ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: “ಲೋಕ ದೃಷ್ಟಿ ಸಾಹಿತ್ಯದ ಮೂಲ ಸೆಲೆ. ಜೀವನಾನುಭವದಿಂದ ಲೋಕದೃಷ್ಟಿಯನ್ನು ಸಾಧ್ಯವಾಗಿಸಿಕೊಳ್ಳಬಹುದು. ಭಾಷೆ ಎಂಬುದು ಸಮೂಹದಿಂದ ಸಿದ್ಧಿಯಾಗುತ್ತದೆ. ಬದುಕನ್ನು ಪ್ರತಿಫಲಿಸಿದಾಗ ಯಾವುದೇ ಸಾಹಿತ್ಯವು ಮೌಲ್ಯಯುತವಾಗುತ್ತದೆ. ಹೆಚ್ಚಿನ ಓದು ನಮ್ಮ ಮನಸ್ಸುಗಳನ್ನು ಅರಳಿಸುತ್ತದೆ. ಕಲ್ಪನೆಗಳನ್ನು ಗರಿಗೆದರಿಸಿಕೊಂಡಾಗ ಸಾಹಿತ್ಯ ರಚನೆ ಸಾಧ್ಯ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರೂಪಿಸಿಕೊಳ್ಳುವುದಕ್ಕೆ ಬರವಣಿಗೆ ಸಶಕ್ತ ಮಾಧ್ಯಮವಾಗಿದೆ” ಎಂದು ಸಾಂಸ್ಕೃತಿಕ ಚಿಂತಕ ತಿಮ್ಮಪ್ಪ ಗುಲ್ವಾಡಿ ಹೇಳಿದರು. ಅವರು ಬುಧವಾರ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಸಂಚಿಕೆ ‘ದೃಷ್ಟಿ’ ಯನ್ನು ಬಿಡುಗಡೆ ಮಾಡಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಜಿ.ಎಸ್.ವಿ.ಎಸ್. ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ, ಕಾಲೇಜಿನ ಕಾರ್ಯದರ್ಶಿ ಎನ್. ಸದಾಶಿವ ನಾಯಕ್, ಸಂಪಾದಕ ಮಂಡಳಿಯ ಸದಸ್ಯ ನಾರಾಯಣ ಇ. ನಾಯ್ಕ್, ವಿದ್ಯಾರ್ಥಿನಿ ತನಿಷಾ ಉಪಸ್ಥಿತರಿದ್ದರು. ನಿರ್ವಾಹಕ ಸಂಪಾದಕ ಎಚ್. ಸುಜಯೀಂದ್ರ ಹಂದೆ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಭೂಮಿಕ ವಂದಿಸಿದರು. ಆಂಗ್ಲ ಭಾಷಾ ಉಪನ್ಯಾಸಕಿ ಸುಪ್ರೀತ ಆಚಾರ್ಯ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕೃಷಿ ಕೂಲಿ ಕೆಲಸಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾಗಿ ಎರಡು ದಿನಗಳ ಬಳಿಕ ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಕುಂದಬಾರಂದಾಡಿ ಗ್ರಾಮದಿಂದ ಬುಧವಾರ ವರದಿಯಾಗಿದೆ. ಕುಂದಬಾರಂದಾಡಿ ಗ್ರಾಮದ ಮಕ್ಕಿಮನೆ ನಿವಾಸಿ ವಸಂತ ಬಂಗೇರ (56) ಮೃತಪಟ್ಟ ವ್ಯಕ್ತಿ. ಜೂ. 