ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಗಂಗೊಳ್ಳಿ ಆಯೋಜನೆಯಲ್ಲಿ ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ಜಲಜಾಗ್ರತಿ ಕಾರ್ಯಕ್ರಮ ನಡೆಯಿತು.ಸಮಾರಂಭದ ಅಧ್ಯಕ್ಷತೆಯನ್ನು ರೋಟರಿ ಗಂಗೊಳ್ಳಿ ಅಧ್ಯಕ್ಷೆ ಚಂದ್ರಕಲಾ ಎಸ್. ತಾಂಡೇಲ್ ವಹಿಸಿದ್ದರು.ರೋಟರಿ ಜಿಲ್ಲಾ ಗವರ್ನರ್ ಸಿ.ಎ. ದೇವಾನಂದ್ ಮುಖ್ಯ ಅತಿಥಿಯಾಗಿ ಆಗಮಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ನೆಲ-ಜಲ-ಪರಿಸರ ಜಿಲ್ಲಾ ಸಂಯೋಜಕರಾದ ಶಿವಾನಂದ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ರಾಜ್ಯ ಸಂಪನ್ಮೂಲ ವ್ಯಕ್ತಿ ರತ್ನ ಜೋಸೆಫ್ ಜಿ.ಎಮ್ ರೆಬೆಲ್ಲೊ ಅವರು ಮಾತನಾಡಿ, ಜಲಜಾಗ್ರತಿಯ ಕುರಿತಾಗಿ ಅರಿವು ಮೂಡಿಸಿದರು. ಮಳೆಕೊಯ್ಲು,ಜಲ ಮರುಪೂರಣ, ಜಲಕ್ಷಾಮ, ದ್ರವ ತ್ಯಾಜ್ಯ ಈ ಪ್ರಮುಖ ವಿಚಾರಗಳ ಕುರಿತು ಮಾಹಿತಿಯನ್ನು ನೀಡಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ರಮೇಶ ಪೂಜಾರಿ, ವಿದ್ಯಾರ್ಥಿಗಳು, ಬೋಧಕ/ಬೋಧಕೇತರ ವೃಂದದವರು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕಿ ರಂಜಿತಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲೆಯಲ್ಲಿ ತೃತೀಯ ಭಾಷೆಯಾಗಿ ಕೊಂಕಣಿಯನ್ನು ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ವಿಶ್ವ ಕೊಂಕಣಿ ಕೇಂದ್ರ ಮಂಗಳೂರು ಇದರ ವತಿಯಿಂದ ಸ್ಕೂಲ್ ಬ್ಯಾಗ್ ಮತ್ತು ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ಶಾಲೆಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಕೊಂಕಣಿ ಸಾಂಸ್ಕೃತಿಕ ಸಂಘದ ಮುಖ್ಯಸ್ಥ ಎಂ. ಆರ್. ಕಾಮತ್ ಮತ್ತು ಉಷಾ ಪೈ ಹಾಗೂ ಕೊಡಿಯಾಲ್ ಕಬರ್ ಪತ್ರಿಕೆ ಮುಖ್ಯಸ್ಥ ವೆಂಕಟೇಶ ಬಾಳಿಗ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಮತ್ತು ವಿದ್ಯಾರ್ಥಿವೇತನ ವಿತರಿಸಿ ಶುಭ ಹಾರೈಸಿದರು. ಜಿ.ಎಸ್.ವಿ.ಎಸ್ ಅಸೋಸಿಯೇನ್ ಕಾರ್ಯದರ್ಶಿ ಎಚ್.ಗಣೇಶ್ ಕಾಮತ್, ಶಾಲೆಯ ಸಂಚಾಲಕ ಎನ್.ಸದಾಶಿವ ನಾಯಕ್, ಎಸ್.ವಿ. ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಗೋಪಾಲ ದೇವಾಡಿಗ, ಎಸ್.ವಿ.ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ರಾಘವೇಂದ್ರ ಶೇರುಗಾರ್ ಉಪಸ್ಥಿತರಿದ್ದರು. ಕೊಂಕಣಿ ಶಿಕ್ಷಕಿಯರಾದ ರೇಷ್ಮಾ ನಾಯಕ್ ಮತ್ತು ನಮಿತಾ ಶೆಣೈ ಕಾರ್ಯಕ್ರಮ ನಿರ್ವಹಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಹಕಾರ ತತ್ವದ ಮೂಲ ಆಶಯಕ್ಕೆ ಧಕ್ಕೆ ಬಾರದ ರೀತಿಯಲ್ಲಿ ಕಾರ್ಯನಿರ್ವಹಿಸಿ, ರೈತಾಪಿ ವರ್ಗದ ಹಾಗೂ ಗ್ರಾಹಕರ ಸೇವೆಯಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘವು ಕಳೆದ ಆರ್ಥಿಕ ವರ್ಷದಲ್ಲಿ ಎಲ್ಲಾ ವ್ಯವಹಾರಗಳಲ್ಲೂ ಗುರಿ ಮೀರಿ ಸಾಧನೆ ಮಾಡಿ, ವರದಿ ವರ್ಷದಲ್ಲಿ 6.01 ಕೋಟಿ ರೂ. ನಿವ್ವಳ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು. ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ಭಾನುವಾರ ನಡೆದ ಸಂಘದ ವಾರ್ಷಿಕ ಸರ್ವದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವರದಿ ವರ್ಷದಲ್ಲಿ 1030 ಕೋಟಿ ರೂ. ಗೂ ಮಿಕ್ಕಿ ವ್ಯವಹಾರ ನಡೆಸಿ, ಸಂಘದ ನಾಲ್ಕು ಶಾಖೆಗಳ ಮೂಲಕ 238.08ಕೋಟಿ ರೂ. ಠೇವಣೆ ಸಂಗ್ರಹಿಸಿ, 200.22 ಕೋಟಿ ರೂ. ಸಾಲ ನೀಡಿದೆ, 77.18 ಕೋಟಿ ರೂ. ಹೂಡಿಕೆ ಮಾಡಿ, 32.05ಕೋಟಿ ರೂ. ನಿಧಿಗಳನ್ನು ಹೊಂದಿ ಸದೃಢವಾಗಿದೆ. 8400 ಸದಸ್ಯರನ್ನೊಳಗೊಂಡ 756 ರೈತಸಿರಿ ಸ್ವಸಹಾಯ ಗುಂಪುಗಳನ್ನು ಸಂಯೋಜಿಸಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗ, ಇಂದುಶ್ರೀ ಮಹಿಳಾ ಸಂಘ ಗಂಗೊಳ್ಳಿ ಹಾಗೂ ಗಂಗೊಳ್ಳಿ ವಲಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘ ಇವರ ಸಹಯೋಗದೊಂದಿಗೆ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ಇದರ ಸುವರ್ಣ ಮಹೋತ್ಸವ ವರ್ಷ- 2024 ಅಂಗವಾಗಿ ಗಂಗೊಳ್ಳಿ ವಲಯ ಅಂಗನವಾಡಿ ಮಕ್ಕಳ ಚಿಣ್ಣರ ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. ಶ್ರೀ ಶಾರದೋತ್ಸವ ಸಮತಿ ಅಧ್ಯಕ್ಷ ಸತೀಶ ಜಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ನರೇಂದ್ರ ಎಸ್.ಗಂಗೊಳ್ಳಿ, ಹಿರಿಯ ನಾಗರಿಕ ಬಿ.ಸದಾನಂದ ಶೆಣೈ, ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಅಧಿಕಾರಿ ಉಮೇಶ್ ಟಿ.ಎಲ್., ಶಾಲೆಯ ಮುಖ್ಯ ಶಿಕ್ಷಕ ಜಿ.ವಿಶ್ವನಾಥ ಭಟ್, ಉಡುಪಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್, ತೀರ್ಪುಗಾರರಾದ ಮಹಾಬಲ ಆಚಾರ್ಯ, ನಟರಾಜ್ ಮೇಲ್ಗಂಗೊಳ್ಳಿ, ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ಸುಮಿತ್ರಾ ಜಿ., ಸರೋಜ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮಹಾಸತಿ ಪ್ರಾಥಮಿಕ ಮೀನುಗಾರರ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘ ಗಂಗೊಳ್ಳಿ ಇದರ 2023 – 24ನೇ ಸಾಲಿನ ಮಹಾಸಭೆ ಗಂಗೊಳ್ಳಿಯ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ಗುರುವಾರ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷೆ ನೀಲಾವತಿ ಎಸ್. ಖಾರ್ವಿ ಮಾತನಾಡಿ, ವರದಿ ವರ್ಷದಲ್ಲಿ ಒಟ್ಟು 4519 ಸದಸ್ಯರೊಂದಿಗೆ 21.80 ಲಕ್ಷ ರೂ. ಪಾಲು ಬಂಡವಾಳವನ್ನು ಹೊಂದಿದೆ. ವರ್ಷ ಅಂತ್ಯಕ್ಕೆ 17.35 ಕೋಟಿಗೂ ಮಿಕ್ಕಿ ಠೇವಣಿಯನ್ನು ಹೊಂದಿದ್ದು, ಹೊರಬಾಕಿ ಸಾಲ 11.08 ಕೋಟಿ ರೂ. ಇದೆ. 9.91 ಕೋಟಿ ರೂ.ಗಳನ್ನು ವಿವಿಧ ಸಂಘ/ಬ್ಯಾಂಕುಗಳಲ್ಲಿ ಹೂಡಿಕೆ ಮಾಡಲಾಗಿದ್ದು, ವರ್ಷಾಂತ್ಯಕ್ಕೆ ಸಂಘವು 15.16 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ.10 ಪಾಲು ಮುನಾಫೆ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಸಹಕಾರಿ ಸಂಘದ ಸದಸ್ಯರ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ತೇರ್ಗಡೆಯಾದ ಮಕ್ಕಳಿಗೆ ಶೇಕಡವಾರು ಆಧಾರದಲ್ಲಿ ಒಟ್ಟು 31 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ಸಂಘದ ಉಪಾಧ್ಯಕ್ಷೆ ಶೈಲಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉತ್ತಮ ಶೈಕ್ಷಣಿಕ ಜ್ಞಾನ ಮತ್ತು ಸಂಶೋಧನಾ ಪ್ರವೃತ್ತಿಯು ಶಿಕ್ಷಕರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಇದರ (ತಂತ್ರಜ್ಞಾನ ಮತ್ತು ವಿಜ್ಞಾನ) ಉಪಕುಲಪತಿ ಡಾ. ನಾರಾಯಣ ಸಭಾಹಿತ ಹೇಳಿದರು. ಅವರು ಶನಿವಾರದಂದು ಕುಲಪತಿಗಳ ಹುಟ್ಟಿದ ಹಬ್ಬದ ಪ್ರಯುಕ್ತ ನಡೆದ ಎ.ಜಿ.ಇ ಅಧೀನ ಕಾಲೇಜುಗಳ ಮೂರನೇ ಸಮಾವೇಶದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಇರುವಂತಹ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು. ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ ಇದರ ಅಧೀನ ಕಾಲೇಜುಗಳ ಉಪನ್ಯಾಸಕರುಗಳಿಗೆ ಒಳ್ಳೆಯ ಅವಕಾಶವಿದೆ. ಅವರುಗಳು ದೇಶದಲ್ಲಿ ಅತ್ಯುತ್ತಮ ಗುಣಮಟ್ಟದ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಮಾಹೆಯಲ್ಲಿ ಶೈಕ್ಷಣಿಕ ಜ್ಞಾನ ಮತ್ತು ಸಂಶೋಧನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬಹುದು. ಈ ಮೂಲಕ ನಿಮ್ಮ ಶೈಕ್ಷಣಿಕ ಅರ್ಹತೆಯನ್ನು ಹೆಚ್ಚಿಸಿಕೊಳ್ಳಿ ಎಂದು ಕರೆ ನೀಡಿದರು. ಅಲ್ಲದೆ ಎ.ಜಿ.ಇ ಅಧೀನ ಕಾಲೇಜುಗಳೊಂದಿಗೆ ಉತ್ತಮ ಸಂಪರ್ಕ ಕಲ್ಪಿಸುವುದು ಮತ್ತು ಮಾಹಿತಿ ಮತ್ತು ಜ್ಞಾನವನ್ನು ವಿನಿಮಯ ಮಾಡಿಕೊಳ್ಳುವ ಮೂಲಕ ಪರಸ್ಪರ ಬೆಳೆಯಬಹುದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,21: ತಾಲೂಕಿನ ಪಡುವರಿ ನಿವಾಸಿ ಹೊಸಾಡು ಸುಬ್ರಾಯ ಶೇರುಗಾರ್ (92) ಅವರು ಶನಿವಾರದಂದು ಮೃತಪಟ್ಟಿದ್ದಾರೆ. ವಯೋಸಹಜವಾಗಿ ಅವರು ಇಂದು ಬೆಳಗ್ಗೆ ನಿಧನರಾದರು. ಬೈಂದೂರು ಮಾಜಿ ಪುರಸಭಾಧ್ಯಕ್ಷರು, ಬೈಂದೂರು ಕಾ೦ಗ್ರೆಸ್ಸಿನ ಪ್ರಮುಖ ನಾಯಕರಾಗಿದ್ದರು. ಸಮಾಜದ ಮತ್ತು ರಾಜಕೀಯ, ವಿವಿಧ ಕ್ಷೇತ್ರದಲ್ಲಿಯೂ ಕಾರ್ಯ ನಿರ್ವಹಿಸಿ ಜನಮನ್ನಣೆ ಪಡೆದಿದ್ದರು. ಸಮಾಜ ಸೇವಕರು ಉತ್ತಮ ವಾಗ್ನಿಗಳಾಗಿದ್ದ ಅವರು ರಾಮಕ್ಷತ್ರಿಯ ಸಮಾಜ ಪ್ರಮುಖ ನಾಯಕಾಗಿದ್ದರು. ಅವರ ಧರ್ಮಪತ್ನಿ ಪಾರ್ವತಿ, ಖ್ಯಾತ ಹೃದಯ ತಜ್ಞರಾದ ಡಾಕ್ಟರ್ ಹೆಚ್. ಪ್ರಭಾಕರ್ ಮಂಗಳೂರು, ಸುಧಾಕರ್, ಪುತ್ರಿಯರಾದ ಪ್ರೇಮ, ಸುಜಾತರ, ಬಂಧುಗಳನ್ನು ಅಗಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಿಧಾನಪರಿಷತ್ ಉಪ ಚುನಾವಣೆ ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆ ಹಾಗೂ ಚುನಾವಣಾ ಆಯೋಗ ನೀಡುವ ಮಾರ್ಗಸೂಚಿಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಧಾನಪರಿಷತ್ ಉಪ ಚುನಾವಣೆಯನ್ನು ನಿಷ್ಪಕ್ಷಪಾತ, ನ್ಯಾಯಸಮ್ಮತವಾಗಿ ನಡೆಸಲು ಚುನಾವಣೆ ಆಯೋಗದ ನಿರ್ದೇಶನದ ಅನ್ವಯ ಕಾರ್ಯಚಟುವಟಿಕೆಗಳನ್ನು ನಡೆಸಿ ಜಿಲ್ಲಾಡಳಿತಕ್ಕೆ ಯಶಸ್ವಿ ಚುನಾವಣೆ ನಡೆಸಲು ಎಲ್ಲ ಪಕ್ಷದವರು ಸಹಕರಿಸಬೇಕೆಂದರು. ಜನಪ್ರತಿನಿಧಿಗಳು ಸ್ಥಳೀಯ ಪ್ರಾಧಿಕಾರಗಳ ಕ್ಷೇತ್ರದ ಮತದಾರರ ಭಾಗವಾಗಿರುವ ಯಾವುದೇ ಸ್ಥಳೀಯ ಪ್ರಾಧಿಕಾರದ ಸದಸ್ಯರನ್ನು, ಯಾವುದೇ ಸಚಿವರು, ಅಧಿಕೃತವಾಗಿ ಸಭೆ, ವೀಡಿಯೋ ಕಾನ್ಫರೆನ್ಸ್ ಕರೆಯುವಂತಿಲ್ಲ. ಸ್ಥಳೀಯ ಸಂಸ್ಥೆಗಳ ವಾಡಿಕೆಯ ಸಭೆಗಳು ಅಗತ್ಯವಿದ್ದಾಗ ಸಂಬಂಧಪಟ್ಟ ಜಿಲ್ಲೆಯ ಜಿಲ್ಲಾ ಚುನಾವಣಾ ಅಧಿಕಾರಿಗಳ ಪೂರ್ವಾನುಮತಿ ಪಡೆದು ನಡೆಸಬಹುದಾಗಿದೆ ಎಂದರು. ಮತದಾರರ ಮೇಲೆ ನೇರವಾಗಿ ಅಥವಾ ಪರೋಕ್ಷವಾಗಿ ಪ್ರಭಾವ ಬೀರುವ ಯಾವುದೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯದ ಪ್ರವೇಶಾತಿಗೆ ಸಾಮಾನ್ಯ ಪದವಿ ಮಟ್ಟದ ಕೋರ್ಸ್, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸಿನ ವಿದ್ಯಾರ್ಥಿಗಳಿಂದ ಸ್ಟೇಟ್ ಹಾಸ್ಟೆಲ್ ಪೋರ್ಟಲ್ ತಂತ್ರಾಂಶದ ವೆಬ್ಸೈಟ್ https://shp.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 5 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕಛೇರಿ ಮಣಿಪಾಲ ದೂ.ಸಂಖ್ಯೆ: 0820-2573596, ಸಹಾಯವಾಣಿ ಸಂಖ್ಯೆ: 8277799990, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ನೆಲ ಮಹಡಿ, ಮೌಲಾನಾ ಅಜಾದ್ ಭವನ, ಪಶು ಚಿಕಿತ್ಸಾಲಯದ ಹತ್ತಿರ ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಪ್ರಕಟಣೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿ ದೆಸೆಯಲ್ಲಿ ಸೇವಾ ಮನೋಭಾವವನ್ನು ಬೆಳೆಸುವ ಮಹತ್ವದ ಸಂಸ್ಥೆ ಎನ್.ಎಸ್.ಎಸ್. ಈ ಘಟಕಗಳ ಮೂಲಕ ನಡೆಯುವ ವಿವಿಧ ಕ್ರಿಯಾ ಚಟುವಟಿಕೆಗಳಲ್ಲಿ ಸ್ವಯಂ ಸೇವಕರು ಸಕ್ರಿಯವಾಗಿ ತೊಡಗಿಸಿಕೊಂಡರೆ ಭವಿಷ್ಯದಲ್ಲಿ ಸತ್ಪçಜೆಗಳಾಗಲು ಸಾಧ್ಯ. ನಾಯಕತ್ವ ಗುಣಗಳೊಂದಿಗೆ ಬದುಕಿನ ಶಿಕ್ಷಣವನ್ನು ವಿದ್ಯಾರ್ಥಿಗಳು ಈ ಮೂಲಕ ಪಡೆದುಕೊಳ್ಳಬೇಕೆಂದು ಎಂದು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಸುಗುಣಾ ಆರ್.ಕೆ. ಹೇಳಿದರು. ಅವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಸಕ್ತ ಶೈಕ್ಷಣಿಕ ವರ್ಷದ ಎನ್.ಎಸ್.ಎಸ್. ಘಟಕ 1 & 2ರ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಕೆ.ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಜೀವನ ಕೌಶಲ್ಯಗಳನ್ನು ರೂಪಿಸಿಕೊಳ್ಳಲು ಎನ್.ಎಸ್.ಎಸ್. ಅತ್ಯುತ್ತಮ ವೇದಿಕೆ ಎಂದರು. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಹಾಗೂ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಾಸ್ತಾವಿಸಿದರು. ಈ ಸಂದರ್ಭ ಎನ್.ಎಸ್.ಎಸ್. ಸ್ವಯಂ ಸೇವಕ ಪ್ರತಿನಿಧಿಗಳಾದ ನಿತೇಶ್ ಶೇಟ್, ಆಕಾಶ್ ಬಿ.…
