ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೊಟೇಶ್ವರದ ಮಹತೋಭಾರ ಶ್ರೀ ಕೋಟಿಲಿಂಗೇಶ್ವರ ದೇಗುಲಕ್ಕೆ ಭಕ್ತರು ಹಾಗೂ ದಾನಿಗಳು ನೀಡಿದ 125ಕೆ.ಜಿ ತೂಕದ ಬೆಳ್ಳಿಯಿಂದ 1.25 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ನೂತನ ರಜತ ರಥವನ್ನು ಭವ್ಯ ಪುರಮೆರವಣಿಗೆಯೊಂದಿಗೆ ಭಾನುವಾರ ದೇಗುಲಕ್ಕೆ ಕೊಂಡೊಯ್ಯಲಾಯಿತು. ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಳದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ರಜತ ರಥದ ಮೆರವಣಿಗೆಗೆ ಚಾಲನೆ ನೀಡಲಾಯಿತು. ಕುಂಭಾಶಿ, ಗೋಪಾಡಿ, ಬೀಜಾಡಿ, ಕೋಟೇಶ್ವರ, ಅಂಕದಕಟ್ಟೆ ಮೂಲಕ ದೇಗುಲಕ್ಕೆ ರಥವನ್ನು ಕೊಂಡೊಯ್ಯಲಾಯಿತು. ವಿವಿಧ ಭಜನಾ ತಂಡಗಳಿಂದ ಕುಣಿತ ಭಜನೆ, ತಟ್ಟಿರಾಯ, ಕೀಲು ಕುದುರೆ, ಟ್ಯಾಬ್ಲೊ, ಚಂಡೆ ವಾದನ ಸಹಿತ ಭವ್ಯ ಮೆರವಣಿಗೆಯಲ್ಲಿ ದೇಗುಲಕ್ಕೆ ಸಾಗಿಸಿ ಪೂಜೆ ಸಲ್ಲಿಸಲಾಯಿತು. ಸೆ.16ರ ರಾತ್ರಿ ರಜತರಥ ಸಮರ್ಪಣೆ ನಡೆಯಿಲಿದೆ. ದೇವಾಲಯದ ಪ್ರಧಾನ ತಂತ್ರಿ ಪ್ರಸನ್ನ ಕುಮಾರ್ ಐತಾಳ್ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ನಡೆಯಿತು. ಮೆರವಣಿಗೆಯಲ್ಲಿ ನಿಕಟಪೂರ್ವ ವ್ಯವಸ್ಥಾಪನಾ ಸಮಿತಿ, ಜೀರ್ಣೋದ್ಧಾರ ಸಮಿತಿ, ಗ್ರಾಮಸ್ಥರು ಪಾಲ್ಗೊಂಡಿದ್ದರು. 1.25 ಕೋಟಿ ವೆಚ್ಚದ ರಜತ ರಥವನ್ನು ಭಕ್ತರು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ರೋಟರಿ ಕ್ಲಬ್ ಬೈಂದೂರು ವತಿಯಿಂದ ರೋಟರಿ ಸಮುದಾಯ ಭವನದಲ್ಲಿ ಭಾನುವಾರ ಎಂಜಿನಿಯರ್ಸ್ ಡೇ ಅಂಗವಾಗಿ ಜರುಗಿದ ಕಾರ್ಯಕ್ರಮದಲ್ಲಿ ಎಂಜಿನಿಯರ್, ಬೈಂದೂರು ಎಸ್.ಡಿ. ಅಸೋಸಿಯೇಟ್ಸ್‌ನ ಚಂದ್ರಶೇಖರ ಮೇಸ್ತ ಅವರ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಈ ಸಂದರ್ಭ ಬೈಂದೂರು ರೋಟರಿ ಅಧ್ಯಕ್ಷ ಮೋಹನ್ ರೇವಣ್ಕರ್, ಕಾರ್ಯದರ್ಶಿ ಸುನಿಲ್ ಹೆಚ್. ಜಿ., ರೋಟೆರಿಯನ್‌ಗಳಾದ ಐ. ನಾರಾಯಣ. ಜತಿಂದ್ರ ಮರವಂತೆ, ರಾಘವೇಂದ್ರ ಉಡುಪ, ವಿಷ್ಣು ಆರ್. ಪೈ, ಶಾರದಾ ನಾರಾಯಣ್, ಚಂದ್ರಶೇಖರ್ ಪೂಜಾರಿ, ಸುಬ್ರಹ್ಮಣ್ಯ ಜಿ, ಆನ್ಸ್ ರೂಪ ರೇವಣ್ಕರ್, ಪೂರ್ಣಿಮಾ ಪೈ ಉಪಸ್ಥಿತರಿದ್ದರು.
