Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ) ತುಮಕೂರು ಜಿಲ್ಲೆ, ವಿದ್ಯಾನಿಧಿ ಪದವಿ ಪೂರ್ವ ಕಾಲೇಜು ತುಮಕೂರು, ಪ್ರೆಸಿಡೆನ್ಸಿ ಪದವಿ ಪೂರ್ವ ಕಾಲೇಜು ಶಿರಾ, ಅರವಿಂದ ಪದವಿ ಪೂರ್ವ ಕಾಲೇಜು ಕುಣಿಗಲ್ ಇವರ ಸಂಯುಕ್ತ ಆಶಯದಲ್ಲಿ ಮಹಾತ್ಮಗಾಂಧಿ ಕ್ರೀಡಾಂಗಣ ತುಮಕೂರಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ 2024- 25ರಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸಿನಾನ್ ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಕ್ರೀಡಾ ಕ್ಷೇತ್ರದಲ್ಲಿ ವಿದ್ಯಾರ್ಥಿ ಹಂತ ಹಂತವಾಗಿ ಅಭಿವೃದ್ಧಿ ಪಥದಲ್ಲಿ ಹೆಜ್ಜೆಯಿರಿಸುವಂತಾಗಲಿ ಎಂದು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಶುಭ ಹಾರೈಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದೇಶ ಹಾಗೂ ವ್ಯಕ್ತಿಯ ಆರ್ಥಿಕ, ದೈಹಿಕ ಹಾಗೂ ಮಾನಸಿಕ ಆರೋಗ್ಯ ಚೆನ್ನಾಗಿದ್ದಾಗ ಮಾತ್ರ ವಾಸ್ತಾವಿಕ ಪರಿಸ್ಥಿತಿಗಳು ಆರೋಗ್ಯಕರವಾಗಿರುತ್ತದೆ ಎಂದು ಉಡುಪಿ ಜಿಲ್ಲಾ ಹೆಚ್ಚುವರಿ ಎಸ್.ಪಿ ಸಿದ್ದಲಿಂಗಪ್ಪ ಎಸ್.ಟಿ ಅಭಿಪ್ರಾಯ ವ್ಯಕ್ತಪಡಿಸಿದರು. ವಕ್ವಾಡಿಯ ಗುರುಕುಲ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆದ ಗುರುಕುಲ ಪಬ್ಲಿಕ್ ಸ್ಕೂಲ್ ಹಾಗೂ ಪದವಿ ಪೂರ್ವ ಕಾಲೇಜಿನ 19 ವರ್ಷದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗುರಿ, ತಾಳ್ಮೆ ಹಾಗೂ ನಿರಂತರ ಪರಿಶ್ರಮ ಇರಬೇಕು. ವಿದ್ಯಾರ್ಥಿಗಳಿಗೆ ಪಠ್ಯ ಅಭ್ಯಾಸಗಳ ಜೊತೆಯಲ್ಲಿ ದೈಹಿಕ ಹಾಗೂ ಮಾನಸಿಕ ಆರೋಗ್ಯವರ್ಧನೆಗೆ ಪೂರಕವಾಗಿರುವ ಪಠ್ಯೇತರ ಚಟುವಟಿಕೆಗಳು ಅಗತ್ಯವಾಗಿದೆ. ನಿರಂತರ ಕ್ರೀಡಾ ಅಭ್ಯಾಸಗಳನ್ನು ಹೊಂದಿರುವ ಕ್ರೀಡಾಪಟುಗಳು ಜೀವನದಲ್ಲಿ ಯಶಸ್ಸು ಸಾಧಿಸುತ್ತಾರೆ. ಗೆಲ್ಲುವ ಗುರಿಯೊಂದಿಗೆ ಕ್ರೀಡೆಯಲ್ಲಿ ಭಾಗವಹಿಸುವುದೆ ಮುಖ್ಯ ಎನ್ನುವ ಮನೋಭಾವ ರೂಢಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಅವರು ಸಲಹೆ ನೀಡಿದರು. ಬಾಂಡ್ಯ ಎಜುಕೇಷನ್ ಟ್ರಸ್ಟ್ ನ ಜಂಟಿ ಆಡಳಿತ ಟ್ರಸ್ಟಿ ಬಾಂಡ್ಯ ಸುಭಾಶ್ಚಂದ್ರ ಶೆಟ್ಟಿ ಅವರು ಕ್ರೀಡೆಯಲ್ಲಿ ಭಾಗವಹಿಸುವುದೇ ಗುರಿಯಾಗಿರಬೇಕು. ಬದ್ದತೆ ಹಾಗೂ ಗುರಿಯನ್ನು ಹೊಂದಿರುವ…

Read More

ಕುಂದಾಪು ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿಶಾಲೆಯಲ್ಲಿ ದಿನಾಂಕ ನ.8 ರಂದು ಉಡುಪಿ ಜಿಲ್ಲೆಯ ಐಸಿಎಸ್‌ಇ  ಮತ್ತು ಸಿಬಿಎಸ್‌ಇ ಅಂತರ್ ಶಾಲಾಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯು ಜರುಗಿತು. ಈ ಪಂದ್ಯಾವಳಿಯ ಉದ್ಘಾಟನಾ ಸಮಾರಂಭಕ್ಕೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಮಾಜಿ ಟ್ರಸ್ಟಿಗಳಾದ ಜಯಾನಂದ ಹೋಬಳಿದಾರ್ ಮುಖ್ಯ ಅತಿಥಿಗಳಾಗಿ ಆಗಮಿಸಿ, ಕ್ರೀಡಾಪಟುಗಳನ್ನುದ್ದೇಶಿಸಿ ಮಾತನಾಡಿ, ಕ್ರೀಡೆಯಲ್ಲಿ ಶ್ರದ್ಧೆ, ನಿಷ್ಠೆ, ಸಮಯಪ್ರಜ್ಞೆ ಅತ್ಯಗತ್ಯ. ನಮ್ಮ ನಾಡಿನ ಕ್ರೀಡಾಪಟುಗಳು ಕ್ರೀಡೆಯಲ್ಲಿ ಅತ್ಯುನ್ನತ ಸಾಧನೆಯನ್ನು ಮಾಡಿದ್ದಾರೆ. ಅವರ ಸಾಧನೆ ಇಂದಿನ ಆಟಗಾರರಿಗೆ ಸ್ಪೂರ್ತಿಯಾಗಿದೆ. ಆಟದಲ್ಲಿ ತೀರ್ಪುಗಾರರ ಬಗ್ಗೆ, ನಿಯಮಗಳ ಬಗ್ಗೆ ಗೌರವದಿಂದ ವರ್ತಿಸಬೇಕು. ನಿಮ್ಮನ್ನು ಬೇರೆಯವರು ಗುರುತಿಸುವಂತೆ ಆಟಗಳನ್ನು ಆಡಬೇಕು ಎಂದು ನುಡಿಯುತ್ತಾ ಆಟಗಾರರನ್ನು ಹುರಿದುಂಬಿಸಿದರು. ಬ್ಯಾಡ್ಮಿಂಟನ್‌ನ ರಾಷ್ಟ್ರೀಯಮಟ್ಟದ ತೀರ್ಪುಗಾರರು ಹಾಗೂ ಮಣಿಪಾಲದ ಮಾಧವ ಕೃಪಾ ಶಾಲೆಯ ದೈಹಿಕ ಶಿಕ್ಷಕಿಯಾದ ಶಾಲಿನಿ ಎಸ್. ಮಾತನಾಡುತ್ತಾ, ವಿವಿಧ ಪಂದ್ಯಾಟಗಳನ್ನು ಕೇವಲ ಗೆಲುವನ್ನು ಪಡೆಯಲಿಕ್ಕಷ್ಟೇ ಆಯೋಜಿಸಿರುವುದಿಲ್ಲ. ನೀವು ಈಗಿರುವುದಕ್ಕಿಂತ ಇನ್ನಷ್ಟು ಎತ್ತರಕ್ಕೆ ಕೊಂಡೊಂಯ್ಯುವುದೇ ಕ್ರೀಡಾಕೂಟಗಳ ಆಯೋಜನೆಯ ಧ್ಯೇಯವಾಗಿರುತ್ತದೆ. ನಿಮ್ಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಗುಣಮಟ್ಟದ ವೈದ್ಯಕೀಯ ಪರಿಕರಗಳಿಗೆ ಹೆಸರಾದ ‘ಗಿರಿಜಾ ಸರ್ಜಿಕಲ್ಸ್’ ಇದರ 5ನೇ ಮಳಿಗೆಯ ಉದ್ಘಾಟನಾ ಸಮಾರಂಭವು ನ.10ರ ಭಾನುವಾರ ಬೆಳಿಗ್ಗೆ 10.30ಕ್ಕೆ ಮಣಿಪಾಲ ಕೆಎಂಸಿ ಆಸ್ಪತ್ರೆ ಎದುರಿನ ವಾಣಿಜ್ಯ ಕಟ್ಟಡದಲ್ಲಿ ಶುಭಾರಂಭಗೊಳ್ಳಲಿದೆ. ಡಾ. ಟಿ.ಎಂ.ಎ ಪೈ ಫೌಂಡೇಶನ್‌ ಅಧ್ಯಕ್ಷರಾದ ಟಿ. ಅಶೋಕ್‌ ಪೈ. ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ವಿವಿಧ ಅತಿಥಿ ಗಣ್ಯರು ಜೊತೆಯಾಗಲಿದ್ದಾರೆ. ಕಡಿಮೆ ದರ, ಗುಣಮಟ್ಟದ ಪರಿಕರ, ಆಯ್ಕೆಗೆ ಅವಕಾಶ, ಮೊದಲಾದ ಗ್ರಾಹಕಸ್ನೇಹಿ ಸೇವೆಗಳನ್ನು ಒದಗಿಸುತ್ತಿರುವುದರಿಂದ ಭಟ್ಕಳದಿಂದ ಮಂಗಳೂರು ತನಕದ ಗ್ರಾಹಕರನ್ನು ಹೊಂದಿರುವ ಗಿರಿಜಾ ಸರ್ಜಿಕಲ್ಸ್ ಮಂಗಳೂರಿನಲ್ಲಿ 2 ಮಳಿಗೆ ಉಡುಪಿ ಹಾಗೂ ಕುಂದಾಪುರದಲ್ಲಿ ಈಗಾಗಲೇ ಮಳಿಗೆಗಳನ್ನು ಹೊಂದಿದ್ದು, ಇದೀಗ ಮಣಿಪಾಲದಲ್ಲಿ ನೂತನ ಮಾರಾಟ ಮಳಿಗೆ ಆರಂಭಗೊಳ್ಳುತ್ತಿದೆ. ಮಳಿಗೆಯಲ್ಲಿ ಹೋಲ್‌ಸೆಲ್‌ ದರದಲ್ಲಿ ರಿಟೆಲ್‌ ವಸ್ತುಗಳು ದೊರೆಯಲಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಪನಿರ್ದೇಶಕರ ಕಛೇರಿ ರಜತಾದ್ರಿ ಆಯೋಜಿಸಿದ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆಗಳು ಸ್ಪರ್ಧೆಗಳಲ್ಲಿ ಶಿಕ್ಷಕ ಸಹೋದರ- ಸಹೋದರಿ ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆ ಸಾಮಾನ್ಯ ಜ್ಞಾನ ಸ್ಪರ್ಧೆಯಲ್ಲಿ ವಡೇರಹೋಬಳಿ ಸರಕಾರಿ ಪ್ರೌಢಶಾಲೆಯ ಸಮಾಜವಿಜ್ಞಾನ ಶಿಕ್ಷಕ ನಾರಾಯಣ ರಾಜು ದೇವಾಡಿಗ ಅವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಒಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕಿ ತಾರಾಮತಿ ದೇವಾಡಿಗ ಅವರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅವರು ಉಪ್ಪುಂದ ಹೊಳೆಬಾಗಿಲು ಬೈಲ್ ಮನೆ ನಾಗ ದೇವಾಡಿಗ ಹಾಗು ಮಾಚಿ ದೇವಾಡಿಗ ದಂಪತಿಗಳ ಮಕ್ಕಳಾಗಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನಲ್ಲಿ  ಖೇಲೋ ಜನತಾ 2024 