ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‌ಕ್ರಾಸ್ ಹಾಗೂ ರಾಷ್ಟೀಯ ಸೇವಾ ಯೋಜನಾ ಘಟಕದ ಜಂಟಿ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾಲೇಜಿನಿಂದ ಸಂಗಮ್ ಜಂಕ್ಷನ್‌ವರೆಗೆ ಜಾಥಾ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಜಾಥಾಕ್ಕೆ ಚಾಲನೆ ನೀಡಿದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಕಾಲೇಜಿನ ಆಡಳಿತ ನಿಕಾಯಕರಾದ ರಕ್ಷಿತ್ ರಾವ್, ಯುವ ರೆಡ್‌ಕ್ರಾಸ್ ಕಾರ್ಯಕ್ರಮದ ಸಂಯೋಜಕರಾದ ಯೋಗೀಶ್ ಶ್ಯಾನುಭೋಗ್, ಮಾಲತಿ ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ರಾಜೇಶ್ ಶೆಟ್ಟಿ ಹಾಗೂ ಪೂಜಾ ಕುಂದರ್ ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಹಿ ಜ್ಞಾನೇನ ಸದೃಶಂ ಪವಿತ್ರಮಿಹ ವಿದ್ಯತೇ ಎಂಬ ಧ್ಯೇಯವಾಕ್ಯದಂತೆ ಜ್ಞಾನದಾನವೇ ವಿದ್ಯಾಸಂಸ್ಥೆಗಳ ಪ್ರಧಾನಕಾರ್ಯ. ಅದು ಕೇವಲ ಪಠ್ಯಪುಸ್ತಕದ ಶಿಕ್ಷಣಕ್ಕೆ ಸೀಮಿತವಾಗಿರದೆ, ವಿದ್ಯಾರ್ಥಿಗಳಲ್ಲಿ ಕ್ರಿಯಾಶೀಲತೆಯನ್ನು ಮೂಡಿಸುವ, ಅವರಲ್ಲಿ ಚಿಂತನಾಶೀಲತೆಯನ್ನು ಉದ್ದೀಪನಗೊಳಿಸುವ ಕಾರ್ಯಕ್ರಮಗಳನ್ನೂ ಆಯೋಜಿಸುತ್ತಿರಬೇಕು. ಈ ನಾಡಿನ ಕಲೆ, ಸಾಹಿತ್ಯ, ಸಂಗೀತ ಮತ್ತು ಸಂಸ್ಕೃತಿಗಳ ಸಾರವನ್ನು ವಿದ್ಯಾರ್ಥಿ ಸಮೂಹಕ್ಕೆ ತಲುಪಿಸುವ ಕಾರ್ಯವಾಗಬೇಕು. ಆ ನಿಟ್ಟಿನಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ, ಹಟ್ಟಿಅಂಗಡಿಯಲ್ಲಿ ಭಾವಾಂತರಂಗ-ಪರಿಪೂರ್ಣ ಬದುಕಿನೆಡೆ ನಮ್ಮ ಪಯಣ ಎನ್ನುವ ಸಂಪೂರ್ಣ ಚಟುವಟಿಕೆ ಆಧಾರಿತ ವ್ಯಕ್ತಿತ್ವ ವಿಕಸನ ಕಾರ್ಯಾಗಾರವನ್ನು 14 ವರ್ಷಗಳಿಂದ ನಡೆಸುತ್ತಿದ್ದು, ಈ ವರ್ಷ ಶನಿವಾರದಂದು ಹಮ್ಮಿಕೊಳ್ಳಲಾಯಿತು. ಈ ಕಾರ್ಯಾಗಾರವನ್ನು ಕಾರ್ಯಕ್ರಮಕ್ಕೆ ಆಗಮಿಸಿದ ಸ೦ಪನ್ಮೂಲ ವ್ಯಕ್ತಿಗಳು ಅಟೊಮಿಕ್ ಸ್ಟ್ರಕ್ಚರ್‌ಗೆ ಪರಮಾಣುಗಳನ್ನು ಪೋಣಿಸುವ ಮೂಲಕ ವಿನೂತನ ರೀತಿಯಲ್ಲಿ ಉದ್ಘಾಟಿಸಿದರು. ಈ ಕಾರ್ಯಾಗಾರವನ್ನು ಆಯೋಜಿಸುವ ಕುರಿತಾಗಿ ಮಾತನಾಡಿದ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಮತ್ತು ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಮಕ್ಕಳ ಭಾವನೆಗಳನ್ನು ಹತ್ತಿಕ್ಕದೆ ಅದನ್ನು ಸರಿಯಾದ ಮಾರ್ಗದಲ್ಲಿ ಸಾಗುವಂತೆ ಮಾಡುವುದು ಶಾಲೆಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ ಬ್ರಹ್ಮಾವರ ಇವರ ಆಶ್ರಯದಲ್ಲಿ ಹಪ್ಪಳ ಉಪ್ಪಿನಕಾಯಿ ಮತ್ತು ಮಸಾಲ ಪುಡಿಗಳ ತಯಾರಿಕೆ ತರಬೇತಿಯ ಸಮಾರೋಪ ಸಮಾರಂಭ ಕಾರ್ಯಕ್ರಮವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬ್ರಹ್ಮಾವರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮಾಲಿಕರಾದ ಜೋಸೆಫ್ ಡಿ. ಅಲ್ಮೆಡ, ಅವರು ಹಪ್ಪಳ ಉಪ್ಪಿನಕಾಯಿ ಮತ್ತು ಮಸಾಲ ಪುಡಿಗಳ ತಯಾರಿಕೆ ತರಬೇತಿಯ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಅವರು ಪ್ರಾರಂಭದಲ್ಲಿ 5kg ಉಪ್ಪಿನಕಾಯಿ ತಯಾರು ಮಾಡಿ ದೂರದ ಊರಿನ ಮಾರುಕಟ್ಟೆಗೆ ಹೋಗಿ ಉತ್ಪನ್ನವನ್ನು ಮಾರಾಟ ಮಾಡಿ, ಉದ್ಯಮವನ್ನು ಮುನ್ನಲೆಗೆ ತಂದಿರುವ ವಿಷಯವನ್ನು ಪ್ರಸ್ತಾಪಿಸಿದರು. 34 ವರುಷಗಳ ಅನುಭವವನ್ನು ಪಡೆಯುವಾಗ ಸಾಕಷ್ಟು ತೊಂದರೆಗಳು, ಹಣಕಾಸಿನ ತೊಂದರೆಗಳು ಆಗಿವೆ. ಅವುಗಳನ್ನು ಬಹಳ ಚಾಕಚಕ್ಯತೆಯಿಂದ ಪರಿಹಾರವನ್ನು ಕಂಡುಕೊಳ್ಳುವುದರ ಮುಖಾಂತರ ಉದ್ಯಮದಲ್ಲಿ 34 ವರ್ಷಗಳ ಕಾಲ ನೆಲೆಯೂರಲು ಸಾಧ್ಯವಾಗಿದೆ. ಹಾಗಾಗಿ ಪ್ರಾರಂಭದಲ್ಲಿ ಸ್ವಲ್ಪ ಕಷ್ಟವೆನಿಸಿದರು, ದೃಢ ನಿರ್ಧಾರದಿಂದ ಹಿಂದೆ ಸರಿಬೇಡಿ. ಉದ್ಯಮದಲ್ಲಿ ತಾಳ್ಮೆ ಇರಲಿ, ಸಮಾಜದಲ್ಲಿ ಯಶಸ್ವಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಷಿಯೇಶನ್ ಮಂಗಳೂರು, ಮೂಡುಬಿದಿರೆ ತಾಲೂಕು ಅಮೆಚೂರ್ ಕಬಡ್ಡಿ ಅಸೋಷಿಯೇಶನ್ ಹಾಗೂ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮೂಡಬಿದಿರೆಯ ಜಂಟಿ ಸಹಯೋಗದಲ್ಲಿ ಡಾಕಾದಲ್ಲಿ ನಡೆದ ಎರಡನೇ ಕಬಡ್ಡಿ ವಿಶ್ವಕಪ್‌ನಲ್ಲಿ ಭಾರತೀಯ ಮಹಿಳಾ ತಂಡವನ್ನು ಪ್ರತಿನಿಧಿಸಿ ವಿಶ್ವಕಪ್ ಗೆದ್ದ ಆಳ್ವಾಸ್ ಸ್ಪೋಟ್ಸ್ ಕ್ಲಬ್‌ನ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ ಅವರ ಅಭಿನಂದನಾ ಸಮಾರಂಭ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಸೋಮವಾರ ನಡೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಮಾತನಾಡಿ, ಭಾರತದ ಅನೇಕ ರಾಜ್ಯಗಳು ಕ್ರೀಡಾ ಸಾಧಕರಿಗೆ ಅವರ ಸಾಧನೆಯನ್ನು ಮತ್ತಷ್ಟು ಉತ್ತೇಜಿಸಲು ಸರ್ಕಾರಿ ಉದ್ಯೋಗವನ್ನು ನೀಡುತ್ತಿವೆ. ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ಕೇರಳ ಸರ್ಕಾರಗಳು ಕ್ರೀಡೆಯಲ್ಲಿ ರಾಷ್ಟ್ರ-ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ನೇರ ನೇಮಕಾತಿ ಮೂಲಕ ಉದ್ಯೋಗಗಳನ್ನು ಒದಗಿಸುತ್ತಿರುವುದು ಗಮನಾರ್ಹ. ಇದರ ಪರಿಣಾಮವಾಗಿ ಆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾಮಾಜಿಕ ಜವಾಬ್ದಾರಿತ್ವದ ನೈಜ ಉದಾಹರಣೆಯನ್ನು ನೀಡಿದ ಕುಂದಾಪುರದ ಮೂಡಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ (ಡೇಟಾ ಸೈನ್ಸ್) ವಿಭಾಗ ಮತ್ತು ಕಾಲೇಜಿನ ಎನ್‌ಎಸ್‌ಎಸ್ ಘಟಕ ಸಮಾಜಮುಖಿ ಚಟುವಟಿಕೆಯ ಅಂಗವಾಗಿ ಬ್ರಹ್ಮಾವರದ ‘ಸ್ಪಂದನ’ ವಿಶೇಷ ಚೇತನ ಮಕ್ಕಳ ಶಾಲೆಗೆ ₹10,000 ದೇಣಿಗೆಯನ್ನು ನೀಡಿತು.ಮಕ್ಕಳಿಗೆ ಪ್ರೋತ್ಸಾಹ ಮತ್ತು ಬೆಂಬಲ ನೀಡುವ ಉದ್ದೇಶದಿಂದ ಎಂಐಟಿ ತಂಡವು ಶಾಲೆಗೆ ಭೇಟಿ ನೀಡಿ,ದೇಣಿಗೆಯ ಚೆಕ್ ಅನ್ನು ನೇರವಾಗಿ ವಿದ್ಯಾರ್ಥಿಗಳಿಗೆ ಹಸ್ತಾಂತರಿಸಲಾಯಿತು. ಈ ಕಾರ್ಯಕ್ರಮವನ್ನು ವಿಭಾಗದ ಮುಖ್ಯಸ್ಥರಾದ ಕಾರ್ತಿಕೇಯನ್ ಅವರ ನೇತೃತ್ವದಲ್ಲಿ ನಿರ್ಮಲ್, ಡಾ. ಸ್ಯಾಮ್, ಫರಾನಾ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳು ನೆರವೇರಿಸಿದರು. ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸಂವೇದನೆಯನ್ನು ಬೆಳೆಸುವ ಉದ್ದೇಶ ಈ ಭೇಟಿಯ ಪ್ರಮುಖ ಭಾಗವಾಗಿತ್ತು. ಈ ಸಂದರ್ಭದಲ್ಲಿ ಕಾರ್ತಿಕೇಯನ್ ಅವರು ಮಾತನಾಡಿ, “ಶಿಕ್ಷಣದೊಂದಿಗೆ ಮಾನವೀಯತೆ, ಸಹಾನುಭೂತಿ ಮತ್ತು ಸಾಮಾಜಿಕ ಅರಿವು ವಿದ್ಯಾರ್ಥಿಗಳಲ್ಲಿ ಬೆಳದರೆ ಮಾತ್ರ ನಿಜವಾದ ಉತ್ತಮ ನಾಗರಿಕರು ನಿರ್ಮಾಣವಾಗುತ್ತಾರೆ,” ಎಂದು ಅಭಿಪ್ರಾಯಪಟ್ಟರು.