ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಸುಬ್ರಮಣ್ಯ ಹೆಬ್ಬಾಗಿಲು ಅವರು ಮೂಲತಃ ಕರ್ನಾಟಕದ ಬೈಂದೂರಿನವರು. ಅವರು ಕತಾರಿನ ಗಲ್ಫಾರ್ ಅಲ್ ಮಿಸ್ ನಾದ್ ಇಂಜಿನಿಯರಿಂಗ್ ಹಾಗೂ ಕಾಂಟ್ರಾಕ್ಟ್ ಸಂಸ್ಥೆಯನ್ನು 2007ನೇ ಇಸವಿಯಲ್ಲಿ ಕೆಲಸಕ್ಕೆ ಸೇರಿದರು. ಈಗ ಪ್ರಸ್ತುತ ಗುಣಮಟ್ಟ ಕಾಯ್ದಿರಿಸುವ ವಿಭಾಗದಲ್ಲಿ ಅಭಿಯಂತರರಾಗಿ ಹಾಗೂ ಕಾಮಗಾರಿಗಳ ಸಹಯೋಗದ ಕಾರ್ಯನಿರ್ವಹಿಸುತ್ತಿದ್ದಾರೆ. ಕತಾರಿನಲ್ಲಿ ಯಶಸ್ವಿಯಾಗಿ ಸಂಪೂರ್ಣಗೊಂಡಿರುವ ಹಲವು ಉನ್ನತಮಟ್ಟದ ಕಾಮಗಾರಿಗಳಲ್ಲಿ ಇವರ ಪಾಲು ಉಂಟು. ಪ್ರತ್ಯೇಕವಾಗಿ ಕತಾರಿನಲ್ಲಿನ ಪರಿಸರಸ್ನೇಹಿ, ಬೆಳವಣಿಗೆ ಹಾಗೂ ಸಮರ್ಥನೀಯತೆಗೆ ಸಂಬಂಧಿಸಿದ ಕಾಮಗಾರಿಗಳಲ್ಲಿ ಶ್ರೀಯುತರು ಕಾರ್ಯನಿರ್ವಹಿಸಿದ್ದಾರೆ. ಅವರು ಸಕ್ರಿಯವಾಗಿ ಸಮುದಾಯ ಹಾಗೂ ಸಮಾಜಸೇವಾ ಕೈಂಕರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಪೂರ್ವದಲ್ಲಿ ಕರ್ನಾಟಕ ಸಂಘ ಕತಾರಿನ ಉಪಾಧ್ಯಕ್ಷರಾಗಿ, ಹಾಗೂ ಭಾರತೀಯ ಸಮುದಾಯ ಹಿತೈಷಿ ವೇದಿಕೆಯ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವರು. ಹಲವಾರು ಸಂಘ ಸಂಸ್ಥೆಗಳ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದಲ್ಲದೆ ಬಹಳಷ್ಟು ಪ್ರಶಸ್ತಿಗಳನ್ನು ಇವರ ಅವಿರತ ಸೇವೆಯನ್ನು ಗುರುತಿಸಿ ಇವರಿಗೆ ನೀಡಲಾಗಿದೆ. ಪ್ರಸ್ತುತ ಇವರು ಎರಡನೇ ಬಾರಿಗೆ ಭಾರತೀಯ ದೂತಾವಾಸದ ಆಶ್ರಯದಲ್ಲಿ ಕೆಲಸ ನಿರ್ವಹಿಸುತ್ತಿರುವ ಭಾರತೀಯ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸುಂದರ ಸಮಾಜ ನಿರ್ಮಾಣ ಮಾಡುವಲ್ಲಿ ವಿಶ್ವಕರ್ಮರ ಪಾತ್ರ ಮಹತ್ತರವಾದುದು. ವಿಶ್ವಕರ್ಮ ಸಮುದಾಯದವರ ವಾಸ್ತುಶಿಲ್ಪ ರಚನಾ ಶೈಲಿಯು ಪ್ರತಿಯೊಬ್ಬರನ್ನು ಬೆರಗುಗೊಳಿಸುತ್ತದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಅಂದು ನಗರದ ಕುಂಜಿಬೆಟ್ಟುವಿನ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪಂಚಮುಖಿ ವಿಶ್ವಕರ್ಮರನ್ನು ನಾನಾ ರೀತಿಯಲ್ಲಿ ಸಮಾಜ ನೆನೆಪಿನಲ್ಲಿಟ್ಟುಕೊಳ್ಳುತ್ತದೆ. ಮರಗೆಲಸ, ಕಬ್ಬಿಣದ ಕೆಲಸ, ಚಿನ್ನ-ಬೆಳ್ಳಿ ತಯಾರಕರು, ಶಿಲ್ಪಕಲಾ, ಕಂಚು ಹಿತ್ತಾಳೆ ನಿರ್ವಹಿಸುವವರಿಗೆ ಮೂಲ ಪುರುಷ ವಿಶ್ವಕರ್ಮರು. ದ್ವಾಪರ ಯುಗದಲ್ಲಿ ದ್ವಾರಕೆಯನ್ನು, ತ್ರೇತಾಯುಗದಲ್ಲಿ ಸುವರ್ಣ ಲಂಕೆಯನ್ನು, ಸತ್ಯಾ ಯುಗದಲ್ಲಿ ಸ್ವರ್ಗ ನಗರವನ್ನು ಹಾಗೂ ಕಲಿಯುಗದಲ್ಲಿ ಹಸ್ತಿನಾಪುರ ಮತ್ತು ಇಂದ್ರಪ್ರಸ್ಥವನ್ನು ವಿಶ್ವಕರ್ಮರು ಸ್ಥಾಪಿಸಿದ್ದರು ಎಂದು ಪುರಾಣಗಳಲ್ಲಿ ಉಲ್ಲೇಖಿಸಲಾಗಿದೆ ಎಂದರು. ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಜಾರಿಗೊಳಿಸಿದ್ದು, ಇದು ಕೋಟ್ಯಾಂತರ ಜನರ ಜೀವನಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಪದವಿ ಮಾನವಿಕ ವಿಭಾಗದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ತಂಡ ವಿಟ್ಲದ ಕನ್ಯಾನದ ಭಾರತ ಸೇವಾಶ್ರಮ ಟ್ರಸ್ಟ್‌ಗೆ ಭೇಟಿ ನೀಡಿದರು. ಭಾರತ ಸೇವಾಶ್ರಮ ಟ್ರಸ್ಟ್‌ನ ಮುಖ್ಯಸ್ಥ ಈಶ್ವರ್ ಭಟ್ ಮಾತನಾಡಿ, “ಸೇವಾಹಿ ಪರಮೋ ಧಮಃ” ಎಂಬ ಸಾಲು ಸೇವೆಯೇ ಧರ್ಮಗಳಲ್ಲಿ ಶ್ರೇಷ್ಠ ಎಂದು ಸಾರುತ್ತದೆ. ವಿದ್ಯಾರ್ಥಿಗಳಿಗೆ ಪಾಲಕರ ಮಹತ್ವವನ್ನು ವಿವರಿಸಿದ ಅವರು, ಎಂದೂ ಹೆತ್ತ ತಂದೆ ತಾಯಿಯನ್ನು ಅನಾಥರನ್ನಾಗಿಸಬೇಡಿ. ಕಳೆದ 60 ವರ್ಷಗಳಿಂದ ಭಾರತ ಸೇವಾಶ್ರಮವನ್ನು ನಡೆಸಿಕೊಂಡು ಬರುತ್ತಿದ್ದೇವೆ. ಈ ಆಶ್ರಮದಲ್ಲಿರುವ ಹೆಚ್ಚಿನ ವೃದ್ಧರ ಮಕ್ಕಳು ಉತ್ತಮ ಸ್ಥಿತಿವಂತರು. ಆದರೆ ತಮ್ಮ ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸಿರುವುದು ದುರಾದೃಷ್ಟಕರ ಎಂದರು. ಈ ಆಶ್ರಮದಲ್ಲಿ ಅನಾಥ ಮಕ್ಕಳಿಗೆ, ಅನಾಥರಿಗೆ, ವೃದ್ಧರಿಗೆ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದ್ದು, 250ಕ್ಕೂ ಅಧಿಕ ಜನರಿಗೆ ಆಶ್ರಯ ನೀಡಲಾಗಿದೆ ಎಂದರು. ವಿದ್ಯಾರ್ಥಿಗಳಿಗೆ ಸೇವಾಶ್ರಮದ ಹುಟ್ಟಿನ ಬಗೆ, ಆಶ್ರಮ ಬೆಳೆದು ಬಂದ ಹಾದಿಯನ್ನು ತಿಳಿಸಿದರು. ನಿವಾಸಿಗಳ ಮನೊರಂಜನೆಗಾಗಿ ವಿದ್ಯಾರ್ಥಿಗಳು ವಿವಿಧ ಚಟುವಟಿಕೆ ಹಾಗೂ ನೃತ್ಯ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕಾರ್ಕಳ,ಸೆ.17: ಲೈವ್ ಸ್ಟ್ರೀಮಿಂಗ್ ಚಾನೆಲ್ ನಡೆಸುವವರು ಸಂಘಟಿತರಾದಲ್ಲಿ ಆರ್ಥಿಕವಾಗಿ ಸದೃಢರಾಗಲು ಸಾಧ್ಯ. ಈ ನಿಟ್ಟಿನಲ್ಲಿ ಲೈವ್ ಚಾನೆಲ್ ಅಸೋಸಿಯೇಶನ್ ಸ್ಥಾಪನೆ ಉತ್ತಮ ಬೆಳವಣಿಗೆ ಎಂದು ದಾಯ್ಜಿವರ್ಲ್ಡ್ ಸಂಸ್ಥಾಪಕ, ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್ ನಂದಳಿಕೆ ಅಭಿಪ್ರಾಯಪಟ್ಟರು. ಅವರು ಮಂಗಳವಾರ ಕಾರ್ಕಳ ಬಂಡಿಮಠ ಶ್ರೀ ಮೂಡುಮಹಾಗಣಪತಿ ಕಲಾಮಂದಿರದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಲೈವ್ ಸ್ಟ್ರೀಮಿಂಗ್ ಚಾನೆಲ್ಸ್ ಅಸೋಸಿಯೇಶನ್ ಉದ್ಘಾಟಿಸಿ ಬಳಿಕ ಮಾತನಾಡಿದರು. ಲೈವ್ ಚಾನೆಲ್ ಸಂಸ್ಥೆ ಮಾಲಕರು ಪ್ರಸ್ತುತ ಅನೇಕ ಸಮಸ್ಯೆ, ಸವಾಲುಗಳನ್ನು ಎದುರಿಸುತ್ತಿದ್ದಾರೆ. ಪರಿಕರ ಖರೀದಿ ಬಂಡವಾಳ, ಸಿಬ್ಬಂದಿ ಖರ್ಚು, ಕಚೇರಿ ನಿರ್ವಹಣೆ, ಪರಿಕರ ಸರ್ವಿಸ್ ಹೀಗೆ ಲೈವ್ ಗೆ ಸಂಬಂಧಿಸಿದ ಎಲ್ಲ ವೆಚ್ಚವನ್ನು ಲೆಕ್ಕ ಹಾಕಿ ಲೈವ್‌ಗೆ ಒಂದು ದರ ನಿಗದಿಗೊಳಿಸಬೇಕಿದೆ ಎಂದರು. ಎನರ್ಜಿಯಿಂದ ಸಿನರ್ಜಿನಾನು ದಾಯ್ಜಿವರ್ಲ್ಡ್ ಪ್ರಾರಂಭ ಮಾಡುವಾಗ ಒಬ್ಬನೆ ಇದ್ದೆ. ಆಗ ನನಗೆ ಎನರ್ಜಿ ಇತ್ತು. ಆದರೆ ಯಾವಾಗ ನಾನು ನಾಲ್ಕು ಮಂದಿಯೊಂದಿಗೆ ಸೇರಿ ಸಂಸ್ಥೆಯನ್ನು ವಿಸ್ತರಿಸಲು ಮುಂದಾದೆನೋ ಆವಾಗ ನನಗೆ ಸಿನರ್ಜಿ ಬಂತು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಪುರಾಣ ಪ್ರಸಿದ್ಧ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಸಾಂಪ್ರದಾಯಿಕವಾಗಿ ಆಚರಿಸಿಕೊಂಡು ಬಂದಿರುವ ಅನಂತ ಚತುರ್ದಶಿ ವೃತವನ್ನು ಮಂಗಳವಾರ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಎಸ್. ವೆಂಕಟರಮಣ ಆಚಾರ್ಯ ನೇತೃತ್ವದಲ್ಲಿ ಅನಂತ ಚತುರ್ದಶಿ ವೃತದ ವಿವಿಧ ಧಾರ್ಮಿಕ ಅನುಷ್ಠಾನಗಳು ಶಾಸ್ತ್ರೋಕ್ತವಾಗಿ ಜರುಗಿತು. ಅನಂತ ಚತುರ್ದಶಿ ಪ್ರಯುಕ್ತ ಶ್ರೀ ದೇವರಿಗೆ ವಿಶೇಷ ಪೂಜೆ, ಪುನಸ್ಕಾರಗಳು, ನಮಸ್ಕಾರ ಸೇವೆ ಸಹಿತ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ಪುರೋಹಿತರು, ಅರ್ಚಕರು, ದೇವಳದ ಆಡಳಿತ ಮಂಡಳಿ ಸದಸ್ಯರು, ಊರಿನ ಹತ್ತು ಸಮಸ್ತರು, ಸಮಾಜ ಬಾಂಧವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಧೃಡ ಸಮಾಜದ ನಿರ್ಮಾಣದ ಶಿಲ್ಪಿಗಳಂತೆ ಶಿಕ್ಷಕರು ತಮ್ಮ ವೃತ್ತಿಯಲ್ಲಿ ತೊಡಗಿಸಿಕೊಂಡು, ಮಕ್ಕಳಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ಸುಸಂಸ್ಕೃತ ಬದುಕಿಗೆ ಬೇಕಾಗಿರುವ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ಶ್ರಮಿಸುತ್ತಿರುವ ಶಿಕ್ಷಕರ ಕೆಲಸ ಶ್ಲಾಘನೀಯ. ಇಂತಹ ಶಿಕ್ಷಕರನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮ ಅರ್ಥಪೂರ್ಣವಾಗಿದೆ ಎಂದು ಬ್ರಹ್ಮಾವರ ವಲಯ ಶಿಕ್ಷಣಾಧಿಕಾರಿ ಶಬಾನ ಅಂಜುಮ್ ಅವರು ಹೇಳಿದರು. ಅವರು ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ನಡೆದ ಡಾ|| ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಡಾ|| ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್, ರೋಟರಿ ಕ್ಲಬ್ ಹಂಗಾರಕಟ್ಟೆ-ಸಾಸ್ತಾನ ಆಶ್ರಯದಲ್ಲಿ ಸಾಹಿತ್ಯ ಸಲ್ಲಾಪ, ಕೃತಿ ಬಿಡುಗಡೆ, ನಾಟಕ ಪ್ರದರ್ಶನ, ಡಾ|| ಶಿವರಾಮ ಕಾರಂತ ಶಿಕ್ಷಕ ಪುರಸ್ಕಾರ ಪ್ರದಾನ ಕಾರ್ಯಕ್ರಮ ನಿರ್ದಿಗಂತ (ಸಾಧನೆಯ ಪವಮಾನ) ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ, ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್ ಶಿಕ್ಷಕರು ತಮ್ಮ ಶೈಕ್ಷಣಿಕ ಪಠ್ಯದ ಜೊತೆಯಲ್ಲಿ ಮಕ್ಕಳ ಸೃಜನಾತ್ಮಕ ಬೆಳವಣಿಗೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗ ಆಶ್ರಯದಲ್ಲಿ ‘ಓಣಂ’ನ್ನು