Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೆ ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಲು, ಮೂಲಭೂತ ಸೌಕರ್ಯ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಅನಿರ್ದಿಷ್ಠಾವಧಿ ಪ್ರತಿಭಟನೆಯ ಭಾಗವಾಗಿ ಗುರುವಾರ ಕುಂದಾಪುರ ತಾಲೂಕು ಕಚೇರಿ ಮುಂಭಾಗ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ಪ್ರತಿಭಟನೆ ನಡೆಸಿದರು. ಕಂದಾಯ ಇಲಾಖೆಯಿಂದ ನಿರಂತರವಾಗಿ ಸರ್ಕಾರದಿಂದ ಅಭಿವೃದ್ದಿಪಡಿಸಿರುವ ಹಕ್ಕುಪತ್ರ, ಆಧಾರ್ ಸೀಡ್, ಬೆಳೆ ಕಟಾವು ಮೊಬೈಲ್ ಆಪ್, ಭೂಮಿ, ದಿಶಾಂಕ್ ಸೇರಿದಂತೆ ಸುಮಾರು 21 ಎಲ್ಲಾ ವೆಬ್/ಮೊಬೈಲ್ ತಂತ್ರಾಂಶಗಳ ಮೂಲಕ ಹಾಗೂ ಸಿ-ವೃಂದದ ನೌಕರರ ಹತ್ತು ಪಟ್ಟು ಕೆಲಸಗಳನ್ನು ನಿರ್ವಹಿಸುತ್ತಿದ್ದು, ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳ ವೇತನ ಶ್ರೇಣಿ ನೀಡಬೇಕು. ► ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಠಾವಧಿ ಪ್ರತಿಭಟನೆ- https://kundapraa.com/?p=77240 . ಕಛೇರಿ, ಪೋನ್, ಕಂಪ್ಯೂಟರ್ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು, ಸೇವಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ನೇಮಿಸಿ ಹೊರಡಿಸಿದ್ದ ಆದೇಶ ಜಾರಿಗೊಳಿಸದಂತೆ ರಾಜ್ಯ ಹೈಕೋರ್ಟ್‌ ತಡೆ ನೀಡಿದೆ. ಸೆ.20ರಂದು ರಾಜ್ಯ ಧಾರ್ಮಿಕ ಪರಿಷತ್‌ ಸದಸ್ಯ ಕಾರ್ಯದರ್ಶಿ ಹಾಗೂ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಆಯುಕ್ತರು 9 ಮಂದಿ ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ನೇಮಿಸಿ ಆದೇಶ ಹೊರಡಿಸಿದ್ದರು. ಆದರೆ ಸೆ.19ರಿಂದ ವಿಧಾನ ಪರಿಷತ್‌ ಚುನಾವಣೆಯ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಇದು ನೀತಿ ಸಂಹಿತೆಯ ಉಲ್ಲಂಘನೆ ಎಂದು ವಾದಿಸಲಾಗಿದೆ. ಅಲ್ಲದೇ ಓರ್ವ ಸದಸ್ಯರ ವಿರುದ್ದ ಅಪರಾಧ ಪ್ರಕರಣ ದಾಖಲಾಗಿದೆ. ಅವರನ್ನು ಸದಸ್ಯರನ್ನಾಗಿ ನೇಮಿಸಿರುವುದು ಸರಿಯಲ್ಲ ಎಂಬ ವಾದವನ್ನು ಹೈಕೋರ್ಟ್‌ ಮುಂದಿಡಲಾಗಿದೆ. ಈ ಬಗ್ಗೆ ಚಂದ್ರಶೇಖರ ರೆಡ್ಡಿ ಬೆಂಗಳೂರು, ರವೀಶ್‌ ಕುಮಾರ್‌ ನಿಟ್ಟೂರು, ಎ.ಎಲ್.