Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕ್ಯಾಸನೂರು ಅರಣ್ಯ ರೋಗವು ಅಥವಾ ಮಂಗನ ಜ್ವರ ಕಾಯಿಲೆಯು ಸಾಮಾನ್ಯವಾಗಿ ನವೆಂಬರ್‌ನಿಂದ ಜೂನ್‌ವರೆಗೆ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆ, ಇವುಗಳ ನಿಯಂತ್ರಣಕ್ಕೆ ಇಲಾಖೆಗಳ ಸಮಾನ್ವಯದೊಂದಿಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೆ.ಎಫ್.ಡಿ ಹಾಗೂ ಇತರ ಪ್ರಾಣಿ ಜನ್ಯ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲು ಆಯೋಜಿಸಲಾದ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾಮಾನ್ಯವಾಗಿ ಪಶ್ಚಿಮ ಘಟ್ಟ ಪ್ರದೇಶಗಳು ಹಾಗೂ ಮಲೆನಾಡು ಭಾಗದಲ್ಲಿ ಕ್ಯಾಸನೂರು ಅರಣ್ಯ ರೋಗವು ಹಲವು ವರ್ಷಗಳಿಂದ ಕಂಡು ಬರುತ್ತಿದೆ. ನಮ್ಮ ಜಿಲ್ಲೆಯಲ್ಲಿಯೂ ಸಹ ಕಾಡಂಚಿನ ಪ್ರದೇಶಗಳಲ್ಲಿ ಈ ಹಿಂದೆ ಆಗಿರುವುದು ಕಂಡು ಬಂದಿದೆ. ಆದರೆ ಪ್ರಸ್ತುತ ಯಾವುದೇ ಪ್ರಕರಣಗಳು ಇರುವುದಿಲ್ಲ ಎಂದರು. ಉಷ್ಣಾಂಶ ಹೆಚ್ಚಿರುವ ನವೆಂಬರ್‌ನಿಂದ ಜೂನ್‌ವರೆಗೆ ಈ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಮೂಕಾಂಬಿಕಾ ಕ್ರೀಡಾಂಗಣದಲ್ಲಿ ಕಾಲೇಜು ಬಾಲಕ – ಬಾಲಕಿಯರ ರಾಜ್ಯಮಟ್ಟದ ಹೊನಲು ಬೆಳಕಿನ ನೆಟ್ ಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣಾ ಸಮಾರಂಭ ಶನಿವಾರ ನಡೆಯಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ದೇವಳದ ವ್ಯವಸ್ಥಾಪನ ಸಮಿತಿಯ ಸದಸ್ಯ ಮಾಹಾಲಿಂಗ ನಾಯ್ಕ್ ವಹಿಸಿದರು. ದೇವಳದ ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಬಹುಮಾನ ವಿತರಿಸಿದರು. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪ್ರಾಂಶುಪಾಲರ ಸಂಘದ ಅಧ್ಯಕ್ಷ ದಿನೇಶ್ ಎಂ. ಕೊಡವೂರು, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಚಂದ್ರಶೇಖರ್ ಶೆಟ್ಟಿ, ಉಡುಪಿ ಜಿಲ್ಲಾ ಉಪ ನಿರ್ದೇಶಕರಾದ ಮಾರುತಿ, ಉಡುಪಿ ಜಿಲ್ಲಾ ಕ್ರೀಡಾ ಸಂಯೋಜಕರಾದ ದಿನೇಶ್ ಕುಮಾರ್‍ ಎ., ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಗೌರವ ಅಧ್ಯಕ್ಷೆ ಜೀವನ್ ಕುಮಾರ್…

Read More

ಕುಂದಾಪ್ರ ಡಾಟ್‌ ಕಾಂ.ಆಲ್ಬಂ ಹಾಡುಗಳ ಜಗತ್ತಿನಲ್ಲಿ ತಮ್ಮನ್ನು ತಾವು ನಿರೂಪಿಸಿಕೊಂಡು ನಿರಂತರವಾಗಿ ಮನ್ನಣೆ & ಅವಕಾಶಗಳನ್ನು ಗಿಟ್ಟಿಸುತ್ತಾ ಗೆಲುವು ಕಾಣುವವರು ಕೆಲವರು ಮಾತ್ರ. ಅಂತಹ ಪ್ರತಿಭೆಗಳಲ್ಲೊಬ್ಬರು ದಾವಣಗೆರೆ ಮೂಲದ ಅಭಿಷೇಕ್ ಮಠದ್! ಇಂತಹ ಸೃಜನಶೀಲ ಮನಸ್ಸಿನ ಅಭಿಷೇಕ್ ಕಣ್ಣಿಗೆ ಬಿದ್ದದ್ದು ದಾರವಾಡದ ದೈತ್ಯ ಡ್ಯಾನ್ಸ್ ಪ್ರತಿಭೆ “ಸುನಿಧಿ ನೀಲೋಪಂತ್”! ಅಭಿಷೇಕ್ ಹಾಗೂ ಸುನಿಧಿ ಪ್ರತಿಭೆಗಳು ಸಮ್ಮೇಳನಗೊಂಡಾಗ ಹುಟ್ಟಿದ್ದೇ ” ನಿಲ್ಲಬೇಡ” ಎಂಬ ಅದ್ಭುತ ಕನಸು! ಅಭಿಷೇಕ್ ಮೂಲತಃ ಒಬ್ಬ ಡ್ಯಾನ್ಸರ್ “ದಾವಣಗೆರೆ ಡ್ಯಾನ್ಸ್ ಕಿಂಗ್” ಎಂದೇ ಖ್ಯಾತರಾಗಿದ್ದ ಇವರು ರ್ಯಾಪರ್ ಚಂದನ್ ಶೆಟ್ಟಿ ಜೊತೆ ಸೇರಿ ಸೃಷ್ಟಿಸಿದ “ಟಕಿಲ” ಆಲ್ಬಂ ಹಾಡು ಯುವ ಜನತೆಯನ್ನು ಹುಚ್ಚೆಬ್ಬಿಸಿ ಕುಣಿಯುವಂತೆ ಮಾಡಿದ್ದು ಇತಿಹಾಸ! ಅಭಿಷೇಕ್ ಮತ್ತೆಂದೂ ಹಿಂದಿರುಗಿ ನೋಡಿಲ್ಲ. ಪರ್ಫೆಕ್ಟ್ ಗರ್ಲ್, ಬಡಪಾಯಿ ಕುಡುಕ, ಆರಾಮ್ಸೆ ಇನ್ನೂ ಹಲವಾರು ಆಲ್ಬಂ ವೀಡಿಯೋ ಹಾಡುಗಳನ್ನು ನಿರಂತರವಾಗಿ ಕೋರಿಯಾಗ್ರಫ್ & ಡೈರೆಕ್ಟರ್ ಮಾಡುತ್ತಾ ಕನ್ನಡಿಗರನ್ನು ಮನಸಾರೆ ರಂಜಿಸುತ್ತಾ ಬಂದಿದ್ದಾರೆ. ಇನ್ನು ಧಾರವಾಡದ ದೈತ್ಯ ಡ್ಯಾನ್ಸ್ ಪ್ರತಿಭೆ “ಸುನಿಧಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ, ಕೊಲ್ಲೂರು ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜು ನೇತೃತ್ವದಲ್ಲಿ ಪದವಿಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ಹೊನಲು ಬೆಳಕಿನ ನೆಟ್ ಬಾಲ್ ಪಂದ್ಯಾಟ 2024 ಶುಕ್ರವಾರ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಂಡಿತು. ರಾಷ್ಟಪ್ರಶಸ್ತಿ ವಿಜೇತ ನಿವೃತ್ತ ಮುಖ್ಯೋಪಾಧ್ಯಾಯ ಬಿ. ಕರುಣಾಕರ ಶೆಟ್ಟಿ‌ ಕಾರ್ಯಕ್ರಮ ಉದ್ಘಾಟಿಸಿದರು. ಬೈಂದೂರು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ಧ್ವಜಾರೋಹಣಗೈದರು. ರಾಜ್ಯದ ಏಕಲವ್ಯ ಪ್ರಶಸ್ತಿ ಪುರಸ್ಕೃತರಾದ ಕೊಲ್ಲೂರು ದೇವಳ ಕಾಲೇಜಿನ ಹಳೆ ವಿದ್ಯಾರ್ಥಿಗಳಾದ ಕಾಮನ್‌ವೆಲ್ತ್ ವಿಜೇತ ಕ್ರೀಡಾಪಟು ಗುರುರಾಜ ಪೂಜಾರಿ ಜಡ್ಡು, ನೆಟ್‌ಬಾಲ್ ಕ್ರೀಡಾಪಟು ನಿತಿನ್ ಅವರನ್ನು ಸನ್ಮಾನಿಸಲಾಯಿತು. ಕೊಲ್ಲೂರು ದೇವಳದ ಕಾರ್ಯನಿರ್ವಣಾಧಿಕಾರಿ ಪ್ರಶಾಂತ್ ಶೆಟ್ಟಿ, ಉಡುಪಿ ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ಉಪನಿರ್ದೇಶಕ ಮಾರುತಿ, ಶಿವರಾಮ ಕೃಷ್ಣ ಭಟ್, ವ್ಯವಸ್ಥಾಪನಾ ಸಮಿತಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ಉತ್ಸವವನ್ನು ಸರಕಾರಿ ಪ್ರೌಢಶಾಲೆ ಬೇಳೂರು ಇಲ್ಲಿನ ವಿಜ್ಞಾನ ಶಿಕ್ಷಕರಾದ ಉದಯ ಗಾಂವಕಾರ  ಶುಕ್ರವಾರದಂದು ಉದ್ಘಾಟಿಸಿ, ವಿಜ್ಞಾನ ಯೋಚಿಸುವ ವಿಧಾನವನ್ನು ಬದಲಾಯಿಸುತ್ತದೆ. ವಿಜ್ಞಾನ ಅಂದರೆ ಪ್ರಶ್ನೆ ಮಾಡುವುದು, ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಪ್ರಶ್ನೆ ಮಾಡುವುದರ ಮೂಲಕ ಹೊಸತನವನ್ನು ಕಂಡುಕೊಳ್ಳಬೇಕು ಎಂದು  ಸಲಹೆ ನೀಡಿದರು.    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದೇವ್ ಎಜುಕೇಶನಲ್ & ಕಲ್ಚರಲ್ ಟ್ರಸ್ಟ್‌ನ ಕಾರ್ಯದರ್ಶಿ  ಕೆ. ರಾಧಾಕೃಷ್ಣ ಶೆಣೈ ಅವರು ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಹಮ್ಮಿಕೊಂಡಿರುವ  ವಿಜ್ಞಾನ ಉತ್ಸವದ ಸದುಪಯೋಗವನ್ನು ಪಡೆದುಕೊಳ್ಳಿ ಎಂದರು. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಹೆಮ್ಮಾಡಿಯ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ರಾಘವೇಂದ್ರ ಕುಲಾಲ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ಕಾಲೇಜಿನ  ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ  ಸುಜಯ್ ಕೋಟೆಗಾರ್, ಹಿರಿಯ ರಸಾಯನ ಶಾಸ್ತ್ರ ಉಪನ್ಯಾಸಕ ರಮಾಕಾಂತ್ ರೇವಣಕರ್ ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ಸಂದೀಪ್ ಗಾಣಿಗ ಸ್ವಾಗತಿಸಿದರು, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್ ವಂದಿಸಿದರು. ವಿದ್ಯಾರ್ಥಿನಿಯರಾದ ಶುಕ್ತಿಜಾ, ವೈಷ್ಣವಿ ಆರ್.ಕೆ ಅತಿಥಿಗಳನ್ನು ಪರಿಚಯಿಸಿದರು. ಅದಿತಿ …

