ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಬ್ಯಾಂಕ್ಗಳ ಮ್ಯಾನೆಜರ್ಗಳು ಹಾಗೂ ಸಿಬ್ಬಂದಿಗಳು ಜನಸಾಮಾನ್ಯರೊಂದಿಗೆ ಬ್ಯಾಂಕಿನ ವ್ಯವಹಾರಗಳ ಕುರಿತು ಸ್ಥಳೀಯ ಪ್ರಾದೇಶಿಕ ಕನ್ನಡ ಭಾಷೆಯಲ್ಲಿ ವ್ಯವಹರಿಸುವುದರಿಂದ ಬ್ಯಾಂಕಿನ ವ್ಯವಹಾರಗಳು ಮತ್ತಷ್ಟು ಅಭಿವೃದ್ಧಿಗೊಳ್ಳಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ತಿಳಿಸಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಕೃತ ಬ್ಯಾಂಕುಗಳ ಹೆಸರು ಹಾಗೂ ಸ್ಥಳಗಳನ್ನು ಬ್ಯಾಂಕುಗಳ ಬೋರ್ಡುಗಳಲ್ಲಿ ಪ್ರಾದೇಶಿಕ ಭಾಷೆಯಲ್ಲಿ ಅಳವಡಿಸಬೇಕು. ಗ್ರಾಹಕರೊಂದಿಗೆ ಸಂವಹನ ಮಾಡಲು ಅನುಕೂಲವಾಗುವಂತೆ ಸ್ಥಳೀಯ ವ್ಯಕ್ತಿಗಳನ್ನು ನೇಮಿಸುವಂತೆ ತಿಳಿಸಿದರು. ಸಾರ್ವಜನಿಕರ ಜೀವನಮಟ್ಟವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳು ಜಾರಿಯಲ್ಲಿವೆ. ಈ ಕುರಿತು ಬ್ಯಾಂಕ್ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಜನಸಾಮಾನ್ಯರಿಗೆ ವ್ಯವಹಾರ ಚಟುವಟಿಕೆಗಳ ಕುರಿತು ಅರಿವು ಮೂಡಿಸುವ ಮೂಲಕ ಹೆಚ್ಚಿನ ಸಂಖ್ಯೆಯ ಜನರನ್ನು ಯೋಜನೆಯ ಫಲಾನುಭವಿಗಳನ್ನಾಗಿಸಲು ಕ್ರಮ ವಹಿಸಬೇಕು ಎಂದರು. ಜಿಲ್ಲೆಯ ಬ್ಯಾಂಕ್ಗಳಲ್ಲಿ ಕಳೆದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬಸ್ ಪಲ್ಟಿಯಾಗಿ ಐವರು ಗಾಯಗೊಂಡ ಘಟನೆ ಇಡೂರು ಕುಂಜ್ಞಾಡಿ ಸಮೀಪದ ಜನ್ನಾಲ್ ಎಂಬಲ್ಲಿ ಬಧವಾರ ಸಂಜೆ ನಡೆದಿದೆ. ಕೊಲ್ಲೂರಿನಿಂದ ತೆರಳುತ್ತಿದ್ದ ಮೆಣಸು ಸಾಗಿಸುತ್ತಿದ್ದ ಗೂಡ್ಸ್ ವಾಹನಕ್ಕೆ ಕುಂದಾಪುರದಿಂದ ಕೊಲ್ಲೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿ ಜನ್ನಾಲ್ ಎಂಬಲ್ಲಿ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಹಾಗೂ ಪಿಕ್ ಆಫ್ ವಾಹನ ಚಾಲಕ ನಿರ್ವಾಹಕರು ಸೇರಿದಂತೆ ಐವರು ಗಾಯಗೊಂಡಿದ್ದಾರೆ. ರಾಘವೇಂದ್ರ (43) ವಾಸಿಂ (30) ಅಮೃತಾ (17), ಪ್ರತ್ಯಸ್ಥಿ (16), ಅಖಿತ್ (28) ಎಂದು ಗುರುತಿಸಲಾಗಿದೆ. ಗಾಯ ಗೊಂಡವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ಅಪಘಾತದ ಪರಿಣಾಮ ಎರಡೂ ವಾಹನಗಳು ನಜ್ಜುಗುಜ್ಜಾಗಿವೆ. ಬಸ್ಸಿನಲ್ಲಿ ಮೂವತ್ತಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದರು. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ” ಎಂಜಿನಿಯರಿಂಗ್, ಮೆಡಿಕಲ್ ಅಥವಾ ಇನ್ಯಾವುದೇ ವಾಣಿಜ್ಯ, ತಾಂತ್ರಿಕ ಕ್ಷೇತ್ರದಲ್ಲಿ ವ್ಯಾಸಂಗ ಮಾಡಿದವರೂ ಕೂಡ ಸೈನ್ಯವನ್ನು ಸೇರಿ ಸೇವೆ ಸಲ್ಲಿಸಬಹುದು. ಆಗ ಅದು ಶ್ರೇಷ್ಠವಾದ ದೇಶಸೇವೆಯಾಗುವುದೇ ಹೊರತು ವ್ಯಕ್ತಿಗತವಾದ ಹುದ್ದೆಯಾಗಿರುವುದಿಲ್ಲ. ಈ ನಿಟ್ಟಿನಲ್ಲಿ ನನ್ನ ಏಳಿಗೆಗೆ ಕಾರಣವಾದ ಆರ್.ಎನ್.ಎಸ್ ಪಿ.ಯು.ಕಾಲೇಜಿಗೆ ಕೃತಜ್ಞನಾಗಿದ್ದೇನೆ ” ಎಂದು ಭಾರತೀಯ ಭೂಸೈನ್ಯದಲ್ಲಿ ಲೆಫ್ಟಿನೆಂಟ್ ಹುದ್ದೆಗೆ ನೇಮಕಾತಿ ಹೊಂದಿದ ಕಾಲೇಜಿನ ಹೆಮ್ಮೆಯ ಹಳೆ ವಿದ್ಯಾರ್ಥಿ ಭರತ್ ಬಾಬು ದೇವಾಡಿಗ ಅವರು ಹೇಳಿದರು. ಕಾಲೇಜಿನ ವತಿಯಿಂದ ಹಮ್ಮಿಕೊಂಡ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕಾಲೇಜಿನ ಉಪನ್ಯಾಸಕಿಯರು ಲೆಫ್ಟಿನೆಂಟ್ ಭರತ್ ಬಾಬು ದೇವಾಡಿಗ ಅವರಿಗೆ ಆರತಿ ಬೆಳಗಿ ಶುಭ ಹಾರೈಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ ಕುಮಾರ ಶೆಟ್ಟಿ ಅವರು ಮಾತನಾಡಿ , ಅತ್ಯಂತ ಕಠಿಣವಾದ ಭಾರತೀಯ ಸೇನಾ ಹುದ್ದೆಯಲ್ಲಿ ಭರತ್ ಬಾಬುರವರು ತಮ್ಮ ಪರಿಶ್ರಮ ಮತ್ತು ದಕ್ಷತೆಯಿಂದ ಯಶಸ್ಸುಗಳಿಸಲಿ ಎಂದು ಶುಭ ಹಾರೈಸಿದರು. ಉಪಪ್ರಾಂಶುಪಾಲರಾದ ಪ್ರೀತೇಶ್ ಶೆಟ್ಟಿ ಅವರು ವೇದಿಕೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ಕಡ್ಡಾಯ ಶಿಕ್ಷಣ ಹಾಗೂ ವಯಸ್ಕರ ಶಿಕ್ಷಣ ಜಾರಿ ಹೆಣ್ಣುಮಕ್ಕಳಿಗೆ ಶಾಲೆ ಆರಂಭ, ಶೇ100 ಪರಿಶುದ್ಧ ಶ್ರೀಗಂಧದ ಎಣ್ಣೆಯ ಸಾಬೂನು (ಮೈಸೂರು ಸ್ಯಾಂಡಲ್ ಸೋಪ್) ಉತ್ಪಾದನೆ, ಭಾರತದ ಮೊಟ್ಟಮೊದಲ ಚುನಾವಣೆ, ಮೊದಲ ವಿಮಾನ ನಿರ್ಮಾಣ, ಕುಟುಂಬ ಕಲ್ಯಾಣ ಯೋಜನೆ ಜಾರಿಗೊಳಿಸಿದ ಹೆಗ್ಗಳಿಕೆ ಮೈಸೂರಿನ ನಾಲ್ವಡಿ ಕೃ?