ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಕ್ಟೋಬರ್ 2ರಂದು ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಲಯನ್ಸ್ ಕ್ಲಬ್, ಹಂಗಳೂರು ಹಾಗೂ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು, ಸುಣ್ಣಾರಿ, ಕುಂದಾಪುರ ಇದರ ಸಹಯೋಗದಲ್ಲಿ ಸ್ವಚ್ಛ ಭಾರತ್ ಸ್ವಸ್ಥ ಭಾರತ್ ಅಭಿಯಾನ 2024ರ ಸ್ವಚ್ಛತೆಯ ಸೇವಾ ಕಾರ್ಯಕ್ರಮವನ್ನು ಕೋಡಿ ಕಿನಾರ ಕಡಲ ತೀರದಲ್ಲಿ ಹಮ್ಮಿಕೊಂಡು ಕಡಲ ತಡಿಯ ಭಾಗದಲ್ಲಿರುವ ಪ್ಲಾಸ್ಟಿಕ್ ಹಾಗೂ ತ್ಯಾಜ್ಯ ವಸ್ತುಗಳನ್ನು ಸಂಪೂರ್ಣವಾಗಿ ಸ್ವಚ್ಛಮಾಡುವ ಅಭಿಯಾನವನ್ನು ನಮ್ಮ ಎಕ್ಸಲೆಂಟ್ ಸಂಸ್ಥೆಯು ಕೈಗೊಂಡಿರುವುದು ಹೆಮ್ಮೆಯ ವಿಚಾರವಾಗಿದೆ. ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯು, ಉಪನ್ಯಾಸಕರು, ಶಿಕ್ಷಕ – ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಸಹ ಈ ಕಾಯಕದಲ್ಲಿ ಪಾಲ್ಗೊಂಡಿರುತ್ತಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಶ್ವ ವಿನಾಯಕ ಸಿಬಿಎಸ್ಇ ಶಾಲೆಯಲ್ಲಿ ಆ.2ರಂದು ಗಾಂಧಿ ಜಯಂತಿ ಆಚರಿಸಲಾಯಿತು. ಶಾಲಾ ಅಕಾಡೆಮಿಕ್ ಡೈರೆಕ್ಟರ್ ದಿವಾಕರ್ ಶೆಟ್ಟಿ ಹೆಚ್. ಅವರು ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪ ನಮನಗಳನ್ನು ಸಲ್ಲಿಸಿ ಗಾಂಧೀಜಿಯವರ ಸರಳ ಜೀವನ ಹಾಗೂ ತತ್ವಗಳನ್ನು ಮೈಗೂಡಿಸಿಕೊಂಡು ಜೀವನದಲ್ಲಿ ಯಶಸ್ಸು ಗಳಿಸಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಶಾಲಾ ಪ್ರಾಂಶುಪಾಲರು ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಪುಷ್ಪ ನಮನಗಳನ್ನು ಸಲ್ಲಿಸಿದರು. ಗಾಂಧಿ ಜಯಂತಿಯ ಅಂಗವಾಗಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಶಾಲಾ ವಠಾರ ಹಾಗೂ ಶಾಲಾ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶ್ರಮದಾನ ಕಾರ್ಯಕ್ರಮ ನಡೆಸಿ ಸ್ವಚ್ಛತೆಯನ್ನು ಮಾಡಿ ಸ್ವಚ್ಛ ಭಾರತ ಅಭಿಯಾನದಲ್ಲಿ ಪಾಲ್ಗೊಂಡರು. ಸಭಾ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ವಾರಿಧಿ ಕಾರ್ಯಕ್ರಮ ನಿರೂಪಿಸಿದರು, ಅದ್ನಾನ್ ಸ್ವಾಗತಿಸಿದರು, ಶಿವಾನಿ ವಂದಿಸಿದರು. ಶಿಕ್ಷಕಿಯರಾದ ಸ್ಮಿತಾ ನಾಯ್ಕ್ , ರಜನಿ ಹಾಗೂ ಮಂಜುಶ್ರೀ ಕಾರ್ಯಕ್ರಮ ಸಂಘಟಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಗಳು, ಕುಂದಾಪುರ ಇಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಅವರ 155ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಪ್ರೌಢ ಶಾಲಾ ಮುಖ್ಯ ಶಿಕ್ಷಕ ಕೃಷ್ಣ ಅಡಿಗ ಅವರು ದೀಪ ಬೆಳಗಿಸಿ ಉದ್ಘಾಟಿಸಿ, ಈ ದಿನದ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿಗಳಾದ ಶ್ರಾವಣಿ ಎಮ್. ನಾಯ್ಕ್ ಹಾಗೂ ಅವ್ನಿಕಾ ಅವರು ಗಾಂಧೀಜಿ ಮತ್ತು ಶಾಸ್ತ್ರೀಜಿ ಜಯಂತಿಯ ಕುರಿತು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜ, ಪೂರ್ವ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜ ಹಾಗೂ ಸ್ಕೌಟ್ಸ್ ಶಿಕ್ಷಕ ಸುಬ್ರಮಣ್ಯ ಅವರು ಗಾಂಧೀಜಿ ಹಾಗೂ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸಿದರು. ಸ್ಕೌಟ್ಸ್, ಗೈಡ್ಸ್, ಎನ್.ಸಿ.ಸಿ, ಶಾಲಾ ಮಕ್ಕಳು ಹಾಗೂ ಸಂಸ್ಥೆಯ ಬೋಧಕ –ಬೋಧಕೇತರ ಸಿಬ್ಬಂದಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಬುಲ್ ಬುಲ್ ಶಿಕ್ಷಕಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಗತ್ತಿನಲ್ಲಿ ಮಾನವನ ರಕ್ತಕ್ಕೆ ಯಾವುದೇ ಪರ್ಯಾಯವಿಲ್ಲ. ಒಂದೊಂದು ರಕ್ತದ ಹನಿಯು ಮೌಲ್ಯಯುತವಾಗಿದ್ದು, ಅದನ್ನು ಸೃಜಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬ ಅರ್ಹರು ಸೇವಾ ಮನೋಭಾವನೆಯನ್ನು ಬೆಳೆಸಿಕೊಂಡು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ಎಂ.ಐ.ಎ.ಎಮ್.ಎಸ್ ಬುದ್ಧ ಆಯುರ್ವೇದ ಆಡಿಟೋರಿಯಂನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ರಕ್ತನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ, ರೋರ‍್ಯಾಕ್ಟ್ ಕ್ಲಬ್, ರಾಷ್ಟ್ರೀಯ ಸೇವಾ ಯೋಜನೆ ಮುನಿಯಾಲು ಇನ್‌ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಸೈನ್ಸ್, ಆದರ್ಶ ಕಾಲೇಜ್ ಆಫ್ ನರ್ಸಿಂಗ್, ಉಡುಪಿ ಧನ್ವಂತರಿ ಕಾಲೇಜ್ ಆಫ್ ನರ್ಸಿಂಗ್, ಶ್ರೀ ಆದರ್ಶ ಕಾಲೇಜ್ ಆಫ್ ಅಲೈಡ್ ಎಂಡ್ ಪ್ಯಾರಾಮೆಡಿಕಲ್ ಸೈನ್ಸ್ ಮತ್ತು ಹೆಚ್.ಪಿ.ಆರ್ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಎಂಡ್ ಪ್ಯಾರಾಮೆಡಿಕಲ್ ಸೈನ್ಸ್ ಮಣಿಪಾಲ ಹಾಗೂ ಲಯನ್ಸ್ ಕ್ಲಬ್ ಉಡುಪಿ…
ಕುಂದಾಪ್ರ ಡಾಟ್ ಕಾಂ ಸದ್ದಿ.ಗಂಗೊಳ್ಳಿ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಹಿಂದೂ ಪದವಿ ಪೂರ್ವ ಕಾಲೇಜು ಶಿರ್ವ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲಕ ಬಾಲಕಿಯರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಥ್ರೋಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಶಮಿತ್ ಖಾರ್ವಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಅವನು ಮಂಜುನಾಥ ಖಾರ್ವಿ ಮತ್ತು ರೇಖಾ ಖಾರ್ವಿ ದಂಪತಿಯ ಪುತ್ರ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು ಉಡುಪಿಯಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ನೆಟ್ ಬಾಲ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಬಾಲಕರ ನೆಟ್ ಬಾಲ್ ತಂಡಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಆಯ್ಕೆಯಾದ ವಿದ್ಯಾರ್ಥಿಗಳು ಕ್ರಮವಾಗಿ, ಯೋಗೇಶ್, ಸ್ರಜನ್, ಮೌನೇಶ್, ನಾಗರಾಜ, ಅರ್ಜುನ್, ಪ್ರಜ್ವಲ್, ಗೌತಮ್, ಮನು, ಹ್ರತ್ವಿಕ್, ಪನ್ನಗ, ನವನೀತ.ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳಿಂದು ಶಾಲಾ ಕಾಲೇಜುಗಳಲ್ಲಿ ಶೈಕ್ಷಣಿಕ ಒತ್ತಡ ಬಹಳ ಇರುತ್ತದೆ. ಆದರೆ ಪಾಠದ ಅಧ್ಯಯನದೊಂದಿಗೆ ಪಾಠೇತರ ಚಟುವಟಿಕೆಗಳಲ್ಲೂ ಪಾಲ್ಗೊಂಡರೆ ಆತ್ಮ ವಿಶ್ವಾಸ ಬೆಳೆಯುತ್ತದೆ. ನಮ್ಮ ಭಾಷೆ, ಸಂಸ್ಕೃತಿ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಳ್ಳುವುದರೊಂದಿಗೆ ಆದಷ್ಟು ಸ್ಪರ್ಧೆಗಳಲ್ಲಿ ಪಾಲ್ಗೊಂಡು ಅನುಭವದ ವಿಕಾಸ ಮಾಡಿಕೊಳ್ಳಬೇಕು. ಕುಂದಾಪ್ರ ಕನ್ನಡದಲ್ಲಿ ಕವನ ಬರೆದ ಹಾಗೂ ಹಾಡುಗಳನ್ನು ಹಾಡಿದ ವಿದ್ಯಾರ್ಥಿಗಳಿಗೆ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಖ್ಯಾತ ಸಾಮಾಜಿಕ ಧುರೀಣ, ಸುಪರ್ ಗ್ರೇಡ್ ವಿದ್ಯುತ್ ಗುತ್ತಿಗೆದಾರರಾದ ಕೆ. ಆರ್. ನಾಯ್ಕ್ ಹೇಳಿದರು. ಭಂಡಾರ್ಕಾರ್ಸ್ ಕಾಲೇಜಿನ ರೇಡಿಯೋ ಕುಂದಾಪ್ರ 89.6 ಹಾಗೂ ’ಕುಂದಪ್ರಭ’ ಸಂಸ್ಥೆ ಆಯೋಜಿಸಿದ ಕುಂದಾಪ್ರ ಕನ್ನಡ ಸ್ವರಚಿತ ಕವನ ವಾಚನ, ಹಾಡುಗಾರಿಕೆ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಪಡೆದ ಪದವಿ, ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿ ಅವರು ಮಾತನಾಡಿದರು. ಭಂಡಾರ್ಕಾರ್ಸ್ ಕಾಲೇಜಿನ ಹಿರಿಯ ವಿಶ್ವಸ್ಥರಾದ ಕೆ. ಶಾಂತಾರಾಮ ಪ್ರಭು ಬಹುಮಾನ ವಿತರಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿಶ್ವಸ್ಥರಾದ ರಾಜೇಂದ್ರ ತೋಳಾರ್ ವಿದ್ಯಾರ್ಥಿಗಳಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದ ಗ್ರಾ.ಪಂ. ವ್ಯಾಪ್ತಿಯ ಮಡಿಕಲ್ ಮತ್ತು ಕರ್ಕಿಕಳಿ ಭಾಗದಲ್ಲಿ ಕಳೆದೊಂದು ವಾರದಿಂದ ಶಂಕಿತ ಕಾಲಾರ ರೋಗ ಕಾಣಿಸಿಕೊಂಡು ನೂರಕ್ಕೂ ಅಧಿಕ ಜನರು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ತಹಶೀಲ್ದಾರ ಪ್ರದೀಪ್ ಹಾಗೂ ಆರೋಗ್ಯ ಇಲಾಖಾ ಅಧಿಕಾರಿಗಳು ಇತ್ತೀಚಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮ ಪಂಚಾಯಿತಿಯಿಂದ ಸರಬರಾಜಾಗುತ್ತಿರುವ ಕುಡಿಯುವ ನೀರಿನಿಂದ ಈ ರೋಗ ಕಾಣಿಸಿಕೊಂಡಿದೆ ಎಂದು ಜನರು ಅನುಮಾನ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಆ ನೀರಿನ ಸ್ಯಾಂಪಲ್‌ನ್ನು ಟೆಸ್ಟ್‌ಗೆ ಕಳುಹಿಸಿ, ಅದರ ವರದಿ ಆಧರಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖಾ ಅಧಿಕಾರಿಗಳು ಜನರಿಗೆ ಭರವಸೆ ನೀಡಿದರು. ಈ ಸಂದರ್ಭ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಕಾರಿ ಭಾರತಿ, ತಾಲೂಕು ವೈದ್ಯಾಕಾರಿ ಡಾ. ರಾಜೇಶ್, ಬೈಂದೂರು ಠಾಣಾಕಾರಿ ತಿಮ್ಮೇಶ್, ಉಪ್ಪುಂದ ಗ್ರಾ.