ಸುರಭಿ ರಿ. ಬೈಂದೂರು ಸಂಸ್ಥೆಯ ರಜತಯಾನಕ್ಕೆ ಚಾಲನೆಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮರೆಯುವ – ಮೆರೆಯುವ ಇಂದಿನ ಕಾಲಘಟ್ಟದಲ್ಲಿ ಉದಾತ್ತವಾಗಿ ಚಿಂತನೆ ಮಾಡುವ ಮನಸ್ಸುಗಳು ಬೇಕಾಗಿವೆ. ಮಕ್ಕಳಿಗೆ ನಿಜವಾಗಿಯೂ ಅಗತ್ಯವಿರುವ ಪ್ರೀತಿ, ವಿಶ್ವಾಸ, ವಿಶಾಲ ಮನೋಭಾವವನ್ನು ತುಂಬಲು ಮರೆತಿರುವ ನಾವುಗಳು ಪರಸ್ಪರ ನಂಬಿಕೆಯನ್ನು ಕಳೆದುಕೊಂಡು ಯಾಂತ್ರಿಕ ಜಗತ್ತಿನ ದಾಸರಾಗಿ ಬದುಕುತ್ತಿರುವುದು ವಿಪರ್ಯಾಸ ಎಂದು ಹಿರಿಯ ಸಾಹಿತಿ, ನಿವೃತ್ತ ಪ್ರಾಚಾರ್ಯ ಡಾ. ಜಯಪ್ರಕಾಶ್ ಮಾವಿನಕುಳಿ ಹೇಳಿದರು. ಅವರು ಇಲ್ಲಿನ ಶಾರದಾ ವೇದಿಕೆಯಲ್ಲಿ ಸುರಭಿ ರಿ. ಬೈಂದೂರು ಸಂಸ್ಥೆಯ ಬೆಳ್ಳಿ ಹಬ್ಬದ ರಜತ ಲಾಂಛನ ಅನಾವರಣಗೊಳಿಸಿ ಮಾತನಾಡಿದರು. ಧಾವಂತದ ಬದುಕಿನಲ್ಲಿ ಸಾಹಿತ್ಯ, ಸಂಸ್ಕೃತಿ, ಕಲೆಯನ್ನು ಹಿಂದಿಕ್ಕಿ ಹೋಗುತ್ತಿದ್ದೇವೆ. ನೆರೆಯವರ ಮೇಲೆ ಪ್ರೀತಿ ವಿಶ್ವಾಸವಿಡದ ಬದುಕು ನಮ್ಮದಾಗುವುದು ಬೇಡ. ಆಧುನಿಕ ಬದುಕಿನ ಅಗತ್ಯತೆಗಳ ನಡುವೆ ಸಾಂಸ್ಕೃತಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಬದುಕು ಸುಂದರವಾಗುತ್ತದೆ ಎಂದ ಅವರು ಸಾಹಿತಿ, ಕಲಾವಿದರು, ಚಿಂತಕರಿಂದ ಊರಿಗೆ ಘನತೆ ಹೆಚ್ಚುತ್ತದೆಯೇ ಹೊರತು ಹಣವಂತರಿಂದ ಅಲ್ಲ ಎಂಬುದನ್ನು ಮರೆಯಬಾರದು ಎಂದರು. ಜಿಲ್ಲಾ ಕನ್ನಡ ಸಾಹಿತ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ಸಸಿಹಿತ್ಲು ಸಮುದ್ರ ತಟದಲ್ಲಿ ಬೀಚ್ ಕ್ಲೀನಿಂಗ್ ಅಭಿಯಾನ ಹಾಗೂ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಭಾನುವಾರದಂದು ಆಚರಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಎನ್.ಸಿ.ಸಿ., ಎನ್.ಎಸ್.