ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಾರ್ಕೂರು ರುಕ್ಕಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರ ಮತ್ತು ಕಾಲೇಜಿನ ಉಪನ್ಯಾಸಕ ಸಂಘದ ಆಶ್ರಯದ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಅಂತರ್-ಕಾಲೇಜು ಮಟ್ಟದ ಕ್ರಿಕೆಟ್ ಲೀಗ್ ಪಂದ್ಯಾಟದಲ್ಲಿ ಕುಂದಾಪುರದ ಪ್ರತಿಷ್ಠಿತ ಡಾ| ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ತಂಡ ಬ್ರಹ್ಮಾವರದ ಎಸ್.ಎಮ್.ಎಸ್. ಕಾಲೇಜು ತಂಡದ ಎದುರು ಗೆಲುವು ಸಾಧಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇವರಿಗೆ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಬಿ.ಎಮ್. ಸುಕುಮಾರ್ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಬೋಧಕ-ಬೋಧಕೇತರ ವೃಂದ ತಂಡವನ್ನು ಅಭಿನಂದಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಈ ಬಾರಿ ನಡೆಯಲಿರುವ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಕುಂದಾಪ್ರ ಕನ್ನಡ ಪ್ರತಿಷ್ಠಾನ (ರಿ.) ಇದರ ಪ್ರಾಯೋಜಕತ್ವದಲ್ಲಿ ‘ ನಿಂದೊಳ್ಳೆ ಕತಿಯಾಯ್ತಲ್ಲ ಮಾರಾಯ್ತಿ! ‘ ಎನ್ನುವ ಶೀರ್ಷಿಕೆಯಲ್ಲಿ ಕುಂದಾಪ್ರ ಕನ್ನಡದ ಸಣ್ಣ ಕಥಾ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಬಾರ್ಕೂರು ದೀಪಕ್ಕುಮಾರ ಶೆಟ್ಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಥಾ ಸ್ಪರ್ಧೆಯಲ್ಲಿ ಮೊದಲ ಬಹುಮಾನವಾಗಿ ₹10,000, ಎರಡನೆಯ ಬಹುಮಾನವಾಗಿ ₹7,000, ಮೂರನೆಯ ಬಹುಮಾನವಾಗಿ ₹4,000 ಹಾಗೂ 7 ಸಮಾಧಾನಕರ ಬಹುಮಾನಗಳು ನೀಡಲಾಗುವುದು. ಕಥೆ ಸಂಪೂರ್ಣವಾಗಿ ಕುಂದಾಪ್ರ ಕನ್ನಡದಲ್ಲಿಯೇ ಇರಬೇಕು. ಈ ಮೊದಲು ಕಥೆ ಯಾವುದೇ ಸಾಮಾಜಿಕ ಜಾಲತಾಣಗಳೂ ಸೇರಿದಂತೆ ಎಲ್ಲಿಯೂ ಪ್ರಕಟಗೊಂಡಿರಬಾರದು. ಒಬ್ಬರು ಒಂದೇ ಕಥೆಯನ್ನು ಕಳುಹಿಸಬೇಕು. ಕಥೆ 600 ಪದಗಳ ( ಎ4 ಗಾತ್ರದ ಎರಡು ಪುಟ) ಮಿತಿಯೊಳಗಿರಬೇಕು. ಕಥೆಯ ಜೊತೆ ಸ್ಪರ್ಧಿಗಳು ತಮ್ಮ ಹೆಸರು, ಸಂಪೂರ್ಣ ಅಂಚೆ ವಿಳಾಸ ಹಾಗೂ ಸಂಪರ್ಕ ಸಂಖ್ಯೆಗಳನ್ನು ನಮೂದಿಸಬೇಕು. ಜುಲೈ20 ರ ಮೊದಲು ಸ್ವರ್ಣರೇಖಾ ಇಂಟೀರಿಯರ್ಸ್,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಯಿಯ ಎದೆ ಹಾಲು ಕುಡಿದು ಕೆಲವೇ ಹೊತ್ತಿನಲ್ಲಿ 43 ದಿನದ ಹಸುಗೂಸು ಸಾವನ್ನಪ್ಪಿದ ಘಟನೆ ಗುಜ್ಜಾಡಿಯಲ್ಲಿ ನಡೆದಿದೆ. ಗುಜ್ಜಾಡಿ ಗ್ರಾಮದ ಲಕ್ಷ್ಮಣ ಎಂಬುವರ ಪುತ್ರಿ ನೇತ್ರಾವತಿ ಎಂಬುವರ ಮಗುವೇ ಸಾವನ್ನಪ್ಪಿದ ಮಗು. ಮಂಗಳವಾರ ಬೆಳಿಗ್ಗೆ ಎಂಟು ಗಂಟೆಯ ಸುಮಾರಿಗೆ ತಾಯಿ ಎದೆಹಾಲು ಕುಡಿಸಿ ರೂಮಿನಿಂದ ಹೊರಗೆ ಬಂದಾಗ ಅಜ್ಜ ಲಕ್ಷ್ಮಣ ಮಗುವನ್ನು ನೋಡಲು ಒಳಗೆ ಹೋಗಿದ್ದಾರೆ. ಆಗ ಮಗು ಉಸಿರಾಡುತ್ತಿಲ್ಲ ಎನ್ನುವ ಅನುಮಾನ ಬಂದಿದೆ. ತಕ್ಷಣ ಮಗುವನ್ನು ಮುಟ್ಟಿದಾಗಲೂ ಯಾವುದೇ ಪ್ರತಿಕ್ರಿಯೆ ಇಲ್ಲದೇ ಇದ್ದು ಮಗುವಿನ ಮೈ ತಣ್ಣಗಾಗಿದ್ದು ನಂತರ ಮಗುವನ್ನು ಕರೆದುಕೊಂಡು ಕುಂದಾಪುರದ ವಿನಯ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಮಗು ಮೃತಪಟ್ಟಿದೆ ಎಂದು ವೈದ್ಯರು ದೃಢಪಡಿಸಿದ್ದಾರೆ ಎಂದು ಗಂಗೊಳ್ಳಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ► ಬಿಜಾಡಿ: ಸಮುದ್ರದಲ್ಲಿ ಕೊಚ್ಚಿಹೋದ ಐಟಿಐ ವಿದ್ಯಾರ್ಥಿ- https://kundapraa.com/?p=73305 .
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕಲಾವಿದರ ವಿವರಗಳನ್ನು ಕ್ರೋಢಿಕರಿಸುವ ದೃಷ್ಟಿಯಿಂದ ಜಿಲ್ಲೆಯಲ್ಲಿನ ಕಲಾವಿದರ, ಕಲಾತಂಡಗಳ ಪಟ್ಟಿಯನ್ನು ತಯಾರಿಸಿ ಅವರಿಗೆ ಸೂಕ್ತ ಕಾರ್ಯಕ್ರಮಗಳನ್ನು ನೀಡಲು ಹಾಗೂ ನೈಜ ಕಲಾವಿದರ ಪಟ್ಟಿಯನ್ನು ತಯಾರಿಸಿ ಗುರುತಿನ ಚೀಟಿ ನೀಡಲು ಅರ್ಹ ಕಲಾವಿದರು, ಕಲಾತಂಡದವರು ಹಾಗೂ ಸಾಹಿತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಛೇರಿಯನ್ನು ಸಂಪರ್ಕಿಸಬಹುದಾಗಿದ್ದು, ಅರ್ಜಿಯಲ್ಲಿ ಸ್ವ ವಿವರದ ಮಾಹಿತಿಯೊಂದಿಗೆ ಆಧಾರ್ ಗುರುತಿನ ಚೀಟಿ, ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ, ಪ್ರತಿಷ್ಠ ಸಂಘ ಸಂಸ್ಥೆಗಳಿಂದ ಪಡೆದ ಪ್ರಶಸ್ತಿ ಪುರಸ್ಕಾರಗಳ ವಿವರ, ಪ್ರಮುಖ ಪ್ರದರ್ಶನಗಳ ವಿವರ, ಶಿಲ್ಪ ಚಿತ್ರಕಲೆಗಳ ಕಲಾ ಪ್ರದರ್ಶನಗಳು ಹಾಗೂ ಛಾಯಾಚಿತ್ರಗಳನ್ನು ಲಗತ್ತಿಸಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 27ರ ಒಳಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಡಾ. ಶಿವರಾಮ ಕಾರಂತ ಕಲಾಗ್ರಾಮ, ಪ್ರಗತಿನಗರ, ಅಲೆವೂರು ಗ್ರಾಮ, ಮಣಿಪಾಲ ಅಂಚೆ, ಉಡುಪಿ ದೂ.ಸಂಖ್ಯೆ: 0820-2986168 ಇಲ್ಲಿಗೆ ಸಲ್ಲಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕಾಲೇಜು ಮಟ್ಟದಲ್ಲಿ ಕ್ರೀಡೆಗೆ ಪ್ರಾಮುಖ್ಯತೆಯನ್ನು ನೀಡಿದರೆ ಮಾತ್ರ ದೇಶದಲ್ಲಿ ಕ್ರೀಡೆ ಬೆಳೆಯಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಅಮೆಚ್ಯೂರ್ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ರಾಕೇಶ್ ಮಲ್ಲಿ ಹೇಳಿದರು. ಇಲ್ಲಿರುವ ಆಳ್ವಾಸ್ ಕಾಲೇಜಿನ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ ಸ್ಮಾರಕ ಶೆಟ್ಟಿ ಸಭಾಂಗಣದಲ್ಲಿ ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಆತಿಥ್ಯದಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ರಾಜ್ಯ) ಮಟ್ಟದ ಪುರುಷರ ಮತ್ತು ಮಹಿಳಾ ಕಬಡ್ಡಿ ಚಾಂಪಿಯನ್ಶಿಪ್ನಲ್ಲಿ ಅವರು ಮಾತನಾಡಿದರು. ಕ್ರೀಡೆಯನ್ನು ಬೆಳೆಸುವಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠನದ ಕೊಡುಗೆ ಅಪಾರ. ಸರ್ಕಾರದ ನೆರವಿಲ್ಲದೆಯೂ ಆಳ್ವಾಸ್ ಸಂಸ್ಥೆ ಕ್ರೀಡಾಪಟುಗಳ ಬೆಳವಣಿಗೆಗೆ ಶ್ರಮ ಪಡುತ್ತಿದೆ. ಈ ಮಾದರಿ ದೇಶದಲ್ಲೇ ಮೊದಲು ಎಂದರು. ಮುಂದಿನ ದಿನಗಳಲ್ಲಿ ನಮ್ಮ ಫೆಡರೇಶನ್ ಕಪ್ ಅನ್ನು ಆಳ್ವಾಸ್ನಲ್ಲೆ ನಡೆಸಲಾಗುವುದು ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ವೈದ್ಯಕೀಯ ವಿದ್ಯಾರ್ಥಿಗಳು ದೇಶಿಯ ಕ್ರೀಡೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ 15 ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯ ಹಾಗೂ 8 ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯ ಸೇರಿದಂತೆ ಒಟ್ಟು 23 ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಹೆಚ್.ಎಂ.ಐ.ಎಸ್ ತಂತ್ರಾಂಶದ ಮೂಲಕ ಇಲಾಖಾ ವೆಬ್ಸೈಟ್ www.sw.kar.nic.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574892 ಹಾಗೂ ಉಡುಪಿ ದೂ.