ಆಚರಿಸಲಾಯಿತು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ದೀಪ ಬೆಳಗಿಸಿ ಶುಭ ಹಾರೈಸಿದರು. ಈ ಸಂದರ್ಭ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ಡಾ| ದೀಪಾ, ಸಹಾಯಕ ಪ್ರಾಧ್ಯಾಪಕಿ ರೇವತಿ ಡಿ. ಉಪಸ್ಥಿತರಿದ್ದು, ಬೋಧಕ-ಬೋಧಕೇತರ ವೃಂದ, ವಿದ್ಯಾರ್ಥಿಗಳು ಹೂವಿನ ಪೂಕಳಂ ಹಾಕಿ ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಯಾವುದೇ ವಿಷಯದಲ್ಲಿ ಪದವಿ ಮುಗಿಸಿದ ಅಭ್ಯರ್ಥಿಗಳಿಗೆ ಯುಪಿಎಸ್ಸಿ ಹಾಗೂ ಕೆಪಿಎಸ್ಸಿಯ- ಪೂರ್ವಭಾವಿ (ಪ್ರೀಲಿಮ್ಸ್) ಹಾಗೂ ಮುಖ್ಯ ಪರೀಕ್ಷೆಗಳಿಗೆ (ಮೈನ್ಸ್) 9 ತಿಂಗಳ ನಿರಂತರ ಸನಿವಾಸ ತರಬೇತಿಯನ್ನು ನೀಡಲು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮುಂದಾಗಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಿನ ಸಾಧನಾ ಕೋಚಿಂಗ್ ಸೆಂಟರ್‌ನೊಂದಿಗೆ ಈಗಾಗಲೆ ಒಡಂಬಡಿಕೆ ಮಾಡಿಕೊಂಡಿದ್ದು, ಎಲ್ಲರಿಗೂ ಕೈಗೆಟಕುವ ರೀತಿಯಲ್ಲಿ ಉತ್ತಮ ಗುಣಮಟ್ಟದ, ಅತ್ಯುತ್ತಮ ತರಬೇತಿಯನ್ನು ನೀಡಲು ಉದ್ದೇಶಿಸಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ತಿಳಿಸಿದರು. ಈ ತರಬೇತಿಯು ಎಸ್‌ಡಿಎ, ಎಫ್‌ಡಿಎ, ಬ್ಯಾಂಕಿಂಗ್, ಪೋಲೀಸ್ ಇಲಾಖೆ, ಪಿಡಿಒ, ಕಂದಾಯ ಇಲಾಖೆಗಳ ಪರೀಕ್ಷೆಗಳು ಸೇರಿದಂತೆ ಇನ್ನಿತರ ಎಲ್ಲಾ ಸರ್ಕಾರಿ ಉದ್ಯೋಗಗಳ ಆಯ್ಕೆ ಪ್ರಕ್ರಿಯೆಯ ಪರೀಕ್ಷೆಗಳನ್ನು ಎದುರಿಸಲು ಅನುವುಮಾಡಿಕೊಡಲಿದೆ. ಕಾಲ ಕಾಲಕ್ಕೆ ಬರುವ ಸರ್ಕಾರಿ ಹಾಗೂ ಅರೆ ಸರ್ಕಾರಿ ಹುದ್ದೆಗಳಿಗೆ ತಯಾರುಗೊಳಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ವಿನೂತನ ಪ್ರಯತ್ನಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ಸಾಧನಾ ಕೋಚಿಂಗ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜಗದ್ಗುರು ಶ್ರೀ ನಾಗಲಿಂಗ ಸ್ವಾಮಿ ಹಾಗೂ ವಿಶ್ವಕರ್ಮೇಶ್ವರ ಸಾನಿಧ್ಯವಿರುವ ಶ್ರೀ ಕಾಳಿಕಾಂಬಾ ದೇವಸ್ಥಾನ ಉಪ್ರಳ್ಳಿ ಕೂಡುವಳಿಕೆ ವಿಶ್ವಕರ್ಮ ಸಮಾಜದ ಎಲ್ಲ ಸಂಘಟನೆಗಳ ಜಂಟಿ ಆಶ್ರಯದಲ್ಲಿ ಸಮಾಜ ಬಾಂಧವರ ಸಹಕಾರದೊಂದಿಗೆ ಶ್ರೀ ವಿಶ್ವಕರ್ಮ ಜಯಂತಿ ಪ್ರಯುಕ್ತ ಹೊರೆಕಾಣಿಕೆ ಬೃಹತ್ ವಾಹನ ಜಾಥಾ ಬೈಂದೂರು ತಹಶೀಲ್ದಾರ್ ಕಛೇರಿಯ ಮುಂಭಾಗದಲ್ಲಿ ಉಪ್ರಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಕಳಿ ಚಂದ್ರಯ್ಯ ಆಚಾರ್ಯ ಅವರು ಚಾಲನೆ ನೀಡಿದರು. ವಿಶ್ವಕರ್ಮ ಭಾವಚಿತ್ರದ ಟ್ಯಾಬ್ಲೋ ಹೊರಟು ಬೈಂದೂರು ತಹಶೀಲ್ದಾರ್ ಕಛೇರಿಯಿಂದ ಬೈಂದೂರು ರಥಬೀದಿಯಲ್ಲಿ ಸಾಗಿ ಬಂದು ರಾಷ್ಟ್ರೀಯ ಹೆದ್ದಾರಿಯ ಮೂಲಕ ನಾಗೂರು ಉಪ್ರಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನದ ತನಕ ಹೊರೆಕಾಣಿಕೆ ವಾಹನ ಜಾಥಾ ನಡೆಯಿತು. ಉಪ್ರಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನದ ಎರಡನೇ ಮೊಕ್ತೇಸರ ಚಿತ್ತೂರು ಪ್ರಭಾಕರ ಆಚಾರ್ಯ, ಮೂರನೇ ಮೊಕ್ತೇಸರ ಆಲೂರು ಶ್ರೀಧರ್ ಆಚಾರ್ಯ, ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ತ್ರಾಸಿ ಸುಧಾಕರ್ ಆಚಾರ್ಯ, ವಿಶ್ವಕರ್ಮ ಯುವಕ ಸಂಘ ಅಧ್ಯಕ್ಷ ನಾಗರಾಜ್ ಆಚಾರ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಾತೃಭೂಮಿ ಮಹಿಳಾ ಸಹಕಾರಿ ಸಂಘ ಬೈಂದೂರು ಇದರ ನೂತನ ಕಛೇರಿ ಇಂದು ಮುಕಾಂಬಿಕಾ ಕಾಂಪ್ಲೆಕ್ಸ್ ನಲ್ಲಿ ಉದ್ಘಾಟನೆಗೊಂಡಿತು. ಸಹಕಾರಿ ಧುರೀಣ ಎಸ್.ರಾಜು ಪೂಜಾರಿ ಅವರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸುಖನ್ಯ ಹಾಗೂ ಸಹಕಾರ ಸಂಘಗಳ ನಿವೃತ್ತ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್. ವಿ, ಸದಾಶಿವ ಡಿ. ಪಡುವರಿ, ಬಾಲಯ್ಯ ಶೇರುಗಾರ, ಸಂಘದ ಅಧ್ಯಕ್ಷರಾದ ಅನಸೂಯ ಶೇಟ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೆಹನಾ ಸುಲ್ತಾನಾ, ಸಿಬ್ಬಂದಿಗಳಾದ ಪೂರ್ಣಿಮಾ, ನಾಗರಾಜ್, ನಾಗಶ್ರೀ ಮುಂತಾದವರು ಉಪಸ್ಥಿತರಿದ್ದರು. ಪತ್ರಕರ್ತ ಅಂದುಕಾ ನಿರೂಪಿಸಿ ವಂದಿಸಿದರು.
