ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ ಬ್ರಹ್ಮಾವರ ಇವರ ಆಶ್ರಯದಲ್ಲಿ ಮೊಬೈಲ್ ರಿಪೇರಿ ಮತ್ತು ಸೇವೆ ತರಬೇತಿಯ ಉದ್ಘಾಟನಾ ಸಮಾರಂಭ ಕಾರ್ಯಕ್ರಮವು ಸಂಸ್ಥೆಯ ಸಭಾಂಗಣದಲ್ಲಿ ಇತ್ತೀಚಿಗೆ ನಡೆಯಿತು. ಮುಖ್ಯ ಅತಿಥಿಗಳಾಗಿದ್ದ ಬ್ರಹ್ಮಾವರ ರುಡ್ ಸೆಟ್ ಸಂಸ್ಥೆ, ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಮುಖ್ಯ ಪ್ರಭಂದಕರಾದ ರವಿಕಾಂತ್ ಮಲ್ಯ ಅವರು ಮಾತನಾಡಿ, ಮೊಬೈಲ್ ರಿಪೇರಿ ಮತ್ತು ಸೇವೆ ತರಬೇತಿಯ ಶಿಬಿರಾರ್ಥಿಗಳನ್ನು ಉದ್ದೇಶಿಸಿ ನೀವು ತರಬೇತಿಗೆಂದು ಆಯ್ಕೆ ಮಾಡಿಕೊಂಡ ಸಂಸ್ಥೆ ಬಹಳ ಉನ್ನತ ಮಟ್ಟದ ಸಂಸ್ಥೆಯಾಗಿದೆ.ಮೊದಲನೇ ಹಂತದಲ್ಲಿ ತಮ್ಮನ್ನು ತಾವೂ ಯಶಸ್ವಿಗೊಳಿಸಿದ್ದೀರಿ. ರುಡ್ ಸೆಟ್ ಸಂಸ್ಥೆಯು ತಮ್ಮನ್ನು ಸ್ವ ಉದ್ಯೋಗವನ್ನು ಕೈಗೊಳ್ಳಲು ಬೇಕಾಗುವ ಎಲ್ಲಾ ಮಾಹಿತಿಗಳನ್ನು ತರಬೇತಿಯ ಅವಧಿಯಲ್ಲಿ ಒದಗಿಸುತ್ತದೆ. ಮೊಬೈಲ್ ರಿಪೇರಿ ಮತ್ತು ಸೇವೆ ಉದ್ಯಮವು ದಿನದಿಂದ ದಿನಕ್ಕೆ ಬೇಡಿಕೆಯನ್ನು ಹಾಗೂ ಕುತೂಹಲವನ್ನು ಮೂಡಿಸುವ ಉದ್ಯಮವಾಗಿದೆ.ಹಾಗಾಗಿ ಉದ್ಯಮವನ್ನು ನಡೆಸಲು ಬೇಕಾಗುವ ಸಾಲಸೌಲಭ್ಯವನ್ನು ಸಂಸ್ಥೆಯ ಮುಖಾಂತರ ಒದಗಿಸುತ್ತೇವೆ. ಆದ್ದರಿಂದ ತಳಮಟ್ಟದ ತರಬೇತಿಯನ್ನು ಶ್ರದ್ಧೆಯಿಂದ ಪಡೆದುಕೊಂಡು ಸಮಾಜದಲ್ಲಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಸುಳ್ಯ ಮತ್ತು ಸರಕಾರಿ ಪದವಿಪೂರ್ವ ಕಾಲೇಜು ಪಂಜ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 14 ವರ್ಷ ಹಾಗೂ 17ವರ್ಷ ವಯೋಮಿತಿ ಒಳಗಿನ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು ಒಟ್ಟು 37 ಚಿನ್ನ, 30 ಬೆಳ್ಳಿ ಮತ್ತು 16 ಕಂಚಿನ ಪದಕಗಳೊಂದಿಗೆ 83 ಪದಕದೊಂದಿಗೆ 02 ಕ್ರೀಡಾಕೂಟದ ನೂತನ ಕೂಟ ದಾಖಲೆಯನ್ನು ಮಾಡುವ ಮೂಲಕ 14 ವರ್ಷ ವಯೋಮಿತಿಯ ಬಾಲಕರ ತಂಡ ಪ್ರಶಸ್ತಿ, ಹಾಗೂ 17 ವರ್ಷ ವಯೋಮಿತಿ ಒಳಗಿನ ಬಾಲಕ ಬಾಲಕಿಯರ ತಂಡ ಪ್ರಶಸ್ತಿ ಇದರ ಜೊತೆಗೆ 14 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ಹಾಗೂ 17 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತದೆ.14ವರ್ಷ ವಯೋಮಿತಿಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕಾಗಿ ವೆಬ್‌ಸೈಟ್ https://sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರಶಸ್ತಿ/ ಪ್ರೋತ್ಸಾಹಧನ ವಿವರ: ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ, ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ, ಗುರಿ-ಒಲಂಪಿಕ್ ಪದಕ, ನಗದು ಪುರಸ್ಕಾರ, ಶೈಕ್ಷಣಿಕ ಶುಲ್ಕ ಮರುಪಾವತಿ ಮತ್ತು ಕ್ರೀಡಾ ವಿದ್ಯಾರ್ಥಿವೇತನ. ಅರ್ಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಲು ಡಿಸೆಂಬರ್ 3 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂ 0820-2521324, 9845432303 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಶುಕ್ರವಾರದಂದು ವಿದ್ಯಾರಣ್ಯದ ಅಂಗಳದಲ್ಲಿ ಸುಜ್ಞಾನ ಪಿ.ಯು. ಕಾಲೇಜು ಹಾಗೂ ವಿದ್ಯಾರಣ್ಯದ ವಿದ್ಯಾರ್ಥಿಗಳಿಗಾಗಿ ಅದ್ದೂರಿ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, “ಪಿ.ಯು.ಸಿ ಎನ್ನುವುದು ವಿದ್ಯಾರ್ಥಿಗಳ ಜೀವನದ ಅತ್ಯಂತ ಪ್ರಮುಖ ಘಟ್ಟ. ಹಾಗಾಗಿ ಕಲಿಕೆಯನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಒಂದು ಸುಂದರವಾದ ವ್ಯಕ್ತಿತ್ವವನ್ನು ಕಟ್ಟಿಕೊಳ್ಳಬೇಕು” ಎಂದರು. ವಿದ್ಯಾರ್ಥಿಗಳಲ್ಲಿ ಸಂಕಲ್ಪ ಶಕ್ತಿ ಇರಬೇಕು. ಆಗ ಮಾತ್ರ ಅವರು ಜೀವನದಲ್ಲಿ ಅಭಿವೃದ್ಧಿಯ ಕಡೆಗೆ ಸಾಗಲು ಸಾಧ್ಯ. ಈಗ ಉದ್ಯೋಗದಿಂದ ಹಿಡಿದು ಎಲ್ಲದಕ್ಕೂ ಸ್ಪರ್ಧೆಗಳು ಇವೆ. ಹಾಗಾಗಿ ವಿದ್ಯಾರ್ಥಿಗಳು ತುಂಬಾ ಶ್ರಮ ವಹಿಸಬೇಕು ಮತ್ತು ವಿದ್ಯೆಯ ಕುರಿತು ಆಲಸ್ಯ ಮಾಡಬಾರದು ಎಂದು ನುಡಿದರು. ಸಂಸ್ಥೆಯ ಖಜಾಂಚಿ ಭರತ್ ಶೆಟ್ಟಿ ಅವರು ಮಾತನಾಡಿ, “ಬದುಕಿನಲ್ಲಿ ಅವಕಾಶಗಳು ಮತ್ತೆ ಮತ್ತೆ ಸಿಗುವುದಿಲ್ಲ. ವಿದ್ಯಾರ್ಥಿ ಜೀವನವೆನ್ನುವುದು ಗೋಲ್ಡನ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟತಟ್ಟು ವ್ಯಾಪ್ತಿಯಲ್ಲಿ ಬಿ.ಎಲ್ ಒಗಳ ಕೊರತೆ ಎದುರಿಸಿತ್ತಿದ್ದೇವೆ, ಕೋಟ ಪಶು ಆಸ್ಪತ್ರೆಯಲ್ಲಿ ವೈದ್ಯರ ಹಾಗೂ ಸಿಬ್ಬಂದಿಗಳ ಕೊರತೆ ಇದ್ದು ಈ ಬಗ್ಗೆ ಗ್ರಾಮಸಭೆ ನಿರ್ಣಯ ಕೈಗೊಂಡು ಸರಕಾರದ ಕದ ತಟ್ಟಬೇಕು ಎಂದು ರತ್ನಾಕರ ಪೂಜಾರಿ ಹೇಳಿದರು. ಅವರು ಕೋಟತಟ್ಟುವಿನ ಹಂದಟ್ಟು ಗೆಳೆಯರ ಬಳಗ ಸಭಾಂಗಣದಲ್ಲಿ ನಡೆದ ಕೋಟತಟ್ಟು ಗ್ರಾಮದ ಪ್ರಥಮ ಗ್ರಾಮಸಭೆಯಲ್ಲಿ ಸಾರ್ವಜನಿಕರ ಪರವಾಗಿ ಮಾತನಾಡಿದರು. ಈ ಬಗ್ಗೆ ಪಂಚಾಯತ್ ಬೋರ್ಡ ನಿರ್ಣಯ ಕೈಗೊಂಡು ಸಂಬಂಧಿಸಿ ಇಲಾಖೆಗೆ ಪತ್ರ ಬರೆಯಲಾಗುವುದು ಎಂದು ಪಿ.ಡಿ.ಒ ಸಭೆಗೆ ತಿಳಿಸಿದರು. ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದ್ದು, ಈ ಬಗ್ಗೆ ಕ್ರಮ ಜರಗಿಸಿ ಎಂದು ಸಭೆಯಲ್ಲಿ ಆಗ್ರಹ ಕೇಳಿಬಂತು. ಇದಕ್ಕೆ ಉತ್ತರಿಸಿದ ನೋಡೆಲ್ ಅಧಿಕಾರಿ ಡಾ. ಸೂರಜ್ ಕುಮಾರ್ ಬೀದಿ ನಾಯಿಗಳ ವಿರುದ್ಧ ಸುಪ್ರೀಂ ಕೋರ್ಟ್ ದೇಶದ ಎಲ್ಲಾ ರಾಜ್ಯಗಳಿಗೆ ಸುತ್ತೋಲೆ ರವಾನಿಸಿದೆ ಸರಕಾರ ರೂಪಿಸಿದ ಕಾನೂನಿನ ಅನುಗುಣವಾಗಿ ಕ್ರಮ ಕೈಗೊಳ್ಳಲು ಸಾಧ್ಯ ಅಷ್ಟರವರೆಗೆ ಇಲಾಖೆ ನಿರ್ದಿಷ್ಟ ಕ್ರಮಕ್ಕೆ ಅಸಾಧ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಶ್ರೀರಕ್ಷಾ 17 ರ ವಯೋಮಾನದ ಬಾಲಕಿಯರ ತ್ರಿವಿಧ ಜಿಗಿತ ಸ್ಪರ್ಧೆಯಲ್ಲಿ ಜಯಿಸುವುದರೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ಈ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿನ ಗೆಲುವಿನೊಂದಿಗೆ, ಹಾಸನದಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ಗಣೇಶ ಮೊಗವೀರ, ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ಮುಖ್ಯೋಪಾಧ್ಯಾಯಿನಿ ದೀಪಿಕಾ ಆಚಾರ್ಯ ಅವರು ವಿಜೇತ ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ. ಜನತಾ ಪದವಿಪೂರ್ವ ಕಾಲೇಜು ಮತ್ತು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ಬೋಧಕ ಬೋಧಕೇತರ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮಕ್ಕಳು ನಮ್ಮ ಜೀವನದ ದೊಡ್ಡ ಆಸ್ತಿ ಅವರ ಶಿಕ್ಷಣ, ಪ್ರತಿಭೆ, ಯೋಚನೆ, ಮೊದಲಾದವುಳಿಗೆ ಸೂಕ್ತ ಮಾರ್ಗದರ್ಶನಗಳ ಅಗತ್ಯವಿದೆ ಎಂದು ಸಂಸ್ಕೃತಿಕ ಚಿಂತಕರಾದ ವೆಂಕಟೇಶ್ ಭಟ್ ನುಡಿದರು. ಅವರು ವಿವೇಕ ಬಾಲಕಿಯರ ಪ್ರೌಢಶಾಲೆ ಕೋಟ, ಉಸಿರು ಕೋಟ. ಇವರ ಆಸರೆಯಲ್ಲಿ ನಡೆದ 24ನೇ ವರ್ಷದ ಮಕ್ಕಳ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ವೆಂಕಟೇಶ ಉಡುಪರು ಮಕ್ಕಳ ದಿನಾಚರಣೆಯ ಮಹತ್ವ ಮತ್ತು ಉದ್ದೇಶ ಶಾಲೆ ಮತ್ತು ಪೋಷಕರ ಸಂಬಂಧ ವಿಚಾರಗಳ ಬಗ್ಗೆ ಮಾಹಿತಿ ನೀಡಿದರು. ಬಳಿಕ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ವಿವಿಧ ಸ್ಪರ್ಧೆಗಳು ನಡೆದವು. ಶಾಲಾ ವಿದ್ಯಾರ್ಥಿ ನಾಯಕಿ ಇಂಪನ ಸ್ವಾಗತಿಸಿ, ಉಪನಾಯಕಿ ಪ್ರಿಯ ಧನ್ಯವಾದ ನೀಡಿದಳು. ಪಂಚಮಿ, ಸಾನ್ವಿ, ರಶ್ಮಿತಾ, ದೀಪಿಕಾ, ಕಾರ್ಯಕ್ರಮಗಳನ್ನು ಸಂಘಟಿಸಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಂಗ್ರೆಸ್ ಪಕ್ಷದ ವೋಟ್ ಚೋರಿ ಅಭಿಯಾನದ ವಿರುದ್ಧ ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ದೂರು ನೀಡಿರುವುದು ಅವರ ರಾಜಕೀಯ ದಿವಾಳಿತನವನ್ನು ತೋರಿಸುತ್ತದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ವೋಟ್ ಚೋರಿ ವಿರುದ್ಧ ದೇಶ ವ್ಯಾಪ್ತಿ ನಡೆಸುತ್ತಿರುವ ಸಹಿ ಸಂಗ್ರಹ ಅಭಿಯಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಸಹ್ಯಾದ್ರಿ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸಹಿ ಹಾಕಿರುವ ಬಗ್ಗೆ ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ದೂರು ನೀಡಿರುವುದು ಮತ್ತು ಇದರಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷರೂ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ ಅವರ ಮೇಲೆ ಆರೋಪ ಮಾಡಿರುವುದು ಬಿಜೆಪಿ ಯುವ ಮೋರ್ಚಾದವರ ರಾಜಕೀಯ ದಿವಾಳಿತನವಾಗಿದೆ. ಸಹ್ಯಾದ್ರಿ ತಾಂತ್ರಿಕ ಮಹಾ ವಿದ್ಯಾಲಯ ದೇಶದ ಭವಿಷ್ಯವಾಗಿರುವ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆ ಮಾಡುವ ಒಂದು ಸಂಸ್ಥೆ. ಇಲ್ಲಿ ವಿದ್ಯಾರ್ಜನೆ ಮಾಡುವ ವಿದ್ಯಾರ್ಥಿಗಳು ಪ್ರಬುದ್ಧತೆ ಹೊಂದಿರುವ, ರಾಜಕೀಯ ಪ್ರಜ್ಞೆ ಇರುವ, ಹದಿನೆಂಟು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಂದಿನ ಆಧುನಿಕ ಯುಗದಲ್ಲಿ ಮಕ್ಕಳು ಗ್ರಾಮೀಣ ಕ್ರೀಡೆಗಳಿಂದ ದೂರ ಸರಿಯುತ್ತಿದ್ದಾರೆ. ಗ್ರಾಮೀಣ ಕ್ರೀಡೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಅಗತ್ಯತೆ ಇದೆ. ಇತರ ಕ್ರೀಡೆಗಳಿಂದ ಗ್ರಾಮೀಣ ಕ್ರೀಡೆಗಳಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಹೆಚ್ಚು ಲಾಭವಿದೆ. ಗ್ರಾಮೀಣ ಕ್ರೀಡೆಗಳನ್ನು ಹೆಚ್ಚೆಚ್ಚು ಪ್ರೋತ್ಸಾಹಿಸಿವುದರ ಜೊತೆಗೆ ಅದರ ಬೆಳವಣಿಗೆಗೂ ನಾವು ಕೈಜೋಡಿಸಬೇಕು ಎಂದು ಗಂಗೊಳ್ಳಿ ಜಿ.