ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ಭಗವದ್ಗೀತಾ ಅಭಿಯಾನ ಕರ್ನಾಟಕ 2025 ಇದರ ಅಂಗವಾಗಿ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನವು ಬೈಂದೂರಿನ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ಆಯೋಜಿಸಿದ ತಾಲೂಕು ಮಟ್ಟದ ಶ್ರೀ ಭಗವದ್ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ಉಪ್ಪುಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ನಿಹಾರಿಕಾ ಆರ್. ದೇವಾಡಿಗ ಅವರು ಪ್ರಾಥಮಿಕ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಶಾಲೆಗೆ ಹೆಮ್ಮೆ ತಂದಿರುತ್ತಾರೆ. ಸಾಂಸ್ಕೃತಿಕ, ಧಾರ್ಮಿಕ ಹಾಗೂ ನೈತಿಕ ಮೌಲ್ಯಗಳನ್ನು ಮಕ್ಕಳಿಗೆ ಪರಿಚಯಿಸುವ ಉದ್ದೇಶದಿಂದ ಆಯೋಜಿಸಲಾದ ಈ ಸ್ಪರ್ಧೆಯಲ್ಲಿ ಅನೇಕ ವಿದ್ಯಾರ್ಥಿಗಳು ಭಾಗವಹಿಸಿದ್ದರೂ, ನಿಹಾರಿಕಾ ತೋರಿದ ಸ್ಪಷ್ಟಪಾಠ, ಸ್ವರಮಾಧುರ್ಯ ಮತ್ತು ಗೀತಾ ಶ್ಲೋಕಗಳ ಶುದ್ಧಉಚ್ಚಾರಣೆ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಈಕೆ ಬೈಂದೂರು ಅಗ್ನಿಶಾಮಕ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರವೀಂದ್ರ ದೇವಾಡಿಗ ಹಾಗೂ ಶಿಕ್ಷಕಿಯಾದ ರವಿಕಲಾ ದೇವಾಡಿಗ ದಂಪತಿಯ ಪುತ್ರಿ. ವಿದ್ಯಾರ್ಥಿಯ ಸಾಧನೆಗೆ ಶಾಲೆಯ ಮುಖ್ಯಶಿಕ್ಷಕರು, ಶಿಕ್ಷಕವೃಂದ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕ್ರೀಡೆ ದೈಹಿಕ ಮಾನಸಿಕ ಸ್ವಾಸ್ಥ ಕಾಪಾಡಿಕೊಳ್ಳುವಲ್ಲಿ ಸಹಕಾರಿ. ಎಲ್ಲರೂ ಕ್ರೀಡಾ ಮನೋಭಾವನೆ ಬೆಳೆಸಿಕೊಂಡು ಕೀರ್ತಿ ಪಡೆಯಿರಿ, ಜನತಾ ವಿದ್ಯಾ ಸಂಸ್ಥೆಯಲ್ಲಿ ರಾಜ್ಯ, ರಾಷ್ಟ್ರ ಮಟ್ಟದ ವಿದ್ಯಾರ್ಥಿ ಪ್ರತಿಭೆಗಳಿದ್ದಾರೆ. ಪ್ರತಿಭೆಗಳಿಗೆ ಸೂಕ್ತ ವೇದಿಕೆ ಜನತಾ ಸಂಸ್ಥೆಯಲ್ಲಿ ದೊರಕುತ್ತಿದೆ ಎಂದು ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ರವಿ ಶಂಕರ್ ಹೆಗ್ಡೆ ಹೇಳಿದರು. ಅವರು ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟ ಖೇಲೋ ಜನತಾ ಕಾರ್ಯಕ್ರಮದ ಧ್ವಜಾರೋಹಣ ಗೈದು ಶುಭ ಹಾರೈಸಿದರು. ಮೊರಾರ್ಜಿ ದೇಸಾಯಿ ವಸತಿ ಶಾಲೆ ಹೆರಂಜಾಲು ಇಲ್ಲಿಯ ಪ್ರಾಂಶುಪಾಲರಾದ ಕಮಲಾ ಕೆ.ವಿ. ಮಾತನಾಡಿ, ಕ್ರೀಡಾ ಉತ್ಸವ ನಮ್ಮ ಜೀವನಕ್ಕೆ ಜೀವನೋತ್ಸಾಹ ತಂದು ಕೊಡುತ್ತದೆ.ಎಲ್ಲ ರಂಗದಲ್ಲೂ ಸಿಕ್ಕಿರುವ ಅವಕಾಶ ಉಪಯೋಗಿಸಿಕೊಳ್ಳಿ. ಆ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದರು. ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಮೊಗವೀರ ಮಾತನಾಡಿ, ನಮ್ಮ ಕಾಲೇಜಿನ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆ ಜೊತೆಯಲ್ಲಿ ಕ್ರೀಡೆಗೂ ಅವಕಾಶ ಮಾಡಿಕೊಟ್ಟಿದ್ದೇವೆ. ಕ್ರೀಡೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಜಿಲ್ಲೆ 3182 ವಲಯ 01ರ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ನಡೆದ ಎಲ್ಲಾ ಸ್ಪರ್ಧೆಗಳಲ್ಲಿ ರೋಟರಿ ಕ್ಲಬ್ ಬೈಂದೂರು ಬಹುಮಾನ ಗಳಿಸುವುದರ ಮೂಲಕ ವಲಯ 1 ಸಾಂಸ್ಕೃತಿಕ ಚಾಂಪಿಯನ್ ಆಗಿದೆ ಇಲ್ಲಿನ ಆನಗಳ್ಳಿ ರೆಸಾರ್ಟ್ ನಲ್ಲಿ, ರೋಟರಿ ಕುಂದಾಪುರ ಸೌತ್ ಆಯೋಜನೆಯಲ್ಲಿ ನಡೆದ ವಲಯ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ‘ರಿಧಮ್’ ನಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿ ಚಾಂಪಿಯನ್ ಆಗಿ ಹೊರಹೊಮ್ಮಿತು. ಜಾನಪದ ಗೀತೆಯಲ್ಲಿ ಪೂರ್ಣಿಮಾ ಪೈ ಪ್ರಥಮ ಸ್ಥಾನ, ಸಿನಿಮಾ ಗೀತೆಯಲ್ಲಿ ಜತೀಂದ್ರ ಮರುವಂತೆ ಪ್ರಥಮ ಸ್ಥಾನ, ಏಕವ್ಯಕ್ತಿ ನೃತ್ಯದಲ್ಲಿ ನಾಗೇಂದ್ರ ಬಂಕೇಶ್ವರ್ ಪ್ರಥಮ ಸ್ಥಾನ, ಏಕಪಾತ್ರ ಅಭಿನಯ ಸುಬ್ರಹ್ಮಣ್ಯ ಜಿ. ದ್ವಿತೀಯ ಸ್ಥಾನ, ಮಕ್ಕಳ ನೃತ್ಯದಲ್ಲಿ ನಿಧಿ ನಾಗೇಂದ್ರ ತೃತೀಯ ಸ್ಥಾನ, ಯುಗಳ ಗೀತೆಯಲ್ಲಿ ರಾಘವೇಂದ್ರ ಉಡುಪ ಮತ್ತು ಪೂರ್ಣಿಮ ಪೈ ದ್ವಿತೀಯ ಸ್ಥಾನ, ಗುಂಪುಗಾಯನ ಪ್ರಥಮ ಗುಂಪು ನೃತ್ಯ ಪ್ರಥಮ ಹಾಗೂ ನಾಟಕ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆಯುವುದರೊಂದಿಗೆ ನಡೆದ ಎಲ್ಲಾ 9…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಎಐಸಿಎಸ್ ಅಂತರ್ ಶಾಲಾಮಟ್ಟದ ಹ್ಯಾಂಡ್‌ಬಾಲ್ ಟೂರ್ನಮೆಂಟ್ ’ಪಾಸ್ ಮಾಸ್ಟರ್’ ಹೆಸರಲ್ಲಿ ನಡೆಯಿತು. ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಅಂತಾರಾಷ್ಟ್ರೀಯ ಟೆನಿಸ್ ಕೋಚರ್ ಆದ ಅಶ್ವಿನ್ ಕುಮಾರ್ ಪಡುಕೋಣೆ ಅವರು ಮಾತನಾಡಿ, ಈ ಶಾಲೆಯ ಪ್ರಾಂಶುಪಾಲರು ಆಟಗಾರರಿಗೆ ಉತ್ತಮವಾದ ಪ್ರೋತ್ಸಾಹಕರು. ಆಟಗಾರರು ತಮ್ಮ ಆಸಕ್ತಿಯಿಂದ, ತಮ್ಮ ಸಂತೋಷಕ್ಕಾಗಿ ಆಡಬೇಕು. ಪುನಃ ಪುನಃ ಆಟವಾಡಿ ಅಭ್ಯಾಸ ಮಾಡುವುದರಿಂದ ದೇಹವು ಅದಕ್ಕೆ ಸಿದ್ಧವಾಗುತ್ತದೆ. ವಿದ್ಯಾರ್ಥಿಗಳು ಹೇಗೆ ಮೆದುಳಿಗೆ ಕೆಲಸ ನೀಡುತ್ತಾರೋ ಹಾಗೆಯೇ ದೇಹದ ಎಲ್ಲಾ ಭಾಗಗಳಿಗೂ ಕೆಲಸ ನೀಡಬೇಕು. ದೇಹದ ಆರೋಗ್ಯಕ್ಕೆ ಯೋಗ್ಯವಾದ ಆಹಾರವನ್ನಷ್ಟೇ ಸ್ವೀಕರಿಸಬೇಕು ಎಂದರು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಮತ್ತು ಶಾಲಾ ಪ್ರಾಂಶುಪಾಲರೂ ಆದ ಶರಣ ಕುಮಾರ ಕಾರ್ಯಕ್ರಮದ ಅಧ್ಯಕ್ಷರಾಗಿ ಮಾತನಾಡಿ, ನಾಡಿನ ಮಕ್ಕಳಲ್ಲಿ ಹುದುಗಿರುವ ಪ್ರತಿಭೆಯನ್ನು ಹೊರತರುವ ಸಲುವಾಗಿ, ಮಕ್ಕಳ ದೈಹಿಕ ಮತ್ತು ಮಾನಸಿಕ ಸದೃಢತೆಗಾಗಿ ಈ ಸ್ಪರ್ಧೆಗಳು ನಡೆಸಲ್ಪಡುತ್ತವೆ. ಮಕ್ಕಳ ಸತತ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಶಿರೂರು ಗ್ರಾಮದ ಸರಕಾರಿ ಹಾಡಿಯಲ್ಲಿ ಅಂದರ್-ಬಹರ್ ಇಸ್ಪೀಟ್ ಜುಗಾರಿ ನಿರತ 6 ಮಂದಿಯನ್ನು ಬೈಂದೂರು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಪಿಎಸ್‌ಐ ತಿಮ್ಮೇಶ್ ಮತ್ತು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ, ಆರೋಪಿಗಳಾದ ಶೇಖರ್ ಪಡುವರಿ, ಹರೀಶ್ ನಾಯ್ಕ ಭಟ್ಕಳ, ದೇವೇಂದ್ರ ಜಟ್ಟಪ್ಪ ನಾಯ್ಕ ಭಟ್ಕಳ, ಅಶೋಕ ವೆಂಕಟೇಶ್ ನಾಯ್ಕ ಭಟ್ಕಳ, ನಾಗಪ್ಪ ಗೋವಿಂದ ನಾಯ್ಕ ಭಟ್ಕಳ, ದಿವಾಕರ ಶಿರೂರು ಎಂಬವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಆರೋಪಿಗಳಿಂದ ನಗದು 24,010, 3 ಬೈಕ್, 1 ಸ್ಕೂಟರ್, ಇಸ್ಪೀಟ್ ಎಲೆ ಸ್ವಾಧಿ ನಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಪರಿಚಿತ ವಾಹನ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕೋಡಿಯ ಹಳೆ ಅಳಿವೆ ಬೀಚ್ ರಸ್ತೆ ಬದಿಯಲ್ಲಿ ಸಂಭವಿಸಿದೆ. ಕೋಡಿ ನಿವಾಸಿ ರಮೇಶ್ ಪೂಜಾರಿ (63) ಮೃತಪಟ್ಟವರು. ಅವರು ನ.16ರ ರಾತ್ರಿ 11.15ರಿಂದ ನ. 17ರ ಬೆಳಗ್ಗೆ 8 ಗಂಟೆಯ ಮಧ್ಯದ ಅವಧಿಯಲ್ಲಿ ಹಳೆ ಅಳಿವೆ ಕಡೆಯಿಂದ ಬೀಜಾಡಿ ಕಡೆಗೆ ಬೀಚ್ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಯಾವುದೋ ವಾಹನ ಬಂದು ಢಿಕ್ಕಿ ಹೊಡೆದು