Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟುವುದರ ಮೂಲಕ ರೇಬಿಸ್ ರೋಗ ನಿಯಂತ್ರಣಕ್ಕೆ ಸ್ಥಳೀಯ ಸಂಸ್ಥೆಯವರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಾಣಿ ಸಂತಾನ ನಿಯಂತ್ರಣ, ಅನುಷ್ಠಾನ ಮೇಲ್ವಿಚಾರಣೆ ಸಮಿತಿ ರಚನೆ ಮತ್ತು ಸ್ಥಳೀಯ ಮಟ್ಟದ ಸಮಿತಿ ರಚನೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ನಾಯಿ ಕಡಿತದ ಪ್ರಕರಣಗಳಿಗೆ ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ಸಮುದಾಯ ಆರೊಗ್ಯ ಕೇಂದ್ರಗಳಲ್ಲಿ, ತಾಲೂಕು ಆಸ್ಪತ್ರೆ ಮತ್ತು ಜಿಲ್ಲಾ ಆಸ್ಪತ್ರೆಯಲ್ಲಿ ಪೂರ್ಣ ಪ್ರಮಾಣದ ಲಸಿಕೆಗಳು ಲಭ್ಯವಿರುವಂತೆ ನೋಡಿಕೊಳ್ಳಬೇಕು ಎಂದರು. ಜಿಲ್ಲೆಯಲ್ಲಿ ಸಂತಾನ ಹರಣ ಶಸ್ತ್ರಚಿಕಿತ್ಸೆ ಅಡಿಯಲ್ಲಿ ಪುರಸಭೆ, ಪಟ್ಟಣ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್‌ನಲ್ಲಿ 3007 ನಾಯಿಗಳಿಗೆ, ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ 447 ನಾಯಿಗಳು ಸೇರಿದಂತೆ ಒಟ್ಟಾರೆ 3454 ನಾಯಿಗಳಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶದ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿ ಸ್ವಾಧೀನ ಪ್ರಕ್ರಿಯೆಯನ್ನು ಆದ್ಯತೆಯ ಮೇಲೆ ಕೈಗೊಂಡು ಕೈಗಾರಿಕಾ ಪ್ರದೇಶವನ್ನು ವಿಸ್ತೀರ್ಣ ಮಾಡಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಕ್ಲಸ್ಟರ್ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ಜಿಲ್ಲಾ ಮಟ್ಟದ ರಫ್ತು ಉತ್ತೇಜನಾ ಸಮಿತಿ ಸಭೆ ಹಾಗೂ ಪ್ರಧಾನಮಂತ್ರಿಗಳ ಉದ್ಯೋಗ ಸೃಜನಾ ಯೋಜನೆಯ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಈಗಾಗಲೇ ಕೆರೆಬೆಟ್ಟು ಗ್ರಾಮದಲ್ಲಿ 31.28 ಎಕ್ರೆ, ಶಿವಪುರ ಗ್ರಾಮದಲ್ಲಿ 45.75 ಎಕ್ರೆ ಸೇರಿದಂತೆ ಒಟ್ಟು 77.03 ಎಕ್ರೆ ಖಾಸಗಿ ಜಮೀನನ್ನು ಭೂ ಮಾಲೀಕರಿಂದ ಪರಿಹಾರ ಧನವನ್ನು ಪಾವತಿಸಿ, ನಿಯಮಾನುಸಾರ ಸ್ವಾಧೀನಪಡಿಸಿಕೊಳ್ಳಲಾಗಿದೆ. ಆದರೆ, 36.56 ಎಕ್ರೆ ಸರ್ಕಾರಿ ಜಮೀನು ಮಂಜೂರಾತಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಂಗಳೂರು ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಚಾಂಪಿಯನ್ ಆಗಿದೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಆಶ್ರಯದಲ್ಲಿ ಮಂಗಳೂರಿನ ಕಣಚೂರ್ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪಂದ್ಯಾಟ ನಡೆದಿದ್ದು, ಫೈನಲ್ ನಲ್ಲಿ ಮಂಗಳೂರಿನ ಕರಾವಳಿ ಫಾರ್ಮಸಿ ಕಾಲೇಜಿನ ವಿರುದ್ಧ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ಅಲೈಡ್ ಹೆಲ್ತ್ ಸೈನ್ಸಸ್ 2-0 ಅಂತರದಿಂದ ಗೆಲುವು ಸಾಧಿಸಿದೆ. ಅತ್ಯುತ್ತಮ ಹೊಡೆತಗಾರ ಪ್ರಶಸ್ತಿಗೆ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ನ ವಿದ್ಯಾರ್ಥಿ ರಕ್ಷಿತ್ ಎಸ್. ಕೆ ಭಾಜನರಾಗಿದ್ದಾರೆ . ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಡೆಯಲಿರುವ ಅಂತರ ವಲಯ ಟೂರ್ನಿಗೆ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಅರ್ಹತೆಯನ್ನು ಪಡೆದಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಸಪ್ಟೆಂಬರ್ 29 ರಂದು ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಕಡ್ಡಾಯ ಕನ್ನಡ ಭಾಷೆ ಪರೀಕ್ಷೆ ಜರುಗಲಿದ್ದು, ಪರೀಕ್ಷೆಯನ್ನು ಪಾರದರ್ಶಕವಾಗಿ ಯಾವುದೇ ಅವ್ಯವಹಾರಗಳಿಗೆ ಆಸ್ಪದ ನೀಡದೇ ಸುವ್ಯವಸ್ಥಿತವಾಗಿ ಜರುಗಿಸಬೇಕೆಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚಿಸಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇರ ನೇಮಕಾತಿಗೆ ನಡೆಸುವ ಕನ್ನಡ ಭಾಷೆ ಪರೀಕ್ಷೆಗೆ ಸಂಬಂಧಿಸಿದಂತೆ ಜಿಲ್ಲಾ ಕೇಂದ್ರದಲ್ಲಿ ಮೇಲ್ವಿಚಾರಣೆ ನಡೆಸಲು ನೇಮಕ ಮಾಡಲಾದ ತಂಡಗಳು ಕೈಗೊಳ್ಳಬೇಕಾದ ಪೂರ್ವ ತಯಾರಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ್ಯಾದಂತ 17 ಪರೀಕ್ಷಾ ಕೇಂದ್ರಗಳಲ್ಲಿ ಸಪ್ಟೆಂಬರ್ 29 ರಂದು ಪರೀಕ್ಷೆ ಜರುಗಲಿದ್ದು ಕಡ್ಡಾಯ ಕನ್ನಡ ಭಾಷೆ ಪರೀಕ್ಷೆ ಬೆಳಿಗ್ಗೆ 10.30 ರಿಂದ ಮ. 12.30 ರವರೆಗೆ ಸುಗಮವಾಗಿ, ಯಾವುದೇ ಲೋಪದೋಷಗಳಿಲ್ಲದಂತೆ ನ್ಯಾಯಸಮ್ಮತವಾಗಿ ಹಾಗೂ ನಿಷ್ಪಕ್ಷಪಾತವಾಗಿ ಪರೀಕ್ಷೆ ನಡೆಸಬೇಕು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೀಡಿರುವ ಸೂಚನೆಗಳನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಮಾಜದಲ್ಲಿನ ಅಸ್ಥಿರತೆಯಿಂದಾಗಿ ಬಾಲ್ಯವಿವಾಹ, ಬಾಲಕಾರ್ಮಿಕ, ದೌರ್ಜನ್ಯ ಸೇರಿದಂತೆ ಮತ್ತಿತರ ಪ್ರಕರಣಗಳು ಕಂಡುಬರುತ್ತಿದ್ದು, ಅವುಗಳನ್ನು ಎದುರಿಸಿ, ಪ್ರಕರಣಗಳು ಆಗದಂತೆ  ತಡೆಯುವ ನಿಟ್ಟಿನಲ್ಲಿ ಯುವಜನತೆ ಶಕ್ತಿವಂತರಾಗಬೇಕು ಎಂದು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್ ಗಂಗಣ್ಣವರ್ ಹೇಳಿದರು. ಅವರು ಅಂದು ನಗರದ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರಕ್ಷಕ ಇಲಾಖೆ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಬೇಟಿ ಬಚಾವೋ ಬೇಟಿ ಪಡಾವೋ ಅಭಿಯಾನದ ಪ್ರಯುಕ್ತ ನ್ಯಾಯಾಲಯ ಹಾಗೂ ಪೊಲೀಸ್ ಠಾಣೆ ಕಾರ್ಯವೈಖರಿ ವೀಕ್ಷಣೆ ಮತ್ತು ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಠಾಣೆ ಹಾಗೂ ನ್ಯಾಯಾಲಯಗಳಂತ ಆಡಳಿತ ವ್ಯವಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ದೈನಂದಿನ ಪತ್ರಿಕೆಗಳಲ್ಲಿ ಪ್ರಕಟವಾಗುವ ಲೈಂಗಿಕ ಬಲತ್ಕಾರ, ಬಾಲ್ಯವಿವಾಹ, ಬಾಲಕಾರ್ಮಿಕ ಪ್ರಕರಣಗಳು ಆಳವಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ:  ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಕುಂದಾಪುರದ ಕುಂದಪ್ರಭ ಪತ್ರಿಕೆ ಸಂಪಾದಕ ಯು.ಎಸ್. ಶೆಣೈ (ಯು.ಸುರೇಂದ್ರ ಶೆಣೈ) ಅವರನ್ನು ಆಯ್ಕೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸುಮಾರು 40 ವರ್ಷಗಳ ಅನುಭವ ಹೊಂದಿರುವ ಯು.ಎಸ್.‌ ಶೆಣೈ ಅವರು ಮೈಸೂರು ವಿ.ವಿ.ಯಿಂದ ಪತ್ರಿಕೋದ್ಯಮ ತರಬೇತಿಯನ್ನು ಪಡೆದಿದ್ದರು. 1980ರಲ್ಲಿ ನವಭಾರತ ಪತ್ರಿಕೆಯ ಪತ್ರಿಕಾ ವರದಿಗಾರರಾಗಿ ಸೇವೆಯನ್ನು ಆರಂಭಿಸಿ ಇಂಡಿಯನ್ ಎಕ್ಸಪ್ರೆಸ್, ಮುಂಗಾರು, ಹೊಸದಿಗಂತ ಪತ್ರಿಕೆಯಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು. 1991ರಲ್ಲಿ ಕುಂದಾಪುರ ತಾಲೂಕಿನ ಪ್ರಥಮ ಪತ್ರಿಕೆ ಕುಂದಪ್ರಭ ವಾರಪತ್ರಿಕೆಯನ್ನು ಪ್ರಾರಂಭಿಸಿ ಹಲವು ಯುವಕರಿಗೆ ಪತ್ರಕರ್ತರಾಗುವಂತೆ ಪ್ರೇರಣೆ ನೀಡಿದರು. ಉಡುಪಿ ಜಿಲ್ಲೆಯಾದ ಬಳಿಕ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿಯಾಗಿದ್ದರು. ಕುಂದಪ್ರಭ ಟ್ರಸ್ಟ್ ಹಾಗೂ ಜೈ ಕೊಂಕಣಿ ಸಂಸ್ಥೆಯ ಅಧ್ಯಕ್ಷರಾಗಿರುವ ಇವರು ಪಂಚಗಂಗಾವಳಿ ಉತ್ಸವ ಸಮಿತಿಯ ಸಂಚಾಲಕರಾಗಿ ದುಡಿದಿದ್ದರು. ಅಖಿಲ ಭಾರತ ಕೊಂಕಣಿ ಪರಿಷತ್ ಸಮ್ಮೇಳನ, ರಾಜ್ಯ ಮಟ್ಟದ ಕೊಂಕಣಿ ಸಮ್ಮೇಳನ, ಕುಂದ ಕರಾವಳಿ ಉತ್ಸವ, ಪಂಚಗಂಗಾವಳಿ ಉತ್ಸವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಮಿಟ್ಟೌನ್ ಕುಂದಾಪುರ ವತಿಯಿಂದ ಪ್ರಾರ್ಥಮಿಕ ಆರೋಗ್ಯ ಕೇಂದ್ರ ಕೋಟೇಶ್ವರದಲ್ಲಿ ಗ್ರಾಮ ಪಂಚಾಯತ್‌ ಕೋಟೇಶ್ವರ ಹಾಗೂ ಪಾರ್ವತಿ ಮಹಾಬಲ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆ ಮಂದಾರ್ತಿ ಇವರ ಸಹಯೋಗದೊಂದಿಗೆ ಉಚಿತ  ಕಣ್ಣಿನ ತಪಾಸಣೆ ಮತ್ತು ಶಸ್ತ್ರ  ಚಿಕಿತ್ಸಾ ಶಿಬಿರ ಹಾಗೂ ವಿಶ್ವ ರೇಬಿಸ್ ದಿನಾಚರಣೆಯ ಅಂಗವಾಗಿ  ರೇಬಿಸ್ ಹಾಗೂ ಕಾಲರಾ ರೋಗ ತಡೆಗಟ್ಟುವಿಕೆಯ ಮಾಹಿತಿ ಕಾರ್ಯಗಾರ ನಡೆಸಲಾಯಿತು. ರೋಟರಿ ಮಿಡ್ ಟೌನ್ ಅಧ್ಯಕ್ಷ ಶೇಖರ್ ಎನ್ ಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ವೈದ್ಯಾಧಿಕಾರಿ ಡಾಕ್ಟರ್ ಪೂರ್ಣಿಮಾ ಶೇಟ್ ಮತ್ತು ಡಾ. ಮನೋಜ್ ಭಟ್ ಅವರು ಮಾಹಿತಿ ನೀಡಿದರು. ಕ್ಲಬ್ ನ ಕಾರ್ಯದರ್ಶಿ ಉದಯ್ ಶೆಟ್ಟಿ ಆಜ್ರಿ, ಗೌತಮ್ ಹೆಗ್ಢೆ, ಸುನಿಲ್ ಕುಮಾರ್ ಶೆಟ್ಟಿ ಹೇರಿಕುದ್ರು, ದಯಾನಂದ ಶೆಟ್ಟಿ ಕಟ್‌ಕೇರಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ,ಸೆ.27: ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ (85) ಅವರು ವಯೋಸಹಜ ಕಾಯಿಲೆಯಿಂದಾಗಿ ತಮ್ಮ ಬೆಂಗಳೂರಿನ ನಿವಾಸದಲ್ಲಿ ಇಂದು ನಿಧನರಾಗಿದ್ದಾರೆ. ಎಂಜಿನಿಯರಿಂಗ್ ಸ್ನಾತಕೋತ್ತರ ಪದವೀಧರರಾದ ಕೆ. ಲಕ್ಷ್ಮೀನಾರಾಯಣ ಅವರು, ಶ್ರೀ ಲಕ್ಷ್ಮಿಕನ್ಸ್ಟ್ರಕ್ಷನ್ ಸಂಸ್ಥೆಯನ್ನು ಸ್ಥಾಪಿಸಿ ಉದ್ಯಮಿಯಾಗಿ ಖ್ಯಾತಿಗಳಿಸಿದ್ದರು. ಮುಂದೆ ರಾಜಕೀಯದಲ್ಲಿ ಆಸಕ್ತಿ ಹೊಂದಿ ಮೂರು ಭಾರಿ ಬೈಂದೂರು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. 2 ಬಾರಿ ಸೋಲು ಕಂಡಿದ್ದ ಅವರು 2008ರಲ್ಲಿ ಜಯಗಳಿಸಿ ತನ್ನ ಶಾಸಕತ್ವದ ಅವಧಿಯಲ್ಲಿ ಬೈಂದೂರು ಕ್ಷೇತ್ರದ ಅಭಿವೃದ್ಧಿಗಾಗಿ ಅವಿರತವಾಗಿ ಶ್ರಮಿಸಿದ್ದಾರೆ. ಕುಂದಾಪ್ರ ಡಾಟ್‌ ಕಾಂ. ಹಲವು ವರ್ಷಗಳಿಂದ ಬೇಡಿಕೆಯಲ್ಲಿದ್ದ ಬೈಂದೂರು ತಾಲೂಕು ರಚನೆಯಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದರು. ತಮ್ಮ ಅವಧಿಯಲ್ಲಿ ಹೆಚ್ಚಿನ ಅನುದಾನವನ್ನು ಕ್ಷೇತ್ರಕ್ಕೆ ತಂದಿದ್ದ ಅವರು, ಗುಂಡೂರು ಡ್ಯಾಂ, ಮರವಂತೆ ಬಂದರು, ಕೊಡೇರಿ ಕಿರು ಬಂದರು, ಮರವಂತೆ – ಪಡುಕೋಣೆ ಸೇತುವೆ, ಕನ್ನಡಕುದ್ರು ಸೇತುವೆ, ನಿರ್ಮಾಣಕ್ಕೆ ನಾಂದಿ ಹಾಡಿದ್ದರು. ಅಧಿಕಾರಾವಧಿಯಲ್ಲಿ ಸ್ವಜನ ಪಕ್ಷಪಾತ, ಭ್ರಷ್ಟಾಚಾರದ ಆರೋಪಗಳಿಗೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೆ ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಲು, ಮೂಲಭೂತ ಸೌಕರ್ಯ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಅನಿರ್ದಿಷ್ಠಾವಧಿ ಪ್ರತಿಭಟನೆಯ ಭಾಗವಾಗಿ ಗುರುವಾರ ಬೈಂದೂರು ತಾಲೂಕು ಕಚೇರಿ ಮುಂಭಾಗ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಬೈಂದೂರು ತಾಲೂಕು ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಗಣೇಶ ಮೇಸ್ತ ಮಾತನಾಡಿ, ಸರಕಾರದ ಹತ್ತಾರು ಹೊಸ ತಂತ್ರಾಂಶಗಳ ಕೆಲಸವನ್ನು ಯಾವುದೆ ಸೌಲಭ್ಯ ನೀಡದೆ ನಿರ್ವಹಿಸುವ ಜೊತೆಗೆ ಸಿಬಂದಿಗಳ ಕೊರತೆ ಕಂದಾಯ ನಿರ್ವಹಣೆ ಮೊದಲಾದವುಗಳ ಗ್ರಾಮ ಲೆಕ್ಕಾಧಿಕಾರಿಗಳ ಮೇಲೆ ಹೇರಲಾಗಿದೆ. ಜಿಲ್ಲೆಯಲ್ಲಿ ಗ್ರಾಮ ಆಡಳಿತಾಧಿಕಾರಿಗಳಿಗೆ ಐದಾರು ಗ್ರಾಮಗಳ ಜವಾಬ್ದಾರಿ ನೀಡಿರುವುದರಿಂದ ಸಾರ್ವಜನಿಕರಿಗೆ ಸಮರ್ಪಕ ಸೇವೆ ನೀಡಲು ಸಾದ್ಯವಾಗದೆ ಒತ್ತಡದ ಬದುಕು ನಡೆಸುವಂತಾಗಿದೆ. ಹೀಗಾಗಿ ನಮ್ಮ ಬೇಡಿಕೆ ಶೀಘ್ರವಾಗಿ ಈಡೇರಿಸುವವರೆಗೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತಿದೆ ಎಂದರು. ► ಕುಂದಾಪುರ:…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೆ ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಲು, ಮೂಲಭೂತ ಸೌಕರ್ಯ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಅನಿರ್ದಿಷ್ಠಾವಧಿ ಪ್ರತಿಭಟನೆಯ ಭಾಗವಾಗಿ ಗುರುವಾರ ಕುಂದಾಪುರ ತಾಲೂಕು ಕಚೇರಿ ಮುಂಭಾಗ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ಪ್ರತಿಭಟನೆ ನಡೆಸಿದರು. ಕಂದಾಯ ಇಲಾಖೆಯಿಂದ ನಿರಂತರವಾಗಿ ಸರ್ಕಾರದಿಂದ ಅಭಿವೃದ್ದಿಪಡಿಸಿರುವ ಹಕ್ಕುಪತ್ರ, ಆಧಾರ್ ಸೀಡ್, ಬೆಳೆ ಕಟಾವು ಮೊಬೈಲ್ ಆಪ್, ಭೂಮಿ, ದಿಶಾಂಕ್ ಸೇರಿದಂತೆ ಸುಮಾರು 21 ಎಲ್ಲಾ ವೆಬ್/ಮೊಬೈಲ್ ತಂತ್ರಾಂಶಗಳ ಮೂಲಕ ಹಾಗೂ ಸಿ-ವೃಂದದ ನೌಕರರ ಹತ್ತು ಪಟ್ಟು ಕೆಲಸಗಳನ್ನು ನಿರ್ವಹಿಸುತ್ತಿದ್ದು, ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳ ವೇತನ ಶ್ರೇಣಿ ನೀಡಬೇಕು. ► ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಠಾವಧಿ ಪ್ರತಿಭಟನೆ- https://kundapraa.com/?p=77240 . ಕಛೇರಿ, ಪೋನ್, ಕಂಪ್ಯೂಟರ್ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು, ಸೇವಾ…

Read More