ಅತ್ಯಂತ ಸಡಗರ, ಸಂಭ್ರಮದಿಂದ ನೆರವೇರಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರದ ದೈಹಿಕ ಶಿಕ್ಷಣ ಶಿಕ್ಷಕರಾದ ಉದಯ ಅವರು ಮಾತನಾಡಿ, ಜನತಾ ಶಿಕ್ಷಣ ಸಂಸ್ಥೆ ಕ್ರೀಡಾ ರಂಗಕ್ಕೆ ಕೊಡುತ್ತಿರುವ ಪ್ರೋತ್ಸಾಹ ಅದ್ಭುತವಾಗಿದೆ. ವಿದ್ಯಾರ್ಥಿಗಳೇ ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧಕರಾಗಬೇಕಾದರೆ ಕಾಲೇಜಿನ ಕ್ರೀಡಾಕೂಟಗಳು ಅಡಿಪಾಯವಾಗಿದೆ. ಧೈರ್ಯವಾಗಿ ಆಡಿ ಎಂದು ಶುಭ ಹಾರೈಸಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣಕ್ಕೆ ವಾರ್ಷಿಕ ಕ್ರೀಡಾಕೂಟ ಮಹತ್ವಪೂರ್ಣವಾಗಿದೆ ಆ ಮೂಲಕ ಸಾವಿರಾರು ವಿದ್ಯಾರ್ಥಿಗಳ ಕ್ರೀಡಾ ಪ್ರತಿಭೆಗಳನ್ನು ಅನಾವವರಣಗೊಳಿಸಿ ಪ್ರೋತ್ಸಾಹ ನೀಡಲಾಗುತ್ತಿದೆ. ಸೋಲೇ ಗೆಲುವಿನ ಸೋಪಾನ ಎಂದು ಶುಭ ಹಾರೈಸಿದರು. ಸಮಾರಂಭದಲ್ಲಿ ಜನತಾ ಪ್ರೌಢಶಾಲೆ ಹೆಮ್ಮಾಡಿಯ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ, ಕಾಲೇಜಿನ ಉಪ ಪ್ರಾಂಶುಪಾಲರಾದ ರಮೇಶ ಪೂಜಾರಿ, ಜನತಾ ನ್ಯೂ ಇಂಗ್ಲೀಷ್ ಮೀಡಿಯಂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಾಲ್ತೋಡು ಗ್ರಾಮದ ಶ್ರೀ ಅತಿಶಯ ಕ್ಷೇತ್ರ ಬೋಳಂಬಳ್ಳಿ ಪದ್ಮಾವತಿ ದೇವಿ ದೇವಸ್ಥಾನದ ಬಳಿ ಭಗವಾನ್ ಶ್ರೀ ಬಾಹುಬಲಿಯ 28 ಅಡಿ (21 ಅಡಿ ಮೂರ್ತಿ, 7 ಅಡಿ ಪೀಠ) ಎತ್ತರದ ಏಕಶಿಲಾ ಮೂರ್ತಿ ಪ್ರತಿಷ್ಠಾಪನೆಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ನ. 8ರಂದು ಕಂಬದಕೋಣೆಯಿಂದ ಬೋಳಂಬಳ್ಳಿಗೆ ವಿಗ್ರಹದ ಭವ್ಯ ಮೆರವಣಿಗೆ ನಡೆಯಿತು. ಜೈನ ದೇವಸ್ಥಾನದ ಧರ್ಮದರ್ಶಿ ಧರ್ಮರಾಜ್ ಜೈನ್ ದಂಪತಿ ಆರತಿ ಬೆಳಗಿದರು. ಶ್ರೀ ಬಾಹುಬಲಿ ಬೆಟ್ಟದಲ್ಲಿ ಮೂರ್ತಿಯನ್ನು ಕ್ರೇನ್ ಮೂಲಕ ಇಳಿಸಲಾಯಿತು. ಈ ಸಂದರ್ಭದಲ್ಲಿ ಪ್ರತಿಷ್ಠಾಪನೆ ಸಮಿತಿಯ ಕಾರ್ಯದರ್ಶಿ ಸುಭಾಷ್ ಜೈನ್, ದೇವಸ್ಥಾನ ಅಭಿವೃದ್ಧಿ ಕಾರ್ಯದರ್ಶಿ ಅಣ್ಣಪ್ಪ ಶೆಟ್ಟಿ‌ ಕಾಲ್ತೋಡು, ಮೂಡುಬಿದಿರೆ 