Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿಯ ಉದ್ಘಾಟನೆಯನ್ನು ಎನ್‍ಡಿಎ  ಪರೀಕ್ಷಾ ತರಬೇತುದಾರರು, ಸಂಪನ್ಮೂಲ ವ್ಯಕ್ತಿಗಳು ಆಗಿರುವ  ಅಶ್ವಿನ್ ವಿಗಾಸ್  ಅವರು ನೆರವೇರಿಸಿ, ಸ್ಪರ್ಧಾತ್ಮಕ ಪರೀಕ್ಷೆಯ ಕುರಿತಾಗಿ ಮಾಹಿತಿಯನ್ನು ನೀಡಿದರು. ಸಮಾರಂಭದಲ್ಲಿ ಕಾಲೇಜಿನ ಗಣಿತ ವಿಭಾಗದ ಮುಖ್ಯಸ್ಥರಾದ ರಾಘವೇಂದ್ರ ನಾಯ್ಕ, ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥರಾದ ಜ್ಞಾನಶೇಖರನ್, ಗಣಕಯಂತ್ರ ವಿಭಾಗದ ಮುಖ್ಯಸ್ಥರಾದ ಸುಜಯ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು, ಬೋಧಕ/ಬೋಧಕೇತರ ವೃಂದದವರು ಉಪಸ್ಥಿತರಿದ್ದರು. ಉಪನ್ಯಾಸಕ ಉದಯ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಡಿಯಲ್ಲಿ ರಚನೆಗೊಂಡ ಕಾನೂನು ನೆರವು ಅಭಿರಕ್ಷಕರ ಕಛೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ಖಾಲಿ ಇರುವ 2 ಉಪ ಕಾನೂನು ನೆರವು ಅಭಿರಕ್ಷಕರು, 5 ಸಹಾಯಕ ಕಾನೂನು ನೆರವು ಅಭಿರಕ್ಷಕರ  ಹುದ್ದೆಗಳಿಗೆ ನ್ಯಾಯವಾದಿಗಳಿಂದ ಹಾಗೂ ಆಫೀಸ್ ಅಸಿಸ್ಟೆಂಟ್ 2 ಮತ್ತು ಕಚೇರಿ ಜವಾನ 2 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಅಭ್ಯರ್ಥಿಗಳು ಅಕ್ಟೋಬರ್ 03, 2024ರ ಒಳಗಾಗಿ ಭರ್ತಿಮಾಡಿದ ಅರ್ಜಿಗಳನ್ನು ಉಡುಪಿ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿಗಳ ಕಛೇರಿಯನ್ನು ಸಂಪರ್ಕಿಸಬಹುದು ಅಥವಾ https://Udupi.dcourts.gov.in ವೀಕ್ಷಿಸ ಬಹುದಾಗಿದೆ ಎಂದು ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶನಿವಾರ ತಡರಾತ್ರಿ ನಡೆದ ಬೈಕ್ ಅಪಘಾತದಲ್ಲಿ ಓರ್ವ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದರೇ, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಪುನೀತ್ (25) ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ತಡರಾತ್ರಿ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಶನಿವಾರ ರಾತ್ರಿ ಹಂಗಳೂರು ನಗು ಪ್ಯಾಲೇಸ್ ಎದುರಿನ ಸರ್ವೀಸ್ ರಸ್ತೆಯಲ್ಲಿ ನಡೆದ ಎರಡು ಬೈಕುಗಳ ಮುಖಾಮುಖಿ ಢಿಕ್ಕಿಯಲ್ಲಿ ಒಂದು ಬೈಕಿನಲ್ಲಿದ್ದ ಸವಾರ ಮೃತಪಟ್ಟು ಇನ್ನೊಂದು ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಮಗ ಮತ್ತು ತಾಯಿ ಗಂಭೀರ ಸ್ಥಿತಿಯಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಭಾನುವಾರ ತಡರಾತ್ರಿ ಚಿಕಿತ್ಸೆಗೆ ಸ್ಪಂದಿಸದೆ ಬುಲೆಟ್ ಸವಾರ ಪುನೀತ್ ಮೃತಪಟ್ಟಿದ್ದಾರೆ. ಅವರ ತಾಯಿ ಪದ್ಮ ಅವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ಇನ್ನೊರ್ವ ಬೈಕ್‌ ಸವಾರ ಶಶಾಂಕ್‌ ಮೊಗವೀರ ಶನಿವಾರ ರಾತ್ರಿ ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದರು. ಇದನ್ನೂ ಓದಿ ► ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಯುವಕ ಸಾವು – https://kundapraa.com/?p=77350 .…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ಸೆ.30: ಕಸ್ತೂರಿ ರಂಗನ್ ವರದಿ ವಿರೋಧಿಸಿ ಜಡ್ಕಲ್ ಗ್ರಾಮ ಪಂಚಾಯತಿಯ ಎಲ್ಲಾ 18 ಸದಸ್ಯರು ಅಕ್ಟೋಬರ್ 21ರಂದು ನಡೆಯಲಿರುವ ವಿಧಾನ ಪರಿಷತ್ ಉಪಚುನಾವಣೆಯನ್ನು ಬಹಿಷ್ಕರಿಸುವ ನಿರ್ಣಯ ಕೈಗೊಂಡಿದ್ದಾರೆ. ಮತದಾನ ಬಹಿಷ್ಕರಿಸುವ ನಿರ್ಧಾರ ಮಾಡಿರುವ ಬೈಂದೂರು ತಾಲೂಕು ವ್ಯಾಪ್ತಿಯ ಜಡ್ಕಲ್ ಪಂಚಾಯತಿಯ ಸದಸ್ಯರು, ಮತದಾನಕ್ಕೆ ವಿವಿಧ ಬೇಡಿಕೆಗಳನ್ನು ಮುಂದಿರಿಸಿದ್ದಾರೆ. ಪರಿಸರ ಸೂಕ್ಷ್ಮ ಪ್ರದೇಶ, ಬಫರ್ ಝನ್ ಶೂನ್ಯಕ್ಕೆ ಇಳಿಸುವುದು, ಈಗಾಗಲೇ ಪರಿಸರ ಸೂಕ್ಷ್ಮ ಪ್ರದೇಶದ ಬಗ್ಗೆ ಹೊರಡಿಸಿರುವ ಸುತ್ತೋಲೆಯನ್ನು ಮೂಕಾಂಬಿಕಾ ಅಭಯಾರಣ್ಯದ ಸೂಕ್ಷ್ಮ ಪ್ರದೇಶ ಎಂಬ ನೆಪದಿಂದ ಸಕ್ಷಮ ಪ್ರಾಧಿಕಾರದಿಂದ ವಾಣಿಜ್ಯ ಭೂ-ಪರಿವರ್ತನೆಗೆ ಪೂರ್ವಾನುಮತಿಯನ್ನು (ಯೋಜನಾ ಪ್ರಾಧಿಕಾರ ಉಡುಪಿ) ಪಡೆಯುವ ಸೂಚನೆ ರದ್ದುಗೊಳಿಸುವಂತೆ ಬೇಡಿಕೆಯನ್ನು ಸರಕಾರದ ಮುಂದಿರಿಸಿದ್ದಾರೆ. ಜಡ್ಕಲ್ ಗ್ರಾಮ ಪಂಚಾಯತ್ ಸದಸ್ಯರಾದ ಪಾರ್ವತಿ, ಭಾರತಿ ಜಿ. ಶೆಟ್ಟಿ, ವನಜಾಕ್ಷಿ ಎಸ್‌.ಶೆಟ್ಟಿ, ಲಕ್ಷ್ಮಣ ಶೆಟ್ಟಿ, ಕೆ.ವಿದ್ಯಾವತಿ ಕನ್ನಂತ, ನಾರಾಯಣ ಶೆಟ್ಟಿ, ವಿ.ಜೆ ದೇವದಾಸ್, ಲಕ್ಷ್ಮೀ ಎಸ್.ಚಂದನ್, ಶ್ರೀಮತಿ, ಚಂದ್ರಮೋಹನ್, ಸೂಲ್ಯ ಬೋವಿ, ಸುಂದರನಾರಾಯಣ, ಸುನೀತಾ, ಮಂಜು, ಶ್ರೀನಿವಾಸ, ಸವಿತಾ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಉಡುಪಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಪಂಚಾಯಿತಿ ಉಡುಪಿ ವತಿಯಿಂದ ನಡೆದ ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಹ್ಯಾಂಡ್ ಬಾಲ್ ನಲ್ಲಿ ಭಾಗವಹಿಸಿದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕೆ. ಶ್ರೀನಿತಾ. ಎಸ್.  ಕಾಮತ್  ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸೆಪ್ಟೆಂಬರ್ 28 ರಂದು  ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಜನತಾ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ರನ್ನರ್ ಅಪ್ ಚಾಂಪಿಯನ್‌ ಶಿಪ್ ತನ್ನದಾಗಿಸಿಕೊಂಡಿದೆ. ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ, ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿದ ದೈಹಿಕ ಶಿಕ್ಷಣ ಉಪನ್ಯಾಸಕ ಹಾಗೂ ಕುಸ್ತಿ ಪಟು ಕೃಷ್ಣ ಉಪಸ್ಥಿತರಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಲಯನ್ಸ್ ಕ್ಲಬ್ ಮತ್ತು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಸಹಯೋಗದಲ್ಲಿ ” ವಿದ್ಯಾರ್ಥಿಗಳಿಗೆ ಪ್ರೇರಣಾ ಭಾಷಣ” ಇತ್ತೀಚೆಗೆ ನಡೆಯಿತು . ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಚೇತನ್ ರಾಮ್ ಮಾತನಾಡಿ, ಹಲವಾರು ಅನುಭವಕಥನ ಮತ್ತು ಉದಾಹರಣೆ ಸಹಿತ ವಿದ್ಯಾರ್ಥಿಗಳಲ್ಲಿ ಸ್ಪೂರ್ತಿ ತುಂಬಿದರು. ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಇದರ ಅಧ್ಯಕ್ಷ ಲಯನ್ ಪ್ರಜ್ಞೆಶ್. ಪ್ರಭು, ಪೋಸ್ಟ್ ಡಿಸ್ಟ್ರಿಕ್ಟ್ ಗವರ್ನರ್ ಎನ್‌. ಎಮ್. ಹೆಗಡೆ, ಲಯನ್ಸ್ ಕ್ಲಬ್ ಸಂಯೋಜಕರಾದ ಲಯನ್ ಮಹಮ್ಮದ್ ಮೌಲಾ, ಕಾರ್ಯದರ್ಶಿ ಲಯನ್ ಡಾ. ರವೀಂದ್ರ, ಲಯನ್ಸ್ ಕ್ಲಬ್ ಇದರ ಮತ್ತಿತರ ಸದಸ್ಯರು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾ ಸಂಸ್ಥಾನದವರ ಆಶಯದಂತೆ ಕುಂದಾಪುರ ವಲಯದ ವಲಯೋತ್ಸವ ಕಾರ್ಯಕ್ರಮವು ಉಪ್ಪುಂದ ಶ್ರೀ ರಾಘವೇಂದ್ರ ಸ್ವಾಮೀ ಮಠದಲ್ಲಿ ಭಾನುವಾರ ದಿನ ನಡೆಯಿತು. ಮಂಗಳೂರು ಹವ್ಯಕ ಮಂಡಲದ ಅಧ್ಯಕ್ಷ ಉದಯಶಂಕರ ನಿರ್ಪಾಜೆ ವಲಯೋತ್ಸವವನ್ನು ಧ್ವಜಾರೋಹಣದೊಂದಿಗೆ ಉದ್ಘಾಟನೆ ಮಾಡಿ ಮಾತನಾಡಿ, ಶ್ರೀ ಸಂಸ್ಥಾನದವರ ಆಶಯದಂತೆ ಯುವಕರು, ಮಹಿಳೆಯರು, ವಿಷೇಶವಾಗಿ ಮಕ್ಕಳನ್ನು ಒಂದು ಕಡೆ ಸೇರಿಸುವ ಕಾರ್ಯವೇ ವಲಯೋತ್ಸವದ ಮೂಲ ಉದ್ಧೇಶ. ಯುವಕರಿಗೆ ನಮ್ಮ ಸಂಸ್ಕೃತಿ, ಭಾಷೆ, ಆಚರಣೆ ಸಂಘಟನೆಯ ಪರಿಚಯ ಮಾಡಲು ಹಾಗೂ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪ್ರದರ್ಶನ ಹಾಗೂ ಎಲ್ಲಾ ವಿಭಾಗದ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶ ಕಲ್ಪಿಸುವ ಉದ್ಧೇಶ ಹೊಂದಿರುತ್ತದೆ ಎಂದು ಹೇಳಿದರು. ಕುಂದಾಪುರ ವಲಯಾಧ್ಯಕ್ಷ ಡಾ| ಎಂ.