Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗ ಆಶ್ರಯದಲ್ಲಿ ‘ಓಣಂ’ನ್ನು ಆಚರಿಸಲಾಯಿತು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ದೀಪ ಬೆಳಗಿಸಿ ಶುಭ ಹಾರೈಸಿದರು. ಈ ಸಂದರ್ಭ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ಡಾ| ದೀಪಾ, ಸಹಾಯಕ ಪ್ರಾಧ್ಯಾಪಕಿ ರೇವತಿ ಡಿ. ಉಪಸ್ಥಿತರಿದ್ದು, ಬೋಧಕ-ಬೋಧಕೇತರ ವೃಂದ, ವಿದ್ಯಾರ್ಥಿಗಳು ಹೂವಿನ ಪೂಕಳಂ ಹಾಕಿ ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಯಾವುದೇ ವಿಷಯದಲ್ಲಿ ಪದವಿ ಮುಗಿಸಿದ ಅಭ್ಯರ್ಥಿಗಳಿಗೆ ಯುಪಿಎಸ್ಸಿ ಹಾಗೂ ಕೆಪಿಎಸ್ಸಿಯ- ಪೂರ್ವಭಾವಿ (ಪ್ರೀಲಿಮ್ಸ್) ಹಾಗೂ ಮುಖ್ಯ ಪರೀಕ್ಷೆಗಳಿಗೆ (ಮೈನ್ಸ್) 9 ತಿಂಗಳ ನಿರಂತರ ಸನಿವಾಸ ತರಬೇತಿಯನ್ನು ನೀಡಲು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮುಂದಾಗಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಿನ ಸಾಧನಾ ಕೋಚಿಂಗ್ ಸೆಂಟರ್‌ನೊಂದಿಗೆ ಈಗಾಗಲೆ ಒಡಂಬಡಿಕೆ ಮಾಡಿಕೊಂಡಿದ್ದು, ಎಲ್ಲರಿಗೂ ಕೈಗೆಟಕುವ ರೀತಿಯಲ್ಲಿ ಉತ್ತಮ ಗುಣಮಟ್ಟದ, ಅತ್ಯುತ್ತಮ ತರಬೇತಿಯನ್ನು ನೀಡಲು ಉದ್ದೇಶಿಸಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ತಿಳಿಸಿದರು. ಈ ತರಬೇತಿಯು ಎಸ್‌ಡಿಎ, ಎಫ್‌ಡಿಎ, ಬ್ಯಾಂಕಿಂಗ್, ಪೋಲೀಸ್ ಇಲಾಖೆ, ಪಿಡಿಒ, ಕಂದಾಯ ಇಲಾಖೆಗಳ ಪರೀಕ್ಷೆಗಳು ಸೇರಿದಂತೆ ಇನ್ನಿತರ ಎಲ್ಲಾ ಸರ್ಕಾರಿ ಉದ್ಯೋಗಗಳ ಆಯ್ಕೆ ಪ್ರಕ್ರಿಯೆಯ ಪರೀಕ್ಷೆಗಳನ್ನು ಎದುರಿಸಲು ಅನುವುಮಾಡಿಕೊಡಲಿದೆ. ಕಾಲ ಕಾಲಕ್ಕೆ ಬರುವ ಸರ್ಕಾರಿ ಹಾಗೂ ಅರೆ ಸರ್ಕಾರಿ ಹುದ್ದೆಗಳಿಗೆ ತಯಾರುಗೊಳಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ವಿನೂತನ ಪ್ರಯತ್ನಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ಸಾಧನಾ ಕೋಚಿಂಗ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಜಗದ್ಗುರು ಶ್ರೀ ನಾಗಲಿಂಗ ಸ್ವಾಮಿ ಹಾಗೂ ವಿಶ್ವಕರ್ಮೇಶ್ವರ ಸಾನಿಧ್ಯವಿರುವ ಶ್ರೀ ಕಾಳಿಕಾಂಬಾ ದೇವಸ್ಥಾನ ಉಪ್ರಳ್ಳಿ ಕೂಡುವಳಿಕೆ ವಿಶ್ವಕರ್ಮ ಸಮಾಜದ ಎಲ್ಲ ಸಂಘಟನೆಗಳ ಜಂಟಿ ಆಶ್ರಯದಲ್ಲಿ ಸಮಾಜ ಬಾಂಧವರ ಸಹಕಾರದೊಂದಿಗೆ ಶ್ರೀ ವಿಶ್ವಕರ್ಮ ಜಯಂತಿ ಪ್ರಯುಕ್ತ ಹೊರೆಕಾಣಿಕೆ ಬೃಹತ್ ವಾಹನ ಜಾಥಾ ಬೈಂದೂರು ತಹಶೀಲ್ದಾರ್ ಕಛೇರಿಯ ಮುಂಭಾಗದಲ್ಲಿ ಉಪ್ರಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಕಳಿ ಚಂದ್ರಯ್ಯ ಆಚಾರ್ಯ ಅವರು ಚಾಲನೆ ನೀಡಿದರು. ವಿಶ್ವಕರ್ಮ ಭಾವಚಿತ್ರದ ಟ್ಯಾಬ್ಲೋ ಹೊರಟು ಬೈಂದೂರು ತಹಶೀಲ್ದಾರ್ ಕಛೇರಿಯಿಂದ ಬೈಂದೂರು ರಥಬೀದಿಯಲ್ಲಿ ಸಾಗಿ ಬಂದು ರಾಷ್ಟ್ರೀಯ ಹೆದ್ದಾರಿಯ ಮೂಲಕ ನಾಗೂರು ಉಪ್ರಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನದ ತನಕ ಹೊರೆಕಾಣಿಕೆ ವಾಹನ ಜಾಥಾ ನಡೆಯಿತು. ಉಪ್ರಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನದ ಎರಡನೇ ಮೊಕ್ತೇಸರ ಚಿತ್ತೂರು ಪ್ರಭಾಕರ ಆಚಾರ್ಯ, ಮೂರನೇ ಮೊಕ್ತೇಸರ ಆಲೂರು ಶ್ರೀಧರ್ ಆಚಾರ್ಯ, ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ತ್ರಾಸಿ ಸುಧಾಕರ್ ಆಚಾರ್ಯ, ವಿಶ್ವಕರ್ಮ ಯುವಕ ಸಂಘ ಅಧ್ಯಕ್ಷ ನಾಗರಾಜ್ ಆಚಾರ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಮಾತೃಭೂಮಿ ಮಹಿಳಾ ಸಹಕಾರಿ ಸಂಘ ಬೈಂದೂರು ಇದರ ನೂತನ ಕಛೇರಿ ಇಂದು ಮುಕಾಂಬಿಕಾ ಕಾಂಪ್ಲೆಕ್ಸ್ ನಲ್ಲಿ ಉದ್ಘಾಟನೆಗೊಂಡಿತು. ಸಹಕಾರಿ ಧುರೀಣ ಎಸ್.ರಾಜು ಪೂಜಾರಿ ಅವರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸುಖನ್ಯ ಹಾಗೂ ಸಹಕಾರ ಸಂಘಗಳ ನಿವೃತ್ತ ಸಹಾಯಕ ನಿಬಂಧಕರಾದ  ಅರುಣ್ ಕುಮಾರ್ ಎಸ್. ವಿ, ಸದಾಶಿವ ಡಿ. ಪಡುವರಿ, ಬಾಲಯ್ಯ ಶೇರುಗಾರ, ಸಂಘದ ಅಧ್ಯಕ್ಷರಾದ ಅನಸೂಯ ಶೇಟ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೆಹನಾ ಸುಲ್ತಾನಾ, ಸಿಬ್ಬಂದಿಗಳಾದ ಪೂರ್ಣಿಮಾ, ನಾಗರಾಜ್, ನಾಗಶ್ರೀ ಮುಂತಾದವರು ಉಪಸ್ಥಿತರಿದ್ದರು. ಪತ್ರಕರ್ತ ಅಂದುಕಾ ನಿರೂಪಿಸಿ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪ್ರಾಪಂಚಿಕವಾಗಿ ನಮ್ಮ ದೇಹ ಮತ್ತು ಮನಸ್ಸು ಇಲ್ಲಿ ಇರಬೇಕಾದರೆ ನಮ್ಮ ತಂದೆ ತಾಯಿಯ ಒಂದೊಂದು ಜೀವಕೋಶಗಳನ್ನು ನಾವು ಪಡೆದಿರುತ್ತೇವೆ, ತಂದೆ ತಾಯಿ ಇದ್ದರೆ ಮಾತ್ರ ನಾವೆಲ್ಲಾ. ಈ ಸೃಷ್ಟಿಯ ಆದಿಯಲ್ಲಿ ಅದೆಷ್ಟೋ ಜೀವ ಕಣಗಳಿದ್ದು, ಇಲ್ಲಿ ನಮ್ಮನ್ನು ನಾವು ಹಿಂದಿರುಗಿ ಹುಡುಕಿಕೊಂಡು ಹೋದಾಗ ಮಾತ್ರ ಭಗವಂತನ ಸಾಕ್ಷಾತ್ಕಾರ. ಈ ನಿಟ್ಟಿನಲ್ಲಿ ನಮ್ಮ ಮಕ್ಕಳಲ್ಲಿ ನಾವು ದೇವರನ್ನು ಕಾಣಬೇಕು ಇದೇ ಸೃಷ್ಟಿಕರ್ತ ವಿಶ್ವಕರ್ಮ. ಪ್ರಪಂಚದಲ್ಲಿ ಅತ್ಯಂತ ಶ್ರೇಷ್ಠವಾದ ಧರ್ಮ ಎನ್ನುವುದಿದ್ದರೇ ಅದು ವಿಶ್ವಕರ್ಮ ಧರ್ಮ ಎಂದು ಮಂಗಳೂರಿನ ಅಜಲಸ್ ಡಯಾಗ್ನಾಸ್ಟಿಕ್ಸ್ ಇಲ್ಲಿನ ಡಾ| ಚಂದ್ರಯ್ಯ ಆಚಾರ್ಯ ಅವರು ಹೇಳಿದರು. ಅವರು ಕೋಟೇಶ್ವರ ಶ್ರೀ ವಿಶ್ವಕರ್ಮ ಕಲ್ಯಾಣ ಮಂಟಪದಲ್ಲಿ ಶ್ರೀ ವಿಶ್ವಕರ್ಮ ಸಮಾಜ ಯುವಕ ದಳ, ಶ್ರೀ ವಿಶ್ವಕರ್ಮ ಬ್ರಾಹ್ಮಣ ಸಮಾಜ ಯುವಕ ಸೇವಾ ಸಂಘ ಹಾಗೂ ಶ್ರೀದೇವಿ ಮಹಿಳಾ ಮಂಡಳಿ ಕೋಟೇಶ್ವರ ಇವರ ಆಶ್ರಯದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮಹೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿಯಲ್ಲಿ ನೂತನ ಹಿಂದೂಸ್ಥಾನ ಗೋಲಿ ಸೋಡಾ ಮತ್ತು ಪಾನೀಯ ಉತ್ಪಾದನಾ ಲೋಕಾರ್ಪಣೆಗೊಂಡಿತ್ತು. ಬೈಂದೂರು ವಿಧಾನಸಭಾ ಕ್ಷೇತ್ರ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಲೋಕಾರ್ಪಣೆಗೊಳಿಸಿದರು. ಮುಖ್ಯ ಅತಿಥಿಗಳಾಗಿ ಹೆಮ್ಮಾಡಿಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನೇತ್ರಾವತಿ ಹಾಗೂ ಉಪ್ಪಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕಳಿ ಚಂದ್ರಯ್ಯ ಆಚಾರ್ಯ, ಮಾಲಿಕರಾದ ಶಂಕರ ಆಚಾರ್ಯ, ದಿನೇಶ್‌ ಆಚಾರ್ಯ ಇನ್ನಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯ, ಗಂಗೊಳ್ಳಿ ದಾಕುಹಿತ್ಲು ನಿವಾಸಿ ಬಾಣಿ ರಾಮಕೃಷ್ಣ ಖಾರ್ವಿ (57) ಅಲ್ಪಕಾಲದ ಅಸೌಖ್ಯದಿಂದ ಭಾನುವಾರ ನಿಧನರಾದರು. ಅವರು 10 ವರ್ಷಗಳ ಕಾಲ ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ದಾಕುಹಿತ್ಲು  ಶ್ರೀ ರಾಮ ಮಂದಿರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕಾಂಗ್ರೆಸ್ ಪಕ್ಷದ ಸಕ್ರೀಯ ಸದಸ್ಯರಾಗಿದ್ದ ಅವರು ಪಕ್ಷಬೇಧ ಮರೆತು ಎಲ್ಲರೊಂದಿಗೆ ಬೆರೆತು ಸಹಾಯ ಮಾಡುವ ಮೂಲಕ ಜನಾರಾಗಿದ್ದರು. ರಾಜಕೀಯ, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡು ಅನುಪಮ ಸೇವೆ ಮೂಲಕ ಗುರುತಿಸಿಕೊಂಡಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬ್ರಹ್ಮಶ್ರೀ ನಾರಾಯಣ ಗುರುಗಳು ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಸತ್ಯ ವಾಕ್ಯದ ಮೂಲಕ ಮೌಢ್ಯ ಮತ್ತು ಅಂಧ ಶೃದ್ಧೆಯಿಂದ ನಲುಗಿ ಹೋಗಿರುವ ಶೋಷಿತ ಸಮಾಜವನ್ನು, ಸಾಮಾಜಿಕ ಪರಿವರ್ತನೆಯ ಮೂಲಕ ಮೌನಕ್ರಾಂತಿ ನಡೆಸಿ ಸಮಾಜ ನಿರ್ಮಾಣಕ್ಕೆ ಮೇಲ್ಪಂಕ್ತಿ ಹಾಕಿದ ಮಹಾನ್‌ ದಾರ್ಶನಿಕರಾಗಿದ್ದಾರೆ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ನಾಗೂರು ಮಹಾಲಸಾ ಕಲ್ಚರಲ್ ಹಾಲ್‌ನಲ್ಲಿ ಸೋಮವಾರ ಬಿಜೆಪಿ ಬೈಂದೂರು ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾ ನೇತೃತ್ವದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 170ನೇ ಜನ್ಮ ದಿನಾಚರಣೆಯ ಅಂಗವಾಗಿ ನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶದಲ್ಲಿ ಶೇ. 50ರಷ್ಟು ಜನರು ಹಿಂದುಳಿದ ವರ್ಗಕ್ಕೆ ಸೇರಿದವರಾಗಿದ್ದು, ಕಳೆದ 70 ವರ್ಷದಿಂದ ಅಕಾರ ನಡೆಸಿದ ಕಾಂಗ್ರೆಸ್ ಪಕ್ಷ ಕೇವಲ ಮತಕ್ಕಾಗಿ ಅವರನ್ನು ಬಳಸಿಕೊಂಡಿದೆಯೇ ಹೊರತು ಮುಖ್ಯವಾಹಿನಿಗೆ ತರಲು ಪ್ರಯತ್ನಿಸಿಲ್ಲ. ಕಾಂಗ್ರೆಸ್ ಅಕಾರಕ್ಕಾಗಿ ಮೊಸಳೆ ಕಣ್ಣೀರು ಸುರಿಸುವ ಕೆಲಸ ಮಾಡುತ್ತಿದೆ ಎಂದು ದೂರಿದ ಅವರು ರಾಜ್ಯದಲ್ಲಿ ಬಿಜೆಪಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ನಡೆದಿದೆ ಮಂಗಳೂರು ಕರಂಗಲ್ಪಾಡಿ ನಿವಾಸಿ, ಪ್ರಸಿದ್ದ ಲೆಕ್ಕಪರಿಶೋಧಕ ಚೇತನ್ ಕಾಮತ್ ಅವರ ಪತ್ನಿ, ವೃತ್ತಿಯಲ್ಲಿ ಉಪನ್ಯಾಸಕಿಯಾದ ಅರ್ಚನಾ ಕಾಮತ್(33) ಮೃತ ದುದೈವಿ. ಯಕೃತ್ತಿಗೆ(ಲಿವರ್) ಸಂಬಂಧಿಸಿದ ಖಾಯಿಲೆಯಿಂದ ಬಳಲುತ್ತಿದ್ದ ತಮ್ಮ ಸಂಬಂಧಿಕರೊಬ್ಬರಿಗೆ ಯಕೃತ್ತಿನ ಕಸಿಗೆ ತನ್ನ ಯಕೃತ್ತನ್ನು ದಾನ ಮಾಡಿದ್ದರು. ಈ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ವೇಳೆ ಸೊಂಕಿಗೆ ತುತ್ತಾಗಿದ್ದರು ಎಂದು ಹೇಳಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಅರ್ಚನಾ ಮೂಲತಃ ಕೋಟೇಶ್ವರದವರಾಗಿದ್ದು ಮಂಗಳೂರಿನ ಚೇತನ್ ಕಾಮತ್ ಅವರನ್ನು ಮದುವೆಯಾಗಿದ್ದರು. ಮೃತದೇಹವನ್ನು ಕರಂಗಲ್ಪಾಡಿಯಯ ನಿವಾಸಕ್ಕೆ ತಂದು ವಿಧಿ ವಿಧಾನ ನೆರವೇರಿಸಿದ ಬಳಿಕ ಕೋಟೇಶ್ವರದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಸದಾ ಸಮಾಜಮುಖಿ ಚಿಂತನೆಯೊಂದಿಗೆ ಅರ್ಚನಾ ಕಾಮತ್‌ ಸಕ್ರಿಯವಾಗಿದ್ದು ಗುರುತಿಸಿಕೊಂಡಿದ್ದರು. ಅವರ ಅಕಾಲಿಕ ನಿಧನದ ಸುದ್ದಿ ಇಡೀ ಸಮಾಜವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಸಂಬಂಧಿಕರು, ಆತ್ಮೀಯರು ಆಘಾತಕಾರಿ ಸುದ್ದಿ ತಿಳಿದು ಕಂಬನಿ ಮಿಡಿದಿದ್ದಾರೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಅಂತಾರಾಷ್ಟ್ರೀಯ ರೋಟರಿ ಜಿಲ್ಲೆ – 3182ರ ಮಧ್ಯಮ ವರ್ಗದ ಕ್ಲಬ್‌ಗಳ ವಿಭಾಗದಲ್ಲಿ ಬೈಂದೂರು ರೋಟರಿ ಕ್ಲಬ್‌ ಒಟ್ಟು 20 ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಶಿವಮೊಗ್ಗ ಕಾಸ್ಮೋ ಕ್ಲಬ್ ಆವರಣದಲ್ಲಿ ನಡೆದ 2023-24ನೇ ಸಾಲಿನ ಅವಾರ್ಡ್ಸ್ ನೈಟ್ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. 2023-24ನೇ ಸಾಲಿನ ರೋಟರಿ ವರ್ಷದಲ್ಲಿ ಬೈಂದೂರು ರೋಟರಿ ಕ್ಲಬ್ ಕಾರ್ಯಗಳನ್ನು ಹಾಗೂ ಕಾರ್ಯಕ್ರಮಗಳನ್ನು ಪರಿಗಣಿಸಿ 19 ಪ್ರಶಸ್ತಿ ಹಾಗೂ CITATION AWARD ಸೇರಿ ಒಟ್ಟು 20 ಪ್ರಶಸ್ತಿಗಳಿಗೆ ನಮ್ಮ ಕ್ಲಬ್ ಭಾಜನವಾಗಿದೆ. 2023-24ನೇ ಸಾಲಿನ ಗವರ್ನರ್‌ ಪ್ರಶಸ್ತಿ ಬಿ.ಸಿ ಗೀತಾ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ ಸ್ವೀಕರಿಸುವ ವೇಳೆ ಕಳೆದ ಸಾಲಿನ ಸಹಾಯಕ ಗವರ್ನರ್‌ ಸಂದೀಪ್‌ ಶೆಟ್ಟಿ, ಬೈಂದೂರು ರೋಟರಿ ಕ್ಲಬ್‌ 2023-24ನೇ ಸಾಲಿನ ಅಧ್ಯಕ್ಷ ಪ್ರಸಾದ್‌ ಪ್ರಭು ಶಿರೂರು, ಕಾರ್ಯದರ್ಶಿ ಸುಬ್ರಹ್ಮಣ್ಯ ಜಿ. ಉಪ್ಪುಂದ ಪ್ರಶಸ್ತಿ ಸ್ವೀಕರಿಸಿದರು. ಈ ವೇಳೆ 2024-25ನೇ ಸಾಲಿನ ಅಧ್ಯಕ್ಷ ಮೋಹನ್‌ ರೇವಣ್ಕರ್‌, ರೊಟೆರಿಯನ್‌ಗಳಾದ ಐ. ನಾರಾಯಣ್‌, ಹರೀಶ್‌…

Read More