ಎಸ್. ನ 120 ವಿದ್ಯಾರ್ಥಿಗಳು ಪಾಲ್ಗೊಂಡು 30-40 ಚೀಲದಷ್ಟು ಕಸವನ್ನು ವೈಜ್ಞಾನಿಕವಾಗಿ ಸಂಗ್ರಹಿಸಿ, ಮಾನವ ಸರಪಳಿ ರಚಿಸಿ ಪ್ರಜಾಪ್ರಭುತ್ವದ ಪರವಾದ ಘೋಷಣೆಗಳನ್ನು ಒಟ್ಟಿಗೆ ಕೂಗುವ ಮೂಲಕ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಯಿತು. ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ಭಾರತ, ಮತ್ತು ಬಹುತ್ವದ ನೆಲೆಯಲ್ಲಿ ರೂಪುಗೊಂಡ ಭಾರತಕ್ಕೆ ಪ್ರಜಾಪ್ರಭುತ್ವ ಒಂದು ವರ. ನಾವು ಯಾವುದೇ ಜಾತಿ, ಮತ ಧರ್ಮ, ಭಾಷೆಗೆ ಸೇರಿದವರಾದರೂ ನಾವೆಲ್ಲ ಭಾರತೀಯರು ಎಂಬ ಹೆಮ್ಮೆ ಮತ್ತು ಐಕ್ಯತಾ ಭಾವ ನಮ್ಮಲ್ಲಿ ಸದಾ ಇರಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ನುಡಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಮಾಣಿಕ್ಯ, ಐ.ಸಿ.ಸಿ. ಸಫಿಂಗ್ ಸ್ವಾಮಿ ಪ್ರತಿಷ್ಠಾನದ ನಿರ್ದೇಶಕರು ಹಾಗೂ ಸಫಿಂಗ್ ಸ್ವಾಮಿ ಪ್ರತಿಷ್ಠಾನದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದ ಮೂರ್ತೆದಾರರ ಸೇವಾ ಸಹಕಾರಿ ಸಂಘ ವರದಿ ವರ್ಷದಲ್ಲಿ 130.19 ಕೋಟಿಯಷ್ಟು ವ್ಯವಹಾರ ನಡೆಸಿ, ರೂ 37.29 ಲಕ್ಷ ನಿವ್ವಳ ಲಾಭಗಳಿಸಿದ್ದು, ಮುಂದಿನ ದಿನಗಳಲ್ಲಿ 150 ಕೋಟಿ ರೂ. ವ್ಯವಹಾರದ ಗುರಿ ಹೊಂದಿದೆ ಎಂದು ಸಂಘದ ಅಧ್ಯಕ್ಷ ಮೋಹನ ಪೂಜಾರಿ ಹೇಳಿದರು. ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ಭಾನುವಾರ ನಡೆದ ಸಂಘದ 33ನೇ ಸರ್ವಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಘವು ಪ್ರಾರಂಭದಿಂದಲೂ ಲಾಭದಲ್ಲೆ ಮುನ್ನಡೆಯುತ್ತಿದ್ದು, ಕಳೆದ 32 ವರ್ಷಗಳಿಂದಲೂ ನಿರಂತರ ಡಿವಿಡೆಂಡ್ ನೀಡಿರುವ ಹೆಗ್ಗಳಿಕೆಯಿದೆ. ಈ ಬಾರಿ ಶೇ. 12ರಷ್ಟು ಡಿವಿಡೆಂಡ್ ನೀಡಲು ಆಡಳಿತ ಮಂಡಳಿ ನಿರ್ಣಯಿಸಿದೆ. ಮುಂದಿನ ದಿನಗಳಲ್ಲಿ ಸಂಘದ ವತಿಯಿಂದ ರಚನೆಯಾದ ಕಲ್ಪತರು ಮಹಿಳಾ ಸ್ವಸಹಾಯ ಗುಂಪಿನ ಸದಸ್ಯರುಗಳಿಗೆ ಮಾಹಿತಿ ಶಿಬಿರ ಹಾಗೂ ಸಂಘಗಳಿಗೆ ಸಾಲ ಸೌಲಭ್ಯ ನೀಡಿ ಈ ಮೂಲಕ ವ್ಯವಹಾರ ಹೆಚ್ಚಿಸಲಾಗುವುದು. ವರದಿ ವರ್ಷದ ಅಂತ್ಯಕ್ಕೆ ಒಟ್ಟು 173 ಕಲ್ಪತರು ಮಹಿಳಾ ಸ್ವ ಸಹಾಯ ಗುಂಪುಗಳನ್ನು ಹೊಂದಿದ್ದು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕಶಾಸ್ತ್ರ ವಿಭಾಗ ಮತ್ತು ಪ್ಲೇಸ್ಮೆಂಟ್ ಸೆಲ್ ಆಶ್ರಯದಲ್ಲಿ ಅಂತಿಮ ವರ್ಷದ ಬಿ.ಸಿ.ಎ ವಿದ್ಯಾರ್ಥಿಗಳಿಗಾಗಿ “ಕರಿಯರ್ ಗೈಡೆನ್ಸ್” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅವರು ವಹಿಸಿಕೊಂಡಿದ್ದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಕಾಲೇಜಿನ ಡೀನ್ (ಅಕಾಡೆಮಿಕ್ಸ್) ಗಿರಿರಾಜ್ ಭಟ್ ಅವರು “ನಾವು ಸಂದರ್ಶನಕ್ಕೆ ಹೋದಾಗ ಸಲ್ಲಿಸುವ ರೆಸೂಮ್ ಎನ್ನುವುದು ನಮ್ಮ ಸಂಪೂರ್ಣ ಜ್ಞಾನ, ವ್ಯಕ್ತಿತ್ವ, ಸಾಮರ್ಥ್ಯ ಮತ್ತು ಕೌಶಲ್ಯವನ್ನು ಸಂದರ್ಶನಕಾರರಿಗೆ ಮನದಟ್ಟು ಮಾಡಿಸುವಂತಿರಬೇಕು” ಎಂದರು. ಗಣಕವಿಜ್ಞಾನ ವಿಭಾಗದ ಮುಖ್ಯಸ್ಥರಾದ ಮಹೇಶ್ ಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಪ್ಲೇಸ್ಮೆಂಟ್ ಆಫೀಸರ್ ಸುರೇಶ್ ಕಾಮತ್ ಹಾಗೂ ಇತರ ಉಪನ್ಯಾಸಕರು ಉಪಸ್ಥಿತರಿದ್ದರು. ಗಣಕಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ಜಯಲಕ್ಷ್ಮಿ ಸ್ವಾಗತಿಸಿ, ವೆಂಕಟೇಶ್ ಶೆಟ್ಟಿ ವಂದಿಸಿದರು. ಗಣಕಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ಹರೀಶ್ ಕಾಂಚನ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಬಿ.ಸಿ.ಎ ಅಂತಿಮ ವರ್ಷದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನರಿಗೆ ತಲುಪಿಸುವ ಮಹತ್ವದ ಉದ್ದೇಶದೊಂದಿಗೆ ರಾಜ್ಯದಲ್ಲಿ ಬೀದರ್ ನಿಂದ ಚಾಮರಾಜನಗರದವರೆಗೆ 250 ಕಿ.ಮೀನ ಮಾನವ ಸರಪಳಿಯನ್ನು ಆಯೋಜಿಸಿದ್ದು, ಇದರ ಭಾಗವಾಗಿ ಜಿಲ್ಲೆಯ ಗಡಿಭಾಗಗಳಾದ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್‌ನಿಂದ ಕಾಪು ತಾಲೂಕಿನ ಹೆಜಮಾಡಿ ಸೇತುವೆವರೆಗೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸುಮಾರು 107 ಕಿ. ಮೀ ಉದ್ದದ ಮಾನವ ಸರಪಳಿ ರಚನೆ ಕಾರ್ಯಕ್ರಮವು ನಡೆಯಿತು. ಜಿಲ್ಲಾ ಮಟ್ಟದ ವೇದಿಕೆ ಕಾರ್ಯಕ್ರಮವನ್ನು ಉಡುಪಿಯ ಕಿನ್ನಿಮೂಲ್ಕಿ ಸ್ವಾಗತ ಗೋಪುರದ ಬಳಿ, ತಾಲೂಕು ಮಟ್ಟದಲ್ಲಿ ಮರವಂತೆ ಕುಂದಾಪುರ ಬ್ರಹ್ಮಾವರ ಹಾಗೂ ಉಚ್ಚಿಲದಲ್ಲಿ ನಡೆಯಿತು. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪರಸ್ಪರ ಕೈಯನ್ನು ಹಿಡಿದುಕೊಂಡು ಮಾನವ ಸರಪಳಿ ರಚಿಸಿದರು. ಜಿಲ್ಲಾ ಮಟ್ಟದಲ್ಲಿ ನಡೆದ ಕಾರ್ಯಕ್ರಮವನ್ನು ಚಂಡೆ ಬಾರಿಸುವ ಮೂಲಕ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಚಾಲನೆ ನೀಡಿ ಮಾತನಾಡಿ, ಸಂವಿಧಾನದ ಮೌಲ್ಯಗಳನ್ನು ಎಲ್ಲೆಡೆ ಪಸರಿಸುವ ಉದ್ದೇಶದಿಂದ ವಿನೂತನವಾದ ಮಾನವ ಸರಪಳಿ ಕಾರ್ಯಕ್ರಮವನ್ನು ರಾಜ್ಯ ಸರ್ಕಾರವು ಆಯೋಜಿಸಿದ್ದು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೆಪ್ಟೆಂಬರ್ 14 ರಂದು ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಸಹಭಾಗಿತ್ವದಲ್ಲಿ ಕುಂದಾಪುರ ತಾಲೂಕು ಮಟ್ಟದ ಬಾಲಕ – ಬಾಲಕಿಯರ ವಾಲಿಬಾಲ್ ಪಂದ್ಯಾಟ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಸರಕಾರಿ ಪ್ರೌಢಶಾಲೆ ಸಾಲೆತ್ತೂರು ಇಲ್ಲಿನ ದೈಹಿಕ ಶಿಕ್ಷಣ ಉಪನ್ಯಾಸಕರಾದ ರಾಘವೇಂದ್ರ ಕಂಡ್ಲೂರು ಮಾತನಾಡಿ, ಇಂದಿನ ಯುವ ಜನಾಂಗ ದುಶ್ಚಟಗಳಿಗೆ ದಾಸರಾಗದೇ, ಅತ್ಯುತ್ತಮ ಹವ್ಯಾಸವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ವಿದ್ಯೆಯೊಂದಿಗೆ ಕ್ರೀಡೆ ಸಹ ಮುಖ್ಯ ಎಂಬುದನ್ನು ಅರಿತು ಬದುಕಿನ ಯಶಸ್ಸಿನ ಮೆಟ್ಟಿಲುಗಳನ್ನು ಏರುತ್ತಾ ತಮ್ಮ ಕಾರ್ಯ ಸಾಧನೆಗಳ ಮೂಲಕ ಪ್ರಸಿದ್ದಿ, ಜನಪ್ರೀತಿಯನ್ನು ಪಡೆಯುವಂತಾಗಲಿ ಎಂದು ಆಶಿಸಿದರು. ಶ್ರೀ ವೆಂಕಟರಮಣ ಸಂಸ್ಥೆಯ ಕಾರ್ಯದರ್ಶಿ ಕೆ.