18 ಬಸದಿಗಳ ಮೊಕ್ತೇಸರರಾದ ಆದರ್ಶ್‌ ಎಂ. ಚೌಟರ ಅರಮನೆ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಭಕ್ತರು ಆಗಮಿಸಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಚಿರತೆಯೊಂದು ಮನೆಯಂಗಳದಲ್ಲಿ ಮಲಗಿದ್ದ ನಾಯಿಯ ಮೇಲೆ ದಾಳಿ ನಡೆಸಿ, ಹೊತ್ತೊಯ್ದ ಘಟನೆ ಕಟ್ ಬೆಲ್ತೂರು ದೇವಲಕುಂದ ಎಂಬಲ್ಲಿ ನಡೆದಿದೆ. ಚಿರತೆ ನಾಯಿಯನ್ನು ಹೊತ್ತೊಯ್ಯುವ ಭಯಾನಕ ದೃಶ್ಯ ಮನೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ದೇವಲಕುಂದ ಗ್ರಾಮದ ಜಾಡಿ ಕ್ರಾಸ್ ಸುಧೀರ್ ಶೆಟ್ಟಿ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಗಾಢ ನಿದ್ದೆಯಲ್ಲಿದ್ದ ನಾಯಿಗೆ ಚಿರತೆಯ ಬಾಯಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ಕ್ಷಣಾರ್ಧದಲ್ಲಿ ಚಿರತೆ ನಾಯಿಯನ್ನು ಹೊತ್ತುಕೊಂಡು ಕಾಡಿನೊಳಗೆ ಓಡಿ ಹೋಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚಿರತೆ ಕಾಣಿಸಿಕೊಂಡ ಕಾರಣ ಭಯಗೊಂಡ ದೇವಲಕುಂದ ಗ್ರಾಮಸ್ಥರಿಗೆ ಆತಂಕ ಶುರುವಾಗಿದೆ. ತಕ್ಷಣವೇ ಅಧಿಕಾರಿಗಳು ಬೋನ್ ಇಟ್ಟು ಚಿರತೆ ಸೆರೆ ಹಿಡಿಯಬೇಕು ಎಂದು ಸ್ಥಳೀಯರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ನಾಗರಮಕ್ಕಿ ನಿವಾಸಿ ಸಾಧು (35) ಎಂಬವರ 4 ತಿಂಗಳ ಗಂಡು ಮಗು ಹರ್ಷಿತ್‌ಗೆ ಜ್ವರ ಬಂದು ಗುರುವಾರ ಮೃತಪಟ್ಟಿದೆ. ಮಗುವಿಗೆ ಎರಡು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು, ಮಕ್ಕಳ ತಜ್ಞರಿಗೆ ತೋರಿಸಿ ಚಿಕಿತ್ಸೆ ನೀಡಲಾಗಿತ್ತು. ಸುಮಾರು ತಡರಾತ್ರಿ 1.30ರ ವಾಂತಿಬೇಧಿಯಾಗಿದ್ದು, ಕೂಡಲೆ ಚಿಕಿತ್ಸೆಯ ಬಗ್ಗೆ ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದ್ದು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ಹೇಳಿದ್ದಾರೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More