ಪಂ. ಪಿಡಿಓ ಸುದರ್ಶನ ಎಸ್., ಕಾರ್ಯದರ್ಶಿ ಗಿರಿಜಾ, ಕರಾವಳಿ ಕಾವಲುಪಡೆಯ ಸಿಬ್ಬಂದಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲುರು: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜು ಕೊಲ್ಲೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜಿನ ಬಾಲಕ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ನವೆಂಬರ ತಿಂಗಳಿನಲ್ಲಿ ಕೊಲ್ಲೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ಪ್ರಶಸ್ತಿ ವಿತರಣೆ ಸಮಾರಂಭದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಕುಮಾರ ಶೆಟ್ಟಿ, ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ವನಿತಾ ಉದಯ ಶೇರುಗಾರ್, ದೇವಳದ ಅಭಿಯಂತರರಾದ ಪ್ರದೀಪ್ ಕುಮಾರ್, ಗ್ರಾಮ ಪಂಚಾಯತ್ ಸದಸ್ಯ ಪ್ರಕಾಶ್ ಪೂಜಾರಿ, ಕಾಲೇಜಿನ ಪ್ರಾಂಶುಪಾಲರಾದ ಗೋಪಾಲಕೃಷ್ಣ ಜಿ.ಬಿ, ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ ಶೆಟ್ಟಿ ಹೊಸಮಠ, ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸಚಿನ ಕುಮಾರ್ ಶೆಟ್ಟಿ ಹುಂಚನಿ, ಬೀಸಿನಪಾರೆ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ರಾಜೀವ ಶೆಟ್ಟಿ, ಕಾಲೇಜಿನ ಸಮಾಜಶಾಸ್ತ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.01: ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗೆ ಟಿಪ್ಪರ್ ಹೊಡೆದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ ರಸ್ತೆಯ ಕಕ್ಕೇರಿ ಎಂಬಲ್ಲಿ ಇಂದು ನಡೆದಿದೆ. ಘಟನೆಯಲ್ಲಿ ಮೃತಪಟ್ಟ ವಿದ್ಯಾರ್ಥಿಯನ್ನು ನಾಗೂರು ನಿವಾಸಿ ಕೋಟೇಶ್ವರದ ಕಾಳಾವರ ವರದರಾಜ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಧನುಷ್ (19) ಎಂದು ಗುರುತಿಸಲಾಗಿದೆ. ಕಾಲೇಜು ಮುಗಿಸಿ ಕೋಟೇಶ್ವರದ ಕಡೆಗೆ ರಸ್ತೆ ಬದಿಯ ಇಂಟರ್ ಲಾಕ್ ಮೇಲೆ ನಡೆದುಕೊಂಡು ತೆರಳುತ್ತಿದ್ದ ವಿದ್ಯಾರ್ಥಿಯ ಮೇಲೆ ಹಿಂದಿನಿಂದ ಬಂದ ಟಿಪ್ಪರ್ ಕಾರನ್ನು ತಪ್ಪಿಸಲು ತೀರಾ ಬಲಬದಿಗೆ ಬಂದು ಧನುಷನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಧನುಷ್ ಲಾರಿಯಡಿಗೆ ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಧನುಷ್ ತನ್ನ ತಾಯಿಯೊಂದಿಗೆ ನಾಗೂರಿನಲ್ಲಿ ವಾಸಮಾಡುತ್ತಿದ್ದ. ತಂದೆ ಬಾರ್ಕೂರಿನಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ಮಂಗಳವಾರ ಮಧ್ಯಾಹ್ನ ಕಾಲೇಜು ಮುಗಿಸಿ ಧನುಷ್ ಮನೆಗೆ ವಾಪಾಸ್ಸಾಗುತ್ತಿದ್ದ ವೇಳೆ ಘಟನೆ ನಡೆದಿದೆ. ಕುಂದಾಪುರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ…
