ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಾ.೦೮ರಿಂದ ೧೭ರವರೆಗೆ ನಡೆಯಲಿರುವ ಶ್ರೀ ಮೂಕಾಂಬಿಕಾ ಅಮ್ಮನವರ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಗುರುವಾರ ಬೆಳಿಗ್ಗೆ ದೇವಳದ ಪ್ರಧಾನ ಅರ್ಚಕ ಹಾಗೂ ತಂತ್ರಿ ಡಾ. ಕೆ. ರಾಮಚಂದ್ರ ಅಡಿಗ ನೇತೃತ್ವದಲ್ಲಿ ಗಣಪತಿ ಪ್ರಾರ್ಥನೆ, ನಾಂದಿ ಪುಣ್ಯಾಹ, ಅಂಕುರಾವಾಸ ಸಿಂಹಯಾಗದ ನಂತರ ೧೧-೩೦ಕ್ಕೆ (ವೃಷಭಲಗ್ನ) ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಯಿತು. ಅಪರ ಜಿಲ್ಲಾಧಿಕಾರಿ ವೀಣಾ ಬಿ. ಎನ್., ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ, ಸದಸ್ಯರಾದ ಜಯಾನಂದ ಹೋಬಳಿದಾರ್, ಡಾ. ಅತುಲ್ಕುಮಾರ್ ಶೆಟ್ಟಿ, ಗೋಪಾಲಕೃಷ್ಣ ನಾಡ, ಸಂಧ್ಯಾ ರಮೇಶ್, ರತ್ನಾ ರಮೇಶ್, ದೇವಳದ ಅರ್ಚಕರಾದ ನಾರ್ಸಿ ಗೋವಿಂದ ಅಡಿಗ, ಕೆ. ಎನ್. ಸುಬ್ರಹ್ಮಣ್ಯ ಅಡಿಗ ಮತ್ತಿತರರು ಇದ್ದರು. ಮಧ್ಯಾಹ್ನ ವಿವಿಧ ಧಾರ್ಮಿಕ ಕಾರ್ಯಗಳು ಜರುಗಿತು. ಸಂಜೆ ಯಾಗಶಾಲಾ ಪ್ರವೇಶ, ರಜ್ಜು ಬಂಧನ, ಮುಹೂರ್ತಬಲಿ, ಭೇರಿತಾಡನ, ಕೌತುಕ ಬಂಧನದ ಬಳಿಕ ರಾತ್ರಿ ನಗರೋತ್ಸವ ನಡೆಯಿತು. ಮಾ.೦೯ರ ರಾತ್ರಿ ಮಯೂರಾರೋಹಣೋತ್ಸವ, ಮಾ.೧೦ರ ರಾತ್ರಿ ಡೋಲಾರೋಹಣೋತ್ಸವ,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶಿವನ ಡಮರುಗದಿಂದ ಪ್ರದೋಷಕಾಲದಲ್ಲಿ ಆಗಮ, ತಂತ್ರ ಶಾಸ್ತ್ರಗಳು ಉಗಮವಾಯಿತು ಎಂದು ಪುರಾಣಗಳು ಹೇಳುತ್ತಿವೆ. ಪಾಣೀಮಹರ್ಷಿಯವರಿಂದ ತತ್ವ ಶಾಸ್ತ್ರಗಳು ಹುಟ್ಟಿಕೊಂದ್ದು, ಪ್ರಸ್ತುತ ಇವುಗಳು ಪ್ರಚಲಿತದಲ್ಲಿವೆ ಎಂದು ದೇವಳದ ತಂತ್ರಿ ಕೊಲ್ಲೂರು ಮಂಜುನಾಥ ಅಡಿಗ ಹೇಳಿದರು. ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬುಧವಾರ ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವದ ಸಮಾರೋಪ ಧಾರ್ಮಿಕ ಸಭಾ ಕಾರ್ಯಕ್ರಮ ಶುಭಾಶಂಸನೆಗೈದರು. ಹಿಂದಿನ ಕಾಲದಲ್ಲಿನ ರಾಜ, ಮಹಾರಾಜರು, ಜಮೀನುದಾರರು ಮತ್ತು ಸ್ಥಳೀಯ ಭಕ್ತರು ಸೇರಿ ದೇವರನ್ನು ಆರಾಧಿಸುವ ನೆಲೆಯಲ್ಲಿ ಶಾಸ್ತ್ರಬದ್ಧವಾಗಿ ನಿರ್ಮಾಣ ಮಾಡಿದ್ದಾಗಿದೆ. ದೇವಸ್ಥಾನಗಳನ್ನು ಯಾವುದೇ ಸರ್ಕಾರಗಳು ರಚನೆ ಮಾಡಿದ್ದಲ್ಲ. ಮನುಷ್ಯನ ಶರೀರದಲ್ಲಡಗಿದ ಸೂಕ್ಷ್ಮರೂಪದ ದೇವರ ಶಕ್ತಿಯ ತರಂಗಗಳು ದೇವಳದಲ್ಲಿ ವ್ಯಕ್ತವಾಗುವ ಮೂಲಕ ಒಂದು ವಿಶೇಷವಾದ ಶಕ್ತಿ ಉತ್ಪತ್ತಿಯಾಗುತ್ತದೆ ಎಂಬ ಕಲ್ಪನೆಯೊಂದಿಗೆ ಹಿಂದೆ ನಿಗದಿತ ಸ್ಥಳಗಳಲ್ಲಿ ದೇವಸ್ಥಾನಗಳನ್ನು ನಿರ್ಮಾಣ ಮಾಡಿದ್ದರು. ದೇವಾಲಯ ಹಾಗೂ ದೇವಸ್ಥಾನಗಳಗೆ ವ್ಯತ್ಯಾಸವಿದೆ ಎಂದ ಅಡಿಗರು, ಪ್ರಾಕಾರಗಳಿಲ್ಲದಿರುವ, ದೈವ, ದೇವರುಗಳಿಲ್ಲದ್ದು ದೇವಾಲಯಗಳಾದರೆ, ಶಿಖರ, ಪ್ರಾಕಾರ, ಮಹಾಪೀಠ, ಪರಿವಾರ ದೇವರುಗಳು, ನಿತ್ಯಪೂಜೆ, ಅಭಿಷೇಕ ಇವೆಲ್ಲವೂ…
ಚೈತ್ರ ರಾಜೇಶ್ ಕೋಟ | ಕುಂದಾಪ್ರ ಡಾಟ್ ಕಾಂಗತಕಾಲದ ಪರಂಪರೆಯ ಹಿರಿಮೆ, ದೈವೀ ಕಲೆಯೆಂಬ ಗರಿಮೆ, ಬಣ್ಣ-ಭಿನ್ನಾಣಗಳ ಕಲಾತ್ಮಕ ಕುಲುಮೆ, ಪುರಾಣ-ಇತಿಹಾಸಗಳ ಗೊಂಚಲಿನ ಮಹಿಮೆಯಿರುವ ಕರಾವಳಿ ಭಾಗದ ದೈವಿಕ ಕಲೆ ಹಾಗೂ ಕರ್ನಾಟಕದ ಶ್ರೀಮಂತ ಕಲೆ ಯಕ್ಷಗಾನ. ಭಾಗವತಿಕೆ-ಚಂಡೆ-ಮದ್ದಲೆಗಳ ಝೆಂಕಾರದ ನಡುವೆ ಹೆಜ್ಜೆ-ಗೆಜ್ಜೆಗಳ ವೈಭವದ ಜೊತೆಗೆ ವೇಷಭೂಷಣ ಎಲ್ಲರನ್ನು ಬಹುಬೇಗ ಆಕರ್ಷೀಸುವುದು ಈ ಕಲೆಯ ಸಾಮರ್ಥ್ಯ. ಬಹಳ ಹಿಂದಿನಿಂದಲೂ ಗಂಡುಕಲೆ ಎಂದೇ ಪ್ರಚಲಿತದಲ್ಲಿದ್ದರೂ ಹೆಣ್ಣು ಕೂಡ ಗೆಜ್ಜೆ ಕಟ್ಟಿ ಹೆಜ್ಜೆ ಹಾಕಬಲ್ಲಳು ಎಂದು ಇತ್ತೀಚೆಗೆ ಅನೇಕ ಮಹಿಳೆಯರು ಸಾಬೀತು ಪಡಿಸಿದ್ದಾರೆ. ಆದರೆ 1998ರ ಸುಮಾರಿನ ಆ ಕಾಲದಲ್ಲಿ ಹೆಣ್ಣು ಗೆಜ್ಜೆ ಕಟ್ಟಿ ಕುಣಿಯುವುದು ಸ್ವಲ್ಪ ಕಷ್ಟದ ಪರಿಸ್ಥಿಯೇ ಇತ್ತು. ಈ ಸವಾಲುಗಳ ಮಧ್ಯದಲ್ಲೇ ಬೆಂಗಳೂರಿನಂತಹ ಮಹಾನಗರದಲ್ಲಿ ಮಹಿಳೆಯರನ್ನು ಒಗ್ಗೂಡಿಸಿ, ತರಬೇತಿ ನೀಡಿ ಮಹಿಳೆಯರು ಯಕ್ಷಗಾನವನ್ನು ಮಾಡಬಲ್ಲರು ಎಂದು ತೋರಿಸಿ ಸಾಧಿಸಿದವರು ಗೌರಿ ಕೆ. ಇವರ ಪತಿ ಶ್ರೀನಿವಾಸ ಸಾಸ್ತಾನ ಯಕ್ಷಗಾನ ಗುರು ಮತ್ತು ಕಲಾವಿದರಾಗಿದ್ದರು. ಇವರ ಯಕ್ಷಗಾನ ತಂಡವನ್ನು ನೋಡಿ, ಪ್ರೇರಿತರಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಭಗವಂತನ ಮೇಲೆ ನಂಬಿಕೆ, ವಿಶ್ವಾಸ ಇಟ್ಟು ಯಾವುದೇ ಕಾರ್ಯ ಮಾಡಿದರೆ ಅದರಲ್ಲಿ ಸಫಲತೆ ಕಾಣಲು ಸಾಧ್ಯವಿದೆ. ಜೀವನದಲ್ಲಿ ನಾವು ಮಾಡುವ ಸಂಪಾದನೆ, ಈ ದೇಹ ಯಾವುದೂ ಶಾಶ್ವತವಲ್ಲ. ಭಕ್ತಿ ಮಾರ್ಗದ ಮೂಲಕ ಜೀವನ ಪಾವನಗೊಳಿಸಿಕೊಳ್ಳಲು ನಿರಂತರವಾಗಿ ಭಗವಂತನ ಆರಾಧನೆ, ಉಪಾಸನೆ ಮಾಡಬೇಕು. ಧರ್ಮ ಸಂಗ್ರಹ ಮಾಡುತ್ತಾ ಜೀವನೋತ್ಸಾಹದಿಂದ ಮುನ್ನಡೆಯಬೇಕು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಧರ್ಮಜಾಗೃತಿಯೊಂದಿಗೆ ಸಮಾಜದ ಅಭಿವೃದ್ಧಿ ಕಾರ್ಯ ನಿರಂತರವಾಗಿ ಮಾಡಿಕೊಂಡು ಬಂದಿದೆ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಟ್ರಸ್ಟಿ ಗಣೇಶ ಕಿಣಿ ಬೆಳ್ವೆ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೈಂದೂರು ತಾಲೂಕು, ತ್ರಾಸಿ ವಲಯ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ತ್ರಾಸಿ ವಲಯ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ತ್ರಾಸಿ ವಲಯ, ಜನಜಾಗೃತಿ ವೇದಿಕೆ ತ್ರಾಸಿ ವಲಯ ಮತ್ತು ಭಜನಾ ಪರಿಷತ್ ತ್ರಾಸಿ ವಲಯ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ತಾಲೂಕು ಪಂಚಾಯತ್ ರಾಜ್ ಒಕ್ಕೂಟ ರಿ., ಇದರ ನೂತನ ಅಧ್ಯಕ್ಷರಾಗಿ ವಂಡ್ಸೆ ಗ್ರಾ.ಪಂ. ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಪುನರಾಯ್ಕೆಯಾಗಿದ್ದಾರೆ. ಕುಂದಾಪುರ ತಾಲೂಕು ಸಭಾಂಗಣದಲ್ಲಿ ನಡೆದ ಕುಂದಾಪುರ ತಾಲೂಕು ಪಂಚಾಯತ್ ರಾಜ್ ಒಕ್ಕೂಟದ ಸಭೆಯಲ್ಲಿ ಮುಂದಿನ ಸಾಲಿನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಅವರು ಸತತ ಮೂರನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಕುಂಭಾಶಿ ಗ್ರಾ.ಪಂ. ಅಧ್ಯಕ್ಷೆ ಶ್ವೇತಾ ಎಸ್.ಆರ್., ಉಪಾಧ್ಯಕ್ಷರಾಗಿ ಕಾಲ್ತೋಡು ಗ್ರಾ.ಪಂ.ಸದಸ್ಯ ಅಣ್ಣಪ್ಪ ಶೆಟ್ಟಿ, ಕೋಟೇಶ್ವರ ಗ್ರಾ.ಪಂ ಸದಸ್ಯೆ ರಾಗಿಣಿ ದೇವಾಡಿಗ, ತಲ್ಲೂರು ಗ್ರಾ.ಪಂ. ಸದಸ್ಯ ಉದಯ ಕುಮಾರ್ ತಲ್ಲೂರು, ಕಾರ್ಯದರ್ಶಿಗಳಾಗಿ ಹಂಗಳೂರು ಗ್ರಾ.ಪಂ.ಸದಸ್ಯ ರೋಶನ್, ಹಟ್ಟಿಯಂಗಡಿ ಗ್ರಾ.ಪಂ.ಅಧ್ಯಕ್ಷೆ ಅಮೃತ ಭಂಡಾರಿ, ಕಿರಿಮಂಜೇಶ್ವರ ಗ್ರಾ.ಪಂ.ಸದಸ್ಯ ಆನಂದ ಪೂಜಾರಿ, ಖಜಾಂಚಿಯಾಗಿ ಹೇರೂರು ಗ್ರಾ.ಪಂ. ಸದಸ್ಯ ಸೂಲಿಯಣ್ಣ ಶೆಟ್ಟಿ ಆಯ್ಕೆಯಾಗಿದ್ದಾರೆ. ಸಂಚಾಲಕರು: ವಂಡ್ಸೆ ವಲಯ-ಅಂಪಾರು ಗ್ರಾ.ಪಂ. ಸದಸ್ಯ ಕಿರಣ್ ಹೆಗ್ಡೆ, ಕುಂದಾಪುರ ವಲಯ- ಕಾಳಾವರ ಗ್ರಾ.ಪಂ. ಸದಸ್ಯ ರಮೇಶ ಶೆಟಿ ವಕ್ವಾಡಿ, ಬೈಂದೂರು ವಲಯ-ಹಳ್ಳಿಹೊಳೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಾರದಲ್ಲಿ ಎರಡು ದಿನ ಸಂಚರಿಸುವ ಕೊಚುವೆಲಿ-ಮುಂಬೈ ಲೋಕಮಾನ್ಯ ತಿಲಕ್ ಟರ್ಮಿನಲ್-ಕೊಚುವಲಿ ಗರೀಬ್ರಥ್ ರೈಲಿಗೆ ಮಂಗಳವಾರ ಬೆಳಿಗ್ಗೆ ೬ಕ್ಕೆ ಮೂಕಾಂಬಿಕಾ ರೈಲು ನಿಲ್ದಾಣ ಬೈಂದೂರಿನಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಈ ರೈಲು ಮೂಕಾಂಬಿಕಾ ರೈಲು ನಿಲ್ದಾಣದಲ್ಲಿ ನಿಲುಗಡೆಗೆ ಬಗ್ಗೆ ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ವಿಶೇಷ ಮುತುವರ್ಜಿವಹಿಸಿದ್ದರು. ಸಂಸದರ ಮನವಿ ಮೆರೆಗೆ ಕೇಂದ್ರ ರೈಲ್ವೆ ಇಲಾಖೆ ಹಸಿರು ನಿಶಾನೆ ನೀಡಿತ್ತು. ಇದು ಈ ಭಾಗದ ಪ್ರಯಾಣಿಕರ ಹಲವು ವರ್ಷಗಳ ಕನಸು ನನಸಾಗಿದೆ. ಮುಂಬೈ, ಶಬರಿಮಲೈಗೆ ಹೋಗುವ ಯಾತ್ರಾರ್ಥಿಗಳಿಗೆ ಈ ರೈಲು ಸೇವೆಯಿಂದ ಬಹಳಷ್ಟು ಅನುಕೂಲವಾಗಿದೆ ಎಂದು ಪ್ರತಿಕ್ರೀಯಿಸಿದ ಮೂಕಾಂಬಿಕಾ ಯಾತ್ರಿ ಸಂಘದ ಗೌರವಾಧ್ಯಕ್ಷ ಕುಂಜಾಲು ವೆಂಕಟೇಶ ಕಿಣಿ, ಸಂಸದರಿಗೆ ವಿಶೇಷವಾದ ಕೃತಜ್ಞತೆ ಸಲ್ಲಿಸಿದ್ದಾರೆ. ಸಂಘದ ಅಧ್ಯಕ್ಷ ಜಯಾನಂದ ಹೋಬಳಿದಾರ್, ಉಪಾಧ್ಯಕ್ಷ ಯು. ಉದಯಶಂಕರ್ ಪಡಿಯಾರ್, ಕಾರ್ಯದರ್ಶಿ ಪ್ರಕಾಶ ಪೂಜಾರಿ ಹಾಗೂ ನಿಲ್ದಾಣದ ಟ್ಯಾಕ್ಸಿ, ಆಟೋರಿಕ್ಷಾ ಚಾಲಕ- ಮಾಲಕ ಸಂಘದ ಪದಾಧಿಕಾರಿಗಳು, ಸದಸ್ಯರು, ನಿಲ್ದಾಣದ ಸಿಬ್ಬಂದಿಗಳು ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಮಾ.7: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ, ಜಿಲ್ಲೆಯಲ್ಲಿ ಮುಕ್ತ, ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ನಡೆಸಲು ಅನುಕೂಲವಾಗುವಂತೆ ಈಗಾಗಲೇ ರಚಿಸಲಾಗಿರುವ ವಿವಿಧ ತಂಡಗಳಲ್ಲಿನ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ಜವಾಬ್ದಾರಿಯನ್ನು ಅರಿತು, ಸಮನ್ವಯದಿಂದ ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚಿಸಿದರು. ಅವರು ಇಂದು ಕುಂದಾಪುರದ ಭಂಡಾಕರ್ಸ್ ಕಾಲೇಜಿನಲ್ಲಿ, ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ರ ಸಂಬAಧಿಸಿದAತೆ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸಲು ಈಗಾಗಲೇ, ಮಾದರಿ ನೀತಿ ಸಂಹಿತೆ, ಸೆಕ್ಟರ್ ಅಧಿಕಾರಿಗಳ ತಂಡ, ಪೊಲೀಸ್ ತಂಡ, ಫ್ಲೆöÊಯಿಂಗ್ ಸ್ಕಾ÷್ವಡ್ ತಂಡ, ವೀಡಿಯೋ ವೀಕ್ಷಣಾ ತಂಡ ಸೇರಿದಂತೆ ಹಲವು ತಂಡಗಳನ್ನು ರಚಿಸಲಾಗಿದ್ದು, ಈ ತಂಡಗಳಿಗೆ ನಿಯೋಜಿಸಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಮ್ಮ ಕರ್ತವ್ಯಗಳನ್ನು ಸಂಪೂರ್ಣವಾಗಿ ತಿಳಿದುಕೊಂಡು, ಅದರಂತೆ ಕಾರ್ಯನಿರ್ವಹಿಸುವಂತೆ ತಿಳಿಸಿದರು. ಕರ್ತವ್ಯ ನಿರ್ವಹಣೆ ವೇಳೆಯಲ್ಲಿ ಯಾವುದೇ ಗೊಂದಲಗಳಿಗೆ ಅಸ್ಪದ ನೀಡದೇ, ಅಗತ್ಯವಿದ್ದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲೆ ಮತ್ತು ದೇವಾಲಯಗಳು ಅಭಿವೃದ್ಧಿಗೊಂಡರೇ ಇಡೀ ಗ್ರಾಮವೇ ಅಭಿವೃದ್ಧಿ ಹೊಂದುತ್ತದೆ. ಈ ನಿಟ್ಟಿನಲ್ಲಿ ಸುದೀರ್ಘ 18 ವರ್ಷಗಳ ಇತಿಹಾಸವಿರುವ ಈ ಶಾಲೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ದೇವಾನಂದ್ ಶೆಟ್ಟಿ ಹೇಳಿದರು. ಕೋಳ್ಕೆರೆ ರತ್ನಾಕರ್ ಶೆಟ್ಟಿ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ಇವರಿಂದ ನಡೆಸಲ್ಪಟ್ಟ ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯನ್ನು ನೂತನ ಆಡಳಿತ ಮಂಡಳಿಯಾದ ಬ್ರಹ್ಮಶ್ರೀ ಎಜುಕೇಶನಲ್ ಟ್ರಸ್ಟ್ಗೆ ಹಸ್ತಾಂತರ ಮಾಡುವ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಈ ಸಂದರ್ಭ ಕೆಆರ್ಎಸ್ಎಂಇ ಟ್ರಸ್ಟ್ನ ಅಧ್ಯಕ್ಷೆ ಗಿರಿಜಾ ಆರ್ ಶೆಟ್ಟಿ, ಶಾಲಾ ಸಂಚಾಲಕ ಅರುಣ್ ಕುಮಾರ್ ಶೆಟ್ಟಿ, ಟ್ರಸ್ಟ್ನ ಸದಸ್ಯರುಗಳಾದ ಅಬ್ದುಲ್ ಜುನೈದ್, ಮೋಸಸ್ ಮನೋಹರ ಇವರು ಶಾಲೆಗೆ ಸಂಬಂಧಿಸಿದ ದಾಖಲೆ ಪತ್ರಗಳನ್ನು ಬ್ರಹ್ಮಶ್ರೀ ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷ ಸಂತೋಷ್ ಶೆಟ್ಟಿ ಇವರಿಗೆ ಹಸ್ತಾಂತರಿಸಿ ಶುಭ ಹಾರೈಸಿದರು. ನೂತನ ಆಡಳಿತ ಮಂಡಳಿಯಾದ ಬ್ರಹ್ಮಶ್ರೀ ಎಜುಕೇಶನಲ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಮಾ.6: ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ದೇವಸ್ಥಾನ ಉಪ್ಪುಂದ ಇದರ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಶ್ರೀ ಮನ್ಮಹಾ ರಥೋತ್ಸವ ಸೋಮವಾರ ಸಕಲ ವಾದ್ಯಘೋಷಗಳೊಂದಿಗ ವಿಜಂಭೃಣೆಯಿಂದ ನಡೆಯಿತು. ಸುಮಾರು 25ವರ್ಷಗಳ ಬಳಿಕ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಶ್ರೀ ಮನ್ಮಹಾ ರಥೋತ್ಸವ ನಡೆದಿದ್ದು ದೇವಸ್ಥಾನವನ್ನು ಹೂವಿನ ಅಲಂಕಾರದಲ್ಲಿ ಶೃಂಗರಿಸಲಾಗಿತು. ಸಾವಿರಾರು ಭಕ್ತಾಧಿಗಳು ಆಗಮಿಸಿ ಅಮ್ಮನವರ ದರುಶನ ಪಡೆದು ಅನ್ನಪ್ರಸಾದ ಪಡೆದರು. ಸ್ಥಳೀಯ ಸಂಘ ಸಂಸ್ಥೆಯ ಸದಸ್ಯರು, ಭಕ್ತಾಧಿಗಳು ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು. ಹಣ್ಣುಕಾಯಿ ಹಾಗೂ ವಿವಿಧ ಸೇವೆಗಳು ಪ್ರಾರಂಭಗೊಂಡಿತ್ತು. ಬೆಳಗ್ಗೆ ಪರವಾರ ಗಣಗಳಾದ ಚಂಡಿಕಾಯೈ, ಅಂಬಿಕಾಯೈ, ಮಹಾಸಿಂಹಾಯ, ಗಣಪತಿ, ದಕ್ಷಿಣ ಮೂರ್ತಿ, ಇಂದ್ರ, ಅಗ್ನಿ, ಯಮ, ನಿರ್ಯತಿ, ವರುಣ, ವಾಯು, ಸೋಮ, ಈಶಾನ, ಬ್ರಹ್ಮ, ಅನಂತ, ವೀರಭದ್ರ, ವಿಘ್ನೇಶ, ಬ್ರಾಹ್ಮಿ, ಮಹೇಶ್ವರೀ, ಕೌಮಾರ್ಯೆ, ವೈಷ್ಣವಿ, ವರಾಹಿ, ಇಂದ್ರಾಣಿ, ಚಾಮುಂಡಿ, ಮಾತೃಭ್ಯೋ, ಲೋಕ ಮಾತೃಭ್ಯೋ, ಸರ್ವಮಾತೃಭ್ಯೋ, ಸರ್ವಮಾತೃಗಣೇಭ್ಯೋ, ಲಕ್ಷ್ಮೈ, ಭೂಚರ್ಯೆ, ಖೇಚರ್ಯ, ಶಾಸ್ತಾರ, ದುರ್ಗಾ, ಸ್ಕಂದ, ಧನಧಾಯಿ, ಮುಂಡಿನಿ, ಹಾದಿನ್ರಿ, ಮೋದಿನಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನವದೆಹಲಿಯ ತಾಲ್ಕೋತ್ಕರ್ ಕ್ರೀಡಾಂಗಣದಲ್ಲಿ ಭಾರತ ಸರ್ಕಾರ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವಾಲಯ, ಕರ್ನಾಟಕ ಸರ್ಕಾರ ವತಿಯಿಂದ ಜಂಟಿಯಾಗಿ ಜರುಗಿದ ದೆಹಲಿ ಕನ್ನಡ ಸಂಘದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಅನಿವಾಸಿ ಭಾರತೀಯ ಸಿಎ ರಮಾನಂದ ಪ್ರಭು ಅವರನ್ನು ಸನ್ಮಾನಿಸಲಾಯಿತು.