ಪರಾರಿಯಾಗಿದೆ. ಗಂಭೀರ ಗಾಯಗೊಂಡು ರಸ್ತೆ ಬದಿಯಲ್ಲಿ ಬಿದ್ದಿದ್ದ ಅವರನ್ನು ಸ್ಥಳೀಯರು ಹಾಗೂ ಸಂಬಂಧಿಕರು ಉಪಚರಿಸಿ ಆ್ಯಂಬುಲೆನ್ಸ್‌ನಲ್ಲಿ ಕರೆದೊಯ್ದು ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ನ. 17ರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ಮೃತರ ಅಳಿಯ ದಿನಕರ ಅವರು ನೀಡಿದ ದೂರಿನಂತೆ ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಕರಾವಳಿ ಅಭಿವೃದ್ಧಿ ಮಂಡಳಿಯನ್ನಾಗಿ ಮೇಲ್ದರ್ಜೆಗೇರಿಸುವ ಮೂಲಕ ರಾಜ್ಯ ಸರ್ಕಾರವು ಕರಾವಳಿಯ ಮೂರು ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಸರ್ವತೋಮುಖ ಅಭಿವೃದ್ಧಿಗೆ ಶಕ್ತಿ ನೀಡಿದೆ ಎಂದು ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಕರಾವಳಿ ಅಭಿವೃದ್ಧಿ ಮಂಡಳಿಯ ಸರ್ವ ಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರಾವಳಿ ಅಭಿವೃದ್ಧಿ ಮಂಡಳಿಯನ್ನಾಗಿ ಮೇಲ್ದರ್ಜೆಗೇರಿಸಿರುವ ಹಿನ್ನೆಲೆ, ಮುಂದಿನ ದಿನಗಳಲ್ಲಿ ಮಂಡಳಿಗೆ ಹೆಚ್ಚು ಅನುದಾನ ಬಿಡುಗಡೆ ಆಗುವ ನಿರೀಕ್ಷೆಯಿದ್ದು, ಇದರಿಂದ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಹೆಚ್ಚು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶ ಮಾಡಿಕೊಟ್ಟಂತಾಗಿದೆ ಎಂದ ಅವರು, ಕರಾವಳಿ ತೀರದ ಜಿಲ್ಲೆಗಳಲ್ಲಿ ಮೂಲಭೂತ ಸೌಲಭ್ಯ ಒದಗಿಸಲು ಹಾಗೂ ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಅಭಿಪ್ರಾಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಮಟ್ಟದ ವಿಕಲಚೇತನ ವಿದ್ಯಾರ್ಥಿಗಳ ಕ್ರೀಡಾಕೂಟವು ಹೆಮ್ಮಾಡಿಯಲ್ಲಿ ನಡೆಯಿತು. ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ಒಂಬತ್ತನೆಯ ತರಗತಿಯ ವಿದ್ಯಾರ್ಥಿ ರೆಹಮತುಲ್ಲ 17 ರ ವಯೋಮಾನದ ಬಾಲಕರ 100ಮೀಟರ್ ಓಟ ಹಾಗೂ ಉದ್ದಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನದೊಂದಿಗೆ ಎರಡು ಚಿನ್ನ ಮತ್ತು ಒಂದು ಬೆಳ್ಳಿ ಪದಕ ಪಡೆದು ಹಾಸನದಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿರುತ್ತಾನೆ. ವಿಜೇತ ವಿದ್ಯಾರ್ಥಿಯ ಸಾಧನೆಯನ್ನು