Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಹಾಗೂ ಲಯನ್ಸ್ ಕ್ಲಬ್ ಕುಂದಾಪುರ ಇವರ ಸಹಭಾಗಿತ್ವದಲ್ಲಿ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಕೋಟೇಶ್ವರ ಇಲ್ಲಿನ ಐಕ್ಯೂಎಸಿ, ವಿದ್ಯಾರ್ಥಿ ವೇದಿಕೆ, ಯುವ ರೆಡ್‌ಕ್ರಾಸ್, ಎನ್.ಎಸ್.ಎಸ್., ರೆಂಜರ್ಸ್‌ ಮತ್ತು ರೋಜರ್ಸ್‌ ಘಟಕಗಳ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು. ಭಾರತೀಯ ರೆಡ್‌ಕ್ರಾಸ್ ಘಟಕದ ಅಧ್ಯಕ್ಷರಾದ ಜಯಕರ ಶೆಟ್ಟಿ ಅವರು ಶಿಬಿರವನ್ನು ಉದ್ಘಾಟಿಸಿ ರಕ್ತದಾನದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಲಯನ್ ರಾಜೀವ್ ಕೋಟ್ಯಾನ್ ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಿವರಾಮ ಶೆಟ್ಟಿ, ಸದಾನಂದ ನಾವಡ, ನಾಗರಾಜ ವೈದ್ಯ ಎಂ., ನಾಗರಾಜ ಯು., ಉಪಸ್ಥಿತರಿದ್ದರು. ರೆಡ್‌ಕ್ರಾಸ್ ಘಟಕದ ಸಂಚಾಲಕರಾದ ಡಾ. ಚೇತನಾ ಎಂ. ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮವನ್ನು ಸಂಯೋಜಿಸಿದರು. ರೇಜರ್ಸ್‌ ಸಂಚಾಲಕರಾದ ರೋಹಿಣಿ ಕಾರ್ಯಕ್ರಮವನ್ನು ನಿರೂಪಿಸಿದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತೋಟಕ್ಕೆ ನೀರು ಬಿಡಲು ಹೋದ ವ್ಯಕ್ತಿ ಶವವಾಗಿ ಪತ್ತೆಯಾದ ಘಟನೆ ಬಡಾಕೆರೆಯಲ್ಲಿ ಇತ್ತೀಚಿಗೆ ಸಂಭವಿಸಿದೆ. ಬಡಾಕೆರೆ ಗ್ರಾಮದ ನಿವಾಸಿ ಜಯಶೀಲ ಶೆಟ್ಟಿ (69) ಅವರು ಮೃತಪಟ್ಟವರು. ಕೃಷಿರಾಗಿದ್ದ ಅವರು ಸೋಮವಾರ ಬೆಳಿಗ್ಗೆ ಮನೆಯಿಂದ ತೋಟಕ್ಕೆ ಬಿಡಲೆಂದು ಹೋಗಿದ್ದರು. ಮಧ್ಯಾಹ್ನವಾದರೂ ಮನೆಗೆ ಬಾರದೆ ಇದ್ದಾಗ ಮನೆಯವರು ಹುಡುಕುತ್ತಾ ತೋಟದ ಕಡೆಗೆ ಹೋಗುವಾಗ ಗುಲಾಬಿ ಶೆಡ್ತಿ ಅವರ ತೆಂಗಿನ ತೋಟದಲ್ಲಿರುವ ಕಾಯಿ ಹಾಕುವ ಉಗ್ರಾಣದ ಒಳಗೆ ಗೊಬ್ಬರದ ಚೀಲದ ಬಳಿ ಮಲಗಿದ ಸ್ಥಿತಿಯಲ್ಲಿ ಮೃತಪಟ್ಟಿದ್ದಾರೆ. ಅವರಿಗೆ ಕೆಲವು ವರ್ಷಗಳಿಂದ ರಕ್ತದೊತ್ತಡ ಮತ್ತು ಮಧುಮೇಹ ಕಾಯಿಲೆ ಇರುವುದಾಗಿ ತಿಳಿದು ಬಂದಿದೆ.ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ : ಯಾವುದೇ ಸರಕಾರಕ್ಕೂ ಅಥವಾ ಯಾವುದೇ ಸಂಸ್ಥೆಗಳಿಗೆ ನೂರಕ್ಕೆ ನೂರರಷ್ಟು ಉದ್ಯೋಗ ನೀಡಲು ಸಾಧ್ಯವಿಲ್ಲ. ಬಹಳಷ್ಟು ಮಂದಿಗೆ ಸ್ವಂತ ಉದ್ಯೋಗ ಮಾಡಲು ಅನುಭವದ ಕೊರತೆ ಇದೆ ಎಂದು ಬೈಂದೂರು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸುಧಾಕರ ಆಚಾರ್ಯ ತ್ರಾಸಿ ಹೇಳಿದರು. ಅವರು ಮಂಗಳವಾರ ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಪ್ರವರ್ತಿತ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಮಕ್ಕಳ ಸಂತೆ – ಬ್ಯುಸಿನೆಸ್ ಡೇ ಇದು ಆವಿಷ್ಕಾರವಲ್ಲ, ಗಂಗೊಳ್ಳಿಯ ಜನ್ಮದತ್ತ ಕಲೆಯ ಸಾಕ್ಷಾತ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಈ ಪ್ರಾಯದಲ್ಲಿ ಸ್ವಂತ ಉದ್ಯೋಗ ಮಾಡುವ ಬಗ್ಗೆ ಮಾಹಿತಿ ಮತ್ತು ಅನುಭವ ದೊರೆತರೆ ಸ್ವಂತ ಉದ್ಯೋಗ ಮಾಡಲು ಸಹಕಾರಿಯಾಗುತ್ತದೆ. ಆರ್ಥಿಕ ಅಭಿವೃದ್ಧಿಗೆ ಊರಿಗೆ, ಸಮಾಜಕ್ಕೆ ದೇಣಿಗೆ, ಪರೋಪಕಾರಿ ಸೇವೆ ಮಾಡಲು ಸ್ವಉದ್ಯೋಗ ಸಹಾಯವಾಗುತ್ತದೆ. ಸರಕಾರಿ ಉದ್ಯೋಗ ಮತ್ತಿತರ ಉದ್ಯೋಗಳಿಗಾಗಿ ಅಲೆದಾಡುವ ಬದಲು ಸ್ವ ಉದ್ಯೋಗದತ್ತ ಗಮನ ಹರಿಸಬೇಕು. ಇದರ ಬಗ್ಗೆ ವಿದ್ಯಾರ್ಥಿಗಳಿಗೆ ಜ್ಞಾನ ಹಾಗೂ ಅನುಭವ ನೀಡುವ ಉದ್ದೇಶದಿಂದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಟ್ರೈ ಗ್ರಾಹಕರ ಹಕ್ಕುಗಳನ್ನು ಕಾಪಾಡುವ ಪ್ರಮುಖ ಸಂಸ್ಥೆಯಾಗಿದ್ದು, ಗ್ರಾಹಕರು ತಮ್ಮ ಹಕ್ಕುಗಳನ್ನು ತಿಳಿದುಕೊಂಡು ದೂರು ಸಲ್ಲಿಸಿದರೆ ಉತ್ತಮ ಸೇವೆಗಳನ್ನು ಪಡೆಯಲು ಸಾಧ್ಯವೆಂದು ಕರ್ನಾಟಕದ ಗ್ರಾಹಕ ಮತ್ತು ಸ್ವಯಂ ಸೇವಾ ಸಂಸ್ಥೆಗಳ ಸಂಘಟಿತ ಒಕ್ಕೂಟದ ಮುಖ್ಯ ಪೋಷಕ ಹಾಗೂ ಸ್ಥಾಪಕ ಸೋಮಶೇಖರ್ ವಿ.