Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೇಬಿಸ್ ದಿನಾಚರಣೆಯ ಅಂಗವಾಗಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಪಶು ವೈದ್ಯಕೀಯ ಆಸ್ಪತ್ರೆ ಹೆಮ್ಮಾಡಿ ಅವರು ರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ| ಅರುಣ್‌ ಪಶು ವೈದ್ಯಾಧಿಕಾರಿಗಳು ಹೆಮ್ಮಾಡಿ, ರೇಬಿಸ್ ರೋಗದ ಮನ್ನೆಚ್ಚೆರಿಕೆಯ ಕ್ರಮಗಳ ಕುರಿತಾಗಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಇಲಾಖಾ ಸಿಬ್ಬಂದಿಗಳು, ವಿದ್ಯಾರ್ಥಿಗಳು ಬೋಧಕ/ಬೋಧಕೇತರ  ವೃಂದದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಎಸ್. ಎನ್. ವಿ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲಕ – ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ  ತರುಣ್  (50kg) ವಿಭಾಗದಲ್ಲಿ  ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಕೆ.ಶ್ರೀನಿತಾ. ಎಸ್. ಕಾಮತ್ (56kg) , ಅಕ್ಷಯ್ (82kg ),ಸಾವಿಯೋ (62 kg)  ವಿಭಾಗದಲ್ಲಿ ಬೆಳ್ಳಿ ಪದಕ  ಪಡೆದು ಅಪೂರ್ವ ಸಾಧನೆ ಮೆರೆದಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ದೈಹಿಕ ಶಿಕ್ಷಣ ಉಪನ್ಯಾಸಕ ಕೃಷ್ಣ ಉಪಸ್ಥಿತರಿದ್ದಾರೆ. ವಿದ್ಯಾರ್ಥಿಗಳ ಯಶಸ್ಸಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಮಹಿಳಾ ಕ್ಷೇಮಪಾಲನಾ ಸಮಿತಿ ಹಾಗೂ ಆಂತರಿಕ ಸಮಿತಿ ಆಶ್ರಯದಲ್ಲಿ ಕಾಲೇಜಿನ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ’ಮಹಿಳೆಯರ ಯೋಗ ಕ್ಷೇಮದ ಅನ್ವೇಷಣೆ’ ವಿಷಯದ  ವಿಶೇಷ ಉಪನ್ಯಾಸ  ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಆಳ್ವಾಸ್ ಸೆಂಟರ್ ಫಾರ್ ವೆಲ್‌ನೆಸ್ ಟ್ರೈನಿಂಗ್‌ನ ನಿರ್ದೇಶಕಿ ಡಾ. ದೀಪ ಕೊಠಾರಿ ಮಾತನಾಡಿ, ವಿದ್ಯಾರ್ಥಿಗಳಿಗೆ ಹಲವು ಮಹಿಳಾ ಸಾಧಕರನ್ನು ಪರಿಚಯಿಸುತ್ತಾ, ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ ಎಂದು ಹುರಿದುಂಬಿಸಿದರು. ವಿದ್ಯಾರ್ಥಿಗಳು ಹೆಚ್ಚು ಸಕರಾತ್ಮಕ ವಿಷಯಗಳನ್ನು ಹೇಗೆ ವಿಸ್ತರಿಸಿಕೊಳ್ಳಬೇಕು, ತಮ್ಮಲ್ಲಿರುವ ಭಾವನೆಗಳನ್ನು ಒಪ್ಪಿಕೊಂಡು ಅದರೊಂದಿಗೆ ಬದುಕುವ ಮನೋಸ್ಥೈರ್ಯ ಹೇಗೆ ಬೆಳೆಸಿಕೊಳ್ಳಬೇಕು ಎಂದು ವಿವರಿಸಿದರು. ಏಕಾಗ್ರತೆ ಮತ್ತು ಸ್ಥಿರತೆಯನ್ನು ಹೇಗೆ ಉಳಿಸಿಕೊಳ್ಳುವುದು ಎಂಬುದರ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ಜೀವನದಲ್ಲಿ ಕೃತಜ್ಞತೆ ಮತ್ತು ನಿರಂತರ ಕಲಿಕೆ ಎಷ್ಟು ಮುಖ್ಯ ಎಂದು ಉದಾಹರಣೆ ಸಹಿತ ಮಕ್ಕಳಿಗೆ ಮನವರಿಗೆ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲೆ ಝಾನ್ಸಿ ಪಿ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮಗಳ ವತಿಯಿಂದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ, ಭೂ ಒಡೆತನ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಯ ಸೌಲಭ್ಯಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಆಯಾ ನಿಗಮದ ವ್ಯಾಪ್ತಿಯಲ್ಲಿ ಬರುವ ಅರ್ಹ ಪರಿಶಿಷ್ಟ ಜಾತಿಯ ಫಲಾಪೇಕ್ಷಿಗಳು ವೆಬ್‌ಸೈಟ್ https://sevasindhu.karnataka.gov.in ನಲ್ಲಿ ಗ್ರಾಮ ಒನ್, ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಮೂಳಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.                       ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ವಾರ್ಷಿಕ ಚಟುಟಿಕೆಗಳ ಉದ್ಘಾಟನ ಕಾರ್ಯಕ್ರಮ ಗುರುವಾರದಂದು ಕಾಲೇಜಿನ ಸಭಾಂಗಣದಲ್ಲಿ ಜರಗಿತು. ಇಂಡಿಯನ್ ರೆಡ್‌ಕ್ರಾಸ್ ಘಟಕದ ಸಭಾಪತಿಗಳಾದ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ರಾಷ್ಟಿçÃಯ ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಗಳ ಕಾರ್ಯವೈಖರಿ ಕುರಿತು ಸಂಕ್ಷೀಪ್ತವಾಗಿ ವಿವರಿಸಿ, ಕಾಲೇಜಿನ ರೆಡ್‌ಕ್ರಾಸ್ ಘಟಕ ರಾಜ್ಯ ಹಾಗೂ ರಾಷ್ಟçಮಟ್ಟದಲ್ಲಿ ಗುರುತಿಸುವಂತಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಯುವ ರೆಡ್‌ಕ್ರಾಸ್ ಸಂಯೋಜನಾಧಿಕಾರಿಯಾದ ಸತ್ಯನಾರಾಯಣ್ ಪುರಾಣಿಕ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿದಿ ಬೋಧಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಸಮಾಜದ ಶ್ರೇಯೋಭಿವೃದ್ದಿಯಲ್ಲಿ ಯುವ ರೆಡ್‌ಕ್ರಾಸ್ ಘಟಕ ಬೇರೆ ಬೇರೆ ಮಜಲುಗಳಲ್ಲಿ ಸೇವಾ ಭಾವನೆಯಿಂದ ಪಾಲ್ಗೊಳ್ಳಬೇಕು ಎಂದು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಕೋಶಾಧಿಕಾರಿಯಾದ ಶಿವರಾಮ್ ಶೆಟ್ಟಿ ಉಪಸ್ಥಿತರಿದ್ದರು. ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ಸಂಯೋಜಕರಾದ ಯೋಗೀಶ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೋಟೇಶ್ವರದ ದೇವಸ್ಥಾನ ಕೆರೆಗೆ ಬಿದ್ದು ಎಂಬಿಬಿಎಸ್ ಪದವೀಧರ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಗುರುವಾರ ನಡೆದಿದೆ. ಹಂಗಳೂರಿನ ಗೌರೀಶ್‌ ಬಿ.ಆರ್‌. (25) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಎಂ.ಬಿ.ಬಿ.ಎಸ್. ಮುಗಿಸಿದ ಬಳಿಕ ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಕ್ಟೀಸ್ ಮಾಡುತ್ತಿದ್ದ. ಬಳಿಕ ಉನ್ನತ ವ್ಯಾಸಂಗ ಎಂ.