Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕರ ಕಛೇರಿ (ಆಡಳಿತ) ಮಂಗಳೂರು ಹಾಗೂ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ದಕ್ಷಿಣ ಕನ್ನಡ ಮತ್ತು ಮಂಗಳೂರು ದಕ್ಷಿಣ ವಲಯ, ಎಸ್‌ಡಿಎಮ್ ಮಂಗಳಜ್ಯೋತಿ ಸಮಗ್ರ ಶಾಲೆ ವಾಮಂಜೂರು ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಕುಸ್ತಿ ಪಂದ್ಯಾಟದಲ್ಲಿ ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು 06 ಚಿನ್ನ, 01 ಬೆಳ್ಳಿ, 01 ಕಂಚು ಒಟ್ಟು 08 ಪದಕಗಳೊಂದಿಗೆ 17 ವರ್ಷ ವಯೋಮಿತಿಯ ಬಾಲಕರ ತಂಡ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿರುತ್ತಾರೆ. ಮುಂದಿನ ತಿಂಗಳು ನಡೆಯುವ ರಾಜ್ಯಮಟ್ಟದ ಕುಸ್ತಿ ಪಂದ್ಯಾಟಕ್ಕೆ ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯಿಂದ 07 ವಿದ್ಯಾರ್ಥಿಗಳು ಆಯ್ಕೆಯಾಗಿರುತ್ತಾರೆ. ವಿಜೇತ ಕ್ರೀಡಾಪಟುಗಳಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವರವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಆ.1ರಂದು ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಡಾ. ಎನ್.ಎಸ್.ಎ.ಎಂ ಪದವಿ ಪೂರ್ವ ಕಾಲೇಜು ನಿಟ್ಟೆ, ಕಾರ್ಕಳ ಇವರ ಸಹಭಾಗಿತ್ವದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪುಟ್ಬಾಲ್ ಪಂದ್ಯಾಟದಲ್ಲಿ ಕುಂದಾಪುರ ವಲಯವು ಉಡುಪಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ಮುಂದೆ ನಡೆಯುವ ರಾಜ್ಯ ಮಟ್ಟದ ಪುಟ್ಬಾಲ್ ಪಂದ್ಯಾಟದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಆಯ್ಕೆಗೊಂಡಿದೆ. ಎಕ್ಸಲೆಂಟ್ ವಿದ್ಯಾಸಂಸ್ಥೆಯ ಪುಟ್ಬಾಲ್ ಪ್ರತಿಭೆಗಳಾದ ಪ್ರಥಮ್ ಎಸ್. ಶೆಟ್ಟಿ ಮತ್ತು ಎಲಿಕ್ ಅಬ್ರಾನ್ ದಾಲ್‌ಮೇದಾ ಅವರು ಜಿಲ್ಲಾತಂಡದ ಅತ್ಯುತ್ತಮ ಆಟಗಾರರಾಗಿ ಹೊರಹೊಮ್ಮಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಎಕ್ಸಲೆಂಟ್ ವಿದ್ಯಾಸಂಸ್ಥೆಯು ಕೇವಲ ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದದ್ದಲ್ಲದೆ, ಸಾಂಸ್ಕೃತಿಕ, ಪ್ರತಿಭಾ ಕಾರಂಜಿ ಹಾಗೂ ಕ್ರೀಡಾಕ್ಷೇತ್ರದಲ್ಲೂ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿಯೂ ತನ್ನ ಹಿರಿಮೆಯ ಛಾಪನ್ನು ಮೂಡಿಸಿ ಅದೆಷ್ಟೊ ಪ್ರಶಸ್ತಿಗಳನ್ನು ತನ್ನ ಮೂಡಿಗೇರಿಸಿಕೊಂಡಿದೆ. ಅವರಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಕಥೋಲಿಕ್ ಸಭಾ ಉಡುಪಿ ಪ್ರದೇಶ, ಕೊಸೆಸಾಂವ್ ಮಾತೆಯ ಚರ್ಚ್ ಘಟಕ ಗಂಗೊಳ್ಳಿ, ಕಥೋಲಿಕ್ ಸ್ತ್ರೀ ಸಂಘಟನೆ ಗಂಗೊಳ್ಳಿ, ಯುವ ಆಯೋಗ, ಭಾರತೀಯ ಕಥೋಲಿಕ್ ಯುವ ಸಂಚಾಲನ ಗಂಗೊಳ್ಳಿ ಇವರ ಆಶ್ರಯದಲ್ಲಿ ಸ್ವಸ್ಥ ಹಾಗೂ ನಿರ್ಮಲ ಪರಿಸರ ಅಭಿಯಾನದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಗಂಗೊಳ್ಳಿಯಲ್ಲಿ ಬುಧವಾರ ನಡೆಯಿತು. ಗಂಗೊಳ್ಳಿಯ ಬಂದರು ಬಸ್ ನಿಲ್ದಾಣದಿಂದ ಗಂಗೊಳ್ಳಿ ಗ್ರಾಮ ಪಂಚಾಯತ್ ಕಾರ್ಯಾಲಯದವರೆಗೆ ಮುಖ್ಯರಸ್ತೆಯ ಇಕ್ಕೆಲಗಳಲ್ಲಿ ಬಿದ್ದಿರುವ ಕಸಕಡ್ಡಿ ತ್ಯಾಜ್ಯಗಳನ್ನು ಸಂಗ್ರಹಿಸಿ ಸ್ವಚ್ಛಗೊಳಿಸಿದ ಸಂಘಟನೆಗಳ ಕಾರ್ಯಕರ್ತರು, ಸ್ವಸ್ಥ ಹಾಗೂ ನಿರ್ಮಲ ಪರಿಸರಕ್ಕೆ ಜನರು ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಕಥೋಲಿಕ್ ಸಭಾ ಗಂಗೊಳ್ಳಿ ಘಟಕದ ಅಧ್ಯಕ್ಷ ಎಡ್ವರ್ಡ್ ಫೆರ್ನಾಂಡಿಸ್, ಕಥೋಲಿಕ್ ಸಭಾ ಉಡುಪಿ ಪ್ರದೇಶ್ ಸ್ಥಾಪಕ ಅಧ್ಯಕ್ಷ ಕಿರಣ್ ಕ್ರಾಸ್ತಾ, ಗಂಗೊಳ್ಳಿ ಚರ್ಚಿನ ಧರ್ಮಗುರು ರೆ.ಫಾ. ರೋಶನ್ ಥಾಮಸ್ ಡಿಸೋಜ ಮತ್ತು ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಧಾನ ಪರಿಷತ್ ದ.ಕ – ಉಡುಪಿ ಸ್ಥಳೀಯಾಡಳಿತ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಎಸ್‌. ರಾಜು ಪೂಜಾರಿಯವರಿಗೆ ಟಿಕೆಟ್ ಲಭಿಸಿದೆ. ಟಿಕೇಟಿಗಾಗಿ ಹಲವಾರು ಸ್ಪರ್ಧಿಗಳು ಆಕಾಂಕ್ಷಿಗಳಿದ್ದರೂ ಪೈಪೋಟಿ ನಡೆದಿದ್ದರೂ ಕೊನೆಯ ಗಳಿಗೆಯಲ್ಲಿ ಎಸ್. ರಾಜು ಪೂಜಾರಿ ಅವರಿಗೆ ಟಿಕೆಟ್ ಲಭಿಸಿದೆ. ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗುರುತಿಸಿಕೊಂಡಿರುವ ಎಸ್. ರಾಜು ಪೂಜಾರಿಯವರು ವಿದ್ಯಾರ್ಥಿ ದಿಸೆಯಿಂದಲೇ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡವರು. ಮರವಂತೆ ಗ್ರಾಮ ಪಂಚಾಯತ್ ಸದಸ್ಯರಾಗಿ ಕುಂದಾಪುರ ತಾಲೂಕು ಪಂಚಾಯತ್ ಸದಸ್ಯರಾಗಿ, ಉಡುಪಿ ಜಿಲ್ಲಾ ಪಂಚಾಯಿತಿನ ಸದಸ್ಯರಾಗಿ, ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷರಾಗಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಕರ್ತವ್ಯವನ್ನು ನಿರ್ವಹಿಸಿದರು. ರಾಜಕೀಯ ಸಹಕಾರ ಸಾಮಾಜಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡ ಎಸ್‌.