29ರಂದು ಬೆಳಗ್ಗೆ ದೇವಲ್ಕುಂದಕ್ಕೆ ಕೃಷಿ ಕೆಲಸಕ್ಕೆಂದು ತೆರಳಿದ್ದ ಅವರು ಮನೆಗೆ ಮರಳಿರಲಿಲ್ಲ. ಕುಟುಂಬದವರು ವಿವಿಧೆಡೆ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಬುಧವಾರ ಬೆಳಗ್ಗೆ ದೇವಲ್ಕುಂದ ಬಾವಿಯಲ್ಲಿ ಅವರ ಶವ ಪತ್ತೆಯಾಗಿದೆ. ಬಾವಿಯ ಸಮೀಪದ ಕಾಲುದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿರಬೇಕು ಎಂದು ಸಂಶಯಿಸಲಾಗಿದೆ. ಮೃತರ ಸಂಬಂಧಿ ದಿವ್ಯಶ್ರೀ ನೀಡಿದ ದೂರಿನಂತೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪತ್ರಿಕೆಗಳು ಸಾಮಾಜಿಕ ಜಾಗೃತಿ ಮೂಡಿಸುವಲ್ಲಿ ಮಹತ್ವದ ಪಾತ್ರವಹಿಸುತ್ತವೆ ಎಂದು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಹೇಳಿದರು. ಅವರು ಬುಧವಾರ ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜು ಮತ್ತು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ “ಪತ್ರಿಕಾ ದಿನಾಚರಣೆ” ಕಾರ್ಯಕ್ರದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಪತ್ರಿಕೆಗಳು ಆರಂಭವಾದಾಗಿನಿಂದ ಸಾಮಾಜಿಕ ಜಾಗೃತಿ ಜೊತೆಗೆ ಅಭಿವೃದ್ಧಿಪರ ಚಿಂತನೆ ಹುಟ್ಟುಹಾಕುವಲ್ಲಿ ಯಶಸ್ವಿಯಾಗಿದೆ. ಅಲ್ಲದೇ ಐತಿಹಾಸಿಕ ಹಿನ್ನೆಲೆಯಲ್ಲಿ ಪತ್ರಿಕೆಗಳು ಭಾರತೀಯ ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭದಲ್ಲಿ ಮಹತ್ವದ ಪಾತ್ರ ವಹಿಸಿತ್ತು. ಜನರಲ್ಲಿ ಸ್ವಾತಂತ್ರ್ಯದ ಅದಮ್ಯತೆಯನ್ನು ಹುಟ್ಟು ಹಾಕಿತ್ತು. ಪ್ರಸ್ತುತ ಸಾಮಾಜಿಕ ಮಾಧ್ಯಮಗಳ ನಡುವೆ ಪತ್ರಿಕೆಗಳು ತಮ್ಮ ಸತ್ಯಾಸತ್ಯತೆ ಕಾಪಾಡಿಕೊಂಡು ಬರುತ್ತಿದೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತರಾಗಿ ಆಗಮಿಸಿದ್ದ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರೋಜ ಎಮ್. ಅವರು ಮಾತನಾಡಿ, ಪತ್ರಿಕೆಗಳ ನಮ್ಮಲ್ಲಿ ಜ್ಞಾನ ಮತ್ತು ವಿಮರ್ಶೆಯ ಗುಣಗಳನ್ನು ಬೆಳೆಸಿಕೊಳ್ಳಲು ನೆರವಾಗುತ್ತದೆ ಎಂದು