ಕೆ. ತಿಳಿಸಿದರು. ಅವರು ಆಳ್ವಾಸ್ ಸಂಸ್ಥೆಯ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಕರ್ನಾಟಕದ ಗ್ರಾಹಕ ಮತ್ತು ಸ್ವಯಂಸೇವಾ ಸಂಸ್ಥೆಗಳ ಸಂಘಟಿತ ಒಕ್ಕೂಟ ಹಾಗೂ ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (TRAI) ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಗ್ರಾಹಕರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ದೂರಸಂಪರ್ಕ ಸೇವೆಗಳ ಕುರಿತ ಅನೇಕ ಮಾಹಿತಿಗಳನ್ನು ನೀಡಿದ ಅವರು, ನೆಟ್ವರ್ಕ್ ತೊಂದರೆಗಳು, ನಿಧಾನಗತಿಯ ಇಂಟರ್ನೆಟ್, ಹೆಚ್ಚುವರಿ ಶುಲ್ಕ ವಿಧಿಸುವುದು, ಅನುಮತಿ ಇಲ್ಲದೆ ಸಿಮ್ ಸಕ್ರಿಯಗೊಳ್ಳುವುದು, ಕೆವೈಸಿ (ಏಙಅ) ಸಮಸ್ಯೆಗಳು, ಮೊಬೈಲ್ ನಂಬರ್ ಪೋರ್ಟಿಂಗ್ ವಿಳಂಬವಾದರೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿಸಿದರು. ಗ್ರಾಹಕರಿಗೆ ಟ್ರೈ ನೀಡಿರುವ ಮುಖ್ಯ ಹಕ್ಕುಗಳಾದ ಗುಣಮಟ್ಟದ ಸೇವೆ ಪಡೆಯುವ ಹಕ್ಕು,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ ಬ್ರಹ್ಮಾವರ ಇವರ ಆಶ್ರಯದಲ್ಲಿ ಮಹಿಳೆಯರ ಬ್ಯೂಟಿ ಪಾರ್ಲರ್ ತರಬೇತಿಯ ಉದ್ಘಾಟನಾ ಸಮಾರಂಭ ಕಾರ್ಯಕ್ರಮವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬ್ರಹ್ಮಾವರ ಕ್ಯೂಟ್ ಬ್ಯೂಟಿ ಪಾರ್ಲರ್ ಮಾಲಕರು ಹಾಗೂ ಬ್ರಹ್ಮಾವರ ಬ್ಯೂಟಿ ಪಾರ್ಲರ್ ಅಸೋಸಿಯೇಷನ್ ಗೌರವಾಧ್ಯಕ್ಷರಾದ ಸುಜಾತಾ ಅಡ್ಡೆಂತಾಯ, ಅವರು ಮಹಿಳೆಯರ ಬ್ಯೂಟಿ ಪಾರ್ಲರ್ ತರಬೇತಿಯ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಮಹಿಳೆಯರ ತುಂಬಾ ಆಸಕ್ತಿದಾಯಕ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದೀರಿ. ಮಹಿಳೆಯರಿಗೆ ಬಹಳ ಮುಖ್ಯವಾಗಿ ಬಾಹ್ಯ ಸೌಂದರ್ಯದ ಜೊತೆಗೆ ಆಂತರಿಕ ಸೌಂದರ್ಯವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ. ಹಾಗಾಗಿ ಬಹಳ ಬೇಡಿಕೆ ಹಾಗೂ ಆಸಕ್ತಿದಾಯಕ ಉದ್ಯಮ ಇದಾಗಿದೆ. ಅವರು 37 ವರ್ಷಗಳ ಅನುಭವವನ್ನು ಪಡೆದುಕೊಂಡಿರುವುದು, ಅವರ ಉದ್ಯಮದ ಮೇಲಿನ ಆಸಕ್ತಿ ಹಾಗೂ ಶ್ರದ್ಧೆಯನ್ನು ತೋರಿಸುತ್ತದೆ. ಬ್ರಹ್ಮಾವರದಲ್ಲಿ ಪ್ರಥಮ ಬಾರಿಗೆ ಬ್ಯೂಟಿ ಪಾರ್ಲರ್ ಪ್ರಾರಂಭಿಸಿರುವುದು, ಹೆಮ್ಮೆಯ ವಿಷಯವಾಗಿದೆ ಎಂದು ಅವರ ಪ್ರಾರಂಭದ ದಿನಗಳನ್ನು ಮೆಲುಕು ಹಾಕಿದರು. ಹಾಗೆಯೇ ದಿನದಿಂದ ದಿನಕ್ಕೆ ಉದ್ಯಮದಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್‌ನ ಪ್ರತಿಭಾ ಪರಂಪರೆಗೆ ಮತ್ತೊಂದು ಸುವರ್ಣ ಕಿರೀಟ ಸೇರ್ಪಡೆಗೊಂಡಿದೆ. ಸಂಸ್ಥೆಯ ಹೆಮ್ಮೆಯ ಬಾಲ ಪ್ರತಿಭೆಗಳಾದ ಪನ್ನಗ ಕೆ. ಆರೂರ್ ಹಾಗೂ ಸ್ಮಿತಾ ಬಿ. ಕೆ. ಅವರಿಗೆ “ಬೆಳೆಯುವ ಸಿರಿ ಮೊಳಕೆಯಲ್ಲಿ” ಎಂಬ ಮಾತಿನಂತೆ 2025ರ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರ ಲಭಿಸಿರುವುದು ಸಂಸ್ಥೆಗೆ ಅಪಾರ ಹೆಮ್ಮೆಯ ವಿಷಯವಾಗಿದೆ. ಬಹುಮುಖ ಪ್ರತಿಭೆಯಾದ ಪನ್ನಗ ಕೆ. ಆರೂರ್ ಅವರು ಕೇವಲ ನಾಲ್ಕನೇ ವಯಸ್ಸಿನಲ್ಲಿಯೇ ಕಲಾರಾಧನೆಗೆ ತೊಡಗಿಕೊಂಡು, ಐದನೇ ವಯಸ್ಸಿನಲ್ಲಿ ಯಕ್ಷಸಿರಿ ಮಕ್ಕಳ ಬಾಲ ಮೇಳದಲ್ಲಿ ವೇಷಧಾರಿಯಾಗಿ ತನ್ನ ಕಲಾ ಪಯಣವನ್ನು ಆರಂಭಿಸಿದ್ದಾರೆ. ಯಕ್ಷಗಾನದಿಂದ ವಾದ್ಯಗಾನದವರೆಗೆ ಅವರ ಪ್ರಯಾಣ ನಿರಂತರವಾಗಿದ್ದು, ಕೊಳಲು, ಚಂಡೆ, ಮದ್ದಲೆ, ಕಂಜಿರ ಸೇರಿದಂತೆ ಅನೇಕ ವಾದ್ಯಗಳಲ್ಲಿ ಆಸಕ್ತಿ ತಳೆದು, ವಿವಿಧ ವೇದಿಕೆಗಳಲ್ಲಿ ತನ್ನ ಅಪೂರ್ವ ವಾದ್ಯ ಕೌಶಲ್ಯವನ್ನು ಪ್ರದರ್ಶಿಸಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರನಾಗಿದ್ದಾರೆ. ಇನ್ನೊರ್ವ ಪ್ರತಿಭಾನ್ವಿತೆ ಸ್ಮಿತಾ ಬಿ. ಕೆ. ಬಾಲ್ಯದಲ್ಲಿಯೇ ಕಲಾ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ತನ್ನದೇ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರನ್ನು ಭೇಟಿ ಮಾಡಿ ಕ್ಷೇತ್ರದ ಸಮಸ್ಯೆಗಳು, ರೈತರು ಮತ್ತು ಗ್ರಾಮೀಣ ಬಡ ಜನರಿಗೆ ಅಗತ್ಯ ಮೂಲ ಸೌಕರ್ಯ ಹಾಗೂ ಬಾಕಿ ಉಳಿದಿರುವ ಹಕ್ಕು ಪತ್ರಗಳು, ಮಂಜೂರಾತಿ ಪತ್ರಗಳನ್ನು ಒದಗಿಸಲು ಇರುವ ಅಡೆ ತಡೆ ನಿವಾರಿಸುವ ಸಂಬಂಧ ಚರ್ಚಿಸಿದರು. ಕ್ಷೇತ್ರದ ಸಮಸ್ಯೆಗಳ ಕುರಿತು ಸೆಪ್ಟೆಂಬರ್ ತಿಂಗಳಿನಲ್ಲಿ ಜನಪ್ರತಿನಿಧಿಗಳ ನಿಯೋಗದೊಂದಿಗೆ ಜಿಲ್ಲಾಧಿಕಾರಿ ಅವರನ್ನು ಭೇಟಿ ಮಾಡಿದ ಶಾಸಕರು ಕುಂದಾಪುರ ತಾಲೂಕಿನ ಉಳ್ಳೂರು-74 ಗ್ರಾಮದಲ್ಲಿ ಡೀಮ್ಡ್ ಫಾರೆಸ್ಟ್ ಸಮಸ್ಯೆಯ ಬಗ್ಗೆ ಗಮನ ಸೆಳೆದಿದ್ದರು. ಸರಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡಿದ್ದರೂ ಹಕ್ಕು ಪತ್ರ ಸಿಗದೇ ಇರುವುದು, ಅಕ್ರಮ ಸಕ್ರಮ ಅರ್ಜಿಗಳು ಇದರಿಂದ ತನಿಖೆಗೆ ಬಾಕಿಯಾಗಿರುವ ಕಾರಣ ಜನ ಸಾಮಾನ್ಯರು ಅನುಭವಿಸುತ್ತಿರುವ ಸಂಕಷ್ಟಗಳನ್ನು ನಿವಾರಿಸಲು ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಬಾಕಿ ಉಳಿದಿದ್ದ ಅಡೆ ತಡೆಗಳನ್ನು ನಿವಾರಿಸಿ ಅಂತಿಮ ಆದೇಶ ಹೊರಡಿಸಿದಕ್ಕಾಗಿ ಜಿಲ್ಲಾಧಿಕಾರಿಗೆ ಧನ್ಯವಾದಗಳನ್ನು ಸಲ್ಲಿಸಿದರು. ಇದಕ್ಕಾಗಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಮಕ್ಕಳ ಸಾಹಿತ್ಯ ಸಮ್ಮೇಳನದಿಂದ ಎಳವೆಯಲ್ಲಿಯೇ ಸಾಹಿತ್ಯದ ಆಸಕ್ತಿಯನ್ನು ಮೂಡಿಸಬಹುದು ಮತ್ತು ಸಾಹಿತ್ಯದ ಹೆಮ್ಮರ ವಿಶಾಲವಾಗಿ ಅರಳಲು ಸಮ್ಮೇಳನ ಪೂರಕವಾಗುತ್ತದೆ ಇಂಥ ಸಮ್ಮೇಳದ ತೀರ ಅಗತ್ಯವಿದೆ ಸಾಂಸ್ಕೃತಿಕ ಮನಸ್ಸಿನಿಂದ ಸಮಾಜ ಪ್ರಗತಿಯತ್ತ ಸಾಗುತ್ತದೆ ಎಂದು ಉನ್ನತಿ ಹಂದಟ್ಟು ನುಡಿದರು. ಅವರು ಕೋಟದ ಕಾರಂತ ಪ್ರತಿಷ್ಠಾನ, ಕೋಟತಟ್ಟು ಗ್ರಾಮ ಪಂಚಾಯತ್, ವೇಣುಗೋಪಾಲಕೃಷ್ಣ ಎಜುಕೇಶನ್ ಸೊಸೈಟಿ ಬಾರ್ಕೂರು, ಗೀತಾನಂದ ಪೌಂಡೇಶನ್ ಮಣೂರು, ಉಸಿರು ಮತ್ತು ನೆನಪು ಕೋಟ ಇವರ ಆಸರೆಯಲ್ಲಿ ನಡೆದ ಐದನೇ ಮಕ್ಕಳ ಸಾಹಿತ್ಯ ಸಮ್ಮೇಳದಲ್ಲಿ ಸಮ್ಮೇಳನ ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿದರು. ವೇದಿಕೆಯಲ್ಲಿ ಪ್ರತಿಷ್ಠಾನದ ಗೌರವ ಅಧ್ಯಕ್ಷ ಆನಂದ ಸಿ. ಕುಂದರ್, ಅತಿಥಿಗಳಾದ ಗಣೇಶ್ ಜಿ.,ಕೋಟತಟ್ಟು ಪಂಚಾಯತ್ ಅಧ್ಯಕ್ಷ ಸತೀಶ್‌ಬಾರಿಕೆರೆ, ಟ್ರಸ್ಟಿಗಳಾದ ಸುಶೀಲಾ ಸೋಮಶೇಖರ್, ಬಾಲ ನಟಿ ಸಮೃದ್ಧಿ  ಮೊದಲಾದವರು ಉಪಸ್ಥಿತರಿದ್ದರು. ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಸ್ವಾಗತಿಸಿದರೆ, ಜೊತೆ ಕಾರ್ಯದರ್ಶಿ ಸತೀಶ್ ವಡ್ಡರ್ಸೆ ನಿರೂಪಿಸಿ, ವಂದಿಸಿದರು. ಬಳಿಕ ವಿವಿಧ ಗೋಷ್ಠಿಗಳು ನಡೆದವು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪ್ರಸ್ತುತ ದಿನಮಾನಗಳಲ್ಲಿ ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಗ್ನಿ ಅವಘಡ, ಪ್ರಕೃತಿ ವಿಕೋಪಗಳಿಂದ ಸಂಭವಿಸಬಹುದಾದ ದುರ್ಘಟನೆಗಳಿಂದ ನಾವು ಹೇಗೆ ಸುರಕ್ಷಿತರಾಗಿ ನಮ್ಮನ್ನು ಕಾಪಾಡಿಕೊಳ್ಳಬೇಕು ಎಂಬ ಅರಿವನ್ನು ಮೂಡಿಸುವಲ್ಲಿ ಸಂಸ್ಥೆಯ ವಿದ್ಯಾರ್ಥಿಗಳಿಗೆ ‘ಸುರಕ್ಷತೆ ಮೊದಲು’ ಎಂಬ ಜನಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಂಗಳೂರಿನ ವೃತ್ತಿಪರ ಅಗ್ನಿಶಾಮಕ ಮತ್ತು ಸುರಕ್ಷತಾ ಅಧಿಕಾರಿಯಾದ ಸತ್ಯರಾಜ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರಾತ್ಯಕ್ಷಿಕೆಗಳ ಮೂಲಕ ಸುರಕ್ಷತೆಯ ಬಗ್ಗೆ ಅರಿವನ್ನು ಮೂಡಿಸಿದರು. ಬೆಂಕಿಯಿಂದ,ನೀರಿನಿಂದ ಮತ್ತು ಅಪಘಾತಗಳು ಸಂಭವಿಸಿದಾಗ ಯಾವ ರೀತಿಯಾಗಿ ಪ್ರತಿಕ್ರಿಯೆಸಬೇಕು ಎಂಬುವುದನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿ ಭಯ ಮುಕ್ತರಾಗಿ ಅದನ್ನು ಎದುರಿಸುವಲ್ಲಿ ನಾವು ಹೇಗೆ ಸಿದ್ಧರಿರಬೇಕೆಂಬುದನ್ನು ತಿಳಿಯಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಹ ಸಂಸ್ಥಾಪಕರು ಮತ್ತು ಸಂಸ್ಥೆಯ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಅವರು ತುರ್ತು ಸಂದರ್ಭದಲ್ಲಿ ಸರಿಯಾಗಿ ಪ್ರತಿಕ್ರಿಯಿಸಿದ್ದಲ್ಲಿ ಮಾತ್ರ ಜೀವ ಉಳಿಸಲು ಸಾಧ್ಯ. ಈ ನಿಟ್ಟಿನಲ್ಲಿ ನಮಗೆ ಮುಂಜಾಗೃತ ಕ್ರಮಗಳ ಬಗ್ಗೆ ತಿಳುವಳಿಕೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನವು ತಲತಲಾಂತರಗಳಿಂದಲೂ ಯಕ್ಷಗಾನಕ್ಕೆ ಪ್ರೋತ್ಸಾಹ ನೀಡುತ್ತಾ ಬಂದಿದ್ದು, ಕರಾವಳಿಯ ಅತ್ಯಂತ ಖ್ಯಾತಿಯ ಮೇಳಗಳಾದ ಮಂದರ್ತಿ, ಚೋಣಮನೆ, ಗೋಳಿಗರಡಿ ಮುಂತಾದ ಯಕ್ಷಗಾನ ಮೇಳಗಳು ನಮ್ಮ ಸೇವೆಯ ಆಟವನ್ನು ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ನಡೆಸುತ್ತಿದ್ದು ಪಡಿಯಕ್ಕಿಯೊಂದಿಗೆ ಸಂಭಾವನೆಯನ್ನೂ ಕೊಟ್ಟು ಯಕ್ಷಗಾನಕ್ಕೆ ವಿಶೇಷ ಪ್ರೋತ್ಸಾಹವನ್ನು ನೀಡುತ್ತಾ ಬಂದಿದೆ. ಹಾಗೆಯೇ ಅನೇಕ  ಹವ್ಯಾಸಿ ಯಕ್ಷಗಾನ ಸಂಘಗಳು ಹಾಗೂ ಯಕ್ಷ ಶಿಕ್ಷಣ ಟ್ರಸ್ಟ್ ,ಉಡುಪಿ ಇವರಿಗೆ ಉತ್ಸವ ಹಾಗೂ ವಿಶೇಷ ದಿನಗಳಲ್ಲಿ ಪ್ರದರ್ಶನಕ್ಕೆ ಅವಕಾಶ ನೀಡಿ ಅನುದಾನವನ್ನ ಕೊಡುವುದರೊಂದಿಗೆ ಪ್ರೋತ್ಸಾಹಿಸುತ್ತಾ ಬಂದಿದೆ ಎಂದು ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಆಡಳಿತ ಧರ್ಮದರ್ಶಿ ಕೆ. ರಮಣ ಉಪಾಧ್ಯಾಯ ಹೇಳಿದರು. ಅವರು ದೇವಳದ ಪ್ರಸನ್ನ ಮಂಟಪ ವೇದಿಕೆಯಲ್ಲಿ ನೂತನವಾಗಿ ನಿರ್ಮಾಣವಾದಂತಹ ಮಿಥುನ್ ದೇವಾಡಿಗ ತೆಕ್ಕಟೆ ಇವರ ಸಂಚಾಲಕತ್ವದ ಶ್ರೀ ಪರ್ಣ ಯಕ್ಷ ಬಳಗ, ತೆಕ್ಕಟ್ಟೆ ಹವ್ಯಾಸಿ ಯುವ ಯಕ್ಷಗಾನ ಸಂಘದ ಪ್ರಥಮ ಸೇವೆಯಾಟವನ್ನು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿ ಯುವ ಕಲಾವಿದರು…

Read More