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಹಳೆ ವಿದ್ಯಾರ್ಥಿ ಸಂಘ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಜ್ಜಾಡಿ ಇದರ ರಜತ ಮಹೋತ್ಸವದ ಪ್ರಯುಕ್ತ ನಿರ್ಮಿಸಲಾಗುವ ನೂತನ ತರಗತಿ ಕೊಠಡಿಗಳ ಶಂಕು ಸ್ಥಾಪನೆ ಕಾರ್ಯಕ್ರಮ ಗುರುವಾರ ನಡೆಯಿತು. ಸುಮಾರು 14 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗುವ ಎರಡು ತರಗತಿ ಕೊಠಡಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮನಾಥ ಚಿತ್ತಾಲ್, ಸಂಘದ ರಜತ ಮಹೋತ್ಸವದ ಪ್ರಯುಕ್ತ ಶಾಲೆಗೆ ಅಗತ್ಯವಿರುವ ತರಗತಿ ಕೊಠಡಿ, ಆವರಣ ಗೋಡೆ, ಕಂಪ್ಯೂಟರ್ ವ್ಯವಸ್ಥೆ, ಸ್ಮಾರ್ಟ್ ಕ್ಲಾಸ್ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಅತ್ಯಾವಶ್ಯಕ ಈ ಕಾರ್ಯಗಳಿಗೆ ದಾನಿಗಳು, ಹಳೆ ವಿದ್ಯಾರ್ಥಿಗಳು ಸಹಕಾರ ನೀಡಿ ಶಾಲೆಯ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದರು. ಪುರೋಹಿತರಾದ ಜಿ. ವಿಠಲದಾಸ ಭಟ್ ಮತ್ತು ಜಿ. ವಸಂತ ಭಟ್ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಉಮೇಶ್ ಎಲ್.ಮೇಸ್ತ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ನಾರಾಯಣ ಕೆ. ಗುಜ್ಜಾಡಿ, ಉಪಾಧ್ಯಕ್ಷೆ ಗಾಯತ್ರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯ ಕಂದಾಯ ಸಚಿವರು ಬಗರ್ ಹುಕುಂ (ಅಕ್ರಮ-ಸಕ್ರಮ) ಕಾನೂನಿನ ಅಡಿ ಈಗಾಗಲೇ ಅರ್ಜಿ ನಮೂನೆ 50 ಹಾಗೂ 53 ರ ಅಡಿ ಬಾಕಿ ಇರುವ ಅರ್ಜಿಗಳನ್ನು ತ್ವರಿತ ವಿಲೇವಾರಿ ಮಾಡಬೇಕು ಹಾಗೂ ಹೊಸದಾಗಿ ಅರ್ಜಿ ನಮೂನೆ 57 ರ ಅಡಿ ಬಂದಿರುವ ಅರ್ಜಿಗಳನ್ನು ಸಮಿತಿಯು ಆದಷ್ಟು ಬೇಗ ವಿಚಾರಣೆ ನಡೆಸಿ ಅರ್ಜಿದಾರರರಿಗೆ ಹಕ್ಕು ಪತ್ರ ನೀಡಬೇಕು ಎಂದು ಹೇಳಿದ ಆದೇಶವನ್ನು ಮುಂದೆ ಇಟ್ಟುಕೊಂಡು ಉಡುಪಿ ಜಿಲ್ಲಾಡಳಿತ ಅರ್ಜಿ ನಮೂನೆ 57 ರ ಹೆಚ್ಚಿನ ಅರ್ಜಿಗಳನ್ನು ತಿರಸ್ಕಾರ ಮಾಡಲು ಹೊರಟಿರುವ ವಿಚಾರ ತಿಳಿದು ಬಂದಿರುತ್ತದೆ. ಇದು ಜಿಲ್ಲಾಡಳಿತ ರೈತ ವಿರೋಧಿ ಕ್ರಮವಾಗಿದೆ. ಕುಮ್ಕಿ ಹಕ್ಕು ಕೂಡ ಇದು ಬ್ರಿಟಿಷರ ಕಾಲದಿಂದಲೂ ರೈತ ಅನುಭವಿಸಿಕೊಂಡು ಬಂದ ಅವಕಾಶ. ರೈತನ ಕೃಷಿಗೆ ಅಗತ್ಯವಾದ ಸೊಪ್ಪು, ತರಗೆಲೆ ಇತ್ಯಾದಿ ಇತ್ಯಾದಿ ಪಡೆಯಲು ಕುಮ್ಕಿ ಭೂಮಿ ನೀಡಲಾಗಿದೆ. ಇವತ್ತು ಅದೆಷ್ಟೋ ದಶಕಗಳಿಂದ ರೈತ ಕುಮ್ಕಿ ಭೂಮಿಯಲ್ಲೂ ಕೃಷಿ ಮಾಡಿಕೊಂಡಿದ್ದಾನೆ, ಇವತ್ತು ಕುಮ್ಕಿ ಇತ್ಯಾದಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಂಗಕಲೆಗಳನ್ನು ಪರಿಚಯಿಸುವ ಮತ್ತು ಕಲಾ ಪ್ರಕಾರಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಆಸಕ್ತಿ ಬೆಳೆಸುವ ನಿಟ್ಟಿನಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ಹಟ್ಟಿಯಂಗಡಿಯಲ್ಲಿ ತುಮರಿಯ ಕಿನ್ನರ ಮೇಳ ರಂಗತಂಡದವರಿಂದ ಇರುವೆ ಪುರಾಣ ಎಂಬ ನಾಟಕವನ್ನು ಪ್ರದರ್ಶಿಸಲಾಯಿತು. ಇದು ‘ದಿ ಸ್ಟೋರಿ ಆಫ್ ಎ ಸ್ನೇಟ್ಸ್ ಹು ಡಿಸ್ಕವರ್ ದಿ ಇಂಪಾರೆನ್ಸ್ ಆಫ್ ಬೀಯಿಂಗ್ ಸ್ಟೋ’ ಎಂಬ ಕಥೆಯಿಂದ ಸ್ಫೂರ್ತಿ ಪಡೆದು ಕಟ್ಟಿದ ನಾಟಕವಾಗಿದ್ದು, ಪುಟ್ಟ ಇರುವೆಯೊಂದು ತನ್ನ ಅಸ್ತಿತ್ವದ ಕುರಿತು ಹುಟ್ಟುವ ಪ್ರಶ್ನೆಗಳಿಗೆ ತಮ್ಮವರಿಂದ ಸೂಕ್ತ ಉತ್ತರ ದೊರಕದಿದ್ದಾಗ, ತಾನೇ ಸ್ವತಃ ಉತ್ತರ ಕಂಡುಕೊಳ್ಳಲು ಪಯಣ ಆರಂಭಿಸುತ್ತದೆ. ಮಾರ್ಗದಲ್ಲಿ ಅದು ಗೂಬೆ, ಕಪ್ಪೆ, ಬೆಕ್ಕು, ಕಾಗೆ ಮುಂತಾದ ಪ್ರಾಣಿಗಳನ್ನು ಭೇಟಿಯಾಗಿ ಅಲ್ಪ ಸ್ವಲ್ಪ ಉತ್ತರ ಕಂಡುಕೊಳ್ಳುತ್ತದೆ. ಮುಂದುವರೆದು ಒಂದು ಪಟ್ಟಣವನ್ನು ತಲುಪಿ ಅಲ್ಲಿ ಮನುಷ್ಯರು ಎಸಗುತ್ತಿರುವ ಅನಾಹುತಗಳನ್ನು ಗಮನಿಸುತ್ತದೆ. ವಾಪಸು ತನ್ನ ಗೂಡಿಗೆ ಮರಳಿ ತಮಗೊದಗುತ್ತಿರುವ ಅಪಾಯವನ್ನು ತಿಳಿಸುತ್ತದೆ. ಪ್ರಾಣಿಗಳೆಲ್ಲವೂ ಬೇರೆ ಸ್ಥಳವನ್ನು ಹುಡುಕಿಕೊಂಡು ಹೊರಡುತ್ತವೆ. ಈ ಜಗತ್ತಿನಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಬಿಜೂರು ಮೂರ್ಗೋಳ್ಳಿಹಕ್ಲು ಶ್ರೀ ನಂದಿಕೇಶ್ವರ ಹಾಗೂ ಸಪರಿವಾರ ದೇವಸ್ಥಾನದಲ್ಲಿ ಭಕ್ತರ ಸೇವಾ ಸಂಕಲ್ಪದಂತೆ ನೂತನವಾಗಿ ನಿರ್ಮಾಣವಾಗಿರುವ ಶ್ರೀ ನಂದಿಕೇಶ್ವರ ಸಭಾಭವನ ಇದರ ಉದ್ಘಾಟನಾ ಸಮಾರಂಭವು ನ.23ರಂದು ಬೆಳಗ್ಗೆ 9.30ಕ್ಕೆ ಜರುಗಲಿದೆ. ಮಧ್ಯಾಹ್ನ 12.30ಕ್ಕೆ ಅನ್ನಸಂತರ್ಪಣೆ, 2.30ರಿಂದ ರಿಥಮ್ ನೃತ್ಯ ಮತ್ತು ಕಲಾ ಶಾಲೆ ಬೈಂದೂರು ಇವರಿಂದ ಸಾಂಸ್ಕೃತಿಕ ವೈಭವ ನಡೆಯಲಿದೆ. ಈ ಸಮಾರಂಭದ ಉದ್ಘಾಟನೆಯನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ. ರಾಘವೇಂದ್ರ ಅವರು ನೆರವೆರಿಸಲಿದ್ದಾರೆ ಹಾಗೂ ಅಧ್ಯಕ್ಷತೆಯನ್ನು ಬಿಜೂರು ಮೂರ್ಗೋಳ್ಳಿಹಕ್ಲು ಶ್ರೀ ನಂದಿಕೇಶ್ವರ ದೇವಸ್ಥಾನದ ಅಧ್ಯಕ್ಷರಾದ ಶ್ರೀನಿವಾಸ ಕೆ.ದೇವಾಡಿಗ ಅವರು ವಹಿಸಲಿದ್ದಾರೆ. ದಿವ್ಯ ಉಪಸ್ಥಿತಿಯಾಗಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಇರಲಿದ್ದಾರೆ. ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಾಸ್ಥಾನದ ಆಡಳಿತ ಮೊಕ್ತೇಸರರಾದ ಬಿ. ಅಪ್ಪಣ್ಣ ಹೆಗ್ಡೆ ಅವರು ಶುಭಸಂಶನೆಗೈಯಲಿದ್ದಾರೆ. ಗೌರವ ಉಪಸ್ಥಿತಿಯಾಗಿ ಉಡುಪಿ ಜಿಲ್ಲಾ ಪಂಚಾಯತ್‌ ಮಾಜಿ ಅಧ್ಯಕ್ಷರಾದ ರಾಜು ಪೂಜಾರಿ, ಉಡುಪಿ ಜಿಲ್ಲೆ ಭಾ.ಜ.ಪ ಕಾರ್ಯದರ್ಶಿಯಾದ ಪ್ರಿಯದರ್ಶಿನಿ ಕಮಲೇಶ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಭತ್ತದ ಹುಲ್ಲು ಜೋಡಿಸುವ ಯಂತ್ರ ಚಿತ್ತೂರು ಪೆಟ್ರೋಲ್ ಬಂಕ್ ಸಮೀಪ ಮಗುಚಿದ ಪರಿಣಾಮ ಚಾಲಕ ಮಂಜುನಾಥ್ (37) ಸಾವನ್ನಪ್ಪಿದ್ದಾರೆ. ಅವರು ಕೆರಾಡಿಯಿಂದ ಚಿತ್ತೂರು ಕಡೆಗೆ ಬರುತ್ತಿದ್ದ ವೇಳೆ ಹತೋಟಿ ತಪ್ಪಿ ರಸ್ತೆ ಬದಿಯ ತಗ್ಗು ಜಾಗಕ್ಕೆ ಯಂತ್ರ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು,  ಚಿಕಿತ್ಸೆಗೆ ಸ್ಪಂದಿಸದೆ ಮೃತ ಪಟ್ಟಿದ್ದಾರೆ. ಈ ಬಗ್ಗೆ ಕುಂದಾಪುರ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More