ಹೇಳಿದರು. ಕಾರ್ಯಕ್ರಮದ ಉಪಸ್ಥಿತರಿದ್ದ ಪತ್ರಿಕೋದ್ಯಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾ ಗೃಹರಕ್ಷಕ ದಳದ ಕುಂದಾಪುರ ಘಟಕದ ಗೃಹರಕ್ಷಕಿ ಸ್ನೇಹಾ ಜೆ. ಮೆಟಲ್ ಸಂಖ್ಯೆ- 156 ಅವರು ಬೆಂಗಳೂರಿನ ಗೃಹರಕ್ಷಕ ಮತ್ತು ಪೌರರಕ್ಷಣಾ ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿ ಜೂನ್ 1 ರಿಂದ 25ರ ವರೆಗೆ ನಡೆದ ರಾಜ್ಯ ಮಟ್ಟದ “ಗೃಹರಕ್ಷಕರ ಅಧಿಕಾರಿಗಳ ತರಬೇತಿ” (ಮಹಿಳೆಯರಿಗೆ) ಯಲ್ಲಿ ಪ್ರಥಮ ಸ್ಥಾನ ಪಡೆಯುವುದರೊಂದಿಗೆ ಚಿನ್ನದ ಪದಕ ಪಡೆದಿರುತ್ತಾರೆ ಎಂದು ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್ಡಿಎ) ಆಯ್ಕೆ ಪ್ರಕ್ರಿಯೆಯಲ್ಲಿ ಪಠ್ಯಜ್ಞಾನಕ್ಕಿಂತ ಅಭ್ಯರ್ಥಿಗಳ ನಾಯಕತ್ವ ಗುಣ, ವ್ಯಕ್ತಿತ್ವ, ತಾರ್ಕಿಕ ಚಿಂತನೆ ಮತ್ತು ನಿರ್ಧಾರ ಕೈಗೊಳ್ಳುವ ಸಾಮರ್ಥ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ಮಂಗಳೂರು ಸೇನಾ ನೇಮಕಾತಿ ಕಚೇರಿಯ ನಿರ್ದೇಶಕ ಕರ್ನಲ್ ಸೋಮು ಜಿ. ಮಹಾರಾಜನ್ ಹೇಳಿದರು. ಅವರು ಆಳ್ವಾಸ್ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ಎನ್ಡಿಎ ಆಕಾಂಕ್ಷಿ ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರ್ವೀಸಸ್ ಸೆಲೆಕ್ಷನ್ ಬೋರ್ಡ್ (ಎಸ್ಎಸ್ಬಿ) ಆಯ್ಕೆ ಪ್ರಕ್ರಿಯೆಯು ಕೇವಲ ಶೈಕ್ಷಣಿಕ ಸಾಧನೆಯನ್ನು ಪರೀಕ್ಷಿಸುವುದಿಲ್ಲ. ಅಭ್ಯರ್ಥಿಯ ವ್ಯಕ್ತಿತ್ವ, ಭಾವನಾತ್ಮಕ ಸ್ಥಿರತೆ, ಸಂವಹನ ಕೌಶಲ್ಯ, ಸಮಸ್ಯೆಗಳನ್ನು ವಿಶ್ಲೇಷಿಸುವ ಸಾಮರ್ಥ್ಯ ಹಾಗೂ ಒತ್ತಡದ ಸಂದರ್ಭಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವ ಗುಣಗಳನ್ನು ವಿವಿಧ ಹಂತಗಳಲ್ಲಿ ಮೌಲ್ಯಮಾಪನ ಮಾಡಲಾಗುತ್ತದೆ. ಮನೋವೈಜ್ಞಾನಿಕ ಪರೀಕ್ಷೆಗಳು, ಗುಂಪು ಚರ್ಚೆ, ನಾಯಕತ್ವ ಚಟುವಟಿಕೆಗಳು, ಸಮಸ್ಯೆ ಪರಿಹಾರ ಕಾರ್ಯಗಳು ಮತ್ತು ವೈಯಕ್ತಿಕ ಸಂದರ್ಶನಗಳ ಮೂಲಕ ಅಭ್ಯರ್ಥಿಯ ಆಲೋಚನಾ ವಿಧಾನ, ನಾಯಕತ್ವ ಸಾಮರ್ಥ್ಯ, ಸಂವಹನ ಕೌಶಲ್ಯ, ತಂಡದೊಂದಿಗೆ ಕಾರ್ಯನಿರ್ವಹಿಸುವ ಮನೋಭಾವ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳಲ್ಲಿ ಆಸಕ್ತಿ, ಛಲ ಮತ್ತು ಪ್ರಯತ್ನ ಎಂಬುದಿದ್ದರೆ ಯಾವುದನ್ನೂ ಬೇಕಾದರು ಸಾಧಿಸಬಹುದು. ಎಳವೆಯಲ್ಲಿಯೇ ಶಿಸ್ತನ್ನು ಮೈಗೂಡಿಸಿಕೊಂಡು ಶಾಲೆಯ ಎಲ್ಲಾ ಚಟುವಟಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದರೆ ಭವಿಷ್ಯದಲ್ಲಿ ಉತ್ತಮ ವ್ಯಕ್ತಿಯಾಗಿ ಹೊರಹೊಮ್ಮಲು ಸಾಧ್ಯವಿದೆ ಎಂದು ನಿವೃತ್ತ ಶಿಕ್ಷಣಾಧಿಕಾರಿ ಸೀತಾರಾಮಶೆಟ್ಟಿ ಕೆದೂರು ನುಡಿದರು. ಅವರು ಬುಧವಾರ ಇಲ್ಲಿನ ಕೆದೂರು ಸರಕಾರಿ ಪ್ರೌಢಶಾಲೆಯ ವಿವಿಧ ಸಂಘಗಳನ್ನು ಮತ್ತು ವಿದ್ಯಾರ್ಥಿ ಸಂಸತ್ತನ್ನು ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯರಾದ ಉದಯ ಕುಮಾರ್ ಶೆಟ್ಟಿ ಅವರು ವಿದ್ಯಾರ್ಥಿ ಸರಕಾರದ ಮಂತ್ರಿಗಳಿಗೆ ಪ್ರಮಾಣ ವಚನ ಬೋಧಿಸಿ, ಶಾಲಾ ಸಂಸತ್ ಎನ್ನುವುದು ಪ್ರಜಾಪ್ರಭುತ್ವ ಸರಕಾರಕ್ಕೆ ತಳಹದಿ. ಅದನ್ನು ಅರಿತು ಕ್ರಿಯಾಶೀಲರಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು. ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ದೀಪಾ ಶೆಟ್ಟಿ, ಸದಸ್ಯರಾದ ವಸಂತಿ, ಮಲ್ಲಿಕಾ ಉಪಸ್ಥಿತರಿದ್ದರು. ಶಿಕ್ಷಕರಾದ ರಾಜೇಂದ್ರ ಶೆಟ್ಟಿ, ಅನಿತಾ, ಗೀತಾ, ವಸುಧಾ, ರತ್ನಾ, ಸಂಧ್ಯಾ ಸಹಕರಿಸಿದರು. ಮನೋಹರ್ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ದೀಪಾವತಿ ಸ್ವಾಗತಿಸಿ, ರಮೇಶ್ ಕುಲಾಲ್ ಎನ್. ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಮಾಜದ ಸಮಸ್ಯೆಗಳನ್ನು ಮುನ್ನೆಲೆಗೆ ತರುವುದು ಪತ್ರಕರ್ತರ ಕರ್ತವ್ಯ. ವ್ಯವಸ್ಥೆಯ ಲೋಪದೋಷಗಳನ್ನು ಸಮಾಜದ ಮುಂದೆ ಇಡುವುದು ಪತ್ರಿಕೋದ್ಯಮದ ಪ್ರಮುಖ ಕೆಲಸವಾಗಿದೆ. ಸಾಮಾಜಿಕ ಜಾಲತಾಣಗಳ ಅಬ್ಬರದ ನಡುವೆಯೂ ಮಾಧ್ಯಮಗಳು ಸತ್ಯವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕು ಎಂದು ಮಣಿಪಾಲ ಇನ್ಸಿಟ್ಯೂಟ್ ಆಫ್ ಕಮ್ಯುನಿಕೇಶನ್ನ ನಿರ್ದೇಶಕಿ ಡಾ. ಶುಭಾ ಎಚ್.