‘ಸ್ಪಂದನ’ ಶಾಲೆಯ ಸಿಬ್ಬಂದಿಗಳು ಎಂಐಟಿಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರಾವಳಿ ಪದ್ಮಶಾಲಿಗರ ಮೂಲ ಕ್ಷೇತ್ರ ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕೂಡುಕಟ್ಟಿನ ವ್ಯಾಪ್ತಿಯಲ್ಲಿ ಯುವ ವೇದಿಕೆ ಹಾಗೂ ಮಹಿಳಾ ವೇದಿಕೆ ಆಶ್ರಯದಲ್ಲಿ ‘ಕ್ರೀಡಾ ಸಂಭ್ರಮ’ ನಡೆಯಿತು. ದೇವಸ್ಥಾನದ ಆಡಳಿತ ಧರ್ಮದರ್ಶಿ ಬಾರ್ಕೂರು ರಂಗನಕೇರಿ ಶ್ರೀನಿವಾಸ ಶೆಟ್ಟಿಗಾರ್ ಕ್ರೀಡಾಕೂಟವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ಮಾತನಾಡಿ, ಇಂದಿನ ಯುವ ಜನಾಂಗದವರು ಕ್ರೀಡಾ ಮನೋಭಾವನೆ ಬೆಳೆಸಿಕೊಂಡು ಸಮಾಜಮುಖಿ ಪರಿಪೂರ್ಣ ವ್ಯಕ್ತಿತ್ವವನ್ನಾಗಿ ರೂಪುಗೊಳ್ಳಲು ಜೀವನ ಸಾರ್ಥಕಗೊಳಿಸಿಕೊಳ್ಳಿ ಎಂದರು. ಸಂಘಟನಾ ಸಮಿತಿಯ ಗೌರವಾಧ್ಯಕ್ಷ ನಾರಾಯಣ ಶೆಟ್ಟಿಗಾರ ಸುರತ್ಕಲ್ ಕ್ರೀಡಾ ಧ್ವಜಾರೋಹಣ ಗೈದರು. ಮಹಿಳಾ ವೇದಿಕೆಯ ಯಶೋಧ ಶ್ರೀನಿವಾಸ ಶೆಟ್ಟಿಗಾರ್ ವಾಲಿಬಾಲ್ ಕೋರ್ಟ್ ಉದ್ಘಾಟಿಸಿದರು.ವೀರೇಶ್ವರ ಸಮಿತಿಯ ಅಧ್ಯಕ್ಷ ಪುರುಷೋತ್ತಮ್ ಶೆಟ್ಟಿಗಾರ್ ಮಣಿಪಾಲ್ ಥ್ರೋಬಾಲ್ ಕೋರ್ಟ್ ಉದ್ಘಾಟಿಸಿದರು. ವೇದಿಕೆಯಲ್ಲಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಡಾ.ಜಯರಾಮ ಶೆಟ್ಟಿಗಾರ್, ಸಂಘಟನಾ ಸಮಿತಿಯ ಗೌರವಾಧ್ಯಕ್ಷ ನಾರಾಯಣ ಶೆಟ್ಟಿಗಾರ ಸುರತ್ಕಲ್, ವೀರೇಶ್ವರ ಸೇವಾ ಸಮಿತಿ ಅಧ್ಯಕ್ಷ ಪುರುಷೋತ್ತಮ್ ಶೆಟ್ಟಿಗಾರ್ ಮಣಿಪಾಲ್, ಸಂಘಟನಾ ಸಮಿತಿಯ ಅಧ್ಯಕ್ಷ ಭಾಸ್ಕರ್ ಶೆಟ್ಟಿಗಾರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಜಿಲ್ಲೆಯಾದ್ಯಂತ ಬಡವರ ಬಿಪಿಎಲ್ ಪಡಿತರ ಚೀಟಿಯನ್ನು ಎಪಿಎಲ್ ಪಡಿತರ ಚೀಟಿಯಾಗಿ ಪರಿವರ್ತನೆ ಮಾಡುತ್ತಿದ್ದು ಇದರಿಂದ ಹಿಂದುಳಿದ ವರ್ಗಗಳ ಬಡವರಿಗೆ ಮತ್ತು ಶ್ರಮಿಕ ವರ್ಗದ ಜನರಿಗೆ ಅನ್ಯಾಯವಾಗುತ್ತಿದ್ದು ಇದರ ಜೊತೆಗೆ ಪರಿವರ್ತನೆಗೊಂಡ ಎಪಿಎಲ್ ಪಡಿತರ ಚೀಟಿಯನ್ನು ಪುನಃ ಸಮರ್ಪಕ ದಾಖಲೆ ನೀಡಿ ಬಿಪಿಎಲ್ ಪಡಿತರ ಚೀಟಿಯನ್ನಾಗಿ ಮಾಡಲು ತಾಲುಕು ಮಟ್ಟದ ಅಧಿಕಾರಿಗಳ ಬಳಿ ತೆರಳಿದರೆ ಕೊಂಚವೂ ನಾಚಿಕೆ ಇಲ್ಲದೆ ಬಡವ ಶ್ರಮಿಕ ದುಡಿಯುವ ಹಿಂದುಳಿದ ವರ್ಗಗಳ ಜನರ ಬಳಿ ಲಂಚ ಬೇಡಿಕೆಯ ಹಿನ್ನಲ್ಲೆ ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ತಾಲುಕು ಕಚೇರಿಗಳಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿದೆ, ಹಾಗಾಗಿ ಇದು ನಿಲ್ಲದೆ ಹೋದಲ್ಲಿ ಬಡವರಿಗೆ ಅನ್ಯಾಯವಾಗಲು ಜವಾಬ್ದಾರಿಯುತ ಪ್ರತಿಪಕ್ಷವಾಗಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಸುಮ್ಮನಿರದೆ ನೊಂದವರ ಜೊತೆಯಾಗಿ ಜಿಲ್ಲೆಯ ತಾಲೂಕು ಕಚೇರಿ ಹಾಗೂ ಜಿಲ್ಲಾಧಿಕಾರಿ ಕಚೇರಿಯ ಎದುರು ಬ್ರಹತ್ ಪ್ರತಿಭಟನೆ ಮಾಡಲಾಗುವುದು ಎಂದು ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ಇವರ ವತಿಯಿಂದ ಅಪರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪ್ರತಿಭಾನ್ವೇಷಣಾ ಪರೀಕ್ಷೆಯ ತರಬೇತಿ ತರಗತಿಗಳ ಉದ್ಘಾಟನಾ ಸಮಾರಂಭ ಮತ್ತು 2024- 25ನೇ ಸಾಲಿನ ರಾಷ್ಟ್ರೀಯ ಪ್ರತಿಭಾನ್ವೇಷಣಾ ಪರೀಕ್ಷೆಯ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭವು ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಜರುಗಿತು. ಕಿರಿಮಂಜೇಶ್ವರ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾದ ಶೇಖರ್ ಖಾರ್ವಿ ಹಾಗೂ ನಾವುಂದ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾದ ನರಸಿಂಹ ದೇವಾಡಿಗ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಿಕ್ಷಣ ಸಂಯೋಜಕರಾದ ಯೋಗೇಶ್ ಕೆ. ತಮ್ಮ ಪ್ರಾಸ್ತಾವಿಕ ನುಡಿಗಳಲ್ಲಿ “ಉತ್ತಮ ಯೋಜಿತ ಕಾರ್ಯಗಳು ಸದಾ ಯಶಸ್ಸನ್ನು ನೀಡುತ್ತವೆ ಎನ್ನುವುದಕ್ಕೆ ಹಿಂದಿನ ಸಾಲಿನ ಭರ್ಜರಿ ಫಲಿತಾಂಶವೇ ಸಾಕ್ಷಿ. ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಗಣೇಶ ಮೊಗವೀರರ ಸರಕಾರಿ ಶಾಲೆಗಳ ವಿದ್ಯಾರ್ಥಿಗಳ ಶ್ರೇಯೋನ್ನತಿಗೆ ವಿಶೇಷ ಸಹಕಾರ ನೀಡಿದ್ದು, ನಮಗೆ ವರದಾನವಾಗಿದೆ” ಎಂದರು. ಶೇಖರ ಖಾರ್ವಿ ಅವರು ತಮ್ಮ ಉದ್ಘಾಟನಾ ನುಡಿಗಳಲ್ಲಿ “ಎನ್ಎಂಎಂಎಸ್ ಪರೀಕ್ಷೆಯು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ, ಸುಜ್ಞಾನ ಪಿಯು ಕಾಲೇಜು ಹಾಗೂ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಶಾಲೆ ಯಡಾಡಿ- ಮತ್ಯಾಡಿ ಇವರ ಸಹಭಾಗಿತ್ವದಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಮದರ್ ತೆರೇಸಾ ಪ್ರಾಥಮಿಕ ಶಾಲೆ ಶಂಕರನಾರಾಯಣ ಇಲ್ಲಿನ ಬಾಲ ಪ್ರತಿಭೆ , ನಾಲ್ಕನೇ ತರಗತಿಯ ವಿದ್ಯಾರ್ಥಿನಿ ಪ್ರಣತಿ ಜೆ ಶೆಟ್ಟಿ ಇವರು ಕಥೆ ಹೇಳುವ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.ಸಾಧಕ ಕಿರಿಯ ವಿದ್ಯಾರ್ಥಿನಿಗೆ ಶಾಲಾ ಆಡಳಿತ ಮಂಡಳಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಶಾಲಾ ಮುಖ್ಯೋಪಾಧ್ಯಾಯಿನಿ, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ, ಸುಜ್ಞಾನ ಪಿಯು ಕಾಲೇಜು ಹಾಗೂ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಶಾಲೆ ಯಡಾಡಿ- ಮತ್ಯಾಡಿ ಇವರ ಸಹಭಾಗಿತ್ವದಲ್ಲಿ ಆಯೋಜಿಸಲಾದ ಕುಂದಾಪುರ ವಲಯ ಮಟ್ಟದ ಹೈಸ್ಕೂಲ್ ವಿಭಾಗದ ಹಿಂದಿ ಭಾಷಣ ಸ್ಪರ್ಧೆಯಲ್ಲಿ ಮದರ್ ತೆರೇಸಾ ಪದವಿ ಪೂರ್ವ ಕಾಲೇಜು ಶಂಕರನಾರಾಯಣ ಇಲ್ಲಿನ ಪ್ರಥಮ ಪಿಯುಸಿ ವಿಭಾಗದ ಪ್ರತಿಭಾನ್ವಿತ ವಿದ್ಯಾರ್ಥಿನಿ ಶ್ರೀನಿಧಿ ಶೆಟ್ಟಿ ಇವರಿಗೆ ದ್ವಿತೀಯ ಸ್ಥಾನ ಲಭಿಸಿದೆ. ಸಾಧಕ ವಿದ್ಯಾರ್ಥಿನಿಗೆ ಶಾಲಾ ಆಡಳಿತ ಮಂಡಳಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಉಪ ಪ್ರಾಂಶುಪಾಲರು, ಎಲ್ಲಾ ಬೋಧಕ – ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿ ಸಂತಸ ವ್ಯಕ್ತಪಡಿಸಿದ್ದಾರೆ.