ವಿ ನಾರಾಯಣ ಸ್ವಾಮೀ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಪ್ರಥ್ವೀಶ ಉಡುಪಿ ಜಿಲ್ಲಾ ಪ್ರಧಾನರು ಯುವವಿಭಾಗ, ಕಾರ್ಯದರ್ಶಿ ನಾಗರಾಜ ಭಟ್, ಕಾರ್ಯಕ್ರಮದ ಸಂಯೋಜಕ ಭರತ್, ಮಂಗಳೂರು ಮಂಡಲದ ರಮೇಶ್ ಸರವೂ, ಮಂಡಲದ ಉಪಾಧ್ಯಕ್ಷ ರಾಜಶೇಖರ ಕಾಕುಂಜೆ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆಯು ಪ್ರತೀ ವರ್ಷ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ’ಆಳ್ವಾಸ್ ವಿರಾಸತ್’ಗೆ ಈ ವರ್ಷ 30ರ ಹರೆಯ. ಈ ಸಂದರ್ಭದಲ್ಲಿ ಅಪೂರ್ವ ಮತ್ತು ವೈಭವದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿ ಸಂಸ್ಕೃತಿ ಪ್ರಿಯರಿಗೆ ರಸದೌತಣವನ್ನು ನೀಡಲು ಯೋಚಿಸಲಾಗಿದೆ. ಇದಕ್ಕಾಗಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದು ’ಆಳ್ವಾಸ್ ವಿರಾಸತ್ – 2024 ನ್ನು ಅತ್ಯಂತ ಯಶಸ್ವೀ ಉತ್ಸವವಾಗಿಸುವಲ್ಲಿ ಪ್ರಯತ್ನಿಸಲಾಗುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ತಿಳಿಸಿದರು. ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ, ಅವರು ವಿದ್ಯಾಗಿರಿಯ ಆವರಣದಲ್ಲಿ ಆಳ್ವಾಸ್ ವಿರಾಸತ್ – 2024 ಡಿಸೆಂಬರ್ 10, 2024ನೇ ಮಂಗಳವಾರದಂದು ಪ್ರಾರಂಭವಾಗಿ ಡಿಸೆಂಬರ್ 15, 2024ನೇ ಭಾನುವಾರದಂದು ಮುಕ್ತಾಯಗೊಳ್ಳಲಿದೆ. ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರಗಳು ಸೇರಿ ಒಟ್ಟು 6 ದಿನಗಳ ಕಾಲ ಈ ಸಾಂಸ್ಕೃತಿಕ ಉತ್ಸವವು ವೈಭವೋಪೇತವಾಗಿ ಜರುಗಲಿದೆ. ಮೊದಲ 05 ದಿನಗಳು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶಿವಮೊಗ್ಗ ಲೋಕಸಭಾ ಸಂಸದರಾದ ಬಿ. ವೈ ರಾಘವೇಂದ್ರ ಅವರನ್ನು ಕೇಂದ್ರ ಸರ್ಕಾರವು ಎರಡು ಪ್ರಮುಖ ಸಂಸದೀಯ ಸಂಸ್ಥೆಗಳಿಗಳಾದ ಸಾರ್ವಜನಿಕ ಉದ್ಯಮಗಳ ಸಮಿತಿಗೆ ಮತ್ತು ಗೃಹ ವ್ಯವಹಾರಗಳ ಇಲಾಖೆ ಸಂಬಂಧಿತ ಸ್ಥಾಯಿ ಸಮಿತಿಗೆ (DRSC) ನೇಮಕಗೊಳಿಸಿ ಆದೇಶ ಹೊರಡಿಸಿದೆ. ಈ ನೇಮಕಾತಿಗಳು ರಾಷ್ಟ್ರೀಯ ನೀತಿ ರಚನೆಯಲ್ಲಿ ಅವರಿಗೆ ಮಹತ್ವದ ಹೊಣೆ ವಹಿಸಲಾಗಿದೆ. ಸಾರ್ವಜನಿಕ ಉದ್ಯಮಗಳ ಸಮಿತಿಯು ಸರ್ಕಾರಿ ಸ್ವಾಮ್ಯದ ಉದ್ಯಮಗಳ ನಿರ್ವಹಣೆ ಮತ್ತು ಕಾರ್ಯಕ್ಷಮತೆಯನ್ನು ಪರಿಶೀಲಿಸುತ್ತದೆ. ಗೃಹ ವ್ಯವಹಾರಗಳ ಸ್ಥಾಯಿ ಸಮಿತಿಯು ಆಂತರಿಕ ಭದ್ರತೆ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಪರಿಶೀಲಿಸುತ್ತದೆ. ಈ ನೇಮಕ ಕುರಿತು ಸಂಸದರಾದ ಬಿ.ವೈ ರಾಘವೇಂದ್ರ ಅವರು ಸಂಸತ ವ್ಯಕ್ತ ಪಡಿಸಿದ್ದು, ನರೇಂದ್ರ ಮೋದೀಜಿ ಅವರಿಗೆ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ ಪಿ ನಡ್ಡಾ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಿರುತ್ತಾರೆ.

Read More