ಸಂಖ್ಯೆ: 0820-2528884, ಕುಂದಾಪುರ ದೂ.ಸಂಖ್ಯೆ: 08254-230609/ 298089 ಹಾಗೂ ಕಾರ್ಕಳ ದೂ.ಸಂಖ್ಯೆ: 08258-232133/ 298134 ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2025-26 ಜಿ.ಎಸ್.ಬಿ ಸಮಾಜದ ಶ್ರೀ ಕಾಶೀ ಮಠದ ಪರಮಪೂಜ್ಯ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ ಶತಮಾನೋತ್ಸವ ವರ್ಷ ಆಚರಣೆಯ ಕುರಿತು ಜಿ.ಎಸ್.ಬಿ ಸರ್ವ ದೇವಾಲಯ ಒಕ್ಕೂಟದ ಕುಂದಾಪುರ ವಲಯದ ಪೂರ್ವಭಾವಿ ಮಾಹಿತಿ ಸಭೆ ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ನಡೆಯಿತು. ಕಾಶೀ ಮಠಾಧೀಶ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಯಿತು. ಸರ್ವ ದೇವಾಲಯ ಒಕ್ಕೂಟದ ಅಧ್ಯಕ್ಷ ಅತುಲ್ ಕುಡ್ವ ವಿಸ್ತೃತ ಮಾಹಿತಿ ನೀಡಿದರು. ಗುರುಗಳ ಜನ್ಮ ಶತಮಾನೋತ್ಸವ ಆಚರಿಸುವುದು ನಮ್ಮೆಲ್ಲರ ಸೌಭಾಗ್ಯ ಎಂದರು. ಸುಧೀಂದ್ರ ಫಲೋದ್ಯಾನಸುಮಾರು 1 ಲಕ್ಷಕ್ಕೂ ಹೆಚ್ಚು ವಿವಿಧ ಬಗೆಯ ಹಣ್ಣುಗಳ ಸಸಿಯನ್ನು ನೆಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಊರಿನ ಸಮಾಜ ಬಾಂಧವರು ಮನೆ, ಕಛೇರಿ, ಉದ್ಯಮ ಹಾಗೂ ಇನ್ನಿತರ ಕಡೆಗಳಲ್ಲಿ ಈ ಕಾರ್ಯಕ್ರಮವನ್ನು ಏರ್ಪಡಿಸಬಹುದು ಎಂದರು. ಶ್ರೀ ಸುಧೀಂದ್ರ ಸ್ವಾಮೀಜಿ ಪಾದುಕೆ ರಥಯಾತ್ರೆಗುರುವರ್ಯರ ಪಾದುಕೆಯ ರಥಯಾತ್ರೆ ಜುಲೈ 7 ರಂದು ಶ್ರೀಮದ್ ವರದೇಂದ್ರ ತೀರ್ಥ ಸ್ವಾಮೀಜಿಯವರ ಆರಾಧನಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮದ್ರಾಸ್ ಐ.ಐ.ಟಿ ವತಿಯಿಂದ 2024ರ ಆರ್ಕಿಟೆಕ್ಚರ್ ಆಪ್ಟಿಟ್ಯೂಡ್ ಟೆಸ್ಟ್ ( ಎ.ಎ.ಟಿ ) ಪರೀಕ್ಷೆಯನ್ನು ಹಮ್ಮಿಕೊಳ್ಳಲಾಗಿತ್ತು. ಕೆಲವೇ ಐ ಐ ಟಿ ಕಾಲೇಜುಗಳಲ್ಲಿ ಆರ್ಕಿಟೆಕ್ಚರ್ ಕಲಿಯಲು ಅವಕಾಶವಿರುತ್ತದೆ. ಇಂತಹ ಅತ್ಯಂತ ಕಷ್ಟಕರವಾದ ಪರೀಕ್ಷೆಯಲ್ಲಿಯೂ ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿ ಶಮಿತ್. ಎನ್ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಯ ಸಾಧನೆಯನ್ನು ಶಿಕ್ಷಣ ಪ್ರತಿಷ್ಠಾನದ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಶಿಸ್ತು, ಸಮಯಪ್ರಜ್ಞೆ, ಸೃಜನಶೀಲತೆ, ಕ್ರೀಡಾಮನೋಭಾವ ಜೊತೆಗೆ ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯ ಅಪಾರ ಎಂದು ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಮುಖ್ಯ ಆಯುಕ್ತರಾದ ಆಳ್ವಾಸ್ ಶಿಕ್ಷಣ ಪ್ರತಿಷ್ಠನದ ಡಾ. ಎಂ ಮೋಹನ ಆಳ್ವ ಹೇಳಿದರು. ನಗರದ ಸ್ವರಾಜ್ ಮೈದಾನದ ಸ್ಕೌಟ್ಸ್ – ಗೈಡ್ಸ್ ಕನ್ನಡ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠತನದ ಮೂಡುಬಿದಿರೆ ಸಹಯೋಗದಲ್ಲಿ ನಡೆದ 2024-205 ಸಾಲಿನ ಎಸ್ಸಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಪಡೆದ ಪ್ರತಿಭಾನ್ವಿತ ಸ್ಕೌಟ್ಸ್ ಮತ್ತು ಗೈಡ್ಸ್ ಮತ್ತು ರೋವರ್ಸ್ ರೆಂಜರ್ಸ್ಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣದ ಪಠ್ಯ ಕಲಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದ ಮಕ್ಕಳು ಶೈಕ್ಷಣಿಕ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿರುವುದು ಅಭಿನಂದನಾರ್ಹ ಎಂದರು. ಉತ್ತಮ ಅಂಕಗಳನ್ನು ಗಳಿಸಿದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಿಮ್ಮದು ವೇದಿಕೆ ನಮ್ಮದು ಕಾರ್ಯಕ್ರಮದಡಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ 96ನೇ ತಿಂಗಳ ಕಾರ್ಯಕ್ರಮ ಇತ್ತೀಚೆಗೆ ಯಶಸ್ವಿಯಾಗಿ ನಡೆಯಿತು. ವೇದಿಕೆಯಲ್ಲಿ ಸದಾನಂದ ಕುಂದಾಪುರ, ಗಣೇಶ್ ಪೂಜಾರಿ ಗಂಗೊಳ್ಳಿ, ಮಾಲತಿ ಗಣೇಶ್ ಪೂಜಾರಿ, ಶ್ರೀಧರ್ ನಾಯಕ್ ಗುಡ್ಡೆಯಂಗಡಿ ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ರವರು ಉಪಸ್ಥಿತರಿದ್ದರು. ಅಕಾಡೆಮಿಯ ವತಿಯಿಂದ ಉದಯೋನ್ಮುಖ ಕೊಳಲು ವಾದಕ ಶಾಮ್ ಜಿ.ಎನ್. ಪೂಜಾರಿ, ಗಂಗೊಳ್ಳಿ ಹಾಗೂ ಉಪ್ಪಿನಕುದ್ರು ಸರಕಾರಿ ಪ್ರೌಢ ಶಾಲೆಯಲ್ಲಿ 2023-24ರ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಸಮೀಕ್ಷಾ ಪೂಜಾರಿಯವರನ್ನು ಗೌರವಿಸಲಾಯಿತು. ನಂತರ ಬಾಲ ಪ್ರತಿಭೆ ಶಾಮ್ ಜಿ.ಎನ್. ಪೂಜಾರಿಯವರು ನಡೆಸಿಕೊಟ್ಟ ಕೊಳಲು ವಾದನ ಕಛೇರಿ ನೆರೆದ ಪ್ರೇಕ್ಷಕರನ್ನು ದಿಗ್ಭ್ರಮೆಗೊಳಿಸಿತು. ನಿವೃತ್ತ ಶಿಕ್ಷಕ ನಾಗೇಶ್ ಶ್ಯಾನುಭಾಗ್ ರವರು ಕಾರ್ಯಕ್ರಮ ನಿರೂಪಿಸಿದರು.
