ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಅನಕ್ಷರಸ್ಥೆಯಾಗಿಯೂ ಅವರು ಮಾಡಿದ ಕಾರ್ಯ ಶಿಕ್ಷಣವಂತರಾದ ನಮಗೆಲ್ಲರಿಗೂ ಮಾದರಿ. ಹೀಗಾಗಿ ಅಗಲಿದ ಹಿರಿಯ ಜೀವಕ್ಕೆ ಶಾಂತಿ ಕೋರುವ ಮೂಲಕ ಅವರ ಜೀವನ ಮೌಲ್ಯಗಳನ್ನುವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು ಎಂದು ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಆಯೋಜಿಸಿದ ವೃಕ್ಷ ಮಾತೆಗೆ ನುಡಿನಮನ ಕಾರ್ಯಕ್ರಮದಲ್ಲಿ ಪುಷ್ಪ ನಮನ ಸಲ್ಲಿಸಿ ನುಡಿ ನಮನದ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಆಶಯ ನುಡಿಗಳನ್ನಾಡಿದರು. ಕನ್ನಡ ವಿಭಾಗದ ಪ್ರಾಧ್ಯಾಪಕರಾದ ರೇಷ್ಮಾ ಶೆಟ್ಟಿ ಸ್ವಾಗತಿಸಿ, ಪ್ರವೀಣಾ ಎಮ್. ಪೂಜಾರಿ ವಂದಿಸಿ, ರಶ್ಮಿತಾ ಶೆಟ್ಟಿ ನಿರೂಪಿಸಿದರು. ವಿದ್ಯಾರ್ಥಿಗಳು ಮತ್ತು ಬೋಧಕ-ಬೋಧಕೇತರರು ಉಪಸ್ಥಿತರಿದ್ದು ಮೌನ ಪ್ರಾರ್ಥನೆ ಸಲ್ಲಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಆರ್.ಎನ್. ಶೆಟ್ಟಿ ಸಭಾಂಗಣದಲ್ಲಿ ರಕ್ಷಕ ಶಿಕ್ಷಕ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ರಾಜೇಂದ್ರ ತೋಳಾರ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರ ಆಚಾರಿ ಸಾಕ್ಷ್ಯ ನಿದರ್ಶನಗಳ ಮೂಲಕ ವಿದ್ಯಾರ್ಥಿಗಳಿಗೆ ಕಿವಿಮಾತುಗಳನ್ನು ತಿಳಿಸಿದರು. ಸಭಾಧ್ಯಕ್ಷತೆಯನ್ನು ವಹಿಸಿದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ ಗೊಂಡ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಡಾ. ಸರೋಜಾ ಎಂ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಭೆಯಲ್ಲಿ ವಿದ್ಯಾರ್ಥಿಗಳ ಪಾಲಕರುಗಳು ಕೆಲವು ಸಲಹೆಗಳನ್ನು ನೀಡಿದರು. ವಿದ್ಯಾರ್ಥಿನಿ ಭ್ರಂಗ ಉಡುಪ ಮತ್ತು ಧರಣಿ ಪ್ರಾರ್ಥನೆ ಗೈದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ವಿಧ್ಯಾದರ್ ಸರ್ವರನ್ನು ಸ್ವಾಗತಿಸಿದರು. ಆಂಗ್ಲ ಭಾಷಾ ಉಪನ್ಯಾಸಕ ಸೂರಜ್ ಭಟ್ ಸರ್ವರನ್ನು ವಂದಿಸಿದರು. ರೇಣುಕಾ ಪ್ರಸಾದ್ ಕಾರ್ಯಕ್ರಮ ನಿರ್ವಹಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ನಾಗಮಂಗಲದಲ್ಲಿ ನಡೆದ ರಾಜ್ಯ ಮಟ್ಟದ 14 ಮತ್ತು 17 ವಯೋಮಾನದ ಬಾಲಕ ಬಾಲಕಿಯರ ಯೋಗಾಸನ ಸ್ಪರ್ಧೆಯಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಆಳ್ವಾಸ್ ಶಾಲೆಯ ವಿದ್ಯಾರ್ಥಿಗಳು 14 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ಹಾಗೂ 17 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ತಂಡ ಪ್ರಶಸ್ತಿ ಪಡೆದುಕೊಳ್ಳುವಲ್ಲಿ ನಿರ್ಣಾಯಕ ಪಾತ್ರವಹಿಸಿದ್ದಾರೆ. ಆಳ್ವಾಸ್ ಶಾಲೆಯ 12 ಯೋಗ ಕೀಡಾಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಮಹೋನ್ನತ ಸಾಧನೆ ಮೆರೆದಿದ್ದಾರೆ. ಫಲಿತಾಂಶ: ಅಂಡರ್ 14 ಆರ್ಟಿಸ್ಟಿಕ್ ಯೋಗ ಪೇರ್ ಬಾಲಕರ ವಿಭಾಗದಲ್ಲಿ: ಶ್ಯಾಮ ಮತ್ತು ಶಶಿಕುಮಾರ್ – ಪ್ರಥಮಅಂಡರ್ 14 ರಿದಮಿಕ್ ಯೋಗ ಪೇರ್ ಬಾಲಕರ ವಿಭಾಗದಲ್ಲಿ: ಆದರ್ಶ್ ಮತ್ತು ಶಶಾಂಕ್ – ಪ್ರಥಮಅಂಡರ್ 14 ಆರ್ಟಿಸ್ಟಿಕ್ ಯೋಗ ಸಿಂಗಲ್‌ನಲ್ಲಿ ಬಾಲಕರ ವಿಭಾಗದಲ್ಲಿ: ಆದರ್ಶ ಕೆ.ಎಸ್ – ಪ್ರಥಮಅಂಡರ್ 14 ಟ್ರೆಡಿಶನಲ್ ಯೋಗ ಬಾಲಕರ ವಿಭಾಗದಲ್ಲಿ: ಶಶಿಕುಮಾರ್ ವಿ.ಜಿ – ಪ್ರಥಮಅಂಡರ್ 17 ಆರ್ಟಿಸ್ಟಿಕ್ ಯೋಗ ಪೇರ್ ಬಾಲಕರ ವಿಭಾಗದಲ್ಲಿ: ಕಾರ್ತಿಕ್ ಮತ್ತು ಪ್ರಜ್ವಲ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ನಗರಸಭೆಯ 2024-25ನೇ ಸಾಲಿನ ವಿವಿಧ ಕಾರ್ಯಕ್ರಮದಡಿ ಮೀಸಲಿರಿಸಿದ ಅನುದಾನದ ಉಳಿಕೆ ಮೊತ್ತದಲ್ಲಿ ವಿವಿಧ ಸೌಲಭ್ಯಗಳಿಗೆ ಅನುದಾನ ನೀಡುವುದಕ್ಕಾಗಿ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎಸ್.ಎಫ್.ಸಿ ಅನುದಾನದ ಶೇ. 5ರ ವಿಕಲಚೇತನ ಕಾರ್ಯಕ್ರಮದಡಿ ಸಣ್ಣ ಉದ್ದಿಮೆ, ಮನೆ ದುರಸ್ಥಿ, ಕೃತಕ ಅಂಗ ಜೋಡಣೆ / ಶಸ್ತçಚಿಕಿತ್ಸೆಗೆ ಧನಸಹಾಯ, ರಾಜ್ಯ, ರಾಷ್ಟ್ರೀಯ ಮಟ್ಟದ ಕ್ರೀಡೆ / ಸಾಂಸ್ಕೃತಿಕ ಹಾಗೂ ಇತರೆ ವ್ಯಾಸಾಂಗೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಪ್ರೋತ್ಸಾಹಧನ ಹಾಗೂ ಎಸ್.ಎಸ್.ಎಲ್.ಸಿ ಯಿಂದ ಮಾಸ್ಟರ್ ಡಿಗ್ರಿವರೆಗಿನ ವಿದ್ಯಾರ್ಥಿಗಳಿಗೆ ಸಹಾಯಧನ, ಎಸ್.ಎಫ್.