ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆಯ ವತಿಯಿಂದ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪಂಡಿತ ಪ್ರಶಸ್ತಿ ಬಹುಮಾನ ಯೋಜನೆಯಡಿ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ವಿನೂತನ/ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಆಸಕ್ತ ರೈತರು ಹಾಗೂ ರೈತ ಮಹಿಳೆಯರು ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್‌ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಎಫ್.ಐ.ಡಿ ಬಳಸಿಕೊಂಡು ಸೆಪ್ಟಂಬರ್ 30 ರ ಒಳಗಾಗಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಗುರುಕುಲ ಪದವಿ ಪೂರ್ವ ಕಾಲೇಜು ವಕ್ವಾಡಿ ಕೋಟೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ – ಬಾಲಕಿಯರ ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ ಪಡೆದಿದೆ. ವಿದ್ಯಾರ್ಥಿಗಳೊಂದಿಗೆ ಕಾಲೇಜು ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ ಉಪಸ್ಥಿತರಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತುಂತುರು ನೀರಾವರಿ ಘಟಕಗಳು ಲಭ್ಯವಿದ್ದು, ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತರು ಜಮೀನಿನ ಆರ್.ಟಿ.ಸಿ, ಆಧಾರ್ ಪ್ರತಿ, 2 ಪಾಸ್ ಪೋರ್ಟ್ ಸೈಜಿನ ಭಾವಚಿತ್ರ, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ನೀರಿನ ಮೂಲ ದೃಢೀಕರಣ ಪತ್ರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಇದ್ದಲ್ಲಿ ಪ್ರಮಾಣ ಪತ್ರ ಹಾಗೂ ಛಾಪಾ ಕಾಗದಗಳೊಂದಿಗೆ, ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಸೌಲಭ್ಯದ ಪ್ರಯೋಜನ ಪಡೆಯಲು ರೈತರು ಕಡ್ಡಾಯವಾಗಿ ಪ್ರೂಟ್ಸ್ ಐಡಿಯನ್ನು ಹೊಂದಿರಬೇಕು. ರೈತರು ಈಗಾಗಲೇ ಪ್ರೂಟ್ಸ್ ಐಡಿಯನ್ನು ಹೊಂದಿದ್ದಲ್ಲಿ ಅಥವಾ ಹೊಂದಿರದೆ ಇದ್ದಲ್ಲಿ ತಮ್ಮ ಎಲ್ಲಾ ಆರ್.ಟಿ.ಸಿಗಳನ್ನು ಪ್ರೂಟ್ಸ್ ಐಡಿಗೆ ಜೋಡಣೆ ಮಾಡಿಕೊಳ್ಳಬೇಕು ಎಂದು ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸರಕಾರ ಲಿಂಗತ್ವ ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಅವರುಗಳಿಗೆ ಈ ಯೋಜನೆಗಳ ಬಗ್ಗೆ ಅರಿವು ಮೂಡಿಸಿ ಅವರುಗಳನ್ನು ಇದರ ಫಲಾನುಭವಿಗಳನ್ನಾಗಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಲಿಂಗತ್ವ ಅಲ್ಪಸಂಖ್ಯಾತರ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಇರುವ ಲಿಂಗತ್ವ ಅಲ್ಪಸಂಖ್ಯಾತರು ಸರಕಾರ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಲಾಭ ಪಡೆಯುವುದರೊಂದಿಗೆ ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಿ ಸ್ವಾವಲಂಬಿಗಳಾಗಬೇಕು ಎಂದರು. ಲಿಂಗತ್ವ ಅಲ್ಪಸಂಖ್ಯಾತರು ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಪುನರ್ವಸತಿ ಯೋಜನೆಯಡಿ ಸ್ವಯಂ ಉದ್ಯೋಗ ಕೈಗೊಳ್ಳಲು ಪ್ರೋತ್ಸಾಹಧನ ನೀಡುತ್ತಿದೆ. ಸಮುದಾಯ ಆಧಾರಿತ ಸಂಸ್ಥೆಯಲ್ಲಿ ನೋಂದಣಿ ಆಗಿರುವವರು ಈ ಯೋಜನೆ ಲಾಭ ಪಡೆಯಬಹುದಾಗಿದೆ. ಪ್ರಸ್ತುತ ಸಾಲಿನಲ್ಲಿ 15 ಜನರಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಆದರೆ ಒಬ್ಬರೇ ಅರ್ಜಿ ಸಲಿಸಿದ್ದು, ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ( ಪದವಿ ಪೂರ್ವ ವಿಭಾಗ )ಹಾಗೂ ಎಸ್.ಎನ್.ವಿ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲಕ – ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಮೂವರು ವಿದ್ಯಾರ್ಥಿಗಳು ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದು, ಹಾಗೂ 4 ವಿದ್ಯಾರ್ಥಿಗಳು ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿಯ ಪದಕಗಳನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಮೂವರು ವಿದ್ಯಾರ್ಥಿಗಳಾದ ಸಾಯಿ ವಿಘ್ನೇಶ್ (82+kg) ವಿಭಾಗದಲ್ಲಿ ಪ್ರಥಮ ಸ್ಥಾನ, ಅಶ್ಮಿತ್ ಸಿ.ಪೂಜಾರಿ (-45kg) ಪ್ರಥಮ ಸ್ಥಾನ, ಅಮಿತ್ ಕುಮಾರ್ (-54kg) ಪ್ರಥಮ ಸ್ಥಾನ ಹಾಗೂ ನಾಲ್ವರು ವಿದ್ಯಾರ್ಥಿಗಳಾದ ರನಿತಾ(-36 kg), ರಾಹುಲ್ ಜಿ, (-58kg)ಅರ್ಜುನ್ ಎಸ್. ಶೆಟ್ಟಿ, (-50 kg) ನಿಖಿಲ್ ಕಾಂಚನ್. (72+kg).ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯುವಕರ ಮಾನಸಿಕ ಸ್ಥಿರತೆ ಗಟ್ಟಿಗೊಳ್ಳ ಬೇಕಾದರೆ ಶಿಕ್ಷಣದ ಜೊತೆಗೆ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುವ ಕ್ರೀಡೆಯೂ ಅತ್ಯವಶ್ಯಕ ಎಂಬುದನ್ನು ಬಾಂಡ್ಯ ಎಜುಕೇಷನಲ್ ಟ್ರಸ್ಟ್ಇದರ ಜಂಟಿ ಆಡಳಿತ ನಿರ್ದೇಶಕರು ಕೆ.ಸುಭಾಶ್ಚಂದ್ರ ಶೆಟ್ಟಿ ತಿಳಿಸಿದರು. ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜು ಹಾಗೂ ಗುರುಕುಲ ಪದವಿಪೂರ್ವ ಕಾಲೇಜು ವಕ್ವಾಡಿ, ಕೋಟೇಶ್ವರ ಇದರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರದಂದು ನಡೆದ ಕುಂದಾಪುರ ತಾಲ್ಲೂಕು ಮಟ್ಟದ ಪುಟ್ಬಾಲ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ, ಅವರು ಆಟಗಳಿಗೆ ಮೊದಲು ಕ್ರೀಡಾ ಮನೋಭಾವದ ಅವಶ್ಯಕತೆ ಇದೆ. ಮನಸ್ಸಿನ ಶಾಂತಿಗಾಗಿ ಕ್ರೀಡೆ ಬೇಕು ಕೇವಲ ಬಹುಮಾನ ಗೆಲ್ಲಲು ಅಲ್ಲ ಎಂಬುದಾಗಿ ತಿಳಿಸಿ ಆಗಮಿಸಿದ ಕ್ರೀಡಾ ಪಟುಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬಾಂಡ್ಯ ಎಜುಕೇಷನಲ್ ಟ್ರಸ್ಟ ಇದರ ಜಂಟಿ ಆಡಳಿತ ನಿರ್ದೇಶಕಿ ಆಗಿರುವ ಅನುಪಮಾ ಎಸ್. ಶೆಟ್ಟಿ, ಉಡುಪಿ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ ಉಡುಪಿ ಜಿಲ್ಲೆ ಇದರ ಗೌರವಾಧ್ಯಕ್ಷರು ಜೀವನ್ ಕುಮಾರ್ ಶೆಟ್ಟಿ, ಹಾಗೂ ಕಾರ್ಯದರ್ಶಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರಸಿದ್ಧ ಯಾತ್ರಾಸ್ಥಳ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ 9 ಜನರನ್ನು ಒಳಗೊಂಡ ವ್ಯವಸ್ಥಾಪನಾ ಸಮಿತಿ ರಚಿಸಿ ಶುಕ್ರವಾರ ಆದೇಶ ಹೊರಡಿಸಲಾಗಿದೆ. ವ್ಯವಸ್ಥಾಪನಾ ಸಮಿತಿಯ ಸದಸ್ಯರನ್ನಾಗಿ ಮಹಾಲಿಂಗ ನಾಯ್ಕ್ ಮೆಟ್ಟಿನಹೊಳೆ ಕಾಲ್ತೋಡು, ಧನಾಕ್ಷಿ ವಿಶ್ವನಾಥ ಯಡ್ತರೆ ಬೈಂದೂರು, ಸುಧಾ ಕೆ ಪಡುವರಿ ಬೈಂದೂರು, ಕೆ. ಬಾಬು ಶೆಟ್ಟಿ ತಗ್ಗರ್ಸೆ ಬೈಂದೂರು, ಸುರೇಂದ್ರ ಶೆಟ್ಟಿ ಕೋಟೇಶ್ವರ ಕುಂದಾಪುರ, ಅಭಿಲಾಷ್ ಪಿ.ವಿ ಮಂಗಳೂರು, ಯು. ರಾಜೇಶ್ ಕಾರಂತ್ ಉಪ್ಪಿನಕುದ್ರು ಕುಂದಾಪುರ, ರಘುರಾಮ ದೇವಾಡಿಗ ಆಲೂರು ಕುಂದಾಪುರ ಅವರನ್ನು ಆಯ್ಕೆ ಮಾಡಲಾಗಿದೆ. ದೇವಳದ ಕಾರ್ಯನಿರ್ವಾಹಕ ಅಧಿಕಾರಿಯನ್ನು ವ್ಯವಸ್ಥಾಪನಾ ಸಮಿತಿಯ ಪದನಿಮಿತ್ತ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಸದಸ್ಯರನ್ನು ಓರ್ವರನ್ನು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸುವಂತೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಾರ್ಯದರ್ಶಿ ಹಾಗೂ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಆಯುಕ್ತ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನ 2023-24ನೇ ಸಾಲಿನ ಮಹಾಸಭೆಯು ಇಲ್ಲಿನ ಶ್ರೀ ರಾಮ ಮಂದಿರದಲ್ಲಿ ಶುಕ್ರವಾರ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಆನಂದ ಬಿಲ್ಲವ ಮಾತನಾಡಿ, ವರದಿ ವರ್ಷದಲ್ಲಿ ಒಟ್ಟು 13291 ಸದಸ್ಯರೊಂದಿಗೆ 1.72 ಕೋಟಿ ರೂ. ಪಾಲು ಬಂಡವಾಳವನ್ನು ಹೊಂದಿದೆ. ವರ್ಷ ಅಂತ್ಯಕ್ಕೆ 37.04 ಕೋಟಿಗೂ ಮಿಕ್ಕಿ ಠೇವಣಿಯನ್ನು ಹೊಂದಿದ್ದು, ಹೊರಬಾಕಿ ಸಾಲ 1.53 ಕೋಟಿ ರೂ. ಇದೆ. 19.12 ಕೋಟಿ ರೂ.ಗಳನ್ನು ವಿವಿಧ ಸಂಘ/ಬ್ಯಾಂಕುಗಳಲ್ಲಿ ಹೂಡಿಕೆ ಮಾಡಲಾಗಿದೆ. ವರ್ಷಾಂತ್ಯಕ್ಕೆ ಸಂಘವು 42.65 ಲಕ್ಷ ರೂ. ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.10 ಪಾಲು ಮುನಾಫೆ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಸಂಘದ ವ್ಯಾಪ್ತಿಯ ಶಾಲೆಗಳಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ಸಂಘದ ನಿರ್ದೇಶಕರಾದ ಶ್ರೀನಿವಾಸ ಜತ್ತನ್ ಪೂಜಾರಿ, ಹರೀಶ ಮೇಸ್ತ, ಕೆ.ಮಾಧವ ಖಾರ್ವಿ, ಜಿ.ಗೋಪಾಲ ನಾಯ್ಕ್, ಪ್ರೇಮಾ ಪೂಜಾರಿ, ಯಮುನಾ, ಚಂದ್ರಮತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಂಪಾರಿನ ಹೋಟೆಲ್ ಒಂದಕ್ಕೆ ಬಂದಿದ್ದ ಆರೋಪಿಗಳು ಕ್ಯಾಶಿಯರ್, ಸಪ್ಲಾಯರ್‌ಗಳಿಗೆ ಹಲ್ಲೆ ಮಾಡಿದ ಘಟನೆ ನಡೆದಿದೆ. ಅಜಯ್ ಅವರು ರಾತ್ರಿ ಹೋಟೆಲ್ಲಿನ ಕ್ಯಾಶಿಯರ್ ಆಗಿರುವ ಸಹೋದರ ಸುಜಯ್ ಅವರನ್ನು ಮನೆಗೆ ಕರೆದುಕೊಂಡು ಹೋಗಲು ಬಂದಿದ್ದರು. ಆರೋಪಿಗಳಾದ ಅಭಿ, ಹರೀಶ್, ಪ್ರಜ್ವಲ್, ಸ್ವರಾಜ್ ಮತ್ತು ಇನ್ನೋರ್ವ ವ್ಯಕ್ತಿ ಅಜಯ್ ಮತ್ತು ಕ್ಯಾಶಿಯರ್ ಸುಜಯ್ ಅವರಿಗೆ ಹಲ್ಲೆ ಮಾಡಿದ್ದರು. ಆರೋಪಿ ಸ್ವರಾಜ್ ಸೋಡಾ ಬಾಟಲಿಯಿಂದ ಹಲ್ಲೆ ನಡೆಸಿದ್ದಾರೆ. ಮತ್ತೋರ್ವ ಕ್ಯಾಶಿಯರ್ ಸೀತಾರಾಮ ಮತ್ತು ಸಪ್ಲಾಯರ್‌ಗಳು ಹೆಚ್ಚಿನ ಗಲಾಟೆಯನ್ನು ತಪ್ಪಿಸಲು ಮುಂದಾದರು. ಅನಂತರ ಆರೋಪಿಗಳು ಬೆದರಿಕೆಯನ್ನೂ ಹಾಕಿ ಹೋಗಿದ್ದಾರೆ ಎಂದು ಕ್ಯಾಶಿಯರ್ ಸುಜಯ್ ಸಹೋದರ ಅಜಯ್ ಅವರು ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮಹಾಸಭೆಯು ನಾವುಂದದ ಶ್ರೀ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ಇಂದು ನಡೆಯಿತು. ಮಹಾಸಭೆಯ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಮಾತನಾಡಿ, ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘವು ಹಿಂದಿನ ಸಾಲಿನಲ್ಲಿ ರೂ 324.91 ಕೋಟಿಗೂ ಮಿಕ್ಕಿದ ವ್ಯವಹಾರ ನಡೆಸಿ, ರೂ. 1.55 ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇ. 14 ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ. ಸಂಘವು ಹಿಂದಿನ ಸಾಲಿನಲ್ಲಿ ರೂ 66.64 ಕೋಟಿ ಠೇವಣಿ ಹೊಂದಿ, ಸದಸ್ಯರಿಗೆ ರೂ. 58.86 ಕೋಟಿ ಸಾಲ ನೀಡಿದೆ. ಅದರಲ್ಲಿ ರೂ. 10 ಕೋಟಿಗೂ ಮಿಕ್ಕಿ ಕೃಷಿ ಸಾಲವನ್ನು ಸಂಘವು ಸದಸ್ಯರಿಗೆ ನೀಡಲಾಗಿದೆ. ವಿವಿಧ ನಿಧಿಗಳಲ್ಲಿ 5.33 ಕೋಟಿ ರೂ., ಹೂಡಿಕೆಯಲ್ಲಿ 29.52ಕೋಟಿ ರೂ. ಸಂಚಯಿಸಲಾಗಿದೆ ಎಂದರು. ಸಂಸ್ಥೆಯ ನಿರಂತರವಾಗಿ ಪ್ರಗತಿಯ ಪಥದಲ್ಲಿದ್ದು ಸದಸ್ಯರಿಗೂ ಬಡ್ಡಿಯಲ್ಲಿ ಕಡಿತ, ಕೃಷಿ ಹಾಗೂ ಹೈನುಗಾರಿಕೆಗೆ ಸಾಲ ನೀಡಿ ಪ್ರೋತ್ಸಾಹ ನೀಡುತ್ತಾ…
