚಿ ಭಾಷಣಗೈದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಶಾಲೆಯಲ್ಲಿ ಮಹಾತ್ಮಗಾಂಧೀಜಿ ಅವರ 155ನೇ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ 120ನೇ ಜನ್ಮದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮ ಶಾಲಾ ಆವರಣ ಸ್ವಚ್ಛತೆಯೊಂದಿಗೆ ಆರಂಭಗೊಂಡಿತು ಮಹಾನ್ ಚೇತನರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಲಾಯಿತು. ಎಲ್ಲರೂ ಸಾಮೂಹಿಕವಾಗಿ ಸರ್ವಧರ್ಮ ಪ್ರಾರ್ಥನೆ ಮತ್ತು ಭಜನೆಯಲ್ಲಿ ಪಾಲ್ಗೊಂಡರು. ಸಭೆಯಲ್ಲಿ ಆಡಳಿತ ಮಂಡಳಿ ಅಧಿಕಾರಿ ರೆನಿಟಾ ಲೋಬೊ, ಮುಖ್ಯಶಿಕ್ಷಕ ರವಿದಾಸ್ ಶೆಟ್ಟಿ, ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ವೃಂದ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸ್ವಾತಂತ್ರ್ಯ ಹೋರಾಟದಲ್ಲಿ ಮಹತ್ತರವಾದ ಪಾತ್ರ ವಹಿಸಿದ್ದ ಗಾಂಧೀಜಿಯವರನ್ನು ದೇವರಂತೆಯೇ ಆರಾಧಿಸುತ್ತಿದ್ದೆವು. ಆದರೆ ಬದಲಾದ ಕಾಲಘಟ್ಟದಲ್ಲಿ ರಾಜಕೀಯ ದ್ವೇಷಗಳಿಂದಾಗಿ ಮಹಾತ್ಮಗಾಂಧೀಜಿ ಅವರನ್ನು ಖಳನಾಯಕನಾಗಿ ಬಿಂಬಿಸಲಾಗುತ್ತಿರುವುದು ಅತ್ಯಂತ ಕಳವಳಕಾರಿ ಬೆಳವಣಿಗೆ ಎಂದು ಪತ್ರಕರ್ತ ಶ್ರೀಕಾಂತ ಹೆಮ್ಮಾಡಿ ಹೇಳಿದರು. ಅವರು ವಿವಿಧ ಮಂಡಳಿ ಆಡಳಿತದ ಹೆಮ್ಮಾಡಿ ಜನತಾ ಪ್ರೌಢ ಶಾಲೆಯಲ್ಲಿ ಬುಧವಾರ ಜರುಗಿದ ಗಾಂಧಿ ಜಯಂತಿ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಧರ್ಮ ರಾಜಕಾರಣದ ಕೆಟ್ಟ ಶಕ್ತಿಗಳು ಯುವ ಸಮುದಾಯದ ಮಧ್ಯೆ ಗಾಂಧೀಜಿಯ ಬಗ್ಗೆ ಅಪಪ್ರಚಾರಗಳು, ಅಸಹನೀಯ ಬರಹಗಳನ್ನು ಭಿತ್ತರಿಸಿ ಈ ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವಮಾನದ ಪೂರ್ತಿ ಸಮಯವನ್ನು ಮೀಸಲಿಟ್ಟ ಗಾಂಧೀಜಿಯವರ ವ್ಯಕ್ತಿತ್ವ ಹರಣ ಮಾಡುತ್ತಿದೆ. ಈ ದೇಶದ ಮುಂದಿನ ಪ್ರಜೆಗಳಾದ ನೀವೆಲ್ಲರೂ ಮಹಾತ್ಮ ಗಾಂಧೀಜಿಯವರ ತತ್ವಾದರ್ಶಗಳು, ಸ್ವಾತಂತ್ರ್ಯ ಹೋರಾಟಕ್ಕೆ ಅವರು ನೀಡಿದ ಕೊಡುಗೆಗಳನ್ನು ತಿಳಿದುಕೊಳ್ಳುವ ಮೂಲಕ ಗಾಂಧೀಜಿಯವರ ವಿಚಾರಧಾರೆ, ಆದರ್ಶ, ಚಳವಳಿಗಳನ್ನು ಸದಾ ಜೀವಂತವಾಗಿರಿಸುವ ಕಾಯಕದಲ್ಲಿ ತೊಡಗಿಕೊಳ್ಳಬೇಕು ಎಂದರು. ಕುಂದಾಪುರ ಸಿಟಿ ಜೆಸಿಐ ಅಧ್ಯಕ್ಷ ರಾಘವೇಂದ್ರ ಕುಲಾಲ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕರ ಕಛೇರಿ (ಆಡಳಿತ) ಮಂಗಳೂರು