ರಾಜ ಒಡೆಯರ್ ಅವರಿಗೆ ಸಲ್ಲುತ್ತದೆ ಎಂದು ಸಿವಿಲ್ ಎಂಜಿನಿಯರ್, ಮೆಟ್ರೋ ಪೊಲಿಟನ್ ಇತಿಹಾಸಕಾರ ಮತ್ತು ಸೋಶಿಯಲ್ ಮೀಡಿಯಾ ಇನ್ಫ್ಲ್ಯೂವೆನ್ಸರ್ ಧರ್ಮೇಂದ್ರ ಕುಮಾರ್ ಹೇಳಿದರು. ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ’ರೋಸ್ಟ್ರಮ್- ವಾಗ್ಮಿಗಳ ವೇದಿಕೆ’ ವತಿಯಿಂದ ಮಂಗಳವಾರ ನಡೆದ ’ಕರ್ನಾಟಕದ ಇತಿಹಾಸ’ ವಿಶೇಷ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್ ವಿದ್ಯೆಗೆ ನೀಡಿದ ಪ್ರಾಮುಖ್ಯತೆ, ಪರಿಚಯಿಸಿದ ಲಸಿಕೆ, ಕುರುಡರಿಗಾಗಿ ಬ್ರೈಲ್ ಲಿಪಿ ತಂದಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯ ಎಂದರು. ಕನ್ನಂಬಾಡಿ ಕಟ್ಟೆಯ ನಿರ್ಮಾಣ, ಮಹಾಯುದ್ಧದ ಖರ್ಚು ಭರಿಸಿರುವುದು, ಸ್ವಾತಂತ್ರ್ಯದತ್ತ ಇಟ್ಟ ಹೆಜ್ಜೆ, ಸ್ವತಂತ್ರ ಭಾರತದಲ್ಲಿ ಸರ್ಕಾರ ರಚನೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ 2024-25ನೇ ಶೈಕ್ಷಣಿಕ ಸಾಲಿನ ವಾರ್ಷಿಕ ಚಟುವಟಿಕೆಗಳನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಇದರ ಬೈಂದೂರು ತಾಲೂಕು ಮಾಜಿ ಕೋಶಾಧಿಕಾರಿ ಪಿ. ನರಸಿಂಹ ಮೂರ್ತಿ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ, ಅವರು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು. ಪ್ರತಿಫಲದ ಅಪೇಕ್ಷೆ ಇಲ್ಲದೇ ಸೇವೆ ಮಾಡಲು ಮುಂದಾಗಬೇಕು. ವಿಧೇಯತೆ, ವಿನಯತೆ ಅಳವಡಿಸಿಕೊಂಡು ಪರೋಪಕಾರಕ್ಕೆ ಸ್ಪಂದಿಸಬೇಕು ಎಂದು ತಿಳಿಸಿದರು. ಕುಂದಾಪುರ ಎಚ್.ಎಮ್.ಎಮ್. ಶಾಲೆಯ ಶಿಕ್ಷಕಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿಯಾದ ರೇಖಾ ಕೆ., ವಿದ್ಯಾರ್ಥಿ ಪ್ರತಿನಿಧಿಗಳಾದ ಶಮಂತ್ ಹಾಗೂ ಅನುಶಾ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಇತ್ತೀಚೆಗೆ ಘಟಕದ ವತಿಯಿಂದ ನಡೆಸಿದ ಪರಿಸರ ಪ್ರೇಮಿ ಮಣ್ಣಿನ ಗಣಪತಿ ರಚನಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು. ರೋವರ್ಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಉಡುಪಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಪಂಚಾಯತ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ 2024-25 ಯೋಗಾಸನ ಆರ್ಟಿಸ್ಟಿಕ್ ವಿಭಾಗದಲ್ಲಿ ಯೋಗ ಪಟು ತನ್ವಿತಾ ವಿ. ದ್ವಿತೀಯ ಸ್ಥಾನ ಪಡೆದುಕೊಂಡು ಮುಂದೆ ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಆಯ್ಕೆಯಾಗಿದ್ದಾಳೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜೆಸಿಐ ಉಪ್ಪಂದದ 2023ರ ಸಾಲಿನ ಅಧ್ಯಕ್ಷ ಜೆಸಿ ಸಂಸ್ಥೆಗೆ ಹಾಗೂ ಇತರ ಸಂಘ ಸಂಸ್ಥೆಗಳಿಗೆ ಸಲ್ಲಿಸಿದ ಅಪಾರ ಸೇವೆಯನ್ನು ಗುರುತಿಸಿ, ಪ್ರತಿಷ್ಠಿತ ಕಮಲ ಪತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೆಸಿಐ ಉಪ್ಪುಂದ ಮೂಲಕ ಕಳೆದ ಸಾಲಿನಲ್ಲಿ 100 ಕಾರ್ಯಕ್ರಮಗಳನ್ನು ಸಂಘಟಿಸಿದ್ದರು. ತನ್ನ 100ನೇ ಕಾರ್ಯಕ್ರಮಕ್ಕೆ ಪದ್ಮಶ್ರೀ ಪುರಸ್ಕೃತರಾದ ಹರೆಕಳ ಹಾಜಬ್ಬ ಅವರನ್ನು ಹಾಗೂ ವೃಕ್ಷಮಾತೆ ತುಳಸಿ ಗೌಡ ಅವರನ್ನುಅತಿಥಿಯಾಗಿ ಜೆಸಿ ಆಂದೋಲನದಲ್ಲಿ ಸಂಚಲನ ಮೂಡಿಸಿದ ಪ್ರದೀಪ್ ಶೆಟ್ಟಿ ಕಾರಿಕಟ್ಟೆ ಅವರು ಕಳೆದ ವರ್ಷದ ಜೇಸಿ ವಲಯದ ಔಟ್ ಸ್ಟ್ಯಾಂಡಿಂಗ್ ಪ್ರೆಸಿಡೆಂಟ್ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಮಾರಿಕಾಂಬ ಯುತ್ ಕ್ಲಬ್, ಎಸ್ಡಿಎಮ್ ಗೆಳೆಯರ ಬಳಗ, ಕನ್ನಡ ಸಾಹಿತ್ಯ ಪರಿಷತ್ತು, ಕಳವಾಡಿ ಮಾರಿಕಾಂಬ ದೇವಸ್ಥಾನ, ಬಂಟರ ಯುವ ಸಂಘಟನೆ, ಬಂಟ ಯಾನೆ ನಾಡವರ ಸಂಘ, ಕುಂದಾಪುರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ, ಕಳವಾಡಿ ಹವ್ಯಾಸಿ ಕಲಾತಂಡ, ಭಜನಾ ತಂಡ ಹೀಗೆ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತನ್ನನ್ನು ತೊಡಗಿಸಿಕೊಂಡಿರುವ ಅವರುಈ ವರ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಹಾರಾಷ್ಟ್ರದ ನಾಗಪುರದಲ್ಲಿ ಸೆ.28ರಂದು ನಡೆಯಲಿರುವ ವರ್ಡ್ಕ್ಯಾಂಪ್ ಸೆಮಿನಾರ್ನಲ್ಲಿ “Navigating the DPDP Act 2023: What Digital Professionals Need to Know?” ಎಂಬ ವಿಷಯದ ಮೇಲೆ ಫೋರ್ತ್ ಪೋಕಸ್ ಸಂಸ್ಥಾಪಕ ಮತ್ತು ನಿರ್ದೇಶಕರಾದ ವಿ. ಗೌತಮ್ ನಾವಡ ಮಾರ್ಗದರ್ಶನ ನೀಡಲಿದ್ದಾರೆ. ಡಿಜಿಟಲ್ ವೈಯಕ್ತಿಕ ಡೇಟಾ ರಕ್ಷಣೆ ಕಾಯ್ದೆ 2023 (DPDP Act 2023) ಡಿಜಿಟಲ್ ವೃತ್ತಿಪರರು, ಉದ್ಯಮಗಳು ಮತ್ತು ಸಂಸ್ಥೆಗಳು ವೈಯಕ್ತಿಕ ಮಾಹಿತಿಯನ್ನು ಹೇಗೆ ಸಂಗ್ರಹಿಸಬೇಕು ಎಂಬಲ್ಲಿ ಮಹತ್ವದ ಬದಲಾವಣೆಗಳನ್ನು ತಂದಿದೆ. ಗೌತಮ್ ನಾವಡ ಅವರ ಸೇಶನ್, ಈ ಕಾಯ್ದೆಯ ಪರಿಣಾಮಗಳು, ಉಪಯುಕ್ತತೆಗಳು ಮತ್ತು ಸವಾಲುಗಳನ್ನು ವಿವರವಾಗಿ ವಿಶ್ಲೇಷಿಸಿ, ಡಿಜಿಟಲ್ ವೃತ್ತಿಪರರಿಗೆ ಈ ನಿಯಮಾತ್ಮಕ ಪರಿಸರವನ್ನು ಅರ್ಥಮಾಡಿಕೊಡಲಿದೆ. ಅವರ ಬಹುವಾರ್ಷಿಕ ತಂತ್ರಜ್ಞಾನ ಉದ್ಯಮದ ಅನುಭವ ಮತ್ತು ವೆಬ್ ಸೊಲ್ಯೂಷನ್ ಕ್ಷೇತ್ರದಲ್ಲಿ ಸಾಧಿಸಿರುವ ಸಾಧನೆಗಳನ್ನು ಆಧರಿಸಿ, ಗೌತಮ್ ನಾವಡ ಅವರ ಸಶಕ್ತ ಭಾಷಣವು ಡಿಜಿಟಲ್ ವೃತ್ತಿಪರರಿಗೆ ಹೊಸ ಕಾಯ್ದೆಯನ್ನು ಅನುಸರಿಸುವುದು, ಡೇಟಾ ನಿರ್ವಹಣೆ ಮತ್ತು ವೈಯಕ್ತಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಮುದಾಯದ ಸೇವೆಯಲ್ಲಿ ರೋಟರಿ ಸದಾ ಮುಂಚೂಣಿಯಲ್ಲಿದ್ದು, ಸಾರ್ವಜನಿಕರಿಗೆ ಸಂಪೂರ್ಣ ಉಪಯೋಗವಾಗುವಂತಹ ಹತ್ತಾರು ಜನಪರ ಯೋಜನೆಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತದೆ. ಇಂತಹ ಯೋಜನೆಗಳು ಜನರಿಗೆ ನೆರವಾಗುವುದಲ್ಲದೇ, ಧೀರ್ಘಕಾಲದ ತನಕ ಅವರ ಮನಸ್ಸಿನಲ್ಲಿಯೂ ಉಳಿಯುವಂತಾಗುತ್ತದೆ ಎಂದು ರೋಟರಿ ಜಿಲ್ಲಾ ಗವರ್ನರ್ ಸಿಎ ದೇವ್ ಆನಂದ್ ಹೇಳಿದರು. ಅವರು ಮಂಗಳವಾರ ರೋಟರಿ ಕ್ಲಬ್ ಬೈಂದೂರು ವತಿಯಿಂದ ಇಲ್ಲಿನ ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣದಲ್ಲಿ 2024-25ನೇ ಸಾಲಿನ ರೋಟರಿ ಸಾರ್ವಜನಿಕ ಸೇವೆ ಯೋಜನೆಯಡಿ ನಿರ್ಮಿಸಲಾದ ನೂತನ ರೈಲು ಪ್ರಯಾಣಿಕರ ತಂಗುದಾಣವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ ಸಾರ್ವಜನಿಕ ವಲಯದಲ್ಲಿ ರೋಟರಿಯ ಘನತೆಯನ್ನು ಎತ್ತಿಹಿಡಿಯುವಂತಹ ಯೋಜನೆ ರೂಪಿಸಿರುವುದು ಶ್ಲಾಘನಾರ್ಹವಾದುದು ಎಂದರು. ಕೊಂಕಣ್ ರೈಲ್ವೆಯ ಸೀನಿಯರ್ ರೀಜನಲ್ ಟ್ರಾಫಿಕ್ ಮ್ಯಾನೇಜರ್ ದಿಲೀಪ್ ಡಿ. ಭಟ್ ರೋಟರಿ ಮಾಹಿತಿ ಫಲಕವನ್ನು ಉದ್ಘಾಟಿಸಿದರು. ಮೂಕಾಂಬಿಕಾ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಜಯಾನಂದ ಹೋಬಳಿದಾರ್ ಅವರು ರೋಟರಿಯಿಂದ ಸಾರ್ವಜನಿಕರಿಗಾಗಿ ನೀಡಿದ 3 ಬೆಂಚುಗಳನ್ನು ಲೋಕಾರ್ಪಣೆಗೊಳಿಸಿದರು. ರೈಲು ತಂಗುದಾಣ ನಿರ್ಮಾಣಕ್ಕೆ ದೇಣಿಗೆ ನೀಡಿದ ಸುಮತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಈಜಲು ತೆರಳಿದ್ದ ಇಲ್ಲಿನ ಸರಕಾರಿ ಪ್ರೌಢಶಾಲೆಯ 9ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮಂಗಳವಾರ ಸಂಜೆ ನಡೆದಿದೆ. ಇಲ್ಲಿನ ಪಟ್ಟಣ ಪಂಚಾಯತ್ ವ್ಯಾಪ್ತಿಯ ಯೋಜನಾನಗರ ನಿವಾಸಿ ಕೃಷ್ಣ ದೇವಾಡಿಗ ಎಂಬುವರ ಮಗ ನಾಗೇಂದ್ರ (13) ಹಾಗೂ ಬೈಂದೂರು ರೈಲ್ವೆ ನಿಲ್ದಾಣದ ಬಳಿಯ ಜಿ.ಎಂ ಕಂಪೌಂಡ್ ನಿವಾಸಿ ಶಾನು ಶಾಲಿಯಾನ್ ಎಂಬುವರ ಮಗ ಶಾನು ಮೊಹಮದ್ ಶಫಾನ್ (13) ಸಾವನ್ನಪ್ಪಿದ ವಿದ್ಯಾರ್ಥಿಗಳು ಮಧ್ಯವಾರ್ಷಿಕ ಪರೀಕ್ಷೆ ನಡೆಯುತ್ತಿದ್ದು ಮಂಗಳವಾರ ಪರೀಕ್ಷೆ ಮುಗಿಸಿ ಮನೆಗೆ ತೆರಳಿದ್ದರು. ಸಂಜೆ 4 ಗಂಟೆ ಸುಮಾರಿಗೆ ನಾಗೇಂದ್ರ, ಸ್ನೇಹಿತ ಶಾನು ಮೊಹಮದ್ ಶಫಾನ್ ಕೆರೆಕಟ್ಟೆಯಲ್ಲಿ ಈಜಲು ತೆರಳಿದ್ದರು ಎನ್ನಲಾಗಿದೆ. ರಾತ್ರಿಯಾದರೂ ವಿದ್ಯಾರ್ಥಿಗಳು ಮನೆಗೆ ಬರದ್ದನ್ನು ನೋಡಿ ಕೆರೆ ಬಳಿ ಹುಡುಕಾಟ ನಡೆಸಿದಾಗ ಸೈಕಲ್, ಬಟ್ಟೆ ಹಾಗೂ ಎರಡು ಜೊತೆ ಚಪ್ಪಲಿ ಪತ್ತೆಯಾಗಿದೆ. ಬುಧವಾರ ಬೆಳಿಗ್ಗೆ 02:25ರ ವೇಳೆಗೆ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿದೆ. 40 ಅಡಿ ಆಳ ಹಾಗೂ 10-20…
