Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಕಾಪು ಇದರ ಜೀರ್ಣೋದ್ಧಾರ ಸಮಿತಿ ಹಾಗೂ ನವದುರ್ಗಾ ಲೇಖನ ಯಜ್ಞ ಸಮಿತಿಯ ಬೈಂದೂರು ತಾಲೂಕು ಮಟ್ಟದ ಸಭೆಯು ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ಇತ್ತೀಚೆಗೆ ನಡೆಯಿತು. 9 ಮಾತೆಯರು ಜ್ಯೋತಿ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಶ್ರೀ ದೇವಳದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಉದ್ಯಮಿ ಕೆ. ವಾಸುದೇವ ಶೆಟ್ಟಿ ಸಭೆಯನ್ನು ಉದ್ಧೇಶಿಸಿ ಮಾತನಾಡಿ, ಕಾಪು ಅಮ್ಮನ ದೇವಾಲಯವನ್ನು ಅಂದಾಜು 100 ಕೋಟಿ ವೆಚ್ಚದಲ್ಲಿ ಸುವ್ಯವಸ್ಥಿತವಾಗಿ ಜೀರ್ಣೋದ್ಧಾರ ಮಾಡಲು ನಿಶ್ಚಿಯಿಸಲಾಗಿದೆ. 1ನೇ ಹಂತದ 30 ರಿಂದ 4೦ ಕೋಟಿ ರೂ. ಗಳ ಕಾಮಗಾರಿ ಮುಗಿದಿದ್ದು, ಕಾಪು ಅಮ್ಮನ ವಾಖ್ಯ ನುಡಿಯಂತೆ ನಾವು ದೇವಳದ ಅಭಿವೃದ್ಧಿಯ ಬಗ್ಗೆ ಮಾತ್ರ ಪ್ರಚಾರವನ್ನು ಜಿಲ್ಲೆ, ರಾಜ್ಯ, ರಾಷ್ಟ್ರ, ವಿದೇಶದಲ್ಲೂ ಮಾಡುತ್ತಿದ್ದು ಹಣ ಸಂಗ್ರಹ ಮಾಡಲು ಎಲ್ಲಿಗೂ ಹೋಗುವುದಿಲ್ಲ, ಅಮ್ಮನ ಭಕ್ತರು ಕ್ಷೇತ್ರಕ್ಕೆ ಬಂದು ದೊಡ್ಡ ಮೊತ್ತದ ದೇಣಿಗೆ ನೀಡುತ್ತಿದ್ದು ಅಭಿವೃದ್ಧಿ ಕಾರ್ಯ ಉತ್ತಮವಾಗಿ ನಡೆಯತ್ತಿದ್ದು, ಲೇಖನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್ ಬೈಂದೂರು, ರಾಮಕ್ಷತ್ರಿಯ ಸಮಾಜ ಬೈಂದೂರು, ರಾಮಕ್ಷತ್ರಿಯ ಮಾತೃ ಮಂಡಳಿ ಬೈಂದೂರು ಹಾಗೂ ರಾಮಕ್ಷತ್ರಿಯ ಯುವಕ ಸಮಾಜ ಬೈಂದೂರು ಇವರ ಜಂಟಿ ಆಶ್ರಯದಲ್ಲಿ ಭಾನುವಾರ ಇಲ್ಲಿನ ಶ್ರೀ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಇತ್ತೀಚಿಗೆ ನಿಧನರಾದ ಮಾಜಿ ಶಾಸಕರಾದ ಕೆ. ಲಕ್ಷ್ಮೀನಾರಾಯಣ ಹಾಗೂ ಪುರಸಭಾ ಮಾಜಿ ಅಧ್ಯಕ್ಷರಾದ ಹೊಸಾಡು ಸುಬ್ರಾಯ ಶೇರುಗಾರ್‌ ಅವರಿಗೆ ನುಡಿನಮನ ಸಲ್ಲಿಸಲಾಯಿತು. ಈ ಸಂದರ್ಭ ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್‌ನ ಮ್ಯಾನೇಜಿಂಗ್‌ ಟ್ರಸ್ಟೀ ಬಿ. ರಾಮಕೃಷ್ಣ ಶೇರುಗಾರ್‌ ಅವರು ಸಭೆಯನ್ನುದ್ದೇಶಿಸಿ ಮಾತನಾಡಿ, ರಾಮಕ್ಷತ್ರಿಯ ಸಮುದಾಯದಲ್ಲಿ ಜನಿಸಿದ ಇಬ್ಬರು ಮಹನೀಯರು ಸಮುದಾಯ ಹಾಗೂ ಸಮಾಜದಲ್ಲಿ ತಮ್ಮ ಅವಿರತ ಸೇವೆಯ ಮೂಲಕ ಗುರುತಿಸಿಕೊಂಡಿದ್ದರು. ಮಾಜಿ ಶಾಸಕರಾದ ಕೆ. ಲಕ್ಷ್ಮೀನಾರಾಯಣ ಅವರು ಕಷ್ಟದಿಂದ ಓದಿ ಸರಕಾರಿ ಉದ್ಯೋಗ ಪಡೆದ ಬಳಿಕವೂ ಉನ್ನತವಾದುದನ್ನು ಸಾಧಿಸಬೇಕು ಎಂಬ ಛಲದಿಂದ ಸ್ವಂತ ಉದ್ಯಮ ಸ್ಥಾಪಿಸಿ ಹೆಸರು ಮಾಡಿದ್ದರು. ಅನಿರೀಕ್ಷಿತವಾಗಿ ರಾಜಕೀಯಕ್ಕೆ ಬಂದು ಒಂದು ಭಾರಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಅಂಪಾರು ವೃತ್ತಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಪ್ರದರ್ಶನದೊಂದಿಗೆ ವಲಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಸತೀಶ್, ರತ್ನಕುಮಾರ್ ಮತ್ತು ಪ್ರಿಯಾಂಕಾ ತರಬೇತಿ ನೀಡಿರುತ್ತಾರೆ. ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ, ಮುಖ್ಯಶಿಕ್ಷಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಶುಭಕೋರಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಜಿಲ್ಲಾಪಂಚಾಯತ್ ಉಡುಪಿ, ಜಿಲ್ಲಾಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಡುಪಿ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳ ಕಛೇರಿ ಉಡುಪಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ  ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯ ನಿಮಿತ್ತ ಕುಂದಾಪುರ ತಾಲೂಕು ಮಟ್ಟದ ಸಾಕ್ಷರತೆ ಕುರಿತು ನಡೆದ ಹಿರಿಯ ಪ್ರಾಥಮಿಕ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ ವಿದ್ಯಾರ್ಥಿನಿ ರಶ್ಮಿತಾ ಆರ್ ಪ್ರಥಮ ಸ್ಥಾನ ಪಡೆದಿರುತ್ತಾಳೆ. ಅವರಿಗೆ ಆಡಳಿತ ಮಂಡಳಿ, ಮುಖ್ಯಶಿಕ್ಷಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಶುಭಕೋರಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ  ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಎತ್ತರ ಜಿಗಿತದಲ್ಲಿ ಸಿನನ್ ಚಿನ್ನದ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಯ ಸಾಧನಪಥ ಇನ್ನಷ್ಟು ಬೆಳೆಯಲಿ ಎಂದು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾರೈಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದರೆ: ’ಮಹಿಳೆಯರು ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ವ್ಯಕ್ತಪಡಿಸುವ ವೇದಿಕೆಗಳು ನಿರ್ಮಾಣಗೊಳ್ಳಬೇಕುʼ ಎಂದು ಬಂಟರ ಮಹಿಳಾ ಸಂಘದ ಮೂಡುಬಿದಿರೆ ಘಟಕದ ಅಧ್ಯಕ್ಷೆ ಶೋಭಾ ಎಸ್. ಹೆಗ್ಡೆ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವತಿಯಿಂದ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ’ಸಕ್ಷಮ – ಆಳ್ವಾಸ್ ಮಹಿಳಾ ಸಂಘಟನೆಯ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಸ್ತುತ ಸಮಾಜದಲ್ಲಿ ಮಹಿಳೆ ಹಲವಾರು ಸಮಸ್ಯೆಗಳನ್ನು ತೋರ್ಪಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದರೆ, ಇಂತಹ ವೇದಿಕೆಗಳ ಮೂಲಕ ಆಕೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಬೇಕು ಎಂದು ಅವರು ಆಶಿಸಿದರು. ಮುಂದಿನ ದಿನಗಳಲ್ಲಿ ಸಕ್ಷಮ ಸಂಘಟನೆಯ  ಮೂಲಕ ಅನೇಕ ಸಮಾಜಮುಖಿ ಕಾರ್ಯ ನಡೆಯಲಿ. ಸಂಘಟನೆಯ ಎಲ್ಲಾ ನೂತನ ಪದಾಧಿಕಾರಿಗಳು ತಮ್ಮ ತಮ್ಮ ಜವಾಬ್ದಾರಿಯನ್ನು ಮುತುವರ್ಜಿ ಹಾಗೂ ಚಾಕಚಕ್ಯತೆಯಿಂದ ನಿಭಾಯಿಸಬೇಕು ಎಂದು ಸಲಹೆ ನೀಡಿದರು.     ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮಾತನಾಡಿ,  ಸರಿಯಾದ ಶಕ್ತಿ ಮತ್ತು ಸಾಮರ್ಥ್ಯದ ಶಕ್ತಿಯೇ ಸಕ್ಷಮ. ಮಹಿಳೆಯರು ತಮ್ಮ ಶಕ್ತಿಯನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಕ್ರಿಯಾಶೀಲತೆ ಮತ್ತು ಸ್ಪರ್ಧಾತ್ಮಕ ಮನೋಭಾವನೆ ಬೆಳೆಸುವ ಉದ್ದೇಶದಿಂದ ಶೈಕ್ಷಣಿಕ ವರ್ಷದ ಪ್ರಥಮ ಸೆಮಿಸ್ಟರ್ ಅವಧಿಯಲ್ಲಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಹುಡುಗ ಮತ್ತು ಹುಡುಗಿಯರಿಗೆ ನಾಲ್ಕು ತಂಡಗಳನ್ನಾಗಿ (ಎಮರಾಲ್ಡ್, ಸಪಾಯರ್, ರೂಬಿ ಮತ್ತು ಟೋಪಾಜ್ ) ರಚಿಸಿ ಜೂನ್ ಆರಂಭದಿಂದ ಸೆಪ್ಟೆಂಬರ್ ಅಂತ್ಯದವರೆಗೆ  ವಿವಿಧ ರೀತಿಯ ಒಳಾOಗಣ ಮತ್ತು ಹೊರಾಂಗಣ ಕ್ರೀಡೆ, ಸಾಂಸ್ಕೃತಿಕ  ಸಹಪಠ್ಯಚಟುವಟಿಕೆ ಮತ್ತು ಶಿಸ್ತು ಇತ್ಯಾದಿ ವಿಭಾಗಗಳಲ್ಲಿ ತೋರಿದ ಸರ್ವಾಂಗೀಣ ಪ್ರಗತಿಯನ್ನು ಪರಿಗಣಿಸಿ ನೀಡಲಾಗುವ ಪ್ರತಿಷ್ಠಿತ ವಿಕ್ಟರ ಅವಾರ್ಡ್ ಪ್ರಶಸ್ತಿಯನ್ನು ವರ್ಷದ ಪ್ರಥಮಾರ್ದದಲ್ಲಿ ಸಪಾಯರ್ ತಂಡ ತನ್ನ ಮಡಿಗೇರಿಸಿಕೊಂಡಿತು. ಅಪರಾಹ್ನ ನಾಲ್ಕು ತಂಡದ ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನದೊಂದಿಗೆ ಕಾರ್ಯಕ್ರಮ ಚಾಲನೆಗೊಂಡಿತು. ಜಿದ್ದಾಜಿದ್ದಿನಿಂದ ಕೂಡಿದ ಹಗ್ಗಜಗ್ಗಾಟ, ಒಂಟಿ ಕಾಲಿನ ರಿಲೇ ಸ್ಪರ್ಧೆಯಲ್ಲಿ ಎಲ್ಲಾ ತಂಡದ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡು ಸಂಭ್ರಮಿಸಿದರು. ಮಿನುಗುತ್ತಿರುವ ಆಕರ್ಷಕ ರಜತ ಟ್ರೋಫಿಯನ್ನು ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರ ಸಮ್ಮುಖದಲ್ಲಿ ಸಪಾಯರ್ ತಂಡದ ನಾಯಕ ಪ್ರಜ್ವಲ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಸೆ.29: ಬೈಕ್‌ ಹಾಗೂ ಬುಲೆಟ್‌ ಮುಖಾಮುಖಿ ಢಿಕ್ಕಿಯಾಗಿ ಬೈಕ್‌ ಸವಾರ ಮೃತಪಟ್ಟ ಘಟನೆ ಹಂಗಳೂರಿನ ನಗು ಪ್ಯಾಲೇಸ್‌ ಎದುರುಗಡೆಯ ಸರ್ವೀಸ್‌ ರಸ್ತೆಯಲ್ಲಿ ಘಟನೆ ನಡೆದಿದೆ. ಕುಂದಾಪುರ ಬಾಳೆಹಿತ್ಲು ನಿವಾಸಿಯಾದ ವೆಂಕಟೇಶ್‌ ಎಂಬುವವರ ಪುತ್ರ ಶಶಾಂಕ್‌ ಮೊಗವೀರ (22) ಎಂದು ಗುರುತಿಸಲಾಗಿದೆ. ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಶಶಾಂಕ ಮೊಗವೀರ ರಾತ್ರಿ 11.00 ರ ವೇಳೆಗೆ ರಿಲಯನ್ಸ್‌ ಪೆಟ್ರೋಲ್‌ ಬಂಕಿನಲ್ಲಿ ಪೆಟ್ರೋಲ್‌ ತುಂಬಿಸಿಕೊಂಡು ಮನೆಗೆ ಹಿಂತಿರುಗುವ ಸಮಯದಲ್ಲಿ ಅಪಘಾತವಾಗಿದ್ದು ತಕ್ಷಣ ಅವರನ್ನು ಮಣಿಪಾಲದ ಕೆಏಂಸಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮದ್ಯೆ ಅವರು ಕೊನೆರುಸಿರೆಳೆದಿದ್ದಾರೆ. ಬುಲೆಟ್‌ ಸವಾರ ಮತ್ತು ಹಿಂದೆ ಕುಳಿತಿದ್ದ ಮಹಿಳೆಯೂ ಕೂಡ ಗಂಭೀರವಾಗಿ ಗಾಯಗೊಂಡಿದ್ದು ಇಬ್ಬರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಕುಂದಾಪುರ ನಗರ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ತಗ್ಗರ್ಸೆ ಮೋಗವೀರ ಗರಡಿ ಸಾರ್ವಜನಿಕ ಶ್ರೀ ಶಾರಾದೋತ್ಸವ ಸಮಿತಿಯ ಶಾರದೋತ್ಸವ ರಜತ ಮಹೋತ್ಸವ ಸಂಭ್ರಮ ಅ.06ರಿಂದ ಅ.07ರ ತನಕ ಜರುಗಲಿದೆ. ಅ.06ರ ಬೆಳಿಗ್ಗೆ 9:30ರಿಂದ ಮಧ್ಯಾಹ್ನ 01ರ ತನಕ ಪ್ರಸಾದ್‌ ನೇತ್ರಾಲಯದಿಂದ ಉಚಿತ ನೇತ್ರ ತಪಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ, ಬೆಳಿಗ್ಗೆ 10.30ಕ್ಕೆ ದುರ್ಗಾಹೋಮ, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ ಅಂಗನವಾಡಿ ಮಕ್ಕಳಿಂದ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ ಮಕ್ಕಳಿಂದ ನೃತ್ಯ ವೈವಿಧ್ಯ ನಡೆಯಲಿದೆ. ರಾತ್ರಿ 09ರಿಂದ ದುರ್ಗಾ ಕಲಾತಂಡ ಪುಗರ್ತೆ ಕಲಾವಿದೆರ್‌ ವಿಟ್ಲ ಮೈರ ಕೇಪು ಅಭಿನಯದ ಕನ್ನಡ ಅದ್ದೂರಿ ಭಕ್ತಿ ಪ್ರಧಾನ ನಾಟಕ ಕಲಿಯುಗದ ಕಾಳಿ ಮಂತ್ರದೇವತೆ ನಾಟಕ ನಡೆಯಲಿದೆ ಎಂದು ತಗ್ಗರ್ಸೆ ಮೋಗವೀರ ಗರಡಿ ಸಾರ್ವಜನಿಕ ಶ್ರೀ ಶಾರಾದೋತ್ಸವ ಸಮಿತಿಯ ಅಧ್ಯಕ್ಷ ಶಿವಾನಂದ ಗಾಣಿಗ ಹಾಗೂ ಕಾರ್ಯದರ್ಶಿ ಅಭಿಷೇಕ್‌ ಸುವರ್ಣ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಭೂಸಾರಿಗೆ ಮಂತ್ರಾಲಯದ ಡೈರೆಕ್ಟರ್ ಜನರಲ್ ದರ್ಮೇಂದ್ರ ಸಾರಂಗಿ ಅವರು ಶುಕ್ರವಾರದಂದು ಶಿವಮೊಗ್ಗ ಜಿಲ್ಲೆಯ ರಾಷ್ಠ್ರೀಯ ಹೆದ್ದಾರಿ ಕಾಮಗಾರಿಗಳ ಪರಿವೀಕ್ಷಣೆಗೆ ಭೇಟಿ ನೀಡಿದ ಸಮಯದಲ್ಲಿ ಸಂಸದರಾದ ಬಿ.ವೈ. ರಾಘವೇಂದ್ರ ಅವರು ನಗರದ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳನ್ನು ಕ್ಷೇತ್ರದ ಜನತೆಯ ಪರವಾಗಿ ಸ್ವಾಗತಿಸಿ, ಅಧಿಕಾರಿಗಳೊಂದಿಗೆ ಸಭೆ ನೆಡೆಸಿ ಕ್ಷೇತ್ರದಲ್ಲಿ ಅಭಿವೃದ್ದಿಯಾಗುತ್ತಿರುವ ಹಾಗೂ ಆಗಬೇಕಾದ ಪ್ರಮುಖ ಕಾಮಗಾರಿಗಳ ಬಗ್ಗೆ ವಿಸ್ತಾರವಾಗಿ ಚರ್ಚಿಸಿದರು. ಈ ಸಂದರ್ಭದಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳಾದ ಸಿಗಂದೂರು ಸೇತುವೆ, ಚಿತ್ರದುರ್ಗ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ರಸ್ತೆ ಹಾಗೂ ಸಾಗರ ಪಟ್ಟಣದ ಚತುಷ್ಪಥ ರಸ್ತೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ಬಗ್ಗೆ ಚರ್ಚಿಸಿದರು. ಟೆಂಡರ್ ಪ್ರಕ್ರಿಯೆ ಮುಗಿದಿರುವ ಕಾಮಗಾರಿಗಳಾದ ಶಿವಮೊಗ್ಗ-ಆನಂದಪುರ 4 ಪಥದ ರಸ್ತೆ, ನೆಲ್ಲಿಸರದಿಂದ-ತೀರ್ಥಹಳ್ಳಿವರೆಗಿನ 4 ಪಥದ ರಸ್ತೆ, ಬೈಂದೂರು-ನಾಗೋಡಿವರೆಗಿನ ದ್ವಿಪಥ ರಸ್ತೆ, ಹಾಗು ಹೊಸೂರು ಮತ್ತು ತಾಳಗುಪ್ಪ ರೈಲ್ವೇ ಮೇಲ್ಸೇತುವೆ ಕಾಮಗಾರಿಗಳನ್ನು ಶೀಘ್ರ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಮನವಿ ಮಾಡಿದರು. 2024-25 ನೇ ಸಾಲಿಗೆ ಮಂಜೂರಾದ ಕಾಮಗಾರಿಗಳಾದ ಆಗುಂಬೆ ರಸ್ತೆ,…

Read More