ಎಸ್.ವಿ.ಎಸ್. ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ ಹೇಳಿದರು. ಅವರು ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ ಇದರ ಸುವರ್ಣ ಮಹೋತ್ಸವದ ಅಂಗವಾಗಿ ಜಿ.ಎಸ್.ವಿ.ಎಸ್. ಅಸೋಸಿಯೇಶನ್ ಗಂಗೊಳ್ಳಿ, ಎಸ್. ವಿ. ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಮತ್ತು ಸರಸ್ವತಿ ವಿದ್ಯಾಲಯ ಪ್ರೌಢಶಾಲೆ ಗಂಗೊಳ್ಳಿ ಇವರ ಸಹಭಾಗಿತ್ವದಲ್ಲಿ ಗಂಗೊಳ್ಳಿಯ ಎಸ್.ವಿ. ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಶುಕ್ರವಾರ ಆಯೋಜಿಸಲಾದ ಗ್ರಾಮೀಣ ಕ್ರೀಡೆಗಳ ಹಬ್ಬ ’ಆಡುಂಬೋಲ’ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್‌ನ ಹಿರಿಯ ಸದಸ್ಯ ಜಿ.ಉದಯಶಂಕರ ರಾವ್ ಕ್ರೀಡಾ ಹಬ್ಬಕ್ಕೆ ಚಾಲನೆ ನೀಡಿದರು. ಶ್ರೀ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಕೋಟೇಶ್ವರ ಇಲ್ಲಿ ವ್ಯವಹಾರ ಕ್ಷೇತ್ರದಲ್ಲಿ ಕಾನೂನು ಎಂಬ ವಿಷಯದಲ್ಲಿ ಒಂದು ದಿನದ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಮಂಜುನಾಥ ಗಿಳಿಯಾರ್ ಮಾತನಾಡಿ, ಪ್ರತಿಯೊಬ್ಬ ನಾಗರಿಕರಿಗೂ ಕಾನೂನಿನ ಅರಿವಿನ ಅಗತ್ಯ ಇದೆ. ಕಾನೂನನ್ನ ಅರಿತುಕೊಂಡು ಅದನ್ನು ಗೌರವಿಸಿ ಜೀವನ ನಡೆಸಿದಾಗ ಚಿಂತೆ ಮುಕ್ತ ಜೀವನ ನಮ್ಮದಾಗುತ್ತದೆ. ಪ್ರತಿಯೊಂದು ಕಾನೂನು ನಮಗೆ ಜವಾಬ್ದಾರಿ ಮತ್ತು ಹಕ್ಕುಗಳನ್ನು ನೀಡುತ್ತದೆ. ಕಾನೂನು ನಮ್ಮ ದೈನಂದಿನ ಜೀವನ ಹಾಗೂ ಸಾಮಾಜಿಕ ವ್ಯವಹಾರಿಕ ಬದುಕಿನಲ್ಲಿ ಮುಖ್ಯ ಪಾತ್ರವನ್ನು ವಹಿಸುತ್ತದೆ. ಆದರೆ ವ್ಯವಹಾರ ಕ್ಷೇತ್ರದಲ್ಲಿ ಕಾನೂನನ್ನು ಸರಿಯಾಗಿ ಪಾಲಿಸಿದಾಗ ಮಾತ್ರ ಉದ್ಯಮವು ನಿರೀಕ್ಷಿತ ಯಶಸ್ಸನ್ನು ಪಡೆಯಲು ಸಾಧ್ಯವಾಗುತ್ತದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಮಾತನಾಡಿ, ಇಂದು ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ನೀಡುವ ಸಲುವಾಗಿ ಇಂತಹ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.…