ಹಾಗೂ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ದಕ್ಷಿಣ ಕನ್ನಡ ಮತ್ತು ಮಂಗಳೂರು ದಕ್ಷಿಣ ವಲಯ, ಎಸ್‌ಡಿಎಮ್ ಮಂಗಳಜ್ಯೋತಿ ಸಮಗ್ರ ಶಾಲೆ ವಾಮಂಜೂರು ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಕುಸ್ತಿ ಪಂದ್ಯಾಟದಲ್ಲಿ ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು 06 ಚಿನ್ನ, 01 ಬೆಳ್ಳಿ, 01 ಕಂಚು ಒಟ್ಟು 08 ಪದಕಗಳೊಂದಿಗೆ 17 ವರ್ಷ ವಯೋಮಿತಿಯ ಬಾಲಕರ ತಂಡ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿರುತ್ತಾರೆ. ಮುಂದಿನ ತಿಂಗಳು ನಡೆಯುವ ರಾಜ್ಯಮಟ್ಟದ ಕುಸ್ತಿ ಪಂದ್ಯಾಟಕ್ಕೆ ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯಿಂದ 07 ವಿದ್ಯಾರ್ಥಿಗಳು ಆಯ್ಕೆಯಾಗಿರುತ್ತಾರೆ. ವಿಜೇತ ಕ್ರೀಡಾಪಟುಗಳಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವರವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆ.1ರಂದು ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಡಾ. ಎನ್.ಎಸ್.ಎ.ಎಂ ಪದವಿ ಪೂರ್ವ ಕಾಲೇಜು ನಿಟ್ಟೆ, ಕಾರ್ಕಳ ಇವರ ಸಹಭಾಗಿತ್ವದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪುಟ್ಬಾಲ್ ಪಂದ್ಯಾಟದಲ್ಲಿ ಕುಂದಾಪುರ ವಲಯವು ಉಡುಪಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ಮುಂದೆ ನಡೆಯುವ ರಾಜ್ಯ ಮಟ್ಟದ ಪುಟ್ಬಾಲ್ ಪಂದ್ಯಾಟದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಆಯ್ಕೆಗೊಂಡಿದೆ. ಎಕ್ಸಲೆಂಟ್ ವಿದ್ಯಾಸಂಸ್ಥೆಯ ಪುಟ್ಬಾಲ್ ಪ್ರತಿಭೆಗಳಾದ ಪ್ರಥಮ್ ಎಸ್. ಶೆಟ್ಟಿ ಮತ್ತು ಎಲಿಕ್ ಅಬ್ರಾನ್ ದಾಲ್‌ಮೇದಾ ಅವರು ಜಿಲ್ಲಾತಂಡದ ಅತ್ಯುತ್ತಮ ಆಟಗಾರರಾಗಿ ಹೊರಹೊಮ್ಮಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಎಕ್ಸಲೆಂಟ್ ವಿದ್ಯಾಸಂಸ್ಥೆಯು ಕೇವಲ ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದದ್ದಲ್ಲದೆ, ಸಾಂಸ್ಕೃತಿಕ, ಪ್ರತಿಭಾ ಕಾರಂಜಿ ಹಾಗೂ ಕ್ರೀಡಾಕ್ಷೇತ್ರದಲ್ಲೂ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿಯೂ ತನ್ನ ಹಿರಿಮೆಯ ಛಾಪನ್ನು ಮೂಡಿಸಿ ಅದೆಷ್ಟೊ ಪ್ರಶಸ್ತಿಗಳನ್ನು ತನ್ನ ಮೂಡಿಗೇರಿಸಿಕೊಂಡಿದೆ. ಅವರಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕಥೋಲಿಕ್ ಸಭಾ ಉಡುಪಿ ಪ್ರದೇಶ, ಕೊಸೆಸಾಂವ್ ಮಾತೆಯ ಚರ್ಚ್ ಘಟಕ ಗಂಗೊಳ್ಳಿ, ಕಥೋಲಿಕ್ ಸ್ತ್ರೀ ಸಂಘಟನೆ ಗಂಗೊಳ್ಳಿ, ಯುವ ಆಯೋಗ, ಭಾರತೀಯ ಕಥೋಲಿಕ್ ಯುವ ಸಂಚಾಲನ ಗಂಗೊಳ್ಳಿ ಇವರ ಆಶ್ರಯದಲ್ಲಿ ಸ್ವಸ್ಥ ಹಾಗೂ ನಿರ್ಮಲ ಪರಿಸರ ಅಭಿಯಾನದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಗಂಗೊಳ್ಳಿಯಲ್ಲಿ ಬುಧವಾರ ನಡೆಯಿತು. ಗಂಗೊಳ್ಳಿಯ ಬಂದರು ಬಸ್ ನಿಲ್ದಾಣದಿಂದ ಗಂಗೊಳ್ಳಿ ಗ್ರಾಮ ಪಂಚಾಯತ್ ಕಾರ್ಯಾಲಯದವರೆಗೆ ಮುಖ್ಯರಸ್ತೆಯ ಇಕ್ಕೆಲಗಳಲ್ಲಿ ಬಿದ್ದಿರುವ ಕಸಕಡ್ಡಿ ತ್ಯಾಜ್ಯಗಳನ್ನು ಸಂಗ್ರಹಿಸಿ ಸ್ವಚ್ಛಗೊಳಿಸಿದ ಸಂಘಟನೆಗಳ ಕಾರ್ಯಕರ್ತರು, ಸ್ವಸ್ಥ ಹಾಗೂ ನಿರ್ಮಲ ಪರಿಸರಕ್ಕೆ ಜನರು ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಕಥೋಲಿಕ್ ಸಭಾ ಗಂಗೊಳ್ಳಿ ಘಟಕದ ಅಧ್ಯಕ್ಷ ಎಡ್ವರ್ಡ್ ಫೆರ್ನಾಂಡಿಸ್, ಕಥೋಲಿಕ್ ಸಭಾ ಉಡುಪಿ ಪ್ರದೇಶ್ ಸ್ಥಾಪಕ ಅಧ್ಯಕ್ಷ ಕಿರಣ್ ಕ್ರಾಸ್ತಾ, ಗಂಗೊಳ್ಳಿ ಚರ್ಚಿನ ಧರ್ಮಗುರು ರೆ.ಫಾ. ರೋಶನ್ ಥಾಮಸ್ ಡಿಸೋಜ ಮತ್ತು ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಧಾನ ಪರಿಷತ್ ದ.ಕ – ಉಡುಪಿ ಸ್ಥಳೀಯಾಡಳಿತ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಎಸ್. ರಾಜು ಪೂಜಾರಿಯವರಿಗೆ ಟಿಕೆಟ್ ಲಭಿಸಿದೆ. ಟಿಕೇಟಿಗಾಗಿ ಹಲವಾರು ಸ್ಪರ್ಧಿಗಳು ಆಕಾಂಕ್ಷಿಗಳಿದ್ದರೂ ಪೈಪೋಟಿ ನಡೆದಿದ್ದರೂ ಕೊನೆಯ ಗಳಿಗೆಯಲ್ಲಿ ಎಸ್. ರಾಜು ಪೂಜಾರಿ ಅವರಿಗೆ ಟಿಕೆಟ್ ಲಭಿಸಿದೆ. ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗುರುತಿಸಿಕೊಂಡಿರುವ ಎಸ್. ರಾಜು ಪೂಜಾರಿಯವರು ವಿದ್ಯಾರ್ಥಿ ದಿಸೆಯಿಂದಲೇ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡವರು. ಮರವಂತೆ ಗ್ರಾಮ ಪಂಚಾಯತ್ ಸದಸ್ಯರಾಗಿ ಕುಂದಾಪುರ ತಾಲೂಕು ಪಂಚಾಯತ್ ಸದಸ್ಯರಾಗಿ, ಉಡುಪಿ ಜಿಲ್ಲಾ ಪಂಚಾಯಿತಿನ ಸದಸ್ಯರಾಗಿ, ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷರಾಗಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಕರ್ತವ್ಯವನ್ನು ನಿರ್ವಹಿಸಿದರು. ರಾಜಕೀಯ ಸಹಕಾರ ಸಾಮಾಜಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡ ಎಸ್.ರಾಜು ಪೂಜಾರಿ ಅವರಿಗೆ ಪರಿಷತ್ತಿನ ಉಪಚುನಾವಣೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಹಾತ್ಮಾ ಗಾಂಧೀಜಿ ಅವರ ಸತ್ಯ, ಶಾಂತಿ, ಅಹಿಂಸಾ ತತ್ವಗಳು ಇಂದಿಗೂ ಪ್ರಸ್ತುತವಾಗಿದ್ದು, ಪ್ರತಿಯೊಬ್ಬರೂ ಅವುಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು, ಗಾಂಧೀಜಿ ಅವರಿಗೆ ಗೌರವ ಸಲ್ಲಿಸುವ ಮೂಲಕ ಗಾಂಧಿ ಜಯಂತಿ ದಿನಾಚರಣೆಯನ್ನು ಅರ್ಥಪೂರ್ಣವಾಗಿಸೋಣ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಗರಸಭೆ ಉಡುಪಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ, ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ & ಉಡುಪಿ ಜಿಲ್ಲಾ ಸಮಸ್ತ ಸಹಕಾರಿ ಇವರ ನೇತೃತ್ವದಲ್ಲಿ ಪ್ರಾಚ್ಯ ಸಂಚಯ ಸಂಶೋಧನಾ ಕೇಂದ್ರ, ಲಿಯೋ ಡಿಸ್ಟಿçಕ್ಟ್ 317 ಸಿ ಮತ್ತು ಕ್ರಿಶ್ಚಿಯನ್ ಪಿ.ಯು ಕಾಲೇಜು, ಲಯನ್ಸ್ ಕ್ಲಬ್ ಉಡುಪಿ ಇಂದ್ರಾಳಿ ಮತ್ತು ಲಯನ್ಸ್ ಕ್ಲಬ್ ಉಡುಪಿ ಚೇತನ ಹಾಗೂ ಲಂಬಾರ್ಡ್ ಮೆಮೋರಿಯಲ್ ಮಿಷನ್ ಆಸ್ಪತ್ರೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಅಜ್ಜರಕಾಡು ಪುರಭವನದಲ್ಲಿ ನಡೆದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ಹಟ್ಟಿಯಂಗಡಿಯಲ್ಲಿ ನಡೆದ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯ ಪ್ರಯುಕ್ತ ಸಂಸ್ಥೆಯ ಕಾರ್ಯದರ್ಶಿಗಳು ಹಾಗೂ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಚಾರ್ಯರೂ ಆದ ಶರಣ ಕುಮಾರ ಅವರು ವಿದ್ಯಾರ್ಥಿಗಳನ್ನು ಕುರಿತು ಮಾತನಾಡುತ್ತಾ, ವಿದ್ಯಾರ್ಥಿಗಳು ಕಲಿಕೆಯ ಜೊತೆಯಲ್ಲಿ ಮಹಾನ್ ವ್ಯಕ್ತಿಗಳ ತತ್ವ ಮತ್ತು ಆದರ್ಶಗಳನ್ನು ಪಾಲಿಸಬೇಕು. ಆಗ ಮಾತ್ರ ನಾವು ಕಲಿತ ವಿದ್ಯೆಗೆ ಅರ್ಥ ಸಿಗಲು ಸಾಧ್ಯ, ಗಾಂಧೀಜಿ ಮತ್ತು ಶಾಸ್ತ್ರಿಯವರ ಮೌಲಿಕವಾದ ಆದರ್ಶ ಗುಣಗಳನ್ನು ನಾವು ಪಾಲಿಸಿದರೆ ಅದು ಮಹಾನ್ ವ್ಯಕ್ತಿಗಳಿಗೆ ನಾವು ಕೊಡಬಹುದಾದ ಬೆಲೆ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಇದೇ ಸಂದರ್ಭದಲ್ಲಿ ಸಹ ಶಿಕ್ಷಕಿ ಲತಾ ದೇವಾಡಿಗ ಮಾತನಾಡುತ್ತಾ, ಗಾಂಧೀಜಿಯವರ ಜೀವನದಲ್ಲಿಯ ಕೆಲವು ಮಹತ್ತರ ಘಟನೆಗಳನ್ನು ಉಲ್ಲೇಖಿಸಿ ಮಹಾತ್ಮ ಗಾಂಧೀಜಿಯವರ ಸರಳತೆ, ಸತ್ಯ ಮತ್ತು ಅಹಿಂಸಾ ತತ್ವದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಹೇಳಿದರು. ವಿದ್ಯಾರ್ಥಿಗಳಾದ ಹರಿ ಮತ್ತು ನಿಧಿ ಗಾಂಧೀಜಿ ಅವರ ವ್ಯಕ್ತಿತ್ವದ ಕುರಿತಾಗಿ…