ಸಿ / ಮುಕ್ತನಿಧಿ ಮತ್ತು ಪುರಸಭಾ ನಿಧಿಯ ಶೇ. 7.25 ರ ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮ, ಪ.ಜಾತಿ/ಪಂಗಡದ ಕಲ್ಯಾಣ ಕಾರ್ಯಕ್ರಮ ಹಾಗೂ ಟಿ.ಎಸ್.ಪಿ (ಪ.ಪಂಗಡದ ಅನುದಾನ) ಕಾರ್ಯಕ್ರಮದಡಿ ಪಿ.ಯು.ಸಿ ಯಿಂದ ಉತ್ತೀರ್ಣರಾದ ಪದವಿ, ಬಿ.ಎ, ಪಿಎಸ್‌ಸಿ, ಬಿಕಾಂ, ಬಿಬಿಎ, ಬಿಬಿಎಂ, ಬಿಸಿಎ ಇತರೆ ಪದವಿ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮತ್ತು ಎಸ್.ಎಸ್.ಎಲ್.ಸಿ ಯಿಂದ ಉತ್ತೀರ್ಣರಾದ ಪಿ.ಯು.ಸಿ, ಐ.ಟಿ.ಐ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪ್ರಕೃತಿಯನ್ನು ಪ್ರೀತಿಸಿ ಅಲ್ಲಿನ ಮರಗಳನ್ನೆ ಮಕ್ಕಳಾಗಿಸಿಕೊಂಡು ಮನುಕುಲಕ್ಕೆ ಸ್ಪೂರ್ತಿಯ ಚಲುಮೆಯಾದ ಸಾಲು ಮರದ ತಿಮ್ಮಕ್ಕನ ಬದುಕೆ ಪ್ರಸ್ತುತ ಜನಾಂಗಕ್ಕೆ ಆದರ್ಶವಾಗಲಿ ಎಂದು ಸಾಹಿತಿ, ಶಿಕ್ಷಕ ನರೇಂದ್ರ ಕುಮಾರ್ ಕೋಟ ಹೇಳಿದರು. ಅವರು ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಶುಕ್ರವಾರ ಪ್ರಕೃತಿ ಮಾತೆಯಲ್ಲಿ ಲೀನರಾದ ಸಾಲುಮರದ ತಿಮ್ಮಕ್ಕನಿಗೆ ನುಡಿನಮನ ಸಲ್ಲಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ತಿಮ್ಮಕ್ಕನವರು ತಮ್ಮ ಸುಧೀರ್ಘ ಜೀವಿತ ಅವಧಿಯಲ್ಲಿ ಮರೆಯಲಾಗ ಅಧ್ಯಾಯವನ್ನು ಸೃಷ್ಠಿಸಿದ್ದಾರೆ ಇಂತಹ ಮಹಾನ್ ಕಾರ್ಯ ಇಂದಿನ ಯುವ ಜನಾಂಗಕ್ಕೆ ದಾರಿದೀಪವಾಗಬೇಕಿದೆ. ಪ್ರಸ್ತುತ ಪಂಚವರ್ಣ ಸಂಘಟನೆ ಅದೇ ದಾರಿಯಲ್ಲಿರುವುದು ತಿಮ್ಮಕ್ಕನವರಿಗೆ ಸಲ್ಲಿಸುವ ದೊಡ್ಡ ಸೇವೆಯಾಗಿದೆ ಎಂದರು. ಕೋಟದ ರೈತಧ್ವನಿ ಸಂಘದ ಅಧ್ಯಕ್ಷ ಎಂ ಜಯರಾಮ ಶೆಟ್ಟಿ ತಿಮ್ಮಕ್ಕನ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಭನಮನ ಸಲ್ಲಿಸಿದರು. ಇದೇ ವೇಳೆ ಮೌನ ಪ್ರಾರ್ಥನೆ ಸಲ್ಲಿಸಲಾಯಿತು. ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ, ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ವಿದ್ಯಾರ್ಥಿಗಳು ಇರುವ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಳ್ಳುವುದನ್ನು ಕಲಿಯಬೇಕು. ಹಿರಿಯ ವಿದ್ಯಾರ್ಥಿಗಳ ಮಾರ್ಗದರ್ಶನದಿಂದ ಕಲಿಕೆಯಲ್ಲಿ ಹೆಚ್ಚಿನ ಉನ್ನತಿಯನ್ನು ಕಂಡುಕೊಳ್ಳಲು ಸಾಧ್ಯ ಎಂದು ಗಂಗೊಳ್ಳಿಯ ಶ್ರೀ ನಾರಾಯಣ ಗುರು ಜನ ಸೇವಾ ಬಳಗದ ಅಧ್ಯಕ್ಷ ಜಿ. ಗೋಪಾಲ್ ಪೂಜಾರಿ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಶ್ರೀ ನಾರಾಯಣಗುರು ಜನ ಸೇವಾ ಬಳಗ ಮತ್ತು ಸರಸ್ವತಿ ವಿದ್ಯಾಲಯದ ಎಸ್ ವಿ ಕಾಮರ್ಸ್ ಕ್ಲಬ್ ಜಂಟಿ ಆಶ್ರಯದಲ್ಲಿ ಇಲ್ಲಿನ ರೋಟರಿ ಸಭಾಂಗಣದಲ್ಲಿ ನಡೆದ ಚಾರ್ಟೆಡ್ ಅಕೌಂಟೆಂಟ್ ಪ್ರಶಿಕ್ಷಣಾರ್ಥಿಗಳ ಅನುಭವ ಹಂಚಿಕೆಯ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚಾರ್ಟೆಡ್ ಅಕೌಂಟೆಂಟ್ ಕಲಿಕೆಯಲ್ಲಿ ನಿರಂತರಾಗಿರುವ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಗಳಾದ ಪ್ರಿಯಾ ಜಿ.ಪೈ ಮತ್ತು ಕ್ಷಮಾ ಆರ್. ಆಚಾರ್ಯ ಕ್ರಮವಾಗಿ ಸಿ.ಎ ಮತ್ತು ಎ.ಸಿ.ಸಿ.ಎ ಕೋರ್ಸಿನ ಬಗೆಗೆ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಮಾರ್ಗದರ್ಶನವನ್ನು ನೀಡಿದರು. ಗಂಗೊಳ್ಳಿಯ ಹಸಿ ಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ರಾಘವೇಂದ್ರ ಖಾರ್ವಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಳೆದ ವರ್ಷದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಾಧ್ಯಮಗಳು ಜನಪರ ಧ್ವನಿಯಾಗಬೇಕು ಎಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಸುಬ್ರಹ್ಮಣ್ಯ ಭಟ್ ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶ, ಪತ್ರಿಕೋದ್ಯಮ ವಿಭಾಗ ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ ಸಹಯೋಗದಲ್ಲಿ ನಡೆದ “ರಾಷ್ಟ್ರೀಯ ಪತ್ರಿಕಾ ದಿನಾಚರಣೆ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಮಾಧ್ಯಮಗಳು ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳ ಮೇಲೆ ನಿಗಾ ಇಡಬೇಕು. ಪತ್ರಕರ್ತರು ಜವಾಬ್ದಾರಿಯುತವಾಗಿ ತಮ್ಮ ಕರ್ತವ್ಯವನ್ನು ನಿಭಾಯಿಸಬೇಕು. ಅಲ್ಲದೆ ಜನರು ಮತ್ತು ಸರ್ಕಾರದ ನಡುವೆ ಸಂಪರ್ಕ ಶಕ್ತಿಯಾಗಿರುವ ಸಾಮರ್ಥ್ಯ ಮಾಧ್ಯಮಗಳಿಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಮಾತನಾಡಿ, ಮಾಧ್ಯಮಗಳು ಪ್ರಜಾಪ್ರಭುತ್ವದ ನಾಲ್ಕನೇ ಅಂಗ. ಜನರ ಧ್ವನಿಯಾಗಿ ಕೆಲಸ ನಿರ್ವಹಿಸುತ್ತಿದೆ ಎಂದು ಹೇಳಿದರು. ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಯು.ಎಸ್. ಶೆಣೈ ಅವರು ಭಾರತೀಯ ಪತ್ರಿಕಾ ಮಂಡಳಿ ಕುರಿತು ತಿಳಿಸಿದರು. ವೇದಿಕೆಯಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: “ವಿದ್ಯಾರ್ಥಿಗಳು ಮೊಬೈಲ್ ನ ಅತಿಯಾದ ಬಳಕೆ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ತೊಡಗಿಸಿಕೊಳ್ಳುವ ಸಮಯವನ್ನು ಕಡಿಮೆ ಮಾಡಿ ಮನೋದೈಹಿಕ ಉಲ್ಲಾಸ ತರುವ ಚಟುವಟಿಕೆಗಳಲ್ಲಿ ನಿರತರಾಗಬೇಕು. ನಿತ್ಯಜೀವನದಲ್ಲಿ ಆ ಮೂಲಕ ಹುರುಪು ಪಡೆದು ಪೋಷಕರು ಹೆಮ್ಮೆ ಪಡುವಂಥ ಸಾಧನೆ ಮಾಡಬೇಕು” ಎಂದು ಹೊಸೂರಿನ ಶ್ರೀ ಮೂಕಾಂಬಿಕಾ ಪ್ರೌಢ ಶಾಲೆಯ ದೈಹಿಕ ಶಿಕ್ಷಕರಾದ ಸಂತೋಷ್ ಕುಮಾರ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಆರ್.ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡೋತ್ಸವವನ್ನು ಉದ್ಘಾಟಿಸಿ ಕರೆ ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿ ಕುಂದಾಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷರು ಹಾಗೂ ಬೈಂದೂರಿನ ಮಾಜಿ ಶಾಸಕರಾದ ಬಿ.ಎಂ. ಸುಕುಮಾರ ಶೆಟ್ಟಿ ಅವರು ತಮ್ಮ ಅಧ್ಯಕ್ಷೀಯ ನುಡಿಯಲ್ಲಿ ಸಿ.ಇ.ಎಸ್ ಸಂಸ್ಥೆಗಳ ಸುವರ್ಣ ಸಂಭ್ರಮದ ವಿಶೇಷ ವರ್ಷದಲ್ಲಿ ವಿದ್ಯಾಸಂಸ್ಥೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ತುಂಬು ಸಂಭ್ರಮದಿಂದ ಮುಂಬರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕೆನ್ನುತ್ತಾ ಕ್ರೀಡೋತ್ಸವಕ್ಕೆ ಶುಭಕೋರಿದರು. ಕಾಲೇಜಿನ ಪ್ರಾಂಶುಪಾಲರಾದ ನವೀನ ಕುಮಾರ್ ಶೆಟ್ಟಿ ಅವರು ಅತಿಥಿಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆಯಲ್ಲಿ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಶುಕ್ರವಾರದಂದು ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯಿನಿಯವರಾದ ಸುಜಾತಾ ಸದಾರಾಮ್ ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ, ನಮ್ಮ ಮಾತೃಭಾಷೆಯಾದ ಕನ್ನಡದ ಮಹತ್ವದ ಕುರಿತು ಹೇಳುತ್ತಾ ಭಾಷೆಯನ್ನು ಚೆನ್ನಾಗಿ ಬಳಸಿ ಬೆಳೆಸಬೇಕು; ಹೆಚ್ಚು ಹೆಚ್ಚು ಉತ್ತಮ ಸಾಹಿತ್ಯವನ್ನು ಓದಿ ಜ್ಞಾನವನ್ನು ಪಡೆಯಬೇಕು. ಮಕ್ಕಳ ದಿನಾಚರಣೆಯ ಪ್ರಾಮುಖ್ಯತೆಯನ್ನು ವಿವರಿಸುತ್ತಾ ಉತ್ತಮ ನಡವಳಿಕೆಯುಳ್ಳ ಮಕ್ಕಳು ಮುಂದೆ ಉತ್ತಮ ಭವಿಷ್ಯವನ್ನು ಹೊಂದಲಿರುವರು ಎಂದು ಹೇಳಿದರು. ಶಿಕ್ಷಕ ವೃಂದದವರಿಂದ ನೃತ್ಯ, ಸಂಗೀತ, ನಾಟಕ ಮೊದಲಾದ ಕಾರ್ಯಕ್ರಮಗಳು ಅದ್ಭುತವಾಗಿ ಮೂಡಿ ಬಂದವು. ಕೆಲವು ವಿದ್ಯಾರ್ಥಿಗಳು ವಿವಿಧ ಸಂಗೀತ ವಾದ್ಯ (ತಬಲ, ಚಂಡೆ, ಹಾರ್ಮೋನಿಯಮ್, ಪಿಯಾನೋ, ಕೊಳಲು, ವಯೋಲಿನ್ ಇತ್ಯಾದಿ)ಗಳನ್ನು ನುಡಿಸಿದರು. ಜೊತೆಗೆ ಯಕ್ಷಗಾನ, ಸಂಗೀತ, ನೃತ್ಯ ಪ್ರದರ್ಶನವನ್ನೂ ವಿದ್ಯಾರ್ಥಿಗಳು ನೀಡಿದರು. ವಿದ್ಯಾರ್ಥಿಗಳಾದ ನಿರಾಲಿ ಸರ್ವರನ್ನು ಸ್ವಾಗತಿಸಿದರೆ, ರಾಘವೇಂದ್ರ ಧನ್ಯವಾದ ಸಮರ್ಪಿಸಿದನು. ಶಮಾ, ಆರ್ವಿ, ರಿತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿ ಜೀವನವೇ ಅಮೂಲ್ಯವಾದದ್ದು. ಈ ಸಂದರ್ಭದಲ್ಲಿ ಏನನ್ನು ಕಲಿಯುತ್ತೀರೋ ಅದನ್ನು ಬದುಕಿನುದ್ದಕ್ಕೂ ಅಳವಡಿಸಿಕೊಂಡಾಗ ಬದುಕು ಉತ್ತಮವಾಗಿರಲು ಸಾಧ್ಯ. ಅದನ್ನು ಕಲಿತುಕೊಳ್ಳಬೇಕಾದ ಸೂಕ್ತ ಸಮಯವಿದು. ನಿಮ್ಮ ಗುರಿಯನ್ನು ನಿರ್ಧರಿಸಿಕೊಳ್ಳಿ, ಗುರಿಯೆಡೆಗೆ ಸಾಗುವ ಪರಿಶ್ರಮ ಇರಲಿ. ಮಾತು, ನಗು, ನಡತೆ ಸಂಸ್ಕಾರಯುತವಾಗಿರಲಿ ಎಂದು ಮಂಗಳೂರಿನ 92.7 ಬಿಗ್ ಆರ್‌ಜೆ ನಯನಾ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಜೀವನ ಮೌಲ್ಯ ಉಪನ್ಯಾಸ ಮಾಲಿಕೆ – 2ರ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಜೀವನ ಮೌಲ್ಯಗಳನ್ನು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಅವಶ್ಯಕತೆಯನ್ನು ತಿಳಿಸಿದರು. ಈ ಸಂದರ್ಭ ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಪ್ರಮೀಳ ಅತಿಥಿಗಳನ್ನು ಪರಿಚಯಿಸಿ, ಮಾನ್ಯ ಪ್ರಾರ್ಥಿಸಿ, ಖುಷಿ ಸ್ವಾಗತಿಸಿ,…