ರಾಜು ಪೂಜಾರಿ ಅವರಿಗೆ ಪರಿಷತ್ತಿನ ಉಪಚುನಾವಣೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಹಾತ್ಮಾ ಗಾಂಧೀಜಿ ಅವರ ಸತ್ಯ, ಶಾಂತಿ, ಅಹಿಂಸಾ ತತ್ವಗಳು ಇಂದಿಗೂ ಪ್ರಸ್ತುತವಾಗಿದ್ದು, ಪ್ರತಿಯೊಬ್ಬರೂ ಅವುಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು, ಗಾಂಧೀಜಿ ಅವರಿಗೆ ಗೌರವ ಸಲ್ಲಿಸುವ ಮೂಲಕ ಗಾಂಧಿ ಜಯಂತಿ ದಿನಾಚರಣೆಯನ್ನು ಅರ್ಥಪೂರ್ಣವಾಗಿಸೋಣ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಗರಸಭೆ ಉಡುಪಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ, ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ & ಉಡುಪಿ ಜಿಲ್ಲಾ ಸಮಸ್ತ ಸಹಕಾರಿ ಇವರ ನೇತೃತ್ವದಲ್ಲಿ ಪ್ರಾಚ್ಯ ಸಂಚಯ ಸಂಶೋಧನಾ ಕೇಂದ್ರ, ಲಿಯೋ ಡಿಸ್ಟಿçಕ್ಟ್ 317 ಸಿ ಮತ್ತು ಕ್ರಿಶ್ಚಿಯನ್ ಪಿ.ಯು ಕಾಲೇಜು, ಲಯನ್ಸ್ ಕ್ಲಬ್ ಉಡುಪಿ ಇಂದ್ರಾಳಿ ಮತ್ತು ಲಯನ್ಸ್ ಕ್ಲಬ್ ಉಡುಪಿ ಚೇತನ ಹಾಗೂ ಲಂಬಾರ್ಡ್ ಮೆಮೋರಿಯಲ್ ಮಿಷನ್ ಆಸ್ಪತ್ರೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಅಜ್ಜರಕಾಡು ಪುರಭವನದಲ್ಲಿ ನಡೆದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ಹಟ್ಟಿಯಂಗಡಿಯಲ್ಲಿ ನಡೆದ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯ ಪ್ರಯುಕ್ತ ಸಂಸ್ಥೆಯ ಕಾರ್ಯದರ್ಶಿಗಳು ಹಾಗೂ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಚಾರ್ಯರೂ ಆದ ಶರಣ ಕುಮಾರ ಅವರು ವಿದ್ಯಾರ್ಥಿಗಳನ್ನು ಕುರಿತು ಮಾತನಾಡುತ್ತಾ, ವಿದ್ಯಾರ್ಥಿಗಳು ಕಲಿಕೆಯ ಜೊತೆಯಲ್ಲಿ ಮಹಾನ್ ವ್ಯಕ್ತಿಗಳ ತತ್ವ ಮತ್ತು ಆದರ್ಶಗಳನ್ನು ಪಾಲಿಸಬೇಕು. ಆಗ ಮಾತ್ರ ನಾವು ಕಲಿತ ವಿದ್ಯೆಗೆ ಅರ್ಥ ಸಿಗಲು ಸಾಧ್ಯ, ಗಾಂಧೀಜಿ ಮತ್ತು ಶಾಸ್ತ್ರಿಯವರ ಮೌಲಿಕವಾದ ಆದರ್ಶ ಗುಣಗಳನ್ನು ನಾವು ಪಾಲಿಸಿದರೆ ಅದು ಮಹಾನ್ ವ್ಯಕ್ತಿಗಳಿಗೆ ನಾವು ಕೊಡಬಹುದಾದ ಬೆಲೆ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಇದೇ ಸಂದರ್ಭದಲ್ಲಿ ಸಹ ಶಿಕ್ಷಕಿ ಲತಾ ದೇವಾಡಿಗ ಮಾತನಾಡುತ್ತಾ, ಗಾಂಧೀಜಿಯವರ ಜೀವನದಲ್ಲಿಯ ಕೆಲವು ಮಹತ್ತರ ಘಟನೆಗಳನ್ನು ಉಲ್ಲೇಖಿಸಿ ಮಹಾತ್ಮ ಗಾಂಧೀಜಿಯವರ ಸರಳತೆ, ಸತ್ಯ ಮತ್ತು ಅಹಿಂಸಾ ತತ್ವದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಹೇಳಿದರು. ವಿದ್ಯಾರ್ಥಿಗಳಾದ ಹರಿ ಮತ್ತು ನಿಧಿ ಗಾಂಧೀಜಿ ಅವರ ವ್ಯಕ್ತಿತ್ವದ ಕುರಿತಾಗಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಂದು ಆಧುನಿಕ ಜಗತ್ತಿಗೆ ರಾಷ್ಟ್ರಪಿತ ಗಾಂಧೀಜಿ ನೀಡಿದ ಕೊಡುಗೆ ಮಹೋನ್ನತವಾದುದು. ಸತ್ಯ, ಅಹಿಂಸೆ, ಶಾಂತಿಯ ಮೂಲಕ ಜಗತ್ತಿಗೆ ಮಾದರಿಯಾದ ವ್ಯಕ್ತಿತ್ವವನ್ನು ಹೊಂದಿದವರು. ತನ್ನ ಬದುಕಿನಲ್ಲಿ ಸ್ವಚ್ಚತಾ ಮಹತ್ವವನ್ನು ಕುರಿತು ಇಡೀ ದೇಶದಲ್ಲಿ ಅರಿವು ಜಾಗೃತಿಯನ್ನು ತನ್ನ ಬದುಕಿನುದ್ದಕ್ಕೂ ಮೂಡಿಸಿದರು ಎಂದು ಸುಜ್ಞಾನ್ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಹೇಳಿದರು.   ಸುಜ್ಞಾನ್ ಎಜುಕೇಶನ್ ಟ್ರಸ್ಟ್ ಕುಂದಾಪುರ, ಸುಜ್ಞಾನ ಪದವಿಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ (ಲಿಟ್ಲ್ ಸ್ಟಾರ್) ಇಂಗ್ಲಿಷ್ ಮೀಡಿಯಂ ಸ್ಕೂಲ್ ಯಡಾಡಿ ಮತ್ಯಾಡಿ ಜೊತೆಯಾಗಿ ಆಯೋಜಿಸಿದ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ ಪ್ರಯುಕ್ತ ನಡೆದ ಸ್ವಚ್ಚತಾ ಅಭಿಯಾನ – ಜನಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಸಭೆಯಲ್ಲಿ ಅಭ್ಯಾಗತರಾಗಿದ್ದ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್‌ನ ಖಜಾಂಚಿ ಭರತ್ ಶೆಟ್ಟಿ ಮಾತನಾಡುತ್ತಾ “ಗಾಂಧೀಜಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿಯವರು ಭಾರತಕ್ಕೆ ನೀಡಿದ ಕೊಡುಗೆ ಅನನ್ಯವಾದುದು. ಪರಿಸರ ಸ್ವಚ್ಚತೆ ಪ್ರತಿಯೊಬ್ಬರ ಆಧ್ಯತೆಯಾಗಬೇಕು”…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಮತ್ತು ಸರಸ್ವತಿ ವಿದ್ಯಾಲಯ  ಪದವಿ ಪೂರ್ವ ಕಾಲೇಜು ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ಟೆನ್ನಿಕಾಯ್ಟ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿದೆ. ವಿದ್ಯಾರ್ಥಿಗಳಾದ ವೈಭವ್, ವಿಶ್ವಾಸ್, ಸಂಕೇತ್, ಅಕ್ಷಯ್ ಬಿಲ್ಲವ ಮತ್ತು ಪ್ರಜ್ವಲ್ ಪೈ ತಂಡವನ್ನು ಪ್ರತಿನಿಧಿಸಿದ್ದರು. ದೈಹಿಕ ಶಿಕ್ಷಣ ಉಪನ್ಯಾಸಕ ದೀಕ್ಷಿತ್ ಮೇಸ್ತ ಮಾರ್ಗದರ್ಶನ ನೀಡಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವೈಯಕ್ತಿಕ ಸ್ವಚ್ಛತೆಯೊಂದಿಗೆ ಪರಿಸರದ ಸ್ವಚ್ಛತೆ ಕಾಯ್ದುಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಮನೆಯಿಂದಲೇ ಸ್ವಚ್ಛತೆಯ ಪಾಠ ಆರಂಭವಾಗಬೇಕು. ಪರಿಸರವನ್ನು ಸ್ವಚ್ಛವಾಗಿರಿಸಿಕೊಳ್ಳುವುದು ನಾವು ಸಮಾಜದಲ್ಲಿ ಮಾಡಬಹುದಾದ ಬಹುದೊಡ್ಡ ಸೇವೆ ಎಂದು ಬೈಂದೂರು ತಾಲೂಕು ತಹಶೀಲ್ದಾರ್ ಪ್ರದೀಪ್ ಆರ್. ಹೇಳಿದರು. ಅವರು ರೋಟರಿ ಕ್ಲಬ್ ಬೈಂದೂರು ನೇತೃತ್ವದಲ್ಲಿ ರೋಟರ್ಯಾಕ್ಟ್ ಕ್ಲಬ್ – ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಸಹಯೋಗದೊಂದಿಗೆ ಗಾಂಧಿ ಜಯಂತಿಯ ಅಂಗವಾಗಿ ಗುರುವಾರ ಇಲ್ಲಿನ ಸೋಮೇಶ್ವರ ಬೀಚ್ ತೀರದಲ್ಲಿ ಆಯೋಜಿಸಲಾದ ಕಡಲತೀರ ಸ್ವಚ್ಛತಾ ಅಭಿಯಾನ & ಕೋಸ್ಟ್ ಟು ಕೋಸ್ಟ್ 3.0 ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಬೈಂದೂರು ತಾಲೂಕು ಹಲವು ಪ್ರವಾಸಿ ತಾಣಗಳನ್ನು ಒಳಗೊಂಡಿದ್ದು, ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಈ ಭಾಗದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಜೊತೆಗೆ ಪ್ರತಿಯೊಬ್ಬರನ್ನೂ ಸ್ವಚ್ಛತೆಯ ಅರಿವು ಮೂಡಬೇಕು. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಜಾಗೃತರಾಗಬೇಕಿದೆ ಎಂದರು. ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಮೋಹನ್ ರೇವಣ್ಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿದ್ದ ಬೈಂದೂರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜು ಕೊಲ್ಲೂರು ಇವರ ಸಂಯುಕ್ತ ಆಶ್ರಯದಲ್ಲಿ   ಸೆ.30ರಂದು ಆಯೋಜಿಸಿದ ಪದವಿ ಪೂರ್ವ ಬಾಲಕರ ನೆಟ್ ಬಾಲ್ ಪಂದ್ಯಾಟದಲ್ಲಿ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ನಾಗರಾಜ್ ಹಾಗೂ ಯೋಗೀಶ್ ಉತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More