ಎಸ್. ಹೇಳಿದರು. ಅವರು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪ್ರತಿಕಾ ಭವನ ಸಮಿತಿ ಹಾಗೂ ಉಡುಪಿ ಲೋಂಬಾರ್ಡ್ ಮೆಮೋರಿಯಲ್ (ಮಿಷನ್) ಆಸ್ಪತ್ರೆಯ ಇವುಗಳ ಸಹಯೋಗದೊಂದಿಗೆ ಉಡುಪಿ ಐಎಂಎ ಭವನದಲ್ಲಿ ಆಯೋಜಿಸಲಾದ ಪತ್ರಿಕಾ ದಿನಾಚರಣೆ ಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸುದ್ದಿಗಳಲ್ಲಿ ಮಹಿಳೆಯರನ್ನು ಹೆಚ್ಚಾಗಿ ಸಂತ್ರಸ್ತರಾಗಿ, ರಾಜಕಾರಣಿಗಳಾಗಿ ಅಥವಾ ಕ್ರೀಡಾಪಟುಗಳಾಗಿ ಮಾತ್ರ ಬಿಂಬಿಸಲಾಗುತ್ತದೆ. ಆದರೆ ನೀತಿ ನಿರೂಪಕಿ, ವಿಷಯ ತಜ್ಞೆ ಮಹಿಳೆಯರನ್ನು ಸಂದರ್ಶಿಸುವ ಅಥವಾ ಅವರ ಅಭಿಪ್ರಾಯ ಪಡೆಯುವ ಪ್ರಮಾಣ ಅತ್ಯಂತ ವಿರಳವಾಗಿದೆ ಎಂದು ತಿಳಿಸಿದರು. ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಅಧ್ಯಕ್ಷತೆಯನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ವಂಡ್ಸೆ ಹೋಬಳಿಯ ಸಾರ್ವಜನಿಕರು ತಾಲೂಕು ಕಚೇರಿಗೆ ಸಲ್ಲಿಸಿರುವ ವಿವಿಧ ಅರ್ಜಿಗಳು ಬಾಕಿ ಇದ್ದ ಹಿನ್ನಲೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು, ತಹಸೀಲ್ದಾರರ ಸಮ್ಮುಖ ಕಂದಾಯ ಅಧಿಕಾರಿಗಳ ಸಭೆ ನಡೆಸಿದರು. ಈ ವೇಳೆ ಅವರು ಮಾತನಾಡಿ, ಹೋಬಳಿಯ ಯಾವುದೇ ಅರ್ಜಿದಾರರು ಸರಿಯಾದ ಪೂರಕ ದಾಖಲೆ ನೀಡಿದ ಹೊರತಾಗಿಯೂ ಸಕಾಲದಲ್ಲಿ ಕಡತ ವಿಲೇವಾರಿ ಆಗದೇ ಇದ್ದಲ್ಲಿ ಇಡೀ ತಾಲೂಕು ಕಚೇರಿ ವ್ಯವಸ್ಥೆಗೆ ಕೆಟ್ಟ ಹೆಸರು ಬರುತ್ತದೆ. ಹಾಗಾಗಿ ಯಾವುದೇ ಕಾರಣಕ್ಕೂ ಸಾರ್ವಜನಿಕರ ಅರ್ಜಿಗಳನ್ನು ಬಾಕಿ ಇರಿಸಿಕೊಳ್ಳದೆ ಅಗತ್ಯ ಇದ್ದಲ್ಲಿ ಮಾತ್ರ ಹಿಂಬರಹ ನೀಡಿ, ಉಳಿದಂತೆ ಕಡತಗಳನ್ನು ಅರ್ಜಿದಾರರಿಗೆ ಅನುಕೂಲ ಆಗುವ ದೃಷ್ಟಿಯಲ್ಲಿ ವಿಲೇವಾರಿ ಮಾಡಲು ಮುಖ್ಯವಾಗಿ ಆರ್ ಟಿ ಸಿ ಸಮಸ್ಯೆಗಳು, ಭೂ ವ್ಯಾಜ್ಯ, ಅಕ್ರಮ ಸಕ್ರಮ, 94 ಸಿ, ಆರ್ ಆರ್ ಟಿ ಹಾಗೂ 