ಎಸ್. ಮಾಡಲು ಪರೀಕ್ಷೆ ಬರೆದಿದ್ದು, ಕಳೆದ ಕೆಲವು ದಿನಗಳಿಂದ ಗೌರೀಶ್ ಖಿನ್ನನಾಗಿದ್ದ ಎನ್ನಲಾಗಿದೆ. ಬುಧವಾರ ಸಂಜೆ ಈಜುಕೊಳದಲ್ಲಿ ಈಜಲು ಹೋಗುವುದಾಗಿ ಮನೆಯಿಂದ ತೆರಳಿದ್ದ ಅವರು ಬಳಿಕ ನಾಪತ್ತೆಯಾಗಿದ್ದರು. ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಕೋಟೇಶ್ವರ ದೇವಸ್ಥಾನದ ಕೆರೆ ಸಮೀಪ ಬುಧವಾರ ತಡರಾತ್ರಿ ಬ್ಯಾಗ್‌, ಮೊಬೈಲ್‌ ಫೋನ್‌, ಚಪ್ಪಲಿ ಕಂಡುಬಂದಿತ್ತು. ಅಂದು ಸಂಜೆ 5.30ರಿಂದ ರಾತ್ರಿ 11 ಗಂಟೆಯ ನಡುವೆ ಕೆರೆಗೆ ಕಾಲುಜಾರಿ ಬಿದ್ದಿರಬಹುದು ಎಂದು ಕುಟುಂಬಿಕರು ಶಂಕಿಸಿದ್ದಾರೆ. ಗುರುವಾರ ಬೆಳಗ್ಗೆ ಕೆರೆಯಲ್ಲಿ ಹುಡುಕಿದಾಗ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ. ಈ ಬಗ್ಗೆ ಮೃತ ಯುವಕನ ಸಹೋದರ ವಿಘ್ನೇಶ್‌ ಬಿ.ಆರ್‌. ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಪಠ್ಯದೊಂದಿಗೆ ಸಾಹಿತ್ಯ ಕೃತಿಗಳ ಓದು ವಿದ್ಯಾರ್ಥಿಗಳನ್ನು ಭೌದ್ದಿಕ ಸಂಪನ್ನರನ್ನಾಗಿಸುತ್ತದೆ. ನಿರಂತರ ಅಧ್ಯಯನ ವ್ಯಕ್ತಿಯನ್ನು ಚಿಂತನಶೀಲರನ್ನಾಗಿಸುತ್ತದೆ ಎಂದು ಸುರಭಿ ರಿ. ಬೈಂದೂರು ಅಧ್ಯಕ್ಷ ಆನಂದ ಮದ್ದೋಡಿ ಹೇಳಿದರು. ಅವರು ಬುಧವಾರ ಸರಕಾರಿ ಪ್ರಥಮದರ್ಜೆ ಕಾಲೇಜು ಬೈಂದೂರು ಕನ್ನಡ ವಿಭಾಗದ ನೇತೃತ್ವದಲ್ಲಿ ಸುರಭಿ ರಿ. ಬೈಂದೂರು ಸಹಯೋಗದೊಂದಿಗೆ ಕಾಲೇಜಿನಲ್ಲಿ ಆಯೋಜಿಸಲಾದ ಕನ್ನಡ ಸಾಹಿತ್ಯ ವೇದಿಕೆ ಹಾಗೂ ಸಾಹಿತ್ಯ ಬಳಗ ಮತ್ತು ಕಥಾ ಸಿಂಚನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ಶೆಟ್ಟಿ ಅವರು ಮಾತನಾಡಿ, ಪ್ರತಿಯೊಬ್ಬರಿಗೂ ಒಂದಿಲ್ಲೊಂದು ಸಂದರ್ಭದಲ್ಲಿ ಉತ್ತಮ ಅವಕಾಶಗಳು ಎದುರಾಗುತ್ತವೆ. ಅದನ್ನು ಸದುಪಯೋಗಪಡಿಸಿಕೊಂಡಲ್ಲಿ ಆಯಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ. ನಮ್ಮೆದುರಿನ ಸಾಧಕರನ್ನು ಸ್ಪೂರ್ತಿಯಾಗಿಸಿಕೊಂಡು ಗುರಿಸೇರಲು ವಿದ್ಯಾರ್ಥಿಗಳು ನಿರಂತರವಾಗಿ ಶ್ರಮಿಸಬೇಕಿದೆ ಎಂದರು. ಹೆಸ್ಕತ್ತೂರು ಸರಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಹಾಗೂ ಸುರಭಿ ಉಪಾಧ್ಯಕ್ಷ ಅಬ್ದುಲ್‌ ರವೂಫ್‌ ಅವರು ಲೇಖನ ಸತೀಶ್‌ ಚಪ್ಪರಿಕೆ ಅವರ ವರ್ಜಿನ್‌ ಮೊಹಿತೋ ಕಥಾಸಂಕಲನದಿಂದ ಆಯ್ದ ಕಥೆಯನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ’ಪುಟವಿಟ್ಟ ಚಿನ್ನದಂತಿರುವ ಆಳ್ವಾಸ್ ಸಂಸ್ಥೆಯ ಮಾಹಿತಿಯನ್ನು ಹೊತ್ತು ತರುವ ’ಆಳ್ವಾಸ್ ಹೊಂಗಿರಣವು ಪ್ರಕಾಶಮಾನವಾಗಲಿ’ ಎಂದು ಉಜಿರೆಯ ಎಸ್‌ಡಿಎಂ ಕಾಲೇಜು (ಸ್ವಾಯತ್ತ) ಪ್ರಾಂಶುಪಾಲ ಡಾ.ಬಿ.ಎ.ಕುಮಾರಹೆಗ್ಡೆ  ಹೇಳಿದರು. ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಗುರುವಾರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಯೋಜಿಸಿದ ಆಳ್ವಾಸ್ ಪದವಿ ಪೂರ್ವ ಕಾಲೇಜು ಹಾಗೂ ಶಾಲೆಗಳ ತ್ರೈಮಾಸಿಕ ಸಂಚಿಕೆ ’ಆಳ್ವಾಸ್ ಹೊಂಗಿರಣ’ವನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಮೂರು ದಶಕಗಳಿಗೂ ಅಧಿಕ ಯಶೋಗಾಥೆ ಹೊಂದಿದ್ದು, ಇಲ್ಲಿನ ಮಾಹಿತಿಯನ್ನು ನೀಡುವ ಪತ್ರಿಕೆಯನ್ನು ನಾನು ಅತ್ಯಂತ ಸಂತಸದಿಂದ ಬಿಡುಗಡೆ ಮಾಡುತ್ತಿದ್ದೇನೆ ಎಂದರು. ಹಾಲನ್ನು ’ಕ್ಷೀರ’ ಎನ್ನುವುದು ಉತ್ಪ್ರೇಕ್ಷೆಯಲ್ಲ. ಅಂತೆಯೇ ಆಳ್ವಾಸ್ ಅನ್ನು ನೀವು ಎಷ್ಟು ಬಣ್ಣಿಸಿದರೂ, ಅದು ವಿಶೇಷವಲ್ಲ. ಆಳ್ವಾಸ್ ’ಕ್ಷೀರ ಸಾಗರ’. ಆಳ್ವಾಸ್ ಆವರಣವು ನಮ್ಮೆಲ್ಲರಿಗೂ ಎರಡನೇ ಮನೆ. ಈ ಭಾವನೆ ಮೂಡಿಸಿದ ಡಾ.ಎಂ. ಮೋಹನ ಆಳ್ವರು, ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದಂತೆ ’ಮಹಾನ್ ಆಳ್ವರು’ ಎಂದು ಸಂತಸ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಎಸ್.ಎನ್.ವಿ. ಪದವಿಪೂರ್ವ ಕಾಲೇಜು, ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲಕ ಬಾಲಕಿಯರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕರಾಟೆ ಪಂದ್ಯಾಟದ  52 ಕೆಜಿ ವಿಭಾಗದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮಧುರ ಪ್ರಥಮ ಸ್ಥಾನವನ್ನು ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಈಕೆ  ಸುರೇಶ್ ಎಂ. ತಾಂಡೇಲ ಮತ್ತು ಗಂಗೊಳ್ಳಿಯ ರೋಟರಿ ಕ್ಲಬ್ ಅಧ್ಯಕ್ಷೆ ಚಂದ್ರಕಲಾ ಎಸ್‌. ತಾಂಡೇಲ ದಂಪತಿ ಅವರ ಪುತ್ರಿ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರೋ ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ ಭವನದಲ್ಲಿ ನಡೆದ  ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಸ್ಪರ್ಧೆಯ ಕ್ಲಾಸಿಕ್ ಮತ್ತು ಇಕ್ಯುಪ್ಡ್ 69 ಕೆಜಿ ಸಬ್ ಜೂನಿಯರ್ ವಿಭಾಗದಲ್ಲಿ ಗಂಗೊಳ್ಳಿಯ ವೈಷ್ಣವಿ ಖಾರ್ವಿ ಅವರು ಎರಡೂ ವಿಭಾಗಗಳಲ್ಲಿ ದ್ವಿತೀಯ ಸ್ಥಾನವನ್ನು ಗಳಿಸುವುದರ ಮೂಲಕ  ಬೆಳ್ಳಿಯ ಪದಕಗಳನ್ನು ಗಳಿಸಿರುತ್ತಾರೆ.    ಈಕೆ ಕುಂದಾಪುರದ ನ್ಯೂ ಹರ್ಕ್ಯುಲೆಸ್ ಜಿಮ್ ಹಾಗೂ ಕಿಂಗ್ ಫಿಷರ್ ಸ್ಪೋರ್ಟ್ಸ್ ಕ್ಲಬ್‌ ಈ ಸಂಸ್ಥೆಯ ಸದಸ್ಯರಾಗಿದ್ದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ  ಪಿಯುಸಿಯ ವಾಣಿಜ್ಯಶಾಸ್ತ್ರದ ವಿದ್ಯಾರ್ಥಿನಿ ಆಗಿದ್ದಾರೆ. ಅಂತರಾಷ್ಟ್ರೀಯ ಪವರ್ ಲಿಫ್ತರ್ ಸತೀಶ್ ಖಾರ್ವಿ ಇವರು ತರಬೇತಿ ನೀಡಿರುತ್ತಾರೆ.

Read More