ರಾಧಾಕೃಷ್ಣ ಶೆಣೈ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸಮಾರಂಭದಲ್ಲಿ ಅತಿಥಿಗಳಾಗಿ ಉಡುಪಿ ಜಿಲ್ಲಾ ಪದವಿ ಪೂರ್ವ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಗೌರವಾಧ್ಯಕ್ಷರಾದ ಜೀವನ್ ಕುಮಾರ್ ಶೆಟ್ಟಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನರಿಗೆ ತಲುಪಿಸುವ ಮಹತ್ವದ ಉದ್ದೇಶದೊಂದಿಗೆ ರಾಜ್ಯಾದ್ಯಂತ ಆಯೋಜಿಸಲಾದ ಮಾನವ ಸರಪಳಿಗೆ ಭಾನುವಾರ ಜಿಲ್ಲಾದ್ಯಂತ ಏಕಕಾಲದಲ್ಲಿ ಚಾಲನೆ ದೊರೆಯಿತು. ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿಯೂ ಕಾರ್ಯಕ್ರಮವನ್ನು ಆಚರಿಸಲಾಯಿತು. ಶಿರೂರು ಟೋಲ್ ಗೇಟ್ ನಿಂದ ಕಾಪು ತಾಲೂಕಿನ ಹೆಜಮಾಡಿ ಸೇತುವೆ ತನಕ ರಾಷ್ಟ್ರೀಯ ಹೆದ್ದಾರಿ – 66ರಲ್ಲಿ ಪ್ರತಿ ಗ್ರಾಮ ವ್ಯಾಪ್ತಿ, ಪುರಸಭೆ, ನಗರಸಭೆ ಹಾಗೂ ಪಟ್ಟಣ ಪಂಚಾಯತ್ ವ್ಯಾಪ್ತಿಕಯಲ್ಲಿ ಮಾನವ ಸರಪಳಿ ರಚಿಸಲಾಯಿತು. ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಾಡಗೀತೆಯಿಂದ ಆರಂಭಗೊಂಡು ಸಂವಿಧಾನ ಪ್ರಸ್ತಾವನೆ ಓದುವುದು, ಮಾನವ ಸರಪಳಿಗೆ ಕೈ ಹಿಡಿದು ನಿಂತ ಬಳಿಕ ಎರಡು ಕೈಯಗಳನ್ನು ಮೇಲೆತ್ತಿ ಜೈ ಹಿಂದ್ ಜೈ ಕರ್ನಾಟಕ ಘೋಷಣೆ ಕೂಗುವ ಮೂಲಕ ಕಾರ್ಯಕ್ರಮ ಮುಕ್ತಾಯಗೊಂಡಿತು. ಬಳಿಕ ರಸ್ತೆಯ ಬದಿಯಲ್ಲಿ ಗಿಡಗಳನ್ನು ನೆಡಲಾಯಿತು. ಕುಂದಾಪುರದಲ್ಲಿ ಶಾಸಕ ಕಿರಣ್ ಕುಮಾರ್ ಕೊಡ್ಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರೆ, ಪುರಸಭೆ ಅಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಮೂಡುಬಿದಿರೆ ವಲಯ ಹಾಗೂ ಸರ್ಕಾರಿ ಪ್ರೌಢ ಶಾಲೆ, ಪಡುಕೊಣಾಜೆ ಇವರ ಸಹಯೋಗದಲ್ಲಿ ನಡೆದ ತಾಲ್ಲೂಕು ಮಟ್ಟದ ತ್ರೋಬಾಲ್ ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು 14 ಮತ್ತು 17 ವರ್ಷ ವಯೋಮಿತಿಯ ಬಾಲಕರು ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಮುಂದೆ ನಡೆಯುವ ಜಿಲ್ಲಾ ಮಟ್ಟದ ತ್ರೋಬಾಲ್ ಸ್ಪರ್ಧೆಗೆ ಆಳ್ವಾಸ್ ಶಾಲೆಯಿಂದ ಆಯ್ಕೆಯಾದ 24 ಕ್ರೀಡಾಪಟುವಿಗೆ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ ಮೋಹನ ಆಳ್ವರು ಅಭಿನಂದನೆ ಸಲ್ಲಿಸಿದ್ದಾರೆ.