ಜನತಾ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಗಣೇಶ್ ಮೊಗವೀರ, ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ಮುಖ್ಯೋಪಾಧ್ಯಾಯಿನಿ ದೀಪಿಕಾ ಆಚಾರ್ಯ ಅವರು ಪ್ರಶಂಶಿಸಿದ್ದಾರೆ. ಹಾಗೆಯೇ ಬೋಧಕ ಬೋಧಕೇತರ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್ ತುಮಕೂರು ಜಿಲ್ಲೆಯಲ್ಲಿ ನಡೆದ U17 ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಆರಾಧ್ಯ ಎಸ್. ಶೆಟ್ಟಿ ಅವರು ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಸ್ಸಾಂನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ಚೆಸ್ ಆಟಗಾರ್ತಿಯಾಗಿ ಪ್ರತಿನಿಧಿಸಲಿರುವ ಆರಾಧ್ಯಗೆ ಪ್ರಕೃತಿ ಫೌಂಡೇಶನ್ ರಿ. ಬೆಂಗಳೂರು ಮತ್ತು ಕಶ್ವಿ ಚೆಸ್ ಸ್ಕೂಲ್ ರಿ. ಕುಂದಾಪುರ ಸಂಸ್ಥೆಗಳು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಲೇಖಕಿ ಸಾರಿಕಾ ಅಶೋಕ್ ಅವರ ಕವನ ಸಂಕಲನ “ಲಹರಿ” ಬಿಡುಗಡೆ ಸಮಾರಂಭವು ಬಸ್ರೂರಿನ ನಿವೇದಿತಾ ಪ್ರೌಢ ಶಾಲೆಯ ವಿಶಾಲಾಕ್ಷಿ ಪೂಂಜಾ ಸಭಾಭವನದಲ್ಲಿ ಇತ್ತೀಜಿಗೆ ಜರುಗಿತು. ಕರ್ನಾಟಕ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿರುವ, ರಾಜ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ನರೇಂದ್ರ ಕುಮಾರ್ ಕೋಟ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಸಾರಿಕಾ ಅಶೋಕ್ ಅವರ ಕವನಗಳ ಆಶಯ ಜೀವನ ಜಂಜಡಗಳ ಸಾಮಾಜಿಕ ಕಾಳಜಿಗಳು ಅಪೂರ್ವದದ್ದು ಎಂದರು. ಕುಂದಪ್ರಭ ಪತ್ರಿಕೆಯ ಸಂಪಾದಕರಾಗಿರುವ ಯುಎಸ್ ಶೆಣೈ ಅವರು ಪುಸ್ತಕ ಬಿಡುಗಡೆಗೊಳಿಸಿ, ಕವಯಿತ್ರಿ ಕವನ ರಚನೆಯಲ್ಲಿ ತನ್ನದೇ ಆದ ಛಾಪು ಮೂಡಿಸಬಲ್ಲರು. ಸಾರಿಕಾ ಅಶೋಕ್ ಅವರ ಕುಂದದ ಪ್ರತಿಭೆ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗುರುಕುಲ ಪಬ್ಲಿಕ್ ಸ್ಕೂಲ್‌ನ ಜಂಟಿ ಆಡಳಿತ ನಿರ್ದೇಶಕರಾದ ಅನುಪಮಾ ಎಸ್. ಶೆಟ್ಟಿ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಖ್ಯಾತ ಸಾಹಿತಿ, ವಾಸ್ತು ತಜ್ಞರಾದ ಬಸವರಾಜ್ ಶೆಟ್ಟಿಗಾರ್, ಯಕ್ಷಗಾನ ಪ್ರಸಂಗ ಕರ್ತರಾದ ಮಹಾಬಲ ಹೇರಿಕುದ್ರು, ಬಸ್ರೂರು ಗ್ರಾಮ…