11 ಈ ಕಡತಗಳನ್ನು ಆದ್ಯತೆಯಲ್ಲಿ ವಿಲೇ ಗೊಳಿಸಲು ಸೂಚನೆ ನೀಡಿದರು. ಶಾಸಕರ ಕಚೇರಿಗೆ ಸಮಸ್ಯೆಗಳ ನಿವಾರಣೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ನೂತನವಾಗಿ ಅಸ್ಥಿತ್ವಕ್ಕೆ ಬಂದ ರೋಟರಿ ಕ್ಲಬ್ ಕೋಟ ಬ್ರಿಗೇಡ್ ನ 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ಉಡುಪಿ ಜಿಲ್ಲಾ ಆಸ್ಪತ್ರೆ ಯಲ್ಲಿ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿರುವ ಪ್ರಕಾಶ್ ಪೂಜಾರಿ ಬನ್ನಾಡಿ ಹಾಗೂ ನೂತನ ಕಾರ್ಯದರ್ಶಿಯಾಗಿ ಯುವ ಉದ್ಯಮಿ ಶಿವರಾಜ್ ಆಯ್ಕೆಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜು.01: ಮುಂಗಾರು ಮಳೆ ಆರಂಭದಲ್ಲಿ ಕ್ಷೀಣಗೊಂಡಿದ್ದರೂ, ಕಳೆದೆರಡು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಚೇತರಿಕೆ ಕಾಣತೊಡಗಿದೆ. ಜುಲೈ 02 ಹಾಗೂ 03ರಂದು ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ವರದಿಯಂತೆ ಜುಲೈ 8ರ ತನಕ ರೆಡ್ ಅಲರ್ಟ್ ಹಾಗೂ ಆರೆಂಜ್ ಅಲರ್ಟ್ ಇದೆ. ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಸರಾಸರಿ 75.5ಮಿ.ಮೀ ಮಳೆಯಾಗಿದ್ದು, ಈ ಪೈಕಿ ಕುಂದಾಪುರ ತಾಲೂಕಿನಲ್ಲಿ 68.7ಮಿ.ಮೀ, ಬೈಂದೂರು ತಾಲೂಕಿನಲ್ಲಿ 75.5 ಮಿ.ಮೀ., ಬ್ರಹ್ಮಾವರ ತಾಲೂಕಿನಲ್ಲಿ 71.0ಮೀ.ಮೀ, ಹೆಬ್ರಿ ತಾಲೂಕಿನಲ್ಲಿ 57.7 ಮಿ.ಮೀ. ಮಳೆಯಾಗಿದೆ. ನಿರಂತರ ಮಳೆಯಾದರೆ ನದಿ, ತೋಡು, ಕೆರೆ ಪಾತ್ರಗಳು ತುಂಬಿ ಹರಿಯಲಿದ್ದು, ಕಾಲುಸಂಕ, ಶಿಥಿಲ ಸೇತುವೆಯನ್ನು ಅವಲಂಬಿಸಿರುವ ಜನರು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕಿದೆ. ಮರವಂತೆ ಸೇರಿದಂತೆ ಕಡಲ ತೀರ ಭಾಗದಲ್ಲಿ ತೆರೆಗಳ ಅಬ್ಬರ ಹೆಚ್ಚಿದ್ದು, ತೀರ ವಾಸಿಗಳು ಎಚ್ಚರದಿಂದಿರುವುದು ಅಗತ್ಯವಾಗಿದೆ. ಗುಡ್ಡದ ತಪ್ಪಲಿನ ಪ್ರದೇಶದ ಜನರೂ ಗುಡ್ಡ ಜರಿತದ ಬಗ್ಗೆ ಹಾಗೂ ಅಪಾಯಕಾರಿ ಪ್ರದೇಶದಲ್ಲಿ ಆಸರೆ ಪಡೆಯುವ…