‌ ಲಕ್ಷ್ಮೀಶ್‌ ನಿಟ್ಟೂರು ಎಂಬುವವರು ರಿಟ್‌ ಅರ್ಜಿ ಸಲ್ಲಿಸಿದ್ದು ಅದರಂತೆ ಇಲಾಖಾ ಆಯುಕ್ತರ ಆದೇಶ ಅನುಷ್ಠಾನಗೊಳಿಸಲು ತಾತ್ಕಾಲಿಕ ತಡೆ ನೀಡಿರುವ ಹೈಕೋರ್ಟ್ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ಕುಂದಾಪ್ರ ಡಾಟ್‌…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಈಗಿರುವ ರಾಷ್ಟ್ರೀಯ ಪಿಂಚಣಿ ಯೋಚನೆ (NPS) ಹಾಗೂ ಕೇಂದ್ರ ಸರಕಾರ ಹೊಸತಾಗಿ ಜಾರಿಗೆ ತರಲು ಹೊರಟಿರುವ ಏಕೀಕೃತ ಪಿಂಚಣಿ ಯೋಜನೆಯನ್ನು (UPS) ಕೈಬಿಟ್ಟು  ಹಳೆ ಪಿಂಚಣಿ ಯೋಜನೆ (OPS) ಮರು ಸ್ಥಾಪಿಸಿದರೆ ಮಾತ್ರ ಸರಕಾರಿ ನೌಕರರಿಗೆ ನ್ಯಾಯ ಒದಗಿಸಿದಂತಾಗಲಿದೆ. ಸರಕಾರವು ನೌಕರರ ಬೇಡಿಕೆಯನ್ನು ಪರಾಮರ್ಶಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್‌ ನೌಕರರ ಸಂಘ ಬೈಂದೂರು ತಾಲೂಕು ಘಟಕದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಉಪ್ಪುಂದ ಒತ್ತಾಯಿಸಿದ್ದಾರೆ. ಅವರು ಗುರುವಾರ ತಾಲೂಕು ಆಡಳಿತ ಸೌಧದ ಎದುರು ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್‌ ನೌಕರರ ಸಂಘ ಬೈಂದೂರು ತಾಲೂಕು ಘಟಕದಿಂದ ಬೈಂದೂರು ತಹಶಿಲ್ದಾರರ ಮೂಲಕ ರಾಜ್ಯ ಸರಕಾರ ಮುಖ್ಯಕಾರ್ಯದರ್ಶಿಯವರಿಗೆ ಮನವಿ ಸಲ್ಲಿಸಿ ಮಾತನಾಡಿದರು. 2014ರಿಂದ ಎನ್.ಪಿ.ಎಸ್‌ ವಿರುದ್ಧ ಹೋರಾಟ ನಡೆಸಲಾಗುತ್ತಿದ್ದು, ಅದರ ಪರಿಣಾಮವಾಗಿ ಯು.ಪಿ.ಎಸ್‌ ಎಂಬ ಹೊಸ ಕಾನೂನನ್ನು ತಂದಿರುವ ಕೇಂದ್ರ ಸರಕಾರ ಎಂಪ್ಲಾಯರ್‌ ಫಂಡ್‌ ಶೇ.18ಕ್ಕೆ ಏರಿಸಿ ಶೇ.50 ಖಾತ್ರಿ ಇರುವ ಪಿಂಚಣಿ ನೀಡುವುದಾಗಿ ಹೇಳಿದೆ. ಅದರೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸೆಪ್ಟೆಂಬರ್ 25 ರಂದು ಉಡುಪಿ ಅಜ್ಜರಕಾಡಿನಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನನ್ ಎತ್ತರ  ಜಿಗಿತದಲ್ಲಿ ಚಿನ್ನದ ಪದಕ ಮತ್ತು ಈಜು ಸ್ಪರ್ಧೆಯಲ್ಲಿ ರೋಹಿತ್  2 ಬೆಳ್ಳಿ ಪದಕ ಪಡೆದು ರಾಜ್ಯ ಮಟ್ಟಕ್ಕೆ  ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಮತ್ತು ಸರಸ್ವತಿ ವಿದ್ಯಾಲಯ  ಪದವಿ ಪೂರ್ವ ಕಾಲೇಜು ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ಟೆನ್ನಿಕಾಯ್ಟ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದಿದೆ. ವಿದ್ಯಾರ್ಥಿಗಳಾದ ಸಹನಾ ಖಾರ್ವಿ, ಮಾನ್ಯ ಖಾರ್ವಿ,  ಭೂಮಿಕಾ ಖಾರ್ವಿ ಮತ್ತು ಅಮೂಲ್ಯ ಖಾರ್ವಿ ತಂಡವನ್ನು ಪ್ರತಿನಿಧಿಸಿದ್ದರು. ಸಹನಾ ಖಾರ್ವಿ ಬೆಸ್ಟ್ ಆಲ್-ರೌಂಡರ್ ಪ್ರಶಸ್ತಿ ಪಡೆದುಕೊಂಡರು. ದೈಹಿಕ ಶಿಕ್ಷಣ ಉಪನ್ಯಾಸಕ ದೀಕ್ಷಿತ್ ಮೇಸ್ತ ಮಾರ್ಗದರ್ಶನ ನೀಡಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಮತ್ತು ಎಸ್.ಎನ್.ವಿ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕಾಲೇಜು ವಿಭಾಗದ ಬಾಲಕ-ಬಾಲಕಿಯರ ಕರಾಟೆ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು, ಕುಂದಾಪುರದ ವಿದ್ಯಾರ್ಥಿನಿ ನವಮಿ ಎಸ್ ಶೆಟ್ಟಿ ವಿಜಯಶಾಲಿಯಾಗುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ ಮತ್ತು ಆಶಿತ್ ಶೆಟ್ಟಿ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾನೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸೇವೆ, ಸ್ನೇಹ, ವೈವಿಧ್ಯತೆ, ಸಮಗ್ರತೆ ಮತ್ತು ನಾಯಕತ್ವ ಎಂಬ ಮೌಲ್ಯದ ಮೂಲಕ ನಿರಂತರವಾಗಿ ಸಮಾಜದ ಅಭ್ಯುದಯಕ್ಕಾಗಿ ಶ್ರಮಿಸುತ್ತಾ ಬಂದಿರುವ ರೋಟರಿ ಸಂಸ್ಥೆ ತನ್ನದೇ ಆದ ಸಾಮಾಜಿಕ ಮೌಲ್ಯಗಳನ್ನು ಹೊಂದಿದೆ. ಆರೋಗ್ಯ, ಶಿಕ್ಷಣ, ಸಮುದಾಯದ ಅರಿವು ಹಾಗೂ ಅಭಿವೃದ್ಧಿಯಲ್ಲಿ ರೋಟರಿ ಹೆಚ್ಚಿನ ಕಾರ್ಯ ಮಾಡುತ್ತಿದೆ ಎಂದು ರೋಟರಿ ಜಿಲ್ಲೆ 3182ರ ಗವರ್ನರ್ ಸಿಎ ದೇವ್ ಆನಂದ್ ಹೇಳಿದರು. ಅವರು ಮಂಗಳವಾರ ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ಜರುಗಿದ ಬೈಂದೂರು ರೋಟರಿ ಕ್ಲಬ್‌ಗೆ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ರೋಟರಿ ಸದಸ್ಯರು ತಮ್ಮ ಉದ್ಯೋಗ ಹಾಗೂ ಸೇವೆಯಲ್ಲಿ ನೈತಿಕ ಮೌಲ್ಯಗಳನ್ನು ಕಾಯ್ದುಕೊಂಡು ಕಾರ್ಯನಿರ್ವಹಿಸುವುದರಿಂದ ಸಮುದಾಯದಲ್ಲಿ ಗೌರವ ಹೆಚ್ಚುತ್ತದೆ. ಪ್ರತಿ ಸದಸ್ಯರಿಗೂ ನಾಯಕರಾಗುವ ಸಮಾನ ಅವಕಾಶವಿದ್ದು ಅಂತರಾಷ್ಟ್ರೀಯ ರೋಟರಿ ಅಧ್ಯಕ್ಷರಾಗುವ ತನಕವೂ ಮಕ್ತ ಅವಕಾಶವಿದೆ ಎಂದರು. ಈ ಸಂದರ್ಭ ಬೈಂದೂರು ರೋಟರಿ ಟ್ರಸ್ಟ್ ವತಿಯಿಂದ 5 ಮಂದಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನಸಹಾಯ, ಮಹಿಳಾ ರೊಟೆರಿಯನ್ಗಳ ಮೂಲಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಜಾಮಿಯಾ ಮೊಹಲ್ಲಾ ಪೊಲೀಸ್ ಚೆಕ್‌ಪೋಸ್ಟ್ ಎದುರಿನ ನಿವಾಸಿ ಬಶೀರ್ ಅಹ್ಮದ್ ಅವರ ಪುತ್ರ ಮುಬಾಶೀರ್‌ (30) ಅವರು ಸೌದಿ ಅರೇಬಿಯಾದಲ್ಲಿ ಹಠಾತ್ತನೆ ಕುಸಿದು ಬಿದ್ದು, ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಸೆ. 25ರಂದು ಮಧ್ಯಾಹ್ನ ಸಂಭವಿಸಿದೆ. ಮುಬಾಶೀರ್‌ ಅವರು ಸೌದಿ ಅರೇಬಿಯಾದಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿದ್ದರು. 2 ವರ್ಷದ ಹಿಂದೆ ಮಹಾರಾಷ್ಟ್ರದ ಪುಣೆಯ ಯುವತಿಯೊಂದಿಗೆ ವಿವಾಹವಾಘಿದ್ದು, ಬಳಿಕ ಪತ್ನಿಯೊಂದಿಗೆ ಸೌದಿಯಲ್ಲಯೇ ನೆಲೆಸಿದ್ದರು. ಮೃತರು ಪತ್ನಿ, ತಾಯಿ, ತಂದೆ ಹಾಗೂ ಸಹೋದರನನ್ನು ಅಗಲಿದ್ದಾರೆ. ಅವರು ಕುಂದಾಪುರದ ಎಚ್‌ ಎಂಎಂ ಶಾಲೆ, ವಿಕೆಟರ್ ಶಾಲೆ, ಭಂಡಾರ್ ಕಾರ್ಸ್‌ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪೂರೈಸಿ ಆನಂತರ ಭಟ್ಕಳದ ಅಂಜುಮಾನ್ ಕಾಲೇಜಿನಲ್ಲಿಎಂಜಿನಿಯರಿಂಗ್‌ ಪದವಿ ಪೂರೈಸಿ ಸೌದಿಗೆ ತೆರಳಿದ್ದರು. ಅಂತ್ಯಕ್ರಿಯೆ ವಿಧಿವಿಧಾನಗಳ ಬಗ್ಗೆ ಸೌದಿ ದೇಶದ ಕಾನೂನು ಪ್ರಕ್ರಿಯೆಗಳು ಮುಗಿದ ಅನಂತರವೇ ತಿಳಿದು ಬರಬೇಕಿದೆ. ಕಷ್ಟಕ್ಕೆ ನೆರವಾಗುತ್ತಿದ್ದರು:ಊರಿನಲ್ಲಿದ್ದಾಗ ಜನರ ಸಂಕಷ್ಟಕ್ಕೆ ನೆರವಾಗುತ್ತಿದ್ದ ಮುಬಾಶೀರ್ ಅವರು 4 ವರ್ಷಗಳ ಹಿಂದೆ ತ್ರಾಸಿ – ಮರವಂತೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೇಂದ್ರ ಪುರಸ್ಕೃತ ಮಧ್ಯಾಹ್ನ ಬಿಸಿಯೂಟ ಯೋಜನೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಅನುದಾನದಿಂದ ವಾರಕ್ಕೆ ಎರಡು ದಿನ ಪೂರಕ ಪೌಷ್ಟಿಕ ಆಹಾರವಾಗಿ ಮೊಟ್ಟೆ ಅಥವಾ ಚಿಕ್ಕಿ ಬಾಳೆಹಣ್ಣು ಇವುಗಳನ್ನು ವಿತರಿಸಲಾಗುತ್ತಿತ್ತು. ಅಜೀಮ್ ಪ್ರೇಮ್ ಜಿ ಫೌಂಡೇಶನ್ ವತಿಯಿಂದ ವಾರದ ನಾಲ್ಕು ದಿನಗಳ ಕಾಲ ಹೆಚ್ಚುವರಿಯಾಗಿ ನೀಡುವ ಕಾರ್ಯಕ್ರಮಕ್ಕೆ ಇಂದು ಸರ್ಕಾರಿ ಪದವಿ ಪೂರ್ವ ಕಾಲೇಜಿನ(ಬೋರ್ಡ್ ಹೈ ಸ್ಕೂಲ್)ನಲ್ಲಿ  ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಅಪೌಷ್ಟಿಕತೆಯಿಂದ ಬಳಲಬಾರದು.ಭೌತಿಕವಾಗಿ ಮತ್ತು ಬೌದ್ಧಿಕವಾಗಿ ಬೆಳವಣಿಗೆ ಹೊಂದಲು ಈ ಯೋಜನೆಯು ಸಹಕಾರಿಯಾಗಿದ್ದು, ಸರಕಾರ ರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡು ವಾರದ ಎಲ್ಲಾ ದಿನಗಳಲ್ಲೂ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ಬೇಯಿಸಿದ ಮೊಟ್ಟೆ ಅಥವಾ ಶೇಂಗಾ ಚಿಕ್ಕಿ ಅಥವಾ ಬಾಳೆಹಣ್ಣು ವಿತರಿಸಲು ರೂಪಾಯಿ 1500 ಕೋಟಿ ಮಿಕ್ಕಿ ಅನುದಾನವನ್ನು ನೀಡಿರುವ ಕ್ರಮ ಶ್ಲಾಘನೀಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಶಾಲಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಆತ್ಮ ಯೋಜನೆಯಡಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ, ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ವಿವಿಧ ಕೃಷಿ ಚಟುವಟಿಕೆಗಳನ್ನು ಕೈಗೊಂಡಿರುವ ಹಾಗೂ ಕನಿಷ್ಠ ಒಂದು ಎಕರೆ ವಿಸ್ತೀರ್ಣ ಸ್ವಂತ ಜಮೀನು ಹೊಂದಿರುವ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More